Tag: ಉಚಿತ ಪ್ರಯಾಣ

  • ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ: ರಾಮಲಿಂಗಾರೆಡ್ಡಿ

    ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ಶಕ್ತಿ ಯೋಜನೆಯಲ್ಲಿ(Shakti Scheme) ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. 5 ವರ್ಷ ಯೋಜನೆ ಮುಂದುವರೆಯಲಿದೆ. ಮುಂದಿನ ಅವಧಿಯಲ್ಲಿ ಕಾಂಗ್ರೆಸ್ (Congress) ಮತ್ತೆ ಅಧಿಕಾರಕ್ಕೆ ಬರುತ್ತದೆ ಅಗಲೂ ಶಕ್ತಿ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.

    ಅಶ್ವಮೇಧ ಕ್ಲಾಸಿಕ್ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿಯಿಂದ(KSRTC)100 ಹೊಸ ಬಸ್ ಗೆ ಚಾಲನೆ ನೀಡ್ತಿದ್ದೇವೆ, ಏಪ್ರಿಲ್ ಹೊತ್ತಿದೆ 1000 ಬಸ್ ಬರಲಿದೆ. ಶಕ್ತಿ ಯೋಜನೆ ಬಂದಾಗಿನಿಂದ 1 ಕೋಟಿ 10 ಲಕ್ಷ ಜನ ನಿತ್ಯ 4 ನಿಗಮದಿಂದ ಓಡಾಡುತ್ತಿದ್ದಾರೆ. ಶಾಲಾ ಮಕ್ಕಳಿಗೆ ಶಕ್ತಿಯಿಂದ ಸಮಸ್ಯೆ ಆಗುತ್ತಿದೆ. ಸಮಸ್ಯೆ ಪರಿಹಾರಕ್ಕೆ ಹೊಸ ಬಸ್ ಖರೀದಿ ‌ಮಾಡುತ್ತಿದ್ದೇವೆ. ಆದಷ್ಟು ಬೇಗ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದರು.  ಇದನ್ನೂ ಓದಿ: ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಅಂತಾರೆ: ಸಿದ್ದರಾಮಯ್ಯ

     

    4 ವರ್ಷಗಳಿಂದ ಒಂದು ಬಸ್ ಖರೀದಿ ಮಾಡಿರಲಿಲ್ಲ. ನಾವು ಈಗ ಸುಮಾರು 5 ಸಾವಿರ ಬಸ್ ಗಳು ಖರೀದಿಗೆ ನಿರ್ಧಾರ ಮಾಡುತ್ತಿದ್ದೇವೆ. ಹಿಂದಿನ ಸರ್ಕಾರದಲ್ಲಿ ಖಾಲಿ ಹುದ್ದೆ ನೇಮಕಾತಿ ಆಗಿರಲಿಲ್ಲ. ನಮ್ಮ ಸರ್ಕಾರ 9 ಸಾವಿರ ಹುದ್ದೆ ನೇಮಕಕ್ಕೆ ಸಿಎಂ ಒಪ್ಪಿದ್ದಾರೆ. ಪ್ರಕ್ರಿಯೆ ಶುರುವಾಗಿದೆ. ಆದಷ್ಟು ಬೇಗ 9 ಸಾವಿರ ಹುದ್ದೆ ಭರ್ತಿ ಮಾಡುತ್ತೇವೆ. ಇಲ್ಲಿಯವರಗೆ 146 ಕೋಟಿ ಮಹಿಳೆಯರು ಶಕ್ತಿ ಯೋಜನೆಯಲ್ಲಿ ಓಡಾಡಿದ್ದಾರೆ. ಶಕ್ತಿ ಯೋಜನೆ ಯಶಸ್ವಿಯಾಗಿದೆ. ಬಿಜೆಪಿಗಿಂತ ಉತ್ತಮವಾಗಿ ಇಲಾಖೆ ನಾವು ನಡೆಸಿದ್ದೇವೆ. ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಶಕ್ತಿ ಯೋಜನೆ ಮುಂದೆವರೆಸುತ್ತೇವೆ ಎಂದು ಹೇಳಿದರು.

     

  • ಶಕ್ತಿ ಯೋಜನೆ ಇಕ್ಕಟ್ಟಿನಲ್ಲಿ ಸಾರಿಗೆ ಇಲಾಖೆ – ಮೀಸಲಿಟ್ಟ ಹಣ ಹೈಸ್ಪೀಡ್‌ನಲ್ಲಿ ಖರ್ಚು

    ಶಕ್ತಿ ಯೋಜನೆ ಇಕ್ಕಟ್ಟಿನಲ್ಲಿ ಸಾರಿಗೆ ಇಲಾಖೆ – ಮೀಸಲಿಟ್ಟ ಹಣ ಹೈಸ್ಪೀಡ್‌ನಲ್ಲಿ ಖರ್ಚು

    ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗೆ (Shakti Scheme) ಮಹಿಳಾ ಮಣಿಗಳು ಬಹುಪರಾಕ್ ಎಂದಿದ್ದು, ಭರ್ಜರಿಯಾಗಿ ಯಶಸ್ವಿಯಾಗಿದೆ. ಶಕ್ತಿ ಯೋಜನೆ ಈಗ ಸಾರಿಗೆ ಇಲಾಖೆಗೆ (Transport Department) ಕೈಸುಡುತ್ತಿದ್ದು ಮೀಸಲಿಟ್ಟ ದುಡ್ಡು ಸಿಕ್ಕಾಪಟ್ಟೆ ಹೈಸ್ಪೀಡ್‌ನಲ್ಲಿ ಖರ್ಚಾಗುತ್ತಿದೆ.

    ಕಾಂಗ್ರೆಸ್‌ನ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಶಕ್ತಿ ಯೋಜನೆ ಜಾರಿಯಾಗಿ ಇಂದಿಗೆ ಈಗಾಗಲೇ ಐದು ತಿಂಗಳು ಕಳೆದಿವೆ. ಜೂನ್ 11ರಿಂದ ಈ ಯೋಜನೆ ಜಾರಿಯಾಗಿದ್ದು, ಸುಮಾರು 90 ಕೋಟಿಗೂ ಹೆಚ್ಚು ನಾರಿಯರು ಉಚಿತವಾಗಿ ರಾಜ್ಯದಲ್ಲಿ ಪ್ರಯಾಣಿಸಿದ್ದಾರೆ.  ಇದನ್ನೂ ಓದಿ: ಮೋಸ್ಟ್‌ ವಾಂಟೆಡ್‌ ಜೈಶ್ ಉಗ್ರ ಪಾಕ್‌ನಲ್ಲಿ ನಿಗೂಢ ಹತ್ಯೆ

    ಸಿಎಂ ಸಿದ್ದರಾಮಯ್ಯನವರು (CM Siddaramaiah) ಶಕ್ತಿ ಯೋಜನೆಗೆ ಎಂದು ತಮ್ಮ ಬಜೆಟ್‌ನಲ್ಲಿ 9 ತಿಂಗಳಿಗೆ 2,800 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದರು. ಆದರೆ ಈ ಯೋಜನೆ ಜಾರಿಯಾಗಿ ಐದೇ ತಿಂಗಳಿಗೆ ಈ ಹಣ ಖಾಲಿಯಾಗುತ್ತಾ ಬಂದಿದೆ.

    ಸರ್ಕಾರದ ಅಂದಾಜು ಎಷ್ಟಿತ್ತು?
    1 ತಿಂಗಳಿಗೆ ಸರ್ಕಾರದ 311 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಿತ್ತು. ಆದರೆ 5 ತಿಂಗಳಿಗೆ (ನವೆಂಬರ್ 12ರವರೆಗೆ) 2,246 ಕೋಟಿ ರೂ. ಖರ್ಚಾಗಿದೆ.

    ಉಳಿದ 4 ತಿಂಗಳಿಗೆ ಸರ್ಕಾರದ ಈ ಹಿಂದೆ ನಿಗದಿ ಮಾಡಿದ ಲೆಕ್ಕಾಚಾರದಂತೆ 1,244 ಕೋಟಿ ರೂ. ಹಣ ಬೇಕಾಗುತ್ತದೆ. ಈ ಲೆಕ್ಕ ಪರಿಗಣಿಸಿದರೆ ಒಟ್ಟು 690 ಕೋಟಿ ರೂ. ಹಣ ಕೊರತೆಯಾಗುವ ಸಾಧ್ಯತೆಯಿದೆ. ಪ್ರತಿನಿತ್ಯ 40 ಲಕ್ಷದಿಂದ 60 ಲಕ್ಷ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಈ ಹಣಕಾಸು ವರ್ಷ ಮುಗಿಯಲು ಇನ್ನೂ ಐದು ತಿಂಗಳು ಇರುವುದರಿಂದ ಶಕ್ತಿ ಯೋಜನೆಗೆ ಎಷ್ಟು ಖರ್ಚಾಗಬಹುದು ಎಂಬ ಕುತೂಹಲ ಈಗ ಹೆಚ್ಚಾಗಿದೆ.

     

    ಶಕ್ತಿ ಯೋಜನೆಯ ಮೀಸಲಿಟ್ಟ ಹಣ ಖರ್ಚಾಗುತ್ತಿರುವುದಕ್ಕೆ ಪಬ್ಲಿಕ್ ಟಿವಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ ಡಿಸೆಂಬರ್‌ನಲ್ಲಿ ಉಳಿದ ಹಣವನ್ನು ಸರ್ಕಾರ ಕೊಡಲಿದೆ. ಇನ್ನೂ 1 ಸಾವಿರ ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಿದ್ದಾರೆ.

    ಶಕ್ತಿ ಯೋಜನೆ ಜಾರಿಯಾದ ಕೆಲ ತಿಂಗಳುಗಳ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಬಹುದೆಂಬ ನಿರೀಕ್ಷೆಯಿತ್ತು. ಆದರೆ ಅದು ಹುಸಿಯಾಗಿದ್ದು, ದಿನದಿಂದ ದಿನಕ್ಕೆ ಶಕ್ತಿ ಯೋಜನೆಗೆ ಭರ್ಜರಿ ಯಶಸ್ಸು ಕಂಡುಬರುತ್ತಿದೆ. ಹೀಗಾಗಿ ಸರ್ಕಾರದ ಲೆಕ್ಕಾಚಾರ ಮೀರಿ ಹಣ ಖರ್ಚಾಗುತ್ತಿದೆ.

     

  • ಉಚಿತ ಪ್ರಯಾಣಕ್ಕೆ ಅವಕಾಶವಿದ್ರೂ ಟಿಕೆಟ್ ಪಡೆದು ಮಹಿಳೆಯರ ಪ್ರಯಾಣ

    ಉಚಿತ ಪ್ರಯಾಣಕ್ಕೆ ಅವಕಾಶವಿದ್ರೂ ಟಿಕೆಟ್ ಪಡೆದು ಮಹಿಳೆಯರ ಪ್ರಯಾಣ

    ಚಾಮರಾಜನಗರ: ಶಕ್ತಿ ಯೋಜನೆಯನ್ನು (Shakthi Scheme) ಸರ್ಕಾರ ಜಾರಿಗೆ ತಂದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗ್ತಾನೇ ಇದೆ. ಸಾರಿಗೆ ಬಸ್‍ಗಳಲ್ಲಿ ಈಗ ಮಹಿಳೆಯರದ್ದೇ ಹವಾ ಎಂಬಂತಾಗಿದೆ. ಇದೀಗ ಮಹಿಳೆಯರು ಟಿಕೆಟ್ (Free Bus Ticket For Women) ಪಡೆದು ಪ್ರಯಾಣಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಹಿಳೆಯರು ಚೌಡಹಳ್ಳಿಯಿಂದ ಗುಂಡ್ಲುಪೇಟೆಗೆ ಹಣ ನೀಡಿ ಟಿಕೆಟ್ ಕೇಳಿದ್ದಾರೆ. ಈ ವೇಳೆ ನಿಮಗೆ ಉಚಿತ ಪಯಣದ ಅವಕಾಶವಿದೆ ಹಣ ಕೊಡಬೇಕಿಲ್ಲ ಎಂದರೂ ಮಹಿಳೆಯರು ಕೇಳಲಿಲ್ಲ. ಕೊನೆಗೆ ಮಹಿಳೆಯರ ಒತ್ತಾಯಕ್ಕೆ ಮಣಿದು ನಿರ್ವಾಹಕ ಹಣ ಪಡೆದು ಟಿಕೆಟ್ ನೀಡಿದ್ದಾರೆ.

    ನಾವು ಉಚಿತ ಪಯಣ ಮಾಡಿದರೆ ಸರ್ಕಾರದ ಆರ್ಥಿಕತೆಗೆ ಪೆಟ್ಟು ಬೀಳುತ್ತೆ. ಹೀಗಾಗಿ ನಮಗೆ ಉಚಿತ ಪ್ರಯಾಣ ಬೇಡ. ಹಣ ಕೊಡುತ್ತೇವೆ ಟಿಕೆಟ್ ಕೊಡಿ ಎಂದು ಮಹಿಳೆಯರು ಹೇಳಿದ್ದಾರೆ ಎಂದು ಫೇಸ್ ಬುಕ್‍ನಲ್ಲಿ (Facebook) ಬರೆದುಕೊಂಡಿದ್ದಾರೆ. ಕಂಡಕ್ಟರ್ ಮಹೇಶ್ ಪೋಸ್ಟ್ ಗೆ ಇದೀಗ ಸಾಕಷ್ಟು ಕಾಮೆಂಟ್‍ಗಳು ಬರುತ್ತಿದೆ. ಇದನ್ನೂ ಓದಿ: Shakthi Scheme Effect- ಟ್ರಿಪ್‍ಗೆ ಹೋದ ಪತ್ನಿ ಮನೆಗೆ ಬಂದಿಲ್ಲವೆಂದು ಬಸ್‌ ಚಕ್ರದಡಿ ತಲೆಯಿಟ್ಟ ಪತಿ!

    ಗುರುವಾರವಷ್ಟೇ ಹೊಸಕೋಟೆಯಲ್ಲಿ ಕುಡುಕ ಪತಿಮಹಾಶಯನೊಬ್ಬ ದಯವಿಟ್ಟು ಶಕ್ತಿ ಯೋಜನೆಯನ್ನು ರದ್ದುಗೊಳಿಸಿ. ನನ್ನ ಪತ್ನಿ ಟ್ರಿಪ್‍ಗೆ ಅಂತ ಹೋದವಳು ಇನ್ನೂ ಮನೆಗೆ ವಾಪ್ ಬಂದಿಲ್ಲ. ಇದ್ದರಾಮಯ್ಯ ಸರಿಯಲ್ಲ ಎಂದು ಗೋಗರೆಯುತ್ತಾ ಬಸ್ ಚಕ್ರದಡಿ ತಲೆಯಿಟ್ಟು ರದ್ದಾಂತ ಮಾಡಿದ್ದನು. ಇದನ್ನೂ ಓದಿ: ಮೃತ ಸನ್ಯಾಸಿ ಮನೆಯಲ್ಲಿ ಸಿಕ್ತು 30 ಲಕ್ಷಕ್ಕೂ ಅಧಿಕ ಹಣ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್‌ ಷರತ್ತುಗಳಿಗೆ ಅಪಸ್ವರ ಎತ್ತಿದ ಶಾಮನೂರು

    ಕಾಂಗ್ರೆಸ್‌ ಷರತ್ತುಗಳಿಗೆ ಅಪಸ್ವರ ಎತ್ತಿದ ಶಾಮನೂರು

    ದಾವಣಗೆರೆ: ಮಹಿಳೆಯರು ಅಂದರೆ ಮಹಿಳೆಯರು, ಮತ್ಯಾಕೆ ಆ ಚೀಟಿ, ಈ ಚೀಟಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಪ್ರಶ್ನಿಸಿದ್ದಾರೆ.

    ಶಕ್ತಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬೇರೆ ರಾಜ್ಯದ ಮಹಿಳೆಯರೂ ಬಸ್ಸಿನಲ್ಲಿ ಉಚಿತವಾಗಿ (Free bus travel for women) ಸಂಚರಿಸಲಿ. ಸರ್ಕಾರ ಬಹಳ ಷರತ್ತು (Condition) ಹಾಕಬಾರದು. ಈ ಬಗ್ಗೆ ಅಧಿವೇಶನದಲ್ಲೂ ಪ್ರಸ್ತಾಪಿಸುತ್ತೇನೆ ಎಂದು ತಿಳಿಸಿದರು.   ಇದನ್ನೂ ಓದಿ: KERC ದರ ಏರಿಸಿದ್ದಕ್ಕೆ ವಿದ್ಯುತ್‌ ಬಿಲ್‌ ಹೆಚ್ಚಾಗಿದೆ: ಬೆಸ್ಕಾಂ ಸ್ಪಷ್ಟನೆ

     

    ಯಾವುದೇ ದಾಖಲೆ ಇರಲಿ ಬಿಡಲಿ. ಅವರು ಹೆಣ್ಣುಮಕ್ಕಳಾಗಿದ್ದರೆ ಸಾಕು. ಮಹಿಳೆಯರ ಉಚಿತ ಓಡಾಟಕ್ಕೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್‌ ಷರತ್ತುಗಳಿಗೆ ಅಸಮಾಧಾನ ವ್ಯಕ್ತಪಡಿಸಿದರು.

    ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಮೊದಲ ಗ್ಯಾರಂಟಿಯನ್ನ ರಾಜ್ಯ ಸರ್ಕಾರ ಭಾನುವಾರ ಈಡೇರಿಸಿದೆ. ಮಹಿಳೆಯರ ಉಚಿತ ಬಸ್ ಪ್ರಯಾಣದ ನಾರಿ ಶಕ್ತಿ ಯೋಜನೆಯನ್ನ ರಾಜ್ಯ ಸರ್ಕಾರ ಇಂದಿನಿಂದ ಜಾರಿಗೊಳಿಸಿದೆ.

    ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಎಲ್ಲರೂ ಬಸ್ ಹತ್ತಿ ಮೆಜೆಸ್ಟಿಕ್‍ವರೆಗೂ ಸಂಚರಿಸಿದರು. ಮೊದಲ ಪಿಂಕ್ ಟಿಕೆಟ್ ಅನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಸಿಎಂ ಸಿದ್ದರಾಮಯ್ಯ ವಿತರಿಸಿದರು.

  • ಖಾಸಗಿ ಬಸ್‍ಗಳಲ್ಲೂ ಉಚಿತ ಪ್ರಯಾಣ ಸೇವೆ ಸಿಗುತ್ತಾ- ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು..?

    ಖಾಸಗಿ ಬಸ್‍ಗಳಲ್ಲೂ ಉಚಿತ ಪ್ರಯಾಣ ಸೇವೆ ಸಿಗುತ್ತಾ- ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು..?

    ಬೆಂಗಳೂರು: ಸರ್ಕಾರಿ ಬಸ್‍ (Government Bus) ಗಳಲ್ಲಿ ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಬಹುದು. ಈ ಮಧ್ಯೆ ಖಾಸಗಿ ಬಸ್ ಗಳಲ್ಲಿಯೂ ಫ್ರೀ ಬಸ್ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆ ಎದ್ದಿದ್ದು, ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸ್ಪಷ್ಟನೆ ನೀಡಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಖಾಸಗಿ ಬಸ್‍ಗಳಿಗೆ ಈ ಫ್ರೀ ಪ್ರಯಾಣ ಸೇವೆ ಕೊಡುವ ಯೋಚನೆ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಶಕ್ತಿ ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

    ಇಂದು ಅಧಿಕೃತವಾಗಿ 11 ಗಂಟೆಗೆ ಮಹಿಳೆಯ ಉಚಿತ ಪ್ರಯಾಣಕ್ಕೆ ಚಾಲನೆ ಸಿಗಲಿದೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ಕಾರ್ಯಗತ ಮಾಡುತ್ತಿದ್ದೇವೆ. ಪ್ರತಿಪಕ್ಷಗಳು ಟೀಕೆ ಮಾಡುತ್ತಿದ್ದವು. ಈಗ ನಾವು ಜಾರಿ ಮಾಡುತ್ತಿದ್ದೇವೆ. ಈ ಹಿಂದೆ ಭರವಸೆಗಳನ್ನು ಕೊಟ್ಟಿದ್ರು. ಅದರಲ್ಲಿ ಜಾರಿ ಮಾಡಿದ್ದು ಕೆಲವು ಮಾತ್ರ ಎಂದು ವಾಗ್ದಾಳಿ ನಡೆಸಿದರು.

    ಎಲ್ಲಾ ಗ್ಯಾರಂಟಿ (Congress Guarantee) ಕಾರ್ಯಕ್ರಮಗಳು ಯಶಸ್ವಿಯಾಗಿ ಆಗುತ್ತೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಆಯಾ ಶಾಸಕರು, ಸಂಸದರ ಸಮ್ಮುಖದಲ್ಲಿ ಏಕಾಕಲದಲ್ಲಿ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಿಂದ ಮೆಜೆಸ್ಟಿಕ್‍ಗೆ ಬರುತ್ತಾರೆ. ಸ್ಮಾರ್ಟ್ ಕಾರ್ಡ್ (Smart Card) ಆದಷ್ಟು ಬೇಗ ನೀಡುವ ಕೆಲಸ ಆಗುತ್ತೆ. ಸೇವಾ ಸಿಂಧು ಪೋರ್ಟಲ್ ಸರ್ವರ್ ಸ್ಲೋ ಆದ್ರೆ, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತೆ ಎಂದು ಸಚಿವರು ತಿಳಿಸಿದರು.

  • ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ ಕಾರ್ಡ್‌ – ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?

    ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್‌ ಕಾರ್ಡ್‌ – ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?

    ಬೆಂಗಳೂರು: ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ (Free Bus Travel) ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    ರಾಜ್ಯದೊಳಗಿನ ಪುಯಾಣಕ್ಕೆ ಮಾತ್ರ ಈ ಯೋಜನೆಯು ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು (Seva Sindhu) ಮೂಲಕ ಅರ್ಜಿಗಳನ್ನು ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಜೂನ್‌ 11 ರಿಂದ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ನಡೆಸಬಹುದು.

     
    ಮಾರ್ಗಸೂಚಿಯಲ್ಲಿ ಏನಿದೆ?
    ಐಷಾರಾಮಿ (Luxury) ಬಸ್‌ಗಳಾದ ರಾಜಹಂಸ, ನಾನ್-ಎ.ಸಿ.ಸ್ಲೀಪರ್‌, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.

    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ (Luxury) ಬಸ್‌ಗಳನ್ನು ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.  ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

    ಈ ಯೋಜನೆಯಡಿ ನಾಲ್ಕು, ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು.

    ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ.

    ಶಕ್ತಿ, ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ.

  • ಮಹಿಳೆಯರಿಗೆ ಉಚಿತ ಪ್ರಯಾಣ – ಮಾರ್ಗಸೂಚಿಯಲ್ಲಿ ಏನಿರಬಹುದು?

    ಮಹಿಳೆಯರಿಗೆ ಉಚಿತ ಪ್ರಯಾಣ – ಮಾರ್ಗಸೂಚಿಯಲ್ಲಿ ಏನಿರಬಹುದು?

    ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಮಹಿಳೆಯರಿಗೆ ಫ್ರೀ ಬಸ್ (Karnataka Free Bus Scheme) ಯೋಜನೆ ಜಾರಿ ಸಂಬಂಧ ಸಾರಿಗೆ ಇಲಾಖೆ ಕೆಲಸ ಮಾಡುತ್ತಿದೆ. ಇನ್ನೆರಡು ದಿನದಲ್ಲಿ ಯೋಜನೆಯ ಖರ್ಚು, ವೆಚ್ಚದ ಸಂಪೂರ್ಣ ವರದಿಯನ್ನು ಸರ್ಕಾರದ ಮುಂದಿಡಲಿದೆ.

    ಮೂರು ದಿನದ ಹಿಂದೆ ಗ್ಯಾರಂಟಿಗಳ (Congress Guarantee) ಜಾರಿ ವಿಚಾರವಾಗಿ ಆಯಾ ಇಲಾಖೆ ಹಣಕಾಸು ಮುಖ್ಯ ಅಧಿಕಾರಿಗಳ ಜೊತೆ ಸಿಎಂ, ಡಿಸಿಎಂ ಸಭೆ ಮಾಡಿದ್ದಾರೆ. ಸಭೆಯಲ್ಲಿ ಈಗಾಗಲೇ ಯೋಜನೆ ಜಾರಿಗೆ ತಗಲುವ ವೆಚ್ಚ, ಅನುಷ್ಠಾನ, ಕ್ರಮಗಳ ಬಗ್ಗೆ ಮಾಹಿತಿ ಕೇಳಿರುವ ಸರ್ಕಾರ ಈ ಬಗ್ಗೆ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿತ್ತು.

    ಸಾರಿಗೆ ಇಲಾಖೆ ಅಧಿಕಾರಿಗಳು, ಸಾರಿಗೆ ಇಲಾಖೆಗೆ ಸದ್ಯ ಸ್ಕೀಂನಿಂದ ತಗಲುವ ವೆಚ್ಚ, ಜಿಲ್ಲೆ, ತಾಲೂಕುವಾರು ಪ್ರತಿನಿತ್ಯ ಸಂಚರಿಸುವ ಮಹಿಳೆಯರ ಸಂಖ್ಯೆ, ಈ ಎಲ್ಲ ಅಂಶಗಳ ಆಧಾರದ ಮೇಲೆ ವರದಿ ಸಿದ್ದಪಡಿಸುತ್ತಿದ್ದಾರೆ.   2-3  ದಿನದ ಒಳಗಡೆ ಸಂಪೂರ್ಣ ವರದಿ ಸಿದ್ದರಾಮಯ್ಯ ಅವರ ಕೈಸೇರಲಿದೆ.

    ಮಾರ್ಗಸೂಚಿಯಲ್ಲಿ ಏನಿರಬಹುದು?
    ಐಷಾರಾಮಿ ಬಸ್‍ಗಳಲ್ಲಿ ಫ್ರೀ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದ್ದು ಸರ್ಕಾರಿ ಬಸ್‍ನಲ್ಲಿ ಸಂಚರಿಸುವ ಮಹಿಳೆಯರಿಗೆ ಪ್ರತ್ಯೇಕ ಪಾಸ್ ನೀಡಲು ಚಿಂತನೆ ನಡೆದಿದೆ.

    ಉಚಿತ ಪ್ರಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಉಚಿತ ಬಸ್ ಬಳಸಲು ಮಹಿಳಾ ಫಲಾನುಭವಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯ. ಎಲ್ಲಾ ಪ್ರೀಮಿಯಂ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಇವತ್ತೇ ಸಿದ್ದು ಸಂಪುಟಕ್ಕೆ ಕ್ಲೈಮ್ಯಾಕ್ಸ್ – 24 ಸಂಭವನೀಯ ಸಚಿವರು ಯಾರು?

    ಬಿಎಂಟಿಸಿಯಲ್ಲಿ ಕೇವಲ ದುಡಿಯುವ ವರ್ಗದ ಮಹಿಳೆಯರಿಗಷ್ಟೇ ಉಚಿತ ಇರಲಿದ್ದು ಇತರೇ ಬಸ್‍ಗಳಲ್ಲಿ ಇಂತಿಷ್ಟು ಕಿಲೋ ಮೀಟರ್‌ ಒಳಗಡೆ ಸಂಚಾರ ನಿಯಮ ಬರುವ ಸಾಧ್ಯತೆಯಿದೆ. ಬಿಎಂಟಿಸಿ, ಕೆಎಸ್‍ಆರ್‌ಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ತಗುಲುವ ಹೊರೆಯನ್ನು ಸರ್ಕಾರ ಭರಿಸಲು ನಿರ್ಧಾರ ತೆಗೆದುಕೊಂಡಿದೆ.

    ನಾಯಕರು ಹೇಳಿದ್ದು ಏನು?
    ಸಿದ್ದರಾಮಯ್ಯ, ಡಿಕೆಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರು ಯಾವುದೇ ಷರತ್ತು ಪ್ರಕಟಿಸದೇ ರಾಜ್ಯದ ಯಾವ ಭಾಗಕ್ಕೂ ಹೋಗಬೇಕಾದರೂ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಉಚಿತವಾಗಿ ಹೋಗಬಹುದು. ಧರ್ಮಸ್ಥಳಕ್ಕೆ ಹೋಗುವಾಗ, ಅತ್ತೆ ಮನೆಗೆ ಹೋಗುವಾಗ, ತವರು ಮನೆಗೆ ಹೋಗುವಾಗ, ಗಂಡನ ಮನೆಗೆ ಹೋಗುವಾಗ, ಮೈಸೂರಿಗೆ ಹೋಗುವಾಗ, ಬೆಂಗಳೂರಿಗೆ ಹೋಗುವಾಗ ಮಹಿಳೆಯರು ಟಿಕೆಟ್‌ ತೆಗೆದುಕೊಳ್ಳುವಂತಿಲ್ಲ ಎಂದು ಡಿಕೆ ಶಿವಕುಮಾರ್‌ ಭಾಷಣದಲ್ಲಿ ಆಶ್ವಾಸನೆ ನೀಡಿದ್ದರು.