ನವದೆಹಲಿ: ಅಕ್ರಮ ಗಣಿಗಾರಿಕೆ (Illegal Mining) ಪ್ರಕರಣದಲ್ಲಿ ಪಂಜಾಬ್‌ನ (Punjab) ರೋಪರ್ ಜಿಲ್ಲೆಯ 13 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ಬುಧವಾರ ಶೋಧ ನಡೆಸಿದ್ದು, ಇಲ್ಲಿಯವರೆಗೆ 3 ಕೋಟಿ ರೂ. ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಲಂಧರ್ ಮೂಲದ ಇ.ಡಿ ತಂಡಗಳಿಂದ ಇನ್ನೂ ದಾಳಿಗಳು ನಡೆಯುತ್ತಿವೆ ಎಂದು ಅಭಿವೃದ್ಧಿಯ ಗೌಪ್ಯ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯು ಅಕ್ರಮ ಗಣಿಗಾರಿಕೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳು ಮತ್ತು ಘಟಕಗಳನ್ನು ಗುರುತಿಸಿ ಶೋಧ ಕಾರ್ಯ ಮುಂದುವರಿಸಿದೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ
ಕುಖ್ಯಾತ ಭೋಲಾ ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಇಡಿ ವಶಪಡಿಸಿಕೊಂಡ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಈ ಪ್ರಕರಣವು ಪ್ರಸ್ತುತ ಮನಿ ಲಾಂಡರಿಂಗ್ ಆಕ್ಟ್ (PMLA) ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಯ ನಿರ್ಣಾಯಕ ಹಂತದಲ್ಲಿದೆ. ಇದನ್ನೂ ಓದಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ
ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ (KOMUL) ನೇಮಕಾತಿ ಹಗರಣ (Recruitment Scam) ನಡೆದಿದ್ದು, 75ಕ್ಕೆ 75 ನೇಮಕಾತಿಯಲ್ಲೂ ಮೋಸ ಮಾಡಿರುವುದು ಸಾಬೀತಾಗಿದೆ.
ಕಾಂಗ್ರೆಸ್ ಶಾಸಕ ನಂಜೇಗೌಡ ವಿರುದ್ಧ ಆರೋಪ ಇದ್ದ ಹಿನ್ನೆಲೆ ತನಿಖೆ ಮಾಡಿದ ಇ.ಡಿ (ED) ಅಧಿಕಾರಿಗಳು ಲೋಕಾಯುಕ್ತಕ್ಕೆ (Lokayukta) ವರದಿ ರವಾನಿಸಿದ್ದಾರೆ. ಇ.ಡಿ ಅಧಿಕಾರಿಗಳು 75 ಅಭ್ಯರ್ಥಿಗಳ ಹೇಳಿಕೆ ದಾಖಲಿಸಿಕೊಂಡಿದ್ದು, ನೇಮಕಾತಿಗಾಗಿ ಹಣ ನೀಡಿರುವ ಬಗ್ಗೆ ಅಭ್ಯರ್ಥಿಗಳು ತಪ್ಪೊಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಇ.ಡಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ತನಿಖೆ ಮಾಡುವಂತೆ ಲೋಕಾಯುಕ್ತಕ್ಕೆ ಪತ್ರ ಬರೆದಿದೆ. ಇದನ್ನೂಓದಿ: ಇಂದು ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ – ಮಾಜಿ ಮಂತ್ರಿಗೆ ಜೈಲಾ.. ಬೇಲಾ?
ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ ಬರೆಯಲಾಗಿದೆ. ನೇಮಕಾತಿ ಪರೀಕ್ಷೆಯನ್ನು ಮಂಗಳೂರು ವಿವಿಯ ಅಧಿಕಾರಿಗಳು ನಡೆಸಿದ್ದರು. ಶಿಫಾರಾಸು ಪತ್ರ ಬರೆದಿದ್ದ ಪ್ರಭಾವಿ ನಾಯಕರ ವಿರುದ್ಧ ತನಿಖೆ ಮಾಡಲು ಇ.ಡಿ ಪತ್ರ ಬರೆದ ಆಧಾರದ ಮೇಲೆ ಲೋಕಾಯುಕ್ತ ಸರ್ಕಾರಕ್ಕೆ ಪತ್ರ ಬರೆದಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ಡಿಜಿ ಪ್ರಶಾಂತ್ ಠಾಕೂರ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದನ್ನೂಓದಿ: ಕರ್ನಾಟಕದಲ್ಲಿ 70.03% ಮತದಾನ – ಯಾವ ಕ್ಷೇತ್ರಗಳಲ್ಲಿ ಎಷ್ಟು ವೋಟಿಂಗ್ ಆಗಿದೆ?
ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Delhi Court) ವಜಾ ಮಾಡಿದೆ. ಏ.20 ರಂದು ಕಾಯ್ದಿರಿಸಿದ ತೀರ್ಪನ್ನು ನ್ಯಾ.ಕಾವೇರಿ ಬವೇಜಾ ಪ್ರಕಟಿಸಿದರು.
ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ್ದ ಸಿಬಿಐ ಪ್ರಾಸಿಕ್ಯೂಟರ್ ಪಂಕಜ್ ಗುಪ್ತಾ, ಜಾಮೀನು ಅರ್ಜಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ರಾಜಕೀಯ ಪ್ರಭಾವ ಹೊಂದಿರುವ ಪ್ರಬಲ ವ್ಯಕ್ತಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿಸೋಡಿಯಾ, ಇತರೆ ಆರೋಪಿಗಳ ಸಮಾನತೆಗೆ ಅರ್ಹರಲ್ಲ ಎಂದು ವಾದಿಸಿದರು. ಸಿಸೋಡಿಯಾ ಅವರು ಸಾಕ್ಷ್ಯ ನಾಶ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಳ್ಳಬಹುದು. ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಗುಪ್ತಾ ಹೇಳಿದರು. ಇದನ್ನೂ ಓದಿ: ವಿದೇಶದ ಮತದಾರರಿಗೆ ಭಟ್ಕಳ ಜಮಾತ್‍ಗಳಿಂದ ಗಾಳ- ವಿಮಾನ ಟಿಕೆಟ್ ಆಫರ್
ಇಡಿ ಪರ ವಾದಿಸಿದ್ದ ಜೋಹೆಬ್ ಹೊಸೈನ್, ತನಿಖೆಯಲ್ಲಿ ಯಾವುದೇ ವಿಳಂಬವಾಗಿಲ್ಲ. ತನಿಖಾ ವಿಳಂಬ ಆರೋಪವನ್ನು ಒಪ್ಪಲು ಸಾಧ್ಯವಿಲ್ಲ. ಪ್ರಕರಣದ ಸಾಕ್ಷ್ಯಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಹಲವು ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಈ ಹಂತದಲ್ಲಿ ಸಿಸೋಡಿಯಾ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಪತಂಜಲಿ ಆಯುರ್ವೇದದ ವಿರುದ್ಧ ಕ್ರಮ ಕೈಗೊಳ್ಳದ ಉತ್ತರಾಖಂಡ್ ಸರ್ಕಾರಕ್ಕೆ ಸುಪ್ರೀಂ ಚಾಟಿ
ತನಿಖಾ ಸಂಸ್ಥೆಗಳ ವಾದ ಪುರಸ್ಕರಿಸಿದ ಕೋರ್ಟ್, ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಎರಡನೇ ಸಾಮಾನ್ಯ ಅರ್ಜಿಯನ್ನು ವಜಾ ಮಾಡಿದೆ. ಸಿಸೋಡಿಯಾ ಅವರು ಈಗ ದೆಹಲಿ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿದೆ. ಇದಕ್ಕೂ ಮುನ್ನ ಅವರು ಸಾಮಾನ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೂಡಾ ವಜಾ ಮಾಡಿತ್ತು. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ 9 ಮಂದಿ ನಕ್ಸಲರ ಹತ್ಯೆ
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ (Excise Policy Case) ಜಾಮೀನು (Bail) ಪಡೆದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ (ED) ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ದೆಹಲಿ ಜಲಮಂಡಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾನುವಾರ ಮತ್ತೊಂದು ಸಮನ್ಸ್ (Summons) ಜಾರಿ ಮಾಡಿದೆ.
ಹಿಂದಿನ ಸಮನ್ಸ್‌ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಎರಡು ದೂರುಗಳನ್ನು ನೀಡಿತ್ತು. ಶನಿವಾರ ಇ.ಡಿ ನೀಡಿದ ದೂರಿನ ವಿಚಾರಣೆಗಾಗಿ ಅರವಿಂದ್ ಕೇಜ್ರಿವಾಲ್ ಶನಿವಾರ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರಾಗಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ 15,000 ರೂ. ಮೌಲ್ಯದ ಶ್ಯೂರಿಟಿ ಬಾಂಡ್ ಹಾಗೂ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೇ ಇದ್ದಿದ್ರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ: ಸಂಜಯ್ ರಾವತ್
ಒಂಬತ್ತನೇ ಸಮನ್ಸ್‌ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಹಾಜರಾಗುವಂತೆ ತನಿಖಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಗಾಯಕ ಸಿಧು ಮೂಸೆವಾಲಾ ತಾಯಿ
ಬಳ್ಳಾರಿ: ಬಳ್ಳಾರಿಯ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy)ಮನೆ ಹಾಗೂ ಕಚೇರಿ ಮೇಲೆ ಶನಿವಾರದಂದು ಇ.ಡಿ (E.D) ದಾಳಿ ನಡೆಸಿದ್ದು, ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಮುಂದುವರಿಯಲಿದೆ.
ಶನಿವಾರ ಬೆಳಗ್ಗೆ 6:30ಕ್ಕೆ ಭರತ್ ರೆಡ್ಡಿ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದರು. 24 ಗಂಟೆಗಳಾದರೂ ಇ.ಡಿ ಅಧಿಕಾರಿಗಳ ಪರಿಶೀಲನೆ ಮುಗಿಯಲೇ ಇಲ್ಲ. ದಿನವಿಡೀ ನಡೆದ ದಾಳಿಯಲ್ಲಿ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ. ಅಲ್ಲದೇ ಭರತ್ ಅಪ್ತರು ಮತ್ತು ಸಂಬಂಧಿಕರ ಮನೆ ಮತ್ತು ಕಚೇರಿಗಳ ಮೇಲೂ ಇ.ಡಿ ದಾಳಿ ನಡೆಸಿದೆ. ಭರತ್ ಅವರ ಚಿಕ್ಕಪ್ಪ ಪ್ರತಾಪ್ ರೆಡ್ಡಿ, ಆಪ್ತರಾದ ರತ್ನ ಬಾಬು ಮತ್ತು ಸತೀಶ್ ರೆಡ್ಡಿ ಮನೆಗಳಲ್ಲೂ ಶೋಧ ಕಾರ್ಯ ನಡೆಸಿದ್ದಾರೆ. ಇಂದು ಇನ್ನಷ್ಟು ಆಪ್ತರು ಮತ್ತು ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಬೆಂಗಳೂರು ರೈಲುಗಳು ಹೈಟೆಕ್- 6 ಮಾರ್ಗಗಳಲ್ಲಿ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಜಾರಿ
ಅದಾಯಕ್ಕಿಂತಲೂ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಇ.ಡಿ ದಾಳಿ ನಡೆಸಿದೆ. ಚುನಾವಣೆಗೂ ಮುನ್ನ ಸೆಂಟ್ರಲ್ ಐ.ಟಿ ತಂಡ ದಾಳಿ ನಡೆಸಿತ್ತು. ಬಳಿಕ ಐಟಿಯಿಂದ ಇ.ಡಿಗೆ ಪ್ರಕರಣ ವರ್ಗಾವಣೆಯಾದ ಹಿನ್ನೆಲೆ ನಿನ್ನೆ ತಡರಾತ್ರಿವರೆಗೂ ಭರತ್ ಹಾಗೂ ಅವರ ತಂದೆ ಒಡೆತನದ ರಾಘವೇಂದ್ರ ಎಂಟರ್‌ಪ್ರೈಸಸ್ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ- ಮೈತ್ರಿ ನಾಯಕರ ಭೇಟಿ ಇಂದೇ ನಡೆಯುತ್ತಾ?
ಮಾಜಿ ಶಾಸಕರಾದ ಸೂರ್ಯ ನಾರಾಯಣ ರೆಡ್ಡಿ ಅವರು ಭರತ್ ತಂದೆ. ಸುಮಾರು ವರ್ಷಗಳಿಂದ ಗ್ರಾನೈಟ್ ಉದ್ಯಮ ಮಾಡಿಕೊಂಡು ಬಂದಿದ್ದು, ನೂರಾರು ಕೋಟಿ ಆಸ್ತಿ ಹೊಂದಿದ್ದಾರೆ. ಆಂಧ್ರಪ್ರದೇಶದಲ್ಲಿ ಮತ್ತು ಕೊಪ್ಪಳ ಜೆಲ್ಲೆಯಲ್ಲಿ ಗ್ರಾನೈಟ್ ಕ್ವಾರಿಗಳನ್ನ ಹೊಂದಿದ್ದಾರೆ. ಇದನ್ನೂ ಓದಿ: ವ್ಯಾಲೆಂಟೈನ್ಸ್ ಡೇ ಸೇರಿ ಬೆಂಗಳೂರಿನಲ್ಲಿ 4 ದಿನ ಮದ್ಯ ಬಂದ್!
ನವದೆಹಲಿ: ನನಗೆ ನೀಡಿರುವ ನೋಟಿಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ. ಇ.ಡಿ (Enforcement Directorate) ಕೂಡಲೇ ಸಮನ್ಸ್ ಹಿಂಪಡೆಯಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.
ಸಮನ್ಸ್ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಬಿಜೆಪಿಯ ಒತ್ತಾಯದ ಮೇರೆಗೆ ನೋಟಿಸ್ ಕಳುಹಿಸಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೋಟಿಸ್ ಕಳುಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ
ಕೇಜ್ರಿವಾಲ್ ಅವರು ಬೆಳಿಗ್ಗೆ 11 ಗಂಟೆಗೆ ಕೇಂದ್ರ ತನಿಖಾ ಸಂಸ್ಥೆಯ ದೆಹಲಿ ಕಚೇರಿಯ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಪತ್ರ ಬರೆದು ಸಮನ್ಸ್ ಅನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ.
ದೆಹಲಿ ಉಪ ಮುಖ್ಯಮಂತ್ರಿ ಆಗಿದ್ದ ಮನೀಸ್ ಸಿಸೋಡಿಯಾ ಅವರನ್ನು ಬಂಧಿಸಿದೆ. ಈಗ ಬಿಜೆಪಿ ಆಜ್ಞೆಯ ಮೇರೆಗೆ ನನಗೆ ನೋಟಿಸ್ ನೀಡಿದೆ. ಇದು ಅಕ್ರಮ ಮತ್ತು ರಾಜಕೀಯ ಪ್ರೇರಿತ. ನೋಟಿಸ್ ಹಿಂಪಡೆಯಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ (Jet Airways) ಸಂಬಂಧಿಸಿದ 500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (Enforcement Directorate) ವಶಪಡಿಸಿಕೊಂಡಿದೆ.
ಕನಿಷ್ಠ 538 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ (Money Laundering Case) ತಡೆ ಕಾಯ್ದೆ ಅಥವಾ ಪಿಎಂಎಲ್‌ಎ-2002ರ ಅಡಿಯಲ್ಲಿ ಕೇಂದ್ರ ತನಿಖಾ ಸಂಸ್ಥೆ ಜಪ್ತಿ ಮಾಡಿದೆ. ಗೋಯಲ್ ಕುಟುಂಬಸ್ಥರ ಹೊರತಾಗಿ ಕೆಲವು ಆಸ್ತಿಗಳನ್ನು ಜೆಟೈರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.
ಕೆನರಾ ಬ್ಯಾಂಕ್ ಸಲ್ಲಿಸಿರುವ ವಂಚನೆ ಪ್ರಕರಣದಲ್ಲಿ ಇ.ಡಿ ನಿನ್ನೆ ಗೋಯಲ್ ಮತ್ತು ಇತರ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಎಫ್‌ಐಆರ್‌ನಲ್ಲಿ ಬ್ಯಾಂಕ್, ಜೆಟ್ ಏರ್‌ವೇಸ್‌ಗೆ 848 ಕೋಟಿ ರೂ. ವರೆಗಿನ ಸಾಲದ ಮಿತಿಗಳು ಮತ್ತು ಸಾಲಗಳನ್ನು ಮಂಜೂರು ಮಾಡಿದೆ. ಅದರಲ್ಲಿ 538 ಕೋಟಿ ರೂ. ಬಾಕಿ ಇದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಕಾರು ಅಪಘಾತ- ಸಹಾಯಕ್ಕಾಗಿ ಬಂದು ಎಣ್ಣೆ ಬಾಟ್ಲಿಯೊಂದಿಗೆ ಯುವಕರು ಎಸ್ಕೇಪ್
ಗೋಯಲ್ ಅವರನ್ನು ಪಿಎಂಎಲ್‌ಎ ಅಡಿಯಲ್ಲಿ ಸೆಪ್ಟೆಂಬರ್ 1 ರಂದು ಇ.ಡಿ ಬಂಧಿಸಿತ್ತು. ಅವರನ್ನು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿದೆ.
– ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋದ ಸಿಬಿಐ
ಪಾಟ್ನಾ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ರಾಷ್ಟ್ರೀಯ ಜನತಾ ದಳ (RJD) ನಾಯಕ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅನಾರೋಗ್ಯ ಕಾರಣಕ್ಕಾಗಿ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು, ಆದರೀಗ ಬ್ಯಾಡ್ಮಿಂಟನ್ (Badminton) ಆಡೋದ್ರಲ್ಲಿ ಅವರು ಬ್ಯುಸಿ ಆಗಿದ್ದಾರೆ.
ಅನಾರೋಗ್ಯದ ಕಾರಣಕ್ಕಾಗಿ ಜಾರ್ಖಂಡ್ ಹೈಕೋರ್ಟ್ (Jharkhand High Court) ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಲಾಗಿತ್ತು. ಆದ್ರೆ ಜಾಮೀನು ಪಡೆದು ಜೈಲಿನಿಂದ ಹೊರಬಂದ ಲಾಲೂ ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಟ ಆಡದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿರುವ ಸಿಬಿಐ (CBI), ಲಾಲೂ ಯಾದವ್ ಅವರ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಆದ್ರೆ ಲಾಲೂ ಪ್ರಸಾದ್ ಯಾದವ್ ಪರ ವಕೀಲರು, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಅವರ ಜಾಮೀನು ರದ್ದು ಮಾಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ’ತುಕ್ರ-ತನಿಯ’ ಕಥೆ ಹೇಳ್ತಿದ್ದಾರೆ ರಾಘು ಶಿವಮೊಗ್ಗ: ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್
ಮೇವು ಹಗರಣ ಸಂಬಂಧ ಬಿಹಾರದ ದೊರಾಂಡಾ ಖಜಾನೆಯಲ್ಲಿ ಇದ್ದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಆ ಬಳಿಕ ಆರೋಗ್ಯ ಸಂಬಂಧಿ ಕಾರಣಗಳಿಂದಾಗಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದು ಹೊರ ಬಂದ ಬಳಿಕ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ ಎಂದಿರುವ ಸಿಬಿಐ ಪರ ವಕೀಲರು, ಲಾಲೂ ಅವರ ಜಾಮೀನು ಏಕೆ ರದ್ದು ಮಾಡಬಾರದು? ಎಂದು ಸುಪ್ರೀಂ ಕೋರ್ಟ್‌ಗೆ ಕೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಹೊಸ ʻಎಲಿವೇಟೆಡ್ ವಾಕ್‌ವೇʼ ಆರಂಭ
ಸಿಬಿಐ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು, ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದ ಜಾರ್ಖಂಡ್ ಹೈಕೋರ್ಟ್ ಆದೇಶವು ದೋಷಪೂರಿತ ಹಾಗೂ ಕಾನೂನಾತ್ಮಕವಾಗಿ ಕೆಟ್ಟದ್ದು ಎಂದು ವಾದಿಸಿದ್ದಾರೆ. ಸಿಬಿಐನ ಈ ಮನವಿ ವಿರುದ್ಧ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಯಾದವ್ ಅವರು ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದನ್ನು ಪರಿಗಣಿಸಿ ಜಾಮೀನು ಮುಂದುವರೆಸಿ ಎಂದು ಮನವಿ ಮಾಡಿದರು. ಅಷ್ಟೇ ಅಲ್ಲ, ಲಾಲೂ ಪ್ರಸಾದ್ ಯಾದವ್ ಅವರು ಈಗಾಗಲೇ 42 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದೂ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: Chandrayaan-3 ಲ್ಯಾಂಡರ್‌ನಿಂದ ಚಂದ್ರನ ಮೇಲೆ ಇಳಿಯುತ್ತಿರುವ ರೋವರ್ – ವೀಡಿಯೋ ರಿಲೀಸ್ ಮಾಡಿದ ಇಸ್ರೋ
ಇದಕ್ಕೆ ತಿರುಗೇಟು ನೀಡಿದ ಸಿಬಿಐ ಪರ ವಕೀಲರು, ಲಾಲೂ ಪ್ರಸಾದ್ ಯಾದವ್ ಅವರು 3.5 ವರ್ಷ ಜೈಲಿನಲ್ಲಿ ಇದ್ದರು. ಆದರೆ ಅವರಿಗೆ ವಿಧಿಸಿರುವ 5 ವರ್ಷಗಳ ಜೈಲು ಶಿಕ್ಷೆ ನಿರಂತರವಾಗಿ ಇರಬೇಕು. ಜೈಲಿನಿಂದ ಆರೋಗ್ಯ ಸಮಸ್ಯೆ ಕಾರಣಕ್ಕೆ ಹೊರ ಬಂದಿರುವ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದನ್ನು ಗಮನಿಸಿದರೆ ನ್ಯಾಯಾಲಯ ಜಾಮೀನು ನೀಡಿರುವ ಆದೇಶವು ದೋಷಪೂರಿತ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು. ಬಳಿಕ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎ. ಎಸ್. ಬೋಪಣ್ಣ ಹಾಗೂ ಎಂ. ಎಂ. ಸುಂದರೇಶ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿದರು.
ಕೆಲ ದಿನಗಳ ಹಿಂದೆಯಷ್ಟೇ ಲಾಲೂ ಪ್ರಸಾದ್ ಯಾದವ್ ಅವರ ಮನೆ ಮೇಲೆ ದಾಳಿ ನಡೆದ್ದ ಜಾರಿ ನಿರ್ದೇಶನಾಲಯ ಲಾಲೂ ಪ್ರಸಾದ್ ಹಾಗೂ ಅವರ ಕುಟುಂಬಸ್ಥರಿಗೆ ಸೇರಿದ್ದ 6 ಕೋಟಿ ರೂ. ಮೌಲ್ಯದ ಆಸ್ತಿಯನ್ನ ಮುಟ್ಟುಗೋಲುಹಾಕಿಕೊಂಡಿತ್ತು.
ಏನಿದು ಮೇವು ಹಗರಣ?
1992 ರಿಂದ 1995ರ ಅವಧಿಯಲ್ಲಿ ಮೇವು ಹಗರಣ ನಡೆದಿತ್ತು. 950 ಕೋಟಿ ರೂ. ಮೊತ್ತದ ಭಾರೀ ಹಗರಣ ಇದಾಗಿದ್ದು, ಈ ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅವರನ್ನ ದೋಷಿ ಎಂದು ಪರಿಗಣಿಸಿ 5 ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿತ್ತು.
ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ತಮಿಳುನಾಡು (Tamil Nadu) ಸಚಿವ ವಿ ಸೆಂಥಿಲ್ ಬಾಲಾಜಿ (V.Senthil Balaji) ಅವರನ್ನು ಆ.25 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ (Court) ಆದೇಶ ಹೊರಡಿಸಿದೆ.
ಸೆಂಥಿಲ್ ಬಾಲಾಜಿ ಅವರ ಕಸ್ಟಡಿ ಅವಧಿ ಮುಗಿದ ಬಳಿಕ ಜಾರಿ ನಿರ್ದೇಶನಾಲಯ (Enforcement Directorate) ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್, ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿದೆ. ಇದನ್ನೂ ಓದಿ: ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ: ಸಿದ್ದರಾಮಯ್ಯ
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸೆಂಥಿಲ್ ಬಾಲಾಜಿಯನ್ನು 5 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲು ನ್ಯಾಯಾಧೀಶರು ಆಗಸ್ಟ್ 7 ರಂದು ಇ.ಡಿಗೆ ಅನುಮತಿ ನೀಡಿದ್ದರು. ಕಸ್ಟಡಿ ಅವಧಿ ಶನಿವಾರ ಅಂತ್ಯಗೊಂಡಿದ್ದರಿಂದ ಇ.ಡಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು.
ನವದೆಹಲಿ: ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ನಂತಹ ಕೇಂದ್ರೀಯ ಸಂಸ್ಥೆಗಳನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 14 ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress), ತೃಣಮೂಲ ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಜಗಮ್ ಮತ್ತು ರಾಷ್ಟ್ರೀಯ ಜನತಾ ದಳವೂ ಸೇರಿ 14 ವಿಪಕ್ಷಗಳು ಒಳಗೊಂಡಿರುವ ಅರ್ಜಿದಾರರು ಬಂಧನಕ್ಕೆ ಪೂರ್ವ ಮಾರ್ಗಸೂಚಿಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸಿಜೆಐ ಡಿ.ವೈ ಚಂದ್ರಚೂಡ್ (D.Y.Chandrachud) ಪೀಠದ ಮುಂದೆ ಮನವಿ ಮಾಡಿದರು. ಕೇಂದ್ರೀಯ ತನಿಖಾ ಸಂಸ್ಥೆಗಳ 95 ಪ್ರತಿಶತ ತನಿಖೆಗಳು ವಿರೋಧ ಪಕ್ಷಗಳ ನಾಯಕರ ವಿರುದ್ಧವಾಗಿವೆ. ಸಿಬಿಐ ಇಡಿಯನ್ನು ಸಂಪೂರ್ಣವಾಗಿ ನಮ್ಮ ವಿರುದ್ಧ ಬಳಸಲಾಗುತ್ತಿದೆ ಎಂದು ವಾದಿಸಿದರು.