Tag: ಈದ್‌ ಮಿಲಾದ್‌ ಮೆರವಣಿಗೆ

  • ಉಳ್ಳಾಲ ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ ಮೆರೆದ ಯುವಕರಿಗೆ ನೋಟಿಸ್

    ಉಳ್ಳಾಲ ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ ಮೆರೆದ ಯುವಕರಿಗೆ ನೋಟಿಸ್

    ಮಂಗಳೂರು: ಶಿವಮೊಗ್ಗ ರಾಗಿಗುಡ್ಡದಂತೆಯೇ ಮಂಗಳೂರಿನ ಉಳ್ಳಾಲದಲ್ಲಿಯೂ ಈದ್ ಮಿಲಾದ್ ಮೆರವಣಿಗೆಯ (Eid Milad Procession) ನೆಪದಲ್ಲಿ ಯುವಕರು ಪುಂಡಾಟ ಮೆರೆದಿದ್ದು, ಇದೀಗ ಯುವಕರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

    ಈದ್ ಮಿಲಾದ್ ಮೆರವಣಿಗೆ ನಡೆಸಿದ ನೂರಾರು ಯುವಕರ ತಂಡ ಉಳ್ಳಾಲದ ಅಬ್ಬಕ್ಕ ಸರ್ಕಲ್ ಬಳಿ ರಸ್ತೆ ಬಂದ್ ಮಾಡಿ ಅಬ್ಬಕ್ಕ ವೃತ್ತವನ್ನೇರಿ ಹಸಿರು ಬಾವುಟ ಪ್ರದರ್ಶಿಸಿ ಚೀರಾಡುತ್ತಾ, ಸೈಲೆನ್ಸರ್ ಶಬ್ಧ ಮಾಡಿ, ಬೈಕ್ ಹಾರ್ನ್ ಹಾಕಿಕೊಂಡು ಪುಂಡಾಟ ಮೆರೆದಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಿವಮೊಗ್ಗ (Shivamogga) ಘಟನೆಯ ಬೆನ್ನಲ್ಲೇ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಪುಂಡಾಟ ಮೆರೆದ ಯುವಕರಿಗೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

    ಉಳ್ಳಾಲ ಪೊಲೀಸರು (Ullala Police Staion) ವೀಡಿಯೋ ಆಧರಿಸಿ ಯುವಕರ ಪತ್ತೆ ಮಾಡಿದ್ದಾರೆ. ಉಳ್ಳಾಲ, ಮಂಜನಾಡಿ, ಮದಕ, ಕೋಣಾಜೆ, ದೇರಳಕಟ್ಟೆ, ಬಂಟ್ವಾಳ ಹಾಗೂ ಬೆಳ್ತಂಗಡಿ ಭಾಗದ ಯುವಕರು ಎಂದು ತಿಳಿದು ಬಂದಿದೆ. ಈ ಎಲ್ಲಾ ಯುವಕರಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – ಕೆಲಕಾಲ ಪರಿಸ್ಥಿತಿ ಉದ್ವಿಗ್ನ

    ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – ಕೆಲಕಾಲ ಪರಿಸ್ಥಿತಿ ಉದ್ವಿಗ್ನ

    ಶಿವಮೊಗ್ಗ: ಈದ್ ಮಿಲಾದ್ (Eid Milad Procession) ಮೆರವಣಿಗೆ ವೇಳೆ ಘರ್ಷಣೆಯಾಗಿ ಕಲ್ಲು ತೂರಾಟ ಮಾಡಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಪೊಲೀಸರು ತೆರಳು ಗುಂಪು ಚದುರಿಸಿದ್ದಾರೆ.

    ಮೆರವಣಿಗೆ ವೇಳೆ ಎರಡು ಕೋಮುಗಳಿಂದ ಪರಸ್ಪರ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಇಬ್ಬರಿಗೆ ಗಾಯವಾಗಿದೆ. ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಂದು ಓಮಿನಿ ಕಾರು ಮತ್ತು ಮೂರು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಎಚ್ಚರಿಕೆಯಿಂದಿರಿ, ಮತಕ್ಕಾಗಿ ಒಂದು ಸಮಾಜವನ್ನು ಓಲೈಕೆ ಮಾಡುವ ಅವಶ್ಯಕತೆ ನನಗಿಲ್ಲ: HDK

    ಗಾಂಧಿ ಬಜಾರಿನ ಜಾಮಿಯಾ ಮಸೀದಿಯಿಂದ ಮುಸ್ಲಿಂ ಬಾಂಧವರು ಭಾನುವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಮೆರವಣಿಗೆ ಆರಂಭಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಈ ವಿಚಾರವಾಗಿ ಗೊಂದಲ ಸೃಷ್ಟಿಯಾಗಿತ್ತು. ಪರಿಣಾಮವಾಗಿ ಸ್ಥಳದಲ್ಲಿ ಮುಸ್ಲಿಂ ಬಾಂಧವರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.

    ಶಿವಮೊಗ್ಗ ಹೊನ್ನಾಳಿ ರಸ್ತೆ ತಡೆದು ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಸ್ಲಿಂ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು. ಮಾತುಕತೆ ಬಳಿಕ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: 350 ವರ್ಷಗಳ ಬಳಿಕ ಭಾರತಕ್ಕೆ ಮರಳಲಿದೆ ಶಿವಾಜಿ ಮಹಾರಾಜರ `ವ್ಯಾಘ್ರ ನಖ’

    ಶಿವಮೊಗ್ಗದಲ್ಲಿ ಭಾನುವಾರ ಈದ್ ಮಿಲಾದ್ ಹಬ್ಬದ ಮೆರವಣಿಗೆ ನಡೆಸಲಾಯಿತು. ಕಳೆದ ಗುರುವಾರ ನಡೆದಿದ್ದ ಈದ್ ಮಿಲಾದ್ ಹಬ್ಬ ನಡೆದಿತ್ತು. ಗುರುವಾರ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಈದ್ ಮಿಲಾದ್ ಮೆರವಣಿಗೆ ಮುಂದೂಡಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಹಸಿರು ಬಾವುಟ, ಟಿಪ್ಪು ಭಾವಚಿತ್ರ ಇರುವ ಧ್ವಜ ರಾರಾಜಿಸಿತು. ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.

    ಮೆರವಣಿಗೆ ರಾಗಿಗುಡ್ಡದಲ್ಲಿ ಗಲಾಟೆ ಹಿನ್ನೆಲೆ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಿ ಎಸ್‌ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಗುಂಪು ಸೇರದಂತೆ ಪೊಲೀಸರು ಮನವಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]