Tag: ಉಡುಪಿ ಪೊಲೀಸರು

  • ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ಗ್ರಾಪಂ ಅಧ್ಯಕ್ಷ ನಾಗೇಶ್ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ಗ್ರಾಪಂ ಅಧ್ಯಕ್ಷ ನಾಗೇಶ್ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ಉಡುಪಿ ಪೊಲೀಸರು ನಗರದ ಹಿಂಡಲಗಾ ಗ್ರಾಂ.ಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ವಿಚಾರಣೆಗಾಗಿ ಇನ್ಸ್‌ಪೆಕ್ಟರ್ ಶರಣಗೌಡ ಪಾಟೀಲ್ ನೇತೃತ್ವದ ತಂಡ ಮತ್ತೆ ತನಿಖೆ ಚುರುಕುಗೊಳಿಸಿದೆ. ಸಂತೋಷ್ ಪಾಟೀಲ್ ಮನೆಯನ್ನು ನಾಗೇಶ್ ಮನ್ನೋಳಕರ್, ಗ್ರಾ.ಪಂ.ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಜಿಪಿಎ ಮಾಡಿಸಿಕೊಂಡಿದ್ದರು. ಇದನ್ನೂ ಓದಿ: ಭಾರತಕ್ಕೆ ಆಧ್ಯಾತ್ಮಿಕ ಪ್ರಯಾಣ – ಪ್ರಧಾನಿ ಮೋದಿ ಹೊಗಳಿದ ಡ್ವಿಟ್ ಹೊವಾರ್ಡ್

    ಜಿಪಿಎ ಮಾಡಿಸಿಕೊಂಡಿದ್ದೇಕೆ? ಜಿಪಿಎ ಮಾಡಿಸಿಕೊಂಡು ಎಷ್ಟು ಹಣ ಕೊಟ್ಟಿದ್ದರು? 108 ಕಾಮಗಾರಿ ಆರಂಭಿಸಲು ಹೇಳಿದ್ದು ಯಾರು? ಎಂಬ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಮತ್ತೊಂದೆಡೆ ಉಡುಪಿ ಪೊಲೀಸರು ನಾಗೇಶ್ ಮನ್ನೋಳಕರ್ ಮೊಬೈಲ್‍ನ್ನು ಅನಾಲಿಸಿಸ್‍ಗೆ ಕಳಿಸಿದ್ದಾರೆ. ಹಿಂಡಲಗಾ ಗ್ರಾ.ಪಂ 35 ಸದಸ್ಯರಿಗೂ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಪ್ರತಿಯೊಬ್ಬ ಸದಸ್ಯರನ್ನು ಪ್ರತ್ಯೇಕವಾಗಿ ಒನ್ ಟು ಒನ್ ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ.  ಇದನ್ನೂ ಓದಿ: ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ

    ನಿಮ್ಮ ವಾರ್ಡ್‍ನಲ್ಲಿ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದಾರಾ? ಕಾಮಗಾರಿ ಮಾಡಿದ್ರೆ ಎಷ್ಟು ವೆಚ್ಚದಲ್ಲಿ ಕಾಮಗಾರಿ ಮಾಡಿದ್ದಾರೆ? ಯಾವ ಅನುದಾನದಲ್ಲಿ ಕಾಮಗಾರಿ ಮಾಡುತ್ತಿರುವುದಾಗಿ ಹೇಳಿದ್ದರು. ಸಂತೋಷ ಪಾಟೀಲ್‍ರವರೇ ಕಾಮಗಾರಿ ಮಾಡಿದ್ದಾರೋ? ಉಪಗುತ್ತಿಗೆದಾರರು ಮಾಡಿದ್ದಾರೋ? ಹೀಗೆ ಎಲ್ಲ ಮಾಹಿತಿ ಪಡೆದು ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ.

    ಗ್ರಾ.ಪಂ. ಮಹಿಳಾ ಸದಸ್ಯರ ವಿಚಾರಣೆಗೆ ಮಹಿಳಾ ಪೇದೆಗಳ ನಿಯೋಜನೆ ಮಾಡಲಾಗಿದೆ. ಸಂತೋಷ್ ಪಾಟೀಲ್‍ನಿಂದ ಉಪ ಗುತ್ತಿಗೆ ಪಡೆದ 12 ಉಪಗುತ್ತಿಗೆದಾರರಿಂದಲೂ ಮಾಹಿತಿ ಸಂಗ್ರಹಿಸಲಿದ್ದಾರೆ. ಉಪಗುತ್ತಿಗೆ ಪಡೆದು ಕಾಮಗಾರಿ ಮಾಡಿದ ವೆಚ್ಚ, ಕಾಮಗಾರಿಗೆ ಸಾಮಗ್ರಿ ಖರೀದಿಸಿದ್ದ ರಶೀದಿ ಸೇರಿ ಎಲ್ಲ ದಾಖಲೆ ನೀಡುವಂತೆಯೂ ಸೂಚನೆ ನೀಡಲಾಗಿದೆ.

  • ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು(ಬುಧವಾರ) 5ನೇ ದಿನಕ್ಕೆ ಕಾಲಿಟ್ಟಿದ್ದು, ಹೊಸದೊಂದು ಟ್ವಿಸ್ಟ್ ಸಿಕ್ಕಿದೆ.

    ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಯನ್ನು ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಹಾಗೂ ಎನ್.ಎಸ್.ಪಾಟೀಲ್ ಸೇರಿ ಅವರ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ಮಹತ್ವದ ದಾಖಲೆಗಳು ಉಡುಪಿ ಪೊಲೀಸರಿಗೆ ತನಿಖೆಯಲ್ಲಿ ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ:  ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಐದು ದಿನಗಳಿಂದ ಬೆಳಗಾವಿಯಲ್ಲಿ ಬೀಡುಬಿಟ್ಟಿರುವ ಉಡುಪಿ ಪೊಲೀಸರು ಸಂತೋಷ್ ಪತ್ನಿ ಜಯಶ್ರೀ, ಆತನ ಕುಟುಂಬಸ್ಥರು, ಪ್ರಸ್ತುತ ಪಿಡಿಒ ವಸಂತಕುಮಾರಿ, ಹಿಂದಿನ ಪಿಡಿಒ ಗಂಗಾಧರ್ ನಾಯಿಕ್ ಅವರನ್ನು ತೀವ್ರ ವಿಚಾರಣೆ ನಡೆಸಿದ್ದರು.

    ಮಂಗಳವಾರ(ನಿನ್ನೆ) ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಸೇರಿದಂತೆ 12 ಜನ ತುಂಡು ಗುತ್ತಿಗೆದಾರನ್ನು ಉಡುಪಿ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಂತೋಷ್ ಮನೆಯನ್ನು ಗ್ರಾ.ಪಂ.ಅಧ್ಯಕ್ಷ ನಾಗೇಶ್ ಮನ್ನೋಳಕರ್ ಜಿಪಿಎ ಮಾಡಿಸಿಕೊಂಡಿದ್ರಾ? ಎನ್ನುವ ಮಾತುಗಳು ಕೇಳಿಬಂದಿವೆ.

    ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್, ಉದ್ಯಮಿ ಹಾಗೂ ಗ್ರಾ.ಪಂ ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಮೃತ ಸಂತೋಷ್ ಪಾಟೀಲ್ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:  ಏಪ್ರಿಲ್ 28 ರಂದು ಇಸ್ರೇಲ್‍ನಲ್ಲಿ ಬಿಡುಗಡೆಯಾಗಲಿದೆ ‘ದಿ ಕಾಶ್ಮೀರ್ ಫೈಲ್ಸ್’

    ಈ ವೇಳೆ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷ, ನಾಗೇಶ್ ಮನ್ನೋಳಕರ್ ಮನೆ ಜಿಪಿಎ ಮಾಡಿಸಿಕೊಂಡಿದ್ದಕ್ಕೂ ಕಾಮಗಾರಿ ವ್ಯವಹಾರಕ್ಕೂ ಸಂಬಂಧವಿಲ್ಲ. ಅದು ಬೇರೆ ವ್ಯವಹಾರ, ಇದು ಬೇರೆ ವ್ಯವಹಾರ ಇದೆ ಅಂತಾ ಹೇಳಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಂಪೂರ್ಣ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಹೊರಬರಲಿದೆ.