ಮಂಗಳೂರು: ನಿಯಂತ್ರಣ ಕಳೆದುಕೊಂಡ ಬೆಂಜ್ ಕಾರೊಂದು (Benz Car) ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿಯ ಉಜಿರೆಯಲ್ಲಿ (Ujire)ನಡೆದಿದೆ.
ಅಪಘಾತದಲ್ಲಿ ಕಾರು ಚಾಲಕ ಉಜಿರೆ ನಿವಾಸಿ ಪ್ರಜ್ವಲ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಉರುಳಿ ಬಿದ್ದಿತ್ತು. ಅಪಘಾತದ ತೀವ್ರತೆಗೆ ಐಷಾರಾಮಿ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಚೀನಾ ಗಡಿ ಭಾಗದಲ್ಲಿ ನದಿ ದಾಟುವಾಗ ಟ್ಯಾಂಕ್ ಅಪಘಾತ – ಐವರು ಭಾರತೀಯ ಯೋಧರು ಹುತಾತ್ಮ
ತಕ್ಷಣ ಸ್ಥಳೀಯರು ಪ್ರಜ್ವಲ್‌ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 13ನೇ ವಯಸ್ಸಿಗೆ ಬಾಲಕಿ ಗರ್ಭಿಣಿ – ಹೊಟ್ಟೆನೋವಿನಿಂದ ಸಾವು
ಮಂಗಳೂರು: ತನ್ನ 14 ವರ್ಷದ ಮಗ (Son Suicide) ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ ತಂದೆಯೂ (Father Suicide) ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ.
ಇದೇ ತಿಂಗಳ ಜನವರಿ 4 ರಂದು ಪುತ್ರ ಯಕ್ಷಿತ್ (14) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಹೀಗಾಗಿ ಮಗನ ಉತ್ತರ ಕ್ರಿಯೆ ಜನವರಿ 14 ರಂದು ಭಾನುವಾರ ನಡೆದಿತ್ತು. ಇದಾದ ಬಳಿಕ ಯೋಗೀಶ್ ಪೂಜಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದ ಭಾರತೀಯ ಮೂಲದ ವಿವೇಕ್ – ಟ್ರಂಪ್‌ಗೆ ಬೆಂಬಲ
ಯಕ್ಷಿತ್, ಉಜಿರೆ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಕೆಲದಿನಗಳ ಹಿಂದೆ ಯಕ್ಷಿತ್ ಹಾಗೂ ಆತನ 6 ವರ್ಷದ ತಮ್ಮನ ಜೊತೆ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ಯಕ್ಷಿತ್ ಹೊಟ್ಟೆ ಮೇಲೆ ತಮ್ಮ ಕಚ್ಚಿ ಗಾಯ ಮಾಡಿದ್ದ. ಈ ವಿಚಾರದಲ್ಲಿ ನೊಂದು ತಮ್ಮನ ಎದುರೇ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಮನೆಯಲ್ಲಿ ತಾಯಿಯ ಸೀರೆಯನ್ನು ತೆಗೆದುಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಈ ಎರಡೂ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ.
ಕಂಠಪೂರ್ತಿ ಕುಡಿದು ಬಂದಿರುವ ಸುರೇಶ್ ಗೌಡ, ಪತ್ನಿ ಜೊತೆ ಜಗಳ ತೆಗೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ತಾರಕಕ್ಕೇರಿ ಸುರೇಶ್ ಗೌಡನು ತನ್ನ ಪತ್ನಿಯ ಕಣ್ಣು ಹಾಗೂ ಕೆನ್ನೆಯನ್ನ ಕಚ್ಚಿ ಮಾಂಸ ಹೊರ ತೆಗೆದಿದ್ದಾನೆ. ಬಳಿಕ ಕೋಲಿನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿದ್ದಾನೆ. ಪತಿಯ ಹಲ್ಲೆಯಿಂದಾಗಿ ಪತ್ನಿಯ ಎಡ ಕಣ್ಣಿಗೆ ಸಂಪೂರ್ಣ ಹಾನಿಯಾಗಿದೆ.
ಇತ್ತ ತಾಯಿಯ ಮೇಲಿನ ಹಲ್ಲೆ ಬಿಡಿಸಲು ಬಂದ ಮಗಳ ತಲೆ ಭಾಗ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಈ ವೇಳೆ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿ ನೆರೆ ಹೊರೆಯವರಿಗೆ ವಿಚಾರ ತಿಳಿಸಿದಳು. ಈ ಹೊತ್ತಲ್ಲೇ ಜೀವ ಉಳಿಸಿಕೊಳ್ಳಲು ಓಡಿ ಹೋಗಿ ಇಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ.
ನೆರೆ ಹೊರೆಯವರು ಧಾಮಿಸುತ್ತಿದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ವಿಪರೀತ ಗಾಯಗೊಂಡ ತಾಯಿ-ಮಗಳಿಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ (Dharmasthala Police Station) ಪ್ರಕರಣ ದಾಖಲಾಗಿದೆ.
ಮಂಗಳೂರು: ಸವಾರರಿಗೆ ಹೆಲ್ಮೆಟ್ ಎಷ್ಟು ಇಂಪಾರ್ಟೆಂಟೋ ಬೈಕ್ ಸ್ಟ್ಯಾಂಡ್ (Bike Stand) ತೆಗೆದು ಚಲಾಯಿಸುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಯಾಕೆಂದರೆ ಇಲ್ಲೊಬ್ಬ ವಿದ್ಯಾರ್ಥಿ ಬೈಕ್ ಸ್ಟ್ಯಾಂಡ್ ತೆಗೆಯದೇ ಚಲಾಯಿಸಿ ಭಾರೀ ಅನಾಹುತವೊಂದು ನಡೆದು ಹೋಗಿದೆ.
ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಉಜಿರೆಯಲ್ಲಿ (Ujire) ನಡೆದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿಯಾಗಿರುವ ದೀಕ್ಷಿತ್, ಉಜಿರೆ ಎಸ್‍ಡಿಎಂ ಕಾಲೇಜಿನ ವಿದ್ಯಾರ್ಥಿ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಳ್ತಂಗಡಿಯ ಉಜಿರೆ ರಸ್ತೆಯಲ್ಲಿ ದೀಕ್ಷಿತ್, ಬೈಕ್ ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ್ದಾನೆ. ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೀಕ್ಷಿತ್ ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ದೀಕ್ಷಿತ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ – ಕಾರ್ಮಿಕ ಸಾವು
ಮಂಗಳೂರು: ಧರ್ಮಸ್ಥಳದ (Dharamsthala) ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ (Sowjanya Case) ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮಾಡಲಾಗುತ್ತಿರುವ ವಿಚಾರದ ಹಿನ್ನೆಲೆ ಪ್ರತಿಭಟನಾ ಸಮಾವೇಶ ಇಂದು ನಡೆಯಿತು. ಈ ಪ್ರತಿಭಟನಾ ಸಭೆಯಲ್ಲಿ ವೇದಿಕೆ ಹತ್ತಲು ಪ್ರಯತ್ನಿಸಿದ ಸೌಜನ್ಯ ತಾಯಿ ಕುಸುಮಾವತಿಯನ್ನು ಪೊಲೀಸರು ತಡೆದಿದ್ದಾರೆ.
ಉಜಿರೆಯಲ್ಲಿ (Ujire) ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಮುಂಭಾಗದ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾ ಸಮಾವೇಶಕ್ಕೆ ಭಕ್ತರು ಆಗಮಿಸಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗಿದ್ದಾರೆ.
ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕುಸುಮಾವತಿ, ನಾವು ಒಂದು ನ್ಯಾಯ ಕೇಳೋದಕ್ಕಾಗಿ ಬಂದಿದ್ದೆವು. ಮಗಳ ಸಾವಿಗೆ ಸಂಬಂಧಿಸಿದಂತೆ ಹೋರಾಟ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಬಂದಿದ್ದೆವು. ಆದರೆ ನಮ್ಮನ್ನು ಸ್ಟೇಜ್ ಹತ್ತಲು ಬಿಡಲಿಲ್ಲ. ಮಾತ್ರವಲ್ಲದೇ ನನ್ನ ಮಗನ ಕಾಲರ್ ಅನ್ನು ಹಿಡಿದು ಇಳಿಸಿದರು. ಇದು ಧರ್ಮಸ್ಥಳದ ಧರ್ಮನಾ ಎಂದು ಪ್ರಶ್ನಿಸಿದರು.
ಸೌಜನ್ಯ ಪರವಾಗಿ ಅವರು ಹೋರಾಟ ಮಾಡುತ್ತಿಲ್ಲ. ಇದೆಲ್ಲಾ ನೆಪವಷ್ಟೇ. ನನ್ನ ಮಗಳ ಹೆಸರನ್ನು ಬಳಸಿ ಹೋರಾಟ ಮಾಡುತ್ತಿದ್ದಾರೆ ಹೊರತು ನನ್ನ ಮಗಳ ಪರವಾಗಿ ಅಲ್ಲ. ನಾವು ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರುತನಿಖೆ ಆಗಲೇ ಬೇಕು. ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಆಗಬೇಕು ಎಂದು ಕುಸುಮಾವತಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು: ಹೆಚ್‌ಡಿಕೆಗೆ ಡಿಕೆಶಿ ಟಾಂಗ್
ಉಜಿರೆ (Ujire) ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳ (Soujanya) ಅತ್ಯಾಚಾರ ಮತ್ತು ಕೊಲೆ ಕೇಸ್ ಇದೀಗ ಸಿನಿಮಾ ರೂಪದಲ್ಲಿ ಬರಲಿದೆಯಾ? ಅಂಥದ್ದೊಂದು ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಸೌಜನ್ಯ ಕೇಸ್ ಇಟ್ಟುಕೊಂಡು ಸಿನಿಮಾ ಮಾಡಲು ಲವ ಎನ್ನುವವರು ಹೊರಟಿದ್ದು, ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ಗಾಗಿ ಅವರು ಅರ್ಜಿ ಸಲ್ಲಿಸಿದ್ದಾರೆ.
ಜಿ.ಕೆ. ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಟೈಟಲ್ ಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ‘ಸ್ಟೋರಿ ಆಫ್ ಸೌಜನ್ಯಾ’ (Story of Soujanya) ಶೀರ್ಷಿಕೆಯನ್ನು ಕೊಡುವಂತೆ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಅರ್ಜಿಯಲ್ಲಿ ಸಲ್ಲಿಕೆಯಾದಂತೆ ಇದೊಂದು ಸಾಮಾಜಿಕ ಕಥಾ ಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.
2018ರಲ್ಲಿ ಕಾಲೇಜಿನಿಂದ ಮನೆಗೆ ಬರುತ್ತಿದ್ದ ಸೌಜನ್ಯಾ ಅಕ್ಟೋಬರ್ 9ರಂದು ಅಪಹರಣಕ್ಕೆ ಒಳಗಾಗುತ್ತಾಳೆ. ಅದೇ ದಿನ ರಾತ್ರಿಯೇ ಆಕೆ ಕಾಣೆಯಾಗಿದ್ದರ ಬಗ್ಗೆ ದೂರು ದಾಖಲಾಗುತ್ತದೆ. ಅಕ್ಟೋಬರ್ 10ರಂದು ಈ ಬಾಲಕಿ ಶವವಾಗಿ ಧರ್ಮಸ್ಥಳದ (Dharmasthala) ಮಣ್ಣಸಂಖದಲ್ಲಿ ಪತ್ತೆಯಾಗುತ್ತಾಳೆ. ಅತ್ಯಾಚಾರದ ನಂತರ ಈಕೆಯನ್ನು ಕೊಲೆ ಮಾಡಲಾಗಿದೆ ಎಂದು ನಂತರ ಪೊಲೀಸ್ ತನಿಖೆಯಿಂದ ತಿಳಿದು ಬರುತ್ತದೆ.
ಮೊನ್ನೆಯಷ್ಟೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಸಂತೋಷ್ ರಾವ್ ಎನ್ನುವವರನ್ನು ಮಾನ್ಯ ನ್ಯಾಯಾಲಯ ನಿರ್ದೋಷಿ ಎಂದು ಆದೇಶ ನೀಡಿದೆ. ಹಾಗಾಗಿ ಮತ್ತೆ ಸೌಜನ್ಯಾಳ ಸಾವು ಮುನ್ನೆಲೆಗೆ ಬಂದಿದೆ. ಈ ಪ್ರಕರಣವನ್ನು ಮರುತನಿಖೆ ನಡೆಸಬೇಕು ಎಂದು ಆಕೆಯ ಕುಟುಂಬಸ್ಥರೂ ಆಗ್ರಹಿಸಿದ್ದಾರೆ. ಈ ಬೆನ್ನಲ್ಲೇ ಸೌಜನ್ಯಾಳ ಕಥೆಯನ್ನು ಸಿನಿಮಾ ಮಾಡಲು ಚಿತ್ರತಂಡ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಚಿಕ್ಕಮಗಳೂರು: ಹೆಂಡತಿಯನ್ನು ಬಸ್ಸು ಹತ್ತಿಸಿ, ನಾನು ಹಿಂದೆ ಬೈಕಿನಲ್ಲಿ ಬರುತ್ತೇನೆ ಎಂದು ಹೇಳಿದ ಪತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಹೆಬ್ಬರಿಗೆ ಗ್ರಾಮದ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದ ದಿಲೀಪ್ (40) ಎಂದು ಗುರುತಿಸಲಾಗಿದೆ. ಧರ್ಮಸ್ಥಳದಲ್ಲಿ (Dharmasthala) ಮುಡಿ ತೆಗೆಯುವ ಕೆಲಸ ಮಾಡುತ್ತಿದ್ದ ದಿಲೀಪ್ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಜಿರೆಯಲ್ಲಿ (Ujire) ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟಿದ್ದು, ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗುವಂತೆ ಹೇಳಿದ್ದಾರೆ. ತಾನು ಮಳೆ ನಿಂತ ಮೇಲೆ ಬೈಕಿನಲ್ಲಿ ಬರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿ
ಮಳೆ ನಿಂತ ಮೇಲೆ ಬೈಕಿನಲ್ಲಿ ಹೊರಟ ದಿಲೀಪ್ ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಸಮೀಪದ ರಸ್ತೆ ಬದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದೆ. ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಿಲೀಪ್ ಧರ್ಮಸ್ಥಳದಲ್ಲಿ ನೂತನವಾಗಿ ಮನೆಯೊಂದನ್ನು ನಿರ್ಮಿಸಿದ್ದರು. ಮನೆಯ ಗೃಹಪ್ರವೇಶ ಮೇ 5ರಂದು ನಡೆಯಲಿದ್ದು, ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದರು. ಅಲ್ಲಿಂದ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್
ದಿಲೀಪ್ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಸ್ಥಳಕ್ಕೆ ಬಣಕಲ್ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಲಿಫ್ಟ್‌ಗೆ ಸಿಲುಕಿ 26ರ ಯುವಕ ಸಾವು
ಮಂಗಳೂರು: ಅವಳಿ ಸಹೋದರಿಯರಿಬ್ಬರು (Twin Sisters) ಪಿಯುಸಿ (PUC) ಪರೀಕ್ಷೆಯಲ್ಲಿ ಸಮಾನವಾದ ಅಂಕಗಳನ್ನು ಪಡೆಯುವ ಮೂಲಕ ವಿಶೇಷ ಸಾಧನೆಗೈದಿದ್ದಲ್ಲದೇ ಎಲ್ಲರೂ ನಿಬ್ಬೆರಗಾಗುವಂತೆ ಮಾಡಿದ್ದಾರೆ.
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಗಂಡಿ (Belthangady) ತಾಲೂಕಿನ ನೆರಿಯ ಗ್ರಾಮದ ಅವಳಿ ಸಹೋದರಿಯರಾದ ಸ್ಪಂದನ ಮತ್ತು ಸ್ಪರ್ಶ ಪಿಯುಸಿ ಪರೀಕ್ಷೆಯಲ್ಲಿ 600ರಲ್ಲಿ 594 ಅಂಕ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಉಜಿರೆಯ (Ujire) ಎಸ್‌ಡಿಎಂ ಕಾಲೇಜಿನ (SDM College) ದ್ವಿತೀಯ ಪಿಯುಸಿ ವಾಣಿಜ್ಯ (Commerce) ವಿಭಾಗದ ವಿದ್ಯಾರ್ಥಿನಿಯರಾದ ಇವರು ಸಮಾನವಾಗಿ 594 ಅಂಕ ಪಡೆದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಇದನ್ನೂ ಓದಿ: ಪಿಯು ಪರೀಕ್ಷಾ ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್, ಉಡುಪಿ ಸೆಕೆಂಡ್
ಸ್ಪಂದನ ಮತ್ತು ಸ್ಪರ್ಶ ಇಂಗ್ಲಿಷ್ (English) ಮತ್ತು ಅರ್ಥಶಾಸ್ತ್ರ (Economics) ವಿಷಯಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಷಯಗಳಲ್ಲಿ ಸಮಾನವಾದ ಅಂಕಗಳನ್ನು ಪಡೆದಿದ್ದಾರೆ. ಸ್ಪಂದನ ಇಂಗ್ಲಿಷ್‌ನಲ್ಲಿ 98 ಹಾಗೂ ಸ್ಪರ್ಶ 97 ಅಂಕಗಳನ್ನು ಪಡೆದಿದ್ದಾರೆ. ಅರ್ಥಶಾಸ್ತ್ರದಲ್ಲಿ ಸ್ಪಂದನ 98 ಅಂಕಗಳನ್ನು ಪಡೆದಿದ್ದರೆ, ಸ್ಪರ್ಶ 99 ಅಂಕಗಳನ್ನು ಪಡೆದಿದ್ದಾರೆ. ಹಿಂದಿಯಲ್ಲಿ (Hindi) ಇಬ್ಬರೂ 98 ಅಂಕಗಳನ್ನು ಪಡೆದು ಉಳಿದೆಲ್ಲಾ ವಿಷಯಗಳಲ್ಲಿ 100 ಅಂಕಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: 2nd PUC Result: ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣವೊಂದು ನಡೆದಿರುವುದು ಬೆಳಕಿಗೆ ಬಂದಿದೆ.
ಬಸ್ಸಿನಲ್ಲಿ ಯುವತಿಯ ಜೊತೆ ಮಾತನಾಡಿದ್ದಕ್ಕೆ ಅನ್ಯಕೋಮಿನ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಜಿರೆ(Ujire) ಯಲ್ಲಿ ಈ ಘಟನೆ ನಡೆದಿದ್ದು, ಕಕ್ಕಿಂಜೆ ನಿವಾಸಿ ಝಾಹಿರ್ (22) ಹಲ್ಲೆಗೊಳಗಾದ ಯುವಕನಾಗಿದ್ದಾನೆ.
ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಝಾಹಿರ್, ಮಂಗಳವಾರ ಊರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದನು. ಯುವತಿ ಬೆಳ್ತಂಗಡಿಯಲ್ಲಿ ಬಸ್‍ನಿಂದು ಇಳಿದು ಹೋಗಿದ್ದಾಳೆ.
ಮಂಗಳೂರು: ಮೂವತ್ತಮೂರು ಮಂದಿ ಕವಿಗಳು ರಚಿಸಿದ 270 ಜಿನಭಕ್ತಿಗೀತೆಗಳ ಸಂಕಲನ “ಶ್ರುತಗಾನ ಸುಧಾ”ವನ್ನು ಬುಧವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಕವನ ಸಂಕಲನದ ಸಂಪಾದಕರಾದ ಮೂಡಬಿದ್ರೆಯ ಪ್ರೊ. ಅಜಿತ್ ಪ್ರಸಾದ್, ಬೆಂಗಳೂರಿನ ಚಿತ್ತಾ ಜಿನೇಂದ್ರ, ಮಿತ್ರಸೇನ ಜೈನ್ ಅಳದಂಗಡಿ ಮತ್ತು ಧರ್ಮಸ್ಥಳದ ಡಾ. ಜಯಕೀರ್ತಿ ಜೈನ್ ಉಪಸ್ಥಿತರಿದ್ದರು.