Tag: ಇಸ್ರೇಲ್‌ ವಾಯುದಾಳಿ

  • ಕತಾರ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌; ಹಮಾಸ್‌ ನಾಯಕನ ಪುತ್ರ ಸೇರಿ 6 ಮಂದಿ ಬಲಿ – ಟಾಪ್‌ ಲೀಡರ್‌ ಪಾರು

    ಕತಾರ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌; ಹಮಾಸ್‌ ನಾಯಕನ ಪುತ್ರ ಸೇರಿ 6 ಮಂದಿ ಬಲಿ – ಟಾಪ್‌ ಲೀಡರ್‌ ಪಾರು

    ಟೆಲ್‌ಅವಿವ್‌: ಕತಾರ್‌ ರಾಜಧಾನಿ ದೋಹಾದಲ್ಲಿ (Doha) ಇಸ್ರೇಲ್‌ ನಡೆಸಿದ ಭೀಕರ ವಾಯುದಾಳಿಯಲ್ಲಿ (Israel Air Strike) ನಮ್ಮ ನಾಯಕ ಬದುಕುಳಿದಿದ್ದಾರೆ. ಆದ್ರೆ ಹಮಾಸ್‌ ನಾಯಕ ಪುತ್ರ ಸೇರಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್‌ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ.

    ಯುದ್ಧ ನಿಲ್ಲಬೇಕು, ಗಾಜಾದಿಂದ ಸೈನ್ಯ ಹಿಂದಕ್ಕೆ ತೆಗೆದುಕೊಳ್ಳಬೇಕು ಮತ್ತು ಗಾಜಾವನ್ನು ನೋಡಿಕೊಳ್ಳಲು ಬೇರೆಯೇ ಸಮಿತಿ ರಚನೆಯಾಗಬೇಕು ಎಂದು ಟ್ರಂಪ್‌ (Donald Trump) ಎಚ್ಚರಿಕೆ ಕೊಟ್ಟಿದ್ದರು. ಆ ಬೆನ್ನಲ್ಲೇ ಹಮಾಸ್‌ ಹಿರಿಯ ನಾಯಕರ ಗುರಿಯಾಗಿಸಿಕೊಂಡು ಇಸ್ರೇಲ್‌ ಸೇನೆ ದಾಳಿ ನಡೆಸಿದೆ. ಆದ್ರೆ ಇದೊಂದು ಹೇಡಿತನದ ದಾಳಿ ಎಂದು ಆಕ್ರೋಶ ಕತಾರ್‌ ಆಕ್ರೋಶ ವ್ಯಕ್ತಪಡಿಸಿದೆ. ಕದನ ವಿರಾಮ ಮತ್ತು ಯುದ್ಧ ಕೈದಿಗಳ ಕುರಿತು ಮಾತುಕತೆ ನಡೆಯುತ್ತಿದ್ದಾಗಲೇ ಇಸ್ರೇಲ್‌ ದಾಳಿ ನಡೆಸಿರುವುದನ್ನು ಹಮಾಸ್‌ ಗುಂಪು ಖಂಡಿಸಿದೆ.

    ಇದು ಆಕ್ರಮಣಕಾರಿ ಸ್ವರೂಪದ ಅಪರಾಧ ಕೃತ್ಯ. ಒಪ್ಪಂದದ ಸಾಧ್ಯತೆಗಳನ್ನು ಹಾಳುಮಾಡುವ ಹಾಗೂ ನಿರಾಕರಿಸುವ ದೃಷ್ಟಿಕೋನವನ್ನು ತೋರಿಸುತ್ತದೆ. ಇದು ಘೋರ ಅಪರಾಧ, ಸ್ಪಷ್ಟ ಆಕ್ರಮಣ ಮಾತ್ರವಲ್ಲದೇ ಎಲ್ಲಾ ಅಂತಾರಾಷ್ಟ್ರೀಯ ನಿಯಮ ಮತ್ತು ಕಾನೂನುಗಳ ಉಲ್ಲಂಘನೆಯಾಗಿದೆ ಎಂದು ಪ್ಯಾಲೆಸ್ತೀನ್‌ ಗುಂಪು ಅಸಮಾಧಾನ ಹೊರಹಾಕಿದೆ. ಈ ದಾಳಿಯಲ್ಲಿ ಹಮಾಸ್ ನಾಯಕ ಖಲೀಲ್ ಅಲ್-ಹಯ್ಯನ ಪುತ್ರ, ಓರ್ವ ಸಹಾಯಕ ಸಿಬ್ಬಂದಿ, ಓರ್ವ ಭದ್ರತಾ ಅಧಿಕಾರಿ ಸೇರಿದಂತೆ ಕನಿಷ್ಠ 6 ಜನ ಸಾವನ್ನಪ್ಪಿದ್ದಾರೆ ಎಂದು ಗುಂಪು ದೃಢಪಡಿಸಿದೆ.

    ಏನಾಗಿತ್ತು?
    ಕತಾರ್‌ನ ರಾಜಧಾನಿ ದೋಹಾದಲ್ಲಿ ಮಂಗಳವಾರ ಇಸ್ರೇಲ್‌ ವಾಯು ದಾಳಿ ನಡೆಸಿತ್ತು. ಹಮಾಸ್‌ ಹಿರಿಯ ನಾಯಕರ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ರಕ್ಷಣಾ ಪಡೆ (IDF) ಮತ್ತು ಇಸ್ರೇಲ್ ಭದ್ರತಾ ಸಂಸ್ಥೆ (ISA) ವಾಯು ದಾಳಿ ನಡೆಸಿತ್ತು. ಇದನ್ನೂ ಓದಿ: ನನ್ನ ಆತ್ಮೀಯ ಸ್ನೇಹಿತ ಮೋದಿ ಜೊತೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಟ್ರಂಪ್‌

    ಕದನ ವಿರಾಮ ಚರ್ಚೆ ವೇಳೆ ದಾಳಿ
    ವರದಿಗಳ ಪ್ರಕಾರ, ಇಸ್ರೇಲ್‌ನ ದಾಳಿಯ ವೇಳೆ ಹಮಾಸ್ ನಾಯಕರು ದೋಹಾದಲ್ಲಿ ಕದನ ವಿರಾಮದ ಬಗ್ಗೆ ಚರ್ಚಿಸುತ್ತಿದ್ದರು. ಗಾಜಾ ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮದ ಪ್ರಸ್ತಾಪದ ಬಗ್ಗೆ ಚರ್ಚಿಸುತ್ತಿದ್ದಾಗ ದೋಹಾದಲ್ಲಿ ಹಮಾಸ್ ನಿಯೋಗದ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸ್ಪೇನ್‌ನಲ್ಲಿ ಬೀಚ್‌ಗಳನ್ನು ಬಂದ್‌ ಮಾಡಿಸಿದ ನೀಲಿ ಡ್ರ್ಯಾಗನ್‌ – ಏನಿದರ ವಿಶೇಷ? 

    ಇಸ್ರೇಲ್‌ ಸೇನೆ ಹೇಳಿದ್ದೇನು?
    ಇಸ್ರೇಲ್ ಸೇನೆಯು ಎಕ್ಸ್‌ನಲ್ಲಿ ಹಮಾಸ್‌ ನಾಯಕರ ಮೇಲೆ ವಾಯು ದಾಳಿ ನಡೆಸಿದ ಬಗ್ಗೆ ಸ್ಪಷ್ಟಪಡಿಸಿತ್ತು. ಸೂಕ್ತವಾದ ಮದ್ದುಗುಂಡುಗಳನ್ನು ಬಳಸಿ, ದೋಹಾದಲ್ಲಿರುವ ನಾಗರಿಕರಿಗೆ ಹಾನಿಯಾಗದಂತೆ ವಾಯು ದಾಳಿ ಮಾಡಲಾಗಿದೆ. ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿದ್ದೆವು ಹಮಾಸ್ ನಾಯಕರ ವಿರುದ್ಧದ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ಸೇನೆ ತಿಳಿಸಿದೆ. ಇದನ್ನೂ ಓದಿ: ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

  • ಗಾಜಾದಲ್ಲಿ ಇಸ್ರೇಲ್ ವಾಯುದಾಳಿಗೆ ಹಮಾಸ್ ರಾಜಕೀಯ ನಾಯಕ ಬಲಿ

    ಗಾಜಾದಲ್ಲಿ ಇಸ್ರೇಲ್ ವಾಯುದಾಳಿಗೆ ಹಮಾಸ್ ರಾಜಕೀಯ ನಾಯಕ ಬಲಿ

    ಜೆರುಸಲೇಂ: ಗಾಜಾದ (Gaza) ಖಾನ್‌ ಯೂನಿಸ್‌ನಲ್ಲಿ ಇಸ್ರೇಲ್‌ (Israeli) ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ (Hamas) ರಾಜಕೀಯ ನಾಯಕ ಸಲಾಹ್‌ ಅಲ್‌-ಬರ್ದವೀರ್‌ ಹತ್ಯೆಯಾಗಿದೆ.

    ದಾಳಿಯಲ್ಲಿ ಸಲಾಹ್ ಅಲ್-ಬರ್ದವೀಲ್ ಅವರ ಪತ್ನಿಯೂ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಪರ ಮಾಧ್ಯಮಗಳನ್ನು ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

    ಗಾಜಾ ಪಟ್ಟಿಯಾದ್ಯಂತ ಹಮಾಸ್ ಭದ್ರಕೋಟೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ಭಾಗವಾಗಿತ್ತು. ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಮಾತುಕತೆಗಳು ಸಫಲವಾಗಿಲ್ಲ. ಮಾರ್ಚ್‌ 19 ರಿಂದ ಜಾರಿಯಲ್ಲಿದ್ದ ಕದನ ವಿರಾಮವನ್ನು ಮುರಿದ ನಂತರ ಮಿಲಿಟರಿ ಕಾರ್ಯಾಚರಣೆ ನಡೆದಿದೆ.

    ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲಿ ಸರ್ಕಾರವು, ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದೆ. ಅಮೆರಿಕದ ರಾಯಭಾರಿ ಸ್ಟೀವ್ ವಿಟ್ಕಾಫ್ ಮಧ್ಯಸ್ಥಿಕೆಯಲ್ಲಿ ಪ್ರಸ್ತಾವನೆಗಳನ್ನು ತಿರಸ್ಕರಿಸಿದೆ.

    ಹಮಾಸ್ ವಿರುದ್ಧದ ದಾಳಿಗಳನ್ನು ತೀವ್ರಗೊಳಿಸುವಂತೆ ಇಸ್ರೇಲ್ ರಕ್ಷಣಾ ಪಡೆಗಳಿಗೆ (IDF) ನೆತನ್ಯಾಹು ನಿರ್ದೇಶನ ನೀಡಿದ್ದಾರೆ. ಇನ್ಮುಂದೆ ಇಸ್ರೇಲ್, ಹಮಾಸ್ ವಿರುದ್ಧ ಮಿಲಿಟರಿ ಬಲವನ್ನು ಹೆಚ್ಚಿಸುವ ಮೂಲಕ ಕಾರ್ಯನಿರ್ವಹಿಸುತ್ತದೆ ಎಂದು ನೆತನ್ಯಾಹು ಕಚೇರಿ ತಿಳಿಸಿದೆ.

  • ಇಸ್ರೇಲ್‌ ಮತ್ತೆ ಸರಣಿ ವಾಯುದಾಳಿ – ಗಾಜಾದಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವು!

    ಇಸ್ರೇಲ್‌ ಮತ್ತೆ ಸರಣಿ ವಾಯುದಾಳಿ – ಗಾಜಾದಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವು!

    – 3 ದಿನಗಳ ಅಂತರದಲ್ಲಿ ಇಸ್ರೇಲ್‌ 2ನೇ ಬಾರಿ ದಾಳಿ

    ಗಾಜಾ: ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್‌ ತನ್ನ ವಾಯುದಾಳಿಯನ್ನು (Israel Airstrikes) ಮುಂದುವರಿಸಿದೆ. ಗುರುವಾರ ಗಾಜಾದಲ್ಲಿ (Gaza Strip) ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    Israel

    ಗಾಜಾಪಟ್ಟಿಯ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಲವು ಮನೆಗಳು ಹಾಗೂ ಮೂಲ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಸೇನೆ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಹಮಾಸ್‌ ನಾಯಕರೂ ಹತ್ಯೆಗೀಡಾಗಿದ್ದಾರೆ. ಕಳೆದ ಜನವರಿ 19ರಂದು ಕದನ ವಿರಾಮ ಘೋಷಣೆಯಾದ ಬಳಿಕ ಮೂರು ದಿನಗಳ ಅಂತರದಲ್ಲಿ ಇಸ್ರೇಲ್‌ ನಡೆಸಿದ 2ನೇ ವಾಯುದಾಳಿ ಇದಾಗಿದೆ. ಇದನ್ನೂ ಓದಿ: ಇಸ್ರೇಲ್‌ ಭೀಕರ ವಾಯುದಾಳಿ – ಗಾಜಾದಲ್ಲಿ 300ಕ್ಕೂ ಅಧಿಕ ಮಂದಿ ಸಾವು

    Israel 3

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಭೀಕರ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್‌, ಗಾಜಾದಲ್ಲಿ 400ಕ್ಕೂ ಅಧಿಕ ಮಂದಿಯನ್ನ ಹತ್ಯೆ ಮಾಡಿತ್ತು. ಗಾಜಾ ಪಟ್ಟಿಯಲ್ಲಿದ್ದ ಹಮಾಸ್‌ನ ಆಂತರಿಕ ಭದ್ರತಾ ಸೇವೆಗಳ ಮುಖ್ಯಸ್ಥ ಮಹಮೂದ್ ಅಬು ವತ್ಫಾ ಕೂಡ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದ. ಇದನ್ನೂ ಓದಿ: ಹಮಾಸ್‌ ಉಗ್ರರಿಗೆ ಬೆಂಬಲ – ಭಾರತದ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌, ಶೀಘ್ರವೇ ಗಡೀಪಾರು

    ಕದನ ವಿರಾಮ ಘೋಷಣೆಯ ಬಳಿಕ ಒಪ್ಪಂದದ ಪ್ರಕಾರ ಬಾಕಿಯಿರುವ 59 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ನಿರಾಕರಿಸಿದ ನಂತರ ಇಸ್ರೇಲ್‌ ದಾಳಿ ನಡೆಸಿರುವುದಾಗಿ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದರು. ಇದನ್ನೂ ಓದಿ: ಯುರೋಪ್‌ನಿಂದ ಹೆಚ್ಚಿನ ವಾಯು ರಕ್ಷಣೆ ಪಡೆಯಲು ಝೆಲೆನ್ಸ್ಕಿಗೆ ಟ್ರಂಪ್ ಸಹಾಯ: ಶ್ವೇತಭವನ ಮಾಹಿತಿ

  • ಇಸ್ರೇಲ್‌ ಭೀಕರ ವಾಯುದಾಳಿ – ಗಾಜಾದಲ್ಲಿ 300ಕ್ಕೂ ಅಧಿಕ ಮಂದಿ ಸಾವು

    ಇಸ್ರೇಲ್‌ ಭೀಕರ ವಾಯುದಾಳಿ – ಗಾಜಾದಲ್ಲಿ 300ಕ್ಕೂ ಅಧಿಕ ಮಂದಿ ಸಾವು

    ನವದೆಹಲಿ: ಕಳೆದ ಜನವರಿ 19ರಂದು ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದೆ. ಇಂದು ಮುಂಜಾನೆ ಇಸ್ರೇಲ್‌ ಸೇನೆಯು (Israeli military) ಗಾಜಾದ ಮೇಲೆ ನಡೆದ ಭೀಕರ ವೈಮಾನಿಕ ದಾಳಿಯಲ್ಲಿ (Israel AirStrikes) ಕನಿಷ್ಠ 330 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಬೆಳ್ಳಂ ಬೆಳಗ್ಗೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್‌, ಉತ್ತರ ಗಾಜಾ, ಗಾಜಾ ನಗರ ಮತ್ತು ಮಧ್ಯ ಮತ್ತು ದಕ್ಷಿಣ ಗಾಜಾ ಪಟ್ಟಿಯ ದೇರ್ ಅಲ್-ಬಲಾಹ್, ಖಾನ್ ಯೂನಿಸ್ ಮತ್ತು ರಫಾ ಸೇರಿದಂತೆ ಅನೇಕ ಸ್ಥಳಗಳನ್ನು ಧ್ವಂಸಗೊಳಿಸಿದೆ. ಭೀಕರ ವಾಯುದಾಳಿಯಲ್ಲಿ ಮೃತಪಟ್ಟವರ ಪೈಕಿ ಪ್ಯಾಲೆಸ್ತೀನಿನ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಹೆಚ್ಚಿನವರು ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಹೇಳಿದೆ.

    ಅಲ್ಲದೇ ಗಾಜಾ ಪಟ್ಟಿಯಲ್ಲಿರುವ ಹಮಾಸ್‌ನ ಆಂತರಿಕ ಭದ್ರತಾ ಸೇವೆಗಳ ಮುಖ್ಯಸ್ಥ ಮಹಮೂದ್ ಅಬು ವತ್ಫಾ ಕೂಡ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದಾನೆಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸತತ ಸಿನಿಮಾಗಳ ಸೋಲಿನ ನಡುವೆಯೂ ಸ್ಟಾರ್‌ ನಟನಿಗೆ ಪುರಿ ಜಗನ್ನಾಥ್ ಆ್ಯಕ್ಷನ್ ಕಟ್

    ಕದನ ವಿರಾಮ ಘೋಷಣೆಯ ಬಳಿಕ ಒಪ್ಪಂದದ ಪ್ರಕಾರ ಬಾಕಿಯಿರುವ 59 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ನಿರಾಕರಿಸಿದ ನಂತರ ಇಸ್ರೇಲ್‌ ದಾಳಿ ನಡೆಸಿರುವುದಾಗಿ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಇದನ್ನೂ ಓದಿ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್

    ಮೊದಲೇ ಎಚ್ಚರಿಕೆ ನೀಡಿದ್ದ ಇಸ್ರೇಲ್‌”
    ದಾಳಿ ನಡೆಸುವುದಕ್ಕೂ ಮುನ್ನವೇ ಇಸ್ರೇಲ್‌ ಎಚ್ಚರಿಸುವ ಕೆಲಸ ಮಾಡಿತ್ತು. ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಇಸ್ರೇಲ್‌ ಸೇನೆ, ಜಾಪಟ್ಟಿಯಲ್ಲಿರುವ ಹಮಾಸ್‌ ಭಯೋತ್ಪಾದಕ ಸಂಘಟನೆ ಸೇರಿದ ನೆಲೆಗಳ ಮೇಲೆ ಇಸ್ರೇಲ್‌ ಸೇನೆ ವ್ಯಾಪಕ ದಾಳಿ ನಡೆಸುತ್ತಿದೆ. ಹೀಗಾಗಿ ಗಾಜಾದ ನೆರೆಯ ಶಾಲೆಗಳನ್ನು ಮುಚ್ಚುವಂತೆ ಆದೇಶಿಸುತ್ತಿದೆ ಎಂದು ಎಚ್ಚರಿಕೆ ನೀಡಿತ್ತು. ಇದನ್ನೂ ಓದಿ: ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ

    ಟ್ರಂಪ್‌ ಎಚ್ಚರಿಕೆ:
    ಇಸ್ರೇಲ್‌ ದಾಳಿ ವಿಚಾರ ತಿಳಿಯುತ್ತಿದ್ದಂತೆ ಅಮೆರಿಕದ ಶ್ವೇತಭವನ ಪ್ರತಿಕ್ರಿಯಿಸಿದೆ. ಜೊತೆಗೆ ಹಮಾಸ್ ಮತ್ತು ಇರಾನ್ ಬೆಂಬಲಿತ ಹೌತಿ ಬಂಡುಕೋರರು ಸೇರಿದಂತೆ ಇತರ ಭಯೋತ್ಪಾದಕ ಗುಂಪುಗಳು ಬೆಲೆ ತೆರಬೇಕಾಗುತ್ತದೆ ಎಂದು ಟ್ರಂಪ್‌ ಎಚ್ಚರಿಸಿದ್ದಾರೆ.

  • ಬೈರೂತ್‌ ಮೇಲೆ ಇಸ್ರೇಲ್‌ ಮತ್ತೊಂದು ದಾಳಿ; ಮೂರೇ ಸೆಕೆಂಡುಗಳಲ್ಲಿ ದೈತ್ಯ ಕಟ್ಟಡಗಳು ಧ್ವಂಸ

    ಬೈರೂತ್‌ ಮೇಲೆ ಇಸ್ರೇಲ್‌ ಮತ್ತೊಂದು ದಾಳಿ; ಮೂರೇ ಸೆಕೆಂಡುಗಳಲ್ಲಿ ದೈತ್ಯ ಕಟ್ಟಡಗಳು ಧ್ವಂಸ

    ಬೈರೂತ್‌: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗುತ್ತಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ನಿವಾಸದ ಮೇಲೆ ಹಮಾಸ್‌ ಡ್ರೋನ್‌ ದಾಳಿ ನಡೆಸಿದ ಬಳಿಕ ಇಸ್ರೇಲ್‌ ತನ್ನ ದಾಳಿಯ ತೀವ್ರತೆಯನ್ನು ಹೆಚ್ಚು ಮಾಡಿದೆ. ಮಂಗಳವಾರವೂ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ (Israeli Airstrike) ಬೈರೂತ್‌ನ ಬೃಹತ್‌ ಕಟ್ಟಡಗಳು ಸೆಕೆಂಡುಗಳಲ್ಲಿ ನೆಲೆ ಕಚ್ಚಿವೆ.

    ಇಸ್ರೇಲಿ ಮಿಲಿಟರಿ ವಕ್ತಾರ ಅವಿಚಾಯ್‌ ಅಡ್ರೇ ಅವರು ಎಚ್ಚರಿಕೆ ನೀಡಿದ 40 ನಿಮಿಷಗಳ ಬಳಿಕ ದಾಳಿ ಸಂಭವಿಸಿದೆ. ದಾಳಿಗೆ ಒಳಗಾದ ಎರಡು ಬೃಹತ್‌ ಕಟ್ಟಡಗಳಲ್ಲಿ ಹಿಜ್ಬುಲ್ಲಾ ಸೌಲಭ್ಯಗಳನ್ನು ಅಡಗಿಸಿಡಲಾಗಿತ್ತು. ಅಲ್ಲದೇ ಲೆಬನಾನ್‌ನಿಂದ (Lebanon) ಸ್ಥಳಾಂತರಗೊಂಡಿದ್ದ ಕುಟುಂಬಗಳೂ ಆಶ್ರಯ ಪಡೆದಿದ್ದವು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ: ಯುದ್ಧ ಕುರಿತು ಪುಟಿನ್‌ ಜೊತೆ ಮೋದಿ ಮಾತು

    ಇಸ್ರೇಲ್‌ ವಾಯುದಾಳಿಯ 32 ಸೆಕೆಂಡುಗಳ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಉದ್ಯಾನ ಪಕ್ಕದಲ್ಲೇ ನಿರ್ಮಾಣಗೊಂಡಿದ್ದ ದೈತ್ಯ ಕಟ್ಟಡ ಮಿಸೈಲ್‌ ಬೀಳುತ್ತಿದ್ದಂತೆ ಕೇವಲ 3 ಸೆಕೆಂಡುಗಳಲ್ಲೇ ಧ್ವಂಸವಾಗಿದೆ. ಸಮೀಪದಲ್ಲೇ ಇದ್ದ ಸ್ಥಳೀಯರು ದಾಳಿ ಕಂಡು ಕಕ್ಕಾಬಿಕ್ಕಿಯಾಗಿರುವುದು ವೀಡಿಯೋದಲ್ಲಿ ತೋರಿಸಿದೆ. ಸದ್ಯ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

    ಹಿಜ್ಬುಲ್ಲಾ ಟಾಪ್‌ ಲೀಡರ್‌ ಸುದ್ದಿಗೋಷ್ಠಿ ದಿಢೀರ್‌ ರದ್ದು:
    ಇನ್ನೂ ಇಸ್ರೇಲ್‌ ದಾಳಿ ಸಮಯದಲ್ಲಿ ಉದ್ದೇಶಿತ ಪ್ರದೇಶದಿಂದ ನೂರು ಮೀಟರ್‌ಗಳಷ್ಟು ದೂರದಲ್ಲಿ ನಿಗದಿಯಾಗಿದ್ದ ಸುದ್ದಿಗೋಷ್ಠಿಯನ್ನು ಹಿಜ್ಬುಲ್ಲಾದ ಟಾಪ್‌ ಲೀಡರ್‌ ದಿಢೀರ್‌ ರದ್ದುಗೊಳಿಸಿದ್ದಾರೆ. ಇದನ್ನೂ ಓದಿ: ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ

    ಇನ್ನೂ ಜೆರುಸಲೆಮ್‌ನ ಮಾನವ ಹಕ್ಕುಗಳ ಗುಂಪಾದ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಅಲ್-ಕರ್ದ್ ಅಲ್-ಹಸನ್, ಇಸ್ರೇಲ್‌ ವಾಯುದಾಳಿಯನ್ನು ಖಂಡಿಸಿದೆ. ಹಿಜ್ಬುಲ್ಲಾದ ಸಂಯೋಜಿತ ಹಣಕಾಸು ಶಾಖೆಗಳನ್ನ ಇಸ್ರೇಲ್‌ ಗುರಿಯಾಗಿಸಿದೆ. ಇದು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗುತ್ತದೆ ಎಂದು ಹೇಳಿದೆ.

    ಒಂದು ದಿನದ ಹಿಂದೆಯಷ್ಟೇ ಇಸ್ರೇಲ್‌ ನಡೆಸಿದ ಲೆಬನಾನ್‌ನ ಬೈರೂತ್‌ನಲ್ಲಿ ದಾಳಿ ನಡೆಸಿತ್ತು. ಲೆಬನಾನ್‌ ರಾಜಧಾನಿ ಬೈರೂತ್‌ನ ಅಲ್‌ ಸಹೇಲ್‌ ಆಸ್ಪತ್ರೆಯ ಕೆಳಗೆ ಹಿಜ್ಬುಲ್ಲಾ ಉಗ್ರರು ಸಂಗ್ರಹಿಸಿಟ್ಟಿದ್ದ 4,200 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನದ ಸಂಗ್ರಹ ಪತ್ತೆ ಮಾಡಿತ್ತು ಇಸ್ರೇಲ್‌. ಇದನ್ನೂ ಓದಿ: ಶಾಂತಿ ಮಾತುಕತೆ ಯಶಸ್ವಿ – 5 ವರ್ಷದ ಬಳಿಕ ನಡೆಯಲಿದೆ ಮೋದಿ-ಜಿನ್‌ಪಿಂಗ್‌ ದ್ವಿಪಕ್ಷೀಯ ಸಭೆ