Tag: ಉಗ್ರಪ್ಪ

  • ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ

    ಡಿಕೆಶಿಯನ್ನು 4 ದಶಕಗಳಿಂದ ಬಲ್ಲೆ, ಒಬ್ಬ ಒಳ್ಳೆಯ ಆಡಳಿತಗಾರ: ಉಗ್ರಪ್ಪ

    – ಡೀಲ್ ಆರೋಪದ ಬೆನ್ನಲ್ಲೇ ಡಿಕೆಶಿ ಗುಣಗಾಣ
    – ಪರ್ಸಂಟೇಜ್ ರಾಜಕಾರಣಕ್ಕೆ ಹೋದವರಲ್ಲ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ನಾನು ಕಳೆದ 4 ದಶಕಗಳಿಂದ ತಿಳಿದಿದ್ದೇನೆ. ಅವರೊಬ್ಬ ಒಳ್ಳೆಯ ಆಡಳಿತಗಾರ ಹಾಗೂ ಜನಪರ ಕಾಳಜಿ ಉಳ್ಳವರು ಎಂದು ಸಂಸದ ಉಗ್ರಪ್ಪ ಹಾಡಿಹೊಗಳಿದ್ದಾರೆ.

    ಡೀಲ್ ಆರೋಪದ ಸುದ್ದಿ ಭಾರೀ ಚರ್ಚೆಯಾಗುತ್ತಿದ್ದಂತೆಯೇ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನೇಕರು ಬಿಂಬಿಸಿದಂತೆ ಕಾಂಗ್ರೆಸ್ಸಿನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್ ಒಂದೇ ಅನ್ನೋದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಡಿಕೆಶಿಯವರು, ಸಿದ್ದರಾಮಯ್ಯ, ಖರ್ಗೆ, ಪರಮೇಶ್ವರ್ ಇನ್ನಿತರ ಎಲ್ಲಾ ನಾಯಕರು ಒಮ್ಮತದಿಂದ ಕಾಂಗ್ರೆಸ್ಸನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕೆಲವು ಮಾಧ್ಯಮಗಳು ಗುಂಪುಗಾರಿಕೆ ಇದೆ ಹೇಳುತ್ತಿರುವುದು ಸರಿಯಲ್ಲ ಎಂದು ಹೇಳುವ ಮೂಲಕ ಸಂಸದರು ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭ್ರಷ್ಟಾಚಾರ ಮುಕ್ತವಾಗಲಿ ಅನ್ನೋ ಕಾಳಜಿ ಇದ್ರೆ ಉಗ್ರಪ್ಪ ದೂರು ನೀಡಲಿ: ಆರಗ ಜ್ಞಾನೇಂದ್ರ

    ನಿನ್ನೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ನಾನು ಹೊರಗಡೆ ಬಂದು ಕುಳಿತ ತಕ್ಷಣ ಸಲೀಂ ಅವರು ನನ್ನ ಕಿವಿಯಲ್ಲಿ ಗುಣುಗುಟ್ಟಿದರು. ಪ್ರೆಸ್ ಮೀಟ್ ಗೂ ಮುನ್ನ ನಮ್ಮ ಪಕ್ಷ ಅಧ್ಯಕ್ಷರ ಬಗ್ಗೆ ಸುಖಾ ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಬಿಜೆಪಿಯವರು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಿದರು. ಆದರೆ ಮಾಧ್ಯಮದಲ್ಲಿ ಮಾತ್ರ ಸಲೀಂ ಹೇಳಿರುವುದನ್ನು ತಪ್ಪಾಗಿ ಅರ್ಥೈಸಲಾಗಿದೆ. ಮಾಧ್ಯಮಗಳಿದಲೇ ಅಪಾರ್ಥ ಆಗಿದೆ ಎಂದು ಹೇಳುವ ಮೂಲಕ ಉಗ್ರಪ್ಪ ಮಾತು ಮರೆಮಾಚಿದರು. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

    ಡಿಕೆಶಿಯವರು ಇಂದು ಆಸ್ತಿಯನ್ನು ಗಳಿಸಿದ್ದರೆ ಅದು ರಾಜಕಾರಣದಿಂದಲ್ಲ. ವ್ಯಾಪಾರ ಹಾಗೂ ಇನ್ನಿತರ ವ್ಯವಹಾರಗಳಿಂದ ಆಸ್ತಿ ಮಾಡಿದ್ದಾರೆ. ಅವರ ಜೀವನದಲ್ಲಿ ಎಂದಿಗೂ ಪರ್ಸೆಂಟೇಜ್ ರಾಜಕಾರಣಕ್ಕೆ ಹೋದವರಲ್ಲ. ಒಟ್ಟಿನಲ್ಲಿ ಪಕ್ಷದ ಅಧ್ಯಕ್ಷರೇ ಕೋಟಿಗಟ್ಟಲೇ ಡೀಲ್ ಮಾಡಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಬಯಲು ಮಾಡಿದ್ದಾರೆ ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.  ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ಡಿಕೆಶಿ ನಮ್ಮ ಪಕ್ಷದ ಅಧ್ಯಕ್ಷರು. ಅವರನ್ನು ನಾಲ್ಕು ದಶಕಗಳಿಂದ ಬಲ್ಲೆ. ಅವರು ಅತ್ಯಂತ ಕ್ರಿಯಾಶೀಲ, ಜನಪರ, ಬದ್ಧತೆ ಇರುವ ರಾಜಕಾರಣಿ. ರೈತ ಕುಟುಂಬದಿಂದ ಹುಟ್ಟಿ, ಇಂದು ರಾಜ್ಯ ಹಿರಿಯ ನಾಯಕರಲ್ಲಿ ಅವರೊಬ್ಬರು ಹಿರಿಯ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ ಎಂದು ಡಿಕೆಶಿ ಗುಣಗಾನ ಮಾಡಿದ ಅವರು, ಒಂದೆಡೆ ರಾಜಕಾರಣದಲ್ಲಿ ಅತ್ಯಂತ ಒಳ್ಳೆಯ ಆಡಳಿತಗಾರ, ರಾಜ್ಯದ ಅಭಿವೃದ್ಧಿ ಹಾಗೂ ಜನಪರ ರಾಜಕಾರಣಿ ಎಂದು ಹೇಳುವ ಮೂಲಕ ಪಾವಗಡದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯದ ಕುರಿತು ಮಾತನಾಡಿದರು. ಇದೇ ವೇಳೆ ಭ್ರಷ್ಟಾಚಾರ ಮುಕ್ತವಾಗಲು ಕಾಂಗ್ರೆಸ್ ಬದ್ಧವಾಗಿದೆ ಎಂದರು. ಇದನ್ನೂ ಓದಿ: ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

  • ಭ್ರಷ್ಟಾಚಾರ ಮುಕ್ತವಾಗಲಿ ಅನ್ನೋ ಕಾಳಜಿ ಇದ್ರೆ ಉಗ್ರಪ್ಪ ದೂರು ನೀಡಲಿ: ಆರಗ ಜ್ಞಾನೇಂದ್ರ

    ಭ್ರಷ್ಟಾಚಾರ ಮುಕ್ತವಾಗಲಿ ಅನ್ನೋ ಕಾಳಜಿ ಇದ್ರೆ ಉಗ್ರಪ್ಪ ದೂರು ನೀಡಲಿ: ಆರಗ ಜ್ಞಾನೇಂದ್ರ

    ಬೆಂಗಳೂರು: ರಾಜ್ಯ ಭ್ರಷ್ಟಾಚಾರ ಮುಕ್ತವಾಗಲಿ ಎಂಬ ಕಾಳಜಿ ಇದ್ದರೆ ಸಂಸದ ಉಗ್ರಪ್ಪ ಅವರು ಈ ಬಗ್ಗೆ ದೂರು ನಿಡಲಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ಕಾಂಗ್ರೆಸ್ ಪ್ರೆಸ್ ಮೀಟ್ ಅಲ್ಲಿ ಕಾಂಗ್ರೆಸ್ ನಾಯಕರಿಂದ ಡಿಕೆಶಿ ವಿರುದ್ಧ ಅಕ್ರಮ ಹೇಳಿಕೆ ಕುರಿತು ಮಾತನಾಡಿದ ಅವರು, ಈ ಬಗ್ಗೆ ಖಂಡಿತವಾಗ್ಲೂ ಉಗ್ರಪ್ಪ ಅವರು ದೂರು ನೀಡಲಿ. ಸುಮೋಟೊ ಕಷ್ಟ, ಹೀಗಾಗಿ ಅವರೇ ದೂರು ನೀಡಲಿ. ಭ್ರಷ್ಟಾಚಾರ ಮುಕ್ತವಾಗಲಿ ಅನ್ನೊ ಕಾಳಜಿ ಇದ್ದರೆ ದೂರು ನೀಡಲಿ. ಅವರು ದೂರು ನೀಡಿದರೆ ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಲು ಸೂಚಿಸುತ್ತೇನೆ ಎಂದರು.

    ಬರೀ ಬಾಯಿ ಮಾತಿನಲ್ಲಿ ಕಿವಿಯಲ್ಲಿ ಹೇಳಿದ್ರೆ ಅದು ಬೊಗಳೆ ಆಗುತ್ತೆ. ನಿಜವಾಗಲೂ ಭ್ರಷ್ಟಾಚಾರದ ಬಗ್ಗೆ ಹೋರಾಟ ಮಾಡಬೇಕು ಅನ್ನುವ ಮನಸಿದ್ದರೆ ದೂರು ಕೊಡ್ಲಿ ಎಂದು ಗೃಹ ಸಚಿವರು ತಿಳಿಸಿದರು. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

    ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಮಾಧ್ಯಮ ಸಂಯೋಜಕ ಸಲೀಂ ಡೀಲ್ ಆರೋಪ ಮಾಡಿರುವುದು ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೀಡಾಗಿದೆ. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದೆ. ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಹೇಳಿದ್ದರು. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ಜಲಸಂಪನ್ಮೂಲ ಇಲಾಖೆಯಲ್ಲಿ ಹೇಗೆ ಪರ್ಸಂಟೇಜ್ ಫಿಕ್ಸಾಗುತ್ತೆ ಎಂದು ಮಾತನಾಡಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಪರ್ಸಂಟೇಜ್ ಹೇಗೆ ಹಚ್ಚಾಯ್ತು..?, ಜಲಸಂಪನ್ಮೂಲ ಇಲಾಖೆಯಲ್ಲಿ ಮೊದಲೆಲ್ಲಾ 6 ರಿಂದ 8 ಪರ್ಸೆಂಟ್ ಇತ್ತು. ಡಿಕೆಶಿ ಬಂದ ಮೇಲೆ 12 ಪರ್ಸೆಂಟ್ ಮಾಡಿದರು ಎಂದು ಸಲೀಂ ಅವರು ಉಗ್ರಪ್ಪ ಬಳಿ ಹೇಳಿದ್ದರು. ಈ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದ ಇಬ್ಬರು ನಾಯಕರು ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

  • ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

    ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

    ಬೆಂಗಳೂರು: ಕಾಂಗ್ರೆಸ್ ನಾಯಕರೇ ಕೆಪಿಸಿಸಿ ಅಧ್ಯಕ್ಷರ ಡೀಲ್ ರಹಸ್ಯ ಬಯಲು ಮಾಡಿದ್ದು, ಇದೀಗ ಡಿಕೆಶಿಗೆ ಬಿಜೆಪಿ ತಿರುಗೇಟು ನೀಡಿದೆ.

    ಈ ಸಂಬಂಧ ಭ್ರಷ್ಟಾಧ್ಯಕ್ಷ ಎಂದು ಹ್ಯಾಶ್ ಟ್ಯಾಗ್ ಹಾಕಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಮಾನ್ಯ ಡಿಕೆಶಿ ಅವರೇ ಸೀಸರ್ ನ ಪತ್ನಿ ಅನುಮಾನಕ್ಕೆ ಅತೀತವಾಗಿರಬೇಕೆಂಬ ಮಾತಿದೆ. ಆದರೆ ಕೆಪಿಸಿಸಿ ಪಕ್ಷದ ವೇದಿಕೆಯಲ್ಲೇ ನಿಮ್ಮವರೇ ನಿಮ್ಮ ಬಗ್ಗೆ ಆಡಿರುವ ಅಧಿಕೃತ ಮಾತುಗಳ ಬಗ್ಗೆ ನೀವು ಸ್ಪಷ್ಟನೆ ನೀಡಲೇಬೇಕಲ್ಲವೇ?. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ, ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು ಕಾಂಗ್ರೆಸ್ ನಾಯಕ ಉಗ್ರಪ್ಪ ಹಾಗೂ ಸಲೀಂ ಅವರು ಸ್ಪಷ್ಟಪಡಿಸಿದ್ದಾರೆ. ಈಗಲೂ ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುತ್ತೀರಾ?. ಇದನ್ನೂ ಓದಿ: ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

    ಮುಖ್ಯಮಂತ್ರಿಯಾಗುವ ಡಿ.ಕೆ ಶಿವಕುಮಾರ್ ಅವರ ಕನಸಿಗೆ ಕಾಂಗ್ರೆಸ್ ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ. ನಿಮ್ಮ ಅಧ್ಯಕ್ಷ ಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ಪಪಕ್ಷೀಯರೇ ಷರಾ ಬರೆದುಬಿಟ್ಟಿದ್ದಾರೆ. ಈ ಮಾತುಗಳು, ಸಿದ್ದರಾಮಯ್ಯ ಅವರ ಬಹುದಿನಗಳ “ಡಿಕೆಶಿ ಪದಚ್ಯುತಿ” ಎಂಬ ಮಾಸ್ಟರ್ ಪ್ಲ್ಯಾನ್‍ನ ಭಾಗವೇ?.

    https://twitter.com/BJP4Karnataka/status/1448171886152585219

    ಡಿಕೆಶಿ ಅವರೇ, ನಿಮ್ಮ ಹುಡುಗರೇ 50 ರಿಂದ 100 ಕೋಟಿ ಇದೆಯಂತೆ, ಹಾಗಾದರೆ ಕೆಪಿಸಿಸಿ ಅಧ್ಯಕ್ಷರಾದ ನಿಮ್ಮ ಬಳಿ ಎಷ್ಟಿರಬಹುದು? ಇದು ಕೆಪಿಸಿಸಿ ಕಚೇರಿಯಿಂದಲೇ ಎದ್ದಿರುವ ಅಧಿಕೃತ ಅನುಮಾನ. ಈ ಪ್ರಶ್ನೆ ರಾಜ್ಯದ ಜನತೆಯನ್ನೂ ಕಾಡುತ್ತಿದೆ. ಇದಕ್ಕೆ ನೀವಲ್ಲದೆ ಇನ್ಯಾರು ಉತ್ತರಿಸುತ್ತಾರೆ ಎಂದು ಬರೆದುಕೊಂಡಿ ಡಿಕೆಶಿಗೆ ಟ್ಯಾಗ್ ಮಾಡಲಾಗಿದೆ. ಒಟ್ಟಿನಲ್ಲಿ ಸಲೀಂ ಹಾಗೂ ಉಗ್ರಪ್ಪ ನಡುವೆ ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿರುವ ಸಂಭಾಷಣೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಉಂಟುಮಾಡಿದೆ.

    ಡಿಕೆಶಿ ವಿರುದ್ಧ ಕಾಂಗ್ರೆಸ್ ನಾಯಕರ ಗುಸುಗುಸು ಮಾತಿಗೆ ನಿಮ್ಮ ಅಭಿಪ್ರಾಯಗಳೇನು..? 

  • ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

    ಅಯ್ಯೋ ಇಲ್ಲ ಸರ್, ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ: ಸಲೀಂ, ಉಗ್ರಪ್ಪ ಸಮರ್ಥನೆ

    ಬೆಂಗಳೂರು: ಅಯ್ಯೋ ಇಲ್ಲ ಸರ್.. ಡಿಕೆಶಿ ಕಲೆಕ್ಷನ್ ಗಿರಾಕಿ ಅಲ್ಲ. ಅದು ನಾನು ತಪ್ಪಾಗಿ ಹೇಳಿದ್ದೇನೆ ಎಂದು ಹೇಳುವ ಮೂಲಕ ಕೆಪಿಸಿಸಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ಸಮರ್ಥನೆ ಮಾಡಿಕೊಂಡಿದ್ದಾರೆ.

    ಡಿಕೆಶಿಯವರು ಒಳ್ಳೆಯ ನಾಯಕ. ವಿಜಯೇಂದ್ರ ಬಂದ ಬಳಿಕ ಕಲೆಕ್ಷನ್ ಜಾಸ್ತಿಯಾಗಿದೆ. ಇದನ್ನು ಇಲ್ಲಿಗೆ ಬಿಟ್ಟು ಬಿಡಿ ಎಂದು ಕಾಂಗ್ರೆಸ್ ನಾಯಕರು ಪಬ್ಲಿಕ್ ಟಿವಿ ಜೊತೆ ಎಕ್ಸ್ ಕ್ಲೂಸೀವ್ ಆಗಿ ಮಾತನಾಡಿದ್ದಾರೆ.

    ನಾವು ಹೇಳಿದ ವಿಚಾರವಷ್ಟೇ ವರದಿ ಮಾಡಬೇಕಿತ್ತು. ನಾವು ಮಾತಾಡಿದ್ದು ಇವತ್ತಿನ ಪರಿಸ್ಥಿತಿ ಅಷ್ಟೇ ಎಂದು ಹೇಳುವ ಮೂಲಕ ಉಗ್ರಪ್ಪ ಅವರು ಮಾಧ್ಯಮಗಳಿಗೆ ನೀತಿ ಪಾಠ ಮಾಡಿದ್ದಾರೆ.

    ಹೇಳಿದ್ದೇನು..?
    ರಾಜ್ಯ ರಾಜಕಾರಣದಲ್ಲಿ ಪರ್ಸಂಟೇಜ್ ಕೋಲಾಹಲ ಎಬ್ಬಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಪರ್ಸಂಟೇಜ್ ಆರೋಪವೊಂದು ಕೇಳಿಬಂದಿದ್ದು, ಕಾಂಗ್ರೆಸ್ ನಾಯಕರೇ ಈ ಕಹಾನಿಯನ್ನು ಬಿಚ್ಚಿಟ್ಟಿದ್ದಾರೆ. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದೆ. ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವುದು ಇದೀಗ ಭಾರೀ ಚರ್ಚೆಯಾಗುತ್ತಿದೆ.

    ಜಲಸಂಪನ್ಮೂಲ ಇಲಾಖೆಯಲ್ಲಿ ಹೇಗೆ ಪರ್ಸಂಟೇಜ್ ಫಿಕ್ಸಾಗುತ್ತೆ ಎಂದು ಮಾತನಾಡಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಪರ್ಸಂಟೇಜ್ ಹೇಗೆ ಹಚ್ಚಾಯ್ತು..?, ಜಲಸಂಪನ್ಮೂಲ ಇಲಾಖೆಯಲ್ಲಿ ಮೊದಲೆಲ್ಲಾ 6 ರಿಂದ 8 ಪರ್ಸೆಂಟ್ ಇತ್ತು. ಡಿಕೆಶಿ ಬಂದ ಮೇಲೆ 12 ಪರ್ಸೆಂಟ್ ಮಾಡಿದರು ಎಂದು ಸಲೀಂ ಅವರು ಉಗ್ರಪ್ಪ ಬಳಿ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ಇದೇ ವೇಳೆ ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ ಗಳಾಗಿರುವ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯು ಪ್ರಸ್ತಾಪ ಮಾಡಿದ್ದಾರೆ. ವಾರದ ಹಿಂದೆ ಈ ಕಾಂಟ್ರಕ್ಟರ್ ಗಳ ಮೇಲೆ ಐಟಿ ದಾಳಿ ನಡೆದಿತ್ತು. ಪ್ರೆಸ್ ಮೀಟ್ ಗೂ ಮುನ್ನ ಈ ವಿಚಾರದ ಬಗ್ಗೆ ಸಲೀಂ ಹಾಗೂ ಉಗ್ರಪ್ಪ ಚರ್ಚೆ ನಡೆಸಿದ್ದರು. ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಸಚಿವರಾಗಿದ್ದಾಗಲೂ ಇದೆ ಕಾಂಟ್ರಾಕ್ಟರ್ ಗಳು ಇದ್ದರು. ಡಿಕೆಶಿ ಆಪ್ತ ಮುಳಗುಂದ ಸಾಕಷ್ಟು ದುಡ್ಡು ಮಾಡಿದ್ದಾರೆ. ಮುಳಗುಂದ 50-100 ಕೋಟಿ ಮಾಡಿದ್ದಾನೆ ಅಂದ್ರೆ ಡಿಕೆ ಹತ್ತಿರ ಎಷ್ಟಿರಬೇಕು ಲೆಕ್ಕ ಹಾಕಿ. ಡಿಕೆ ಬರೀ ಕಲೆಕ್ಷನ್ ಗಿರಾಕಿ ಎಂದಿದ್ದಾರೆ.

  • ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪರ್ಸಂಟೇಜ್ ಕೋಲಾಹಲ ಎಬ್ಬಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಪರ್ಸಂಟೇಜ್ ಆರೋಪವೊಂದು ಕೇಳಿಬಂದಿದ್ದು, ಕಾಂಗ್ರೆಸ್ ನಾಯಕರೇ ಈ ಕಹಾನಿಯನ್ನು ಬಿಚ್ಚಿಟ್ಟಿದ್ದಾರೆ.

    ಹೌದು. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತ, ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಸಂಸದ ಉಗ್ರಪ್ಪ ನಡುವೆ ಸಂಭಾಷಣೆ ನಡೆದಿದೆ. ಡಿಕೆಶಿ ಅವರು ಕಲೆಕ್ಷನ್ ಗಿರಾಕಿ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹೇಳಿರುವುದು ಇದೀಗ ಭಾರೀ ಚರ್ಚೆಯಾಗುತ್ತಿದೆ.

    ಶಿವಮೊಗ್ಗದ ಸಾಗರ ಮೂಲದ ಸಲೀಂ. ಕಳೆದ 15 ವರ್ಷಗಳಿಂದ ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ತಮ್ಮ ಆಪ್ತನಿಂದಲೇ ಪರ್ಸಂಟೇಜ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಹೇಗೆ ಪರ್ಸಂಟೇಜ್ ಫಿಕ್ಸಾಗುತ್ತೆ ಎಂದು ಮಾತನಾಡಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಪರ್ಸಂಟೇಜ್ ಹೇಗೆ ಹೆಚ್ಚಾಯ್ತು..?, ಜಲಸಂಪನ್ಮೂಲ ಇಲಾಖೆಯಲ್ಲಿ ಮೊದಲೆಲ್ಲಾ 6 ರಿಂದ 8 ಪರ್ಸೆಂಟ್ ಇತ್ತು. ಡಿಕೆಶಿ ಬಂದ ಮೇಲೆ 12 ಪರ್ಸೆಂಟ್ ಮಾಡಿದರು ಎಂದು ಸಲೀಂ ಅವರು ಉಗ್ರಪ್ಪ ಬಳಿ ಹೇಳಿದ್ದಾರೆ.

    ಇದೇ ವೇಳೆ ಜಲ ಸಂಪನ್ಮೂಲ ಇಲಾಖೆಯ ಕಾಂಟ್ರಾಕ್ಟರ್ ಗಳಾಗಿರುವ ಉಪ್ಪಾರ್, ಜೀ.ಶಂಕರ್ ಹನುಮಂತಪ್ಪರ ಬಗ್ಗೆಯು ಪ್ರಸ್ತಾಪ ಮಾಡಿದ್ದಾರೆ. ವಾರದ ಹಿಂದೆ ಈ ಕಾಂಟ್ರಕ್ಟರ್ ಗಳ ಮೇಲೆ ಐಟಿ ದಾಳಿ ನಡೆದಿತ್ತು. ಪ್ರೆಸ್ ಮೀಟ್ ಗೂ ಮುನ್ನ ಈ ವಿಚಾರದ ಬಗ್ಗೆ ಸಲೀಂ ಹಾಗೂ ಉಗ್ರಪ್ಪ ಚರ್ಚೆ ನಡೆಸಿದ್ದರು. ಡಿ.ಕೆ.ಶಿವಕುಮಾರ್ ಜಲ ಸಂಪನ್ಮೂಲ ಸಚಿವರಾಗಿದ್ದಾಗಲೂ ಇದೆ ಕಾಂಟ್ರಾಕ್ಟರ್ ಗಳು ಇದ್ದರು. ಡಿಕೆಶಿ ಆಪ್ತ ಮುಳಗುಂದ ಸಾಕಷ್ಟು ದುಡ್ಡು ಮಾಡಿದ್ದಾರೆ. ಮುಳಗುಂದ 50-100 ಕೋಟಿ ಮಾಡಿದ್ದಾನೆ ಅಂದ್ರೆ ಡಿಕೆ ಹತ್ತಿರ ಎಷ್ಟಿರಬೇಕು ಲೆಕ್ಕ ಹಾಕಿ. ಡಿಕೆ ಬರೀ ಕಲೆಕ್ಷನ್ ಗಿರಾಕಿ ಎಂದಿದ್ದಾರೆ. ಇದನ್ನೂ ಓದಿ: ಸಮಂತಾರಿಂದ ದೂರವಾಗ್ತಿದ್ದಂತೆ ಹೊಸ ಮನೆ ಖರೀದಿಸಿದ ನಟ ನಾಗಚೈತನ್ಯ

    ಸಲೀಂ- ಉಗ್ರಪ್ಪ ನಡುವಿನ ಸಂಭಾಷಣೆ ಇಂತಿದೆ.
    ಸಲೀಂ: ಏನು ಗೊತ್ತಾ..? ಮೊದಲು 6 ರಿಂದ 8 ಪರ್ಸೆಂಟ್ ಇತ್ತು. ಡಿ.ಕೆ.ಬಂದು 12 ಪರ್ಸೆಂಟ್ ಮಾಡಿದ್ರು.ಡಿಕೆ ಮಾಡ್ಸಿರೋದು ಅದೆಷ್ಟು ಮಾಡ್ಸಿದ್ರೋ ಜಾಸ್ತಿ…ಹಾ ಹಾ
    ಉಗ್ರಪ್ಪ : ಹಾ ಹಾ

    ಸಲೀಂ : ಉಪ್ಪಾರ್ ಜೀ.ಶಂಕರ್ ಹನುಮಂತಪ್ಪ ಬಳ್ಳಾರಿಯವನು ಹನುಮಂತಪ್ಪ ಗೊತ್ತಾ ಸಾರ್ ಹೊಸಪೇಟೆ ಉಪ್ಪಾರ್ ಬೆಂಗಳೂರು ಜಿ.ಶಂಕರ್ ಉಡುಪಿ
    ಉಗ್ರಪ್ಪ :ಉಪ್ಪಾರ್ ಬಿಜಾಪುರ್
    ಸಲೀಂ : ಹೋ ಬಿಜಾಪುರ…?

    ಸಲೀಂ : ಅದರಲ್ಲಿ ಇವರ್ದಲ್ಲ ಸಾರ್ ಮುಳಗುಂದ 50-100 ಕೋಟಿ.ಮುಳಗುಂದ 50-100 ಕೋಟಿ ಮಾಡಿದಾನೆ ಅಂದ್ರೆ ಇವನ ಹತ್ತಿರ ಎಷ್ಟಿರಬೇಕು ಡಿಕೆ ಹತ್ತಿರ ಲೆಕ್ಕಾ ಹಾಕಿ ಬರಿ ಕಲೆಕ್ಷನ್ ಗಿರಾಕಿ.
    ಉಗ್ರಪ್ಪ: ಅದು ನಮಗೆ ಗೊತ್ತಿಲ್ಲ.

  • ಬಿಜೆಪಿಯವರು ಸಚಿವರಾಗಿದ್ದು ಕರಾಳ ದಿನವಾದರೆ, ಉಗ್ರಪ್ಪ ಎಂಪಿ ಆಗಿದ್ದು ಸುದಿನವೇ: ಸಿಸಿ ಪಾಟೀಲ್ ಪ್ರಶ್ನೆ

    ಬಿಜೆಪಿಯವರು ಸಚಿವರಾಗಿದ್ದು ಕರಾಳ ದಿನವಾದರೆ, ಉಗ್ರಪ್ಪ ಎಂಪಿ ಆಗಿದ್ದು ಸುದಿನವೇ: ಸಿಸಿ ಪಾಟೀಲ್ ಪ್ರಶ್ನೆ

    ಹಾಸನ: ಬಿಜೆಪಿಯವರು ಸಚಿವರಾಗಿದ್ದು ಕರಾಳ ದಿನವಾದರೆ, ಉಗ್ರಪ್ಪ ಎಂಪಿ ಆಗಿದ್ದು ಸುದಿನಾನ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆಯ ಸಚಿವ ಸಿಸಿ ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ.

    ಹಾಸನದಲ್ಲಿ ಮಾತನಾಡಿದ ಅವರು ಹಿಂದಿನ ಸರ್ಕಾರದ ತಪ್ಪು ನೀತಿಯಿಂದ ಮರಳು ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ತೆಲಂಗಾಣ ಮಾದರಿ ಮರಳು ನೀತಿ ತರಲು ಚಿಂತನೆ ನಡೆಸಲಾಗಿದೆ. ಸರ್ಕಾರಕ್ಕೆ ಹೆಚ್ಚಿನ ಆದಾಯ ಬರಬೇಕು. ಅಕ್ರಮ ಗಣಿಗಾರಿಕೆ ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನೈಸರ್ಗಿಕ ಖನಿಜ ಸಂಪತ್ತು ಲೂಟಿಕೋರರ ವಶವಾಗದ ರೀತಿ ಕೆಲಸ ಮಾಡುತ್ತಿದ್ದೇವೆ ಎಂದರು.

    ಇದೇ ವೇಳೆ ಮಾಜಿ ಸಚಿವ ವಿಶ್ವನಾಥ್ ಏಕಾಂಗಿಯಾಗಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಸಾವಿರಾರು ಹೋರಾಟ ಮಾಡಿ ಈ ಸ್ಥಾನ ತಲುಪಿದ್ದಾರೆ. ಅವರು ಎಲ್ಲವನ್ನೂ ಸರಿ ಮಾಡುತ್ತಾರೆ ಎಂದು ತಿಳಿಸಿದರು.

    ಸಚಿವ ಸಂಪುಟ ವಿಸ್ತರಣೆ ಕರಾಳ ದಿನ ಎಂಬ ಉಗ್ರಪ್ಪ ಹೇಳಿಕೆಗೆ ವ್ಯಂಗ್ಯವಾಡಿದ ಅವರು, ಅವರ ಮನೆಯವರು ಏನಂತ ಹೆಸರಿಟ್ಟಿದ್ದಾರೆ. ಉಗ್ರಪ್ಪ ಅವರು ಯಾರನ್ನಾದರೂ ಹೊಗಳಿದ್ದು ಇದೆಯೇ ಬಿಜೆಪಿಯವರು ಮಂತ್ರಿಯಾಗಿದ್ದು ಕರಾಳ ದಿನ ಎಂದರೆ ಅವರು ಎಂಪಿಯಾದ ದಿನ ಸುದಿನವೇ? ನಮ್ಮ ಪಕ್ಷದವರು ಸಚಿವರಾದರೆ ಅದು ಕರಾಳ ದಿನ ಅವರ ಪಕ್ಷದವರಾದರೆ ಸುದಿನವೇ ಎಂದು ಪ್ರಶ್ನೆ ಮಾಡಿದರು.

  • ಹುಣಸೂರಿನಲ್ಲಿ ಆಮಿಷವೊಡ್ಡಿ ಬಿಜೆಪಿ ಮತದಾರರನ್ನು ಸೆಳೆಯುತ್ತಿದೆ: ಕಾಂಗ್ರೆಸ್ ಆರೋಪ

    ಹುಣಸೂರಿನಲ್ಲಿ ಆಮಿಷವೊಡ್ಡಿ ಬಿಜೆಪಿ ಮತದಾರರನ್ನು ಸೆಳೆಯುತ್ತಿದೆ: ಕಾಂಗ್ರೆಸ್ ಆರೋಪ

    ಬೆಂಗಳೂರು: ಹುಣಸೂರು ಉಪ ಚುನಾವಣೆಯಲ್ಲಿ ಬಿಜೆಪಿ ಆಮಿಷ ಒಡ್ಡಿ ಮತದಾರರನ್ನು ಸೆಳೆಯುತ್ತಿದ್ದು ಚುನಾವಣೆ ಆಯೋಗ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಧ್ಯಮ ವಿಭಾಗ ಮುಖ್ಯಸ್ಥ ಉಗ್ರಪ್ಪ, ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಹುಣಸೂರು ಕ್ಷೇತ್ರದಲ್ಲಿ ಅವ್ಯವಹಾರ, ಅಕ್ರಮ ನಡೆಯುತ್ತಿದೆ. ಯೋಗೇಶ್ವರ್ ಫೋಟೋ ಸಮೇತ ಸೀರೆಗಳು ಕ್ಷೇತ್ರದಲ್ಲಿ ಸಿಕ್ಕಿವೆ. ಯೋಗೇಶ್ವರ್ ಅವರ ಭಾವಚಿತ್ರ ಸಮೇತ ಮತ ಬಿಜೆಪಿ ಹಾಕಿ ಅಂತ ಆಮಿಷ ಒಡ್ಡಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

    ಬಿಜೆಪಿ ಅಕ್ರಮ ಮಾರ್ಗದಲ್ಲಿ ಚುನಾವಣೆ ನಡೆಸುತ್ತಿದೆ. ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾಗಿದ್ದಾರೆ. ಆದರೆ ಬಿಜೆಪಿ ಅವರೇ ಇದನ್ನು ಮಾಡಿದ್ದಾರೆ. ಕೂಡಲೇ ಚುನಾವಣೆ ಆಯೋಗ ಸುಮೋಟೋ ಕೇಸ್ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು. ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕಾರ ಮಾಡಬೇಕು. ಹುಣಸೂರು ಕ್ಷೇತ್ರದಲ್ಲಿ ಬಿಜೆಪಿಯನ್ನು ಚುನಾವಣೆ ಕಣದಿಂದ ಹಿಂದೆ ಕಳಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಈ ವೇಳೆ ಮಾತನಾಡಿದ ಉಗ್ರಪ್ಪ ಬಿಜೆಪಿಯ ಈ ಕೆಲಸ ನೋಡಿದರೆ ಸೋಲನ್ನು ಒಪ್ಪಿಕೊಂಡಿದ್ದಾರೆ ಅನ್ನಿಸುತ್ತೆ. 15 ಕ್ಷೇತ್ರದಲ್ಲಿ ಗೆಲುವು ಸಾಧ್ಯ ಇಲ್ಲ ಅಂತ ವಾಮ ಮಾರ್ಗದಲ್ಲಿ ಗೆಲ್ಲಲು ಪ್ಲ್ಯಾನ್ ಮಾಡಿದೆ. ಹುಣಸೂರಿನಲ್ಲಿ 30 ಸಾವಿರ ಸೀರೆ ಹಂಚುವ ಕೆಲಸ ಮಾಡುತ್ತಿದ್ದಾರೆ. ಸಿಎಂ ಕೂಡಾ ಶಿವಾಜಿನಗರದ ಟಿಕೆಟ್ ಅನ್ನು ತಮಿಳು ಜನಾಂಗದವರಿಗೆ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಅನರ್ಹರನ್ನ ಮಂತ್ರಿ ಮಾಡೋದಾಗಿ ಸಿಎಂ ಹೇಳಿದ್ದಾರೆ. ಶಂಕರ್ ಅವರನ್ನು ಎಂಎಲ್‍ಸಿ ಮಾಡಿ ಮಂತ್ರಿ ಮಾಡ್ತೀನಿ ಎಂದು ಸಿಎಂ ಹೇಳಿದ್ದಾರೆ. ಇದು ಕಾನೂನಿನ ಪ್ರಕಾರ ಅಪರಾಧ.ಬಿಜೆಪಿ ಆಮಿಷ ಒಡ್ಡಿ ಚುನಾವಣೆ ಗೆಲ್ಲಲು ಹೋಗ್ತಿದೆ, ಕೂಡಲೇ ಚುನಾವಣೆ ಆಯೋಗ ಕ್ರಮ ಜರುಗಿಸಬೇಕು ಅಂತ ಒತ್ತಾಯಿಸಿದರು.

  • ಸಜ್ಜನ ರಾಜಕಾರಣಿ ರಾಮಲಿಂಗಾರೆಡ್ಡಿಗೆ ದೇವ್ರು ಒಳ್ಳೆ ಬುದ್ಧಿ ಕೊಟ್ಟು ವಾಪಸ್ ಬರುವಂತೆ ಮಾಡ್ಲಿ- ಉಗ್ರಪ್ಪ

    ಸಜ್ಜನ ರಾಜಕಾರಣಿ ರಾಮಲಿಂಗಾರೆಡ್ಡಿಗೆ ದೇವ್ರು ಒಳ್ಳೆ ಬುದ್ಧಿ ಕೊಟ್ಟು ವಾಪಸ್ ಬರುವಂತೆ ಮಾಡ್ಲಿ- ಉಗ್ರಪ್ಪ

    ಬೆಂಗಳೂರು: ಅತೃಪ್ತ ಶಾಸಕರಲ್ಲೊಬ್ಬರು ಒಬ್ಬರಾದ ರಾಮಲಿಂಗಾ ರೆಡ್ಡಿಯವರು ಒಳ್ಳೆಯ ರಾಜಕಾರಣಿಯಾಗಿದ್ದಾರೆ. ಹೀಗಾಗಿ ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಟ್ಟು ವಾಪಸ್ ಬರುವಂತೆ ಮಾಡಲಿ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತರು ರಾಜೀನಾಮೆ ವಾಪಸ್ ಪಡೆದುಕೊಳ್ತಾರೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯುವಂತಾಗಲಿ ಎಂದು ಆಶೀಸುವುದಾಗಿ ಅವರು ತಿಳಿಸಿದರು.

    ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮುಗಿಸಲು ಏನೆಲ್ಲ ಸಂಚು ಮಾಡಬೇಕೋ ಅದನ್ನೆಲ್ಲ ಬಿಜೆಪಿ ಮಾಡುತ್ತಿದೆ. ಬಿಜೆಪಿಯವರು ಪ್ರಜಾಪ್ರಭುತ್ವದ ಮೌಲ್ಯಗಳು, ಜನಾದೇಶಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ ಅನ್ನೋದು ಇದೆ. ಹಾಗೆ ಎಲ್ಲರಿಗೂ ಒಂದು ಕಾಲ ಬರುತ್ತದೆ ಎಂದು ಗರಂ ಆದರು.

    ಬಿಜೆಪಿಗೆ ಯಾವುದೇ ಪಕ್ಷ ಬೆಂಬಲ ನೀಡಲು ಬಂದಿರಲಿಲ್ಲ. ಹಾಗಾಗಿ ನಾವು ಸರ್ಕಾರ ರಚನೆ ಮಾಡಿದೆವು. ಹೀಗಾಗಿ ಬಿಜೆಪಿಯವರು ಅನ್ಯ, ವಾಮಮಾರ್ಗಗಳನ್ನು ಹಿಡಿದಿದ್ದಾರೆ ಎಂದು ಅವರು ಕಿಡಿಕಾರಿದರು.

    ಕೇಂದ್ರ ಬಜೆಟ್ ನ ಮರುದಿನ ಅಂದರೆ ಶನಿವಾರ ಸಮ್ಮಿಶ್ರ ಸರ್ಕಾರದ 13 ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ. ಆ ಬಳಿಕ ರಾಮಲಿಂಗಾ ರೆಡ್ಡಿ, ಮುನಿರತ್ನ ಹಾಗೂ ಆನಂದ್ ಸಿಂಗ್ ಹೊರತು ಪಡಿಸಿ ಉಳಿದೆಲ್ಲ ಶಾಸಕರು ಅಂದೇ ಮುಂಬೈಗೆ ಹಾರಿದ್ದಾರೆ. ಅಲ್ಲದೆ ಸ್ಪೀಕರ್ ಅವರು ನಮ್ಮ ರಾಜೀನಾಮೆ ಅಂಗೀಕರಿಸದೇ ನಾವು ಬೆಂಗಳೂರಿಗೆ ವಾಪಸ್ ಆಗುವ ಮಾತೇ ಇಲ್ಲ ಎಂದು ಎಚ್ಚರಿಸಿದ್ದಾರೆ. ಇತ್ತ ಅಸಮಾಧಾನಿತರನ್ನು ಮನವೊಲಿಸುವ ಪ್ರಯತ್ನ ಕೈ-ತೆನೆಯಿಂದ ಭರದಿಂದ ಸಾಗುತ್ತಿದ್ದು, ಕಾಂಗ್ರೆಸ್ಸಿನ ಎಲ್ಲರು ತಮ್ಮ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಲಾಗಿದೆ.

  • ಶ್ರೀರಾಮುಲು ವಿರುದ್ಧ ದೂರು ದಾಖಲು

    ಶ್ರೀರಾಮುಲು ವಿರುದ್ಧ ದೂರು ದಾಖಲು

    ಧಾರವಾಡ: ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಮತ್ತು ಕುಂದಗೋಳ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ ವಿರುದ್ಧ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದಾರೆ.

    ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಧಾರವಾಡ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಶ್ರೀರಾಮುಲು ಶಿವಳ್ಳಿ ನಿಧನಕ್ಕೆ ಮೈತ್ರಿ ಸರ್ಕಾರವೇ ಕಾರಣ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪ್ರಜಾಪ್ರತಿನಿಧಿ ಕಾಯ್ದೆಯ ಅಡಿ ಹಾಗೂ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

    ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಡಿಸಿ ದೀಪಾ ಚೋಳನ್ ಅವರಿಗೆ ಛಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಬಿಡ್ನಾಳ ಹೆಸರಿನಲ್ಲಿ ದೂರು ಸಲ್ಲಿಸಲಾಗಿದೆ. ದೂರು ನೀಡುವ ವೇಳೆ ಸಂಸದ ವಿ.ಎಸ್. ಉಗ್ರಪ್ಪ ಮತ್ತು ಇತರರು ಭಾಗಿಯಾಗಿದ್ದರು. ದೂರಿನ ಜೊತೆಗೆ ಕೈ ಮುಂಖಡರು ಶ್ರೀರಾಮುಲು ಹೇಳಿಕೆಯ ಪೆನ್‍ಡ್ರೈವ್ ಸಹ ನೀಡಿದ್ದಾರೆ.

    ಶ್ರೀರಾಮುಲು ವಿರುದ್ಧ ಡಿಸಿಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಉಗ್ರಪ್ಪ, ಕಾಂಗ್ರೆಸ್ ನಿಯೋಗದಿಂದ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದೇವೆ. ದೂರಿನ ಜೊತೆಗೆ ಡಿಸಿಗೆ ರಾಮುಲು ಆಡಿದ ಮಾತಿನ ಪೆನ್‍ಡ್ರೈವ್ ಕೂಡ ಕೊಟ್ಟಿದ್ದೇವೆ. ರಾಮುಲು ಹೇಳಿಕೆಯಲ್ಲಿ ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂದಿರುವುದು ಸ್ಪಷ್ಟವಾಗಿದೆ. ಕಿರುಕುಳ ನೀಡಿ ಮೃತಪಟ್ಟಿರುವುದು ಗೊತ್ತಿದ್ದರೆ ಸುಮ್ಮನೆ ಯಾಕೆ ಇದ್ದರು. ಕೃತ್ಯದ ಮಾಹಿತಿ ಗೊತ್ತಿದ್ದು ಮುಚ್ಚಿಡುವ ಕಾರ್ಯ ಮಾಡಿದರೆ ಅದು ಕೂಡ ಒಂದು ಅಪರಾಧ. ಅದನ್ನು ಕೂಡ ನಾವು ದೂರಿನಲ್ಲಿ ಪ್ರಸ್ತಾಪ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಶ್ರೀರಾಮುಲು, ಕುಂದಗೋಳ ಅಭ್ಯರ್ಥಿ ಚಿಕ್ಕನಗೌಡರ ಹಾಗೂ ಬಿಜೆಪಿ ಕೂಡ ಇದಕ್ಕೆ ಹೊಣೆಗಾರರಾಗಿದ್ದಾರೆ. ರಾಮುಲು ರಾಜಕೀಯ ಮತಕ್ಕಾಗಿ ಸಾವನ್ನು ಬಳಸಿಕೊಳ್ಳುವ ಸಣ್ಣತನ ತೋರಿದ್ದಾರೆ. ನಾನು ರಾಮುಲು ಕ್ಷಮೆಯಾಚಿಸುತ್ತಾರೆ ಎಂದು ಭಾವಿಸಿದ್ದೆ. ಆದರೆ ನನ್ನ ಹೇಳಿಕೆಯನ್ನೇ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ರಾಮುಲು ನನ್ನ ಕ್ಷೇತ್ರದ ಮತದಾರ, ಹೀಗಾಗಿ ಅವರ ಹೇಳಿಕೆಗೆ ನಾನು ಕ್ಷಮೆ ಕೇಳುವೆ. ಚುನಾವಣಾ ಆಯೋಗ ಅವರ ಮೇಲೆ ಕೇಸ್ ದಾಖಲಿಸಬೇಕು. ಬಿಎಸ್‍ವೈ, ಅಮಿತ್ ಶಾ ತಮ್ಮ ನಾಯಕರ ಮಾತಿನ ಬಗ್ಗೆ ಅರಿತುಕೊಳ್ಳಬೇಕು ಈ ಹೇಳಿಕೆಗೆ ಪಕ್ಷವಾದರೂ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

  • ಆನಂದ್ ಸಿಂಗ್ ನೋಡೋದಕ್ಕೆ ದುರ್ಯೋಧನ, ಮನಸ್ಸು ಧರ್ಮರಾಯನಂತೆ: ವಿ.ಎಸ್. ಉಗ್ರಪ್ಪ

    ಆನಂದ್ ಸಿಂಗ್ ನೋಡೋದಕ್ಕೆ ದುರ್ಯೋಧನ, ಮನಸ್ಸು ಧರ್ಮರಾಯನಂತೆ: ವಿ.ಎಸ್. ಉಗ್ರಪ್ಪ

    ಬಳ್ಳಾರಿ: ಹೊಸಪೇಟೆ ಶಾಸಕ ಆನಂದ್ ಸಿಂಗ್ ನಿಜಕ್ಕೂ ದುರ್ಯೋಧನ. ಆನಂದ್ ಸಿಂಗ್ ನೋಡೋಕೆ ದುಯೋರ್ಧನ ನಂತೆ ಕಂಡರೂ ಅವರು ಧರ್ಮರಾಯನಂತೆ ಇದ್ದಾರೆ ಎಂದು ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ವಿ. ಎಸ್. ಉಗ್ರಪ್ಪ ಹೇಳಿದ್ದಾರೆ.

    ಹೊಸಪೇಟೆ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪರಿವರ್ತನಾ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಉಗ್ರಪ್ಪ, ಶಾಸಕ ಆನಂದ್ ಸಿಂಗ್ ಹಾಗೂ ಅವರ ಸೋದರಳಿಯ ಸಂದೀಪ್ ಸಿಂಗ್ ರನ್ನ ಹೊಗಳಿ ಅಟ್ಟಕ್ಕೆ ಎರಿಸುವ ಮೂಲಕ ಮತ ಬೇಟೆಗೆ ರಣತಂತ್ರ ರೂಪಿಸಿದ್ದಾರೆ.

    ಆನಂದ್ ಸಿಂಗ್ ದೂರದಿಂದ ನೋಡಿದ್ರೆ ದುರ್ಯೋಧನನ ರೀತಿಯಲ್ಲಿ ಕಾಣುತ್ತಾರೆ. ಆದರೆ ಹತ್ತಿರದಿಂದ ಧರ್ಮರಾಯನಂತೆ ಕಾಣುತ್ತಾರೆ. ಅಲ್ಲದೆ ನಾನೂ ಬಳ್ಳಾರಿಯ ಗಿಡ್ಡನಾದರೆ ಆನಂದ್ ಸಿಂಗ್ ಸೋದರಳಿಯ ಸಂದೀಪ್ ಸಿಂಗ್ ಹೊಸಪೇಟೆ ಗಿಡ್ಡ ಎನ್ನುವ ಮೂಲಕ ಸಂದೀಪ್ ಸಿಂಗ್ ನ ಸಂಘಟನಾ ಚಾತುಯ್ರ್ಯತೆಯನ್ನು ಹೊಗಳಿ ಕೊಂಡಾಡಿದ್ದಾರೆ.

    ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಹಾಗೂ ಆನಂದ್ ಸಿಂಗ್ ರ ಗಲಾಟೆ ನಂತರ ಇಬ್ಬರಿಂದಲೂ ಅಂತರ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಇದೀಗ ಜೆ.ಎನ್ ಗಣೇಶ್ ಬೆಂಬಲಿಗರಿಂದ ಘೇರಾವ್ ಹಾಕಿಸಿಕೊಂಡ ಬೆನ್ನಲ್ಲೆ ಹೊಸಪೇಟೆ ಶಾಸಕ ಆನಂದಸಿಂಗ್ ಬೆಂಬಲಕ್ಕೆ ನಿಂತಿದ್ದಾರೆ.