Tag: ಇಸ್ಲಾಂ

  • ಮತಾಂತರಕ್ಕೆ ಒಪ್ಪದ ಪತ್ನಿಗೆ ಸಿಗರೇಟ್‍ನಿಂದ ಸುಟ್ಟು, ಒತ್ತಾಯದಿಂದ ಮಾಂಸ ತಿನ್ನಿಸಿದ!

    ಮತಾಂತರಕ್ಕೆ ಒಪ್ಪದ ಪತ್ನಿಗೆ ಸಿಗರೇಟ್‍ನಿಂದ ಸುಟ್ಟು, ಒತ್ತಾಯದಿಂದ ಮಾಂಸ ತಿನ್ನಿಸಿದ!

    ಲಕ್ನೋ: ಮತಾಂತರ (Conversion) ಕ್ಕೆ ಒಪ್ಪದ ಪತ್ನಿಯನ್ನು ಪ್ರತಿನಿತ್ಯ ಥಳಿಸಿ, ಸಿಗರೇಟ್‍ (Cigrette) ನಿಂದ ಸುಟ್ಟು ಬಲವಂತವಾಗಿ ಮಾಂಸ ತಿನ್ನಿಸಿದ ಘಟನೆಯೊಂದು ಉತ್ತರಪ್ರದೆಶ (Uttarapradesh) ಲಕ್ನೋದಲ್ಲಿ ನಡೆದಿದೆ.

    ಆರೋಪಿ ಪತಿಯನ್ನು ಚಂದ್ ಮೊಹಮ್ಮದ್ (Chand Mohammad) ಎಂದು ಗುರುತಿಸಲಾಗಿದೆ. ಈತ ತಾನು ಹಿಂದೂ ಅಂತ ಹೇಳಿಕೊಂಡು ಸಂತ್ರಸ್ತೆಯನ್ನು ಮದುವೆಯಾಗಿದ್ದಾನೆ. ಆ ಬಳಿಕ ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಇದನ್ನೂ ಓದಿ: ಹರಿಯಾಣದ ಮಾಜಿ ಸಚಿವರ ಪುತ್ರ ವಿಷ ಸೇವಿಸಿ ಆತ್ಮಹತ್ಯೆ

    ಪತಿ ನನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೇಹದ ಮೇಲೆಲ್ಲ ಸಿಗರೇಟ್‍ನಿಂದ ಸುಟ್ಟಿದ್ದಾನೆ. ಅಲ್ಲದೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಒಪ್ಪದಿದ್ದಕ್ಕೆ ನನ್ನ ಮೇಲೆ ಬಿಸಿ ಎಣ್ಣೆ ಎರಚಿದ್ದಾನೆ. ಇಷ್ಟು ಸಾಲದೆಂಬಂತೆ ಒಂದು ವೇಳೆ ನೀನು ಮತಾಂತರಕ್ಕೆ ಒಪ್ಪದಿದ್ದರೆ ನನ್ನ ಸಂಬಂಧಿಕರಿಂದಲೇ ನಿನ್ನ ಮೇಲೆ ಅತ್ಯಾಚಾರ ಮಾಡಿಸುತ್ತೇನೆ. ಅಲ್ಲದೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಪೊಲೀಸರ ಬಳಿ ದೂರಿದ್ದಾಳೆ.

    ಪ್ರತಿ ದಿನ ಪತಿಯ ಹಿಂಸೆ ತಡೆದುಕೊಳ್ಳಲು ಸಾಧ್ಯವಾಗದಿದ್ದಾಗ ದೂರು ನೀಡಲೆಂದು ಹೋದರೆ ಪತಿ ನನ್ನನ್ನು ಕೂಡಿ ಹಾಕಿ ಥಳಿಸುತ್ತಾನೆ. 5 ತಿಂಗಳ ಗರ್ಭಿಣಿ ಇದ್ದಾಗಲೂ ಆತ ನನ್ನ ಹೊಟ್ಟೆಗೆ ಹೊಡೆದಿದ್ದರಿಂದ ಗರ್ಭಪಾತವಾಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

    ಸದ್ಯ ಮಹಿಳೆಯ ದೂರನ್ನು ಪೊಲೀಸರು ಸ್ವೀಕರಿಸಿದ್ದು, ಪತಿಯಿಂದ ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಒಂಟಿ ಮನೆ ಕಳ್ಳತನ ಮಾಡಲು ಹೋಗಿದ್ದ ಗ್ಯಾಂಗ್‌ಗೆ ಶಾಕ್ – ಸಿನಿಮೀಯ ರೀತಿಯಲ್ಲಿ ರೋಚಕವಾಗಿ ಸೆರೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಸ್ಲಾಂ ಹುಟ್ಟುವ ಮುಂಚೆಯೇ ಚಂದ್ರದ್ರೋಣ ಪರ್ವತಗಳ ಸಾಲಲ್ಲಿ ದತ್ತಪೀಠವಿತ್ತು – ಸಿ.ಟಿ ರವಿ

    ಇಸ್ಲಾಂ ಹುಟ್ಟುವ ಮುಂಚೆಯೇ ಚಂದ್ರದ್ರೋಣ ಪರ್ವತಗಳ ಸಾಲಲ್ಲಿ ದತ್ತಪೀಠವಿತ್ತು – ಸಿ.ಟಿ ರವಿ

    ಚಿಕ್ಕಮಗಳೂರು: ದತ್ತಪೀಠವೇ (Sri Guru Dattatreya Swami Dattapita) ಬೇರೆ – ಬಾಬಾಬುಡನ್ ದರ್ಗಾವೇ (Baba Budangiri dargah) ಬೇರೆ. ಈ ವಿಚಾರದಲ್ಲಿ ವಾಸ್ತವಿಕ ಸತ್ಯ ಎತ್ತಿಹಿಡಿಯುವ ಸಲುವಾಗಿ ತನಿಖೆ ನಡೆಸುವಂತೆ ಒತ್ತಾಯಿಸಿ ಶೀಘ್ರದಲ್ಲೇ ಮುಖ್ಯಮಂತ್ರಿಗಳು ಹಾಗೂ ಸಚಿವರ ಬಳಿ ನಿಯೋಗ ತೆರಳುವುದಾಗಿ ಶಾಸಕ ಸಿ.ಟಿ ರವಿ (CT Ravi) ಹೇಳಿದ್ದಾರೆ.

    ತಾಲೂಕಿನ ದತ್ತಪೀಠದಲ್ಲಿನ ದತ್ತಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದತ್ತಾತ್ರೇಯ ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇಸ್ಲಾಂ (Islam) ಹುಟ್ಟುವ ಮುಂಚೆಯೇ ಇಲ್ಲಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ದತ್ತಪೀಠವಿತ್ತು. ಬಾಬಾಬುಡನ್ ದರ್ಗಾ (Baba Budangiri dargah) ವಾಸ್ತಕವಿಕವಾಗಿ ಬೇರೆ ಇದೆ. ಈ ಸತ್ಯವನ್ನು ಎತ್ತಿ ತೋರಿಸುವುದಕ್ಕಾಗಿ ನಿವೃತ್ತ ನ್ಯಾಯಾಧೀಶರು ಅಥವಾ ಹಿರಿಯ ಅಧಿಕಾರಿಗಳ ತಂಡ ರಚಿಸಿ ದಾಖಲೆಗಳನ್ನ ಪರಿಶೀಲನೆ ಮಾಡಲಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 47 ವರ್ಷದ ಹೋರಾಟದ ಬಳಿಕ ದತ್ತಪೀಠದಲ್ಲಿ ನೆರವೇರಿತು ಹಿಂದೂ ಅರ್ಚಕರಿಂದ ಪೂಜೆ

    ಬಾಬಾಬುಡನ್ ದರ್ಗಾ ಜಾಗರ ಹೋಬಳಿಯ ನಾಗೇನಹಳ್ಳಿ ಗ್ರಾಮದ ಸರ್ವೇ ನಂ.57 ರಲ್ಲಿದೆ. ದತ್ತಪೀಠ ಕ್ಷೇತ್ರ ಜಾಗರ ಹೋಬಳಿ ಇನಾಂ ದತ್ತಾತ್ರೇಯ ಪೀಠದ ಸರ್ವೇ ನಂ.195 ರಲ್ಲಿದೆ. ಈ ನ್ಯಾಯವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿ ಸದ್ಯದಲ್ಲೇ ಮುಖ್ಯಮಂತ್ರಿಗಳು (Chief Minister), ಕಂದಾಯ ಸಚಿವರು ಹಾಗೂ ಮುಜರಾಯಿ ಸಚಿವರನ್ನ ಭೇಟಿ ಮಾಡಿ ಚರ್ಚಿಸುತ್ತೇವೆ. ಅವರ ಪ್ರತಿಕ್ರಿಯೆ ನೋಡಿ ಮುಂದಿನ ಹೋರಾಟ ನಿರ್ಣಯಿಸುತ್ತೇವೆ. ಕಾನೂನು ಹೋರಾಟವನ್ನೂ ಮುಂದುವರಿಸುತ್ತೇವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ತೋಟದ ಮನೆಯಲ್ಲಿದ್ದ ಸಾಕು ನಾಯಿ ಕೊಂದ ಚಿರತೆ- ಮನೆಯಿಂದ ಹೊರಬರಲು ಅನ್ನದಾತರು ಹಿಂದೇಟು

    ದತ್ತಪೀಠಕ್ಕೆ ಸರ್ಕಾರ ಹಿಂದೂ ಅರ್ಚಕರನ್ನ ನೇಮಿಸಿರುವುದು ಭಕ್ತಾದಿಗಳಲ್ಲಿ ಆನಂದ ತಂದಿದೆ. ಅದನ್ನು ವರ್ಣಿಸಲು ಆಗುವುದಿಲ್ಲ. ಅರ್ಚಕರು ಗುಹೆಯೊಳಗಡೆ ಪೂಜೆ ಮಾಡಿ, ಪ್ರಾಣ ಪ್ರತಿಷ್ಠೆ ಮಾಡಿ, ಅರ್ಚನೆ, ಗಣಪತಿ ಹೋಮ, ದತ್ತ ಹೋಮಗಳು ನಡೆದಿವೆ. ನಗರದಲ್ಲಿ ನಡೆದ ಶೋಭಾಯಾತ್ರೆ ಕೂಡ ಹಿಂದಿನ ಎಲ್ಲಾ ದಾಖಲೆಗಳನ್ನ ಮೀರಿ ವೈಭವೋಪೇತವಾಗಿ ನಡೆದಿದೆ ಎಲ್ಲದಕ್ಕೂ ದತ್ತಾತ್ರೇಯರ ಕೃಪೆ ಇದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್

    ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್

    ಟಿ ದಿವ್ಯಾ ಶ್ರೀಧರ್ (Divya Sridhar) ಇಸ್ಲಾಂ ಧರ್ಮಕ್ಕೆ ಮತಾಂತರ (Conversion) ಆಗಿಯೇ ಅಮ್ಜಾದ್ ಖಾನ್ ಜೊತೆ ಮದುವೆ ಆಗಿರುವುದಾಗಿ ತಿಳಿಸಿದ್ದಾರೆ. ತಮಿಳು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು  ‘ನಾವಿಬ್ಬರೂ ಒಂದೇ ಸೀರಿಯಲ್ ನಲ್ಲಿ ನಟಿಸುತ್ತಿದ್ದಾಗ ಪರಿಚಯವಾಗಿದ್ದು. ಆಮೇಲೆ ಪರಸ್ಪರ ಪ್ರೀತಿಸೋಕೆ ಶುರು ಮಾಡಿದೆವು. ಮೊದಲು ಅವರು ಮುಸ್ಲಿಂ ಅಂತ ಗೊತ್ತಿರಲಿಲ್ಲ. ಆನಂತರ ಗೊತ್ತಾಗಿದ್ದು. ಆಮೇಲೆ ತಮ್ಮ ಧರ್ಮಕ್ಕೆ ಮತಾಂತರ ಆಗುವಂತೆ ಅಮ್ಜದ್ ಖಾನ್ ಒತ್ತಾಯಿಸಿದ್ದರಂತೆ.

    ನಾನು ಇಷ್ಟಪಟ್ಟ ಹುಡುಗನನ್ನು ಮದುವೆ ಆಗುವುದಕ್ಕಾಗಿ ನಾನು ಇಸ್ಲಾಂ (Islam) ಧರ್ಮಕ್ಕೆ ಮತಾಂತರ ಆದೆ. ಅದು ಅವರ ಒತ್ತಾಯವೂ ಆಗಿತ್ತು. ಆನಂತರ ಹಿಂದೂ ವಿವಾಹದ ಪ್ರಕಾರವೂ ನಾವಿಬ್ಬರೂ ಮದುವೆ ಆಗಲು ತೀರ್ಮಾನಿಸಿದ್ದೆವು. ಹಾಗಾಗಿ ಕಾಂಚಿಪುರಂನಲ್ಲಿರುವ ದೇವಾಲಯದಲ್ಲಿ ಹಿಂದೂಗಳ ಪ್ರಕಾರ ಮದುವೆ ಆದೆವು. ಅದೊಂದು ಸರಳವಾಗಿ ನಡೆದ ವಿವಾಹವಾಗಿತ್ತು ಎಂದು ಹೇಳಿಕೊಂಡಿದ್ದಾರೆ ದಿವ್ಯಾ. ಇದನ್ನೂ ಓದಿ : ಕನ್ನಡದ ನಟಿ ದಿವ್ಯಾ ಶ್ರೀಧರ್ ಲವ್ ಜಿಹಾದ್ ಆರೋಪಕ್ಕೆ ಪತಿ ಅಮ್ಜಾದ್ ಖಾನ್ ಪ್ರತಿಕ್ರಿಯೆ

    ನಾವಿಬ್ಬರೂ ಮದುವೆ (Marriage) ಆದ ಫೋಟೋ ಮತ್ತು ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದೆ. ಅದಕ್ಕೆ ಅವರು ವಿರೋಧ ವ್ಯಕ್ತ ಪಡಿಸಿದ್ದರು. ನನ್ನ ಕೆರಿಯರ್ ಗೆ ತೊಂದರೆ ಆಗುತ್ತದೆ. ಹಾಗಾಗಿ ಅವುಗಳನ್ನು ಡಿಲಿಟ್ ಮಾಡುವಂತೆ ಒತ್ತಡ ಹೇರಿದರು. ಯಾರಾದರೂ ಆ ಫೋಟೋ ಬಗ್ಗೆ ಕೇಳಿದರೆ, ಅವು ಜಾಹೀರಾತಿಗಾಗಿ ತಗೆದದ್ದು ಎಂದು ಹೇಳುವಂತೆ ತಿಳಿಸಿದ್ದರು ಎನ್ನುತ್ತಾ ದಿವ್ಯಾ.

    ದಿವ್ಯಾ ಗರ್ಭಿಣಿ ಎನ್ನುವುದು ತಿಳಿಯುತ್ತಿದ್ದಂತೆಯೇ ಅಮ್ಜದ್ ಖಾನ್ (Amjad Khan) ದೂರ ಆಗುವುದಕ್ಕೆ ಶುರು ಮಾಡಿದರಂತೆ. ಅಲ್ಲದೇ ಮಗುವನ್ನು ಗರ್ಭಪಾತ ಮಾಡಿಸಲು ಒತ್ತಾಯಿಸಿದರಂತೆ. ಈ ಕಾರಣಕ್ಕಾಗಿ ತಮ್ಮಿಬ್ಬರ ನಡುವೆ ಜಗಳವಾಗಿದೆ ಎನ್ನುತ್ತಾರೆ ದಿವ್ಯಾ. ಈ ಜಗಳ ತಾರಕಕ್ಕೇರಿ ದೈಹಿಕ ಹಲ್ಲೆಗೆ ಒಳಗಾಗಿ ಸದ್ಯ ದಿವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ತಮಗಾದ ಅನ್ಯಾಯಕ್ಕೆ ದೂರು ಕೂಡ ದಾಖಲಿಸಲು ಮುಂದಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ ವಿವಾದಾತ್ಮಕ ಹೇಳಿಕೆ

    ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ ವಿವಾದಾತ್ಮಕ ಹೇಳಿಕೆ

    ಮಂಗಳೂರು: ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯ ಪ್ರಧಾನ ಭಾಷಣದಲ್ಲಿ ಈ ರೀತಿ ಹೇಳಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಪುಂಡ, ಪೋಕರಿಯಂತೆ ಮಾತನಾಡುತ್ತಿದ್ದಾರೆ: ಸಿದ್ದು ವಿರುದ್ಧ ಶೆಟ್ಟರ್ ವಾಗ್ದಾಳಿ

    ಇಸ್ಲಾಂ ಎನ್ನುವಂತದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿಯಲ್ಲ, ಸಭ್ಯತೆಯಲ್ಲ, ಸಂಸ್ಕಾರವಲ್ಲ, ಮಾನವೀಯತೆಯೂ ಅಲ್ಲ. ಅದೊಂದು ಕ್ರೌರ್ಯ, ಅಮಾನುಷತೆ, ಅತ್ಯಾಚಾರ, ಲೂಟಿಕೋರರ ತಂಡ. ಅದೊಂದು ಕಾಮುಕರ ಗ್ಯಾಂಗ್. ಈ ರೀತಿಯಾಗಿ ಇಸ್ಲಾಂನ್ನು ಅರ್ಥೈಸಿಕೊಳ್ಳಬಹುದು ಅನ್ನಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: RSS ಚಡ್ಡಿ ಬಗ್ಗೆ ಸಿದ್ದರಾಮಯ್ಯ ಭಯಭೀತರಾಗಿದ್ದಾರೆ: ಕೋಟ ಶ್ರೀನಿವಾಸ ಪೂಜಾರಿ

    ಅವರ ಎಲ್ಲ ಚಟುವಟಿಕೆಗಳು ಮುಂಚೂಣಿಗೆ ಬಂದಾಗ, ನಾವು ಅದನ್ನು ಗಮನಿಸಿದಾಗ ಈ ಎಲ್ಲ ಬೆಳವಣಿಗೆಗಳು ನಮಗೆ ಅರ್ಥವಾಗುತ್ತದೆ ಎಂದ ರಾಧಾಕೃಷ್ಣ, ಲವ್ ಜಿಹಾದ್ ಬಗ್ಗೆಯೂ ಖಂಡನೆ ವ್ಯಕ್ತಪಡಿಸಿದ್ದಾರೆ.

  • ಇಸ್ಲಾಂಗೆ ಮತಾಂತರ ಆದ್ರಾ ಸ್ಟಾರ್ ನಟ ವಿಶಾಲ್: ಏನಿದು ಇನ್ಶ್ಯಾ ಅಲ್ಲಾಹ್?

    ಇಸ್ಲಾಂಗೆ ಮತಾಂತರ ಆದ್ರಾ ಸ್ಟಾರ್ ನಟ ವಿಶಾಲ್: ಏನಿದು ಇನ್ಶ್ಯಾ ಅಲ್ಲಾಹ್?

    ಮಿಳಿನ ಖ್ಯಾತ ನಟ ವಿಶಾಲ್ ದೇವರ ಬಗ್ಗೆ ಅಪಾರ ನಂಬಿಕೆವುಳ್ಳವರು. ಅವರು ಯಾವ ಜಾತಿಯರು ಎಂದು ಈವರೆಗೂ ಅಭಿಮಾನಿಗಳು ಕೇಳದೇ ಆರಾಧಿಸುತ್ತಾ ಬಂದಿದ್ದಾರೆ. ಸದ್ಯ ವಿಶಾಲ್ ಮಾಡಿರುವ ಒಂದು ಟ್ವಿಟ್ ನಿಂದಾಗಿ ವಿಶಾಲ್ ಯಾವ ಧರ್ಮದವರು ಎಂದು ಹುಡುಕುತ್ತಿದ್ದಾರೆ ನೆಟ್ಟಿಗರು. ಇದನ್ನೂ ಓದಿ : ತಾಳಿಕಟ್ಟಿ ಹೆಂಡತಿಯನ್ನು ಎತ್ತಿಕೊಂಡ ರಣಬೀರ್ ಕಪೂರ್

    ವಿಶಾಲ್ ಅವರ ಸಹೋದರಿ ಐಶು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯನ್ನು ಅಭಿಮಾನಿಗಳ ಜತೆ ಹಂಚಿಕೊಂಡಿರುವ ಅವರು, ‘ನಾನು ಮತ್ತೆ ಅಂಕಲ್ ಆಗಿರುವೆ. ಮತ್ತೊಮ್ಮೆ ಅಂಕಲ್ ಆಗಿರುವುದು ಸಂಭ್ರಮ ತಂದಿದೆ. ನನ್ನ ಸಹೋದರಿ ಐಶು ಅವರು ರಾಜಕುಮಾರಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಮತ್ತು ಸಹೋದರಿಗೂ ಶುಭ ಹಾರೈಸಿ. ಇಬ್ಬರಿಗೂ ಇನ್ಶ್ಯಾ ಅಲ್ಲಾಹ್ ನ ಆಶೀರ್ವಾದವಿರಲಿ’ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ‘ಇನ್ಶ್ಯಾ ಅಲ್ಲಾಹ್’ ಎಂಬ ಪದವೇ ಇದೀಗ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ‘BOSS’ ಪಟ್ಟ ಅಲಂಕರಿಸಿದ ಯಶ್ : ಟ್ವಿಟರ್ ಟ್ರೆಂಡಿಂಗ್ ನಲ್ಲಿ #YASHBOSS

    ಅಲ್ಲಾಹ್ ದೇವರ ಆಶೀರ್ವಾದ ಕೋರಿರುವ ವಿಶಾಲ್ ಹಾಗಾದರೆ, ಇಸ್ಲಾಂಗೆ ಮತಾಂತರ ಆಗಿದ್ದಾರಾ ಎಂದು ನೆಟ್ಟಿಗರು ಹಲವು ರೀತಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಅಷ್ಟಕ್ಕೂ ಇಂಥದ್ದೊಂದು ಪದವನ್ನು ಅವರು ಹಾಕಿರುವುದಾದರೂ ಏತಕ್ಕೆ ಎನ್ನುವ ಚರ್ಚೆ ಕೂಡ ತಮಿಳು ನಾಡಿನಲ್ಲಿ ನಡೆದಿದೆ. ಅದಕ್ಕೆ ವಿಶಾಲ್ ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ಕೊಡಲು ಹೋಗಿಲ್ಲ.

    ಸಮಾಜಮುಖಿ ಕಾರ್ಯಗಳಿಂದಾಗಿ ವಿಶಾಲ್ ಎಲ್ಲರ ಪ್ರೀತಿಯ ನಟರಾಗಿ ಉಳಿದುಕೊಂಡಿದ್ದಾರೆ. ಕನ್ನಡದ ಹೆಮ್ಮೆಯ ನಟ ಪುನೀತ್ ರಾಜ್ ಕುಮಾರ್ ನಿಧನರಾದಾಗ, ಅಪ್ಪು ನೋಡಿಕೊಳ್ಳುತ್ತಿದ್ದ ಅಷ್ಟೂ ಮಕ್ಕಳನ್ನು ದತ್ತು ಪಡೆದುಕೊಂಡು ಓದಿಸುತ್ತೇನೆ ಎಂದು ಹೇಳಿದ್ದರು. ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು. ಅಲ್ಲದೇ, ಪುನೀತ್ ಅವರ ಹೆಸರಿನಲ್ಲಿ ಅವರು ಗಿಡಗಳನ್ನು ನೆಟ್ಟು, ಪುನೀತ್ ಅಭಿಮಾನಿಗಳು ಪ್ರೀತಿಗೂ ವಿಶಾಲ್ ಪಾತ್ರರಾಗಿದ್ದರು. ಇದನ್ನೂ ಓದಿ:ಬೀಸ್ಟ್ ಸಿನಿಮಾಕ್ಕೆ ಸೆಡ್ಡು ಹೊಡೆದ ಕೆಜಿಎಫ್-2 – ಕೇರಳ, ತಮಿಳುನಾಡಿನಲ್ಲೂ ರಾಕಿಭಾಯ್ ಹವಾ

    ಸದ್ಯ ವಿಶಾಲ್ ಅವರು ಲಾಠಿ ಎಂಬ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸುನೈನಾ ಅವರು ವಿಶಾಲ್ ಗೆ ನಾಯಕಿಯಾಗಿ ನಟಿಸಿದ್ದಾರೆ. ರಮಣ ಮತ್ತು ನಂದು ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.

  • ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶಾ ಪ್ರಯತ್ನ ಇದಾಗಿತ್ತು: ಕೈ ವಿರುದ್ಧ ಬಿಜೆಪಿ ವಾಗ್ದಾಳಿ

    ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶಾ ಪ್ರಯತ್ನ ಇದಾಗಿತ್ತು: ಕೈ ವಿರುದ್ಧ ಬಿಜೆಪಿ ವಾಗ್ದಾಳಿ

    – ಮಕ್ಕಳ ಭವಿಷ್ಯದಲ್ಲಿ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ

    ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ವಿಚಾರವಾಗಿ  ವಿರೋಧ ಪಕ್ಷವಾದ ಕಾಂಗ್ರೆಸ್ ವಿರುದ್ಧವಾಗಿ ಬಿಜೆಪಿ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಶಾಲಾ ಹಂತದಲ್ಲೇ ಬಗೆಹರಿಯಬಹುದಾದ ಹಿಜಬ್ ವಿಚಾರವನ್ನು ನ್ಯಾಯಾಲಯದವರೆಗೆ ಎಳೆದು ತರುವ ಅಗತ್ಯವಿರಲಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರ ಜಾರಿಗೊಳಿಸಿದ ಸಮವಸ್ತ್ರ ನೀತಿಯಲ್ಲಿ ತಪ್ಪಿಲ್ಲ. ಸಮವಸ್ತ್ರ ಮೂಲಭೂತ ಹಕ್ಕುಗಳ ಮೇಲಿನ ಸಮಂಜಸ ನಿರ್ಬಂಧ ಎಂದು ಕೋರ್ಟ್ ಅಭಿಪ್ರಾಯಪಟ್ಟಿರುವುದು ಸ್ವಾಗತಾರ್ಹವಾಗಿದೆ.

    ಹಿಜಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು. ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು. ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ. ಹಿಜಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್‍ಡಿಪಿಐ, ಸಿಎಫ್‍ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು ಎಂದು ವಿರೋಧ ಪಕ್ಷದ ವಿರುದ್ಧವಾಗಿ ವಾಗ್ಧಾಳಿ ಮಾಡಿ ಟ್ವೀಟ್ ಮಾಡಲಾಗಿದೆ.  ಇದನ್ನೂ ಓದಿ: ಹಿಜಬ್ ಇಸ್ಲಾಂ ಆಚರಣೆಯಲ್ಲ ಅನ್ನೋ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಲ್ಲ: ಯು.ಟಿ.ಖಾದರ್

    ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳು ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು. ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ. ಈ ಪ್ರಕರಣದಲ್ಲಿ ಹಿಜಬ್ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಅವರು ಹಿಜಬ್ ಧರಿಸುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.

    ಈಗ ನ್ಯಾಯಾಲಯವೇ, ಹಿಜಬ್ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಬ್ ವಿವಾದಕ್ಕೆ ಪುಷ್ಟಿ ನೀಡಿತು. ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು. ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂತಿರುಗಿ: ಮಾಳವಿಕಾ ಅವಿನಾಶ್

    ಹಿಜಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ ಕಾಂಗ್ರೆಸ್ ತನ್ನದೇ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು. ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಪ್ರಶ್ನಿಸಿ ಟ್ವೀಟ್ ಮಾಡಲಾಗಿದೆ.

    ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

  • ಹಿಜಬ್ ಇಸ್ಲಾಂ ಆಚರಣೆಯಲ್ಲ ಅನ್ನೋ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಲ್ಲ: ಯು.ಟಿ.ಖಾದರ್

    ಹಿಜಬ್ ಇಸ್ಲಾಂ ಆಚರಣೆಯಲ್ಲ ಅನ್ನೋ ಕೋರ್ಟ್ ತೀರ್ಪಿಗೆ ಪ್ರತಿಕ್ರಿಯಿಸಲ್ಲ: ಯು.ಟಿ.ಖಾದರ್

    ಬೆಂಗಳೂರು: ಹಿಜಬ್ ಇಸ್ಲಾಂ ಆಚರಣೆ ಅಲ್ಲ, ಎನ್ನುವ ಕೋರ್ಟ್ ತೀರ್ಪಿಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ, ಸಂಬಂಧಪಟ್ಟವರು ಸಲ್ಲಿಸಬಹುದು. ಸಿಡಿಸಿ ತೀರ್ಮಾನದಂತೆ ಸಮವಸ್ತ್ರ ನಿರ್ಧಾರ ಆಗುತ್ತೆ, ಸಿಡಿಸಿ ತೀರ್ಮಾನ ಇಲ್ಲದ ಕಡೆ ಸಮವಸ್ತ್ರ ಇಲ್ಲದಿರಬಹುದು. ಹಿಜಬ್, ಇಸ್ಲಾಂ ಆಚರಣೆ ಅಲ್ಲ, ಎನ್ನುವ ಕೋರ್ಟ್ ತೀರ್ಪಿಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂತಿರುಗಿ: ಮಾಳವಿಕಾ ಅವಿನಾಶ್

    ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

    ರಾಜ್ಯದಲ್ಲಿ ಹಿಜಬ್ ವಿವಾದದ ಕಿಡಿ ಹೊತ್ತಿದ್ದೇ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಿಂದ. 2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಹಿಜಬ್ ಬೇಡಿಕೆ ಶುರುವಾಗಿತ್ತು. ಮನವಿ ಪತ್ರಗಳಿಗೆ ಪುರಸ್ಕಾರ ನೀಡದ ಪ್ರಾಂಶುಪಾಲರು, ಹಿಜಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ಹಾಕಿದ್ದರು. ಡಿಸೆಂಬರ್ 31ಕ್ಕೆ ವಿದ್ಯಾರ್ಥಿನಿಯರು ಕಾಲೇಜಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಾಗಿ ಒಂದು ತಿಂಗಳ ನಂತರ ಅಂದರೆ ಜನವರಿ 31ರಂದು ವಿದ್ಯಾರ್ಥಿನಿ ಅಲ್ಮಾಸ್ ಹೈಕೋರ್ಟ್‌ ಮೊರೆ ಹೋಗಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಧರ್ಮ ಸಂಘರ್ಷವೇ ಶುರುವಾಗಿತ್ತು.

  • 6 ವಿದ್ಯಾರ್ಥಿನಿಯರು ಹಠ ಮಾಡದೇ ಶಾಲೆಗೆ ಬರ್ಬೇಕು, ಸಮವಾದ ಶಿಕ್ಷಣ ನೀಡುತ್ತೇವೆ: ರಘುಪತಿ ಭಟ್

    6 ವಿದ್ಯಾರ್ಥಿನಿಯರು ಹಠ ಮಾಡದೇ ಶಾಲೆಗೆ ಬರ್ಬೇಕು, ಸಮವಾದ ಶಿಕ್ಷಣ ನೀಡುತ್ತೇವೆ: ರಘುಪತಿ ಭಟ್

    ಉಡುಪಿ: ಹಿಜಬ್ ಕುರಿತಾಗಿ ಇಂದು ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ ಮತ್ತು ಸಂತೋಷ ವ್ಯಕ್ತಪಡಿಸುತ್ತೇನೆ. ತ್ರೀ-ಸದಸ್ಯ ಪೀಟದ ತೀರ್ಪನ್ನ ಎಲ್ಲರೂ ಪಾಲಿಸಬೇಕು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

    ಹೈಕೋರ್ಟ್ ತೀರ್ಪು ಬಳಿಕ ಶಾಸಕರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ ಆರು ವಿದ್ಯಾರ್ಥಿನಿಯರು ಹಠ ಮಾಡದೇ ಶಾಲೆಗೆ ಬರಬೇಕು. ಅವರೆಲ್ಲರಿಗೂ ಸಮವಾದ ಶಿಕ್ಷಣ ನೀಡುತ್ತೇವೆ. ಇಷ್ಟು ದಿನ ಅವರ ಶಿಕ್ಷಣಕ್ಕೆ ಸಮಸ್ಯೆ ಆಗಿದ್ರೆ, ಅವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುತ್ತದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

    ತ್ರಿ ಸದಸ್ಯ ಪೀಠ ವಿಚಾರಣೆ ಮಾಡಿ ತೀರ್ಪು ನೀಡಿದೆ. ತ್ರಿ ಸದಸ್ಯ ಪೀಠದಲ್ಲಿ ಮುಸ್ಲಿಂ ನ್ಯಾಯಾಧೀಶರು ಇದ್ದರು. ಇದು ಐತಿಹಾಸಿಕ ತೀರ್ಪು ಆಗಿದೆ. ಸುಪ್ರೀಂಕೋರ್ಟ್‍ಗೆ ಹೋಗಲು ಅವಕಾಶ ಇದೆ. ಆದರೆ ದೇಶ ಮಟ್ಟದಲ್ಲಿ ಮತ್ತೆ ಈ ವಿಚಾರ ತೆಗೆದುಕೊಂಡು ಹೋಗಿ ಹಿಂದೂ-ಮುಸ್ಲಿಂರ ಮಧ್ಯೆ ಕಂದಕ ಮೂಡಿಸಬಾರದು ಎಂದಿದ್ದಾರೆ. ಇದನ್ನೂ ಓದಿ: ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

    ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.

  • ಗಾಂಧಿ ನಿಂದಿಸಿ, ನಾಥೂರಾಮ್ ಗೋಡ್ಸೆ ಹೊಗಳಿದ ಹಿಂದೂ ಧಾರ್ಮಿಕ ಮುಖಂಡ ಅರೆಸ್ಟ್

    ಗಾಂಧಿ ನಿಂದಿಸಿ, ನಾಥೂರಾಮ್ ಗೋಡ್ಸೆ ಹೊಗಳಿದ ಹಿಂದೂ ಧಾರ್ಮಿಕ ಮುಖಂಡ ಅರೆಸ್ಟ್

    ಭೋಪಾಲ್: ಮಹಾತ್ಮ ಗಾಂಧಿಯನ್ನು ಅವಮಾನಿಸಿ, ನಾಥೂರಾಮ್ ಗೋಡ್ಸೆಯನ್ನು ಹೊಗಳಿದ ಹಿನ್ನೆಲೆ ಮಹಾರಾಷ್ಟ್ರದ ಹಿಂದೂ ಧಾರ್ಮಿಕ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

    ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಬಂಧಿತ ಆರೋಪಿ. ಈತ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್ ಸಭೆಯಲ್ಲಿ ಪಾಲ್ಗೊಂಡು ವಿವಾದಾತ್ಮಕ ಭಾಷಣ ಮಾಡಿದ್ದ.

    ಭಾಷಣದಲ್ಲಿ ಏನು ಹೇಳಿದ್ದಾರೆ?
    ಮೋಹನ್‌ದಾಸ್ ಕರಮಚಂದ್ ಗಾಂಧಿಯವರು ಭಾರತ ದೇಶವನ್ನು ನಾಶಪಡಿಸಿದ್ದಾರೆ. ಅವರನ್ನು ಕೊಂದ ನಾಥೂರಾಮ್ ಗೋಡ್ಸೆಗೆ ನಮಸ್ಕಾರಗಳು. ಹಿಂದೂ ಧರ್ಮವನ್ನು ರಕ್ಷಿಸಲು ಜನರು ಒಳ್ಳೆಯ ಹಿಂದೂ ನಾಯಕನನ್ನು ಆಯ್ಕೆ ಮಾಡಬೇಕೆಂದು ಭಾಷಣದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ನೀಡುವ ಹಾಲಿನ ಪುಡಿಗೇ ಕನ್ನ

    ಭಾಷಣದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಪ್ರಮೋದ್ ದುಬೆ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಳಿಚರಣ್ ಭಾಷಣದ ವೀಡಿಯೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಪೊಲೀಸರ ಟ್ರ‍್ಯಾಕಿಂಗ್‌ನಿಂದ ತಪ್ಪಿಸಿಕೊಳ್ಳಲು, ಕಾಳಿಚರಣ್ ಆಪ್ತ ಸಹಾಯಕರು ತಮ್ಮ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇಂದು ಬೆಳಗ್ಗೆ 10 ಗಂಟೆಗೆ ಪೊಲೀಸರ ತಂಡ ಅವರನ್ನು ಅರೆಸ್ಟ್ ಮಾಡಿದೆ. ನಂತರ ಅವರನ್ನು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರಕ್ಕೆ ಕರೆದೊಯ್ದಿದ್ದಾರೆ. ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷ ಸಂಭ್ರಮಾಚರಣೆ ತಡೆಯಲು ಚೆನ್ನೈನಲ್ಲಿ ವಾಹನ ಸಂಚಾರ ಬ್ಯಾನ್

  • ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಇಂಡೋನೇಷ್ಯಾ ಸಂಸ್ಥಾಪಕನ ಪುತ್ರಿ ಮತಾಂತರ

    ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಇಂಡೋನೇಷ್ಯಾ ಸಂಸ್ಥಾಪಕನ ಪುತ್ರಿ ಮತಾಂತರ

    ಜಕಾರ್ತ: ಇಂಡೋನೇಷ್ಯಾ ಸಂಸ್ಥಾಪಕ ಪಿತಾಮಹ ಮತ್ತು ಮೊದಲ ಅಧ್ಯಕ್ಷ ಸುಕರ್ಣೋ ಅವರ ಮೂರನೇ ಪುತ್ರಿ ಸುಕ್ಮಾವತಿ ಸುಕರ್ಣೋ ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವುದುದಾಗಿ ಘೋಷಿಸಿದ್ದಾರೆ.

    ಅಜ್ಜಿ ದಿವಂಗತ ಇಡಾ ನ್ಯೋಮನ್ ರೈ ಶ್ರಿಂಬೆನ್ ಅವರ ಪ್ರಭಾವವೇ ಸುಕ್ಮಾವತಿ ಮತಾಂತರಕ್ಕೆ ಪ್ರಮುಖ ಎನ್ನಲಾಗುತ್ತಿದೆ. ಇಂಡೋನೇಷ್ಯಾ ನ್ಯಾಷನಲ್ ಪಾರ್ಟಿ ಸಂಸ್ಥಾಪಕಿಯೂ ಸುಕ್ಮಾವತಿ ಆಗಿದ್ದಾರೆ. ಅಕ್ಟೋಬರ್ 26ರಂದು ಸುಕ್ಮಾವತಿಯವರು ಅಧಿಕೃತವಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಬಾಲಿ ಅಗುಂಗ್ ಸಿಂಗರಾಜದಲ್ಲಿ ಸುಧಿ ವಡಾನಿಯು ಹೆಸರಿನ ಹಿಂದೂ ಸಮಾರಂಭ ಆಯೋಜಿಸಲಾಗಿದ್ದು, ಇಲ್ಲೇ ಅವರು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ. ಉತ್ತರ ಬಾಲಿಯಲ್ಲಿರುವ ತನ್ನ ಅಜ್ಜಿಯ ಮನೆಯ ಬಳಿ ನಿರ್ಮಿಸಲಾದ ಆಕೆಯ ದಿವಂಗತ ತಂದೆಯ ಸ್ಮಾರಕವೂ ಇದೆ. ಇನ್ನು ಮತಾಂತರ ಸಮಾರಂಭ ಆಯೋಜಿಸಲಾದ ದಿನದಂದು ಸುಕ್ಮಾವತಿ ತಮ್ಮ 70 ನೇ ಹುಟ್ಟುಹಬ್ಬವನ್ನೂ ಆಚರಿಸಲಿದ್ದಾರೆ.  ಇದನ್ನೂ ಓದಿ:  ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!

    sukarno

    ಸುಕ್ಮಾವತಿ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ನಿರ್ಧಾರಕ್ಕೆ ಸುಕ್ಮಾವತಿ ಸಹೋದರರು ಮತ್ತು ಸಹೋದರಿ, ಮಾಜಿ ಅಧ್ಯಕ್ಷೆ ಮೇಗಾವತಿ ಸೂಕರ್ಣಪುತ್ರಿ, ಗುಂಟೂರು ಸೂಕರ್ಣಪುತ್ರ ಮತ್ತು ಗುರು ಸೂಕರ್ಣಪುತ್ರ ಒಪ್ಪಿಗೆ ಇದೆ ಎನ್ನಲಾಗಿದೆ. ಈ ಮತಾಂತರವನ್ನು ಆಕೆಯ ಮಕ್ಕಳೂ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ:  ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!

    ಕಂಜೆಂಗ್ ಗುಸ್ತಿ ಪಂಗೆರನ್ ಅದಿಪತಿ ಆರ್ಯ ಮಂಗ್ಕುನೆಗೆರಾ ಅವರನ್ನು ವಿವಾಹವಾಗಿದ್ದ ಸುಕ್ಮಾವತಿ 1948ರಲ್ಲಿ ವಿಚ್ಛೇದನ ಪಡೆದಿದ್ದರು. 2018ರಲ್ಲಿ ಇಂಡೋನೇಷ್ಯಾ ಫ್ಯಾಷನ್ ವೀಕ್‍ನಲ್ಲಿ ಕವನವೊಂದನ್ನು ಓದುತ್ತಾ, ಇಲ್ಲಿನ ಮುಸ್ಲಿಮರು ಧರಿಸುವ ದುಪ್ಪಟಾಗಿಂತ ಸಾಂಪ್ರದಾಯಿಕ ಹೇರ್‍ಬನ್ ಹೆಚ್ಚು ಸುಂದರವಾಗಿದೆ ಎಂದಿದ್ದರು. ಇದು ಭಾರೀ ವಿವಾದಕ್ಕೀಡಾಗಿ ಇಂಡೋನೇಷ್ಯಾ ಮುಸ್ಲಿಮರ ಕ್ಷಮೆಯಾಚಿಸಿದ್ದರು.