Tag: ಈಶ್ವರ ಖಂಡ್ರೆ

  • ದಿವಂಗತ ಉಮೇಶ್ ಕತ್ತಿ ನಿವಾಸಕ್ಕೆ ಈಶ್ವರ ಖಂಡ್ರೆ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    ದಿವಂಗತ ಉಮೇಶ್ ಕತ್ತಿ ನಿವಾಸಕ್ಕೆ ಈಶ್ವರ ಖಂಡ್ರೆ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    ಚಿಕ್ಕೋಡಿ: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಅರಣ್ಯ ಸಚಿವ ದಿವಂಗತ ಉಮೇಶ್ ಕತ್ತಿ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ದಿ. ಉಮೇಶ್ ಕತ್ತಿ ನಿವಾಸಕ್ಕೆ ಭೇಟಿ ನೀಡಿದ ಅವರು, ಸಹೋದರ ರಮೇಶ್ ಕತ್ತಿ ಅವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಉಮೇಶ್ ಕತ್ತಿ ಜೊತೆಗಿನ ಒಡನಾಟ ಹಾಗೂ ಅವರ ನೇರ ವ್ಯಕ್ತಿತ್ವದ ಕುರಿತು ನೆನಪಿಸಿಕೊಂಡರು.  ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರಲ್ಲ: ಎಸ್.ಟಿ.ಸೋಮಶೇಖರ್

    ಉಮೇಶ್ ಕತ್ತಿ ಒಬ್ಬ ಸರಳ ವ್ಯಕ್ತಿತ್ವದ ಮನುಷ್ಯ. ಅಧಿಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ ಅವರು ಯಾವತ್ತೂ ಬದಲಾಗಲಿಲ್ಲ. ಎಲ್ಲರ ಜೊತೆಗೆ ಸ್ನೇಹದಿಂದ ಇರುತ್ತಿದ್ದರು. ಯಾವುದೇ ಸಂಕಷ್ಟದ ಪರಿಸ್ಥಿತಿ ಬಂದರೂ, ಹಾಸ್ಯದ ಮೂಲಕ ಅದನ್ನು ತಿಳಿಗೊಳಿಸುವ ಶಕ್ತಿ ಇವರಿಗಿತ್ತು. ಉತ್ತರ ಕರ್ನಾಟಕದ ಗಟ್ಟಿ ಧ್ವನಿ ನಮ್ಮೆಲ್ಲರನ್ನು ಬಿಟ್ಟು ಹೋಗಿದ್ದು ನೋವಿನ ಸಂಗತಿ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ಥಗಿತಗೊಳಿಸಿದ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ: ಆರಗ ಜ್ಞಾನೇಂದ್ರ

    ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, ಆನಂದ ನ್ಯಾಮಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಈಶ್ವರ ಖಂಡ್ರೆ ವಾಗ್ದಾಳಿ

    ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಈಶ್ವರ ಖಂಡ್ರೆ ವಾಗ್ದಾಳಿ

    ರಾಯಚೂರು: ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿಯಾಗಿದೆ. ಬಡ ಜನತೆಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.

    ಅಮೃತ ಮಹೋತ್ಸವ ಹಿನ್ನೆಲೆ ಕಾಂಗ್ರೆಸ್ ಸ್ವಾತಂತ್ರ್ಯೋತ್ಸವ ನಡಿಗೆ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಲೆ ಏರಿಕೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದೆ ಇರುವುದೇ ಬಿಜೆಪಿ ಜನ ವಿರೋಧಿ ಸರ್ಕಾರವಾಗಿರುವುದಕ್ಕೆ ಸಾಕ್ಷಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮದುವೆಗೆ ಮುಸ್ಲಿಂ ವಧು ಹಾಜರ್ – ಮಹಲ್ ಸಮಿತಿಯ ಕ್ಷಮೆಗೆ ಆಗ್ರಹ 

    ಕೇಂದ್ರ ಸರ್ಕಾರ ಶ್ರೀಮಂತರ ಪರವಾಗಿದ್ದು, ಬಡವರ ವಿರೋಧಿ ಸರ್ಕಾರವಾಗಿದೆ. 9.91 ಲಕ್ಷ ಕೋಟಿ ಶ್ರೀಮಂತರ ಸಾಲ ಮನ್ನಾ ಮಾಡುವ ಮೂಲಕ ಕೇಂದ್ರ ಸರ್ಕಾರ ಶ್ರೀಮಂತರ ಪರವಾಗಿರುವ ಸರ್ಕಾರ ಎಂದು ತೋರಿಸಿಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ವೇಳೆ ಖಂಡ್ರೆ ಅವರ ನೇತೃತ್ವದಲ್ಲಿ ಗಿಲ್ಲೇಸುಗೂರಿನಿಂದ ಯರಗೇರಾ ಗ್ರಾಮದವರೆಗೆ ಪಾದಯಾತ್ರೆ ನಡೆಯಿತು. ಮಾಜಿ ಸಚಿವ ಎಚ್.ಆಂಜಿನೇಯ, ಎಂಎಲ್‍ಸಿ ಶರಣಗೌಡ ಬಯ್ಯಾಪುರ, ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದನ್ನೂ ಓದಿ: ಜನನಾಂಗಕ್ಕೂ ಟ್ಯಾಟೂ – ಜೀವವೇ ಹೋದಂಗೆ ಆಯ್ತು ಅಂದ ನಟಿ 

    Live Tv
    [brid partner=56869869 player=32851 video=960834 autoplay=true]

  • ಕೋಮು ಗಲಭೆ ಮಾಡುವ ವ್ಯಕ್ತಿಗಳಿಗೆ ಸರ್ಕಾರ ರಕ್ಷಣೆ ನೀಡಲ್ಲ: ಮುನೇನಕೊಪ್ಪ

    ಕೋಮು ಗಲಭೆ ಮಾಡುವ ವ್ಯಕ್ತಿಗಳಿಗೆ ಸರ್ಕಾರ ರಕ್ಷಣೆ ನೀಡಲ್ಲ: ಮುನೇನಕೊಪ್ಪ

    ರಾಯಚೂರು: ಕೋಮುಗಲಭೆ ಮಾಡುವ ವ್ಯಕ್ತಿಗಳಿಗೆ ಸರ್ಕಾರ ರಕ್ಷಣೆ ಕೊಡುವುದಿಲ್ಲ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶ ಭಾವೈಕ್ಯತೆ ನಾಡು. ಕೋಮುಗಲಭೆ ಮಾಡುವ ಎಂಥಹದ್ದೇ ಶಕ್ತಿ ಇದ್ದರೂ ಅದನ್ನು ಮಟ್ಟ ಹಾಕುವ ಕೆಲಸ ಸರ್ಕಾರ ಮಾಡುತ್ತದೆ ಎಂದ ಅವರು, ಕೋಮು ಗಲಭೆ ಆದರೆ ಬಿಜೆಪಿಗೆ ಲಾಭ ಆಗುತ್ತದೆ ಎಂದು ಹೇಳಿದ್ದ ಈಶ್ವರ ಖಂಡ್ರೆಗೆ ತಿರುಗೇಟು ನೀಡಿದರು. ರಾಜಕಾರಣವನ್ನು ಚುನಾವಣೆ ಸಂದರ್ಭದಲ್ಲಿ ಮಾಡಲಿ ಈಗಲ್ಲ ಎಂದರು.

    ಜನರ ಮಧ್ಯೆ ಈ ರೀತಿಯ ಕೋಮು ಸಂಘರ್ಷ ಹಚ್ಚುವುದು ಸರಿಯಾದದ್ದಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ. ನಾವೊಂದು ಪಕ್ಷದಲ್ಲಿದ್ದೇವೆ. ಚುನಾವಣೆ ಬಂದಾಗ ರಾಜಕೀಯ ಮಾಡಲಿ, ರಾಜ್ಯ ಮತ್ತು ದೇಶದ ಶಾಂತಿಯಿಂದ ಇರಬೇಕು ಎನ್ನುವುದನ್ನು ಬಯಸುತ್ತೇವೆ. ಎಲ್ಲಾ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: CFI, PFI ಸಂಘಟನೆಗಳೇ ಮಕ್ಕಳ ಭವಿಷ್ಯ ಹಾಳಾಗೋದಕ್ಕೆ ಕಾರಣ: ಬಿ.ಸಿ.ನಾಗೇಶ್

    ಕೋಮುಗಲಭೆಗೆ ಕಾರಣರಾದವರ ಮೇಲೆ ರಾಜ್ಯದಲ್ಲಿ ಬುಲ್ಡೋಜರ್ ಸಂಸ್ಕೃತಿ ತರಲು ಸರ್ಕಾರ ಮುಂದಾಗಿದೆಯಾ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮುಖ್ಯಮಂತ್ರಿಗಳು ಬಹಳ ತಿಳುವಳಿಕೆ ಇರುವಂತರು. ಮುಖ್ಯಮಂತ್ರಿಗಳು ತುಂಬಾ ಅನುಭವ ಇರುವಂತವರು. ಮುಖ್ಯಮಂತ್ರಿಗಳು ಒಂದು ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಗಳು ಮತ್ತು ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ: ಪ್ರವೀಣ್ ಸೂದ್

  • ರಾಷ್ಟ್ರಧ್ವಜ ಅವಮಾನಿಸಿದ ಈಶ್ವರಪ್ಪ ಹೇಳಿಕೆ ಖಂಡನೀಯ: ಈಶ್ವರ ಖಂಡ್ರೆ

    ರಾಷ್ಟ್ರಧ್ವಜ ಅವಮಾನಿಸಿದ ಈಶ್ವರಪ್ಪ ಹೇಳಿಕೆ ಖಂಡನೀಯ: ಈಶ್ವರ ಖಂಡ್ರೆ

    ಬೀದರ್: ಮುಂದೊಂದು ದಿನ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಾಡಲಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಬೀದರ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಸಂಪುಟದ ಹಿರಿಯ ಸದಸ್ಯರು, ನಮ್ಮ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವ ಹೇಳಿಕೆ ನೀಡಿರುವುದು ಖಂಡನೀಯ. ಅವರ ಮೇಲೆ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪಾಠ ಮುಗಿದಿಲ್ಲ, ರಿವಿಜನ್ ಆಗಿಲ್ಲ: ವಿದ್ಯಾರ್ಥಿನಿ

    ಜಗತ್ತಿನಲ್ಲಿ ಅತ್ಯಂತ ಶ್ರೀಮಂತ ಪಕ್ಷ ಅಂದರೆ ಅದು ಬಿಜೆಪಿ. ಉದ್ಯೋಗ ಪತಿಗಳ ಪರವಾಗಿ ಎಲ್ಲಾ ನೀತಿಗಳನ್ನು ಮಾಡಿರುವ ಬಿಜೆಪಿ, ಭಾರತವನ್ನು ಬಡ ರಾಷ್ಟ್ರವನ್ನಾಗಿ ಮಾಡಿ ಮೆರೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

    ತಮ್ಮ ಅಕ್ರಮ ಮುಚ್ಚಿಕೊಳ್ಳಲು ಆನ್‌ಲೈನ್‌ನಲ್ಲಿ ಸದಸ್ಯತ್ವ ಅಭಿಯಾನ ಎಂದು ಜನರ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡುತ್ತಿದೆ. ಬಿಜೆಪಿಯ ದಬ್ಬಾಳಿಕೆ ಹಾಗೂ ಸರ್ವಾಧಿಕಾರಿ ದೋರಣೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಿಜಬ್-ಕೇಸರಿ ಧರಿಸಬೇಡಿ: ರಮೇಶ್ ಜಾರಕಿಹೊಳಿ

    ಬಾಬ್ರಿ ಮಸೀದಿಯ ಸುಪ್ರೀಂಕೋರ್ಟ್ ತಿರ್ಪುನ್ನು ದಿಕ್ಕರಿಸಿ ಅಪಹಾಸ್ಯ ಮಾಡಿ ವಿದ್ಯಾರ್ಥಿನಿಯರು ಟ್ವಿಟ್ ಮಾಡಿದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಪ್ರತಿಕ್ರಿಯೆ ನೀಡಿಲು ನಿರಾಕರಿಸಿದ್ದಾರೆ. ನಿಮ್ಮ ಪಬ್ಲಿಕ್ ಟಿವಿ ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಈಶ್ವರ ಖಂಡ್ರೆಗೆ ವಿದ್ಯಾರ್ಥಿನಿಯರು ಟ್ವಿಟ್ ಬಗ್ಗೆ ಕೇಳಿದಾಗ ಬೇಡ ಬೇಡಾ ಎಂದು ಕೈಸನ್ನೆ ಮಾಡಿದರು.

    ಜೊತೆಗೆ ಯಾವುದು ಸಾಮಾಜದಲ್ಲಿ ಗೊಂದಲ ಉಂಟು ಮಾಡೋದು ಬೇಡ ಎಂದು ಹೇಳಿ ಮತ್ತೆ‌ ಕೈ ಸನ್ನೆ ಮಾಡಿ ಪ್ರತಿಕ್ರಿಯೆ ನೀಡಲು ನಿರಾಕರಣೆ ಮಾಡಿದ್ದರು. ಇನ್ನು ಪಕ್ಕದಲ್ಲೆ ಕುಳಿತಿದ್ದ ಹುಮ್ನಾಬಾದ್ ಶಾಸಕ ರಾಜಶೇಖರ ಪಾಟೀಲ್ ಕೂಡಾ ಬೇಡಾ ಬೇಡಾ ಎಂದರು.

  • ಪಾದಯಾತ್ರೆ ಮೊಟಕುಗೊಳಿಸಲು ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಜಾರಿ: ಈಶ್ವರ್ ಖಂಡ್ರೆ

    ಪಾದಯಾತ್ರೆ ಮೊಟಕುಗೊಳಿಸಲು ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಜಾರಿ: ಈಶ್ವರ್ ಖಂಡ್ರೆ

    ಬೀದರ್: ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು. ಇದನ್ನು ನಿನ್ನೆ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ ಎಂದು ಆರೋಪಿಸಿದರು.

    ನಾವು ರಾಜಕೀಯ ಉದ್ದೇಶದಿಂದಲೇ ವೀಕೆಂಡ್ ಕರ್ಫ್ಯೂ ಹಾಕಿದ್ದು ಎಂದು ಜನರ ಮುಂದೆ ಸರ್ಕಾರವೇ ಸಾಬೀತು ಮಾಡಿದ್ದಾರೆ. ಬಿಜೆಪಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ಕಿಡಿಕಾರಿದ ಅವರು, ಸಾವಿರಾರು ಜನರನ್ನು ಸೇರಿಸಿ ಕೇಂದ್ರ ಸಚಿವ ಭಗವಂತ್ ಖೂಬಾ ಜನಾಶೀರ್ವಾದ ಯಾತ್ರೆಯಲ್ಲಿ ಮಾಡಿದ್ದರು. ಅಲ್ಲಿ ಅವರನ್ನು ಅಕ್ರಮ ಬಂದೂಕಿನಿಂದ ಸ್ವಾಗತ ಮಾಡಿದರು. ಈವರೆಗೂ ಪೊಲೀಸರು ಖೂಬಾ ಮೇಲೆ ಎಫ್‌ಐಆರ್ ದಾಖಲೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ಯಾತ್ರೆ: ಎಸ್.ಆರ್.ಹಿರೇಮಠ

    Bhagwanth khuba Bidar MP

    ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ನನ್ನ ಮೇಲೆ ಹಾಗೂ ನಮ್ಮ ನಾಯಕರಾದ ಡಿಕೆಶಿ, ಸಿದ್ದರಾಮಯ್ಯ ಮೇಲೆ ಮೂರು ಕೇಸ್‌ಗಳನ್ನು ದಾಖಲಿಸಿದ್ದಾರೆ ಎಂದ ಅವರು, ಕೊರೊನಾ ಕೇಸ್ ಕಡಿಮೆಯಾದ ಮೇಲೆ ಮತ್ತೆ ರಾಮನಗರದಿಂದ ನಮ್ಮ ಪಾದಯಾತ್ರೆ ಮುಂದುವರೆಸುತ್ತೆವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಚಾಮುಂಡೇಶ್ವರಿಯಿಂದ ಓಡಿಸಲಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆ: ಸಿದ್ದು ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಪಂಚ ರಾಜ್ಯ ಚುನಾವಣೆಯ ಸಮೀಕ್ಷೆಗಳೆಲ್ಲಾ ಸುಳ್ಳಾಗಲಿದ್ದು, ಬಿಜೆಪಿ ಪಂಚರಾಜ್ಯ ಚುನಾವಣೆಯಲ್ಲಿ ಧೂಳಿ ಪಟವಾಗುತ್ತದೆ ಎಂದ ಅವರು ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

  • ಅಧಿವೇಶನದಲ್ಲಿ ಉ.ಕ, ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ ಆಗಿಲ್ಲ: ಈಶ್ವರ ಖಂಡ್ರೆ

    ಅಧಿವೇಶನದಲ್ಲಿ ಉ.ಕ, ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ ಆಗಿಲ್ಲ: ಈಶ್ವರ ಖಂಡ್ರೆ

    ಕಲಬುರಗಿ: ಜನ ವಿರೋಧಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ಕರೆದಿದ್ದರೂ, ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ಜನರಿಗೆ ಮಾರಕವಾದ ವಿಧೇಯಕ (ಮತಾಂತರ ನಿಷೇಧ ಮಸೂದೆ) ತಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ‌.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಉದ್ದೇಶದಿಂದಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಏರ್ಪಡಿಸಲಾಗಿತ್ತು. ಆದರೆ ಜನ ವಿರೋಧಿ ಬಿಜೆಪಿ ಸರ್ಕಾರವು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆಗೆ ಅವಕಾಶ ನೀಡಲಿಲ್ಲ. ಅಧಿವೇಶನ ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ನಿರ್ಧಾರ ತಿಳಿಸಿಲ್ಲ. ಸರ್ಕಾರದ ವೈಫಲ್ಯಗಳನ್ನು ಮರೆಮಾಚಿ ಜನರ ಗಮನ‌ವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆದಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸದಸ್ಯರ ವರ್ತನೆಯಿಂದ ರಾಜೀನಾಮೆಗೆ ಮುಂದಾಗಿದ್ದೆ: ಹೊರಟ್ಟಿ ಬೇಸರ

    ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿ, ಬಿಜೆಪಿಯಲ್ಲಿ ಅಸ್ಥಿರತೆ ಇದೆ. ಅಲ್ಲಿ ಬಹಳಷ್ಟು ಅತೃಪ್ತಿ ಇದೆ. ಮುಖ್ಯಮಂತ್ರಿ ಬದಲಾವಣೆ ಆಗೋದು ಬಿಡೋದು ಅವರ ಪಕ್ಷಕ್ಕೆ‌ ಬಿಟ್ಟ ವಿಚಾರ. ಬಿಜೆಪಿ ಸರ್ಕಾರ ಇದ್ದೂ ಇಲ್ಲದಂತಿದೆ‌. ಆಡಳಿತ ವೈಫಲ್ಯವಾದ ಮೇಲೆ ಇಂತಹ ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು. ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿಯವರ ತೀರ್ಮಾನ ಎಂದು ಮಾತನಾಡಿದ್ದಾರೆ.

    ಎಂಇಎಸ್‌ ಗಲಭೆ ಕುರಿತು ಪ್ರತಿಕ್ರಿಯಿಸಿ, ಗಡಿ ಸಮಸ್ಯೆ ಮುಗಿದು ಹೋಗಿರುವ ವಿಚಾರ. ಇದರಲ್ಲಿ ಎಂಇಎಸ್ ಕೂಡ ಪುಂಡಾಟಿಕೆ ಮಾಡಬಾರದು‌. ನಮ್ಮ ಭಾಷೆ, ನಾಡು-ನುಡಿ ರಕ್ಷಣೆ ಮಾಡುವುದಕ್ಕೆ‌ ನಾವು ಬದ್ಧರಾಗಿದ್ದೇವೆ. ಎಂ‌ಇ‌ಎಸ್ ಪುಂಡಾಟಿಕೆ ಇಲ್ಲಿ ನಡೆಯುವುದಿಲ್ಲ. ಪುಂಡಾಟಿಕೆ ಮಾಡಿದರೆ ಮುಂದೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಕಾನೂನು ಹೋರಾಟಕ್ಕೆ SDPI ನಿರ್ಧಾರ

  • ಈ ಪರಿಸ್ಥಿತಿ ಮುಂದುವರಿದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ: ಈಶ್ವರ್‌ ಖಂಡ್ರೆ

    ಈ ಪರಿಸ್ಥಿತಿ ಮುಂದುವರಿದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ: ಈಶ್ವರ್‌ ಖಂಡ್ರೆ

    ಬೆಳಗಾವಿ: ರಾಜ್ಯದ ಅಭಿವೃದ್ಧಿ ಚರ್ಚೆ ಬಿಟ್ಟು ಜನ ವಿರೋಧಿ ಮತಾಂತರ ಕಾಯ್ದೆ ಜಾರಿ ತರಲು ಹೊರಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಬಗ್ಗೆ ಪ್ರಶ್ನೆ ಕೇಳಿದರೆ ಚಕಾರ ಎತ್ತಲ್ಲ. ಇದೇ ರೀತಿ ಪರಿಸ್ಥಿತಿ ಮುಂದುವರಿದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ ಎಂದು ಸಿಡಿದರು. ಇದನ್ನೂ ಓದಿ: ಹೆರಿಗೆ ನಂತರ ತೂಕ ಇಳಿಸಿಕೊಳ್ಳೋದು ಸುಲಭ ಅಲ್ಲ: ಯುವರತ್ನ ನಟಿ

    ಕಲ್ಯಾಣ ಕರ್ನಾಟಕದ ವಿಷಯವಾಗಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕಾನೂನಾತ್ಮಕವಾಗಿ ಅಭಿವೃದ್ಧಿ ಮಂಡಳಿ ರಚನೆ ಆಗಿಲ್ಲ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕವನ್ನ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಅಭಿವೃದ್ಧಿ ಚರ್ಚೆ ಬಿಟ್ಟು ಜನ ವಿರೋಧಿ ಕಾಯ್ದೆ ಜಾರಿ ತರಲು ಹೊರಟಿದ್ದಾರೆ. ಇದೊಂದು ಅಪ್ರಸ್ತುತ ಕಾಯ್ದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದುವೆ ವಯಸ್ಸು ಹೆಚ್ಚಿಸಿರೋದಕ್ಕೆ ಮಹಿಳೆಯರೇ ಖುಷಿಯಾಗಿದ್ದಾರೆ, ಆಗದವರು ವಿರೋಧಿಸ್ತಿದ್ದಾರೆ: ಮೋದಿ

    ಬಲವಂತ ಮತಾಂತರದ ವಿರುದ್ಧ ಈಗಾಗಲೇ ನಮ್ಮ ಕಾನೂನಿನಲ್ಲಿ ಶಿಕ್ಷೆ ಇದೆ. ಒಂದು ಸಮುದಾಯವನ್ನ ಗುರಿಯಾಗಿಟ್ಟುಕೊಂಡು ಕಾಯ್ದೆ ಜಾರಿಗೆ ಮುಂದಾಗಿದ್ದಾರೆ. ಆದರೂ ಈ ಕಾಯ್ದೆ ಯಾರ ಹಿತಕ್ಕೆ? ಇದೊಂದು ಜನ ವಿರೋಧಿ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ನನ್ನ ಕಾರು ಅಡ್ಡಗಟ್ಟಿ ಅಪಾಯ ಮಾಡುವ ಸಂಚು ಹೂಡಿದ್ದರು: ಈಶ್ವರ್ ಖಂಡ್ರೆ ಆರೋಪ

    ನನ್ನ ಕಾರು ಅಡ್ಡಗಟ್ಟಿ ಅಪಾಯ ಮಾಡುವ ಸಂಚು ಹೂಡಿದ್ದರು: ಈಶ್ವರ್ ಖಂಡ್ರೆ ಆರೋಪ

    ಬೀದರ್: ಸಮಾಜಘಾತುಕ ಶಕ್ತಿಗಳನ್ನು ಬಳಸಿಕೊಂಡು ನನ್ನ ಕಾರು ಅಡ್ಡಗಟ್ಟಿ ಏನಾದರೂ ಅಪಾಯ ಮಾಡಬೇಕೆಂದು ಸಂಚು ಹೂಡಿದ್ದರು ಎಂದು ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಗಂಭೀರ ಆರೋಪ ಮಾಡಿದ್ದಾರೆ.

    ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾರ್ಯಕರ್ತರ ಭೇಟಿಗೆ ಹೋದ ಎಲ್ಲಾ ಕಡೆಗಳಲ್ಲಿ ಪ್ರಕಾಶ್ ಖಂಡ್ರೆ ನನ್ನ ಹಿಂಬಾಲಿಸಿದ್ದಾರೆ. ಸೋಲು ಖಾತರಿಯಾದ ಮೇಲೆ ಹೇಗಾದರೂ ಗಲಾಟೆ ಮಾಡಬೇಕು ಎಂದು ಬಹಳ ಪ್ರಯತ್ನ ಮಾಡಿದ್ದಾರೆ. ಬಬ್ಬ ಶಾಸಕ, ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷನಿಗೆ ಇವತ್ತು ರಕ್ಷಣೆ ಇಲ್ಲ ಎಂದಾದರೆ, ಸರ್ಕಾರ ಜನಸಾಮಾನ್ಯರಿಗೆ ಯಾವ ರೀತಿಯ ರಕ್ಷಣೆ ನೀಡುತ್ತದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪ್ರಜಾಪ್ರಭುತ್ವದಲ್ಲಿದ್ದೇವೆಯೇ ಇಲ್ಲ ಗೂಂಡಾಗಳ ರಾಜ್ಯದಲ್ಲಿದ್ದೀವಾ? ಈಶ್ವರ ಖಂಡ್ರೆ

    ಕಾನೂನು ಉಲ್ಲಂಘನೆ, ಶಾಂತಿ ಕದಡುವ ಹಾಗೂ ಹಲ್ಲೆ ನಡೆಸುವ ಷಡ್ಯಂತ್ರ ಹೂಡಿರುವವರ ವಿರುದ್ಧ ತನಿಖೆಯಾಗಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

    ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ನಾನೇ ಇಂದು ಒಂದು ಹೆಜ್ಜೆ ಹಿಂದೆ ಹಾಕಿದ್ದೇನೆ. ಒಂದು ವೇಳೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳದಿದ್ದರೆ ಮುಂದಾಗುವ ಎಲ್ಲಾ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ನನಗೇನ್ ಜೆಡಿಎಸ್ ಬಾಗಿಲು ಬಂದ್ ಮಾಡೋದು? ನಾನೇ ದೇವೇಗೌಡ್ರ ಮನೆ ಬಾಗಿಲು ಕ್ಲೋಸ್ ಮಾಡಿ ಬಂದಿದ್ದೇನೆ: ಜಿಟಿಡಿ

  • ಪ್ರಜಾಪ್ರಭುತ್ವದಲ್ಲಿದ್ದೇವೆಯೇ ಇಲ್ಲ ಗೂಂಡಾಗಳ ರಾಜ್ಯದಲ್ಲಿದ್ದೀವಾ? ಈಶ್ವರ ಖಂಡ್ರೆ

    ಪ್ರಜಾಪ್ರಭುತ್ವದಲ್ಲಿದ್ದೇವೆಯೇ ಇಲ್ಲ ಗೂಂಡಾಗಳ ರಾಜ್ಯದಲ್ಲಿದ್ದೀವಾ? ಈಶ್ವರ ಖಂಡ್ರೆ

    ಬೀದರ್: ಮತಗಟ್ಟೆ ಒಳಗಡೆ ಬನ್ನಿ ನೋಡೋಣ ಎಂದು ಪ್ರಕಾಶ್ ಖಂಡ್ರೆ ನನಗೆ ಧಮ್ಕಿ ಹಾಕಿದ್ದಾರೆ. ನಾವು ಪ್ರಜಾಪ್ರಭುತ್ವದಲ್ಲಿ ಇದ್ದೇವೆಯೇ ಅಥವಾ ಗೂಂಡಾಗಳ ರಾಜ್ಯದಲ್ಲಿದ್ದೀವಾ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಒಬ್ಬ ಶಾಸಕನಿಗೆ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವರ ಸಮ್ಮುಖದಲ್ಲಿ ಬಹಿರಂಗವಾಗಿ ಧಮ್ಕಿ ಹಾಕುತ್ತಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಆಗಿಲ್ಲವೇ? ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತುಕೊಂಡಿವೆಯೇ? ಒಬ್ಬ ಶಾಸಕರಿಗೆ ಮತದಾನ ಮಾಡಲು ರಕ್ಷಣೆ ಇಲ್ಲವಾದರೆ, ಗ್ರಾಪಂ ಸದಸ್ಯರ ಕಥೆ ಏನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಧಿವೇಶನಕ್ಕೆ ಹಾಜರಾಗುವವರಿಗೆ ಎರಡು ಡೋಸ್ ಲಸಿಕೆ, ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ದಾಯ: ವೆಂಕಟೇಶ್ ಕುಮಾರ್

    ನೀವೆ ಸೀರೆ ಹಾಗೂ ಬೆಳ್ಳಿಯ ಕಾಯಿನ್ ಕೊಟ್ಟು ನಮ್ಮ ಮೇಲೆ ಆರೋಪ ಮಾಡುತ್ತಿದ್ದೀರಿ. ನಮಗೆ ಜೀವ ಬೆದರಿಕೆ ಹಾಕುತ್ತಿದ್ದೀರಿ ಎಂದರೆ, ನಾನು ನಾಳೆ ಯಾವ ಅಂಗರಕ್ಷಕರೂ ಇಲ್ಲದೇ ಮತದಾನ ಮಾಡಲು ಹೋಗುತ್ತೇನೆ. ತಾಕತ್ತಿದ್ದರೆ ನನ್ನನ್ನು ತಡೆಯಿರಿ ಎಂದು ಸವಾಲು ಹಾಕಿದ್ದಾರೆ.

    bjp - congress

    ಕೇಂದ್ರ ಸಚಿವ ಖೂಬಾ, ಸಚಿವ ಪ್ರಭು ಚೌಹಾಣ್, ಬಸವಕಲ್ಯಾಣ ಶಾಸಕರು ಸೇರಿದಂತೆ ಬಿಜೆಪಿ ನಾಯಕರು ಗೂಂಡಾವರ್ತನೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ಅವಸರದ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ: ಸಿಎಂ

  • ಭಗವಂತ ಖೂಬಾರನ್ನು ಶ್ವಾನಕ್ಕೆ ಹೋಲಿಸಿದ ಈಶ್ವರ್ ಖಂಡ್ರೆ

    ಭಗವಂತ ಖೂಬಾರನ್ನು ಶ್ವಾನಕ್ಕೆ ಹೋಲಿಸಿದ ಈಶ್ವರ್ ಖಂಡ್ರೆ

    ಬೀದರ್: ಶ್ವಾನ ಎಷ್ಟೇ ಬೊಗಳಿದರೂ ಆನೆ ಶಾಂತವಾಗಿ ನಡೆದುಕೊಂಡು ಹೋಗುತ್ತದೆ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಶ್ವಾನಕ್ಕೆ ಹೋಲಿಸಿದ ಘಟನೆ ಬೀದರ್‌ನಲ್ಲಿ ನಡೆದಿದೆ.

    ವಿಧಾನ ಪರಿಷತ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಖೂಬಾ ಬಾಯಿಗೆ ಲಗಾಮು ಇಲ್ಲಾ. ಖುಬಾ ದೊಡ್ಡ ಕಳ್ಳ. ಅವರು ಪರರನ್ನು ನಂಬದ ಸ್ಥಿತಿಯಲ್ಲಿದ್ದಾರೆ. ಖೂಬಾ ಅವರ ಹೇಳಿಕೆಗೆ ಯಾವುದೇ ಬೆಲೆಯಿಲ್ಲ. ಜೊತೆಗೆ ನಾನು 5 ಲಕ್ಷ ರಿಬಾನ್ ಚೆಸ್ಮಾ ಹಾಕುತ್ತೇನೆ ಎಂದು ಖೂಬಾ ಹೇಳಿದ್ದಾರೆ. ನಾನು ಕನ್ನಡಕ ಖರೀದಿ ಮಾಡುವಾಗ ಅವರು ನನ್ನ ಜೊತೆಯಲ್ಲಿದ್ದರೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪೋಷಕರು 2 ಡೋಸ್ ಲಸಿಕೆ ಪಡೆಯದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ: ಅಶೋಕ್

    ನೀವು 10 ಲಕ್ಷ ರೂಪಾಯಿ ಸೂಟು – ಬೂಟು ಹಾಕಿಕೊಂಡು ಓಡಾಡುತ್ತಿರಾ. ನಿಮಗೆ 10 ಲಕ್ಷ ರೂ. ಎಲ್ಲಿಂದ ಬಂತು ಎಂದು ಯಾರನ್ನು ಕೇಳಬೇಕು ಎಂದ ಅವರು, ಪರಿಷತ್ ಚುನಾವಣೆಯ ಸೋಲಿನ ಭೀತಿಯಿಂದ ಅವರು ಈ ರೀತಿ ಕೇಳ ಮಟ್ಟದ ಹೇಳಿಕೆ ನೀಡುತ್ತಿದ್ದಾರೆ ಎಂದು ಈಶ್ವರ್ ಖಂಡ್ರೆ ಖೂಬಾ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಓಮಿಕ್ರಾನ್ ಆತಂಕ- ಮದುವೆ ಸಮಾರಂಭಗಳಲ್ಲಿ 500 ಮಂದಿಗಷ್ಟೇ ಅವಕಾಶ