Tag: ಇ.ಡಿ

  • 25 ರಿಂದ 35 ಲಕ್ಷಕ್ಕೆ ಸರ್ಕಾರಿ ಹುದ್ದೆ ಮಾರಾಟ: ತನಿಖೆ ನಡೆಸಲು ತ.ನಾಡು ಪೊಲೀಸರಿಗೆ ಇಡಿ ಪತ್ರ

    25 ರಿಂದ 35 ಲಕ್ಷಕ್ಕೆ ಸರ್ಕಾರಿ ಹುದ್ದೆ ಮಾರಾಟ: ತನಿಖೆ ನಡೆಸಲು ತ.ನಾಡು ಪೊಲೀಸರಿಗೆ ಇಡಿ ಪತ್ರ

    ಚೆನ್ನೈ: ತಮಿಳುನಾಡು ಪುರಸಭೆ ಆಡಳಿತ ಮತ್ತು ನೀರು ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಹುದ್ದೆಗಳಿಗೆ ಲಂಚ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ.

    ರಿಯಲ್ ಎಸ್ಟೇಟ್ ಸಂಸ್ಥೆ ಟಿವಿಹೆಚ್ ಮತ್ತು ಡಿಎಂಕೆ ಸಚಿವ ಕೆ.ಎನ್.ನೆಹರು ಅವರ ಸಂಬಂಧಿ ಒಳಗೊಂಡ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ದಾಳಿಯ ಸಂದರ್ಭದಲ್ಲಿ ಈ ಹಗರಣ ಬೆಳಕಿಗೆ ಬಂದಿದೆ ಎಂದು ತಮಿಳುನಾಡು ಪೊಲೀಸರಿಗೆ ಇಡಿ ತಿಳಿಸಿದೆ. ಇದನ್ನೂ ಓದಿ: ರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಸಹಾಯಕ ಎಂಜಿನಿಯರ್‌ಗಳು, ಜೂನಿಯರ್ ಎಂಜಿನಿಯರ್‌ಗಳು ಮತ್ತು ಪಟ್ಟಣ ಯೋಜನಾ ಅಧಿಕಾರಿಗಳಂತಹ ಹುದ್ದೆಗಳನ್ನು ಪಡೆಯಲು ಅಭ್ಯರ್ಥಿಗಳು 25 ಲಕ್ಷದಿಂದ 35 ಲಕ್ಷ ರೂ.ಗಳವರೆಗೆ ಲಂಚವನ್ನು ನೀಡಿದ್ದಾರೆ ಎಂದು ತಮಿಳುನಾಡು ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಇಡಿ ಆರೋಪಿಸಿದೆ. ಆ.6 ರಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ಹಸ್ತಾಂತರಿಸಿದ್ದಾರೆ.

    2024–2025 ಮತ್ತು 2025–2026 ವರ್ಷಗಳ ನೇಮಕಾತಿ ಪ್ರಕ್ರಿಯೆಯನ್ನು ಜಾಣ್ಮೆಯಿಂದ ನಿರ್ವಹಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಕೆಲವು ವ್ಯಕ್ತಿಗಳಿಗೆ ಪರೀಕ್ಷಾ ಮಾಹಿತಿ ಮೊದಲೇ ಲಭ್ಯವಿತ್ತು. ಲಂಚದ ಹಣವನ್ನು ನಗದು ರೂಪದಲ್ಲಿ ಸಂಗ್ರಹಿಸಿ ಹವಾಲಾ ಮಾರ್ಗಗಳ ಮೂಲಕ ರವಾನಿಸಲಾಗಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

    ಲಂಚ ನೀಡಿದ ಸುಮಾರು 150 ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ. ಪೊಲೀಸರಿಗೆ ಬರೆದ ಪತ್ರದಲ್ಲಿ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಹಲವಾರು ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಇಡಿ ಹೆಸರಿಸಿದೆ.

    ರಾಜ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರವೇ ಇಡಿ ತನಿಖೆ ಆರಂಭಿಸಬೇಕಾಗುತ್ತದೆ. ಹೀಗಾಗಿ, ಹಗರಣದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವಂತೆ ತಮಿಳುನಾಡು ಪೊಲೀಸರಿಗೆ ಇಡಿ ಒತ್ತಾಯಿಸಿದೆ.

  • ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ; 1.68 ಕೋಟಿ, 6 ಕೆಜಿ ಚಿನ್ನದ ಬಿಸ್ಕೆಟ್‌ ವಶಕ್ಕೆ

    ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ; 1.68 ಕೋಟಿ, 6 ಕೆಜಿ ಚಿನ್ನದ ಬಿಸ್ಕೆಟ್‌ ವಶಕ್ಕೆ

    – 14.13 ಕೋಟಿ ಹಣ ಇರುವ ಬ್ಯಾಂಕ್‌ ಖಾತೆ ಸೀಜ್‌

    ಕಾರವಾರ: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ (Satish Sail) ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದೆ.

    1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್‌ ಮಾಡಿದೆ. ಇದನ್ನೂ ಓದಿ: Karwar | ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ

    ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್‌ ಸೈಲ್‌ ಹೊರಗಿದ್ದಾರೆ. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

    ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಸತೀಶ್‌ ಸೈಲ್‌ ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕಾರವಾರ (ಉತ್ತರ ಕನ್ನಡ), ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್‌ – 6 ಪ್ರಕರಣಗಳಲ್ಲೂ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ 7 ವರ್ಷ ಜೈಲು

  • Karwar | ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ

    Karwar | ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ

    ಕಾರವಾರ: ಬೆಳಂಬೆಳಗ್ಗೆ ಕಾರವಾರ (Karwar) ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಮನೆಯ ಮೇಲೆ ಇ.ಡಿ (ED Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ವೇಳೆ ಶಾಸಕರಾಗಲಿ ಅಥವಾ ಅವರ ಕುಟುಂಬದವರಾಗಲಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಇರುವ ಕೆಲಸದವನನ್ನು ವಿಚಾರಣೆ ನಡೆಸುತಿದ್ದು, ಶಾಸಕರಿಗೂ ಬುಲಾವ್ ಹೋಗಿದೆ. ಇದನ್ನೂ ಓದಿ: ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆಯಲ್ಲಿ ಮಗಳ ಪಾತ್ರವಿಲ್ಲ – ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

    ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್ ಸೈಲ್ ಈ ಹಿಂದೆ ಆಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲದಿಂದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಹೈಕೋರ್ಟ್ ಮೂಲಕ ಜಾಮೀನು ಪಡೆದು ಸತೀಶ್ ಸೈಲ್ ಹೊರಬಂದಿದ್ದರು. ಇದನ್ನೂ ಓದಿ: ರಾಜ್ಯಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆ – ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್

    ಇನ್ನು ಆದಾಯಕ್ಕಿಂತ ಅಧಿಕ ಹಣ ಮಾಡಿರುವ ಆರೋಪ ಸಹ ಇವರ ಮೇಲೆ ಇದ್ದು, ಇದೀಗ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.  ಇದನ್ನೂ ಓದಿ: ನಿಂತಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ – ಏಳು ಮಕ್ಕಳು ಸೇರಿ 10 ಮಂದಿ ಸಾವು

  • ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

    ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

    ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ನೀಡುವ ಮಾಹಿತಿ ನಿಖರವಾಗಿರಬೇಕು. ಈ ಮೂಲಕ ಇ.ಡಿ (ED) ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Rouse Avenue Court) ಎಚ್ಚರಿಸಿದೆ.

    ಈ ಕುರಿತು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಮಾತನಾಡಿ, ಇ.ಡಿ ವಾಸ್ತವ ಅಂಶಗಳನ್ನು ನೀಡುವಾಗ ದಾರಿತಪ್ಪಿಸುವ ರೀತಿಯಲ್ಲಿ ಅಥವಾ ಮಾನಹಾನಿ ಮಾಡುವ ರೀತಿಯಲ್ಲಿರಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಸಂಸ್ಥೆಯ ಘನತೆಗೆ ಧಕ್ಕೆ ಬರುತ್ತದೆ. ಜೊತೆಗೆ ಸಂಬಂಧಪಟ್ಟ ವ್ಯಕ್ತಿಯ ಘನತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ ವಿರುದ್ಧ ಸಂಸದ ಸುಧಾಕರ್‌ ಸವಾಲ್‌

    ಇ.ಡಿಯಂತಹ ತನಿಖಾ ಸಂಸ್ಥೆಯು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದು ಹಾಗೂ ನ್ಯಾಯಯುತ, ಸಮಂಜಸ ಪ್ರಕ್ರಿಯೆಗಳನ್ನು ನಡೆಸುವ ಜವಾಬ್ದಾರಿ ಹೊಂದಿರುತ್ತದೆ. ಅದಲ್ಲದೇ ಇ.ಡಿಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳುವ ಮಾಹಿತಿಯೂ ನಿಖರವಾಗಿರಬೇಕು. ದಾರಿತಪ್ಪಿಸದ ಹಾಗೂ ರೋಚಕತೆಯಿಂದ ಮುಕ್ತವಾಗಿರಬೇಕು. ರಾಜಕೀಯವಾಗಿ ಪಕ್ಷಪಾತ ಮಾಡುವ ಉದ್ದೇಶದಿಂದ ಯಾವುದೇ ವಿಷಯವನ್ನು ಹಂಚಿಕೊಳ್ಳುವುದರಿಂದ ಸಂಸ್ಥೆಯ ಸಮಗ್ರತೆ ಹಾಳಾಗುತ್ತದೆ ಎಂದಿದ್ದಾರೆ.

    ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯ ತಿರಸ್ಕರಿಸಿ, ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

    ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಬಾನ್ಸುರಿ ಸ್ವರಾಜ್ ಅವರು ಜೈನ್ ಅವರ ಮನೆಯಿಂದ ಇ.ಡಿಯು 1.8 ಕೆಜಿ ಚಿನ್ನ, 133 ಚಿನ್ನದ ನಾಣ್ಯಗಳು ಮತ್ತು 3 ಕೋಟಿ ರೂ. ನಗದು ವಶಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಬಾನ್ಸುರಿ ಅವರ ವಿರುದ್ಧ ಜೈನ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

    ಇ.ಡಿಯು ತನ್ನ ಎಕ್ಸ್ ಖಾತೆಯಲ್ಲಿ, 2022ರ ಜೂ.6ರಂದು ಪಿಎಂಎಲ್‌ಎ ಅಡಿಯಲ್ಲಿ ಸತ್ಯೇಂದರ್ ಜೈನ್ ಮತ್ತು ಇತರರ ಮನೆಯಲ್ಲಿ ಶೋಧ ನಡೆಸಿದೆ. ಈ ವೇಳೆ ವಿವಿಧ ಶಂಕಾಸ್ಪದ ದಾಖಲೆಗಳು, ಡಿಜಿಟಲ್ ದಾಖಲೆಗಳು ಸೇರಿದಂತೆ 2.85 ಕೋಟಿ ರೂ. ನಗದು ಮತು ಒಟ್ಟು 1.80 ಕೆಜಿ ತೂಕದ 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬರೆದುಕೊಂಡಿತ್ತು.

    ಈ ಕುರಿತು ಜೈನ್ ಅವರು ಮಾತನಾಡಿ, ನಮ್ಮ ಮನೆಯಿಂದ ಇ.ಡಿಯು ಯಾವುದೇ ನಗದು ಅಥವಾ ಚಿನ್ನವನ್ನು ವಶಪಡಿಸಿಕೊಂಡಿಲ್ಲ. ಇ.ಡಿ ನಡೆಸಿರುವ ಪಂಚನಾಮೆಯಲ್ಲಿಯೂ ಈ ಅಂಶ ಸ್ಪಷ್ಟವಾಗಿ ದಾಖಲಾಗಿದೆ. ಆದಾಗ್ಯೂ ಬಾನ್ಸುರಿ ಸ್ವರಾಜ್ ಅವರು ನಮ್ಮ ಮನೆಯಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ ಎಂದು ಆಪಾದಿಸಿದ್ದರು.

    ಪ್ರಕರಣವನ್ನು ಪರಿಗಣಿಸಿದ ನ್ಯಾಯಾಧೀಶರು, ಇ.ಡಿ ಹಂಚಿಕೊಂಡಿರುವ ಟ್ವೀಟ್‌ನ್ನು ಗಮನಿಸಿದರೆ ನಿಜಕ್ಕೂ ಜೈನ್ ಅವರ ಮನೆಯಿಂದ ಹಣ ವಶಪಡಿಸಿಕೊಂಡಿದ್ದಾರೆ ಎನ್ನಿಸುತ್ತದೆ. ಹೀಗಾಗಿ ಬಾನ್ಸುರಿ ಸ್ವರಾಜ್ ವಿರುದ್ಧ ಜೈನ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದೇ ವೇಳೆ ನ್ಯಾಯಾಧೀಶರು, ಇಂತಹ ವಿಷಯದಲ್ಲಿ ಜಾಗೃತಿ ವಹಿಸಿ ಎಂದು ಇ.ಡಿಗೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

  • ಅಕ್ರಮ ಹಣ ವರ್ಗಾವಣೆ ಕೇಸ್‌ – ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಪುತ್ರ ಬಂಧನ

    ಅಕ್ರಮ ಹಣ ವರ್ಗಾವಣೆ ಕೇಸ್‌ – ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಪುತ್ರ ಬಂಧನ

    ರಾಯ್ಪುರ: ಮದ್ಯ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ (Bhupesh Baghel) ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Chaitanya Baghel) ಅವರ ಪುತ್ರನನ್ನು ಇ.ಡಿ ಬಂಧಿಸಿದೆ.

    ಶುಕ್ರವಾರ ಬೆಳಗ್ಗೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ವರ್ಷ ಎರಡನೇ ಬಾರಿಗೆ ಭಿಲಾಯಿಯಲ್ಲಿರುವ ಬಘೇಲ್ ಕುಟುಂಬದ ನಿವಾಸದ ಮೇಲೆ ದಾಳಿ ನಡೆಸಿದರು. ಬಳಿಕ ಬಘೇಲ್ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದನ್ನೂ ಓದಿ: ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ| ಸಂಸತ್‌ನಲ್ಲಿ ಮಹಾಭಿಯೋಗಕ್ಕೆ ತಯಾರಿ – ಸುಪ್ರೀಂ ಮೆಟ್ಟಿಲೇರಿದ ನ್ಯಾ.ಯಶವಂತ್ ವರ್ಮಾ

    ರಾಜ್ಯದ ರಾಯ್‌ಗಢ ಜಿಲ್ಲೆಯ ತಮ್ನಾರ್ ತಹಸಿಲ್‌ನಲ್ಲಿ ಅದಾನಿ ಗ್ರೂಪ್‌ನಿಂದ ಕಲ್ಲಿದ್ದಲು ಗಣಿ ಯೋಜನೆಗಾಗಿ ಮರಗಳನ್ನು ಕಡಿಯುತ್ತಿರುವ ವಿಷಯವನ್ನು ಡೈವರ್ಟ್‌ ಮಾಡಲು ಹೀಗೆ ಮಾಡಲಾಗಿದೆ ಎಂದು ಭೂಪೇಶ್ ಬಘೇಲ್ ಟೀಕಿಸಿದ್ದಾರೆ.

    ಚೈತನ್ಯ ಬಂಧನದ ಹಿನ್ನೆಲೆಯಲ್ಲಿ ಬಘೇಲ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ಶಾಸಕರು ಇಂದು ಬೆಳಗ್ಗೆ ವಿಧಾನಸಭಾ ಕಲಾಪಗಳನ್ನು ಬಹಿಷ್ಕರಿಸಿದರು. ‘ಬಘೇಲ್ ಮತ್ತು ನಮ್ಮ ಮೇಲೆ ಕಿರುಕುಳ ನೀಡಲು ಇಡಿ ಮುಂದಾಗಿದೆ. ಅದರ ಬಗ್ಗೆ ಮಾತನಾಡುವುದು ಮುಖ್ಯ. ಚೈತನ್ಯರ ಬಂಧನವನ್ನು ನಾವು ವಿರೋಧಿಸುತ್ತೇವೆ. ನಾವು ಕಲಾಪವನ್ನು ಬಹಿಷ್ಕರಿಸುತ್ತೇವೆ’ ಎಂದು ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯ 50, ಬೆಂಗ್ಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

    ಕಾಂಗ್ರೆಸ್ ನಾಯಕ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದ ಮದ್ಯ ಹಗರಣದ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಶುಕ್ರವಾರ ಅವರ ನಿವಾಸದಲ್ಲಿ ಮತ್ತೆ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

  • ಐಶ್ವರ್ಯಗೌಡ ವಂಚನೆ ಕೇಸ್ – ಡಿ.ಕೆ.ಸುರೇಶ್‌ಗೆ ED ಸಮನ್ಸ್

    ಐಶ್ವರ್ಯಗೌಡ ವಂಚನೆ ಕೇಸ್ – ಡಿ.ಕೆ.ಸುರೇಶ್‌ಗೆ ED ಸಮನ್ಸ್

    ಬೆಂಗಳೂರು: ಐಶ್ವರ್ಯಗೌಡ (Aishwarya Gowda) ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ.

    ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್‌ಗೆ ಇ.ಡಿ ಶಾಕ್ ಕೊಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ವಿಸ್ಕಿ ಪ್ರಚಾರ ಮಾಡೋದಕ್ಕೆ RCB ಸಂಭ್ರಮ ಕಾರ್ಯಕ್ರಮ ಮಾಡಿದ್ರಾ?: ಸಿ.ಟಿ.ರವಿ ವಾಗ್ದಾಳಿ

    ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಮಧ್ಯಾಹ್ನ 12-30 ಗಂಟೆಗೆ ಇ.ಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ ಇಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ. ಅವರು ಸಮನ್ಸ್ ಕೊಟ್ಟಿದ್ದಾರೆ. ಸಮನ್ಸ್ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ, ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಯ್ತು ಎಂದು ತಿಳಿಸಿದ್ದಾರೆ.

    ಗುರುವಾರ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಕಿಕವಾಗಿ ತಿಳಿಸಿದ್ದೇನೆ. ಈಗ ಇ-ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: EXCLUSIVE | ಲೋಕಾಯುಕ್ತ ಲಂಚ ಪ್ರಕರಣಕ್ಕೆ ಡೈರಿ ಮಿಸ್ಟರಿ – ನಿಂಗಪ್ಪ ಮನೆಯಲ್ಲಿದ್ದ 2 ಡೈರಿ ರಿಕವರಿ

    ನಾನು ಯಾವುದೇ ವ್ಯವಹಾರ ನಡೆಸಿಲ್ಲ. ಅವರು (ಐಶ್ವರ್ಯಗೌಡ) ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತಾ ಹೇಳಿಕೊಂಡು ಒಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇ.ಡಿಯವರು 7-8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಇ.ಡಿ ವಿಚಾರಣೆಗೆ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

  • ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ನಿರ್ಣಾಯಕ ದಿನ

    ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ನಿರ್ಣಾಯಕ ದಿನ

    – ಬಿ ರಿಪೋರ್ಟ್ ವಿರೋಧಿಸಿ ಇ.ಡಿ ವಾದ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaih) ಅವರಿಗೆ ಇಂದು ಮಹತ್ವದ ದಿನ. ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ನೀಡಲಿದೆ.

    ಸುಮಾರು ನಾಲ್ಕು ತಿಂಗಳುಗಳ ಕಾಲ ತನಿಖೆ ನಡೆಸಿದ ಲೋಕಾಯುಕ್ತ ಸಿಎಂ ಮತ್ತು ಸಿಎಂ ಪತ್ನಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿತ್ತು. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಅಂತಿಮ ವರದಿ ಸಲ್ಲಿಸಿತ್ತು. ಆದರೆ ಅಂತಿಮ ವರದಿ ಪ್ರಶ್ನಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅಂತಿಮ ವರದಿಯಲ್ಲಿ ಇರುವ ಲೋಪದೋಷಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ಇಂದು ಆದೇಶ ನೀಡಲಿದೆ. ಇದನ್ನೂ ಓದಿ: ಇಂದು ಪಿಯುಸಿ ಫಲಿತಾಂಶ ಪ್ರಕಟ – ಯಾವ ವೆಬ್‌ಸೈಟ್‌ನಲ್ಲಿ ನೋಡಬಹುದು? ಚೆಕ್‌ ಮಾಡೋದು ಹೇಗೆ?

    ಆದರೆ ಸ್ನೇಹಮಯಿ ಕೃಷ್ಣ ಅವರ ಜೊತೆಗೆ ಇ.ಡಿ ಅಧಿಕಾರಿಗಳು ಬಿ ರಿಪೋರ್ಟ್ ವಿರುದ್ಧ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಇ.ಡಿಯ ತಕರಾರು ಅರ್ಜಿ ಮಾನ್ಯತೆಯ ವಾದ-ಪ್ರತಿವಾದ ನಡೆಯಲಿದೆ. ಈ ನಡುವೆ ಬಿ ರಿಪೋರ್ಟ್ ಅನ್ನು ನ್ಯಾಯಾಲಯ ಒಪ್ಪುತ್ತಾ ಅಥವಾ ಮರು ತನಿಖೆಗೆ ಆದೇಶ ನೀಡುತ್ತಾ ಎಂದು ಕಾದುನೋಡಬೇಕಿದೆ.  ಇದನ್ನೂ ಓದಿ: ಬೆಟ್ಟಿಂಗ್ ಆಪ್ ಪ್ರಮೋಟ್ ಆರೋಪ – ಸೋನು ಗೌಡ ಸೇರಿ 100ಕ್ಕೂ ಹೆಚ್ಚು ರೀಲ್ಸ್ ಸ್ಟಾರ್‌ಗಳ ವಿಚಾರಣೆ

  • ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್‌ ಚಿಟ್ ಯತ್ನ: ವಿಜಯೇಂದ್ರ ಆರೋಪ

    ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್‌ ಚಿಟ್ ಯತ್ನ: ವಿಜಯೇಂದ್ರ ಆರೋಪ

    ಬೆಂಗಳೂರು: ಮುಡಾ ವಿಚಾರದಲ್ಲಿ (MUDA Case) ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದವರು (Lokayukta) ಕ್ಲೀನ್‌ ಚಿಟ್ ಕೊಟ್ಟಿರುವ ಸಾಧ್ಯತೆ ಇದೆ. ಕ್ಲೀನ್‌ ಚಿಟ್ ಕೊಟ್ಟಿದ್ದರೆ, ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ವರದಿಯಾದಂತೆ ಲೋಕಾಯುಕ್ತ ತನಿಖಾ ಸಂಸ್ಥೆ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ಕ್ಲೀನ್‌ ಚಿಟ್ ಕೊಟ್ಟಿದ್ದೇ ಆದರೆ, ಲೋಕಾಯುಕ್ತ ತನಿಖೆ ಸರಿಯಾಗಿ ಆಗುತ್ತಿಲ್ಲ. ಸಿಎಂ ಒತ್ತಡಕ್ಕೆ ಮಣಿದಿದ್ದಾರೆ ಎಂದು ಬಿಜೆಪಿ ಹಲವು ದಿನಗಳಿಂದ ವ್ಯಕ್ತಪಡಿಸಿದ ಅನುಮಾನಗಳು ಸತ್ಯವಾದಂತೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದ್ರು ಸ್ವಾಗತ: ಚೆಲುವರಾಯಸ್ವಾಮಿ

    ಮೊನ್ನೆ ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರೆಸ್ ನೋಟನ್ನೂ ಬಿಡುಗಡೆ ಮಾಡಿದೆ. ಮುಡಾದಲ್ಲಿ ಎಷ್ಟು ಕೋಟಿ ಹಗರಣ ನಡೆದಿದೆ ಎಂಬುದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮತ್ತೊಂದು ಕಡೆ ರಾಜ್ಯ ಹೈಕೋರ್ಟ್ ಕೂಡ ಮೈಸೂರಿನ ಮುಡಾ ಹಗರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಇದರ ನಡುವೆ ಮುಖ್ಯಮಂತ್ರಿಗಳೂ ಸೇರಿ ರಾಜ್ಯ ಸರ್ಕಾರವು ಮಾನ್ಯ ರಾಜ್ಯಪಾಲರನ್ನು ಅವಹೇಳನಕಾರಿಯಾಗಿ ನಿಂದಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಚಲನಚಿತ್ರ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಸುದೀಪ್‌

    ಹೈಕೋರ್ಟ್ ತೀರ್ಪು ಬರುವ ಸಂದರ್ಭದಲ್ಲೇ ಲೋಕಾಯುಕ್ತ ವರದಿ ನೀಡಿದ್ದು ಸತ್ಯವಾದರೆ, ಇದು ಖಂಡಿತ ಸರಿಯಲ್ಲ. ಇದಕ್ಕೆ ಯಾವುದೇ ರೀತಿಯ ಪಾವಿತ್ರ‍್ಯತೆ ಇರುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ದೆಹಲಿ ಮುಕ್ತ – ಜೈಶಂಕರ್‌

    ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್‌ಚಿಟ್ ಕೊಡಲಾಗಿದೆ ಎಂಬುದು ನಮ್ಮೆಲ್ಲರ ಸ್ಪಷ್ಟ ಅಭಿಪ್ರಾಯ. ಪ್ರಶ್ನೆಗೆ ಉತ್ತರಿಸಿದ ಅವರು, ಇ.ಡಿ. ಆಧಾರರಹಿತವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಲು ಸಾಧ್ಯವಿಲ್ಲ. ಮುಡಾ ಹಗರಣ ಆಗಿದೆ ಎಂದಿದ್ದರೆ ಅದಕ್ಕೆ ಆಧಾರಗಳಿರುತ್ತವೆ. ಇ.ಡಿ. ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಆತುರಾತುರವಾಗಿ ಕ್ಲೀನ್‌ಚಿಟ್ ಪಡೆಯುವ ಕೆಲಸ ಮಾಡಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು. ಇದನ್ನೂ ಓದಿ: ಮಂಗಳೂರು ಬ್ಯಾಂಕ್ ದರೋಡೆ ಕೇಸ್‌ನಲ್ಲಿ ಎಲ್ಲಾ ಹಣ, ಚಿನ್ನಾಭರಣ ರಿಕವರಿ: ಪರಮೇಶ್ವರ್

  • EXCLUSIVE: ಮುಡಾ ಕೇಸ್; 13 ವರ್ಷದಲ್ಲಿ 4,921 ಕ್ಕೂ ಹೆಚ್ಚು ಸೈಟ್‌ಗಳ ಅಕ್ರಮ ಹಂಚಿಕೆ

    EXCLUSIVE: ಮುಡಾ ಕೇಸ್; 13 ವರ್ಷದಲ್ಲಿ 4,921 ಕ್ಕೂ ಹೆಚ್ಚು ಸೈಟ್‌ಗಳ ಅಕ್ರಮ ಹಂಚಿಕೆ

    – ಇದು 700 ಕೋಟಿಯಲ್ಲ, ಬರೋಬ್ಬರಿ 2800 ಕೋಟಿ ಅಕ್ರಮ?

    ಬೆಂಗಳೂರು: ಸಿಎಂ ವಿರುದ್ಧದ ಮುಡಾ (MUDA Case) ತನಿಖೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ಹಿಂದೆ 1,095 ಸೈಟ್‌ಗಳು ಅಕ್ರಮ ನಡೆದಿದೆ ಎನ್ನಲಾಗಿತ್ತು. ಆದರೆ, ತನಿಖೆಯ ಮುಂದುವರಿದ ಭಾಗದಲ್ಲಿ ಬರೋಬ್ಬರಿ 4,921 ಸೈಟ್‌ಗಳೇ ಅಕ್ರಮ ಎನ್ನೋದು ಬಯಲಾಗಿದೆ.

    50:50 ಅನುಪಾತ ಅಷ್ಟೇ ಅಲ್ಲ, 60:40 ಅನುಪಾತದಲ್ಲಿ ಲೇಔಟ್‌ಗೆ ಲೇಔಟ್‌ಗಳನ್ನೇ ಅಕ್ರಮ ಮಾಡಿದ್ದಾರೆ. ಅದಕ್ಕೆ ಪೂರಕ ದಾಖಲೆ ತಿದ್ದಿದ್ದಾರೆ ಎನ್ನುವುದು ಇ.ಡಿ ತನಿಖೆಯಲ್ಲಿ ಬಯಲಾಗಿದೆ. ಇದನ್ನೂ ಓದಿ: 19ನೇ ವಯಸ್ಸಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು – ಮಾಲೂರು ಪುರಸಭೆ ಸದಸ್ಯೆ ಆಯ್ಕೆ ಅಸಿಂಧು

    ಇ.ಡಿ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಸತ್ಯ ಬಯಲಾಗಿದೆ. ಇದು 700 ಕೋಟಿಯ ಅಕ್ರಮ ಅಲ್ಲ 2,800 ಕೋಟಿ ಅಕ್ರಮ. 13 ವರ್ಷದಲ್ಲಿ 4,921 ಕ್ಕೂ ಹೆಚ್ಚು ಸೈಟ್‌ಗಳ ಅಕ್ರಮ ಹಂಚಿಕೆ ಆಗಿದೆ ಎನ್ನಲಾಗಿದೆ.

    ಕೇವಲ 50:50 ಅನುಪಾತದಲ್ಲಷ್ಟೇ ಅಲ್ಲ, 60:40 ಅನುಪಾತದಲ್ಲೂ ಮೋಸ ಆಗಿದೆ. ಲೇಔಟ್‌ಗೆ ಲೇಔಟ್‌ಗಳೇ ಅಕ್ರಮ ಮಾಡಿರೋದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮುಡಾದ ಇಬ್ಬರು ಮಾಜಿ ಆಯುಕ್ತರಿಂದ ಅಕ್ರಮದ ಸರಮಾಲೆ ನಡೆದಿದೆ ಎನ್ನಲಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ಸೇರಿ ಅಕ್ರಮ ಲೇಔಟ್‌ಗಳ ನಿರ್ಮಾಣ ನಡೆದಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮಂಡ್ಯದಲ್ಲಿ ಹೆಚ್‌ಡಿಕೆಗೆ ಬೃಹತ್ ಅಭಿನಂದನಾ ಸಮಾವೇಶ

    ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೈಟ್‌ಗಳನ್ನೇ ಮುಡಾ ಕಬ್ಜಾ ಮಾಡಿತ್ತು. ಕನ್ವರ್ಷನ್ ಲೇಔಟ್‌ಗಳಲ್ಲೂ ಅಕ್ರಮ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ.

  • MUDA Case; ಮುಡಾ ಮಾಜಿ ಆಯುಕ್ತ ನಟೇಶ್‌ ED ವಶಕ್ಕೆ

    MUDA Case; ಮುಡಾ ಮಾಜಿ ಆಯುಕ್ತ ನಟೇಶ್‌ ED ವಶಕ್ಕೆ

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA Scam Case) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ಇ.ಡಿ (ED) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ನಟೇಶ್‌ (Natesh) ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದಾರೆ. ನಟೇಶ್‌ರನ್ನು ಬಂಧಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಮುಡಾ ಹಗರಣದಲ್ಲಿ ಮುಂದುವರಿದ ಇಡಿ ಬೇಟೆ – ಸಿಎಂ ಆಪ್ತ, ಬಿಲ್ಡರ್, ಮಾಜಿ ಆಯುಕ್ತರಿಗೂ ಶಾಕ್; ದಿನವಿಡೀ ಶೋಧ!

    ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳ ಅಕ್ರಮ ಹಂಚಿಕೆಯಾಗಲು ಪ್ರಾಧಿಕಾರದ ಹಿಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ್‌ ಕಾರಣ ಎಂದು ಆರೋಪಿಸಲಾಗಿತ್ತು.

    ಈ ಹಿನ್ನೆಲೆಯಲ್ಲಿ ನಟೇಶ್‌ ಮನೆ ಮೇಲೆ ಸೋಮವಾರ ದಾಳಿ ಮಾಡಿ ಇ.ಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ, ತನಿಖೆಗೆ ನಟೇಶ್‌ ಅವರು ಸಹಕರಿಸಿಲ್ಲ ಎನ್ನಲಾಗಿದೆ. ನಾನು ಪ್ರಕರಣದಲ್ಲಿ ತಪ್ಪೆ ಮಾಡಿಲ್ಲ. ಸರ್ಕಾರದ ಆದೇಶ ಚಾಚು ತಪ್ಪದೇ ಪರಿಪಾಲನೆ ಮಾಡಿದ್ದೀನಿ. ಕಾರ್ತಿಕ್ ಲೇಔಟ್ ನಿರ್ಮಾಣ ಸಂದರ್ಭದಲ್ಲಿ ಆದ ಬೆಳವಣಿಗೆ ಗೊತ್ತಿಲ್ಲ. ಬಿಲ್ಡರ್ ಮಂಜುನಾಥ್ ಕಾನೂನಾತ್ಮಕವಾಗಿ ಲೇಔಟ್ ನಿರ್ಮಾಣ ಮಾಡಿದ್ದಾರೆ. 50:50 ಅನುಪಾತದಲ್ಲಿ ಯಾವುದೇ ಅವ್ಯವಹಾರವನ್ನೂ ಮಾಡಿಲ್ಲ. ಸರ್ಕಾರದ ನಡಾವಳಿಯಲ್ಲಿಯೇ ಇದೆ ಶೇ. 50:50 ಅನುಪಾತದಲ್ಲಿ ನೀಡಲಾಗಿದೆ. 2022 ಮತ್ತು 2023 ರಲ್ಲಿ ನಡಾವಳಿ ಬದಲಾವಣೆ ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ, ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಮನೆ ಮೇಲೂ ಇಡಿ ದಾಳಿ!

    ಇಂದು ಬೆಳಗ್ಗೆ ಎಂಟು ಗಂಟೆಯಿಂದ ಮತ್ತೆ ದಾಳಿ ಮುಂದುವರಿಸಲಾಗಿತ್ತು. ನಾಲ್ಕು ಜನ ಇಡಿ ಅಧಿಕಾರಿಗಳಿಂದ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಯಿತು. ನಿನ್ನೆ ಮಾಜಿ ಆಯುಕ್ತ ನಟೇಶ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದರು. ನಟೇಶ್ ಮುಡಾ ಆಯುಕ್ತರಾಗಿದ್ದಾಗ ಸಿಎಂ ಪತ್ನಿಗೆ ಸೈಟ್ ಹಂಚಿಕೆಯಾಗಿತ್ತು.