Tag: ಇ.ಡಿ

  • ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ

    ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ

    ಯಾದಗಿರಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Maadal Virupakshappa) ಭ್ರಷ್ಟಾಚಾರ ಪ್ರಕರಣ ನಮ್ಮ ಪಕ್ಷಕ್ಕೆ ಮುಜುಗರ ತಂದಿದೆ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಬೇಸರ ವ್ಯಕ್ತಪಡಿಸಿದ್ದಾರೆ.

    ಯಾದಗಿರಿಯ ಶಹಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡ್ತಿದೆ. ಯಾರನ್ನೂ ರಕ್ಷಿಸುವ ಅಥವಾ ಟಾರ್ಗೆಟ್ ಮಾಡೋ ಕೆಲಸ ಮಾಡಲ್ಲ. ಇದೇ ಪರಿಸ್ಥಿತಿ ಕಾಂಗ್ರೆಸ್ (Congress) ಶಾಸಕರಿಗೆ ಆಗಿದ್ದರೆ ಇ.ಡಿ, ಐಟಿ, ಸಿಬಿಐ (CBI) ಆಯ್ತು ಈಗ ಲೋಕಾಯುಕ್ತಗೂ ಛೂ ಬಿಟ್ಟಿದ್ದಾರೆ ಅಂತಿದ್ರು. ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಅನುಭವಿಸ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಮಾಡಾಳ್‌ ಮನೆಗೆ ವಾಪಸ್‌ – ತೆರೆದ ವಾಹನದಲ್ಲಿ ಮೆರವಣಿಗೆ

    KSDL Corruption Case BJP MLA Madal Virupakshappa returns home

    ಮಾಡಾಳ್ ಅಂತಹವರ ಪರ ಜೈಕಾರ ಹಾಕಿ ಸಂಭ್ರಮಿಸೋದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ. ಅದು ಡಿಕೆ ಶಿವಕುಮಾರ್ (DK Shivakumar), ಕಾಂಗ್ರೆಸ್ ಸಂಸ್ಕೃತಿ, ಅದನ್ನ ಯಾರೂ ಅನುಸರಿಸಬಾರದು. ಡಿಕೆಶಿ ಜೈಲಿನಿಂದ ಹೊರ ಬಂದಾಗ ಅವರ ಬೆಂಬಲಿಗರು ಈ ರೀತಿ ಸಂಭ್ರಮಿಸಿದ್ದರು. ಆ ರೀತಿ ವೈಭವಿಕರಿಸೋದು ತಪ್ಪು. ಅದನ್ನ ಯಾರೂ ಮಾಡಬಾರದು ಎಂದು ಪಕ್ಷದ ಕಾರ್ಯಕರ್ತರಿಗೆ ಹಾಗೂ ಮಾಡಾಳ್ ಬೆಂಬಲಿಗರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ, ಹಿಂದೂ ವಿರೋಧಿ ನಿಲುವು – ಪಠ್ಯದಲ್ಲಿ ಗಾಂಧಿ ಹಿಂದೂ ನಾಯಕ ಎಂದು ಪರಿಚಯ

    Congress 1

    ಸಂಸದೆ ಸುಮಲತಾ (Sumalatha) ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಅದಕ್ಕಿನ್ನೂ 24 ಗಂಟೆ ಸಮಯವಿದೆ. ಗೊತ್ತಿಲ್ಲದ ಮಾಹಿತಿಯ ಬಗ್ಗೆ ನಾನು ಹ್ಹಾ ಅಂತಾನೂ ಹೇಳಲ್ಲ, ಹೂ ಅಂತಾನೂ ಹೇಳಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಸಾಮರ್ಥ್ಯ ಇರುತ್ತೆ. ಸಾಮರ್ಥ್ಯ ಇದ್ದವರು ಸೇರಿದಾಗ ಪಕ್ಷಕ್ಕೆ ಸಹಾಯ ಆಗುತ್ತೆ ಎಂದ ಅವರು, ಸೋಮಣ್ಣ ಪಕ್ಷ ಬಿಡ್ತಾರೆ ಅನ್ನೋದು ಊಹಾಪೋಹ. ಅದಕ್ಕೆ ನಾನು ಉತ್ತರಿಸಲ್ಲ ಎಂದು ಜಾರಿಕೊಂಡರು.

  • ಗೇಮಿಂಗ್ ಆ್ಯಪ್ ಸ್ಕ್ಯಾಮ್- ಉದ್ಯಮಿ ಮನೆಯಿಂದ 12 ಕೋಟಿ ನಗದು ವಶ

    ಗೇಮಿಂಗ್ ಆ್ಯಪ್ ಸ್ಕ್ಯಾಮ್- ಉದ್ಯಮಿ ಮನೆಯಿಂದ 12 ಕೋಟಿ ನಗದು ವಶ

    ಕೋಲ್ಕತ್ತಾ: ಮೊಬೈಲ್ ಗೇಮಿಂಗ್ ಆ್ಯಪ್ ಮೂಲಕ ವಂಚನೆ ನಡೆಸಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ED) ಕೋಲ್ಕತ್ತಾ(kolkata)ದ ಉದ್ಯಮಿಯೊಬ್ಬರಿಗೆ ಸಂಬಂಧಪಟ್ಟ 6 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು. ಈ ವೇಳೆ 12 ಕೋಟಿ ರೂ.ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿದೆ.

    ಇಡಿ ಅಧಿಕಾರಿಗಳ ತಂಡ ಬ್ಯಾಂಕ್ ಅಧಿಕಾರಿಗಳೊಂದಿಗೆ ಶನಿವಾರ ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿರುವ ಉದ್ಯಮಿ ಅಮೀರ್ ಖಾನ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ. ಈವರೆಗೆ ಉದ್ಯಮಿಯ ಮನೆಯಿಂದ 12 ಕೋಟಿ ರೂ.ಗೂ ಅಧಿಕ ಹಣವನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 6 ತಿಂಗಳು ರಜೆ ಹಾಕಿ- ಡೀನ್ ವಿರುದ್ಧ ಸಚಿವ ಸೋಮಣ್ಣ ಗರಂ

    ಭಾರೀ ಮೊತ್ತದ ಹಣವನ್ನು ಎಣಿಕೆ ಮಾಡಲು ಯಂತ್ರಗಳನ್ನು ತರಿಸಲಾಗಿದೆ. ಹಣವನ್ನು ಸಾಗಿಸಲು ಉದ್ಯಮಿಯ ಮನೆಗೆ ಟ್ರಕ್‌ಗಳನ್ನು ತರಲಾಗಿದೆ. ಇಡಿ ದಾಳಿಯ ಹಿನ್ನೆಲೆ ಕೇಂದ್ರದ ಪಡೆಗಳಿಂದ ಆ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಮಳೆ ಅವಾಂತರ: ಭಾರತ-ನ್ಯೂಜಿಲೆಂಡ್ ಟೆಸ್ಟ್ ಇನ್ನಿಂಗ್ಸ್ ರದ್ದು, ನಾಳೆ ಡ್ರಾ ಸಾಧ್ಯತೆ

    ವರದಿಗಳ ಪ್ರಕಾರ ಇ-ನಗ್ಗೆಟ್ಸ್(E-Nuggets) ಎಂಬ ಮೊಬೈಲ್ ಗೇಮಿಂಗ್ ಆ್ಯಪ್‌ನ ಬಳಕೆದಾರರಿಗೆ ವಂಚಿಸಿರುವ ಆರೋಪದ ಮೇಲೆ ಆರೋಪಿ ಅಮೀರ್ ಖಾನ್ ಮತ್ತು ಇತರರ ವಿರುದ್ಧ ಫೆಡರಲ್ ಬ್ಯಾಂಕ್ ಅಧಿಕಾರಿಗಳು ದೂರು ನೀಡಿದ್ದರು. ಈ ದೂರಿನ ಮೇರೆಗೆ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಉದ್ಯಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಲ್ಲಿದ್ದಲು ಹಗರಣ – 8 ಐಪಿಎಸ್‌ ಅಧಿಕಾರಿಗಳಿಗೆ ED ಸಮನ್ಸ್‌

    ಕಲ್ಲಿದ್ದಲು ಹಗರಣ – 8 ಐಪಿಎಸ್‌ ಅಧಿಕಾರಿಗಳಿಗೆ ED ಸಮನ್ಸ್‌

    ನವದೆಹಲಿ: ಪಶ್ಚಿಮ ಬಂಗಾಳದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಎಂಟು ಐಪಿಎಸ್ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ.

    ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್, ಕೋಟೇಶ್ವರ ರಾವ್, ಎಸ್.ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್, ತಥಾಗತ ಬಸು ಸೇರಿ 8 ಐಪಿಎಸ್‌ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಇದನ್ನೂ ಓದಿ: ನಕಲಿ ನೋಟು ಚಲಾವಣೆ – ಬಿಜೆಪಿ ಮಾಜಿ ಶಾಸಕನ 2ನೇ ಪತ್ನಿಗೆ 4 ವರ್ಷ ಜೈಲು ಶಿಕ್ಷೆ

    ಐಪಿಎಸ್ ಅಧಿಕಾರಿಗಳು ಪಶ್ಚಿಮ ಬಂಗಾಳದವರಾಗಿದ್ದು, ಅವರ ವಿಚಾರಣೆ ಆಗಸ್ಟ್ 21 ರಿಂದ ಆಗಸ್ಟ್ 31ರ ನಡುವೆ ಪ್ರಾರಂಭವಾಗುವ ಸಾಧ್ಯತೆ ಇದೆ. ಸಮನ್ಸ್‌ ಜಾರಿ ಮಾಡಿರುವ ಐಪಿಎಸ್‌ ಅಧಿಕಾರಿಗಳನ್ನು ಕಲ್ಲಿದ್ದಲು ಅಕ್ರಮ ಗಣಿಗಾರಿಕೆ ಮತ್ತು ಕಳ್ಳಸಾಗಣೆ ನಡೆಯುತ್ತಿರುವ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. ಅಧಿಕೃತ ವಾಹನಗಳಲ್ಲಿ ನಗದು ಸಾಗಣೆಯಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಮೂಲಗಳು ಹೇಳಿವೆ.

    ಟಿಎಂಸಿ ಯುವ ನಾಯಕ ಮತ್ತು ಪ್ರಕರಣದ ಪ್ರಮುಖ ಆರೋಪಿ ವಿನಯ್ ಮಿಶ್ರಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನಿಕಟ ಸಹವರ್ತಿ ಎಂದು ಹೇಳಲಾಗಿದ್ದು, ಈ ವರ್ಷ ಮಾರ್ಚ್‌ನಲ್ಲಿ ಇಡಿ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಇದನ್ನೂ ಓದಿ: ಜಾನುವಾರು ಅಕ್ರಮ ಸಾಗಣೆ – ಮಮತಾ ಬ್ಯಾನರ್ಜಿ ಆಪ್ತ ಬಂಧನ

    ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆರಂಭಿಸಿದ್ದು, ಇ.ಡಿ ಕೂಡ ಸಮಾನಾಂತರ ತನಿಖೆ ನಡೆಸುತ್ತಿದೆ. 2020ರ ನವೆಂಬರ್‌ನಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ ಪಶ್ಚಿಮ ಬಂಗಾಳದ ಪಶ್ಚಿಮ ಭಾಗಗಳಲ್ಲಿ ದಂಧೆ ನಡೆಯುತ್ತಿದೆ. ಹಲವು ವರ್ಷಗಳಿಂದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಕಲ್ಲಿದ್ದಲನ್ನು ಅಕ್ರಮವಾಗಿ ಗಣಿಗಾರಿಕೆ ಮಾಡಿ ಬ್ಲಾಕ್‌ ಮಾರ್ಕೆಟ್‌ನಲ್ಲಿ ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

    ಕಳೆದ ವರ್ಷ ಫೆಬ್ರವರಿ 21 ರಂದು ಸಿಬಿಐ ತಂಡವು ಅಭಿಷೇಕ್ ಅವರ ನಿವಾಸಕ್ಕೆ ಭೇಟಿ ನೀಡಿತ್ತು. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಆರೋಪದ ಮೇಲೆ ಅವರ ಪತ್ನಿ ರುಜಿರಾ ಮತ್ತು ಅವರ ಸೊಸೆ ಮೇನಕಾ ಗಂಭೀರ್ ಅವರಿಗೆ ಸಮನ್ಸ್‌ ನೀಡಿತ್ತು.

    ಕಲ್ಲಿದ್ದಲು ನಿರ್ವಾಹಕ ಅನೂಪ್ ಮಾಝಿ ಅಲಿಯಾಸ್ ಲಾಲಾ ಈ ಪ್ರಕರಣದ ಪ್ರಮುಖ ಶಂಕಿತ ಆರೋಪಿ. ಕೆಲ ಸಂಸದರು ಈ ಅಕ್ರಮ ವಹಿವಾಟಿನ ಫಲಾನುಭವಿಗಳಾಗಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಇಬ್ಬರನ್ನು ಬಂಧಿಸಿದೆ ಎಂದು ಇ.ಡಿ ತಿಳಿಸಿದೆ. ಇದನ್ನೂ ಓದಿ: ಕುಡುಗೋಲು ಹಿಡಿದು ಫಿಲ್ಮಂ ಸ್ಟೈಲ್‍ನಲ್ಲಿ ವ್ಯಕ್ತಿಯನ್ನು ಅಟ್ಟಾಡಿಸಿದ ಕೌನ್ಸಿಲರ್ ಪತಿ

    Live Tv
    [brid partner=56869869 player=32851 video=960834 autoplay=true]

  • ಪತ್ರಾ ಚಾವ್ಲ್‌ ಭೂಹಗರಣ: ಸಂಜಯ್‌ ರಾವತ್‌ಗೆ ಆ.22ರವರೆಗೆ ನ್ಯಾಯಾಂಗ ಬಂಧನ

    ಪತ್ರಾ ಚಾವ್ಲ್‌ ಭೂಹಗರಣ: ಸಂಜಯ್‌ ರಾವತ್‌ಗೆ ಆ.22ರವರೆಗೆ ನ್ಯಾಯಾಂಗ ಬಂಧನ

    ಮುಂಬೈ: ಪತ್ರಾ ಚಾವ್ಲ್‌ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್‌ ರಾವತ್‌ ಅವರನ್ನು ಆಗಸ್ಟ್‌ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಈ ಹಿಂದೆ ಇಡಿ ಕಸ್ಟಡಿಯಲ್ಲಿದ್ದ ಶಿವಸೇನಾ ನಾಯಕನಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಅವರಿಗೆ ಅಗತ್ಯ ಔಷಧ ಒದಗಿಸಲು ಸಹ ನ್ಯಾಯಾಲಯವು ಅನುಮತಿಸಿದೆ. ಇದನ್ನೂ ಓದಿ: 725.7 ಕೋಟಿ ಡೀಲ್‌ – ಗುಜರಾತ್‌ನ ಫೋರ್ಡ್‌ ಘಟಕ ಖರೀದಿಸಿದ ಟಾಟಾ

    ಇದಕ್ಕೂ ಮುನ್ನ ಆಗಸ್ಟ್ 1 ರಂದು ರಾವತ್ ಅವರನ್ನು ಇದೇ ಪ್ರಕರಣದಲ್ಲಿ ಆಗಸ್ಟ್ 4 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಕಳುಹಿಸಲಾಗಿತ್ತು. ಅದೇ ದಿನ, ಬಂಧನದ ನಂತರ ಇಡಿ ಅವರನ್ನು ವಿಶೇಷ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿತು.

    ಇಡಿ ಅಧಿಕಾರಿಗಳು ಜುಲೈ 31 ರಂದು ಶಿವಸೇನಾ ನಾಯಕನ ಮನೆಯ ಮೇಲೆ ದಾಳಿ ನಡೆಸಿದ್ದರು. ಹಲವು ಗಂಟೆಗಳ ಕಾಲ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಆಗಸ್ಟ್ 1 ರಂದು ಅವರನ್ನು ಬಂಧಿಸಲಾಯಿತು. ಇದನ್ನೂ ಓದಿ: CWG 2022: ಇಂದು ಕೊನೆಯ ದಿನ – ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರುವ ತವಕದಲ್ಲಿ ಭಾರತ

    ಈ ವರ್ಷ ಜೂನ್ 28 ರಂದು, 1,034 ಕೋಟಿ ರೂ. ಪತ್ರಾ ಚಾವ್ಲ್‌ ಭೂಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಂಜಯ್ ರಾವತ್ ಅವರಿಗೆ ಸಮನ್ಸ್ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಅಧಿವೇಶನ ಇಲ್ಲದಿದ್ದಾಗಲೂ ರಾಹುಲ್, ಸೋನಿಯಾ ಇಡಿ ತನಿಖೆಗೆ ಸಹಕರಿಸಿಲ್ಲ: ಖರ್ಗೆಗೆ ಪ್ರಹ್ಲಾದ್ ಜೋಶಿ ತಿರುಗೇಟು

    ಅಧಿವೇಶನ ಇಲ್ಲದಿದ್ದಾಗಲೂ ರಾಹುಲ್, ಸೋನಿಯಾ ಇಡಿ ತನಿಖೆಗೆ ಸಹಕರಿಸಿಲ್ಲ: ಖರ್ಗೆಗೆ ಪ್ರಹ್ಲಾದ್ ಜೋಶಿ ತಿರುಗೇಟು

    ಬೆಂಗಳೂರು: ಅಧಿವೇಶನ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಕರೆದರೆ, ನಾವು ಕಲಾಪಗಳಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಆಕ್ಷೇಪಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

    ಅಧಿವೇಶನ ಇಲ್ಲದ ಸಂದರ್ಭದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಕರೆದಾಗ ಕಾಂಗ್ರೆಸ್ ನಾಯಕರು ಸಹಕರಿಸಿದ್ದರಾ? ಆಗಲೂ ಅವರು ಇಡಿ ತನಿಖೆಗೆ ಸಹಕಾರ ನೀಡಿಲ್ಲ. ತನಿಖೆ ನಡೆಯಬಾರದು ಎಂಬುದು ಕಾಂಗ್ರೆಸ್‌ನವರ ಉದ್ದೇಶವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.

    ಇಡಿ ತನಿಖೆಗೆ ತಡೆ ಕೋರಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್ ಮುಂದೆಯೂ ಹೋಗಿದ್ದರು. ಆದರೆ ನ್ಯಾಯಾಲಯಗಳಲ್ಲಿ ಅವರಿಗೆ ತಡೆಯಾಜ್ಞೆ ಸಿಕ್ಕಿಲ್ಲ. ತನಿಖೆಯನ್ನು ತಡೆಯಲು ದೇಶದ ಸುಪ್ರೀಂ ಕೋರ್ಟ್ ನಿರಾಕರಿಸಿರುವಾಗ, ಇಡಿ ತನಿಖೆಯನ್ನು ನಿಲ್ಲಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

    ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಯಂಗ್ ಇಂಡಿಯಾ ಕಂಪನಿಯ ಸಿಇಒ ಆಗಿದ್ದಾರೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಕಂಪನಿಯದ್ದು ಪ್ರಮುಖ ಪಾತ್ರವಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಡಿ ತನಿಖೆಗೆ ಒಳಪಡಿಸಿದೆ. ಸಾರ್ವಜನಿಕ ಜೀವನದಲ್ಲಿರುವ ಖರ್ಗೆ ಅವರು ತನಿಖೆಗೆ ಸಹಕರಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ : ಅಮಿತ್ ಶಾ ವಿರುದ್ಧ ಸಿದ್ದು ಕಿಡಿ

    ಅಧಿವೇಶನ ನಡೆಯುವಾಗ ಇಡಿ ಸಮನ್ಸ್ ಮಾಡಿದರೆ ಹೇಗೆ ಎಂದು ಕೇಳುವ ಖರ್ಗೆ ಅವರು, ಸೆಷನ್ ಇಲ್ಲದಿದ್ದಾಗ ತನಿಖೆಗೆ ಎಷ್ಟು ಸಹಕಾರ ನೀಡಿದ್ದಾರೆ? ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿದಾಗ ಸದನದ ಕಲಾಪಕ್ಕೆ ಅಡ್ಡಿಪಡಿಸಿ, ಸದನ ನಡೆಯದಂತೆ ಮಾಡಿದವರು ಕಾಂಗ್ರೆಸ್‌ನವರು. ಸದನದ ಕಲಾಪ ನಡೆಯಲು ಖರ್ಗೆ ಅವರು ಎಷ್ಟು ಸಹಕಾರ ಕೊಟ್ಟಿದ್ದಾರೆ ಹೇಳಲಿ ಎಂದು ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.

    ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದವರಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯಬೇಕಾಗಿಲ್ಲ. ಕಾಂಗ್ರೆಸ್ ತನ್ನ ಪಕ್ಷದ ರಚನೆಯಲ್ಲೇ ಪ್ರಜಾಪ್ರಭುತ್ವವನ್ನು ಅನುಸರಿಸಲಿಲ್ಲ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವವನ್ನು ತಡೆ ಹಿಡಿದವರು ಯಾರು? ಇಂದು ದೇಶದ ಎಲ್ಲಾ ನ್ಯಾಯಾಲಯಗಳು ಕಾಂಗ್ರೆಸ್‌ನ ಮನವಿಯನ್ನು ತಿರಸ್ಕರಿಸಿದೆ. ಆದರೂ ಕಾಂಗ್ರೆಸ್ ನ್ಯಾಯಾಂಗ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದು ಪ್ರಜಾಪ್ರಭುತ್ವದ ವಿರೋಧಿ ಧೋರಣೆ ಅಲ್ಲವೇ ಎಂದು ಜೋಶಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿ ಮುಂದೆ ರಾಹುಲ್ ಗಾಂಧಿ ಜೀರೋ: ರೇಣುಕಾಚಾರ್ಯ

    Live Tv
    [brid partner=56869869 player=32851 video=960834 autoplay=true]

  • ಕಿಟಕಿಯಿಲ್ಲದ, ಉಸಿರಾಡಲು ಕಷ್ಟಕರವಾದ ಕೋಣೆಯಲ್ಲಿ ಇರಿಸಿದ್ದಾರೆ: ED ವಿರುದ್ಧ ಕೋರ್ಟ್‌ಗೆ ರಾವತ್‌ ದೂರು

    ಕಿಟಕಿಯಿಲ್ಲದ, ಉಸಿರಾಡಲು ಕಷ್ಟಕರವಾದ ಕೋಣೆಯಲ್ಲಿ ಇರಿಸಿದ್ದಾರೆ: ED ವಿರುದ್ಧ ಕೋರ್ಟ್‌ಗೆ ರಾವತ್‌ ದೂರು

    ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ನನ್ನನ್ನು ಕಿಟಕಿಯಿಲ್ಲದ, ಉಸಿರಾಡಲು ಕಷ್ಟಕರವಾದ ಕೋಣೆಯೊಳಗೆ ಇರಿಸಿದೆ ಎಂದು ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್‌ ರಾವತ್‌, ನ್ಯಾಯಾಲಯದ ಮುಂದೆ ದೂರು ನೀಡಿದ್ದಾರೆ.

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಗೆ ಸಂಬಂಧಿಸಿದ ವಿಷಯಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರಿಗೆ ರಾವತ್ ಗುರುವಾರ ಇ.ಡಿ ಬಗ್ಗೆ ಆರೋಪ ಮಾಡಿದರು. ನ್ಯಾಯಾಲಯವು ರಾವತ್ ಅವರ ಇ.ಡಿ ಕಸ್ಟಡಿಯನ್ನು ಆಗಸ್ಟ್ 8 ರವರೆಗೆ ವಿಸ್ತರಿಸಿದೆ. ಇದನ್ನೂ ಓದಿ: ಭೂ ಹಗರಣ ಪ್ರಕರಣ – ಸಂಜಯ್ ರಾವತ್ ಪತ್ನಿಗೆ ಇಡಿ ಸಮನ್ಸ್

    ವಿಚಾರಣೆಯ ಸಂದರ್ಭದಲ್ಲಿ, ಇಡಿ ವಿರುದ್ಧ ಯಾವುದೇ ದೂರು ಇದೆಯೇ ಎಂದು ನ್ಯಾಯಾಲಯವು ರಾವತ್ ಅವರನ್ನು ಕೇಳಿತು. ನಿರ್ದಿಷ್ಟವಾಗಿ ಏನೂ ಇಲ್ಲ ಎಂದು ಅವರು ಹೇಳಿದರು. ಆದರೆ ಕಿಟಕಿಯಿಲ್ಲದ, ಸರಿಯಾಗಿ ಗಾಳಿಯಾಡದ ಕೋಣೆಯಲ್ಲಿ ಇರಿಸಿದ್ದಾರೆ ಎಂದು ದೂರಿದ್ದಾರೆ. ನಂತರ ಈ ದೂರಿನ ಬಗ್ಗೆ ನ್ಯಾಯಾಲಯವು ತನಿಖಾ ಸಂಸ್ಥೆಯಿಂದ ವಿವರಣೆ ಕೇಳಿತು.

    ಇಡಿ ಪರವಾಗಿ ವಾದ ಮಂಡಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹಿತೇನ್ ವೆನೆಗಾವ್ಕರ್, ರಾವತ್ ಅವರನ್ನು ಎಸಿ ಕೋಣೆಯಲ್ಲಿ ಇರಿಸಲಾಗಿತ್ತು. ಅದರಲ್ಲಿ ಕಿಟಕಿ ಇರಲಿಲ್ಲ. ಅಲ್ಲಿ ಎಸಿ ವ್ಯವಸ್ಥೆ ಇದ್ದರೂ, ರಾವತ್‌ ಅವರ ಆರೋಗ್ಯದ ದೃಷ್ಟಿಯಿಂದ ಅದನ್ನು ಬಳಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಸೂಕ್ತ ಗಾಳಿ ವ್ಯವಸ್ಥೆ ಇರುವ ಕೊಠಡಿಯಲ್ಲೇ ಅವರನ್ನು ಇರಿಸಲಾಗುವುದು ಎಂದು ಇ.ಡಿ ನ್ಯಾಯಾಲಯಕ್ಕೆ ಭರವಸೆ ನೀಡಿತು. ಇದನ್ನೂ ಓದಿ: ನರೇಂದ್ರ ಮೋದಿ ಏನು ಮಾಡಿದರೂ ನಾವು ಹೆದರುವುದಿಲ್ಲ: ರಾಹುಲ್ ಗಾಂಧಿ

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್‌ ರಾವತ್‌ ಅವರನ್ನು ಭಾನುವಾರ ಇ.ಡಿ ಬಂಧಿಸಿತ್ತು. ಸೋಮವಾರ ನ್ಯಾಯಾಲಯವು ರಾವತ್‌ ಅವರನ್ನು ಆಗಸ್ಟ್ 4 ರವರೆಗೆ ಇ.ಡಿ ಕಸ್ಟಡಿಗೆ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

  • ನರೇಂದ್ರ ಮೋದಿ ಏನು ಮಾಡಿದರೂ ನಾವು ಹೆದರುವುದಿಲ್ಲ: ರಾಹುಲ್ ಗಾಂಧಿ

    ನರೇಂದ್ರ ಮೋದಿ ಏನು ಮಾಡಿದರೂ ನಾವು ಹೆದರುವುದಿಲ್ಲ: ರಾಹುಲ್ ಗಾಂಧಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ನಾವು ಹೆದರುವುದಿಲ್ಲ, ಅವರು ಏನ್ ಬೇಕಾದರೂ ಮಾಡಿಕೊಳ್ಳಲಿ. ನಾವು ದೇಶದ, ಸಂವಿಧಾನದ ರಕ್ಷಣೆಗೆ ಹೋರಾಟ ಮುಂದುವರಿಸುತ್ತೇವೆ. ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡುವ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿದ ಅವರು, ಇದು ಸಂಪೂರ್ಣ ಬೆದರಿಕೆಯ ಪ್ರಯತ್ನವಾಗಿದೆ. ಸ್ವಲ್ಪ ಒತ್ತಡ ಹಾಕಿದರೆ ಅವರು ನಮ್ಮನ್ನು ಮೌನಗೊಳಿಸಬಹುದು ಎಂದು ಅವರು ಭಾವಿಸುತ್ತಾರೆ. ಆದರೆ ನಾವು ಸುಮ್ಮನಿರುವುದಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಈ ದೇಶದಲ್ಲಿ ಏನು ಮಾಡುತ್ತಿದ್ದಾರೆ, ಪ್ರಜಾಪ್ರಭುತ್ವದ ವಿರುದ್ಧ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದನ್ನು ಬಹಿರಂಗಗೊಳಿಸುತ್ತೇವೆ ಎಂದರು.

    RAHULGANDHI

    ಓಡಿ ಹೋಗಲು ಬಿಡುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಓಡಿ ಹೋಗುವ ಬಗ್ಗೆ ಮಾತನಾಡುವವರು ಯಾರು? ಅವರು ಓಡಿ ಹೋಗುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನಾವು ಓಡಿ ಹೋಗುವ ಪ್ರಶ್ನೆಯೇ ಇಲ್ಲ. ಓಡಿ ಹೋಗುತ್ತಿರುವುದು ಬಿಜೆಪಿ ನಾಯಕರು. ಸತ್ಯಕ್ಕೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಒಂದು ವರ್ಷದಲ್ಲಿ ಸಚಿವನಾಗಿ ಹಲವು ಸವಾಲುಗಳನ್ನು ಎದುರಿಸಿದ್ದೇನೆ: ಆರಗ ಜ್ಞಾನೇಂದ್ರ

    ಪ್ರಕರಣ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿಚಾರಣೆ ಬಳಿಕ ದೆಹಲಿಯ ನ್ಯಾಷನಲ್ ಹೆರಾಲ್ಡ್ ಕಟ್ಟಡದಲ್ಲಿರುವ ಯಂಗ್ ಇಂಡಿಯಾ ಕಚೇರಿಯನ್ನು ಸೀಲ್ ಮಾಡಿದ್ದು ಅನುಮತಿ ಇಲ್ಲದೇ ಕಚೇರಿ ತೆರೆಯುವಂತಿಲ್ಲ ಎಂದು ಹೇಳಿದ್ದಾರೆ.

    ತನಿಖೆ ಮುಂದುವರಿದಿದ್ದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎರಡನೇ ಬಾರಿ ಸಮನ್ಸ್ ನೀಡಿದ್ದು, ಇಂದು ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇಡಿ ಕಾರ್ಯವೈಖರಿ ಮತ್ತು ಕೇಂದ್ರದ ಏಜೆನ್ಸಿಗಳ ವಿರುದ್ಧ ಕಾಂಗ್ರೆಸ್ ಲೋಕಸಭೆ, ರಾಜ್ಯಸಭೆಯಲ್ಲಿ ಇಂದು ಪ್ರತಿಭಟನೆ ನಡೆಸಿತ್ತು. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ಕಾಂಗ್ರೆಸ್‍ನವರಿಗೆ ಇರುವುದು ಹುಸಿ ಪ್ರೇಮ: ಬಿಜೆಪಿ

    Live Tv
    [brid partner=56869869 player=32851 video=960834 autoplay=true]

  • ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ – ಯಂಗ್‌ ಇಂಡಿಯಾ ಕಚೇರಿ ಸೀಲ್‌ ಮಾಡಿದ ED

    ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ – ಯಂಗ್‌ ಇಂಡಿಯಾ ಕಚೇರಿ ಸೀಲ್‌ ಮಾಡಿದ ED

    ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ಯಂಗ್‌ ಇಂಡಿಯಾ ಕಚೇರಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೀಲ್‌ ಮಾಡಿದೆ. ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ನಿವಾಸದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದೆ.

    ಮಂಗಳವಾರ ಮತ್ತು ಇಂದು ಶೋಧ ಕಾರ್ಯ ನಡೆಸುವಾಗ ಕಚೇರಿಗೆ ಸೇರಿದ ಯಾರೂ ಇಲ್ಲದ ಕಾರಣ ಯಂಗ್ ಇಂಡಿಯಾ ಕಚೇರಿ ಆವರಣಕ್ಕೆ ಬೀಗ ಹಾಕಿದ್ದು, ತಾತ್ಕಾಲಿಕವಾಗಿ ಸೀಲ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ

    ಕಾಂಗ್ರೆಸ್‌ ಒಡೆತನದ ಹೆರಾಲ್ಡ್‌ ಹೌಸ್‌ನಲ್ಲಿ ಈ ಕಚೇರಿ ಇದೆ. ಪೂರ್ವಾನುಮತಿ ಇಲ್ಲದೇ ಯಾರು ಕೂಡ ಬೀಗ ತೆಗೆಯುವಂತಿಲ್ಲ ಎಂದು ಕಚೇರಿಗೆ ಇ.ಡಿ ಅಧಿಕಾರಿಗಳು ಭಿತ್ತಿಪತ್ರ ಅಂಟಿಸಿದ್ದಾರೆ.

    ಕಚೇರಿ ಬೀಗ ತೆಗೆದು ಶೋಧ ಕಾರ್ಯಕ್ಕೆ ಅನುವು ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗೆ ಇ-ಮೇಲ್‌ ಮೂಲಕ ಸಂದೇಶ ಕಳುಹಿಸಲಾಗಿತ್ತು. ಅವರಿಂದ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ ಆವರಣಕ್ಕೆ ಬೀಗ ಹಾಕಲಾಗಿದೆ. ಒಂದು ವೇಳೆ ಸಂಬಂಧಿಸಿದ ಅಧಿಕಾರಿ ಬಂದು ಶೋಧ ಕಾರ್ಯಕ್ಕೆ ಅನುವು ಮಾಡಿಕೊಟ್ಟರೆ ಆವರಣಕ್ಕೆ ಹಾಕಿರುವ ಸೀಲ್‌ ತೆರೆಯಲಾಗುವುದು ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗಾಕ್ಕೆ ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ ರ್‍ಯಾಲಿಯಲ್ಲಿ ಜೋಶಿ ಭಾಗಿ

    ಹೆರಾಲ್ಡ್‌ ಹೌಸ್‌ ಸೇರಿದಂತೆ ಇತರೆ 11 ಕಡೆ ಮಂಗಳವಾರ ಇ.ಡಿ ಶೋಧ ಕಾರ್ಯ ನಡೆಸಿತ್ತು.

    ಇ.ಡಿ ಶೋಧ ಕಾರ್ಯ ಬೆನ್ನಲ್ಲೇ, ಸಲ್ಮಾನ್ ಖುರ್ಷಿದ್, ಮಲ್ಲಿಕಾರ್ಜುನ ಖರ್ಗೆ, ಪವನ್ ಬನ್ಸಾಲ್ ಮತ್ತು ಪಿ.ಚಿದಂಬರಂ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿ, ದೆಹಲಿ ಪೊಲೀಸರು ನಮ್ಮ ಕೇಂದ್ರಗಳು ಮತ್ತು ಮನೆಗಳನ್ನು ಸುತ್ತುವರೆದಿದ್ದಾರೆ. ಇದು ಸೇಡಿನ ರಾಜಕೀಯದ ಅತ್ಯಂತ ಕೆಟ್ಟ ರೂಪವಾಗಿದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ. ಈ ಬಗ್ಗೆ ಮೌನವಾಗಿರುವುದೂ ಇಲ್ಲ. ನಾವು ಮೋದಿ ಸರ್ಕಾರದ ಅನ್ಯಾಯ ಮತ್ತು ವೈಫಲ್ಯಗಳ ವಿರುದ್ಧ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ED ಅಧಿಕಾರ ಎತ್ತಿಹಿಡಿದ ಸುಪ್ರೀಂ – ʻಅಪಾಯಕಾರಿ ತೀರ್ಪುʼ ಎಂದ ವಿಪಕ್ಷಗಳು

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ED ಅಧಿಕಾರ ಎತ್ತಿಹಿಡಿದ ಸುಪ್ರೀಂ – ʻಅಪಾಯಕಾರಿ ತೀರ್ಪುʼ ಎಂದ ವಿಪಕ್ಷಗಳು

    ನವದೆಹಲಿ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ದಾಖಲಾಗಿರುವ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಎತ್ತಿ ಹಿಡಿದು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿಗೆ ವಿರೋಧ ಪಕ್ಷಗಳು ಬೇಸರ ವ್ಯಕ್ತಪಡಿಸಿವೆ.

    ಪಿಎಂಎಲ್‌ಎ ಅಡಿ ತನಿಖಾ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ನೀಡಿ ತೀರ್ಪು ಹೊರಡಿಸಿದೆ. ಇದು ʼಅಪಾಯಕಾರಿ ತೀರ್ಪುʼ 17 ವಿರೋಧ ಪಕ್ಷಗಳು ಆಕ್ಷೇಪವನ್ನು ವ್ಯಕ್ತಪಡಿಸಿವೆ. ಇದನ್ನೂ ಓದಿ: ಪಿಎಂಎಲ್‌ಎ ಅಡಿ ಬಂಧನ ಮಾಡಬಹುದು – ಇಡಿಗೆ ಸುಪ್ರೀಂನಿಂದ ಸಿಕ್ತು ಪರಮಾಧಿಕಾರ

    ಅಪಾಯಕಾರಿ ತೀರ್ಪು ಅಲ್ಪಕಾಲಿಕವಾಗಿರುತ್ತದೆ. ಸಾಂವಿಧಾನಿಕ ನಿಬಂಧನೆಗಳು ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತವೆ ಎಂದು ನಾವು ಭಾವಿಸುತ್ತೇವೆ ಎಂದು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ, ಆಮ್ ಆದ್ಮಿ ಪಕ್ಷ, ಸಿಪಿಐ(ಎಂ), ಸಮಾಜವಾದಿ ಪಕ್ಷ ಮತ್ತು ಆರ್‌ಜೆಡಿ ಪ್ರತಿನಿಧಿಗಳು ಸಹಿ ಹಾಕಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಕಾನೂನು ದುರುಪಯೋಗದ ಮೂಲಕ ಸೇಡಿನ ರಾಜಕೀಯ ಮಾಡಲಾಗುತ್ತಿದೆ ಎಂದು ಕೇಂದ್ರದ ಆಡಳಿತದ ವಿರುದ್ಧ ವಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಪಿಎಂಎಲ್‌ಎ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ವಿಪಕ್ಷಗಳು ಮುಂದಾಗಿವೆ.

    ನರೇಂದ್ರ ಮೋದಿ ಸರ್ಕಾರದ ಎಂಟು ವರ್ಷಗಳ ಅವಧಿಯಲ್ಲಿ ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ, ಇ.ಡಿ ದಾಳಿ ಶೇ.26 ಪಟ್ಟು ಹೆಚ್ಚಾಗಿದೆ. ಆದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಿದೆ. 2014 ರಿಂದ ಅಕ್ರಮ ಹಣ ವರ್ಗಾವಣೆ ಆರೋಪದಡಿ 3,010 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಲಾಯಿತು. ಆ ಪೈಕಿ ಕೇವಲ 23 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಹಣಕಾಸು ಸಚಿವಾಲಯವು ರಾಜ್ಯಸಭೆಯಲ್ಲಿ ಹಂಚಿಕೊಂಡ ಅಂಕಿಅಂಶದಲ್ಲಿ ತಿಳಿಸಿವೆ. 112 ಪ್ರಕರಣಗಳಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕಂಡುಬಂದಿಲ್ಲ.

    ನಾವು ನಮ್ಮ ಸರ್ವೋಚ್ಚ ನ್ಯಾಯಾಲಯದ ಮೇಲೆ ಅಪಾರ ಗೌರವ ಹೊಂದಿದ್ದೇವೆ. ಆದರೂ, ತೀರ್ಪಿನ ವಿಚಾರವಾಗಿ ಮರುಪರಿಶೀಲನೆ ಅಗತ್ಯವಿದೆ ಎಂದು ವಿಪಕ್ಷಗಳು ಅಭಿಪ್ರಾಯಪಟ್ಟಿವೆ. ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ – NDA ಅಭ್ಯರ್ಥಿಗೆ BSP ಬೆಂಬಲ

    ಈ ದೂರಗಾಮಿ ತಿದ್ದುಪಡಿಗಳು ಸರ್ಕಾರದ ಕೈಗಳನ್ನು ಬಲಪಡಿಸಿವೆ. ಇದರಿಂದಾಗಿ ರಾಜಕೀಯ ಸೇಡು ತೀರಿಸಿಕೊಳ್ಳಲು ಆಡಳಿತ ಪಕ್ಷ ತೊಡಗಿಕೊಂಡಿದೆ. ಅತ್ಯುತ್ತಮ ನ್ಯಾಯಾಂಗ ವ್ಯವಸ್ಥೆಯು, ಕಾರ್ಯಾಂಗವು ಬೆಂಬಲಿಸುವ ವಾದಗಳನ್ನು ವಾಸ್ತವಿಕವಾಗಿ ಪುನರುಚ್ಛರಿಸಿರುವುದು ಬೇಸರ ತರಿಸಿದೆ ಎಂದು ವಿಪಕ್ಷಗಳು ಹೇಳಿವೆ.

    ಏನಿದು ಸುಪ್ರೀಂ ತೀರ್ಪು?
    ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌) ಅಡಿಯಲ್ಲಿ ವಿಧಿಸಲಾಗಿರುವ ನಿಬಂಧನೆ ಮತ್ತು ಆರೋಪಿಗಳನ್ನು ಬಂಧಿಸುವ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಇ.ಡಿ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿತ್ತು.

    ಪಿಎಂಎಲ್‌ಎ ಅಡಿ ದಾಖಲಾಗಿರುವ ಪ್ರಕರಣಗಳಲ್ಲಿ ಇಡಿ ಅಧಿಕಾರವನ್ನು ಸುಪ್ರೀಂ ಎತ್ತಿ ಹಿಡಿದಿದೆ. ತನಿಖೆಗೆ ಪೂರಕವಾಗಿ ಆರೋಪಿಗಳ ಆಸ್ತಿ, ಮನೆ ಮತ್ತು ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಬಹುದು. ಕಾಯ್ದೆ ಅಡಿ ಬಂಧನ ಮತ್ತು ಆಸ್ತಿ, ನಗದು ವಶಪಡಿಸಿಕೊಳ್ಳಲು ಇ.ಡಿಗೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಇದನ್ನೂ ಓದಿ: 10 ವರ್ಷ ದುಡಿದು SUV ಕಾರು ಖರೀದಿಸಿದ ಅಭಿಮಾನಿ – ಆನಂದ್ ಮಹೀಂದ್ರಾ ಮೆಚ್ಚುಗೆ ಮಾತು

    Live Tv
    [brid partner=56869869 player=32851 video=960834 autoplay=true]

  • ನ್ಯಾಷನಲ್ ಹೆರಾಲ್ಡ್ ಕಚೇರಿ ಸೇರಿ 12 ಕಡೆ ಇಡಿ ದಾಳಿ – ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

    ನ್ಯಾಷನಲ್ ಹೆರಾಲ್ಡ್ ಕಚೇರಿ ಸೇರಿ 12 ಕಡೆ ಇಡಿ ದಾಳಿ – ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್‌ ಹೆರಾಲ್ಡ್‌ ಕಚೇರಿ ಸೇರಿದಂತೆ 12 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ.

    ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಈಗಾಗಲೇ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿತ್ತು. ಇದಾದ ಬಳಿಕ ನ್ಯಾಷನಲ್‌ ಹೆರಾಲ್ಡ್‌ ಕಚೇರಿ ಸೇರಿ ಹಲವೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

    ಹೆರಾಲ್ಡ್ ಹೌಸ್‌ನ 4ನೇ ಮಹಡಿಯಲ್ಲಿ ಇಡಿ ದಾಳಿ ನಡೆಸಿತ್ತು. ಇಲ್ಲಿಯೇ ನ್ಯಾಷನಲ್ ಹೆರಾಲ್ಡ್‌ನ ಪ್ರಕಾಶನ ಕಚೇರಿ ಇದೆ. ಇಡಿ ಅಧಿಕಾರಿಗಳು ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದಾಳಿ ನಡೆಸಿದ್ದರು.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯಲ್ಲಿರುವ ಕಾಂಗ್ರೆಸ್ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಚೇರಿ ಸೇರಿದಂತೆ 12 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ. ಕೋಲ್ಕತ್ತಾದ ಕೆಲವು ಸ್ಥಳಗಳ ಮೇಲೆ ತನಿಖಾ ಸಂಸ್ಥೆ ದಾಳಿ ನಡೆಸಬಹುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮನೆಯಲ್ಲಿ ಸಿಕ್ಕಿದ ಹಣ ನನಗೆ ಸೇರಿದ್ದಲ್ಲ, ಯಾರೋ ಅಲ್ಲಿ ಇಟ್ಟಿದ್ದಾರೆ: ಅರ್ಪಿತಾ ಮುಖರ್ಜಿ

    ಹೆರಾಲ್ಡ್‌ ಕಚೇರಿ ಮೇಲೆ ಇಡಿ ದಾಳಿ ಮಾಡುತ್ತಿದ್ದಂತೆ ಅದನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಚೇರಿ ಹೊರಗೆ ಅಪಾರ ಸಂಖ್ಯೆಯಲ್ಲಿ ಸೇರಿದ ಕಾಂಗ್ರೆಸ್‌ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

    Live Tv
    [brid partner=56869869 player=32851 video=960834 autoplay=true]