Tag: ಇಸ್ರೇಲ್ ರಾಯಭಾರ ಕಚೇರಿ

  • ಬೆಂಗಳೂರಿನಲ್ಲಿರೊ ಇಸ್ರೇಲ್ ರಾಯಭಾರ ಕಚೇರಿ, ಹೈಕೋರ್ಟ್‌ಗೆ RDX ಇಟ್ಟಿರೋದಾಗಿ ಇ-ಮೇಲ್‌ ಬೆದರಿಕೆ

    ಬೆಂಗಳೂರಿನಲ್ಲಿರೊ ಇಸ್ರೇಲ್ ರಾಯಭಾರ ಕಚೇರಿ, ಹೈಕೋರ್ಟ್‌ಗೆ RDX ಇಟ್ಟಿರೋದಾಗಿ ಇ-ಮೇಲ್‌ ಬೆದರಿಕೆ

    ಬೆಂಗಳೂರು: ನಗರದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಗೆ ಹಾಗೂ ಹೈಕೋರ್ಟ್‌ಗೆ RDX ಇಟ್ಟಿರೋದಾಗಿ ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ಬಂದಿದೆ. ಶುಕ್ರವಾರ ಪ್ರಾರ್ಥನೆ ವೇಳೆ ಸ್ಫೋಟ ಆಗುತ್ತೆ ಎಂದೂ ಸಹ ಮೇಲ್​ನಲ್ಲಿ ತಿಳಿಸಲಾಗಿದೆ.

    ಸೆ.22 ರಂದು Cho_ramaswamy@hotmail ಎಂಬ ಐಡಿಯಿಂದ ಮೇಲ್ ಕಳಿಸಲಾಗಿದೆ. ಕೂಡಲೆ ಕಾರ್ಯಪ್ರವೃತ್ತರಾದ ಪೊಲೀಸರು ರಿಸ್ಕ್ ತೆಗೆದುಕೊಳ್ಳದೇ ಮೇಲ್ ಬಂದ ಬಳಿಕ ಸರ್ಚ್ ಆಪರೇಷನ್ ಕೈಗೊಂಡಿದ್ದಾರೆ. ತೀವ್ರ ತಪಾಸಣೆ ಬಳಿಕ ಇದು ಹುಸಿ ಬೆದರಿಕೆ ಮೇಲ್ ಎಂಬುದು ದೃಢವಾಗಿದೆ. IP ಅಡ್ರೆಸ್ ಮೂಲಕ ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

    ಪದೇ ಪದೇ ರಾಮಸ್ವಾಮಿ ಎಂಬ ಇ.ಮೇಲ್ ಐಡಿಯಿಂದ ಬೆದರಿಕೆ ಇ-ಮೇಲ್ ಬರುತ್ತಿದ್ದರಿಂದ ರಾಮಸ್ವಾಮಿ ಎಂಬ ಇ-ಮೇಲ್ ಐಡಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಅಜ್ಞಾತ ಸ್ಥಳದಿಂದ ಬೆದರಿಕೆ ಇ.ಮೇಲ್ ಮಾಡಿ ಬೆದರಿಕೆ ಹಾಕುತ್ತಿರುವುದರಿಂದ ಬೆಂಗಳೂರು ಪೊಲೀಸರಿಗೆ ಕಿಡಿಗೇಡಿಯನ್ನ ಪತ್ತೆ ಹಚ್ಚುವುದು ದೊಡ್ಡ‌ ಸವಾಲಾಗಿದೆ. ನಿರಂತರವಾಗಿ Cho_ramaswamy@hotmail ಎಂಬ ಮೇಲ್ ಐಡಿ ಹಿಂದೆ ಬಿದ್ದಿದ್ದರು ಪೊಲೀಸರಿಗೆ ಸಿಗದೇ ಚಳ್ಳೆಹಣ್ಣು ತಿನ್ನಿಸುತ್ತಿದ್ದಾನೆ.

    ಸದ್ಯ ಪೊಲೀಸರು ಹಾಟ್ ಮೇಲ್‌ಗೆ ಪತ್ರ ಬರೆದು ಮಾಹಿತಿ ಕೇಳಿದ್ದು, ಹಾಟ್ ಮೇಲ್ ನಿಂದ ಯಾವುದೇ ರೆಸ್ಪಾನ್ಸ್ ಸಿಕ್ಕಿಲ್ಲ. ಹೀಗಾಗಿ IP ಅಡ್ರೆಸ್ ಮೂಲಕ ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಘಟನೆ ಬಗ್ಗೆ ವಿಧಾನಸೌಧ ಹಾಗು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದ್ದು, 10 ತಂಡಗಳನ್ನ ಮಾಡಿ ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

  • ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಅಧಿಕಾರಿ, ಕಚೇರಿಗೆ ಜೀವ ಬೆದರಿಕೆ- ಭದ್ರತೆ ಹೆಚ್ಚಿಸಿದ ಪೊಲೀಸರು

    ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಅಧಿಕಾರಿ, ಕಚೇರಿಗೆ ಜೀವ ಬೆದರಿಕೆ- ಭದ್ರತೆ ಹೆಚ್ಚಿಸಿದ ಪೊಲೀಸರು

    ನವದೆಹಲಿ: ಇಸ್ರೇಲ್-ಹಮಾಸ್ ನಡುವೆ ಯುದ್ಧ ಮುಂದುವರಿದಿದ್ದು, ಈ ನಡುವೆ ದೆಹಲಿಯಲ್ಲಿರುವ  (New Delhi) ಇಸ್ರೇಲ್ ರಾಯಭಾರಿ ಅಧಿಕಾರಿ (Ambassador of Israel) ನೌರ್ ಗಿಲೋನ್ ಮೇಲೆ ಮಾರಣಾಂತಿಕ ದಾಳಿ ಸಂಭವಿಸಬಹುದು ಮತ್ತು ಕಚೇರಿ (Embassy of Israel) ಮೇಲೆ ದಾಳಿ ನಡೆಯಬಹುದು ಎಂದು ಗುಪ್ತಚರ ಇಲಾಖೆ (Intelligence Department) ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಿದೆ.

    ರಾಯಭಾರಿ ಮೇಲಿನ ದಾಳಿಯ ಬಗ್ಗೆ ದೇಶದ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಇದಲ್ಲದೆ ಇಸ್ರೇಲ್ ರಾಯಭಾರ ಕಚೇರಿಗೂ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆಗಳು ಬರುತ್ತಿವೆ. ಈ ಬಗ್ಗೆ ಮಾಹಿತಿ ಆಧರಿಸಿ ದೆಹಲಿಯ ರಾಯಭಾರಿ ಕಚೇರಿಗೆ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ತಗ್ಗಿದ ವಾಯು ಮಾಲಿನ್ಯ – ಶಾಲೆ, ಕಾಲೇಜುಗಳು ಪುನಾರಂಭ

    ಎರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವಾಲಯವು ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದು, ಇಸ್ರೇಲ್ ರಾಯಭಾರ ಕಚೇರಿಯಿಂದ ಪತ್ರ ಬಂದಿದೆ. ಇಸ್ರೇಲ್ ರಾಯಭಾರಿ ಮೇಲೆ ಉಗ್ರರ ದಾಳಿಯ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಬರುತ್ತಿವೆ ಎಂದು ರಾಯಭಾರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಉಲ್ಲೇಖಿಸಿದೆ. ದೆಹಲಿ ಪೊಲೀಸರಿಗೆ ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಲಾಗಿದೆ. ಇದನ್ನೂ ಓದಿ: ವಿಶಾಖಪಟ್ಟಣಂ ಬಂದರಿನಲ್ಲಿ ಬೆಂಕಿ ಅವಘಡ- 40 ದೋಣಿಗಳು ಭಸ್ಮ

    ಇಸ್ರೇಲ್ ಅಬೆನ್ಸಿ ನವೆಂಬರ್ 16 ರಂದು ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರದ ಮೂಲಕ ಇಸ್ರೇಲ್ ರಾಯಭಾರಿಯ ಭದ್ರತೆಯನ್ನು ಕೂಡಲೇ ಹೆಚ್ಚಿಸುವಂತೆ ಗೃಹ ಸಚಿವಾಲಯಕ್ಕೆ ಆಗ್ರಹಿಸಲಾಗಿದೆ. ಗೃಹ ಸಚಿವಾಲಯದ ಪತ್ರದ ನಂತರ, ನವದೆಹಲಿ ಜಿಲ್ಲಾ ಪೊಲೀಸ್ ಉಪ ಆಯುಕ್ತ ಪ್ರವನ್ ತಾಯಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಇಸ್ರೇಲ್ ರಾಯಭಾರಿಗೆ ಬರುತ್ತಿರುವ ಬೆದರಿಕೆಗಳ ಬಗ್ಗೆ ವಿವರವಾಗಿ ತನಿಖೆ ನಡೆಸಬೇಕು ಎಂದು ಆದೇಶಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಮಿಚೆಲ್ ಮಾರ್ಷ್- ಭಾರೀ ಟ್ರೋಲ್

    ಗೃಹ ಸಚಿವಾಲಯದ ಪತ್ರದ ನಂತರ ನವದೆಹಲಿ ಜಿಲ್ಲಾ ಪೊಲೀಸ್ ಉಪ ಆಯುಕ್ತ ಪ್ರವನ್ ತಾಯಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಇಸ್ರೇಲ್ ರಾಯಭಾರಿಗೆ ಬರುತ್ತಿರುವ ಬೆದರಿಕೆಗಳ ಬಗ್ಗೆ ವಿವರವಾಗಿ ತನಿಖೆ ನಡೆಸಬೇಕು ಎಂದು ಆದೇಶಿಸಿದ್ದಾರೆ. ರಾಯಭಾರಿ ಮತ್ತು ಇಸ್ರೇಲ್ ರಾಯಭಾರಿ ಕಚೇರಿಯ ಭದ್ರತೆಯನ್ನು ಹೆಚ್ಚಿಸುವಂತೆ ಪೊಲೀಸ್ ಉಪ ಆಯುಕ್ತರು ಕೇಳಿಕೊಂಡಿದ್ದಾರೆ. ಅಲ್ಲದೆ ಈ ಭಾಗದಲ್ಲಿ ಬೀಟ್ ಮತ್ತು ಗಸ್ತು ಸಿಬ್ಬಂದಿ ಜಾಗರೂಕರಾಗಿರಲು ಆದೇಶಿಸಲಾಗಿದೆ. ಇದನ್ನೂ ಓದಿ: ಕೋಚ್ ಆಗಿ ಮುಂದುವರಿಯೋ ನಿರ್ಧಾರ ಕೈಗೊಳ್ಳಲು ಸಮಯಬೇಕು: ರಾಹುಲ್ ದ್ರಾವಿಡ್

  • ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭೇಟಿಯಾದ ನಟಿ ಕಂಗನಾ ರಣಾವತ್

    ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭೇಟಿಯಾದ ನಟಿ ಕಂಗನಾ ರಣಾವತ್

    ನವದೆಹಲಿ: ಇಸ್ರೇಲ್ ರಾಯಭಾರಿ ನೌರ್ ಗಿಲೋನ್ (Naor Gilon) ಅವರನ್ನು ನಟಿ ಕಂಗನಾ ರಣಾವತ್ (Kangana Ranaut) ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ (Israel Embassy) ಭೇಟಿಯಾಗಿ ಇಸ್ರೇಲ್ (Israel) ಹಮಾಸ್ (Hamas) ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.

    ಭೇಟಿ ಬಳಿಕ ನಟಿ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಿನ್ನೆ (ಮಂಗಳವಾರ) ನಾನು ರಾವಣ ದಹನಕ್ಕಾಗಿ ದೆಹಲಿಗೆ ಬಂದಿದ್ದೆ. ಈ ಸಮಯದಲ್ಲಿ ಇಂದಿನ ಆಧುನಿಕ ರಾವಣ ಮತ್ತು ಹಮಾಸ್‌ನಂತಹ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಜನರನ್ನು ಭೇಟಿಯಾಗಬೇಕೆಂದು ನನಗೆ ಅನಿಸಿತು. ಈ ಹಿನ್ನಲೆ ಇಸ್ರೇಲ್ ರಾಯಭಾರ ಕಚೇರಿಗೆ ಭೇಟಿ ನೀಡಿದೆ ಎಂದು ಬರೆದುಕೊಂಡಿದ್ದಾರೆ.

    ಸಣ್ಣ ಮಕ್ಕಳು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಮಾಸ್ ಭೀಕರವಾಗಿ ಹತ್ಯೆ ಮಾಡಿದೆ. ಭಯೋತ್ಪಾದನೆ ವಿರುದ್ಧದ ಈ ಯುದ್ಧದಲ್ಲಿ ಇಸ್ರೇಲ್ ಜಯಶಾಲಿಯಾಗಲಿದೆ ಎಂಬ ಸಂಪೂರ್ಣ ಭರವಸೆ ನನಗಿದೆ. ಭಾರತದ ಸ್ವಾವಲಂಬಿ ಯುದ್ಧ ವಿಮಾನ ತೇಜಸ್ ಮತ್ತು ನನ್ನ ಮುಂಬರುವ ಚಿತ್ರ ತೇಜಸ್ ಬಗ್ಗೆ ನಾನು ಅವರೊಂದಿಗೆ ಚರ್ಚಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾವಣನ ಪ್ರತಿಕೃತಿ ದಹಿಸಿದ ನಟಿ ಕಂಗನಾ ರಣಾವತ್

    ತೇಜಸ್‌ನಲ್ಲಿ ಕಂಗನಾ ರಣಾವತ್ ಅವರು ಭಯೋತ್ಪಾದನೆಯ ವಿರುದ್ಧ ಹೋರಾಡುವ ಕಾರ್ಯಾಚರಣೆಯಲ್ಲಿರುವ ವಾಯುಪಡೆಯ ಪೈಲಟ್‌ನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿಯ ಪ್ರಕಾರ ಕಂಗನಾ ತನ್ನ ಚಲನಚಿತ್ರಕ್ಕಾಗಿ ಭಾರತೀಯ ಪಡೆಗಳು ಬಳಸಿದ ವಿಶೇಷ ಯುದ್ಧ ತಂತ್ರಗಳನ್ನು ಕರಗತ ಮಾಡಿಕೊಳ್ಳಲು ಕಠಿಣ ತರಬೇತಿಗಾಗಿ 4 ತಿಂಗಳುಗಳನ್ನು ಮೀಸಲಿಟ್ಟಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಇನ್ನೂ ಯಾಕೆ ಭೂ ದಾಳಿ ನಡೆಸಿಲ್ಲ – ಪ್ರಶ್ನೆಗೆ ಸಿಕ್ಕಿತು ಉತ್ತರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]