Tag: ಉಡುಗೊರೆ

  • ಮೋದಿಗಾಗಿ 30 ಗಂಟೆಯಲ್ಲಿ ಬಂಗಾರದ ಕೇದಾರನಾಥ ದೇವಾಲಯ ನಿರ್ಮಾಣ

    ಮೋದಿಗಾಗಿ 30 ಗಂಟೆಯಲ್ಲಿ ಬಂಗಾರದ ಕೇದಾರನಾಥ ದೇವಾಲಯ ನಿರ್ಮಾಣ

    ಕಾರವಾರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮೇಲಿನ ಅಭಿಮಾನದಿಂದ ಅಭಿಮಾನಿಯೊಬ್ಬ ಬರೋಬ್ಬರಿ 30 ಗಂಟೆಯಲ್ಲಿ ಬಂಗಾರದ ಕೇದಾರನಾಥ ದೇವಾಲಯವನ್ನು ನಿರ್ಮಿಸಿ ಉಡುಗೊರೆ ನೀಡಲು ತಯಾರಿ ನಡೆಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಡವಾಡದ ನಿವಾಸಿ ಮಿಲಿಂದ ಉದಯಕಾಂತ ಅಣ್ವೇಕರ್ ಕೇದಾರನಾಥ ದೇವಸ್ಥಾನದ ಪ್ರತಿಕೃತಿಯನ್ನು ತಯಾರಿಸಿದ್ದಾರೆ. ಇವರು ಬೆಳ್ಳಿ, ಬಂಗಾರ ಹಾಗೂ ತಾಮ್ರ ಮಿಶ್ರಣ ಮಾಡಿದ 54 ಗ್ರಾಂ ತೂಕದ ಮೂರು ಇಂಚು ಅಗಲ, ಮೂರು ಇಂಚು ಉದ್ದದ ಕೇದಾರನಾಥ ಮಂದಿರ ನಿರ್ಮಾಣ ಮಾಡಿದ್ದು, ಮೋದಿ ಅವರಿಗೆ ಉಡುಗೊರೆ ನೀಡಲು ಮುಂದಾಗಿದ್ದಾರೆ.

    ಅಣ್ವೇಕರ್ 30 ಗಂಟೆಯಲ್ಲಿ ಇದರ ನಿರ್ಮಾಣ ಮಾಡಿದ್ದು, ದೇವಸ್ಥಾನದ ಗರ್ಭ ಗುಡಿಯಲ್ಲಿ 4mm ನ ಅತಿಚಿಕ್ಕ ಬಂಗಾರದ ಶಿವಲಿಂಗ ಸಹ ನಿರ್ಮಿಸಲಾಗಿದೆ. ಮೂಲತಃ ಅಕ್ಕಸಾಲಿಗರಾಗಿರುವ ಇವರು 2013ರಲ್ಲಿ 19.975 ಇಂಚಿನ ಚೈನ್ ತಯಾರಿಸಿ ಲಿಮ್ಕಾ ದಾಖಲೆ ನಿರ್ಮಿಸಿದ್ದರು. ಈ ಬಾರಿ ಮೋದಿಯವರ ಇಷ್ಟ ದೈವ ಕೇದಾರನಾಥ ಮಂದಿರ ನಿರ್ಮಿಸಿ ಉಡುಗೊರೆ ಯಾಗಿ ನೀಡಲು ಬಯಸಿದ್ದಾರೆ. ಹೀಗಾಗಿ ಇದನ್ನು ನಿರ್ಮಿಸಿರುವುದಾಗಿ ಪಬ್ಲಿಕ್ ಟಿ.ವಿ ಗೆ ಮಾಹಿತಿ ನೀಡಿದ್ದಾರೆ.

  • ಚುನಾವಣೆಗೆ ಈಗಿನಿಂದಲೇ ತಯಾರಿ- ಭೈರತಿಯಿಂದ ಗೌರಿ ಹಬ್ಬಕ್ಕೆ ಸೀರೆ ಗಿಫ್ಟ್

    ಚುನಾವಣೆಗೆ ಈಗಿನಿಂದಲೇ ತಯಾರಿ- ಭೈರತಿಯಿಂದ ಗೌರಿ ಹಬ್ಬಕ್ಕೆ ಸೀರೆ ಗಿಫ್ಟ್

    ಬೆಂಗಳೂರು: ಉಪ ಚುನಾವಣೆಗೆ ಭರ್ಜರಿ ತಯಾರಿ ನಡೆದಿದ್ದು, ಕೆ.ಆರ್.ಪುರ ಅನರ್ಹ ಶಾಸಕ ಭೈರತಿ ಬಸವರಾಜ್ ಈಗಿನಿಂದಲೇ ಮತದಾರರನ್ನು ಮನವೊಲಿಸಲು ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ಗೌರಿ ಹಬ್ಬಕ್ಕೆ ಸೀರೆ, ಅರಿಶಿನ, ಕುಂಕುಮ ಹಂಚುತ್ತಿದ್ದಾರೆ ಆರೋಪ ಕೇಳಿ ಬಂದಿದೆ.

    ಗೌರಿ ಗಣೇಶ ಹಬ್ಬದ ಗಿಫ್ಟ್ ನೀಡುವ ಮೂಲಕ ತದಾರರ ಮನವೊಲಿಸಲು ಭೈರತಿ ಮುಂದಾಗಿದ್ದಾರೆ. ಕೆ.ಆರ್.ಪುರ ಕ್ಷೇತ್ರದ ಬಸವನಪುರ ವಾರ್ಡ್‍ನಲ್ಲಿ ಅರಿಶಿನ ಕುಂಕುಮ ಬಳೆ ಸೀರೆ ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ. ಭೈರತಿ ಅವರು ತಮ್ಮ ಬೆಂಬಲಿಗರ ಮೂಲಕ ಈ ರೀತಿ ಮಾಡಿಸುತ್ತಿದ್ದಾರೆ. ಮುಂಬರುವ ಉಪ ಚುನಾವಣೆಗೆ ಈಗಲೇ ಸೀರೆ ಹಂಚುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಭೈರತಿ ಬಸವರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸರ್ಕಾರ ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂನಲ್ಲಿದೆ. ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ.

  • ರಕ್ಷಾಬಂಧನಕ್ಕೆ ಹುತಾತ್ಮ ಯೋಧನ ಪತ್ನಿಗೆ ಗ್ರಾಮಸ್ಥರಿಂದ 11 ಲಕ್ಷದ ಮನೆ ಗಿಫ್ಟ್

    ರಕ್ಷಾಬಂಧನಕ್ಕೆ ಹುತಾತ್ಮ ಯೋಧನ ಪತ್ನಿಗೆ ಗ್ರಾಮಸ್ಥರಿಂದ 11 ಲಕ್ಷದ ಮನೆ ಗಿಫ್ಟ್

    ಭೋಪಾಲ್: ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.

    ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು ನೆಲದ ಮೇಲೆ ತಮ್ಮ ಕೈಗಳನ್ನು ಇಟ್ಟು ಅದರ ಮೇಲೆ ರಾಜು ಬಾಯಿ ಅವರನ್ನು ನಡೆಸಿ, ಮನೆಯೊಳಗೆ ಕಳುಹಿಸಿ ಗೌರವ ಸಲ್ಲಿಸಿದ್ದಾರೆ.

    1992ರಲ್ಲಿ ದಕ್ಷಿಣ ತ್ರಿಪುರ ಜಿಲ್ಲೆಯ ದಳಪತಿಪುರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೋಹನ್ ಸಿಂಗ್ ಹುತಾತ್ಮರಾಗಿದ್ದರು. ಅಂದಿನಿಂದ ಮೋಹನ್ ಸಿಂಗ್ ಅವರ ಪತ್ನಿ ರಾಜು ಬಾಯಿ, ಇಬ್ಬರು ಮಕ್ಕಳು ಮುರಿದ ಗುಡಿಸಲಿನಲ್ಲಿಯೇ ಜೀವನ ನಡೆಸುತ್ತಿದ್ದರು. ಸರ್ಕಾರ ಕೂಡ ಅವರ ನೆರವಿಗೆ ಬಂದಿರಲಿಲ್ಲ. ಸರ್ಕಾರದಿಂದ ಬರುತ್ತಿದ್ದ ಕೇವಲ 700 ರೂ. ಮಾಸಿಕ ಪಿಂಚಣಿಯಲ್ಲಿ ಮೋಹನ್ ಸಿಂಗ್ ಕುಟುಂಬ ಜೀವನ ನಡೆಸಬೇಕಾಗಿತ್ತು. ಇದನ್ನು ಕಂಡ ಗ್ರಾಮಸ್ಥರು ಯೋಧನ ಕುಟುಂಬಕ್ಕೆ ನೆರವಾಗಲು ನಿರ್ಧರಿಸಿ, ಬರೋಬ್ಬರಿ 11 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ರಕ್ಷಾಬಂಧನದ ಶುಭದಿನದಂದು ಉಡುಗೊರೆಯಾಗಿ ಯೋಧನ ಪತ್ನಿಗೆ ನೀಡಿದ್ದಾರೆ.

    ಮೋಹನ್ ಸಿಂಗ್ ಹುತಾತ್ಮರಾಗಿ 3 ದಶಕಗಳಾಗುತ್ತಾ ಬಂದರೂ ಸರ್ಕಾರ ಮಾತ್ರ ಅವರ ಕುಟುಂಬಕ್ಕೆ ಯಾವುದೇ ರೀತಿಯ ಸಹಾಯ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಪಿಪ್ಲಿಯ ಗ್ರಾಮಸ್ಥರು ಸೇರಿಕೊಂಡು ತಮ್ಮ ಗ್ರಾಮದಲ್ಲಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ದೇಣಿಗೆ ಸಂಗ್ರಹಿಸಿ ಮೋಹನ್ ಸಿಂಗ್ ಕುಟುಂಬಕ್ಕೆ ಮನೆಯನ್ನು ಕಟ್ಟಿಕೊಡಲು ಮುಂದಾದರು. ಮುರುಕಲು ಗುಡಿಸಲಿನಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕಾಗಿ ದೇಣಿಗೆ ಹಣದಲ್ಲಿ ಕಾಂಕ್ರೀಟ್ ಮನೆ ಕಟ್ಟಿಸಿದರು.

    ಆ ಮನೆಯನ್ನು ಗುರುವಾರ ರಾಜು ಬಾಯಿ ಅವರಿಗೆ ಊರಿನವರು ಗಿಫ್ಟ್ ಆಗಿ ನೀಡಿದ್ದಾರೆ. ರಕ್ಷಾಬಂಧನ ಹಬ್ಬವಿದ್ದ ಕಾರಣಕ್ಕೆ ತನ್ನೂರಿನ ಎಲ್ಲಾ ಯುವಕರಿಗೂ ರಾಜು ಬಾಯಿ ಅವರು ರಾಖಿ ಕಟ್ಟಿ ಹೊಸ ಮನೆಯೊಳಗೆ ಪ್ರವೇಶಿಸಿ ಹಬ್ಬ ಆಚರಿಸಿದ್ದಾರೆ.

    ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧ ಮೋಹನ್ ಸಿಂಗ್ ಅವರ ಪ್ರತಿಮೆಯನ್ನು ಗ್ರಾಮದಲ್ಲಿ ನಿರ್ಮಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಯೋಧನ ಬಲಿದಾನಕ್ಕೆ ಸರ್ಕಾರ ಯಾವುದೇ ಗೌರವ ನೀಡದೇ ಇದ್ದರೂ ಗ್ರಾಮಸ್ಥರು ಸೇರಿಕೊಂಡು ಊರಿನ ಮುಖ್ಯರಸ್ತೆಯಲ್ಲಿ ಪ್ರತಿಮೆ ನಿರ್ಮಿಸಲು ಮುಂದಾಗಿದ್ದಾರೆ. ಈ ಮೂಲಕ ಹುತಾತ್ಮ ಯೋಧನಿಗೆ ಗೌರವ ಸಲ್ಲಿಸುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.

  • ಸರ್ಕಾರಿ ಅಧಿಕಾರಿಗಳು ಯಾರಿಂದಲೂ ಗಿಫ್ಟ್ ಪಡೆಯುವಂತಿಲ್ಲ: ಯೋಗಿ ಆದಿತ್ಯನಾಥ್

    ಸರ್ಕಾರಿ ಅಧಿಕಾರಿಗಳು ಯಾರಿಂದಲೂ ಗಿಫ್ಟ್ ಪಡೆಯುವಂತಿಲ್ಲ: ಯೋಗಿ ಆದಿತ್ಯನಾಥ್

    ಲಕ್ನೋ: ರಾಜ್ಯ ಸರ್ಕಾರದ ಯಾವುದೇ ಅಧಿಕಾರಿ ಯಾರಿಂದಲೂ ಉಡುಗೊರೆಗಳನ್ನು ಪಡೆಯುವಂತಿಲ್ಲ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

    ಸಚಿವ ಸಂಪುಟ ಸಭೆಗಳಲ್ಲಿ ಮೊಬೈಲ್ ನಿಷೇಧ, ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ಹಾಜರಾಗುವುದು ಸೇರಿದಂತೆ ವಿವಿಧ ನಿಯಮಗಳನ್ನು ಅಧಿಕಾರಿಗಳ ಮೇಲೆ ಹೇರಿದ್ದರು. ಇದೀಗ ಯಾರಿಂದಲೂ, ಯಾವುದೇ ರೀತಿಯ ಉಡುಗೊರೆಗಳನ್ನು ಪಡೆಯುವಂತಿಲ್ಲ ಎಂದು ಯುಪಿ ಸರ್ಕಾರದ ಅಧೀನ ಕಾರ್ಯದರ್ಶಿ ಮಹೇಶ್ ಗುಪ್ತಾ ಸುತ್ತೋಲೆ ಹೊರಡಿಸಿದ್ದಾರೆ.

    ಉಡುಗೊರೆಗಳೊಂದಿಗೆ ಯಾವುದೇ ಸರ್ಕಾರಿ ವ್ಯಕ್ತಿ ಕಾರ್ಯದರ್ಶಿಗಳ ಕಚೇರಿಯನ್ನು ಪ್ರವೇಶಿಸುವಂತಿಲ್ಲ. ಅಲ್ಲದೆ, ಉನ್ನತ ಅಧಿಕಾರಿಗಳ ಅನುಮತಿ ಇಲ್ಲದೆ, ಯಾವುದೇ ಉಡುಗೊರೆಗಳನ್ನು ಸ್ವೀಕರಿಸುವಂತಿಲ್ಲ ಎಂದು ಸುತ್ತೋಲೆಯಲ್ಲಿ ಆದೇಶಿಸಲಾಗಿದೆ.

    ಐಎಎಸ್ ಅಧಿಕಾರಿಗಳು ಉಡುಗೊರೆಗಳನ್ನು ತಮ್ಮ ಮನೆಗೆ ಸಾಗಿಸುತ್ತಾರೆ, ಸಿಹಿಯನ್ನು ಕಚೇರಿಯಲ್ಲಿ ಪಡೆಯುತ್ತಾರೆ. ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದು, ದುಬಾರಿ ಬೆಲೆ ಬಾಳುವ ವಸ್ತುಗಳು ಅಧಿಕಾರಿಗಳ ಮನೆ ತಲುಪಿದರೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಹಲವು ವರ್ಷಗಳಿಂದ ಸರ್ಕಾರದ ಅಧಿಕಾರಿಗಳು ಲಂಚದ ರೂಪದಲ್ಲಿ ಗಿಫ್ಟ್ ಗಳನ್ನು ಪಡೆಯುತ್ತಿದ್ದರು. ಹೊಸ ವರ್ಷದ ಸಂದರ್ಭದಲ್ಲಿ ಕ್ಯಾಲೆಂಡರ್, ಸ್ವೀಟ್ ಹಾಗೂ ದೀಪಾವಳಿ, ಹೋಳಿಯಂತಹ ಹಬ್ಬ ಹರಿದಿನಗಳ ಸಂದರ್ಭದಲ್ಲಿ, ಅಲ್ಲದೆ, ಮದುವೆ ಸಂದರ್ಭದಲ್ಲಿ ಬೆಲೆ ಬಾಳುವ ಗಿಫ್ಟ್ ಗಳನ್ನು ಪಡೆಯುತ್ತಿದ್ದರು. ಇದೀಗ ಕಾರ್ಯದರ್ಶಿಗಳ ಕಚೇರಿಯಲ್ಲಿ ಯಾವುದೇ ರೀತಿಯ ಗಿಫ್ಟ್ ಗಳನ್ನು ನಿಷೇಧಿಸಲಾಗಿದೆ.

    ಈ ಹಿಂದೆ ಸರ್ಕಾರಿ ಕಚೇರಿ ಆವರಣದಲ್ಲಿ ಬಂದೂಕುಗಳನ್ನು ತರದಂತೆ ಹಾಗೂ ಭದ್ರತಾ ಸಿಬ್ಬಂದಿಗಳು ತಮ್ಮ ಆಯುಧವನ್ನು ಗೇಟ್ ಬಳಿಯೇ ಇಡುವಂತೆ ಆದೇಶಿಸಿದ್ದರು. ಅಲ್ಲದೆ, ಸರ್ಕಾರಿ ಕಚೇರಿ ಅವರಣದಲ್ಲಿ ಅಧಿಕಾರಿಗಳು ಗುಟ್ಕಾ, ಪಾನ್ ಜಗಿಯುವುದನ್ನು ನಿಷೇಧಿಸಿದ್ದರು. ನಿಯಮ ಉಲ್ಲಂಘನೆಯಾದಲ್ಲಿ 500 ರೂ. ದಂಡ ವಿಧಿಸುವಂತೆ ಸುತ್ತೋಲೆ ಹೊರಡಿಸಲಾಗಿತ್ತು.

    ಈ ಹಿಂದೆ ಅಧಿಕೃತ ಸಭೆಯಲ್ಲಿ ಮೊಬೈಲ್ ಫೋನ್ ಬಳಸದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿವರಿಗೆ ಸೂಚನೆ ನೀಡಿದ್ದಾರೆ. ಚರ್ಚೆಯಲ್ಲಿ ಸಚಿವರು ಭಾಗಿಯಾಗುತ್ತಿದ್ದಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಮೊಬೈಲ್‍ನಿಂದ ಉಂಟಾಗುವ ಅಡಚಣೆ ತಡೆಯುವ ನಿಟ್ಟಿಯಲ್ಲಿ ಯೋಗಿ ಆದಿತ್ಯನಾಥ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಈ ಆದೇಶವು ಕ್ಯಾಬಿನೆಟ್ ಸಭೆಗೂ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿಗಳ ಹಿರಿಯ ಕಾರ್ಯದರ್ಶಿಯೊಬ್ಬರು ತಿಳಿಸಿದ್ದರು.

    ಈ ಮೊದಲು ಸಭೆಗೆ ಮೊಬೈಲ್ ಫೋನ್ ತರಲು ಮಂತ್ರಿಗಳಿಗೆ ಅವಕಾಶವಿತ್ತು. ಆದರೆ ಸೈಲೆಂಟ್ ಮೂಡ್‍ನಲ್ಲಿ ಇಡಬೇಕು, ಇಲ್ಲವೆ ಸ್ವಿಚ್‍ಆಫ್ ಮಾಡಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ ಈಗ ಸಭೆಗೂ ಮುನ್ನ ಕೌಂಟರ್ ನಲ್ಲಿ ಮೊಬೈಲ್ ಇಟ್ಟು ಟೋಕನ್ ಪಡೆಯಬೇಕು. ಸಭೆಯ ಬಳಿಕ ಟೋಕನ್ ನೀಡಿ ತಮ್ಮ ತಮ್ಮ ಮೊಬೈಲ್ ಪಡೆಬೇಕು ಎನ್ನುವ ಸೂಚನೆಯನ್ನು ಯೋಗಿ ಆದಿತ್ಯನಾಥ್ ನೀಡಿದ್ದಾರೆ ಎನ್ನಲಾಗಿದೆ.

  • ಪತ್ನಿಗೆ 4.8 ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರ್ ಗಿಫ್ಟ್ ನೀಡಿದ ಬೆಂಗ್ಳೂರು ಉದ್ಯಮಿ

    ಪತ್ನಿಗೆ 4.8 ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರ್ ಗಿಫ್ಟ್ ನೀಡಿದ ಬೆಂಗ್ಳೂರು ಉದ್ಯಮಿ

    ಬೆಂಗಳೂರು: ನಮಗೆ ಇಷ್ಟವಾದವರಿಗೆ ಅವರಿಗೆ ಇಷ್ಟವಾದುದನ್ನು ಉಡುಗೊರೆಯಾಗಿ ನೀಡುವುದು ಒಂದು ಖುಷಿಯ ಸಂಗತಿ. ಅದರಂತೆ ಸಿಲಿಕಾನ್ ಸಿಟಿಯ ಉದ್ಯಮಿಯೊಬ್ಬರು ತಮ್ಮ ಪತ್ನಿಗೆ 4.8 ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಲಾ ಫೆಮ್ಮೆ ಎಂಬ ಕಂಪನಿಯ ಸಿಇಓ ನಿಲುಫರ್ ಶೆರಿಫ್ ಎಂಬವರು ಹೆಂಡತಿಗೆ ಇಷ್ಟವಾದ ಲ್ಯಾಂಬೋರ್ಗಿನಿ ಹರಾಕೆನ್ ಎಲ್‍ಪಿ 610-4 ಎಂಬ ಹಳದಿ ಬಣ್ಣದ ಕಾರನ್ನು ಉಡುಗೊರೆಯಾಗಿ ನೀಡಿದ್ದು. ಈ ವಿಡಿಯೋವನ್ನು ಆಟೊಮೊಬಿಲಿ ಅರ್ಡೆಂಟ್ ಎಂಬ ಕಂಪನಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದೆ.

    https://www.instagram.com/p/Byz77QqHHHF/?utm_source=ig_embed

    ಈ ಲ್ಯಾಂಬೋರ್ಗಿನಿ ಹರಾಕೆನ್ ಎಲ್‍ಪಿ 610-4 ಎಂಬ ಕಾರಿನ ಬೆಲೆ 4.80 ಕೋಟಿ ರೂ. ಆಗಿದ್ದು ಇದರ ಆರಂಭಿಕ ಮೌಲ್ಯವೇ 3 ಕೋಟಿ ಇದೆ. ಈ ಕಾರು ಹೆಚ್ಚು ದುಬಾರಿ ಇರುವ ಎಡಬ್ಲ್ಯುಡಿ ಮಾದರಿಯ ರೂಪಾಂತರವಾಗಿದ್ದು, ಗ್ರೌಂಡ್ ಕ್ಲಿಯರೆನ್ಸ್ ಅನ್ನು 45 ಎಂಎಂ ಹೆಚ್ಚಿಸುವಷ್ಟು ಸಾಮಥ್ರ್ಯ ಇರುವ ಸೂಪರ್ ಕಾರ್ ಆಗಿದೆ. ಕೇವಲ 3 ಸೆಕೆಂಡ್‍ಗಳಲ್ಲಿ ತನ್ನ ವೇಗವನ್ನು ಗಂಟೆಗೆ 100 ಕಿ.ಮೀ ಹೆಚ್ಚಿಸಿಕೊಳ್ಳುವ ಸಾಮಥ್ರ್ಯವನ್ನು ಹೊಂದಿದೆ.

    ಈ ಲ್ಯಾಂಬೋರ್ಗಿನಿ ಹರಾಕೆನ್ ಇಟಾಲಿಯನ್ ಕಾರು ಉತ್ಪಾದಕರಿಂದ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಲ್ಯಾಂಬೋರ್ಗಿನಿ ಕಂಪನಿಯಿಂದ ಇತ್ತೀಚೆಗೆ ಉರುಸ್ ಎಂಬ ಎಸ್‍ಯುವಿಯನ್ನು ಬಿಡುಗಡೆ ಮಾಡಿದ್ದು ಇದು ವಿಶ್ವದಾದ್ಯಂತ ಹೆಚ್ಚು ಜನಪ್ರಿಯವಾಗಿದೆ.

    ಈ ರೀತಿಯ ಕಾರುಗಳನ್ನು ಉಡುಗೊರೆಯಾಗಿ ಕೊಡುವುದು ಭಾರತದಲ್ಲಿ ಅಪರೂಪ. ಇದಕ್ಕೂ ಮುಂಚೆ ಯುಎಇ ಮೂಲದ ಎನ್‍ಆರ್‍ಐ ಸೋಹನ್ ರಾಯ್ ಎಂಬುವವರು ತಮ್ಮ ವಿವಾಹ ವಾರ್ಷಿಕೋತ್ಸವಕ್ಕೆ ತಮ್ಮ ಪತ್ನಿಗೆ ರೋಲ್ಸ್ ರಾಯ್ಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಈ ಮೂಲಕ ಅವರ ಪತ್ನಿ ರೋಲ್ಸ್ ರಾಯ್ಸ್ ಕಾರನ್ನು ಹೊಂದಿದ ವಿಶ್ವದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ವರದಕ್ಷಿಣೆ ಬೇಡವೆಂದ ವರನಿಗೆ ಸಿಕ್ತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ!

    ವರದಕ್ಷಿಣೆ ಬೇಡವೆಂದ ವರನಿಗೆ ಸಿಕ್ತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ.

    ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ ನಿರಾಕರಿಸಿ ಎಲ್ಲರಿಗೂ ಮಾದರಿಯಾದ ವರನಿಗೆ ಈ ಉಡುಗೊರೆ ನೋಡಿ ಸಿಕ್ಕಪಟ್ಟೆ ಖುಷಿಯಾಗಿದೆ. ಈ ವಿಶೇಷ ಉಡುಗೊರೆ ವಿಚಾರ ಸದ್ಯ ಎಲ್ಲೆಡೆ ಬಾರಿ ಸದ್ದು ಮಾಡುತ್ತಿದೆ.

    ನಾನು ಯಾವುದೇ ವರದಕ್ಷಿಣೆ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ಆದರೆ ನಾನು ಕಲ್ಯಾಣ ಮಂಟಪಕ್ಕೆ ಬಂದಾಗ, ಪುಸ್ತಕಗಳ ಬೃಹತ್ ರಾಶಿಯನ್ನು ಉಡುಗೊರೆಯಾಗಿ ಕಂಡು ತುಂಬಾ ಆಶ್ಚರ್ಯವಾಯಿತು ಎಂದು ಬರಿಕ್ ಹೇಳಿದ್ದಾರೆ. ಹಾಗೆಯೇ ನನ್ನ ಪತಿಗೆ ಓದುವ ಹಂಬಲ ಹೆಚ್ಚು. ನನಗೂ ಓದುವ ಹವ್ಯಾಸವಿದೆ. ಇದನ್ನು ತಿಳಿದ ನನ್ನ ತಂದೆ ಈ ಗಿಫ್ಟ್ ಕೊಟ್ಟಿದ್ದಾರೆ ಎಂದು ವಧು ತಿಳಿಸಿದ್ದಾರೆ.

    ಈ ಬಗ್ಗೆ ವಧುವಿನ ಕುಟುಂಬದವರು ಮಾತನಾಡಿ, ಈ ಪುಸ್ತಕಗಳನ್ನು ಕೊಲ್ಕತ್ತಾ ಕಾಲೇಜು ರಸ್ತೆ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಪ್ರಕಾಶನವಾದ ಉದ್ಧೋಧನ್ ಪಬ್ಲಿಷ್ ಹೌಸ್‍ನಿಂದ ಖರೀದಿಸಿದ್ದೇವೆ. ಈ ಪುಸ್ತಕ ಸಂಗ್ರಹಣೆಯಲ್ಲಿ ರವೀಂದ್ರನಾಥ ಟ್ಯಾಗೋರ್, ಬಂಕಿಮ ಚಂದ್ರ ಚಟ್ಟೋಪಾಧ್ಯಾಯ, ಮತ್ತು ಶರತ್ ಚಂದ್ರ ಚಟ್ಟೋಪಾಧ್ಯಾಯವರ ಸಂಪೂರ್ಣ ಕೃತಿಗಳು ಇವೆ ಎಂದರು.

    ವರದಕ್ಷಿಣೆ ಪಡೆಯುವುದು ಹಾಗೂ ಕೊಡುವುದು ಅಪರಾಧ ಎಂದು ತಿಳಿದಿದ್ದರೂ ಅನೇಕರು ವರದಕ್ಷಿಣೆಯಿಲ್ಲದೆ ಮದುವೆ ಆಗುವುದಿಲ್ಲ. ಇಂತಹ ಜನರ ನಡುವೆಯೂ ಸೂರ್ಯಕಾಂತ್ ಅವರ ತರಹ ವರದಕ್ಷಿಣೆ ನಿರಾಕರಿಸುವವರ ಸಂಖ್ಯೆ ಕಡಿಮೆ. ಸೂರ್ಯಕಾಂತ್ ಅವರು ಇತರರಿಗೆ ಮಾದರಿ ಎಂದು ಎಲ್ಲೆಡೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದೆ.

  • ಮೈಸೂರಲ್ಲೂ ಮೋದಿಗಾಗಿ ಕಾಯುತ್ತಿದೆ ವಿಶೇಷ ಉಡುಗೊರೆ

    ಮೈಸೂರಲ್ಲೂ ಮೋದಿಗಾಗಿ ಕಾಯುತ್ತಿದೆ ವಿಶೇಷ ಉಡುಗೊರೆ

    ಮೈಸೂರು: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಕೂಡ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಅವರಿಗೆ ನೀಡಲು ವಿಶೇಷ ಉಡುಗೊರೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ.

    ನವದುರ್ಗಿಯರ ಆರಾಧಕರಾಗಿರುವ ನರೇಂದ್ರ ಮೋದಿ ಅವರಿಗೆ ಚಾಮುಂಡೇಶ್ವರಿ ಅಮ್ಮನವರ ಬೆಳ್ಳಿ ಮೂರ್ತಿಯನ್ನು ನೀಡಲಾಗುತ್ತಿದೆ. ಇದರ ಜೊತೆಗೆ ಮೋದಿ ಅವರು ಬರೆದಿರುವ ಕವನಗಳನ್ನು ಕನ್ನಡ ಭಾಷೆಗೆ ಅನುವಾದ ಮಾಡಿರುವ ಕವನ ಸಂಕಲನಗಳನ್ನು ಸಹ ಇಂದು ಬಿಡುಗಡೆ ಮಾಡಲಾಗುತ್ತಿದೆ. ಈ ಮೂಲಕ ಮೋದಿ ಅವರಿಗೆ ಕನ್ನಡಕ್ಕೆ ಭಾಷಾಂತರಗೊಂಡ ಅವರ ಕವನ ಸಂಕಲಗಳನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ.

    ಈ ಬಗ್ಗೆ ಮಾಜಿ ಸಚಿವ ರಾಮ್‍ದಾಸ್ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ನರೇಂದ್ರ ಮೋದಿಯವರು ಬಾಲ್ಯದಿಂದಲೂ ಕೂಡ ತಾಯಿ ದುರ್ಗಿಯ ಆರಾಧಕರು. ನಿರಂತರವಾಗಿ ತಾಯಿಯ ಆರಾಧಕರಾಗಿ ತಾವು ಪ್ರತಿಯೊಂದು ಕಾರ್ಯ ಕೂಡ ಮಾಡುತ್ತಾ ಬಂದವರು. ಭಾರತದಲ್ಲಿ ಇರುವಂತಹ 11 ದೇವಸ್ಥಾನಗಳಿಗೆ ಪ್ರಸಾದ ಯೋಜನೆಯಡಿಯಲ್ಲಿ ತಲಾ 100 ಕೋಟಿ ರೂ. ಬಜೆಟ್‍ನಲ್ಲಿ ಮಂಡಿಸಿದರು. ಆ 11 ದೇವಸ್ಥಾನದಲ್ಲಿ ದಕ್ಷಿಣ ಭಾರತದಲ್ಲಿ ತಾಯಿ ಚಾಮುಂಡೇಶ್ವರಿ ದೇವಸ್ಥಾನ ಕೂಡ ಒಂದಾಗಿದೆ ಎಂದರು. ಇದನ್ನೂ ಓದಿ: ಮೋದಿ ಎಂದೂ ಮರೆಯದಂತಹ ಗಿಫ್ಟ್ ನೀಡಲಿದೆ ಬಿಜೆಪಿ ಘಟಕ!

    ಭಾರತ ದೇಶವನ್ನು ವಿಶ್ವಗುರು ಮಾಡೋಕ್ಕೆ ಹೊರಟ ಮೋದಿ ಅವರಿಗೆ ತಾಯಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದದ ಅವಶ್ಯಕತೆ ಇದೆ ಎಂದು ಚಾಮುಂಡಿ ಬೆಟ್ಟದಲ್ಲಿ ಅವರ ಹೆಸರಿನಲ್ಲಿ ಪೂಜೆ ನಡೆಯುತ್ತಿದೆ. ಆ ಪ್ರಸಾದ ಮತ್ತು ಆ ತಾಯಿಯ ವಿಗ್ರಹವನ್ನು ಕೊಡುವುದರ ಮೂಲಕ ಅವರಿಗೆ ತಾಯಿಯ ಆಶೀರ್ವಾದ ಇರಲಿ ಎಂದು ಕೋರಿಕೊಳ್ಳುತ್ತೇನೆ ಅಂದ್ರು.

  • ಮೋದಿ ಎಂದೂ ಮರೆಯದಂತಹ ಗಿಫ್ಟ್ ನೀಡಲಿದೆ ಬಿಜೆಪಿ ಘಟಕ!

    ಮೋದಿ ಎಂದೂ ಮರೆಯದಂತಹ ಗಿಫ್ಟ್ ನೀಡಲಿದೆ ಬಿಜೆಪಿ ಘಟಕ!

    ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಆಗಮನಕ್ಕಾಗಿ ಕೋಟೆನಾಡು ಸಜ್ಜಾಗಿದೆ. ಹೀಗಿರುವಾಗ ನರೇಂದ್ರ ಮೋದಿ ಅವರು ಎಂದೂ ಮರೆಯದಂತಹ ಉಡುಗೊರೆ ನೀಡಲು ಚಿತ್ರದುರ್ಗ ಬಿಜೆಪಿ ಘಟಕ ರೆಡಿ ಆಗಿದೆ.

    ನರೇಂದ್ರ ಮೋದಿ ಅವರಿಗೆ ಬಿಜೆಪಿ ಘಟಕ ಮಧ್ಯ ಕರ್ನಾಟಕದ ಪವಾಡ ಪುರುಷ, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥದ ಮಾದರಿ ಉಡುಗೊರೆ ನೀಡಲಿದೆ. ತಿಪ್ಪೇರುದ್ರಸ್ವಾಮಿ ಮಾಡಿದಷ್ಟು ನೀಡು ಭಿಕ್ಷೆ ಎಂಬ ಸಂದೇಶವನ್ನು ಸಾರಿದ್ದರು.

    ಕಮಲದ ಕಸೂತಿ ಇರುವ ಬಿಳಿ ಕಂಬಳಿಯಿಂದ ಸನ್ಮಾನ ಮಾಡಲಾಗುತ್ತದೆ. ಬರದನಾಡಲ್ಲಿ ಬೆಳೆಯುವ ಮೆಣಸಿನಕಾಯಿ ಸಸಿ, ಬದನೆ ಗಿಡಗಳಿಗೆ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಲು ತಯಾರಿ ನಡೆಸಿದ್ದಾರೆ. 6 ಟ್ರೇಗಳಲ್ಲಿ ಸಸಿಗಳನ್ನಿಟ್ಟು ನೀರೆರೆಸುವ ಮೂಲಕ ಉದ್ಘಾಟನೆ ಮಾಡಲಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇರುವ ಉಪಾಧ್ಯ ಹೋಟೆಲ್‍ನಲ್ಲಿ ಮೋದಿ ದೋಸೆ ಸವಿಯಲಿದ್ದಾರೆ. ಸದ್ಯ ಮೋದಿ ಅವರ ಆಗಮನಕ್ಕಾಗಿ ಮುರುಘಾ ರಾಜೆಂದ್ರ ಕ್ರೀಡಾಂಗಣ ಸಜ್ಜಾಗಿದೆ. ಸ್ಟೇಡಿಯಂ ಸುತ್ತಲೂ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ನಗರದ ಹೊರವಲಯದಲ್ಲೇ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಲೋಕಸಭಾ ಕ್ಷೇತ್ರಗಳ ಜನರು ಭಾಗಿಯಾಗಲಿದ್ದಾರೆ.

  • ಮೊಮ್ಮಗನಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ತಾತಾ – ನಾನು ಈಗಲೂ ಶಾಕ್‍ನಲ್ಲಿದ್ದೇನೆ ಎಂದ ನಟ ಅಲ್ಲು ಅರ್ಜುನ್

    ಮೊಮ್ಮಗನಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ತಾತಾ – ನಾನು ಈಗಲೂ ಶಾಕ್‍ನಲ್ಲಿದ್ದೇನೆ ಎಂದ ನಟ ಅಲ್ಲು ಅರ್ಜುನ್

    ಹೈದರಾಬಾದ್: ಟಾಲಿವುಡ್ ಸ್ಟೈಲಿಸ್ಟ್ ಸ್ಟಾರ್ ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ತಮ್ಮ ಮೊಮ್ಮಗನ ಹುಟ್ಟುಹಬ್ಬಕ್ಕೆ ಸ್ವಿಮ್ಮಿಂಗ್ ಪೂಲ್ ಗಿಫ್ಟ್ ಆಗಿ ನೀಡಿದ್ದಾರೆ. ಇದನ್ನು ನೋಡಿ ಅಲ್ಲು ಅರ್ಜುನ್ ನಾನು ಈಗಲೂ ಶಾಕ್‍ನಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.

    ಅಲ್ಲು ಅರವಿಂದ್ ಒಂದು ತಿಂಗಳ ಹಿಂದೆ ತಮ್ಮ ಮೊಮ್ಮಗ ಅಯಾನ್ ಬಳಿ ಹುಟ್ಟುಹಬ್ಬಕ್ಕೆ ಏನು ಉಡುಗೊರೆ ಬೇಕು ಎಂದು ಕೇಳಿದ್ದಾರೆ. ಆಗ ಅಯಾನ್ ನನಗೆ ಸ್ವಿಮ್ಮಿಂಗ್ ಪೂಲ್ ಬೇಕು ಎಂದು ಹೇಳಿದ್ದಾನೆ. ಮೊಮ್ಮಗನ ಆಸೆಯಂತೆ ಆತನ ಹುಟ್ಟುಹಬ್ಬಕ್ಕೆ ಅಲ್ಲು ಅರವಿಂದ್ ಈಜುಕೊಳವನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ಬಗ್ಗೆ ಅಲ್ಲು ಅರ್ಜುನ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಸಂತಸವನ್ನು ಹಂಚಿಕೊಂಡಿದ್ದಾರೆ.

     

    View this post on Instagram

     

    Happy Birthday My Baby ❤️ . My most priceless possession . 5 years of sweetness, naughtyness , cutenesses n infinite love . #alluayaan

    A post shared by Allu Arjun (@alluarjunonline) on

    ಪೋಸ್ಟ್ ನಲ್ಲಿ ಏನಿದೆ?
    “ನನ್ನ ತಂದೆಯವರು ಅಯಾನ್ ಹುಟ್ಟುಹಬ್ಬಕ್ಕೆ ಸ್ವಿಮ್ಮಿಂಗ್ ಪೂಲ್ ನೀಡಿದ್ದಾರೆ. ನಾನು ಈಗಲೂ ಶಾಕ್‍ನಲ್ಲಿದ್ದೇನೆ. ನನ್ನ ತಂದೆ ಒಂದು ತಿಂಗಳ ಹಿಂದೆ ಹುಟ್ಟುಹಬ್ಬಕ್ಕೆ ಏನೂ ಉಡುಗೊರೆ ಬೇಕು ಎಂದು ಅಯಾನ್‍ಗೆ ಕೇಳಿದರು. ಆಗ ಅಯಾನ್ ನನಗೆ ಸ್ವಿಮ್ಮಿಂಗ್ ಪೂಲ್ ಬೇಕು ಎಂದು ಹೇಳಿದ್ದ. ನನ್ನ ತಂದೆ ಆತನ ಮಾತಿಗೆ ಒಪ್ಪಿಕೊಂಡು ಈಜುಕೊಳವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇಂತಹ ತಾತ ಪಡೆಯಲು ಅಯಾನ್ ಅದೃಷ್ಟ ಮಾಡಿದ್ದ ಎಂದು ಬರೆದುಕೊಂಡಿದ್ದಾರೆ.

  • ದರ್ಶನ್ ಕ್ಲಿಕ್ಕಿಸಿದ ಫೋಟೋವನ್ನು ಉಡುಗೊರೆಯಾಗಿ ಪಡೆದ ಸ್ಟಾರ್ ನಟ

    ದರ್ಶನ್ ಕ್ಲಿಕ್ಕಿಸಿದ ಫೋಟೋವನ್ನು ಉಡುಗೊರೆಯಾಗಿ ಪಡೆದ ಸ್ಟಾರ್ ನಟ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾಡಿನಲ್ಲಿ ಕ್ಲಿಕ್ಕಿಸಿದ ಫೋಟೋವನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಉಡುಗೊರೆಯಾಗಿ ಪಡೆದಿದ್ದಾರೆ.

    ಇತ್ತೀಚೆಗೆ ಶ್ರೀಮುರಳಿ ‘ಮದಗಜ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಮದಗಜ ಜಿತ್ರದ ನಿರ್ಮಾಪಕ ಉಮಾಪತಿ, ದರ್ಶನ್ ಅರಣ್ಯದಲ್ಲಿ ಸೆರೆ ಹಿಡಿದ ಹುಲಿಯ ಫೋಟೋವನ್ನು ಶ್ರೀ ಮುರಳಿ ಅವರಿಗೆ ನೀಡಿದ್ದಾರೆ. ಈ ಫೋಟೋಗೆ 10 ಸಾವಿರ ರೂ. ಆಗಿದ್ದು, ಹುಲಿಯ ಫೋಟೋ ಪಡೆದ ಶ್ರೀ ಮುರಳಿ ನಿರ್ಮಾಪಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.

    ಮಾರ್ಚ್ 3ರ ವಿಶ್ವ ವನ್ಯಜೀವಿ ದಿನ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‍ನಲ್ಲಿ ಮೂರು ದಿನಗಳ ಕಾಲ ದರ್ಶನ್ ಸೆರೆ ಹಿಡಿದ ಛಾಯಾಚಿತ್ರ ಪ್ರದರ್ಶನವಾಗಿತ್ತು. ಈ ಪ್ರದರ್ಶನದಲ್ಲಿ ದರ್ಶನ್ ಅವರು ಕಾಡಿನಲ್ಲಿ ಸೆರೆ ಹಿಡಿದ 75 ಆಯ್ದ ಛಾಯಾಚಿತ್ರಗಳನ್ನು ವನ್ಯಜೀವಿ ಸಂರಕ್ಷಣಾ ನಿಧಿಗೆ ಹಣ ಸಂಗ್ರಹಿಸಲು ಪ್ರದರ್ಶನಕ್ಕೆ ಇಡಲಾಗಿತ್ತು. ತಮ್ಮ ಚಿತ್ರಗಳ ಪ್ರದರ್ಶನದ ಜೊತೆಗೆ ಮಾರಾಟದ ಆಯೋಜನೆ ಕೂಡ ನಡೆದಿತ್ತು. ಪ್ರತಿ ಚಿತ್ರಕ್ಕೆ 2000 ಬೆಲೆ ನಿಗದಿ ಆಗಿದ್ದು, ಫೋಟೋ ಜೊತೆಗೆ ದರ್ಶನ್ ಆಟೋಗ್ರಾಫ್ ಪಡೆಯಲು 500 ಹೆಚ್ಚುವರಿ ಹಣ ನೀಡಬೇಕಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv