Tag: ಇಸ್ಲಾಮ್

  • ಇರಾನ್ ನಾಯಕನ ಪುತ್ರಿಯ ವಿವಾಹದಲ್ಲಿಲ್ಲ ಹಿಜಾಬ್ – ವೀಡಿಯೋ ವೈರಲ್, ನೆಟ್ಟಿಗರಿಂದ ಆಕ್ರೋಶ

    ಇರಾನ್ ನಾಯಕನ ಪುತ್ರಿಯ ವಿವಾಹದಲ್ಲಿಲ್ಲ ಹಿಜಾಬ್ – ವೀಡಿಯೋ ವೈರಲ್, ನೆಟ್ಟಿಗರಿಂದ ಆಕ್ರೋಶ

    ಟೆಹ್ರಾನ್: ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ನೇತೃತ್ವದ ಕಟ್ಟಾ ಇಸ್ಲಾಮಿಕ್ ಆಡಳಿತವು ಇದೀಗ ಹೊಸ ವಿವಾದಕ್ಕೆ ಸಿಲುಕಿಕೊಂಡಿದೆ. ಖಮೇನಿಯ ಆಪ್ತ ಸಹಾಯಕ ಶಮ್ಖಾನಿ (Ali Shamkhani) ಪುತ್ರಿಯ ವಿವಾಹದಲ್ಲಿ (Wedding) ವಧು ಹಾಗೂ ಆಕೆಯ ತಾಯಿ ಹಿಜಾಬ್ (Hijab) ಧರಿಸದೇ ಕಾಣಿಸಿಕೊಂಡಿದ್ದು ವಿವಾದಕ್ಕೀಡಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    2024ರಲ್ಲಿ ಟೆಹ್ರಾನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಈ ಮದುವೆ ನಡೆದಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸದ್ದು ಮಾಡುತ್ತಿದೆ. ಹಿಜಾಬ್ ಧರಿಸುವುದು ಮಹಿಳೆಯ ಕರ್ತವ್ಯ ಎಂದು ಪ್ರತಿಪಾದಿಸುವ ಖಮೇನಿ ಆಪ್ತನ ಮಗಳ ಮದುವೆಯಲ್ಲೇ ನಿಯಮ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮೂಲಕ ಇರಾನ್‌ನಲ್ಲಿ ಹಿಜಾಬ್ ವಿರುದ್ಧದ ಹೋರಾಟವನ್ನು ಬಲವಂತವಾಗಿ ಹತ್ತಿಕ್ಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಮ್ಖಾನಿ ಮುಖವಾಡ ಕಳಚಿ ಬಿದ್ದಿದೆ. ಇದನ್ನೂ ಓದಿ: ಚಿತ್ರದುರ್ಗ| ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲುಪಾಲು

    ಹಿಜಾಬ್ ಕಡ್ಡಾಯಗೊಳಿಸುವ ಕಾನೂನು ತೆರವುಗೊಳಿಸುವಂತೆ ಇರಾನ್‌ನಾದ್ಯಂತ ಮಹಿಳೆಯರು 2022ರಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ವೇಲೆ ಶಮ್ಖಾನಿ ರಾಷ್ಟ್ರೀಯ ಭದ್ರತಾ ಮಂಡಳಿಯ ನಾಯಕತ್ವ ವಹಿಸಿದ್ದರು. ಅಲ್ಲದೇ ಪ್ರತಿಭಟನೆಯಲ್ಲಿ ತೊಡಗಿದ್ದ ಮಹಿಳೆಯರನ್ನು ಹಿಂಸಿಸಲಾಗಿತ್ತು. ಆದರೆ ಶಮ್ಖಾನಿ ಪುತ್ರಿಯ ವಿವಾಹದಲ್ಲಿ ವಧು ಹಾಗೂ ಆಕೆಯ ತಾಯಿ ಹಿಜಾಬ್ ಧರಿಸದೇ ಇರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಇದನ್ನೂ ಓದಿ: ರಷ್ಯಾದಿಂದ ಶೀಘ್ರದಲ್ಲೇ ಇನ್ನಷ್ಟು S-400 ಭಾರತಕ್ಕೆ – 10,000 ಕೋಟಿ ಡೀಲ್‌ ಫೈನಲ್‌

    ವೀಡಿಯೋದಲ್ಲಿ ಶಮ್ಖಾನಿ ಪುತ್ರಿ ಬಿಳಿಬಣ್ಣದ ಸ್ಟಾçಪ್‌ಲೆಸ್ ಉಡುಗೆಯನ್ನು ಧರಿಸಿದ್ದು, ಪತ್ನಿ ನೀಲಿ ಬಣ್ಣದ ವೆಸ್ಟರ್ನ್ ಶೈಲಿಯ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಹಿಜಾಬ್ ಕಡ್ಡಾಯ ನಿಯಮವನ್ನು ದಶಕಗಳಿಂದ ಒತ್ತಾಯವಾಗಿ ಹೇರಲಾಗುತ್ತಿರುವ ಇರಾನ್‌ನಲ್ಲಿ ಈ ವೀಡಿಯೋ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: H-1ಬಿ ವೀಸಾ ಶುಲ್ಕ ಹೆಚ್ಚಳ – ವಾಸ್ತವ್ಯ ಅವಧಿ ವಿಸ್ತರಣೆ ಕೋರಿದ ಅರ್ಜಿಗಳಿಗೆ ಅನ್ವಯಿಸಲ್ಲ

    ಇನ್ನು ಈ ಕುರಿತು ಇರಾನ್‌ನಿಂದ ಗಡಿಪಾರಾದ ಮಹಿಳಾ ಪರ ಹೋರಾಟಗಾರ್ತಿ ಮಸಿಹ್ ಅಲಿನೆಜಾದ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಇರಾನ್‌ನ ಉನ್ನತ ನಾಯಕರಲ್ಲಿ ಒಬ್ಬರಾದ ಶಮ್ಖಾನಿ ಅವರ ಮಗಳು ಸ್ಟಾçಪ್‌ಲೆಸ್ ಉಡುಗೆಯಲ್ಲಿ ಅದ್ಧೂರಿ ವಿವಾಹ ಮಾಡಿಕೊಂಡಿದ್ದಾರೆ. ಕೂದಲು ತೋರಿಸಿದ್ದಕ್ಕಾಗಿ ಅದೇ ಇರಾನ್‌ನಲ್ಲಿ ಸಾಮಾನ್ಯ ಮಹಿಳೆಯರನ್ನು ಹೊಡೆದು ಕೊಲ್ಲಲಾಯಿತು. ಇದನ್ನೇ ಬೂಟಾಟಿಕೆ ಎನ್ನುವುದು. ಇತರ ಹೆಣ್ಣುಮಕ್ಕಳಿಗೆ ಹೇಗಿರಬೇಕೆಂದು ಬೋಧಿಸುತ್ತಾರೆ. ಇವರ ಹೆಣ್ಣುಮಕ್ಕಳು ಡಿಸೈನರ್ ಉಡುಗೆ ಧರಿಸಿ ಓಡಾಡುತ್ತಾರೆ. ಗುಂಡು, ಲಾಠಿ ಪ್ರಹಾರ, ಜೈಲುಶಿಕ್ಷೆಯ ಮೂಲಕ ಇಸ್ಲಾಮಿಕ್ ಮೌಲ್ಯಗಳನ್ನು ಹೇರುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ತುಮಕೂರು | ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಸಾವು

  • ಹಲಾಲ್ ಮಾಂಸ ಎಂದರೇನು? ಹಲಾಲ್ ಕಟ್ ಏನು?

    ಹಿಜಬ್ ಗಲಾಟೆಯ ಬಳಿಕ ಮುಸ್ಲಿಂ ವರ್ತಕರಿಗೆ ಹಿಂದೂಗಳ ಜಾತ್ರೆಯಲ್ಲಿ ಬಹಿಷ್ಕಾರ ಹಾಕಲಾಯಿತು. ಬಹಿಷ್ಕಾರದ ಮುಂದುವರಿದ ಭಾಗವಾಗಿ ಈಗ ಹಲಾಲ್ ಮಾಂಸಗಳನ್ನು ಬಹಿಷ್ಕರಿಸುವಂತೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

    ಯುಗಾದಿ ಮರು ದಿವಸ ಕರ್ನಾಟಕದ ಕೆಲ ಭಾಗಗಳಲ್ಲಿ ಆಚರಿಸುವ ಹೊಸತೊಡಕು ವೇಳೆ ಮಾಂಸ ತಿನ್ನಲಾಗುತ್ತದೆ. ಈ ವೇಳೆ ಹಲಾಲ್ ಮಾಂಸವನ್ನು ಸೇವಿಸದಂತೆ ಕರೆ ನೀಡಿದೆ. ಮುಸ್ಲಿಮ್ ದೇವರಿಗೆ ಅರ್ಪಣೆ ಮಾಡಿದ ಬಳಿಕ ಹಿಂದೂ ದೇವರಿಗೆ ಅರ್ಪಣೆ ಮಾಡುವುದು ಸರಿಯಲ್ಲ ಎಂದು ಹಿಂಜಾವೇ ಹೇಳಿದೆ. ಹೀಗಾಗಿ ಇಲ್ಲಿ ಹಲಾಲ್ ಮಾಂಸದ ಬಗ್ಗೆ ಕಿರು ಮಾಹಿತಿಯನ್ನು ನೀಡಲಾಗಿದೆ. ಇದನ್ನೂ ಓದಿ: ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ

    ಹಲವು ಮಾಂಸದಂಗಡಿಗಳು ಹಾಗೂ ಮುಸ್ಲಿಂ ಅಂಗಡಿಗಳ ಬ್ಯಾನರ್‍ಗಳಲ್ಲಿ ಹಲಾಲ್ ಪದ ಇರುತ್ತದೆ. ಮಾಂಸಗಳ ಗುಣಮಟ್ಟ ತೋರಿಸಲು ಹಲವು ಕಂಪನಿಗಳು ಹಲಾಲ್ ಕಟ್ ಪದವನ್ನು ಉಪಯೋಗಿಸುತ್ತವೆ. ಆದರೆ ಚೀನಾ ದೇಶದಲ್ಲಿ ಹಲಾಲ್ ಮಾಂಸವನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಹಲಾಲ್ ಮಾಂಸ, ಹಲಾಲ್ ಕಟ್ ಅಂದರೇನು ಎಂಬ ಪ್ರಶ್ನೆ ಸಹಜವಾಗಿಯೇ ಉದ್ಭವಿಸುತ್ತದೆ. ಇದನ್ನೂ ಓದಿ: ಎಚ್‍ಡಿಡಿ ಪತ್ನಿಗೆ ಐಟಿ ನೋಟಿಸ್

    ಹಲಾಲ್ ಮಾಂಸ ಯಾವುದು?
    ಇಸ್ಲಾಮ್ ಧರ್ಮಬದ್ಧವಾಗಿರುವ ಆಹಾರ ಕ್ರಮವೇ ಹಲಾಲ್. ಇಸ್ಲಾಮ್ ಧರ್ಮದಲ್ಲಿ ಪರಿಶುದ್ಧ ಆಹಾರವೆಲ್ಲವೂ ಹಲಾಲ್ ಎಂದು ಪರಿಗಣಿಸಲಾಗಿದೆ. ಪರಿಶುದ್ಧತೆ ಇಲ್ಲದ ಆಹಾರವು ಇಸ್ಲಾಮ್‍ನಲ್ಲಿ ನಿಷಿದ್ಧ. ಮಾಂಸದ ವಿಚಾರಕ್ಕೆ ಬಂದರೆ ಹಂದಿ, ಮನುಷ್ಯ, ಹುಲಿ, ಸಿಂಹ ಇತ್ಯಾದಿ ಮಾಂಸಗಳು ನಿಷಿದ್ಧವಾಗಿವೆ. ಕಾನೂನುಬದ್ಧವೆನಿಸಿದ ಕುರಿ, ಕೋಳಿ, ಒಂಟೆ, ದನ, ಮೀನು ಇತ್ಯಾದಿ ಪ್ರಾಣಿಗಳ ಮಾಂಸವು ಹಲಾಲ್ ಎನಿಸುತ್ತವೆ. ವಧಿಸುವ ಮೊದಲೇ ಸತ್ತಿದ್ದ ಪ್ರಾಣಿಗಳು ಹಾಗೂ ವಧಿಸುವ ವೇಳೆ ರೋಗ, ಅನಾರೋಗ್ಯದಿಂದ ಬಳಲುತ್ತಿರುವ ಪ್ರಾಣಿಗಳನ್ನು ಮುಸ್ಲಿಮರು ತಿನ್ನುವಂತಿಲ್ಲ.

    ಹಲಾಲ್ ಕಟ್ ಎಂದರೇನು?
    ತಿನ್ನುವ ಪ್ರಾಣಿಗಳನ್ನ ಕೊಲ್ಲುವುದಕ್ಕೂ ಇಸ್ಲಾಮ್‍ನಲ್ಲಿ ನಿರ್ದಿಷ್ಟ ಕ್ರಮ ಮತ್ತು ನಿಯಮಗಳಿವೆ. ಒಂದೊಂದು ಪ್ರಾಣಿಯ ವಧೆಗೂ ಪ್ರತ್ಯೇಕ ನಿಯಮವಿರುತ್ತದೆ. ಒಂದು ಸಾಮಾನ್ಯ ನಿಯಮವೆಂದರೆ ವಧಿಸಲ್ಪಟ್ಟ ಪ್ರಾಣಿಯ ದೇಹದಿಂದ ರಕ್ತವೆಲ್ಲವೂ ಹೊರಬರಬೇಕು. ಸೌದಿಯಲ್ಲಿರುವ ಮೆಕ್ಕಾ ಮಸೀದಿಯತ್ತ ಮುಖ ಮಾಡಿ ಪ್ರಾಣಿಯನ್ನು ವಧಿಸಲಾಗುತ್ತದೆ.

    ವಧಿಸುವ ವ್ಯಕ್ತಿಯು ಅಲ್ಲಾಹುವಿನ ನಾಮೋಚ್ಛಾರ ಮಾಡುತ್ತಾ ವಧಿಸಬೇಕು. ತಲೆಯನ್ನು ಒಡೆಯದೇ ಗಂಟಲು ಸೀಳಿ ಸಾಯಿಸಬೇಕು ಎಂಬಿತ್ಯಾದಿ ನಿಯಮಗಳು ಕುರಾನ್‍ನಲ್ಲಿ ತಿಳಿಸಲಾಗಿದೆ. ಕೋಳಿ ಅಥವಾ ಕುರಿಯನ್ನು ಕಡಿಯುವ ಮುಂಚೆ ಮುಸ್ಲಿಂ ಧರ್ಮದಲ್ಲಿ ಕುರಾನಿನ ಕೆಲ ಸಾಲುಗಳನ್ನು ಉಚ್ಚರಿಸಿ ಕೊಲ್ಲಲಾಗುತ್ತದೆ.

    ಹಿಂದೂ ಸಂಪ್ರದಾಯದಲ್ಲಿ ಪ್ರಾಣಿಗಳನ್ನು ನೇರವಾಗಿಯೇ ವಧಿಸುತ್ತಾರೆ. ಆದರೆ ಮುಸ್ಲಿಂ ಧರ್ಮದಲ್ಲಿ ಕೆಲ ರೀತಿ ರಿವಾಜುಗಳಿವೆ. ಮುಸ್ಲಿಂ ಧರ್ಮಗಳಲ್ಲಿ ಏಡಿಯನ್ನು ಹೆಚ್ಚಾಗಿ ತಿನ್ನಲು ಬಯಸುವುದಿಲ್ಲ. ಏಕೆಂದರೆ ತಲೆ ಇಲ್ಲದ ಪ್ರಾಣಿಗಳನ್ನು ತಿನ್ನುವುದು ಅವರಲ್ಲಿ ಮಹಾ ಪಾಪ ಎಂಬುವ ವಾಡಿಕೆಯಿದೆ. ಮುಸ್ಲಿಂ ಮಾಂಸದಂಗಡಿಗಳಲ್ಲಿ ಪ್ರಾಣಿಯನ್ನು ವಧಿಸುವ ಮೊದಲು ಅದರ ಬಾಯಿಗೆ ನೀರು ಹಾಕುತ್ತಾರೆ. ನಂತರ ಆ ಪ್ರಾಣಿಯ ಕತ್ತನ್ನು ಕತ್ತರಿಸುತ್ತಾರೆ. ಒಂದೊಂದು ಪ್ರಾಣಿಯನ್ನು ಸಾಯಿಸುವ ಕ್ರಮದಲ್ಲಿ ವ್ಯತ್ಯಾಸವಿರುತ್ತದೆ. ಆಯಾ ಪ್ರಾಣಿಗೆ ಅನುಗುಣವಾಗಿ ಈ ನಿಯಮವನ್ನು ಮಾಡಲಾಗಿದೆ.

  • ಲವ್ ಜಿಹಾದ್ ಹಿಂದೂ ತೀವ್ರಗಾಮಿಗಳನ್ನು ಸೃಷ್ಟಿಸುವ ಭೂತ: ಚಿದಂಬರಂ

    ಲವ್ ಜಿಹಾದ್ ಹಿಂದೂ ತೀವ್ರಗಾಮಿಗಳನ್ನು ಸೃಷ್ಟಿಸುವ ಭೂತ: ಚಿದಂಬರಂ

    ತಿರುವನಂತಪುರ: ಲವ್ ಜಿಹಾದ್, ನಾರ್ಕೊಟಿಕ್ ಜಿಹಾದ್ ಎಂಬುದು ಹಿಂದೂ ಯುವಕ, ಯುವತಿಯರನ್ನು ತೀವ್ರಗಾಮಿಗಳನ್ನಾಗಿಸುವುದಕ್ಕೆ ಸೃಷ್ಟಿಸಿರುವ ಒಂದು ಭೂತ. ಜಾತ್ಯತೀತ ರಾಷ್ಟ್ರ ಇಂತಹ ಮತಾಂಧತೆಯನ್ನು ಮೆಟ್ಟಿ ನಿಲ್ಲಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಕಿಡಿಕಾರಿದ್ದಾರೆ.

    ಕೆಲದಿನಗಳ ಹಿಂದೆ ನಾರ್ಕೊಟಿಕ್ ಜಿಹಾದ್ ಬಗ್ಗೆ ಕೇರಳದಲ್ಲಿನ ಕ್ಯಾಥೋಲಿಕ್ ಬಿಷಪ್ ಜೋಸೆಫ್ ಕಲ್ಲರಂಗತ್ ಅವರ ಹೇಳಿಕೆಗೆ ತೀವ್ರ ಆಕ್ಷೇಪವೆತ್ತಿರುವ ಚಿದಂಬರಂ, ನಾರ್ಕೊಟಿಕ್ ಜಿಹಾದ್ ಬಗ್ಗೆ ಬಿಷಪ್ ಹೇಳಿಕೆಯನ್ನು ಗಮನಿಸಿದರೆ ಅದು ವಿಕೃತ ಚಿಂತನೆಯಾಗಿದ್ದು, ಈ ಹೇಳಿಕೆ ಧರ್ಮಗಳ ನಡುವೆ ಒಡಕು ಸೃಷ್ಟಿಸಿ ಕೋಮು ಸಮರವನ್ನುಂಟುಮಾಡುವ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಂದ್ ಠುಸ್ ಪಟಾಕಿ – ಬೆಂಗಳೂರಿನಲ್ಲಿ ಎಂದಿನಂತೆ ಸಾಗುತ್ತಿದೆ ಜನ ಜೀವನ

    ಬಿಷಪ್ ಆಗಿ ದೀಕ್ಷೆ ಪಡೆದಿರುವ ಜೋಸೆಫ್ ಅವರು ಈ ರೀತಿ ಮಾತನಾಡಿರುವುದು ಸ್ವತಃ ನನಗೆ ಮತ್ತು ನನ್ನಂತಹ ಅನೇಕ ಮಂದಿಗೆ ನೋವುಂಟುಮಾಡಿದೆ. ಭಾರತದಲ್ಲಿ ಇಸ್ಲಾಮ್ ವಿಸ್ತರಣೆಯಾಗುತ್ತಿದೆ ಎಂಬುದಕ್ಕೆ ಯಾವುದೇ ಸಾಕ್ಷಿಯಿಲ್ಲ. ಇಸ್ಲಾಮ್‍ಗೆ ಜನ ಸಾಮೂಹಿಕ ಮತಾಂತರಗೊಳ್ಳುತ್ತಿರುವುದು ಸುಳ್ಳು ಎಂದು ತಮ್ಮ ನಿಲುವನ್ನು ಪ್ರತಿಪಾದಿಸಿದ್ದಾರೆ.

    ಜೋಸೆಫ್ ಕಲ್ಲರಂಗತ್, ಲವ್ ಜಿಹಾದ್ ಹಾಗೂ ನಾರ್ಕೋಟಿಕ್ ಜಿಹಾದ್ ಮೂಲಕ ಯುವಜನತೆಯನ್ನು ತಪ್ಪುದಾರಿಗೆ ಕೊಂಡೊಯ್ಯಲಾಗುತ್ತಿದೆ. ಶಸ್ತ್ರಾಸ್ತ್ರಗಳನ್ನು ಹಿಡಿದು ಹೋರಾಟ ಮಾಡಲಾಗದ ಪ್ರದೇಶಗಳಲ್ಲಿ ತೀವ್ರಗಾಮಿಗಳು ಲವ್ ಜಿಹಾದ್ ಹಾಗೂ ನಾರ್ಕೋಟಿಕ್ ಜಿಹಾದ್‍ಗಳ ಮೂಲಕ ಯುವಜನತೆಯನ್ನು ಹಾಳು ಮಾಡುತ್ತಿದೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ನಾವು ಹಿಂದೂಗಳನ್ನು ಮತಾಂತರ ಮಾಡ್ತೇವೆ ಏನ್ ಮಾಡ್ತೀರಾ- ಚರ್ಚ್ ಫಾದರ್ ಅವಾಜ್

    ಕಲ್ಲರಂಗತ್ ಹೇಳಿಕೆ ವಿರುದ್ಧ ಕಾಂಗ್ರೆಸ್ ವಿಪಕ್ಷ ನಾಯಕ ವಿ.ಡಿ ಸತೀಶನ್ ಸಹಿತ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಕೇರಳದಲ್ಲಿ ಕಾಂಗ್ರೆಸ್‍ಗೆ ಸ್ಪಲ್ಪ ಮಟ್ಟಿನ ಹಿನ್ನಡೆ ತರುವ ಸಾಧ್ಯತೆಗಳಿದ್ದು, ಈ ಹಿಂದೆ ಕೇರಳದಲ್ಲಿರುವ ಕ್ಯಾಥೋಲಿಕ್ ಸಮುದಾಯದಿಂದ ಕಾಂಗ್ರೆಸ್‍ಗೆ ಬಹುಪಾಲು ಬೆಂಬಲ ದೊರೆಯುತ್ತಿತ್ತು. ಇದೀಗ ಕಾಂಗ್ರೆಸ್ ನಾಯಕರ ಟೀಕೆಯಿಂದ ಈ ಬೆಂಬಲ ಕಳೆದುಕೊಳ್ಳುವ ಭೀತಿಯಲ್ಲಿದೆ.