Tag: ಉಡುಪಿ ಕಾಲೇಜು

  • ಉಡುಪಿ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್‌, ಬೆದರಿಕೆ

    ಉಡುಪಿ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್‌, ಬೆದರಿಕೆ

    ಉಡುಪಿ: ಟಾಯ್ಲೆಟ್ ವಿಡಿಯೋ ಚಿತ್ರೀಕರಣ (Udupi College Video Row) ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ (Protest) ಭಾಗಿಯಾಗಿ ಹೇಳಿಕೆ ನೀಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳು ಬಂದಿದೆ.

    ಪ್ರತಿಭಟನೆಯ ವೇಳೆ ವಿದ್ಯಾರ್ಥಿನಿ ನೇತ್ರಜ್ಯೋತಿ  ಕಾಲೇಜಿನ ಅವ್ಯವಸ್ಥೆ ವಿರುದ್ಧ ಮಾತನಾಡಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾದ ನಂತರ ಜುಲೈ 28 ರಂದು ಜಿಗರ್ ಕೋಬ್ರಾ  ಹೆಸರಿನ ಖಾತೆಯಿಂದ ವಿದ್ಯಾರ್ಥಿನಿಯ ಇನ್‌ಸ್ಟಾ ಖಾತೆಗೆ ಭಯಪಡಿಸುವ ರೀತಿಯ ಮೆಸೇಜ್‌ (Threatening Messages) ಬರಲು ಆರಂಭವಾಗಿದೆ.

    ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಲಾಗಿದೆ ಎಂದು ವಿದ್ಯಾರ್ಥಿನಿ ಹೇಳಿದ ಹಿನ್ನೆಲೆಯಲ್ಲಿ ಈ ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರಿಗೆ ಹಿಂದೂ ಸಂಘಟನೆಗಳು ಮಾಹಿತಿ ನೀಡಿದ್ದವು. ಕೇಂದ್ರ ಸಚಿವೆ ಮತ್ತು ಎಸ್‍ಪಿ ಸಮಾಲೋಚನೆ ಬಳಿಕ ಈಗ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಖುಷ್ಬು ಉಡುಪಿ ಭೇಟಿ ವೇಳೆ ಆಸ್ಕರ್ ಫರ್ನಾಂಡಿಸ್ ಸಂಬಂಧಿಗೆ ಏನು ಕೆಲಸ? – ಬಿಜೆಪಿ ಪ್ರಶ್ನೆ

     

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳ ಕಾಲೇಜಿನ ಡಿವಿಆರ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲು ಪೊಲೀಸ್‌ ಇಲಾಖೆ ಮುಂದಾಗಿದೆ. ವಿದ್ಯಾರ್ಥಿನಿಯರು ಹಾಗೂ ಪರಿಸರದಲ್ಲಿ ಆಪರೇಟ್ ಆದ ಮೊಬೈಲ್‌ಗಳ ಸಿಡಿಆರ್ ಪರಿಶೀಲನೆ ನಡೆಯುವ ಸಾಧ್ಯತೆಯಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ವಿಡಿಯೋ ಪತ್ತೆಯಾದ ನಂತರ ಸಮಗ್ರ ವಿಚಾರಣೆ ನಡೆಯಲಿದೆ.

    ಆರೋಪಿತ ವಿದ್ಯಾರ್ಥಿನಿಯರ ಜೊತೆ ಮಾತನಾಡಲು ಹಲವು ಯುವಕರು ಕಾಲೇಜಿಗೆ ಬರುತ್ತಿದ್ದರು. ಇದು ತಮಾಷೆಗೆ ಮಾಡಿದ ವಿಡಿಯೋ ಅಲ್ಲ. ಇದು ಉದ್ದೇಶಪೂರ್ವಕ ಕೃತ್ಯ. ಹೀಗಾಗಿ ಕಾಲೇಜಿನ ಸಿಸಿಟಿವಿಗಳನ್ನು ಪರಿಶೀಲಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಲೇಜುಗಳಿಗೆ ಯಾರೂ ಹಿಜಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ: ಆರಗ ಜ್ಞಾನೇಂದ್ರ

    ಕಾಲೇಜುಗಳಿಗೆ ಯಾರೂ ಹಿಜಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ: ಆರಗ ಜ್ಞಾನೇಂದ್ರ

    ಬೆಂಗಳೂರು: ಧರ್ಮ ಆಚರಣೆ ಮಾಡಲು ಶಾಲಾ-ಕಾಲೇಜುಗಳು ಇಲ್ಲ. ಈ ಬಗ್ಗೆ ಆಡಳಿತ ಮಂಡಳಿಗಳು ಕ್ರಮವಹಿಸಬೇಕು ಎಂದು ಉಡುಪಿಯ ಹಿಜಬ್ ಗೊಂದಲ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮದ ಪೂಜೆ ಮಾಡಲು ದೇವಾಲಯ, ಮಸೀದಿ, ಚರ್ಚ್ ಇವೆ. ಅಲ್ಲಿ ಬೇಕಾದಾರೆ ಇದನ್ನು ಮಾಡಲಿ. ಆದರೆ ಶಾಲಾ, ಕಾಲೇಜಿನ ವಾತಾವರಣದಲ್ಲಿ ಇಂತಹ ಸಂಘರ್ಷಗಳು ಆಗಬಾರದು. ಎಲ್ಲರೂ ಸೇರಿ ಭಾರತ ಮಾತೆಯ ಮಕ್ಕಳು ಎಂದು ವ್ಯಾಸಂಗಕ್ಕೆ ಬರಬೇಕು ಎಂದು ಸಲಹೆ ನೀಡಿದರು.

    ಈಗಾಗಲೇ ಶಿಕ್ಷಣ ಸಚಿವರು ಈ ಬಗ್ಗೆ ಶಾಲೆಯಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶವನ್ನು ಹೊರಡಿಸಿದ್ದಾರೆ. ಇದರಿಂದಾಗಿ ಶಾಲೆ ಕಾಲೇಜಿಗೆ ಯಾರೂ ಹಿಜಬ್ ಹಾಗೂ ಕೇಸರಿ ಶಾಲುಗಳನ್ನು ಧರಿಸಿ ಬರಬಾರದು. ಜೊತೆಗೆ ಶಾಲೆಯಲ್ಲಿ ಎಲ್ಲರೂ ಒಂದೇ ಎಂಬ ಭಾವನೆಯಲ್ಲಿ ಓದಬೇಕು ಎಂದು ತಿಳಿಹೇಳಿದರು. ಇದನ್ನೂ ಓದಿ: ನಿಮಗೆ ಪ್ರವೇಶವಿಲ್ಲ – ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್‍ನಲ್ಲೇ ತಡೆದ ಪ್ರಿನ್ಸಿಪಾಲ್

    ಶಾಲಾ – ಕಾಲೇಜುಗಳಲ್ಲಿ ಎಲ್ಲರೂ ಭಾರತ ಮಕ್ಕಳು ಎಂದು ಓದುವುದರ ಜೊತೆಗೆ ಶೈಕ್ಷಣಿಕ ವಾತಾವರಣದಲ್ಲಿ ದೇಶದ ಐಕ್ಯತೆ, ಸಮಾನತೆ ಬಗ್ಗೆ ಕಲಿಬೇಕು. ವಿದ್ಯಾರ್ಥಿಗಳು ಶಾಲೆಗಳಲ್ಲಿ ಕಲಿತು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರವನ್ನು ಪಡೆಯಬೇಕು ಎಂದರು. ಇದನ್ನೂ ಓದಿ: ಇಟಲಿಯ ತಾಯಿ, ಭಾರತದ ತಂದೆ – ರಾಹುಲ್ ಗಾಂಧಿ ವಿರುದ್ಧ ಅನಿಲ್ ವಿಜ್ ಕಿಡಿ

    ಶಾಲೆಗಳಲ್ಲಿ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯದಿದ್ದರೆ ಏನಾಗಬುದು ಎಂಬುದನ್ನು ಎಲ್ಲರೂ ಯೋಚನೆ ಮಾಡಬೇಕು. ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲಾಗುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ. ಉಡುಪಿಯ ಹಿಜಬ್ ಗೊಂದಲದ ವಿಚಾರದ ಹಿಂದೆ ಮತೀಯ ಸಂಘಟನೆಗಳ ಇದ್ದರೆ ಈ ಬಗ್ಗೆ ನಿಗಾ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.