ಈಗಾಗಲೇ ಸಾಕಷ್ಟು ಬಾರಿ ಅಶಕ್ತರ ನೆರವಿಗೆ ನಿಂತಿರುವ ನಟ, ನಿರ್ಮಾಪಕ, ನಿರ್ದೇಶಕ ರಾಘವ್ ಲಾರೆನ್ಸ್ (Raghav Lawrence), ಈಗ ರೈತರ ಸಹಾಯಕ್ಕೆ ಹಸ್ತ ಚಾಚಿದ್ದಾರೆ. ಮೇ 1ರಂದು ಕಾರ್ಮಿಕ ದಿನಾಚರಣೆಯ ದಿನದಂದು ರೈತರಿಗೆ ಟ್ರ್ಯಾಕ್ಟರ್ (Tractor) ಅನ್ನು ಉಚಿತ ಕೊಡುವುದಾಗಿ ಅವರು ಘೋಷಣೆ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತಂತೆ ಪೋಸ್ಟ್ ಮಾಡಿರುವ ರಾಘವ್ ಲಾರೆನ್ಸ್, ರೈತರಿಗೆ ಉಚಿತವಾಗಿ 10 ಟ್ರ್ಯಾಕ್ಟರ್ ಗಳನ್ನು ಕೊಡಲು ಮುಂದಾಗಿರುವೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು. ರೈತರ ಕಣ್ಣಲ್ಲಿ ನಾನು ಆನಂದವನ್ನು ಕಾಣಲು ಬಯಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ರೈತರಿಗೆ ಟ್ರ್ಯಾಕ್ಟರ್ ಘೋಷಣೆ ಮಾಡಿರುವ ರಾಘವ್ ಬಗ್ಗೆ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿ ಬಂದಿವೆ. ನಿಮ್ಮೊಂದಿಗೆ ಸದಾ ನಾವಿರುತ್ತೇವೆ. ಈ ಸೇವೆ ನಿರಂತರವಾಗಿರಲಿ ಎಂದು ಅವರ ಅಭಿಮಾನಿಗಳು ಹಾರೈಸಿದ್ದಾರೆ. ಅಲ್ಲದೇ, ರೈತರ ನೆರವಿಗೆ ಹೀಗೆ ಎಲ್ಲರೂ ಬರಲಿ ಎಂದು ಮನವಿ ಮಾಡಿಕೊಂಡಿದ್ದಾರೆ.
ತುಮಕೂರು: ಉಚಿತವಾಗಿ ನೀಡುತಿದ್ದ ಕೊತ್ತಂಬರಿ ಸೊಪ್ಪಿಗಾಗಿ ಜನರು ಮುಗಿ ಬಿದ್ದಿರುವ ಘಟನೆ ತುಮಕೂರಿನ ಎನ್.ಆರ್ ಕಾಲೋನಿಯಲ್ಲಿ ನಡೆದಿದೆ.
ಪಾಲಿಕೆ ಸದಸ್ಯ ಶ್ರೀನಿವಾಸ್ ಉಚಿತವಾಗಿ ಕೊತ್ತಂಬರಿ ಸೊಪ್ಪು ಹಂಚುತ್ತಿದ್ದರು. ಈ ವೇಳೆ ಜನರು ನಾಮುಂದು ತಾಮುಂದು ಎಂಬಂತೆ ಮುಗಿ ಬಿದ್ದು ಕೊತ್ತಂಬರಿ ಸೊಪ್ಪು ಪಡೆದಿದ್ದಾರೆ.
ಜನರು ಮುಗಿ ಬಿದ್ದ ಹಿನ್ನೆಲೆಯಲ್ಲಿ ಸೊಪ್ಪು ಹಂಚುತ್ತಿದ್ದ ಯುವಕ ಆಟೋದಿಂದ ಜನರತ್ತ ಸೊಪ್ಪನ್ನು ಎಸೆದು ಹೋಗಿದ್ದಾನೆ. ಉಚಿವಾಗಿ ಸಿಗುವ ಕೊತ್ತಂಬಿಗಾಗಿ ಜನರು ಮುಗಿಬಿದ್ದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಹಾವೇರಿ: ಹೆಚ್ಚು ಹಾಲು ಕುಡಿಯಿರಿ ಅಭಿಯಾನದೊಂದಿಗೆ ಜೂನ್ 1ರಂದು ರಂದು ವಿಶ್ವ ಹಾಲು ದಿನಾಚರಣೆಯ ಕಾರ್ಯಕ್ರಮದೊಂದಿಗೆ ಹಾಲನ್ನು ಉಚಿತವಾಗಿ ಗ್ರಾಹಕರಿಗೆ ಪೂರೈಸಲಿದೆ ಎಂದು ಉತ್ತರ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ತಿಳಿಸಿದ್ದಾರೆ.
ಲಾಕ್‍ಡೌನ್ ಅವಧಿಯಲ್ಲಿ ಸಾರ್ವಜನಿಕರ ಆರೋಗ್ಯ ವೃದ್ಧಿಸಲು ಮತ್ತು ವೈದ್ಯರ ಸಲಹೆಯಂತೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹೆಚ್ಚು ಹಾಲು ಕುಡಿಯಿರಿ ಅಭಿಯಾನದೊಂದಿಗೆ ಉಚಿತ ಹಾಲನ್ನು ನೀಡಲಾಗುತ್ತಿದೆ. ಜೂನ್ 1 ರಂದು ರಂದು ವಿಶ್ವ ಹಾಲು ದಿನಾಚರಣೆಯ ಕಾರ್ಯಕ್ರಮದೊಂದಿಗೆ ಜೂನ್ 2021ರ ಸಂಪೂರ್ಣ ಮಾಹೆಯಲ್ಲಿ ಎಲ್ಲಾ ಮಾದರಿಯ ನಂದಿನ 500 ಮಿಲಿ ಮತ್ತು 1000 ಮಿಲಿ ಪ್ಯಾಕಗಳಲ್ಲಿ ತಲಾ 20 ಹಾಗೂ 40 ಮಿಲಿ ಹೆಚ್ಚುವರಿ ಹಾಲನ್ನು ಉಚಿತವಾಗಿ ಗ್ರಾಹಕರಿಗೆ ಪೂರೈಸುವ ಯೋಜನೆಯನ್ನು ಜಾರಿಗೊಳಿಲಾಗಿದೆ ಎಂದು ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ಅವರು ತಿಳಿಸಿದ್ದಾರೆ.
ಲಾಕ್‍ಡೌನ್ ಅವಧಿಯಲ್ಲಿ ನಂದಿನಿ, 500 ಮಿಲಿ ಮತ್ತು 1000 ಮಿಲಿ ಪ್ಯಾಕಗಳಲ್ಲಿ ತಲಾ 20 ಹಾಗೂ 40 ಮಿಲಿ ಹೆಚ್ಚುವರಿ ಹಾಲನ್ನು ಉಚಿತವಾಗಿ ಗ್ರಾಹಕರಿಗೆ ಪೂರೈಸುವ ಯೋಜನೆಯ ಸದುಪಯೋಗವನ್ನು ಗ್ರಾಹಕರು ಸದ್ಬಳಕೆಮಾಡಿಕೊಳ್ಳಲು ಕೋರಲಾಗಿದೆ. ಇದನ್ನೂ ಓದಿ: 5ಜಿ ನೆಟ್‍ವರ್ಕ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲಾ
ಧಾರವಾಡ ಹಾಲು ಒಕ್ಕೂಟವು ಧಾರವಾಡ, ಹಾವೇರಿ, ಗದಗ, ಮತ್ತು ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಿಸ್ತರಿಸಿದ್ದು, ಅಲ್ಲಿಯ ಹಾಲು ಉತ್ಪಾದಕರಿಂದ ಸಂಗ್ರಹಿಸಿದ ಹಾಲನ್ನು ಅತ್ಯಾಧುನಿಕ ಯಂತ್ರಗಳಿಂದ ಸಂಸ್ಕರಿಸಿ ಕರ್ನಾಟಕ ರಾಜ್ಯಾದಂತ ಮನೆ ಮಾತಾಗಿರುವ ನಂದಿನಿ ಬ್ರಾಂಡಿನ ಅಡಿಯಲ್ಲಿ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ನಿರಂತರವಾಗಿ ಪೂರೈಸಲಾಗುತ್ತಿದೆ. ಇದನ್ನೂ ಓದಿ: ಪ್ರಣೀತಾ ಮದುವೆಗೆ ವಿಶ್ ಮಾಡಿದ ರಮ್ಯಾಗೆ ಅಭಿಮಾನಿಗಳ ಪ್ರಶ್ನೆ ನಿಮ್ದು ಯಾವಾಗ..?
ಪ್ರಸ್ತುತ ಒಕ್ಕೂಟದ ವ್ಯಾಪ್ತಿಯಲ್ಲಿ 998 ಕಾರ್ಯನಿರತ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಕಾರ್ಯನಿರ್ವಹಣೆಯಲ್ಲಿದ್ದು, ದಿನವಹಿ ಸರಾಸರಿ 25 ಲಕ್ಷ ಲೀಟರ್ ಹಾಲು ಶೇಖರಣೆಯೊಂದಿಗೆ ದಿನವಹಿ ಸರಾಸರಿ 1.05 ಲಕ್ಷ ಲೀಟರ್ ಹಾಲು, 10 ಸಾವಿರ ಕೇಜಿ ಮೊಸರು, ಮಜ್ಜಿಗೆ, ಲಸ್ಸಿ ಮತ್ತು ನಂದಿನಿಯ 85 ಕ್ಕಿಂತ ಹೆಚ್ಚಿನ ಸಂಖ್ಯೆಯ ವಿವಿಧ ನಮೂನೆಯ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ಪೂರೈಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ದಾವಣಗೆರೆ: ಕೊರೊನಾ ಬಂದು ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ಪಾಡು ಹೇಳತೀರದು. ಅಂತಹ ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡಲು ದಾವಣಗೆರೆಯಲ್ಲಿ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಗುರುಕುಲ ರೆಸಿಡೆನ್ಸಿಯಲ್ ಶಾಲೆ ಮುಂದಾಗಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಸಾಕಷ್ಟು ಮಕ್ಕಳಿದ್ದಾರೆ. ಮಕ್ಕಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಶಾಲಾ ಅಡಳಿತ ಮಂಡಳಿಯವರಾದ ನಸ್ರಿನ್ ಖಾನ್ ಹಾಗೂ ಅಬ್ದುಲ್ ಎನ್ನುವರು ಈ ನಿರ್ಧಾರ ಮಾಡಿದ್ದು, ಕೋವಿಡ್ ನಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ.
ಕೇವಲ ಯೂನಿಫಾರ್ಮ್, ಹಾಗೂ ಪುಸ್ತಕಗಳನ್ನು ಮಾತ್ರ ಕೊಂಡುಕೊಳ್ಳಲಿ ಉಳಿದ ಎಲ್ಲಾ ಶುಲ್ಕವನ್ನು ಶಾಲೆಯೇ ಭರಿಸುತ್ತಿದರ ಎಂದು ಶಾಲಾ ಅಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಪ್ರತಿಯೊಂದು ಶಾಲೆಯಲ್ಲಿ ಈ ರೀತಿ ನಿರ್ಧಾರ ಕೈಗೊಂಡರೆ ಕೋವಿಡ್ ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳ ಭವಿಷ್ಯ ಉಜ್ವಲವಾಗಲಿದ್ದು, ಗುರುಕುಲ ಶಾಲಾಯ ನಿರ್ಧಾರ ಸರ್ಕಾರವನ್ನೇ ನಾಚಿಸುವಂತಹ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೆ ಗುರುಕುಲ ಶಾಲೆಯ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ಚೆನ್ನೈ: ಕೊರೊನಾ ಸಂಕಷ್ಟದಲ್ಲಿ ಊಟವಿಲ್ಲದೆ ಹಸಿವಿನಿಂದ ಇರುವವರಿಗಾಗಿ ತಮಿಳುನಾಡಿನ ತೂತುಕುಡಿ ಕೋವಿಲ್‍ಪಟ್ಟಿಯ ಹಣ್ಣಿನ ವ್ಯಾಪಾರಿಯೊಬ್ಬರು ಹಸಿದವರಿಗಾಗಿ ತನ್ನಿಂದಾದ ಅಳಿಲು ಸೇವೆ ಮಾಡಲು ಹಣ್ಣಿನ ಅಂಗಡಿಯ ಎದುರು ಪ್ರತಿದಿನ ಬಾಳೆಗೊನೆಯನ್ನು ನೇತು ಹಾಕುತ್ತಿದ್ದಾರೆ.
ತಮ್ಮ ಹಣ್ಣಿನ ಅಂಗಡಿಯ ಎದುರು ಪ್ರತಿದಿನ ಬಾಳೆಗೊನೆಗಳನ್ನು ನೇತು ಹಾಕುವ ವ್ಯಾಪಾರಿ ಮುತ್ತುಪಾಂಡಿ ಅದರ ಜೊತೆಗೆ ಬೋರ್ಡ್ ಒಂದನ್ನೂ ಸಹ ನೇತು ಹಾಕುತ್ತಾರೆ. ನೀವು ಹಸಿದಿದ್ದೆ ಈ ಬಾಳೆಹಣ್ಣನ್ನು ಉಚಿತವಾಗಿ ತೆಗೆದುಕೊಳ್ಳಿ, ಆದರೆ ವೇಸ್ಟ್ ಮಾಡಬೇಡಿ ಎಂದು ಬರೆದಿಡುತ್ತಾರೆ.
ಮುತ್ತುಪಾಂಡಿ ಅವರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಲ್ಲದೇ ವಲಸಿಗರು, ವೃದ್ಧರು, ಫೂಟ್‍ಪಾತ್‍ಗಳಲ್ಲೇ ಬದುಕುವವರು ಈ ಬಾಳೆಹಣ್ಣನ್ನು ತಿಂದು ತಮ್ಮ ಹಸಿವು ನೀಗಿಸಿಕೊಳ್ಳುತ್ತಿದ್ದಾರೆ.
ಚಾಮರಾಜನಗರ: ಕೊರೊನಾ ಲಾಕ್‍ಡೌನ್ ಪರಿಣಾಮದಿಂದಾಗಿ ಗಡಿ ಜಿಲ್ಲೆಯ ಜನರು ಪರದಾಡುತ್ತಿದ್ದಾರೆ. ರೈತರು ಕೂಡ ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೇ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಇಲ್ಲೊಬ್ಬ ರೈತ ಲಕ್ಷಾಂತರ ರೂಪಾಯಿ ಮೌಲ್ಯದ ತರಕಾರಿಯನ್ನು ಕಾಡಂಚಿನ ಜನರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಬಸವನಗುಡಿ ಗ್ರಾಮದ ಬೆಳ್ಳುಳ್ಳಿ ಮಾದೇಶ ತಮ್ಮ ಐದು ಎಕರೆ ಜಮೀನಿನಲ್ಲಿ, ಎಲೆಕೋಸು, ಮೆಣಸಿನಕಾಯಿ, ಬದನೆಕಾಯಿ, ಕರಿಬೇವಿನಸೊಪ್ಪು ಬೆಳೆದಿದ್ದರು. ಆದರೆ ಈ ತರಕಾರಿಗಳನ್ನು ತೆಗೆದುಕೊಂಡು ಹೋಗಿ ಮಾರಾಟ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ತರಕಾರಿ ಹೊಲದಲ್ಲೇ ಹಾಳಾಗುವ ಬದಲು ಸಂಕಷ್ಟದಲ್ಲಿರುವ ಕುಟುಂಬಗಳಿಗಾದರೂ ಅನುಕೂಲವಾಗಿಲಿ ಎಂದು ಉಚಿತವಾಗಿ ವಿತರಣೆ ಮಾಡಿದ್ದಾರೆ.
ಮಾದೇಶ್ ತಾವು ಬೆಳೆದ ತರಕಾರಿಯ ಜೊತೆ ಬೇರೆ ರೈತರಿಂದ ಈರುಳ್ಳಿ, ಟೊಮೆಟೊ, ಬೆಳ್ಳುಳ್ಳಿಯನ್ನು ಖರೀದಿಸಿದ್ದು, ಅವುಗಳನ್ನು ಪ್ಯಾಕ್ ಮಾಡಿದ್ದಾರೆ. ನಂತರ ಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಾವಿನಮೂಲೆ, ಯರಗಬಾಳು, ನಲ್ಲಿಕತ್ರಿ, ಉದ್ದಟ್ಟಿ, ಜೀರಿಗೆಗದ್ದೆ, ಮಾವತ್ತೂರು ಮೊದಲಾದ ಗ್ರಾಮಗಳಿಗೆ ಹೋಗಿ, ಮನೆಮನೆಗೆ ಉಚಿತವಾಗಿ ವಿತರಿಸಿದ್ದಾರೆ.
ಜೊತೆಗೆ ಲಾಕ್‍ಡೌನ್ ಸಂದರ್ಭದಲ್ಲಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಹನೂರು ಠಾಣೆಯ ಪೊಲೀಸ್ ಕುಟುಂಬಗಳಿಗೂ ತರಕಾರಿ ವಿತರಿಸಿದ್ದು, ಜನರ ರಕ್ಷಣೆಗೆ ಶ್ರಮಿಸುತ್ತಿರುವ ಪೊಲೀಸರಿಗೆ ತಮ್ಮ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಆಹಾರ ಕಿಟ್ ವಿತರಣೆ:
ಶಾಸಕ ನರೇಂದ್ರ ಗಿರಿ ಜನರಿಗೆ ಆಹಾರ ಕಿಟ್ ವಿತರಿಸುವ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ವ್ಯಾಪ್ತಿಯಲ್ಲಿ ಆಹಾರ ಕಿಟ್ ವಿತರಿಸಿದ್ದಾರೆ.
ಮೀಣ್ಯಂ, ಜಲ್ಲಿಪಾಳ್ಯ ಸೇರಿದಂತೆ 40ಕ್ಕೂ ಹೆಚ್ಚು ಗ್ರಾಮದ ಗಿರಿಜನ ಕುಟುಂಬಕ್ಕೆ ಅಕ್ಕಿ, ಬೆಳೆ, ಎಣ್ಣೆ, ಕಾಳುಗಳನ್ನು ಒಳಗೊಂಡ ಆಹಾರ ಕಿಟ್ ವಿತರಿಸಿದ್ದಾರೆ. ಸುಮಾರು 4,300ಕ್ಕೂ ಹೆಚ್ಚು ಗಿರಿಜನ ಕುಟುಂಬಕ್ಕೆ ಆಹಾರ ಕಿಟ್ ವಿತರಿಸಿದ್ದು, ಶಾಸಕರ ಕಾರ್ಯಕ್ಕೆ ಗಿರಿ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ: ಕೊರೊನಾದಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣಬೈರೇಗೌಡ ರೈತರಿಂದ ಒಂದು ಟನ್ ಟೊಮೊಟೊ ಹಾಗೂ ಒಂದು ಟನ್ ತೊಂಡೆಕಾಯಿ ಖರೀದಿ ಮಾಡಿದ್ದಾರೆ. ತಮ್ಮ ಕ್ಷೇತ್ರದ ಬಡವರಿಗೆ ಆ ತರಕಾರಿಗಳನ್ನ ಉಚಿತವಾಗಿ ವಿತರಿಸಿದ್ದಾರೆ.
ಇಂದು ಕೃಷ್ಣಬೈರೇಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಇಲತೊರೆ ಗ್ರಾಮದ ರೈತ ನಾಗೇಶ್ ಹಾಗೂ ರಾಜಣ್ಣರ ತೋಟಕ್ಕೆ ಭೇಟಿ ನೀಡಿದ್ದಾರೆ. ಅವರು ಬೆಳೆದಿದ್ದ ಒಂದು ಟನ್ ಟೊಮೆಟೊ ಹಾಗೂ 1 ಟನ್ ತೊಂಡೆಕಾಯಿ ಖರೀದಿಸಿದ್ದಾರೆ. ಆ ತರಕಾರಿಯನ್ನು ತಮ್ಮ ಕ್ಷೇತ್ರದ ಬಡವರಿಗೆ ಉಚಿತವಾಗಿ ವಿತರಿಸಿದ್ದಾರೆ.
ಈಗಾಗಲೇ ಕೊರೊನಾ ಎಫೆಕ್ಟ್ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಾತ್ರ ಹೇಳಿಕೆಗಳನ್ನ ಕೊಡುತ್ತಾ ರೈತರಿಗೆ ಎಲ್ಲವನ್ನೂ ಮಾಡಿದ್ದೀವಿ ಅಂತ ಹೇಳುತ್ತಾ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ ನಿಜವಾಗಿಯೂ ರೈತನ ಕಷ್ಟ ಪರಿಸಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
ತಮ್ಮ ಪಕ್ಷದ ಮುಖಂಡರು ಸಹ ರೈತರಿಂದ ಸಾಧ್ಯವಾದಷ್ಟು ತರಕಾರಿ ಖರೀದಿ ಮಾಡಿ ತಮ್ಮ ತಮ್ಮ ಕ್ಷೇತ್ರದ ಬಡ ಜನರಿಗೆ ಈ ಸಮಯದಲ್ಲಿ ಉಚಿತವಾಗಿ ಕೊಡಬೇಕು ಅಂತ ಮನವಿ ಮಾಡಿಕೊಂಡರು.
ಶಿವಮೊಗ್ಗ: ಕೊರೊನಾ ವೈರಸ್ ವಿರುದ್ಧ ವೈದ್ಯರು, ನರ್ಸ್ ಮತ್ತು ಪೊಲೀಸರು ಹಗಲಿರುಳು ಎನ್ನದೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಅಗತ್ಯ ಸೇವೆ ಸಲ್ಲಿಸುತ್ತಿರುವವರಿಗೆ ಜಿಲ್ಲೆಯಲ್ಲಿ ಉಚಿತವಾಗಿ ಪೆಟ್ರೋಲ್ ವಿತರಣೆ ಮಾಡಲಾಗುತ್ತಿದೆ.
ಶಿವಮೊಗ್ಗದ ಬಾಲರಾಜ್ ಅರಸು ರಸ್ತೆಯಲ್ಲಿರುವ ಸಹ್ಯಾದ್ರಿ ಪೆಟ್ರೋಲ್ ಬಂಕ್‍ನ ಮಾಲೀಕರು ಕೊರೊನಾ ಸಮಯದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಕರ್ತವ್ಯ ಸಲ್ಲಿಸುತ್ತಿರುವ ವೈದ್ಯರು, ನರ್ಸ್, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಪೊಲೀಸರಿಗೆ ಉಚಿತ ಪೆಟ್ರೋಲ್ ವಿತರಣೆ ಮಾಡುತ್ತಿದ್ದಾರೆ.
ಪ್ರತಿಯೊಬ್ಬರ ದ್ವಿ-ಚಕ್ರ ವಾಹನಕ್ಕೆ ಅವರವರ ಇಲಾಖೆಯ ಗುರುತಿನ ಚೀಟಿ ನೋಡಿ ತಲಾ 1 ಲೀಟರ್ ಪೆಟ್ರೋಲ್‍ಅನ್ನು ಉಚಿತವಾಗಿ ವಿತರಿಸುತ್ತಿದ್ದಾರೆ. ಈ ಮೂಲಕ ಪೆಟ್ರೋಲ್ ಬಂಕ್‍ನ ಮಾಲೀಕರು ಅಗತ್ಯ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್ ಹಾಗೂ ಪೊಲೀಸರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ.
ಅಲ್ಲದೇ ಮುಂದಿನ ದಿನಗಳಲ್ಲಿ ಪೌರ ಕಾರ್ಮಿಕರು, ಸೆಕ್ಯೂರಿಟಿ ಸಿಬ್ಬಂದಿ ಮತ್ತು ಹೋಂಗಾರ್ಡ್ ಗಳಿಗೆ ಉಚಿತ ಪೆಟ್ರೋಲ್ ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ರಾಜ್ಯದ ಇತರೆ ಪೆಟ್ರೋಲ್ ಬಂಕ್ ಮಾಲೀಕರು ಸಹ ಇದೇ ರೀತಿ ಉಚಿತ ವಿತರಣೆ ಮಾಡಲು ಮುಂದಾಗಿ, ಸಂಕಷ್ಟದ ಪರಿಸ್ಥಿತಿಯಲ್ಲಿ ತಮ್ಮ ಕೈಲಾದ ಸೇವೆ ಮಾಡಿ ಎಂದು ಪೆಟ್ರೋಲ್ ಬಂಕ್ ಮಾಲೀಕರಾದ ಸುಹಾಸ್ ಮನವಿ ಮಾಡಿದ್ದಾರೆ.
ಬೆಂಗಳೂರು: ಲಾಕ್‍ಡೌನ್ ಮುಗಿಯುವರೆಗೂ ಬಡವರಿಗೆ ಉಚಿತ ಹಾಲು ವಿತರಣೆ ಮಾಡುವಂತೆ ಸಿಎಂ ಯಡಿಯೂರಪ್ಪ ಫೋಷಣೆ ಮಾಡಿದ್ದರು. ಆದರೆ ಸಿಲಿಕಾನ್ ಸಿಟಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಉಚಿತ ಹಾಲಿಗಾಗಿ ಜನರು ಮುಗಿಬಿದ್ದಿದ್ದಾರೆ.
ಬೆಂಗಳೂರಿನ ಪಂತರಪಾಳ್ಯ, ಕಮಲನಗರದಲ್ಲಿ ತಂಡೋಪ ತಂಡವಾಗಿ ಜನರು ಬಂದು ಉಚಿತವಾಗಿ ಹಾಲು ಪಡೆಯುತ್ತಿದ್ದಾರೆ. ಅಲ್ಲದೇ ಹಾಲಿಗಾಗಿ ಕಿಲೋ ಮೀಟರ್‌ಗಟ್ಟಲೇ ಕ್ಯೂನಲ್ಲಿ ಜನರು ನಿಂತಿದ್ದಾರೆ. ಹಾಲು ಪಡೆಯಲು ಬಂದವರು ಮಾಸ್ಕ್ ಹಾಕಿಲ್ಲ, ಜೊತೆಗೆ ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿಲ್ಲ. ಜನರು ಗುಂಪು ಗುಂಪಾಗಿ ಸೇರಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಹಾಲು ವಿತರಣೆಯನ್ನ ಬಂದ್ ಮಾಡಿದ್ದಾರೆ.
ಅಷ್ಟೇ ಅಲ್ಲದೇ ಜನಸಂದಣಿಯನ್ನ ಕಂಟ್ರೋಲ್ ಮಾಡಲು ಹೊಯ್ಸಳ ವಾಹನದ ಮೂಲಕ ಜನರನ್ನು ಪೊಲೀಸರು ಚದುರಿಸುತ್ತಿದ್ದಾರೆ. ಇನ್ನೂ ಟಿ ದಾಸರಹಳ್ಳಿಯ ಮೆಟ್ರೋ ನಿಲ್ದಾಣದ ಬಳಿ ಬೆಳಗಿನ ಜಾವ 6 ಗಂಟೆಯಿಂದಲೇ ಸ್ಥಳೀಯರು ಸಾಲುಗಟ್ಟಿ ನಿಂತಿದ್ದಾರೆ.
ಮೈಸೂರು ರೋಡ್‍ನ ಪಂಥರಪಾಳ್ಯದಲ್ಲಿ ಹಾಲಿನ ವಾಹನಕ್ಕೆ ಜನರು ಮುಗಿಬಿದ್ದಿದ್ದಾರೆ. ಹಾಲಿನ ವಾಹನ ಬರುವುದನ್ನು ನೋಡಿ ವಾಹನದ ಹಿಂದೆ ಜನರು ಓಡೋಡಿ ಬಂದಿದ್ದಾರೆ. ಈ ನೂಕು ನುಗ್ಗಲಿನಲ್ಲಿ ನೂರಾರು ಪ್ಯಾಕೆಟ್ ಹಾಲು ಮಣ್ಣು ಪಾಲಾಗಿದೆ. ಇದರಿಂದ ಸಿಬ್ಬಂದಿ ರಸ್ತೆಯುದ್ದಕ್ಕೂ ಹಾಲಿನ ಪ್ಯಾಕೆಟ್‍ಗಳ ಚೆಲ್ಲಿದ್ದಾರೆ. ಆಗ ಕೈಗೆ ಸಿಕ್ಕಷ್ಟು ಹಾಲಿನ ಪ್ಯಾಕೆಟ್‍ಗಳನ್ನು ತೆಗೆದುಕೊಂಡು ಜನರು ಹೋಗುತ್ತಿದ್ದಾರೆ.
ಬೆಂಗಳೂರು ಮಾತ್ರವಲ್ಲದೇ ಚಿತ್ರದುರ್ಗ, ಹಾಸನ ಜಿಲ್ಲೆಯಲ್ಲೂ ಉಚಿತ ಹಾಲಿಗಾಗಿ ಕಿ.ಮೀ.ಗಟ್ಟಲೇ ಜನರು ಸಾಲಾಗಿ ನಿಂತಿದ್ದಾರೆ. ಹೊಳೆನರಸೀಪುರದಲ್ಲಿ ಮಾಜಿ ಸಚಿವ ರೇವಣ್ಣ ಜನರಿಗೆ ಉಚಿತವಾಗಿ ಹಾಲು ವಿತರಣೆ ಮಾಡಿದ್ದಾರೆ.
ಬೆಂಗಳೂರು: ಗುರುವಾರದಿಂದ ಬಡವರಿಗೆ ಏಪ್ರಿಲ್ 14 ರವರೆಗೂ ಉಚಿತವಾಗಿ ಹಾಲು ವಿತರಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಭೆಯ ಬಳಿಕ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಲಾಕ್‍ಡೌನ್‍ನಿಂದ ಬಡವರಿಗೆ, ಕೃಷಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ನಿನ್ನೆಯ ಸನ್ನಿವೇಶ ಬೇರೆ, ಇವತ್ತಿನ ಸನ್ನಿವೇಶ ಬೇರೆ. ಜನಕ್ಕೆ ಇವತ್ತಿಂದ ಇನ್ನಷ್ಟು ಸಡಿಲತೆ ಮಾಡಲಾಗುತ್ತಿದೆ. ಲಾಕ್‍ಡೌನ್‍ನಿಂದ ಸಾಮಾನ್ಯರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ನಾಳೆಯಿಂದ ಸ್ಲಂಗಳಲ್ಲಿರುವ ಬಡವರಿಗೆ ಉಚಿತವಾಗಿ ಹಾಲು ವಿತರಣೆ ಮಾಡಬೇಕು. ಎಲ್ಲ ಜಿಲ್ಲೆಗಳಲ್ಲೂ ಬಡವರಿಗೆ ಏಪ್ರಿಲ್ 14 ರವರೆಗೆ ಉಚಿತ ಹಾಲು ವಿತರಣೆ ಮಾಡಬೇಕು ಎಂದು ಸಿಎಂ ಘೋಷಣೆ ಮಾಡಿದರು.
ಸರಕು ಸಾಗಣೆ ವಾಹನಗಳನ್ನು ತಡೆಯುತ್ತಿಲ್ಲ. ಸರಕು ಸಾಗಣೆ ವಾಹನಗಳನ್ನು ತಡೆಯದಂತೆ ಪೊಲೀಸರಿಗೂ ಸೂಚಿಸಿದ್ದೇವೆ. ಒಂದು ವೇಳೆ ವಾಹನಗಳನ್ನು ತಡೆದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಇದೆ. ಅಗತ್ಯ ವಸ್ತುಗಳು, ತರಕಾರಿ, ಹಣ್ಣಿನ ಮಾರಾಟಕ್ಕೆ ಯಾವುದೇ ಭಂಗ ಇಲ್ಲ. ಈ ಸಭೆಯಲ್ಲಿ ರೈತರು ಮತ್ತು ಗ್ರಾಹಕರ ಹಿತ ಕಾಪಾಡಲು ಕೆಲ ತೀರ್ಮಾನ ಕೈಗೊಳ್ಳಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕದಿಂದ ರಫ್ತಾಗುತ್ತಿರುವ ಹಣ್ಣು, ತರಕಾರಿಗಳ ವಾಹನಗಳಿಗೆ ತಡೆ ಒಡ್ಡಬಾರದು. ಹಾಪ್‌ಕಾಮ್ಸ್‌ಗಳನ್ನು ಇಡೀ ದಿನ ತೆರೆದಿರಲು ಸೂಚನೆ ನೀಡಲಾಗಿದೆ. ಜೊತೆಗೆ ತರಕಾರಿ, ಹಣ್ಣು, ಮಾರಾಟಕ್ಕೆ ಹಾಪ್‌ಕಾಮ್ಸ್‌ನಲ್ಲಿ ಅವಕಾಶ ಮಾಡಲಾಗಿದೆ. ಕೋಳಿ ಮೊಟ್ಟೆಗಳನ್ನೂ ಸಹ ಹಾಪ್‌ಕಾಮ್ಸ್‌ನಲ್ಲಿ ಮಾರಾಟಕ್ಕೆ ಅವಕಾಶ ಮಾಡಲಾಗಿದೆ. ಟ್ರೈನ್‍ಗಳಲ್ಲಿ ಹೊರ ರಾಜ್ಯಗಳಿಗೆ ಹಣ್ಣು, ತರಕಾರಿ ಸಾಗಣೆಗೂ ಅವಕಾಶ ಕಲ್ಪಿಸಲಾಗಿದೆ. ಜನ ನಿತ್ಯ ಹಣ್ಣು, ತರಕಾರಿ ಖರೀದಿಸಬಹುದು. ಆದರೆ ಜನರು ಒಮ್ಮೆಲೆ ಹೆಚ್ಚು ಖರೀದಿಸುವ ಅಗತ್ಯ ಇಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಶ್ರೀ @BSYBJP ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳನ್ನು ನಿವಾರಿಸಲು ಉನ್ನತ ಮಟ್ಟದ ಸಭೆ ನಡೆಸಿದರು.
ಒಂದೇ ವೇಳೆ ತರಕಾರಿ, ಹಣ್ಣುಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಿದರೆ ಅಂತಹರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ. ಕೃಷಿ ಉತ್ಪನ್ನಗಳ ಸಾಗಾಣಿಕೆ ಅವಕಾಶ ಇದ್ದರೆ ಬೇಡಿಕೆ ಅಭಾವ ಕಡಿಮೆಯಾಗಲಿದೆ. ರೇಷ್ಮೆ ಮಾರುಕಟ್ಟೆ, ಅಕ್ಕಿ, ದಾಲ್ ಮಿಲ್‍ಗಳನ್ನು ತೆರೆಯಲು ಸೂಚಿಸಲಾಗಿದೆ.
ಇವತ್ತಿನಿಂದ ಮುಂಗಡ ಪಡಿತರ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ. ರೈತರ ಬೆಳೆಗಳಿಗೆ ಉತ್ತಮ ದರ ಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಜೊತೆ ವಿಧವಾ ವೇತನ, ವೃದ್ಧಾಪ್ಯ ವೇತನಗಳಿಗೆ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಪೆನ್ಷನ್‍ಗಳನ್ನು ತಕ್ಷಣ ಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ.
#ಕೊರೊನ ಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19' ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಮಟ್ಟಿಗೆ ದೇಣಿಗೆ ನೀಡಿ ಈ ಹೋರಾಟಕ್ಕೆ ಬಲ ತುಂಬಬೇಕು ಎಂದು ಮನವಿ ಮಾಡುತ್ತೇನೆ.#KarnatakaFightsCorona#COVID19pic.twitter.com/DAeOTDo6Z1
ಲಾಕ್‍ಡೌನ್ ಹಿನ್ನೆಲೆಯಲ್ಲಿ ಕೃಷಿಕರಿಗೆ ಸಮಸ್ಯೆಗಳ ಹಿನ್ನೆಲೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಕೃಷಿ ಸಚಿವ ಬಿ.ಸಿ ಪಾಟೀಲ್, ಸಹಕಾರ ಇಲಾಖೆ ಸಚಿವ ಎಸ್.ಟಿ ಸೋಮಶೇಖರ್, ತೋಟಗಾರಿಕೆ ಇಲಾಖೆ ಸಚಿವ ನಾರಾಯಣ ಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಕಂದಾಯ ಸಚಿವ ಆರ್.ಅಶೋಕ್ ಮತ್ತು ಆಹಾರ ಸಚಿವ ಗೋಪಾಲಯ್ಯ ಭಾಗಿಯಾಗಿದ್ದರು.