ಟೆಲ್ ಅವಿವ್: ಕಳೆದ ವರ್ಷ ಅಕ್ಟೋಬರ್ 7 ರಂದು ಇಸ್ರೇಲ್ (Isreal) ಮೇಲೆ ನಡೆಸಿದ ದಾಳಿಯ ಮಾಸ್ಟರ್ ಮೈಂಡ್ ಹಮಾಸ್ ಉಗ್ರ ಸಂಘಟನೆಯ ನಾಯಕ (Hamas Leader) ಯಾಹ್ಯಾ ಸಿನ್ವಾರ್(Yahya Sinwar) ಇಸ್ರೇಲ್ ನಡೆಸಿದ ದಾಳಿಗೆ ಬಲಿಯಾಗಿದ್ದಾನೆ.
ಗುರುವಾರ ಗಾಜಾದಲ್ಲಿ (Gaza) ಇಸ್ರೇಲಿ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ಟೋಬರ್ 7 ರ ಹತ್ಯಾಕಾಂಡ ಮತ್ತು ದುಷ್ಕೃತ್ಯಗಳಿಗೆ ಕಾರಣವಾದ ಸಾಮೂಹಿಕ ಕೊಲೆಗಾರ ಯಾಹ್ಯಾ ಸಿನ್ವಾರ್‌ನನ್ನು ಹತ್ಯೆ ಮಾಡಲಾಗಿದೆ. ಇದು ನಮ್ಮ ಮಿಲಿಟರಿಗೆ ಸಿಕ್ಕಿದ ಜಯ ಎಂದು ಇಸ್ರೇಲ್ ವಿದೇಶಾಂಗ ಸಚಿವ ಕಾಟ್ಜ್ ಬಣ್ಣಿಸಿದ್ದಾರೆ.
A year ago on the holiday of Sukkot, Yahya Sinwar orchestrated the horrific October 7th Massacre in which more than 1,200 Israeli men, women and children were butchered.
ಇಸ್ರೇಲಿ ಮಿಲಿಟರಿ ಮತ್ತು ಗುಪ್ತಚರ ಸಂಸ್ಥೆಗಳು ಮೃತಪಟ್ಟ ವ್ಯಕ್ತಿಯ ದೇಹವು ಸಿನ್ವಾರ್‌ನದೇ ಎಂದು ಡಿಎನ್‌ಎ ಪರಿಶೀಲನೆ ನಡೆಸಿದ ಬಳಿಕ ಆತ ಮೃತಪಟ್ಟಿರುವುದನ್ನು ಅಧಿಕೃತವಾಗಿ ತಿಳಿಸಿವೆ.
ಗಾಜಾದ ಕಟ್ಟಡದ ನೆಲ ಮಹಡಿಯಲ್ಲಿ ನೆಲೆಗೊಂಡಿದ್ದ ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ದಾಳಿ ನಡೆಸಿತ್ತು. ಕಾರ್ಯಾಚರಣೆ ನಡೆಸಿದ್ದ ಕಟ್ಟಡದಲ್ಲಿ ಈತ ನೆಲೆಸಿದ್ದ ವಿಚಾರ ಇಸ್ರೇಲ್‌ಗೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ.
????BREAKING NEWS : A photo has been making the rounds on social media showing what’s claimed to be the body of Hamas leader Yahya Sinwar.
Reports suggest a major attack happened tonight in the Rafah area. However, it’s still unclear if Sinwar was actually the target. pic.twitter.com/VnwSbVhxl5
ಯಾಹ್ಯಾ ಸಿನ್ವಾರ್ ಯಾರು?
ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿ ಬಳಿಕ ಯಾಹ್ಯಾ ಸಿನ್ವಾರ್ ಇಸ್ರೇಲ್‌ನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ. ಆಗಸ್ಟ್‌ನಲ್ಲಿ ಇರಾನ್‌ನಲ್ಲಿ ನಡೆದ ಸ್ಫೋಟದಲ್ಲಿ ಇಸ್ಮಾಯಿಲ್ ಹನಿಯೆಹ್ ಹತನಾದ ನಂತರ ಹಮಾಸ್ ಮುಖ್ಯಸ್ಥನಾಗಿದ್ದ. 1962 ರಲ್ಲಿ ಜನಿಸಿದ ಸಿನ್ವಾರ್ 1987 ರಲ್ಲಿ ಹಮಾಸ್ ಅನ್ನು ಸ್ಥಾಪಿಸಿದಾಗ ಅದರ ಆರಂಭಿಕ ಸದಸ್ಯರಲ್ಲಿ ಒಬ್ಬನಾಗಿದ್ದ.
ನವದೆಹಲಿ: ಇಸ್ರೇಲ್ (Israel) ಪೇಜರ್ ಸ್ಫೋಟ (Pager Blast) ಮಾಡಿದಂತೆ ಇವಿಎಂ (EVM) ಅನ್ನು ಏನು ಬೇಕಾದರೂ ಮಾಡಬಹುದು ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ (Rashid Alvi) ಅನುಮಾನ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ಗೆ ಚುನಾವಣಾ ದಿನಾಂಕವನ್ನು ಪ್ರಕಟ ಮಾಡುವ ಮೊದಲು ಮಾತನಾಡಿದ ಅವರು, ಇಸ್ರೇಲ್ ಪೇಜರ್ ಮತ್ತು ವಾಕಿಟಾಕಿ ಬಳಸಿ ಜನರನ್ನು ಕೊಲ್ಲಲು ಸಾಧ್ಯವಾದರೇ ಇವಿಎಂ ಅನ್ನು ಏನು ಬೇಕಾದರೂ ಮಾಡಬಹುದು. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಸ್ರೇಲ್ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ, ಪ್ರತಿಪಕ್ಷಗಳು ಪೇಪರ್ ಬ್ಯಾಲೆಟ್ ಮೂಲಕ ಮತ ಚಲಾಯಿಸುವಂತೆ ಒತ್ತಾಯಿಸಬೇಕು ಮತ್ತು ಮಹಾರಾಷ್ಟ್ರದಲ್ಲಿ (Maharashtra) ಬಿಜೆಪಿ ಸರ್ಕಾರ ಮತ್ತು ಚುನಾವಣಾ ಆಯೋಗ ಏನು ಬೇಕಾದರೂ ಮಾಡಬಹುದು ಎಂದು ಆರೋಪಿಸಿದರು.
#WATCH | Delhi | On Maharashtra and Jharkhand poll dates to be announced today, Congress leader Rashid Alvi says, “…EVM ka bada khel kahin bhi ho sakta hai aur uske liye BJP chunav se pehle yeh sab khel kar leti hai.” pic.twitter.com/NYQWMkiBbP
ತಳ್ಳಿ ಹಾಕಿದ ಆಯೋಗ:
ಎರಡು ರಾಜ್ಯಗಳ ಚುನಾವಣಾ ದಿನಾಂಕವನ್ನು ಪ್ರಕಟಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಕ್ಯಾಲ್ಕುಲೇಟರ್‌ನಲ್ಲಿ ಬಳಸುವಂತೆ ಇವಿಎಂನಲ್ಲಿ ಸಿಂಗಲ್ ಬಳಕೆ ಮಾಡುವ ಬ್ಯಾಟರಿಯನ್ನು ಬಳಸಲಾಗುತ್ತದೆ ಹೊರತು ಮೊಬೈಲ್ ಬ್ಯಾಟರಿಗಳನ್ನು ಬಳಸಲಾಗುವುದಿಲ್ಲ. ಪೇಜರ್‌ಗಳನ್ನು ಸಂಪರ್ಕಿಸಬಹುದು. ಆದರೆ ಇವಿಎಂ ಸಂರ್ಪಕಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಇವಿಎಂಗಳು ಬ್ಯಾಟರಿ ಸೇರಿದಂತೆ ಮೂರು ಹಂತದ ಭದ್ರತೆಯನ್ನು ಹೊಂದಿವೆ. ಇವಿಎಂಗಳ ಮೊದಲ ಹಂತದ ಪರಿಶೀಲನೆಯು ಮತದಾನ ನಡೆಯುವ 5-6 ತಿಂಗಳ ಮೊದಲು ಪ್ರಾರಂಭವಾಗುತ್ತದೆ. ಮತದಾನ ನಡೆಯುವ 5-6 ದಿನಗಳ ಮೊದಲು ಇವಿಎಂ ಕಾರ್ಯಾರಂಭಗೊಳ್ಳುತ್ತದೆ. ಆ ದಿನ ಹೊಸ ಬ್ಯಾಟರಿಯನ್ನು ಸೇರಿಸಲಾಗುತ್ತದೆ. ಯಂತ್ರವನ್ನು ಸೀಲ್ ಮಾಡಿದ ನಂತರ, ರಾಜಕೀಯ ಪಕ್ಷಗಳ ಏಜೆಂಟ್‌ಗಳು ಇವಿಎಂ ಮತ್ತು ಬ್ಯಾಟರಿಗೆ ಸಹಿ ಹಾಕುತ್ತಾರೆ. ಇವಿಎಂಗಳನ್ನು ನಂತರ ಸ್ಟ್ರಾಂಗ್ ರೂಮ್‌ಗಳಿಗೆ ಸಾಗಿಸಲಾಗುತ್ತದೆ ಮತ್ತು ಏಜೆಂಟ್‌ಗಳ ಮುಂದೆ ಡಬಲ್ ಲಾಕ್ ಮಾಡಲಾಗುತ್ತದೆ. ಇಡೀ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡಲಾಗುತ್ತದೆ ಎಂದು ವಿವರಿಸಿದರು.
ಬೈರೂತ್: ಒಂದು ವರ್ಷ ಕಳೆದರೂ ಇಸ್ರೇಲ್-ಹಮಾಸ್-ಹಿಜ್ಬುಲ್ಲಾ ನಡುವಿನ ದಾಳಿಯ ತೀವ್ರತೆ ಹೆಚ್ಚುತ್ತಲೇ ಇದೆ. ಅ.7ಕ್ಕಿಂತ ಭೀಕರವಾಗಿ ದಾಳಿ ನಡೆಸಲು ಹಮಾಸ್ ಪ್ಲಾನ್ ಮಾಡಿದೆ ಎಂಬ ವದಂತಿ ಹಬ್ಬಿದ ಬೆನ್ನಲ್ಲೇ ಇಸ್ರೇಲ್ ಮೇಲೆ ಭೀಕರ ದಾಳಿ ನಡೆದಿದೆ. ಲೆಬನಾನ್‌ನ ಗಡಿಯುದ್ಧಕ್ಕೂ ಬಾಂಬ್ ದಾಳಿಗಳನ್ನು ವಿಸ್ತರಿಸಿದೆ. ಉತ್ತರದ ನೆಲೆಗಳಲ್ಲಿ ಹಿಜ್ಬುಲ್ಲಾ ಡ್ರೋನ್‌ಗಳು (Hezbollah Drone Strike) ತನ್ನ ನಾಲ್ವರು ಸೈನಿಕರನ್ನು (Israeli Soldiers) ಹೊಡೆದುರುಳಿಸಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ.
ಹೈಫಾ ಬಳಿಯ ಬಿನ್ಯಾಮಿನಾದಲ್ಲಿನ ಮಿಲಿಟರಿ ತರಬೇತಿ ಶಿಬಿರದ ಮೇಲಿನ ದಾಳಿಯು ಸೆಪ್ಟೆಂಬರ್ 23 ನಂತರ ಇಸ್ರೇಲ್ ನೆಲೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಾಗಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್, ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಮೇಲೆ ದಾಳಿ ನಡೆಸಿದ್ದು, ತುರ್ತು ಸೇವೆಗಳಲ್ಲಿ ವ್ಯತ್ಯಯವಾಗಿದ, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಸ್ರೇಲ್ ಭೀಕರ ವಾಯುದಾಳಿಗೆ 22 ಮಂದಿ ಬಲಿ – 117 ಮಂದಿಗೆ ಗಾಯ, ಹಿಜ್ಬುಲ್ಲಾ ಟಾಪ್ ಲೀಡರ್ ಸೇಫ್
ಈ ನಡುವೆ ಸ್ಥಳಾಂತರಗೊಂಡ ಜನರಿಗೆ ಆಶ್ರಯ ತಾಣವಾಗಿ ಬಳಸಲಾಗುತ್ತಿದ್ದ ಶಾಲೆಯ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಒಂದೇ ಕುಟುಂಬದ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಜಾದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಹರಾ ಮರುಭೂಮಿಯಲ್ಲಿ ಭಾರೀ ಮಳೆ – 50 ವರ್ಷದ ನಂತರ ಕೆರೆಗಳು ಭರ್ತಿ
ಇತ್ತೀಚೆಗಷ್ಟೇ ಇಸ್ರೇಲ್ ಸೇನೆಯು ಸೆಂಟ್ರಲ್ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ (Israeli Strikes) 22 ಮಂದಿ ಹತ್ಯೆಯಾಗಿ, ಸುಮಾರು 117 ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಈ ದಾಳಿಯಲ್ಲಿ ಹಿಜ್ಬುಲ್ಲಾದ (Hezbollah) ಉನ್ನತ ಅಧಿಕಾರಿಯೊಬ್ಬರು ಬದುಕುಳಿದಿದ್ದರು. ಈ ಬೆನ್ನಲ್ಲೇ ಇಸ್ರೇಲ್ ವಿರುದ್ಧ ಅಕ್ಟೋಬರ್ 7ಕ್ಕಿಂತಲೂ ಭೀಕರ ದಾಳಿ ನಡೆಸುವುದಾಗಿ ಒಂದು ದಿನದ ಹಿಂದೆಯಷ್ಟೇ ಎಚ್ಚರಿಕೆ ನೀಡಿದರು. ಅದರಂತೆ ಲೆಬನಾನ್‌ನ ಉತ್ತರ ಗಡಿ ಭಾಗಗಳಲ್ಲಿ ಇಸ್ರೇಲ್ ಸೇನೆ ವಿರುದ್ಧ ದಾಳಿ ನಡೆಸಿದ್ದು ನಾಲ್ವರು ಸೈನಿಕರನ್ನು ಹತ್ಯೆಗೈದಿದೆ.
2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ
ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು (Israeli Fighter Jets) ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಟೆಲ್ ಅವೀವ್: ಇರಾನ್ ಬೆಂಬಲಿತ ಹಿಜ್ಬುಲ್ಲಾ ಭಯೋತ್ಪಾದಕ ಗುಂಪಿನೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu), ಲೆಬನಾನ್‌ಗೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ.
ದಕ್ಷಿಣ ಲೆಬನಾನ್ (Lebanon) ಮೇಲೆ ಇಸ್ರೇಲ್ ದಾಳಿ ನಡೆಸಿದ ಕೆಲ ಗಂಟೆಗಳ ನಂತರ ನೆತನ್ಯಾಹು ವೀಡಿಯೋವೊಂದರಲ್ಲಿ ಮಾತನಾಡಿದ್ದಾರೆ. ಒಂದು ಕಾಲದಲ್ಲಿ ಪ್ರಾಕೃತಿಕ ಸೌಂದರ್ಯ, ಸಹಿಷ್ಣುತೆಗೆ ಹೆಸರುವಾಸಿಯಾಗಿದ್ದ ಮಧ್ಯಪ್ರಾಚ್ಯ ಈಗ ಹಿಜ್ಬುಲ್ಲಾ (Hezbollah) ಮದ್ದು ಗುಂಡುಗಳನ್ನು ಸಂಗ್ರಹಿಸಿದ್ದು, ಇರಾನಿನ ಮಿಲಿಟರಿ ನೆಲೆಯಾಗಿ ಮಾರ್ಪಟ್ಟಿದೆ. ಹಾಗಾಗಿ ಕೂಡಲೇ ನಿಮ್ಮ ದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ‘ಜೆನ್ನಾರಿಸ್ ಬಯೋನಿಕ್ ವಿಷನ್ ಸಿಸ್ಟಮ್’ – ಅಂಧರ ಪಾಲಿಗೆ ಭರವಸೆಯ ಬೆಳಕು!
ಇದು ಲೆಬನಾನ್ ಜನತೆಗೆ ನಮ್ಮ ಸಂದೇಶ. ನಿಮ್ಮ ದೇಶವನ್ನು ಮಧ್ಯಪ್ರಾಚ್ಯದ ಮುತ್ತು ಎಂದು ಕರೆಯುತ್ತಿದ್ದದ್ದು ನೆನಪಿದೆಯಾ? ಈಗ ಲೆಬನಾನ್‌ಗೆ ಏನಾಯಿತು? ನಿರಂಕುಶಾಧಿಕಾರಿಗಳು ಮತ್ತು ಭಯೋತ್ಪಾದಕರ ಗುಂಪು ಅದನ್ನು ನಾಶಪಡಿಸಿದರು. ಒಂದು ಕಾಲದಲ್ಲಿ ಲೆಬನಾನ್ ಸಹನೆ, ಸೌಂದರ್ಯಕ್ಕೆ ಹೆಸರುವಾಸಿಯಾಗಿತ್ತು. ಇಂದು ಅದು ಅವ್ಯವಸ್ಥೆಯ ಸ್ಥಳವಾಗಿದೆ, ಯುದ್ಧದ ಕೇಂದ್ರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಕೆಣಕಿ ತಪ್ಪು ಮಾಡಿತೇ ಇರಾನ್? – ಉಭಯ ರಾಷ್ಟ್ರಗಳ ಸೇನಾ ಸಾಮರ್ಥ್ಯ ನೋಡಿದ್ರೆ ಮೈ ನಡುಗುತ್ತೆ!
ನಾವು ಗಾಜಾದಲ್ಲಿ ನೋಡುವಂತೆ ವಿನಾಶ ಮತ್ತು ದುಃಖಕ್ಕೆ ಕಾರಣವಾಗುವ ಸುದೀರ್ಘ ಯುದ್ಧದ ಪ್ರಪಾತಕ್ಕೆ ಬೀಳುವ ಮೊದಲು ಎಚ್ಚೆತ್ತುಕೊಳ್ಳಬೇಕು. ಈಗಲೂ ಲೆಬನಾನ್ ತಮ್ಮ ರಾಷ್ಟ್ರವನ್ನು ಉಳಿಸಿಕೊಳ್ಳಬಹುದು. ನೀವು ನಿಮ್ಮ ಹಿಂತಿರುಗಿದರೆ, ಯುದ್ಧವನ್ನು ನಿಲ್ಲಿಸಿದ್ರೆ, ಶಾಂತಿ ಸಮೃದ್ಧ ಹಾದಿಗೆ ಮರಳಬಹುದು. ನೀವು ಮಾಡದಿದ್ದರೆ, ಹಿಜ್ಬುಲ್ಲಾ ಮಂದುವರಿಯುತ್ತದೆ. ನಿಮ್ಮ ನೇತೃತ್ವ ಖರ್ಚು ವೆಚ್ಚದಲ್ಲಿ ಇಸ್ರೇಲ್ ವಿರುದ್ಧ ಹೋರಾಡಲು ಪ್ರಯತ್ನಿಸಿ, ಲೆಬನಾನ್ ಅನ್ನು ಯುದ್ಧಕ್ಕೆ ಎಳೆದು ತರುತ್ತಾರೆ. ಆದ್ದರಿಂದ ಈಗಲೇ ಎಚ್ಚೆತ್ತುಕೊಳ್ಳಿ ಎಂದು ಖಡಕ್ಕಾಗಿ ಹೇಳಿದ್ದಾರೆ.
ಇಸ್ರೇಲ್ ಯುದ್ಧವನ್ನು ಕೊನೆಗಾಣಿಸಲು ನಿರ್ಧರಿಸಿದೆ. ನಮ್ಮ ಜನರನ್ನು ಸುರಕ್ಷಿತವಾಗಿ ಅವರ ಮನೆಗಳಿಗೆ ಹಿಂದಿರುಗಿಸಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾವು ನಿರ್ಧರಿಸಿದ್ದೇವೆ. ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ. ಇಸ್ರೇಲ್‌ಗೆ ಗೆಲ್ಲುವ ಛಲವೂ ಇದೆ, ಗೆಲ್ಲುತ್ತದೆ ಎಂದಿರುವ ಅವರು, ಹಿಜ್ಬುಲ್ಲಾವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಪ್ರತಿಜ್ಞೆ ಮಾಡಿದ್ದಾರೆ.
ಇಸ್ರೇಲ್ ಮೇಲಿನ ದಾಳಿಗೆ ಒಂದು ವರ್ಷ ಪೂರೈಸಿದೆ. ಗಾಜಾಪಟ್ಟಿಯಲ್ಲಿದ್ದ ಹಮಾಸ್ ಬಂಡುಕೋರರ ಗುಂಪು 2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ನಡೆಸಿದ ಅಪ್ರಚೋದಿತ ದಾಳಿ ಇಂದು ಲಕ್ಷಾಂತರ ಜನರ ನೆಮ್ಮದಿ ಕಸಿದಿದೆ. ಸಾವಿರಾರು ಜನರ ಜೀವ ತೆಗೆದಿದೆ. ಕಳೆದ ಒಂದು ವರ್ಷದಲ್ಲಿ ಇಸ್ರೇಲ್, ಹಮಾಸ್ ಹಾಗೂ ಹಿಜ್ಬುಲ್ಲಾ ನಡುವಿನ ಭೀಕರ ಯುದ್ಧದಲ್ಲಿ ಸುಮಾರು 50 ಸಾವಿರ ಮಂದಿ ಜೀವ ಕಳೆದುಕೊಂಡಿದ್ದಾರೆ.
ಆ ದಿನ ಕೇವಲ 20 ನಿಮಿಷದ ಹಮಾಸ್ ಉಗ್ರರು ಇಸ್ರೇಲ್ ಮೇಲೆ ಪುಂಖಾನುಪುಂಖವಾಗಿ 5 ಸಾವಿರ ರಾಕೆಟ್‌ಗಳನ್ನು ಹಾರಿಸಿದ್ದರು. ಇಸ್ರೇಲ್‌ನ ಬಲಾಢ್ಯ ಕ್ಷಿಪಣಿ ವಿರೋಧಿ ವ್ಯವಸ್ಥೆ ಐರನ್ ಡೋಮ್ ಇಷ್ಟು ಅಗಾಧ ಪ್ರಮಾಣದ ರಾಕೆಟ್ ಮಳೆಗೆ ನಿಷ್ಪರಿಣಾಮಕಾರಿ ಎನ್ನಿಸಿಕೊಂಡಿತು. ಅಲ್ಲದೇ, ಹಮಾಸ್ 1,000ಕ್ಕೂ ಅಧಿಕ ಉಗ್ರರೊಂದಿಗೆ ದಕ್ಷಿಣ ಇಸ್ರೇಲ್‌ನ ಅನೇಕ ಪ್ರದೇಶಗಳಲ್ಲಿ ಭೂದಾಳಿ ನಡೆಸಿತು. ಬುಲ್ಡೋಜರ್‌ನಿಂದ ಇಸ್ರೇಲ್‌ನ ಗಡಿಯನ್ನು ಛಿದ್ರಗೊಳಿಸಿತು. ಇನ್ನೂ ಹಲವು ಉಗ್ರರು ಸಮುದ್ರ ಮಾರ್ಗದಲ್ಲಿ ಸ್ಪೀಡ್ ಬೋಟ್‌ಗಳ ಮೂಲಕ ಇಸ್ರೇಲನ್ನು ನುಸುಳಿದರು ಕೆಲವರು ಪ್ಯಾರಾಗ್ಲೈಡಿಂಗ್ ಮೂಲಕ ಇಸ್ರೇಲೊಳಗಿಳಿದು ರಂಪಾಟ ಎಬ್ಬಿಸಿದರು. ಈ ಏಕಕಾಲದ ಆಕ್ರಮಣ ನಿಲ್ಲಿಸಲು ಇಸ್ರೇಲ್‌ಗೆ ಆ ಕ್ಷಣಕ್ಕೆ ಸಾಧ್ಯವಾಗಲೇ ಇಲ್ಲ.
ಪರಿಣಾಮ, ಇಸ್ರೇಲ್ ತನ್ನ 1200 ಪ್ರಜೆಗಳನ್ನು ಕಳೆದುಕೊಂಡಿತು. ಹಮಾಸ್‌ನ ಜೀಪುಗಳಲ್ಲಿ ಕೈಕಾಲು ಕಟ್ಟಿ ಕರೆದೊಯ್ದ 250 ಇಸ್ರೇಲಿಗರನ್ನು ಬಿಡಿಸಿಕೊಳ್ಳಲು ಇಸ್ರೇಲ್ ಅಂದು ಶುರುಮಾಡಿದ ಯುದ್ಧ ಇಂದಿಗೂ ಮುಗಿದಿಲ್ಲ. ಸದ್ಯಕ್ಕೆ ಮುಗಿಯುವ ಲಕ್ಷಣವೂ ಕಾಣಿಸುತ್ತಿಲ್ಲ. ಹಮಾಸ್ ಒಬ್ಬರಲ್ಲ ಅದರ ಹಿಂದೆ ಪ್ಯಾಲೆಸ್ತೀನ್, ಹಿಜ್ಬುಲ್ಲಾ, ಲೆಬನಾನ್, ಇರಾಕ್ ಹಾಗೂ ಸಿರಿಯಾದ ಉಗ್ರ ಸಂಘಟನೆಗಳು, ಹೌತಿ ಬಂಡುಕೋರರು… ಇಸ್ರೇಲನ್ನು ಕಟ್ಟಿಹಾಕಲು ಶತ್ರುಗಳೆಲ್ಲ ಒಗ್ಗೂಡುತ್ತಲೇ ಇದ್ದಾರೆ. ಇರಾನ್‌ನ ಸುಪ್ರೀಂ ಲೀಡರ್ ಕೂಡ ಇಸ್ರೇಲ್ ಸೋಲಿಸಲು ಇತ್ತೀಚೆಗೆ ಕರೆ ಕೊಟ್ಟಿದ್ದಾರೆ. ಅದಕ್ಕೆ ಪ್ರತ್ಯುತ್ತರವಾಗಿ ಈಗ ಇಸ್ರೇಲ್ ದಿನದಿಂದ ದಿನಕ್ಕೆ ತನ್ನ ಆಕ್ರಮಣದ ತೀವ್ರತೆಯನ್ನು ಹೆಚ್ಚಿಸುತ್ತಲೇ ಇದೆ. ಭಾನುವಾರ (ಅ.6) ಕೂಡ ಕೇವಲ ಒಂದು ಗಂಟೆ ಅವಧಿಯಲ್ಲಿ 120 ಹಿಜ್ಬುಲ್ಲಾ ಉಗ್ರ ನೆಲೆಗಳನ್ನು ಧ್ವಂಸಮಾಡಿದೆ.
ಇರಾನ್ ಯುದ್ಧಕ್ಕೆ ಎಂಟ್ರಿಯಾಗಿದ್ದು ಹೇಗೆ?
ಹಿಜ್ಬುಲ್ಲಾ ಸೇನೆಯ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನೂ ಇಸ್ರೇಲ್ ಹತ್ಯೆಗೈದಾಗ ಪರೋಕ್ಷವಾಗಿ ಇವರನ್ನೆಲ್ಲ ಬೆಂಬಲಿಸುತ್ತಿದ್ದ ಇರಾನ್ ನೇರವಾಗಿ ಇಸ್ರೇಲ್ ವಿರುದ್ಧ ತೊಡೆ ತಟ್ಟಿತ್ತು. ಏಕಾಏಕಿ 180ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸಿ, ಇಸ್ರೇಲನ್ನು ಗಾಬರಿಗೊಳಿಸಲೂ ಇರಾನ್ ಯತ್ನಿಸಿದ್ದು ಸ್ವತಃ ಇಸ್ರೇಲನ್ನು ಮತ್ತಷ್ಟು ಕೆರಳಿಸಿದೆ. ಆದ್ರೆ ಇಸ್ರೇಲ್ ಕ್ಷಿಪಣಿ ಹಾರಿಸುವುದಕ್ಕೆ 2 ಗಂಟೆ ಮುಂಚಿತವಾಗಿಯೇ ಅಮೆರಿಕ ದಾಳಿಯ ಸುಳಿವು ಕೊಟ್ಟಿತ್ತು ಎಂಬುದು ಗಮನಾರ್ಹ. ಹಾಗಾಗಿ ಈ ಯುದ್ಧದ ಬೆಂಕಿಗೆ ತುಪ್ಪ ಸವರುವಂತೆ ಅತ್ತ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ʻಇರಾನ್‌ನ ಅಣ್ವಸ್ತ್ರ ಕೇಂದ್ರದ ದಾಳಿ ಮಾಡಿ,ʼ ಎಂಬ ಸಲಹೆಯನ್ನು ಇಸ್ರೇಲ್‌ಗೆ ಕೊಟ್ಟಿರುವುದು ಯುದ್ಧದ ತೀವ್ರತೆಯನ್ನು ತೆರೆದಿಟ್ಟಿದೆ.
ಸ್ನೇಹಿತರಾಗಿದ್ದವರೀಗ ಬದ್ಧ ವೈರಿಗಳು
ಹೌದು. 1948ರ ಮೇ 14. ಪ್ಯಾಲೆಸ್ತೀನ್‌ನಿಂದ ಇಸ್ರೇಲ್ ಬೇರ್ಪಟ್ಟು ಹೊಸ ಯಹೂದಿ ದೇಶ ಉದಯವಾಯಿತು. ಆ ಸಮಯದಲ್ಲಿ ಇಸ್ರೇಲ್ ಎಂಬ ಶಿಶುವಿನ ಜತೆಗೆ ನಿಂತ ಏಕೈಕ ಇಸ್ಲಾಮಿಕ್ ರಾಷ್ಟ್ರ ಇರಾನ್. 1948ರಲ್ಲಿ ಅರಬ್ ರಾಷ್ಟ್ರಗಳು ಇಸ್ರೇಲ್ ವಿರುದ್ಧ ಯುದ್ಧ ಆರಂಭಿಸಿದರೂ, ಆ ಯುದ್ಧದಲ್ಲಿ ಇರಾನ್ ಭಾಗವಹಿಸಲಿಲ್ಲ. ಇಸ್ರೇಲ್ ಗೆದ್ದ ಬಳಿಕ ಇರಾನ್ ಅದರೊಂದಿಗೆ ಸಂಬಂಧ ಬೆಸೆಯಿತು. ಇರಾನ್‌ನಲ್ಲಿ ಮೊಹಮ್ಮದ್ ರಜಾ ಶಾ ಪಹ್ಲವಿ ಆಳ್ವಿಕೆಯಲ್ಲಿ ಈ ಎರಡೂ ರಾಷ್ಟ್ರಗಳು ಮಿತ್ರರು. ಆ ವೇಳೆ, ಪಶ್ಚಿಮ ಏಷ್ಯಾದಲ್ಲಿ ಇರಾನ್ ಅತಿದೊಡ್ಡ ಯಹೂದಿ ಸಮುದಾಯಕ್ಕೆ ನೆಲೆ ಕಲ್ಪಿಸಿದ್ದ ರಾಷ್ಟ್ರ. ಉಭಯ ದೇಶಗಳ ನಡುವೆ ಆಮದು ಮತ್ತು ರಫ್ತು ವ್ಯವಹಾರ ಜೋರಾಗಿತ್ತು. ಇಸ್ರೇಲ್ ತನ್ನಲ್ಲಿನ ಶಸ್ತ್ರಾಸ್ತ್ರ ತಂತ್ರಜ್ಞಾನ ಮತ್ತು ಕೃಷಿ ಉತ್ಪನ್ನಗಳನ್ನು ಇರಾನ್‌ಗೆ ಕಳುಹಿಸುತ್ತಿದ್ದರೆ, ಅದಕ್ಕೆ ಪ್ರತಿಯಾಗಿ ಇರಾನ್ ಶೇ.40ರಷ್ಟು ತೈಲವನ್ನು ಇಸ್ರೇಲ್‌ಗೆ ನೀಡುತ್ತಿತ್ತು. ಇಷ್ಟೇ ಅಲ್ಲ, ಇರಾನ್‌ನ ಗುಪ್ತಚರ ಸಂಸ್ಥೆ SAVAK, ತರಬೇತಿ ಪಡೆದಿದ್ದೇ ಇಸ್ರೇಲಿ ಗುಪ್ತಚರ ಸಂಸ್ಥೆ ಮೊಸಾದ್‌ನ ಕೈಯಲ್ಲಿ ಅನ್ನೋದು ವಿಶೇಷ.
ಆದ್ರೆ 1960ರ ದಶಕದಲ್ಲಿ, ಇರಾನ್‌ನಲ್ಲಿ ಇಸ್ಲಾಮಿಕ್ ರಾಷ್ಟ್ರದ ಬೇಡಿಕೆ ತೀವ್ರವಾಯಿತು. ಧಾರ್ಮಿಕ ನಾಯಕ ಅಯಾತೊಲ್ಲಾ ರುಹೊಲ್ಲಾ ಖಮೇನಿ ಇರಾನ್ ಅನ್ನು ಮುಸ್ಲಿಂ ರಾಷ್ಟ್ರವನ್ನಾಗಿಸಲು ಹೋರಾಟ ತೀವ್ರಗೊಳಿಸಿದ. 1964ರಲ್ಲಿ ಈ ಧ್ವನಿಗೆ ಅಪಾರ ಜನಬೆಂಬಲ ವ್ಯಕ್ತವಾದಾಗ ರಜಾ ಶಾ ಪಹ್ಲವಿಗೆ ಇರಾನನ್ನು ತೊರೆಯುವಂತೆ ಖಮೇನಿ ಆದೇಶಿಸಿದ. ಕಡೆಗೂ 1969ರಲ್ಲಿ ಪಹ್ಲವಿಯನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಇದರೊಂದಿಗೆ ಇರಾನ್‌ನಲ್ಲಿ ಇಸ್ಲಾಮಿಕ್ ರಾಜ್ಯ ಸ್ಥಾಪನೆಯಾಯಿತು. ಷರಿಯಾ ಕಾನೂನೂ ಜಾರಿಗೆ ಬಂತು. ಇದರೊಂದಿಗೆ ಇರಾನ್‌ನ ಖಮೇನಿ ಸರ್ಕಾರವು ಯಹೂದಿ ರಾಜ್ಯವಾದ ಇಸ್ರೇಲ್‌ನೊಂದಿಗೆ ಎಲ್ಲನಂಟನ್ನೂ ಕಡಿದುಕೊಂಡಿತು. ಉಭಯ ದೇಶಗಳ ನಡುವಿನ ವಿಮಾನ ಮಾರ್ಗವನ್ನೇ ಸಂಪೂರ್ಣವಾಗಿ ಮುಚ್ಚಲಾಯಿತು.
ಇಸ್ರೇಲ್-ಇರಾನ್ ಸೇನಾಬಲ ಮೈ ನಡುಗಿಸುತ್ತೆ
ಇಸ್ರೇಲ್ ಶಕ್ತಿಶಾಲಿ ರಾಷ್ಟ್ರವೇ ಆದರೂ ಇರಾನ್ ಸಹ ಸರಿಸಮನಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಹಾಗಾಗಿ ಮಿಲಿಟರಿ ಶಕ್ತಿಯಲ್ಲಿ ಒಬ್ಬರಿಗಿಂತ ಮತ್ತೊಬ್ಬರು ಕಡಿಮೆಯೇನಿಲ್ಲ ಅಂತಲೇ ಹೇಳಬಹುದು. ಇತ್ತೀಚಿನ ಗ್ಲೋಬಲ್ ಫೈರ್ ವರದಿ ಪ್ರಕಾರ, ವಾಯು ಸೇನೆ ಮತ್ತು ರಕ್ಷಣಾ ವ್ಯವಸ್ಥೆಯಲ್ಲಿ ಇರಾನ್ 14ನೇ ಸ್ಥಾನದಲ್ಲಿದ್ದರೆ, ಇಸ್ರೇಲ್ 17ನೇ ಸ್ಥಾನದಲ್ಲಿದೆ ಎಂದು ಉಲ್ಲೇಖಿಸಲಾಗಿದೆ.
ರಕ್ಷಣಾ ಬಲ ಹೇಗಿದೆ ನೋಡಿ?
ಇರಾನ್ 1996 ಟ್ಯಾಂಕ್‌ಗಳನ್ನು ಹೊಂದಿದೆ, ಅವುಗಳಲ್ಲಿ 1397 ಪ್ರಸ್ತುತ ಯುದ್ಧಕ್ಕೆ ಸಿದ್ಧವಾಗಿವೆ. ಇಸ್ರೇಲ್ 1,370 ಟ್ಯಾಂಕ್‌ಗಳನ್ನು ಹೊಂದಿದೆ, ಅವುಗಳಲ್ಲಿ 1,096 ಯುದ್ಧಕ್ಕೆ ಸಿದ್ಧವಾಗಿವೆ. ಇರಾನ್ 65,765 ಮಿಲಿಟರಿ ವಾಹನಗಳನ್ನು ಹೊಂದಿದ್ದು, ಅದರಲ್ಲಿ 46 ಸಾವಿರಕ್ಕೂ ಹೆಚ್ಚು ಸಕ್ರಿಯವಾಗಿವೆ. ಇನ್ನೂ ಇಸ್ರೇಲ್ 43,407 ಮಿಲಿಟರಿ ವಾಹನಗಳನ್ನು ಹೊಂದಿದೆ, ಅದರಲ್ಲಿ 34,736 ಸಕ್ರಿಯವಾಗಿವೆ. ಸ್ವಯಂ ಚಾಲಿತ ಪಿರಂಗಿಗಳ ಬಗ್ಗೆ ನೋಡಿದ್ರೆ, ಇರಾನ್ 580 ಫಿರಂಗಿ ಹೊಂದಿದ್ದು, ಅದರಲ್ಲಿ 406 ಸಕ್ರಿಯ ಸೇವೆಯಲ್ಲಿವೆ. ಇಸ್ರೇಲ್ 650 ಸ್ವಯಂ ಚಾಲಿತ ಫಿರಂಗಿಗಳನ್ನು ಹೊಂದಿದ್ದು, ಅದರಲ್ಲಿ 540 ಯುದ್ಧಕ್ಕೆ ಸಿದ್ಧವಾಗಿದೆ. ಸ್ವಯಂಚಾಲಿತವಲ್ಲದ ಫಿರಂಗಿಗಳಲ್ಲಿ ಇರಾನ್ 2050, ಇಸ್ರೇಲ್ ಕೇವಲ 300 ಹೊಂದಿದೆ. ಇಲ್ಲದೇ ಮಲ್ಟಿ ರಾಕೆಟ್ ಲಾಂಚರ್‌ಗಳ ಪೈಕಿ ಇರಾನ್ ಬಳಿ 775 ಮಲ್ಟಿ ಲಾಂಚರ್ ಇದ್ದರೆ, ಇಸ್ರೇಲ್ ಬಳಿ ಕೇವಲ 150 ರಾಕೆಟ್ ಲಾಂಚರ್‌ಗಳಿವೆ.
ಸೈನಿಕರ ಬಲದಲ್ಲಿ ಇರಾನ್ 11.80 ಲಕ್ಷ ಸೈನಿಕರನ್ನು ಹೊಂದಿದೆ. ಈ ಪೈಕಿ 3.50 ಲಕ್ಷ ಮೀಸಲು ಸೇನಾ ಪಡೆ, 2.20 ಲಕ್ಷ ಸೈನಿಕರ ಪ್ಯಾರಾ ಮಿಲಿಟರಿ ಪಡೆಯನ್ನು ಹೊಂದಿದೆ. ಇಸ್ರೇಲ್ 6.70 ಲಕ್ಷ ಸೈನಿಕರ ಬಲ ಹೊಂದಿದೆ. ಈ ಪೈಕಿ ಇಸ್ರೇಲ್ 4.65 ಲಕ್ಷ ಮೀಸಲು ಪಡೆ, 35 ಸಾವಿರ ಪ್ಯಾರಾ ಮಿಲಿಟರಿ ಪಡೆ ಸೈನಿಕರನ್ನು ಹೊಂದಿದೆ. ಇದಲ್ಲದೇ ಇರಾನ್ ಬಳಿ 42 ಸಾವಿರ ಜೆಟ್‌ಮೆನ್‌ಗಳಿದ್ದರೆ, ಇಸ್ರೇಲ್ 89 ಸಾವಿರ ಜೆಟ್‌ಮೆನ್ ಬಲ ಹೊಂದಿದೆ. ಜೊತೆಗೆ ಇರಾನ್ ಒಟ್ಟು 18,500 ನೌಕಾ ಸಿಬ್ಬಂದಿ ಹೊಂದಿದ್ದರೆ, ಇಸ್ರೇಲ್ 19,500 ನೌಕಾದಳ ಸಿಬ್ಬಂದಿಯನ್ನು ಹೊಂದಿದೆ.
ವಾಯುಪಡೆಯಲ್ಲಿ ಆನೆ ಬಲ
ವಾಯು ರಕ್ಷಣಾ ವ್ಯವಸ್ಥೆಯಲ್ಲಿ ಇಸ್ರೇಲ್ ಇರಾನ್‌ಗಿಂತಲೂ ಹೆಚ್ಚು ಶಕ್ತಿಶಾಲಿಯಾಗಿದೆ. ಇರಾನ್ ಬಳಿ 551 ವಿಮಾನಗಳನ್ನು ಹೊಂದಿದ್ದು, ಅದರಲ್ಲಿ 358 ಸಕ್ರಿಯವಾಗಿವೆ. ಆದ್ರೆ ಇಸ್ರೇಲ್ 612 ಮೀಸಲು ಹೊಂದಿದ್ದು, 490 ವಿಮಾನ ಸಕ್ರಿಯವಾಗಿದೆ. ಇರಾನ್ 186 ಯುದ್ಧ ವಿಮಾನ ಹೊಂದಿದ್ದು, ಈ ಪೈಕಿ 121 ಮಂದಿ ಸದಾ ದಾಳಿಗೆ ಸಿದ್ಧರಾಗಿದ್ದಾರೆ. ಇಸ್ರೇಲ್ 241 ಯುದ್ಧವಿಮಾನಗಳನ್ನು ಹೊಂದಿದ್ದು, ಅದರಲ್ಲಿ 193 ದಾಳಿಗೆ ಸಿದ್ಧವಾಗಿವೆ.
ಇಸ್ರೇಲ್‌ನ ಸೈಬರ್ ಅಸ್ತ್ರಗಳೇ ಇರಾನ್‌ಗೆ ಸವಾಲು
* 2010ರ ಸುಮಾರಿಗೆ ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿ ಪಡಿಸುತ್ತಿರುವುದನ್ನು ಗಮನಿಸಿದ ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್, ಶತ್ರುರಾಷ್ಟ್ರದ ಒಂದೊಂದು ಹೆಜ್ಜೆಯನ್ನು ವಿಫಲಗೊಳಿಸತೊಡಗಿತು. ಮುಖ್ಯವಾಗಿ ಇಸ್ರೇಲ್ ನೀಡಿದ ಸೈಬರ್ ದಾಳಿಯ ಏಟುಗಳಿಗೆ ಇರಾನ್ ಹೈರಾಣಾಯಿತು.
* 2010, ಜೂನ್: ಬುಶೆಹರ್ ಪರಮಾಣು ಸ್ಥಾವರ ಕಂಪ್ಯೂಟರ್‌ಗಳು ಸ್ಟಕ್ಸ್ನೆಟ್ ವೈರಸ್‌ನ ದಾಳಿಗೆ ಗುರಿಯಾದವು. ಇದು 14 ಸ್ಥಾವರಗಳ 30 ಸಾವಿರಕ್ಕೂ ಹೆಚ್ಚು ಕಂಪ್ಯೂಟರ್‌ಗಳ ಮೇಲೆ ಪರಿಣಾಮ ಬೀರಿತು. ಇದರ ಹಿಂದೆ ಮೊಸಾದ್ ಕೈವಾಡ ಇದೆಯೆನ್ನುವುದು ಇರಾನ್ ಆರೋಪ.
* 2011, ಏಪ್ರಿಲ್: ಇರಾನ್‌ನ ಭದ್ರತಾ ಸಂಸ್ಥೆಯ ಮುಖ್ಯಸ್ಥ ಘೋಲಮ್ರೆಜಾ ಜಲಾಲಿ ಪ್ರಕಾರ, ಇಸ್ರೇಲ್ ಸೃಷ್ಟಿಸಿದ ‘ಸ್ಟಾರ್ಸ್’ ಹೆಸರಿನ ವೈರಸ್ ಇರಾನ್‌ನ ಸರ್ಕಾರಿ ದಾಖಲೆಗಳನ್ನೇ ನಕಲು ಮಾಡಿತು.
* 2012, ಏಪ್ರಿಲ್: ವೈಪರ್ ಮಾಲ್ವೇರ್ ಇರಾನ್‌ನ ಪೆಟ್ರೋಲಿಯಂ ಸಚಿವಾಲಯ ಮತ್ತು ನ್ಯಾಷನಲ್ ಇರಾನಿಯನ್ ಆಯಿಲ್ ಕಂಪನಿಯ ಕಂಪ್ಯೂಟರ್‌ಗಳಲ್ಲಿದ್ದ ಡೇಟಾವನ್ನೆಲ್ಲ ಅಳಿಸಿಹಾಕಿತ್ತು. ಹೀಗೆ ಇನ್ನೂ ಅನೇಕ ಉದಾಹರಣೆಗಳಿವೆ.
ಕದನ ವಿರಾಮಕ್ಕೂ ಕ್ಯಾರೆ ಎನ್ನದೇ ಯುದ್ಧದಲ್ಲಿ ಮುನ್ನುಗ್ಗುತ್ತಿರುವ ಇಸ್ರೇಲ್ ಒಂದು ಕಡೆಯಾದ್ರೆ, ಇಸ್ರೇಲ್ ಅನ್ನೂ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ಅದರ ಶತ್ರು ರಾಷ್ಟ್ರಗಳು ಮತ್ತೊಂದು ಕಡೆ ಇದೆ. ಇದರ ತಾರ್ಕಿತ ಅಂತ್ಯ ಎಲ್ಲಿಗೆ ಒಯ್ಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಬೈರೂತ್: ಒಂದು ವರ್ಷ ಕಳೆದರೂ ಇಸ್ರೇಲ್-ಹಮಾಸ್-ಹಿಜ್ಬುಲ್ಲಾ (Israel Hezbollah War) ನಡುವೆ ಸೇಡು, ಪ್ರತೀಕಾರದ ದಾಳಿಗಳು ತೀವ್ರಗೊಳ್ಳುತ್ತಿವೆ. ಬೈರೂತ್ ನಗರದ ಮೇಲೆ ಇಸ್ರೇಲ್‌ನ ಪಡೆಗಳು ವೈಮಾನಿಕ ದಾಳಿ ಮುಂದುವರಿಸಿವೆ. ಇರಾನ್ ಸುಪ್ರೀಂ ಲೀಡರ್ ಇಸ್ರೇಲ್ ವಿರುದ್ಧ ಗುಡುಗಿದ ಬಳಿಕ ಇಸ್ರೇಲ್ ತನ್ನ ವಾಯುದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ.
ಸೋಮವಾರ (ಅ.7) ಇಸ್ರೇಲ್ ಒಂದು ಗಂಟೆ ಅವಧಿಯಲ್ಲಿ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ನೆಲೆಗಳನ್ನ ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು. ದಕ್ಷಿಣ ಲೆಬನಾನ್‌ನಲ್ಲಿ ಒಂದು ಗಂಟೆಯೊಳಗೆ 120ಕ್ಕೂ ಹೆಚ್ಚು ಭಯೋತ್ಪಾದಕರ ಅಡಗುದಾಣಗಳನ್ನು ಧ್ವಂಸ ಮಾಡಲಾಗಿತ್ತು.
ಇದಕ್ಕೂ ಮುನ್ನಾದಿನ ಗಾಜಾದಲ್ಲಿನ (Gaza) ಮಸೀದಿಯ (Mosque) ಮೇಲೆ ಇಸ್ರೇಲ್ (Israel) ವಾಯುಪಡೆ ನಡೆಸಿದ್ದ ವೈಮಾನಿಕ ದಾಳಿಯಿಂದ 26 ಮಂದಿ ಸಾವಿಗೀಡಾಗಿದ್ದರು. ಈ ಬೆನ್ನಲ್ಲೇ ಹಮಾಸ್ ಕೂಡ ಕೌಂಟರ್ ಅಟ್ಯಾಕ್ ಮಾಡಿತ್ತು. ಇಸ್ರೇಲ್ ವೈಮಾನಿಕ ದಾಳಿ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳನ್ನು (Rocket Fired) ಹಾರಿಸಿತ್ತು. ಇದನ್ನೂ ಓದಿ: ವಾಯುದಾಳಿಗೆ ಕೌಂಟರ್ ಅಟ್ಯಾಕ್ – ದಕ್ಷಿಣ ಇಸ್ರೇಲ್ ಕಡೆಗೆ ಹೊರಟ ಸ್ಫೋಟಕ ತುಂಬಿದ ರಾಕೆಟ್
ಬೈರೂತ್: ಗಾಜಾಪಟ್ಟಿಯಲ್ಲಿ (Gaza Strip) ನಿರಾಶ್ರಿತರ ಶಿಬಿರವಾಗಿ ಪರಿವರ್ತನೆಯಾಗಿದ್ದ ಮಸೀದಿಯೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, 26 ಮಂದಿ ಬಲಿಯಾಗಿದ್ದಾರೆ. ಈ ಬೆನ್ನಲ್ಲೇ ಹಮಾಸ್ ಕೂಡ ಕೌಂಟರ್ ಅಟ್ಯಾಕ್ ಮಾಡಿದೆ. ಇಸ್ರೇಲ್ ವೈಮಾನಿಕ ದಾಳಿ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳನ್ನು (Rocket Fired) ಹಾರಿಸಿದೆ.
ಅಕ್ಟೋಬರ್ 7ರ ದಾಳಿಗೆ ಒಂದು ವರ್ಷ ತುಂಬುವುದಕ್ಕೆ ಒಂದು ದಿನ ಮೊದಲು ಈ ಘಟನೆ ನಡೆದಿದೆ. ಹಲವಾರು ಸ್ಪೋಟಕಗಳನ್ನು ಹೊತ್ತ ರಾಕೆಟ್‌ವೊಂದು ಉತ್ತರ ಗಾಜಾಪಟ್ಟಿಯಿಂದ ಇಸ್ರೇಲ್‌ಗೆ Israel) ನುಗ್ಗುತ್ತಿರುವುದನ್ನು ಗುರುತಿಸಲಾಗಿದೆ. ಇದನ್ನೂ ಓದಿ: ಜಾತಿ ಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ ಆಮೇಲೆ ನೋಡೋಣ – ಪರಮೇಶ್ವರ್
ಭಾನುವಾರ ಮಧ್ಯಾಹ್ನವಷ್ಟೇ ಗಾಜಾ ಪಟ್ಟಿಯ ದೀರ್ ಅಲ್ – ಬಾಲಾಹ್ ನಗರದ ಕೇಂದ್ರ ಭಾಗದಲ್ಲಿ ಇದ್ದ ಮಸೀದಿ ಮೇಲೆ ಇಸ್ರೇಲ್ ದಾಳಿ ನಡೆಸಿ 26 ಜನರ ಹತ್ಯೆಗೈದಿತ್ತು. ಈ ಮಸೀದಿಯ ಒಳಗೆ ಹಮಾಸ್ ಉಗ್ರರ ಕಮಾಂಡ್ ಹಾಗೂ ನಿಯಂತ್ರಣ ಕೇಂದ್ರ ಇತ್ತು ಎಂದು ಇಸ್ರೇಲ್ ಸೇನೆ ಹೇಳಿಕೊಂಡಿತ್ತು. ಇದೇ ಕಾರಣಕ್ಕಾಗಿ ದಾಳಿ ನಡೆಸಿದ್ದಾಗಿ ಸಮರ್ಥನೆ ಮಾಡಿಕೊಂಡಿತ್ತು. ಈ ಬೆನ್ನಲ್ಲೇ ಗಾಜಾದಿಂದ ರಾಕೆಟ್‌ಗಳು ಇಸ್ರೇಲ್ ಕಡೆಗೆ ಹೊರಟಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ, ನಿಮ್ಮ ಮನೆ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ: ಹೆಚ್‌ಡಿಕೆ ಭಾವುಕ
ಮಸೀದಿಯಲ್ಲಿ ಗಾಯಾಳುಗಳ ಆಕ್ರಂದನ!
ಇಸ್ರೇಲ್ ನಡೆಸಿದ ದಾಳಿಯಲ್ಲಿ 26 ಮಂದಿ ಬಲಿಯಾಗುವ ಜೊತೆಯಲ್ಲೇ ನೂರಾರು ಮಂದಿ ಗಾಯಗೊಂಡಿದ್ದಾರೆ. ಮಸೀದಿಯಲ್ಲಿ ಇದ್ದ ಗಾಯಾಳುಗಳನ್ನು ಸಮೀಪದ ಅಲ್ – ಅಕ್ಸಾ ಹುತಾತ್ಮರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಂಬ್ ದಾಳಿಯಿಂದ ಧ್ವಂಸಗೊಂಡ ಮಸೀದಿಯ ಒಳಗಿನಿಂದ ಗಾಯಾಳುಗಳನ್ನ ಹೊರ ತೆಗೆಯೋದೇ ಹರ ಸಾಹಸ ಆಗಿತ್ತು ಎಂದು ಆಸ್ಪತ್ರೆಯ ವಕ್ತಾರ ಮೊಹಮ್ಮದ್ ಬಸ್ಸಾಲ್ ಹೇಳಿದ್ದಾರೆ. ಬಹುತೇಕ ಗಾಯಾಳುಗಳಿಗೆ ಆಸ್ಪತ್ರೆಯ ಒಳಗೆ ಬೆಡ್ ಸಿಗದ ಕಾರಣ ಆಸ್ಪತ್ರೆಯ ಮುಂಭಾಗದ ಗೇಟ್ ಬಳಿಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಇಸ್ರೇಲ್ ಮೇಲೆ ಹಮಾಸ್ ದಾಳಿಗೆ 1 ವರ್ಷ:
2023ರ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನೂರಾರು ಹಮಾಸ್ ಉಗ್ರರು ದಾಳಿ ನಡೆಸಿದ್ದರು. ಈ ಕರಾಳ ಘಟನೆ 1 ವರ್ಷ ಒಂದು ವರ್ಷ ಪೂರೈಸಿದಂತಾಗಿದೆ. ಒಂದು ವರ್ಷಗಳ ಅವಧಿಯಲ್ಲಿ ಗಾಜಾ ಪಟ್ಟಿಯಲ್ಲಿ ಸುಮಾರು 50 ಸಾವಿರ ಮಂದಿ ಸಾವನ್ನಪ್ಪಿದಂತಾಗಿದೆ. ಅಕ್ಟೋಬರ್ 7ರ ದಾಳಿಯ ಕಹಿ ನೆನಪಿನ ಹಿನ್ನೆಲೆಯಲ್ಲಿ ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್ ಕೂಡಾ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಹಿಂಸಾಚಾರದ ಕಹಿ ನೆನಪನ್ನು ಈ ವಿಡಿಯೋದಲ್ಲಿ ಬಿಂಬಿಸಲಾಗಿದೆ.
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಇಸ್ರೇಲ್ ಕೂಡಾ ಪ್ರತಿ ದಾಳಿ ನಡೆಸಿ ಗಾಜಾ ಪಟ್ಟಿಯಲ್ಲಿ ಹಮಾಸ್ ಉಗ್ರರ ನೆಲೆಗಳನ್ನು ಧ್ವಂಸ ಮಾಡುತ್ತಾ ಬಂದಿದೆ. ಈ ಸಮರದಲ್ಲಿ ಸಾವಿರಾರು ಪ್ಯಾಲಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ಹಿಂಸಾಚಾರ ನಿಲ್ಲಬೇಕು ಎಂದು ಆಗ್ರಹಿಸಿರುವ ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್ ಶಾಂತಿಯ ಸಂದೇಶ ಸಾರಿದ್ದಾರೆ. ಇದನ್ನೂ ಓದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮಿಸ್ಸಿಂಗ್; ನಾಪತ್ತೆ ಹಿಂದಿದ್ಯಾ ಮಹಿಳೆ ಕೈವಾಡ? ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ?
ಬೈರೂತ್: ಗಾಜಾದಲ್ಲಿನ (Gaza) ಮಸೀದಿಯ (Mosque) ಮೇಲೆ ಇಸ್ರೇಲ್ (Israel) ವಾಯುಪಡೆ ನಡೆಸಿದ ವೈಮಾನಿಕ ದಾಳಿಯಿಂದ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯವು ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್, ನಾವು ಹಮಾಸ್ ಉಗ್ರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಮಸೀದಿಯಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ (Hamas) ಭಯೋತ್ಪಾದಕರ ಮೇಲೆ ನಿಖರವಾದ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಶನಿವಾರ ಬೈರೂತ್ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಗೆ ಹಿಜ್ಬುಲ್ಲಾ ಬಂಡುಕೋರ ಸಂಘಟನೆಯ ನಾಯಕ ಹಾಗೂ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿತ್ತು.
ಈ ಹಿಂದೆ ಹಿಜ್ಬುಲ್ಲಾ ಕಮಾಂಡರ್ ನಬಿಲ್ ಕೌಕ್, ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿ, ನಸ್ರಲ್ಲಾ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಹಶೆಮ್ ಸಫೀದ್ದೀನ್ ಇಸ್ರೇಲ್ ವಾಯುದಾಳಿಯಲ್ಲಿ ಹತರಾಗಿದ್ದರು. ಇದರ ಬೆನ್ನಲ್ಲೇ ಹಿಜ್ಬುಲ್ಲಾದ ಮತ್ತೋರ್ವ ಕಮಾಂಡರ್ ಹಾಗೂ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿ ಕೂಡ ಕಣ್ಮರೆಯಾಗಿದ್ದು, ಆತ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿತ್ತು. ಇದನ್ನೂ ಓದಿ: ಉತ್ತರ ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ – ಹಮಾಸ್ ಟಾಪ್ ಕಮಾಂಡರ್ ಹತ್ಯೆ
ಬೈರೂತ್: ನಗರದಲ್ಲಿ ಇಸ್ರೇಲ್ ನಡೆಸುತ್ತಿರುವ ವಾಯುದಾಳಿ ದಿನೇ ದಿನೇ ತೀವ್ರವಾಗುತ್ತಿದ್ದು, ಅತ್ತ ಹಿಜ್ಬುಲ್ಲಾ ಬಂಡುಕೋರ ಸಂಘಟನೆಯ ನಾಯಕರೆಲ್ಲ ಕಣ್ಮರೆಯಾಗುತ್ತಿದ್ದಾರೆ. ಶನಿವಾರ ಉತ್ತರ ಲೆಬನಾನ್ ಮೇಲೆ ಇಸ್ರೇಲ್ ದಾಳಿ ಬೆನ್ನಲ್ಲೇ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈ ಹಿಂದೆ ಹಿಜ್ಬುಲ್ಲಾ ಕಮಾಂಡರ್ ನಬಿಲ್ ಕೌಕ್, ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿ, ನಸ್ರಲ್ಲಾ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಹಶೆಮ್ ಸಫೀದ್ದೀನ್ ಇಸ್ರೇಲ್ ವಾಯುದಾಳಿಯಲ್ಲಿ ಹತರಾಗಿದ್ದರು. ಇದೀಗ ಹಿಜ್ಬುಲ್ಲಾ ಮತ್ತೋರ್ವ ಕಮಾಂಡರ್ ಹಾಗೂ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿ ಕೂಡ ಕಣ್ಮರೆಯಾಗಿದ್ದು, ಆತ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿದೆ. ಶುಕ್ರವಾರದಿಂದಲೇ ಅಂದರೆ ಇಸ್ರೇಲಿ ವೈಮಾನಿಕ ದಾಳಿಯ ಆತನ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಲೆಬನಾನಿನ ಭದ್ರತಾ ಮೂಲಗಳು ತಿಳಿಸಿವೆ ಎನ್ನಲಾಗಿದೆ.
ಹಮಾಸ್ ಟಾಪ್ ಕಮಾಂಡರ್ ಉಡೀಸ್:
ದಕ್ಷಿಣ ಲೆಬನಾನ್ ಬಳಿಕ ಹಿಜ್ಬುಲ್ಲಾ (Hezbollah) ಭಯೋತ್ಪಾದಕರ ಗುಂಪನ್ನು ಗುರಿಯಾಗಿಸಿ ಉತ್ತರ ಲೆಬನಾನ್ (North Lebanon) ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಟ್ರಿಪೋಲಿ ಶನಿವಾರ ಟ್ರಿಪೋಲಿ ನಗರದ ಮೇಲೆ ದಾಳಿ ನಡೆಸಿ, ಹಮಾಸ್‌ನ ಚೀಫ್ ಕಮಾಂಡರ್ ಹಾಗೂ ಆತನ ಕುಟುಂಬವನ್ನು ಹತ್ಯೆಗೈದಿದೆ. ಈ ಬೆನ್ನಲ್ಲೇ ಇಸ್ರೇಲ್ ಸೇನೆಯು ಇನ್ನಷ್ಟು ಪ್ರದೇಶಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿದ್ದು, ತಕ್ಷಣವೇ ಆ ಪ್ರದೇಶದ ನಿವಾಸಿಗಳು ಸ್ಥಳದಿಂದ ಎತ್ತಂಗಡಿ ಮಾಡುವಂತೆ ಎಚ್ಚರಿಸಿದೆ.
250 ಹಿಜ್ಬುಲ್ಲಾ ಭಯೋತ್ಪಾದಕರ ಹತ್ಯೆ:
ಶುಕ್ರವಾರವಷ್ಟೇ ಹಿಜ್ಬುಲ್ಲಾ ಭಯೋತ್ಪಾದಕರನ್ನು ಹತ್ಯೆಗೈದಿರುವ ಬಗ್ಗೆ ಇಸ್ರೇಲ್ ಮಾಹಿತಿ ಹಂಚಿಕೊಂಡಿತ್ತು. ಕಳೆದ ಒಂದು ವಾರದಲ್ಲಿ ಇಸ್ರೇಲ್ ಹಿಜ್ಬುಲ್ಲಾದ 2,000ಕ್ಕೂ ಹೆಚ್ಚು ಸೇನಾ ನೆಲೆಗಳ ಗುರಿಯಾಗಿಸಿ ದಾಳಿ ನಡೆಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ಹತ್ಯೆಗೈದಿದೆ. ಇದರಲ್ಲಿ 5 ಬೆಟಾಲಿಯನ್ ಕಮಾಂಡರ್, 10 ಕಂಪನಿ ಕಮಾಂಡರ್ ಹಾಗೂ 6 ಪ್ಲಟೂನ್ ಕಮಾಂಡರ್‌ಗಳನ್ನ ಕೊಂದಿರುವುದಾಗಿ ಹೇಳಿಕೊಂಡಿತ್ತು.
ಇರಾನ್ ಸುಪ್ರೀಂ ಲೀಡರ್ ಯುದ್ಧಕ್ಕೆ ಕರೆ
ಟೆಗ್ರಾನ್ ನಗರದ ಕೇಂದ್ರ ಭಾಗದಲ್ಲಿರುವ ಇಮಾಮ್ ಖೊಮೇನಿ ಗ್ರ‍್ಯಾಂಡ್ ಮೊಸಲ್ಲಾ ಮಸೀದಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಮಾತನಾಡಿದ ಇರಾನ್ ಸರ್ವೋಚ್ಛ ನಾಯಕ ಹಾಗೂ ಧರ್ಮ ಗುರು ಅಯತೊಲ್ಲಾ ಅಲಿ ಖಮೇನಿ, ‘ವಿಶ್ವಾದ್ಯಂತ ಇರುವ ಮುಸ್ಲಿಮರಿಗೆ ಶತ್ರುಗಳು ಇದ್ದಾರೆ. ನಾವೆಲ್ಲರೂ ಒಂದಾಗಿ ಸೇರಿ ಆ ಶತ್ರುವನ್ನು ಮಣಿಸಬೇಕು. ಎಲ್ಲರೂ ಒಂದಾಗಿ ನಮ್ಮ ಶತ್ರುವನ್ನು ಮಣಿಸೋಣ ಎಂದು ಕರೆ ಕೊಟ್ಟಿದ್ದರು.
ಇಸ್ರೇಲ್ ಮೇಲಿನ ದಾಳಿಗೆ ಖಮೇನಿ ಸಮರ್ಥನೆ!
ಇಸ್ಲಾಮಿಕ್ ರಿಪಬ್ಲಿಕ್ ದೇಶವಾದ ಇರಾನ್ ಕೆವು ದಿನಗಳ ಹಿಂದೆ ಇಸ್ರೇಲ್ ಮೇಲೆ ನಡೆಸಿದ ಖಂಡಾಂತರ ಕ್ಷಿಪಣಿ ದಾಳಿಗಳನ್ನು ‘ಕಾನೂನುಬದ್ದ’ ಎಂದು ಪ್ರತಿಪಾದಿಸಿದ ಖಮೇನಿ, 2023ರ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯನ್ನೂ ‘ನ್ಯಾಯಸಮ್ಮತ’ ಎಂದು ಪ್ರತಿಪಾದಿಸಿದ್ದರು.
– ಈವರೆಗೆ 2,000ಕ್ಕೂ ಹೆಚ್ಚು ಸೇನಾ ನೆಲೆಗಳ ಗುರಿಯಾಗಿಸಿ ದಾಳಿ; ಐಡಿಎಫ್
ಬೈರೂತ್: ಇಸ್ರೇಲ್ ಮತ್ತು ಇರಾನ್ (Israel Iran War) ನಡುವೆ ಸೇಡು, ಪ್ರತೀಕಾರದ ದಾಳಿಗಳು ತೀವ್ರಗೊಳ್ಳುತ್ತಿವೆ. ಬೈರೂತ್ ನಗರದ ಮೇಲೆ ಇಸ್ರೇಲ್‌ನ ಪಡೆಗಳು ವೈಮಾನಿಕ ದಾಳಿ ಮುಂದುವರಿಸಿವೆ. ಇರಾನ್ ಸುಪ್ರೀಂ ಲೀಡರ್ ಇಸ್ರೇಲ್ ವಿರುದ್ಧ ಗುಡುಗಿದ ಬಳಿಕ ಇಸ್ರೇಲ್ ತನ್ನ ವಾಯುದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ.
ದಕ್ಷಿಣ ಲೆಬನಾನ್ ಬಳಿಕ ಹಿಜ್ಬುಲ್ಲಾ (Hezbollah) ಭಯೋತ್ಪಾದಕರ ಗುಂಪನ್ನು ಗುರಿಯಾಗಿಸಿ ಉತ್ತರ ಲೆಬನಾನ್ (North Lebanon) ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಟ್ರಿಪೋಲಿ ಶನಿವಾರ ಟ್ರಿಪೋಲಿ ನಗರದ ಮೇಲೆ ದಾಳಿ ನಡೆಸಿ, ಹಮಾಸ್‌ನ ಚೀಫ್ ಕಮಾಂಡರ್ ಹಾಗೂ ಆತನ ಕುಟುಂಬವನ್ನು ಹತ್ಯೆಗೈದಿದೆ.
250 ಹಿಜ್ಬುಲ್ಲಾ ಭಯೋತ್ಪಾದಕರ ಹತ್ಯೆ:
ಶುಕ್ರವಾರವಷ್ಟೇ ಹಿಜ್ಬುಲ್ಲಾ ಭಯೋತ್ಪಾದಕರನ್ನು ಹತ್ಯೆಗೈದಿರುವ ಬಗ್ಗೆ ಇಸ್ರೇಲ್ ಮಾಹಿತಿ ಹಂಚಿಕೊಂಡಿತ್ತು. ಕಳೆದ ಒಂದು ವಾರದಲ್ಲಿ ಇಸ್ರೇಲ್ ಹಿಜ್ಬುಲ್ಲಾದ 2,000ಕ್ಕೂ ಹೆಚ್ಚು ಸೇನಾ ನೆಲೆಗಳ ಗುರಿಯಾಗಿಸಿ ದಾಳಿ ನಡೆಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ಹತ್ಯೆಗೈದಿದೆ. ಇದರಲ್ಲಿ 5 ಬೆಟಾಲಿಯನ್ ಕಮಾಂಡರ್, 10 ಕಂಪನಿ ಕಮಾಂಡರ್ ಹಾಗೂ 6 ಪ್ಲಟೂನ್ ಕಮಾಂಡರ್‌ಗಳನ್ನ ಕೊಂದಿರುವುದಾಗಿ ಹೇಳಿಕೊಂಡಿತ್ತು. ಇದನ್ನೂ ಓದಿ: 9 ವರ್ಷಗಳ ನಂತ್ರ ಇದೇ ಮೊದಲು – ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್
ಇರಾನ್ ಸುಪ್ರೀಂ ಲೀಡರ್ ಯುದ್ಧಕ್ಕೆ ಕರೆ
ಟೆಗ್ರಾನ್ ನಗರದ ಕೇಂದ್ರ ಭಾಗದಲ್ಲಿರುವ ಇಮಾಮ್ ಖೊಮೇನಿ ಗ್ರ‍್ಯಾಂಡ್ ಮೊಸಲ್ಲಾ ಮಸೀದಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಮಾತನಾಡಿದ ಇರಾನ್ ಸರ್ವೋಚ್ಛ ನಾಯಕ ಹಾಗೂ ಧರ್ಮ ಗುರು ಅಯತೊಲ್ಲಾ ಅಲಿ ಖಮೇನಿ, ‘ವಿಶ್ವಾದ್ಯಂತ ಇರುವ ಮುಸ್ಲಿಮರಿಗೆ ಶತ್ರುಗಳು ಇದ್ದಾರೆ. ನಾವೆಲ್ಲರೂ ಒಂದಾಗಿ ಸೇರಿ ಆ ಶತ್ರುವನ್ನು ಮಣಿಸಬೇಕು. ಎಲ್ಲರೂ ಒಂದಾಗಿ ನಮ್ಮ ಶತ್ರುವನ್ನು ಮಣಿಸೋಣ ಎಂದು ಕರೆ ಕೊಟ್ಟಿದ್ದರು. ಇದನ್ನೂ ಓದಿ: ಲೆಬನಾನ್ ಮೇಲೆ ಇಸ್ರೇಲ್ ಆಕ್ರಮಣ ತೀವ್ರ – ಹಿಜ್ಬುಲ್ಲಾ ಸಂಘಟನೆಯ 15 ಮಂದಿ ಹತ್ಯೆ!
ಇಸ್ರೇಲ್ ಮೇಲಿನ ದಾಳಿಗೆ ಖಮೇನಿ ಸಮರ್ಥನೆ!
ಇಸ್ಲಾಮಿಕ್ ರಿಪಬ್ಲಿಕ್ ದೇಶವಾದ ಇರಾನ್ ಕೆವು ದಿನಗಳ ಹಿಂದೆ ಇಸ್ರೇಲ್ ಮೇಲೆ ನಡೆಸಿದ ಖಂಡಾಂತರ ಕ್ಷಿಪಣಿ ದಾಳಿಗಳನ್ನು ‘ಕಾನೂನುಬದ್ದ’ ಎಂದು ಪ್ರತಿಪಾದಿಸಿದ ಖಮೇನಿ, 2023ರ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯನ್ನೂ ‘ನ್ಯಾಯಸಮ್ಮತ’ ಎಂದು ಪ್ರತಿಪಾದಿಸಿದ್ದರು.