Tag: ಇಸ್ಪೀಟ್

  • ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ – ಬೆಚ್ಚಿಬಿದ್ದ ಸವಾರರು

    ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ – ಬೆಚ್ಚಿಬಿದ್ದ ಸವಾರರು

    ಕೊಪ್ಪಳ: ಇಸ್ಪೀಟ್ (Playing Cards) ಆಟ ಆಡಿಸುವ ಗುಂಪುಗಳ ನಡುವೆ ಮತ್ತೆ ಮಾರಾಮಾರಿ ನಡೆದ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳ (Koppala) ಜಿಲ್ಲೆಯ ಗಂಗಾವತಿ (Gangavathi) ನಗರದ ಸಿಂಧನೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ಗುಂಪೊಂದು ದಾಳಿ ಮಾಡಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಗಂಗಾವತಿಯ ಅಮರಭಗತ್ ಸಿಂಗ್ ನಗರದ ಮಾರುತಿ ಕೊಲೆ ಯತ್ನಕ್ಕೆ ಒಳಗಾದ ಯುವಕ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ಹುಬ್ಬಳ್ಳಿಯ (Hubballi) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಇಂದು ಕಿತ್ತೂರು ಕರ್ನಾಟಕ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ಹವಾ

    crime

    ಭಾನುವಾರ ಸಂಜೆ ಐದು ಗಂಟೆಗೆ ಸುಮಾರು 10ಕ್ಕೂ ಹೆಚ್ಚು ಯುವಕರ ಗುಂಪೊಂದು ಸ್ಕೂಟಿ ಮೇಲೆ ಹೊರಟಿದ್ದ ಯುವಕನನ್ನು ತಡೆದು ಹಲ್ಲೆ ಮಾಡಿದ್ದಾರೆ. ಹಲ್ಲೆ ನಂತರ ಯುವಕ ರಸ್ತೆ ಮೇಲೆ ಬಿದ್ದಿದ್ದ. ಆದರೂ ಬಿಡದ ಆರೋಪಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾರೆ. ಬಸ್, ಕಾರು ಮತ್ತು ಬೈಕ್ ಮೇಲಿದ್ದ ಜನ ಘಟನೆಯನ್ನು ಮೂಕ ಪ್ರೇಕ್ಷಕರಂತೆ ನೋಡಿಕೊಂಡು ನಿಂತಿದ್ದರು. ಈ ಭಯಾನಕ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ತಲೆ ಮೇಲೆ ಕಲ್ಲು ಎತ್ತಿ ಹಾಕುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ – ರೇವಣ್ಣ ಸವಾಲು

    ಇಂತಹ ಪ್ರಕರಣಗಳು ಗಂಗಾವತಿಯಲ್ಲಿ ಸರ್ವೇ ಸಾಮಾನ್ಯವಾಗಿದೆ. ಕಳೆದ ತಿಂಗಳು ಹೋಳಿ ಹುಣ್ಣಿಮೆ ದಿನದಂದು ಎಪಿಎಂಸಿ ಗಂಜದಲ್ಲಿ ಇದೇ ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ರೀತಿಯಾದ ಘಟನೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗಲಾಟೆ ನಡೆದು ಸಾಕಷ್ಟು ಬಾರಿ ಯುವಕರು ಗಂಭೀರ ಗಾಯಗೊಂಡಿದ್ದರೂ ಪ್ರಕರಣ ಮಾತ್ರ ದಾಖಲಾಗಿರಲಿಲ್ಲ. ಸದ್ಯ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಮೋದಿಯ ಅತಿದೊಡ್ಡ TRP: ಮಮತಾ ಬ್ಯಾನರ್ಜಿ

  • ಇಸ್ಪೀಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು

    ಇಸ್ಪೀಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು

    ಮೈಸೂರು: ಸ್ನೇಹಿತರ (Friends) ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ವ್ಯಕ್ತಿಯೊಬ್ಬ (Man) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರು (Mysuru) ಜಿಲ್ಲೆಯಲ್ಲಿ ನಡೆದಿದೆ.

    ಆಶ್ವಥ್ ಚಿಯಾ ಮೃತ ವ್ಯಕ್ತಿ. ಈತ ಮೈಸೂರು ಜೆಡಿಎಸ್ (JDS) ಮುಖಂಡನಾಗಿದ್ದ. ಕ್ಲಬ್‍ನಲ್ಲಿ ಸ್ನೇಹಿತರ ಜೊತೆ ಕುಳಿತು ಇಸ್ಪೀಟ್ ಆಡುತ್ತಿದ್ದ. ಆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅಶ್ವಥ್‍ಗೆ ಹೃದಯಾಘಾತವಾಗಿ ಕುಸಿದು ಬಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ವೈದ್ಯರು ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಇಮ್ರಾನ್ ಖಾನ್ ಪ್ರತಿಭಟನಾ ರ‍್ಯಾಲಿಯ ಟ್ರಕ್ ಅಡಿಗೆ ಸಿಲುಕಿ ಪತ್ರಕರ್ತೆ ಸಾವು

    POLICE JEEP

    ಮೈಸೂರು, ಬೆಂಗಳೂರು ರಸ್ತೆಯ ರಿಕ್ರಿಯೇಶನ್ ಕ್ಲಬ್‍ನಲ್ಲಿ ಈ ಘಟನೆ ನಡೆದಿದೆ. ಅಶ್ವಥ್ ಕೊನೆಯ ಕ್ಷಣಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅಶ್ವಥ್ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿಯಾಗಿದ್ದು, ಕೆಲ ದಿನಗಳಿಂದ ರಾಜಕೀದಿಂದ ದೂರವಾಗಿದ್ದರು. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಪ್ರಕರಣ- ನೀಲಾಂಬಿಕೆ ಮೊಬೈಲ್‍ನಿಂದ ನಿತ್ಯ ಮೆಸೇಜ್!

    Live Tv
    [brid partner=56869869 player=32851 video=960834 autoplay=true]

  • ಹೆಚ್‍ಡಿಕೆ ಸದನದಲ್ಲಿ ಸದ್ದು ಮಾಡಿದ್ರೂ ನಿಂತಿಲ್ಲ ಜೂಜಾಟ- ಪೊಲೀಸ್ ಅಧಿಕಾರಿಯೇ ಕಿಂಗ್‍ಪಿನ್

    ಹೆಚ್‍ಡಿಕೆ ಸದನದಲ್ಲಿ ಸದ್ದು ಮಾಡಿದ್ರೂ ನಿಂತಿಲ್ಲ ಜೂಜಾಟ- ಪೊಲೀಸ್ ಅಧಿಕಾರಿಯೇ ಕಿಂಗ್‍ಪಿನ್

    ಕೊಪ್ಪಳ: ನಗರದ ಗಂಗಾವತಿ ತಾಲೂಕಿನ ವಿವಿಧ ಕಡೆ ಇಸ್ಪೀಟ್ ಜೂಜಾಟ ನಡೆಯುತ್ತಿದ್ದು, ಈ ಬಗ್ಗೆ 2 ದಿನದ ಹಿಂದಷ್ಟೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸದನದಲ್ಲಿ ಚರ್ಚೆ ಮಾಡಿದ್ದರು.

    ಆದರೂ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುವ ದೃಶ್ಯ ವೈರಲ್ ಆಗಿದೆ. ಇನ್ನು ವಾನಭದ್ರಪ್ಪ ದೇವಸ್ಥಾನ, ಆರಾಳ ಮಲಕನಮರಡಿ ಗುಡ್ಡ, ಹೇರೂರು ಕೆಸರಹಟ್ಟಿ ಕಾಲುವೆ, ಕೊರಂಕ್ಯಾಂಪ್ ಕಡೇಬಾಗಿಲು, ವಿದ್ಯಾನಗರ ಚಿಕ್ಕಜಂತಕಲ್, ವೆಂಕಟಗಿರಿ ಗುಡ್ಡದ ಸೇರಿ ಹತ್ತಾರು ಕಡೆ ದಿನವೂ ರಾತ್ರಿ ಅಂದರ್ ಬಾಹರ್ ಜೂಜಾಟ ನಡೆಯುತ್ತದೆ. ಇದನ್ನೂ ಓದಿ: ಸದನ ಬೀಗರ ಮನೆಯಲ್ಲ – ಸಚಿವರ ಗೈರಿಗೆ ಸಭಾಪತಿಗಳು ಗರಂ

    Ispit cards

    ಪ್ರತಿಯೊಬ್ಬ ಜೂಜುಕೋರರಿಗೆ 2 ಸಾವಿರ ರೂಪಾಯಿ ಪ್ರವೇಶ ಶುಲ್ಕ ನಿಗದಿ ಮಾಡಿದ್ದು, ನೆರೆಯ ಹೊಸಪೇಟೆ, ಸಿಂಧನೂರು, ಬಳ್ಳಾರಿ ಮತ್ತು ಆಂಧ್ರ ಪ್ರದೇಶದಿಂದ ಜೂಜುಕೋರರು ಬರುತ್ತಾರೆ. ಗಂಗಾವತಿ ಗ್ರಾಮೀಣ ಠಾಣೆ ಪಿಐ ಉದಯ ರವಿ ಅವರೇ ಕಿಂಗ್‍ಪಿನ್ ಎಂಬ ಗಂಭೀರ ಆರೋಪ ಕೇಳಿ ಬರುತ್ತಿದೆ. ಇದನ್ನೂ ಓದಿ: ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು

    ಅಂದರ್ ಬಾಹರ್ ದಂಧೆಕೋರರ ಜೊತೆ ಪೊಲೀಸ್ ಅಧಿಕಾರಿ ನಂಟು ಇದೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಕೂಡ ಆರೋಪಿಸಿದ್ದರು. ಈ ಬಗ್ಗೆ ಕ್ರಮಕ್ಕೆ ಎಸ್ಪಿ ಮುಂದಾಗುತ್ತಾರೆಯೇ ಕಾದು ನೋಡಬೇಕಿದೆ.

  • ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ – ಕೈ, ಕಮಲ ಮುಖಂಡರು ಸೇರಿ 126 ಜನರ ಮೇಲೆ ಕೇಸ್

    ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ – ಕೈ, ಕಮಲ ಮುಖಂಡರು ಸೇರಿ 126 ಜನರ ಮೇಲೆ ಕೇಸ್

    – 56 ಲಕ್ಷ, 40 ಕಾರು, 65 ಮೊಬೈಲ್ ಜಪ್ತಿ

    ಧಾರವಾಡ: ಧಾರವಾಡ ಜಿಲ್ಲಾ ಪೊಲೀಸರು ಇಸ್ಪೇಟ್ ಅಡ್ಡೆಯ ಮೇಲೆ ದಾಳಿ ಮಾಡಿದ್ದು, 126 ಜನರ ಮೇಲೆ ಕೇಸ್ ದಾಖಲಿಸಿ, 56 ಲಕ್ಷ ನಗದು, 40 ಕಾರು ಹಾಗೂ 65 ಮೊಬೈಲ್ ಜಪ್ತಿ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ಹೊರವಲಯದ ರಮ್ಯಾ ರೆಸಿಡೆನ್ಸಿ ಹಾಗೂ ಪ್ರೀತಿ ರೆಸಿಡೆನ್ಸಿಯ ಮೇಲೆ ದಾಳಿ ನಡೆಸಿದ ಜಿಲ್ಲಾ ಪೊಲೀಸರು, ಅಂದರ್ ಬಾಹರ್ ಆಡುತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಕೈ ಮತ್ತು ಕಮಲದ ಮುಖಂಡರೂ ಕೂಡಾ ಸಿಕ್ಕಿ ಹಾಕಿಕೊಂಡಿದ್ದು, ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಾಟಗಾರ ಪೊಲೀಸ್ ಬಲೆಗೆ ಬಿದ್ದಿದ್ದಾರೆ.

    ಸದ್ಯ ಇವರ ಮೇಲೆ ಕೇಸ್ ದಾಖಲಿಸಿರುವ ಗ್ರಾಮೀಣ ಪೊಲೀಸರು, ಎರಡು ರೆಸಿಡೆನ್ಸಿಯಲ್ಲಿರುವ ಟೆಬಲ್ ಹಾಗೂ ಚೇರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಸಿಕ್ಕಿ ಬಿದ್ದಿರುವ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಪ್ರತಿಕ್ರಿಯೆ ನೀಡಿದ್ದು, ಪ್ರತಿ ವರ್ಷದಂತೆ ಈ ಬಾರಿ ಕೂಡ ನಾವು ದೀಪಾವಳಿ ಹಬ್ಬದ ಹಿನ್ನೆಲೆ ರಮ್ಯಾ ರೆಸಿಡೆನ್ಸಿಗೆ ಊಟಕ್ಕೆ ಹೋಗಿದ್ದು, ಅಲ್ಲೇ ಲೈಸೆನ್ಸ್ ಇರುವ ಅಧಿಕೃತ ಕ್ಲಬ್‍ನಲ್ಲಿ ಆಟವಾಡುತಿದ್ದೆವು. ಇದರಲ್ಲಿ ಪೊಲೀಸರ ಸಂಚು ಇದೆ ಎಂದಿದ್ದಾರೆ.

    ಇದಕ್ಕೆ ಉತ್ತರ ನೀಡಿರುವ ಉತ್ತರ ವಲಯದ ಐಜಿ ರಾಘವೇಂದ್ರ ಸುಹಾಸ್, ನಮ್ಮ ಕಡೆ ಅಂದರ್ ಬಾಹರ್ ಆಡುತಿದ್ದ ದಾಖಲೆ ಇದೆ ಎಂದಿದ್ದಾರೆ. ಸದ್ಯ ಇಸ್ಪೇಟ್ ಆಡುತಿದ್ದವರನ್ನು ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.

  • ಹಳಿಯಾಳದಲ್ಲಿ ಜೂಜಾಟ – 17 ಜನ ಅರೆಸ್ಟ್‌

    ಹಳಿಯಾಳದಲ್ಲಿ ಜೂಜಾಟ – 17 ಜನ ಅರೆಸ್ಟ್‌

    ಕಾರವಾರ: ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಹಳಿಯಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ದುಸಗಿ ಬ್ರಿಡ್ಜ್ ನ ಕೆಳಭಾಗದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಡಿ.ಸಿ.ಐ.ಬಿ ಅಧೀಕ್ಷಕ ನಿಶ್ಚಲ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ 1,43,650 ರಪಾಯಿಯನ್ನು ಹಾಗೂ ಇಸ್ಪೀಟ್ ಕಾರ್ಡ್‌ ವಶಕ್ಕೆ ಪಡೆದು ಬಂಧಿಸಿದೆ.

    ಜಿಲ್ಲೆಯ ಹಳಿಯಾಳದಲ್ಲಿ ಹಲವು ದಿನಗಳಿಂದ ಇಸ್ಪೀಟ್ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಡಿಸಿಐಬಿ ತಂಡ ದಾಳಿ ನಡೆಸಿದ್ದು, ಈ ವೇಳೆ ಹಳಿಯಾಳದ ಕರಿಯಪ್ಪ, ಶ್ರೀಕಾಂತ್, ನಾಸಿರ್, ಶಿವಾನಂದ, ಅಲ್ಬನ್, ಮಂಜುನಾಥ್, ಮೋಹನ್, ಪರಶುರಾಮ್, ರಿಯಾಜ್, ಗೌರೀಶ್, ಮುಕ್ತುಮ್, ಆನಂದ್, ತಾನಾಜಿ, ಶಿವಾಜಿ, ವಾಸೀಂ, ರಸೂಲ್, ಬಸೀರ್ ಖಾನ್, ಎಂಬುವವರನ್ನು ಬಂಧಿಸಿದ್ದು ಪ್ರಕರಣ ದಾಖಲಿಸಿದೆ.

  • ಠಾಣೆಯ ರೆಸ್ಟ್ ರೂಮಿನಲ್ಲಿ ಜೂಜಾಟ- ಐವರು ಕಾನ್ಸ್‌ಟೇಬಲ್ ಬಂಧನ

    ಠಾಣೆಯ ರೆಸ್ಟ್ ರೂಮಿನಲ್ಲಿ ಜೂಜಾಟ- ಐವರು ಕಾನ್ಸ್‌ಟೇಬಲ್ ಬಂಧನ

    ದಾವಣಗೆರೆ: ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯವರು ಶ್ರಮಿಸುತ್ತಿದ್ದಾರೆ. ಆದರೆ ದಾವಣಗೆರೆಯ ಗ್ರಾಮಾಂತರ ಠಾಣೆಯಲ್ಲಿ ಕೆಲ ಸಿಬ್ಬಂದಿ ರೆಸ್ಟ್ ರೂಮಿನಲ್ಲಿ ಜೂಜಾಟವಾಡಿ ಸಿಕ್ಕಿ ಬಿದ್ದಿದ್ದಾರೆ.

    ಮಂಗಳವಾರ ರಾತ್ರಿ ದಾವಣಗೆರೆಯ ಗ್ರಾಮಾಂತರ ಪೊಲೀಸ್ ಠಾಣೆ ಆವರಣದ ವಿಶ್ರಾಂತಿ ಕೊಠಡಿಯಲ್ಲಿ ಜೂಜಾಟವಾಡುತ್ತಿದ್ದ ಐವರು ಕಾನ್ಸ್‌ಟೇಬಲ್‌ಗಳನ್ನು ಬಂಧಿಸಲಾಗಿದೆ. ಠಾಣೆಯ ರೆಸ್ಟ್ ರೂಂಮಿನಲ್ಲೇ ಜೂಜಾಟವಾಡುತ್ತಿದ್ದು, ರೆಡ್ ಹ್ಯಾಂಡಾಗಿ ಐಜಿ ಸ್ಕ್ವಾಡ್‍ಗೆ ಸಿಕ್ಕಿ ಬಿದ್ದಿದ್ದಾರೆ.

    ದಾವಣಗೆರೆ ಗ್ರಾಮಾಂತರ ಠಾಣೆಯ ರೆಸ್ಟ್ ರೂಮಿನಲ್ಲಿ ಇಸ್ಪೀಟ್ ಆಡುತ್ತಿದ್ದಾರೆ ಎಂದು ಪೂರ್ವ ವಲಯದ ಐಜಿ ರವಿಯವರಿಗೆ ಮಾಹಿತಿ ಹೋಗಿತ್ತು. ಖಚಿತ ಮಾಹಿತಿ ಮೇರೆಗೆ ಐಜಿ ನಿರ್ದೇಶನದಂತೆ ರೇಡ್ ಮಾಡಲಾಗಿದೆ. ಆಗ ಕಾನ್ಸ್‌ಟೇಬಲ್‌ಗಳಾದ ಲೋಹಿತ್, ನಾಗರಾಜ್, ಮಂಜಪ್ಪ, ಮಹೇಶ್ ಮತ್ತು ಬಾಲರಾಜ್ ಸಿಕ್ಕಿಬಿದ್ದಿದ್ದಾರೆ.

    ಐವರ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಜೂಜಾಟದಲ್ಲಿ ತೊಡಗಿದ್ದ ಐವರಿಂದ 29 ಸಾವಿರ ರೂಪಾಯಿಯನ್ನು ವಶಪಡೆಯಲಾಗಿದೆ. ಕೊರೊನಾ ಸಂದರ್ಭದಲ್ಲಿ ಕೆಲಸ ಮಾಡದೆ ಪೊಲೀಸ್ ಠಾಣೆಯ ರೆಸ್ಟ್ ರೂಮಿನಲ್ಲೇ ರಾಜಾರೋಷವಾಗಿ ಇಸ್ಪೀಟ್ ಆಡುತ್ತಿದ್ದು, ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆ ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ಜಿಲ್ಲಾಡಳಿತ ಕೊರೊನಾ ಕರ್ತವ್ಯಕ್ಕೆ ನೇಮಕ ಮಾಡಿತ್ತು. ಆದರೆ ಕರ್ತವ್ಯವನ್ನು ಮರೆತು ಲಾಕ್‍ಡೌನ್ ಸಮಯದಲ್ಲಿ ಪಿಬಿ ರಸ್ತೆಯಲ್ಲಿನ ಬಿಲಾಲ್ ಕಾಂಪೌಂಡ್ ಆವರಣದಲ್ಲಿ ಈ ಸಿಬ್ಬಂದಿ ಜೂಜಾಟದಲ್ಲಿ ತೊಡಗಿದ್ದರು. ಈ ಸಂಬಂಧ ಕೆಟಿಜೆ ನಗರ ಪೊಲೀಸರು ದಾಳಿ ನಡೆಸಿ 7 ಜನ ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ಬಂಧಿಸಿದ್ದರು. ಅಲ್ಲದೆ ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ- ಶಿಕ್ಷಣ ಇಲಾಖೆಯ 7 ಜನ ಸಿಬ್ಬಂದಿ ಅಮಾನತು

    ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ- ಶಿಕ್ಷಣ ಇಲಾಖೆಯ 7 ಜನ ಸಿಬ್ಬಂದಿ ಅಮಾನತು

    ದಾವಣಗೆರೆ: ಕೊರೊನಾ ಕರ್ತವ್ಯ ಮರೆತು ಇಸ್ಪೀಟ್ ಆಟ ಆಡಿದ್ದ ಉತ್ತರ ವಲಯದ ಬಿಇಒ ಕಚೇರಿಯ 7 ಜನ ಸಿಬ್ಬಂದಿಯನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

    ದಾವಣಗೆರೆ ಉತ್ತರ ವಲಯದ ಅಧೀಕ್ಷಕ ಎಚ್.ಎಸ್.ಬಸವರಾಜ್, ಪ್ರಥಮ ದರ್ಜೆ ಸಹಾಯಕ ಎಂ.ಸುಧಾಕರ್, ದ್ವಿತೀಯ ದರ್ಜೆ ಸಹಾಯಕ ಕೊಟ್ರೇಶ್, ದ್ವಿತೀಯ ದರ್ಜೆ ಸಹಾಯಕ ಬೆರಳಚ್ಚು ಗಾರ ಮಲ್ಲಿಕಾರ್ಜುನ್ ಮಠದ, ಶಿಕ್ಷಣ ಸಂಯೋಜಕ ಎಸ್.ಸೋಮಶೇಖರಪ್ಪ, ಡಿ.ಗ್ರೂಪ್ ನೌಕರ ಹರ್ಷವರ್ಧನ್, ಗುಮ್ಮನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಎಂ.ವೃಷಬೇಂದ್ರಪ್ಪ ಅಮಾನತುಗೊಂಡವರು.

    ಕೊರೊನಾ ಕರ್ತವ್ಯಕ್ಕಾಗಿ ಜಿಲ್ಲಾಡಳಿತವು ಶಿಕ್ಷಣ ಇಲಾಖೆಯ ಕಳೆದ ಕೆಲ ದಿನಗಳ ಹಿಂದೆ ಸಿಬ್ಬಂದಿಯನ್ನು ನೇಮಕ ಮಾಡಿತ್ತು. ಆದರೆ ಕರ್ತವ್ಯವನ್ನು ಮರೆತು ಹಾಗೂ ಲಾಕ್‍ಡೌನ್ ಸಮಯದಲ್ಲಿ ಪಿಬಿ ರಸ್ತೆಯಲ್ಲಿನ ಬಿಲಾಲ್ ಕಾಂಪೌಂಡ್ ಆವರಣದಲ್ಲಿ ಸಿಬ್ಬಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೆಟಿಜೆ ನಗರ ಪೊಲೀಸರು ದಾಳಿ ನಡೆಸಿ 7 ಜನ ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ಬಂಧಿಸಿದ್ದರು. ಅಲ್ಲದೆ ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ಇಸ್ಪೀಟ್ ಅಡ್ಡೆ ಮೇಲೆ ದಾಳಿ – 19 ಬೈಕ್‍ಗಳು ವಶ

    ಇಸ್ಪೀಟ್ ಅಡ್ಡೆ ಮೇಲೆ ದಾಳಿ – 19 ಬೈಕ್‍ಗಳು ವಶ

    – ವಾಹನ ಸಮೇತ ಮರಳು ಜಪ್ತಿ

    ಕೊಪ್ಪಳ: ಅಕ್ರಮವಾಗಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ಮಾಡಿದ್ದು, ಬರೋಬ್ಬರಿ 19 ಬೈಕ್‍ಗಳನ್ನು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ನಗರದ ಹೊರವಯಲಯದ ಬೆಟ್ಟದ ಪ್ರದೇಶದಲ್ಲಿ ನಡೆದಿದೆ.

    ಇನ್ಸ್‌ಪೆಕ್ಟರ್ ಉದಯರವಿ ಅವರ ನೇತೃತ್ವದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗಂಗಾವತಿಯ ಹೊರವಲಯದಲ್ಲಿ ಈ ಜೂಜಾಟ ನಡೆಸಲಾಗುತ್ತಿತ್ತು ಎನ್ನಲಾಗಿದೆ.

    ಪೊಲೀಸರು ದಾಳಿ ಮಾಡುತ್ತಿದ್ದಂತಯೇ ಬಹುತೇಕ ಜೂಜುಕೋರರು ಓಡಿ ಹೋಗಿದ್ದು, ಮೂವರು ಮಾತ್ರ ಸಿಕ್ಕಿ ಬಿದ್ದಿದ್ದಾರೆ. ಸ್ಥಳದಲ್ಲಿ ಪತ್ತೆಯಾದ 19 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಕ್ರಮ ಮರಳು ಸಾಗಾಣಿಕೆ:
    ಗಂಗಾವತಿ ತಾಲೂಕಿನ ಹಿರೇಜಂತಕ್ಕಲ್ ಪ್ರದೇಶದ ವಿನೋಬನಗರದ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ಗ್ರಾಮೀಣ ಠಾಣೆಯ ಪೊಲೀಸರು ಎರಡು ಟ್ಯಾಕ್ಟರನ್ನು ವಶಕ್ಕೆ ಪಡೆದಿದ್ದಾರೆ.


    ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೆರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ಮಾಡಿದ ಸಂದರ್ಭದಲ್ಲಿ ಟ್ರಾಕ್ಟರ್ ಚಾಲಕರು ವಾಹನಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಮರಳು ಸಮೇತ ಟ್ರಾಕ್ಟರ್ ಗಳನ್ನು ಠಾಣೆಗೆ ತಂದ ಪೊಲೀಸರು, ದೂರು ದಾಖಲಿಸಿದ್ದಾರೆ. ಈ ಪೈಕಿ ಒಂದು ವಾಹನಕ್ಕೆ ಟ್ರಾಲಿಯ ನಂಬರ್ ಇಲ್ಲದೇ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

  • ಇಸ್ಪೀಟ್ ಅಡ್ಡೆ ಮೇಲೆ ದಾಳಿ- 17 ಬೈಕ್, 88 ಸಾವಿರ ಹಣ ವಶ

    ಇಸ್ಪೀಟ್ ಅಡ್ಡೆ ಮೇಲೆ ದಾಳಿ- 17 ಬೈಕ್, 88 ಸಾವಿರ ಹಣ ವಶ

    ಯಾದಗಿರಿ: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, 17 ಬೈಕ್ ಮತ್ತು 88 ಸಾವಿರ ನಗದು ಹಣವನ್ನು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಗೋಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಗೋಗಿ ಪಿಎಸ್‍ಐ ಸೋಮಲಿಂಗ ಒಡೆಯರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇತ್ತೀಚೆಗೆ ಶಹಪುರ ತಾಲೂಕಿನ ಚಂದಾಪುರ ಗ್ರಾಮದ ಹೊರವಲಯದಲ್ಲಿ ಕಾನೂನು ಬಾಹಿರವಾಗಿ ಚಟುವಟಿಕೆಗಳು ಹೆಚ್ಚಾಗಿದ್ದವು. ಶಹಪುರ ತಾಲೂಕಿನ ಕೆಲ ಪ್ರಭಾವಿ ಮುಖಂಡರ ಮಕ್ಕಳು ಮತ್ತು ಸಂಬಂಧಿಕರು ಈ ಇಸ್ಪೀಟು ಅಡ್ಡೆಗಳನ್ನು ನಡೆಸುತ್ತಿದ್ದರು.

    ಈ ಬಗ್ಗೆ ಗೋಗಿ ಪೊಲೀಸ್ ಠಾಣೆಯಲ್ಲಿ ಹೆಚ್ಚು ಪ್ರಕರಣ ದಾಖಲಾಗಿದ್ದವು. ಹೀಗಾಗಿ ಪೊಲೀಸರು ಖಚಿತ ಮಾಹಿತಿ ಪಡೆದು ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ 17 ಬೈಕ್ ಮತ್ತು 88,000 ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ದಾಳಿಯಲ್ಲಿ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬಿಸಿದ್ದಾರೆ.

  • ಹಾಡಹಗಲೇ ಪೊಲೀಸರ ಮೇಲೆ ಹಲ್ಲೆಗೈದ ಯುವನಾಯಕ ಬಿಜೆಪಿಯಿಂದ ಅಮಾನತು: ಆರ್. ಅಶೋಕ್

    ಹಾಡಹಗಲೇ ಪೊಲೀಸರ ಮೇಲೆ ಹಲ್ಲೆಗೈದ ಯುವನಾಯಕ ಬಿಜೆಪಿಯಿಂದ ಅಮಾನತು: ಆರ್. ಅಶೋಕ್

    ಬೆಂಗಳೂರು: ಪೊಲೀಸರ ಮೇಲೆ ಹಾಡಹಗಲೇ ಹಲ್ಲೆ ನಡೆಸಿದ ಆರೋಪಿಗಳಲ್ಲಿ ಓರ್ವ ಬಿಜೆಪಿ ಮುಖಂಡನಾಗಿದ್ದು, ಆತನನ್ನು ಪಕ್ಷದಿಂದ ಅಮಾನತು ಮಾಡುವಂತೆ ಈಗಾಗಲೇ ಸೂಚನೆ ನೀಡಿರುವುದಾಗಿ ಬಿಜೆಪಿ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.

    ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿಸದಂತೆ ಆರೋಪಿಗಳಲ್ಲಿ ಒಬ್ಬನಾದ ಸಂದೀಪ್, ಶಾಸಕ ಅರವಿಂದ ಲಿಂಬಾವಳಿ ಬೆಂಬಲಿಗನಾಗಿದ್ದಾನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅಶೋಕ್, ಆರೋಪಿ ಸಂದೀಪ್, ಗುಂಡೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನಾಗಿದ್ದಾನೆ. ಹೀಗಾಗಿ ಆತನನ್ನು ಪಕ್ಷದಿಂದ ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಅಂದ್ರು. ಇದನ್ನೂ ಓದಿ: ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ- ಪುಡಿರೌಡಿಗಳ ಅಟ್ಟಹಾಸಕ್ಕೆ ಓಡಿಹೋದ ಪೇದೆಗಳು

    ಉಳಿದ ಮೂವರು ಆರೋಪಿಗಳು ಯಾವ ಪಕ್ಷದವರು ಅಂತಾ ಗೃಹಸಚಿವರು ಸ್ಪಷ್ಟಪಡಿಸಬೇಕು. ಆ ಮೂವರು ಕಾಂಗ್ರೆಸ್ ನವರು ಅಂತಾ ಹೇಳಲಾಗ್ತಿದೆ. ಅವರ ಹೆಸರು ಯಾಕೆ ಹೇಳ್ತಿಲ್ಲ ಅಂತ ಪ್ರಶ್ನಿಸಿದ್ರು.

    ಪೊಲೀಸರ ಮೇಲಿನ ಹಲ್ಲೆಗಳನ್ನು ನೋಡಿದ್ರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗಿದೆ ಅನ್ನೋದು ಗೊತ್ತಾಗುತ್ತೆ. ಯಾರೇ ತಪ್ಪು ಮಾಡಿದ್ರು, ಅದು ತಪ್ಪು. ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಅಂತ ಅವರು ಹೇಳಿದ್ದಾರೆ.

    ನಗರದ ವರ್ತೂರು ಮುಖ್ಯರಸ್ತೆಯ ಸಿದ್ದಾಪುರ ಬಳಿ ಭಾನುವಾರ ಪೇದೆಗಳಾದ ಬಸಪ್ಪ ಗಾಣೆಗಾರ, ಶರಣಬಸಪ್ಪ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕುಡಿತ ಮತ್ತಿನಲ್ಲಿದ್ದ ಗ್ಯಾಂಗ್ ಪೊಲೀಸರ ಮೇಲೆಯೇ ಹಾಡಹಗಲೇ ಹಲ್ಲೆ ನಡೆಸಿವೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕುಮಾರ್, ಸುದೀಪ್, ಮೂರ್ತಿ, ಮುರಳಿ ಮೋಹನ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    https://www.youtube.com/watch?v=6caEcDoIStw

    https://www.youtube.com/watch?v=DrZ-G_iCIfI