Tag: ಉತ್ತಪ್ರದೇಶ

  • ಮದುವೆಯಾದ್ಮೇಲೂ ಅಕ್ರಮ ಸಂಬಂಧ – ಮಾಜಿ ಪ್ರೇಯಸಿಯನ್ನ ಕತ್ತರಿಸಿ, ಅರೆಬೆತ್ತಲಾಗಿ ಬಿಸಾಡಿ ವಿಕೃತಿ

    ಮದುವೆಯಾದ್ಮೇಲೂ ಅಕ್ರಮ ಸಂಬಂಧ – ಮಾಜಿ ಪ್ರೇಯಸಿಯನ್ನ ಕತ್ತರಿಸಿ, ಅರೆಬೆತ್ತಲಾಗಿ ಬಿಸಾಡಿ ವಿಕೃತಿ

    ಲಕ್ನೋ: ಮದುವೆಯಾದ (Marriage) ನಂತರವೂ ಅಕ್ರಮ ಸಂಬಂಧ ಹೊಂದಿದ್ದ ತನ್ನ ಮಾಜಿ ಪ್ರೇಯಸಿಯನ್ನ (Lovers) ಕೊಂದು 6 ತುಂಡಾಗಿ ಕತ್ತರಿಸಿ ಅರೆಬೆತ್ತಲೆ ಸ್ಥಿತಿಯಲ್ಲಿ ದೇಹವನ್ನು ಬಾವಿಗೆ ಎಸೆದು ವಿಕೃತಿ ಮೆರೆದಿದ್ದ ಹಂತಕನನ್ನು ಉತ್ತರಪ್ರದೇಶದ ಪೊಲೀಸರು (UttarPradesh Police) ಬಂಧಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

    ದೆಹಲಿಯಲ್ಲಿ (Newdelhi) ಶ್ರದ್ಧಾ (Shraddha Walker) ಹತ್ಯೆ ಬಳಿಕ ಇಂತಹದ್ದೇ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಉತ್ತರಪ್ರದೇಶದ ಕೊಚ್ಚಿಯಲ್ಲಿ ಮಹಿಳೆಯ ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆರೋಪಿಯನ್ನು (Accused) ಬಂಧಿಸಲಾಗಿದೆ. ಅಲ್ಲದೇ ಸ್ಥಳಕ್ಕೆ ಮಹಜರು ಮಾಡಲು ಕರೆದೊಯ್ಯುತ್ತಿದ್ದ ವೇಳೆ ತಪ್ಪಿಸಿಕೊಳ್ಳಲು ಆರೋಪಿ ಪ್ರಿನ್ಸ್ ಯಾದವ್‌ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿಯಲಾಗಿದೆ. ಇದನ್ನೂ ಓದಿ: ತಂದೆಯನ್ನೇ ಕೊಂದು 6 ತುಂಡುಗಳಾಗಿ ಕತ್ತರಿಸಿ ಬಿಸಾಡಿದ್ದ ಹೆಂಡತಿ, ಮಗ

    ಆರೋಪಿ ದೇಸಿ ಪಿಸ್ತೂಲ್ ಅನ್ನು ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರಿಂದಾಗಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಟ್ಟಿಗೆ 48 ವಾಹನಗಳು ಜಖಂ

    ಇದೇ ತಿಂಗಳ ನವೆಂಬರ್ 15ರಂದು ಸ್ಥಳೀಯರು ಗ್ರಾಮದ ಹೊರಗಿನ ಬಾವಿಯೊಳಗೆ ಶವವನ್ನು ಪತ್ತೆ ಮಾಡಿದ್ದರು. ಆರಾಧನಾ ಎಂದು ಗುರುತಿಸಲಾದ ಮಹಿಳೆಯ ದೇಹವು ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎಂದು ಎಸ್ಪಿ ಅನುರಾಗ್ ಆರ್ಯ ತಿಳಿಸಿದ್ದರು.

    ಪ್ರಿನ್ಸ್ ಯಾದವ್ ಇಶಾಕ್ ಪುರ್ ಗ್ರಾಮದಲ್ಲಿ ವಾಸಿಸುತ್ತಿದ್ದ ತನ್ನ ಗೆಳತಿ ಆರಾಧನಾ ಬೇರೊಬ್ಬನೊಂದಿಗೆ ಮದುವೆಯಾಗಿದ್ದರಿಂದಾಗಿ ಆಕೆಯನ್ನು ಕೊಲ್ಲಲು ಯೋಜನೆ ರೂಪಿಸಿದ್ದನು. ಅದಕ್ಕಾಗಿ ಸೋದರ ಸಂಬಂಧಿ ಸರ್ವೇಶ್ ಮತ್ತು ಕುಟುಂಬದ ಇತರರ ಸಹಾಯ ಪಡೆದಿದ್ದನು. ಆದ ನಂತರವೂ ಈತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ತಿಂಗಳ ನವೆಂಬರ್ 9 ರಂದು ಯಾದವ್ ಆರಾಧನಾಳನ್ನು ತನ್ನ ಬೈಕ್‌ನಲ್ಲಿ ದೇವಸ್ಥಾನಕ್ಕೆ ಕರೆದೊಯ್ದಿದ್ದ ಅಲ್ಲಿಗೆ ತಲುಪಿದಾಗ ಸರ್ವೇಶ್ ಸಹಾಯದಿಂದ ಕಬ್ಬಿನ ಗದ್ದೆಯಲ್ಲಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಇಬ್ಬರೂ ಆಕೆಯ ದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಬಾವಿಗೆ ಎಸೆದಿದ್ದಾರೆ. ದೇಹವನ್ನು ಬಾವಿಗೆ ಎಸೆದು, ತಲೆಯನ್ನು ಅಲ್ಲೇ ಸ್ವಲ್ಪ ದೂರದಲ್ಲಿದ್ದ ಕೊಳಕ್ಕೆ ಬಿಸಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಗಳಿಂದ ಹರಿತವಾದ ಆಯುಧಗಳು ಹಾಗೂ ಒಂದು ದೇಶಿ ನಿರ್ಮಿತ ಪಿಸ್ತೂಲ್ ಹಾಗೂ ಕಾಟ್ರಿಜ್ಟ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಿನ್ಸ್ ಯಾದವ್ ನನ್ನು ಬಂಧಿಸಿದ್ದಾರೆ. ಆದರೆ ಸರ್ವೇಶ್, ಪ್ರಮೀಳಾ ಯಾದವ್, ಸುಮನ್, ರಾಜಾರಾಂ, ಕಲಾವತಿ, ಮಂಜು, ಶೀಲಾ ಇನ್ನೂ ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ: ಯೋಗಿ

    ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ: ಯೋಗಿ

    ಲಕ್ನೋ: ಪದ್ಮಾವತಿ ಚಿತ್ರದ ನಿರ್ದೇಶಕ ಸಜಯ್ ಲೀಲಾ ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಪದ್ಮಾವತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳುವುದರ ಜೊತೆಗೆ ಜನರ ಭಾವನೆಗಳ ಜೊತೆ ಆಟವಾಡಿರುವ ನಿರ್ದೇಶಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

    ಈಗಾಗಲೇ ಚಿತ್ರದಲ್ಲಿ ಇರುವ ಆಕ್ಷೇಪಗಳ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದ್ದು, ಸಲಹೆ ನೀಡುವಂತೆ ಕೇಳಿಕೊಂಡಿದ್ದೇವೆ. ಜನರ ಭಾವನೆಗಳ ಜೊತೆ ಆಟವಾಡಲು ಯಾರನ್ನು ಬಿಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಬಿಡುಗಡೆಗೂ ಮುನ್ನ ಭಾರೀ ವಿವಾದಗಳನ್ನು ಸೃಷ್ಟಿಸಿರುವ ಪದ್ಮಾವತಿ ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಹಾಗೂ ರಾಣಿ ಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್‍ಗಳಿವೆ ಎಂದು ಆರೋಪಿಸಿ ಚಿತ್ರದ ಬಿಡುಗಡೆಗೆ ರಾಜಪುತ ಸಂಘಟನೆಗಳು ಪ್ರತಿಭಟಿಸಿದ್ದವು.

    ರಾಜಪೂತ ಕರ್ನಿಸೇನಾ ಸಂಘಟನೆಯ ನಾಯಕರು ಸಹ ಚಿತ್ರ ಬಿಡುಗಡೆ ಕುರಿತು ನಿರ್ದೇಶಕರಿಗೆ ಬೆದರಿಕೆ ಹಾಕಿದ್ದರು. ಆರಂಭದಲ್ಲಿ ಚಿತ್ರೀಕರಣದ ವೇಳೆ ರಜಪೂತ್ ಕರ್ಣಿ ಸೇನಾದ ಸದಸ್ಯನೋರ್ವ ಬನ್ಸಾಲಿ ಅವರ ಕಪಾಳಕ್ಕೆ ಹೊಡೆದಿದ್ದನು. ಇನ್ನೂ ಮಹಾರಾಷ್ಟ್ರದ ಕೋಲಾಪುರದಲ್ಲಿ ಚಿತ್ರೀಕರಣದ ಸೆಟ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ವೇಳೆ ಯಾರಿಗೂ ಯಾವುದೇ ಅಪಾಯವಾಗಿರಲಿಲ್ಲ.

     

    ಹರ್ಯಾಣದ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಸೂರಜ್ ಪಾಲ್ ಅಮು, ಪದ್ಮಾವತಿ ಚಿತ್ರದ ನಟಿ ದೀಪಿಕಾ ಅವರ ಹಾಗೂ ನಿರ್ದೇಶಕ ಬನ್ಸಾಲಿ ಅವರ ಶಿರಚ್ಛೇದ ಮಾಡಿವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು. ಅಲ್ಲದೇ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರವನ್ನು ಮಾಡಿರುವ ರಣವೀರ್ ಸಿಂಗ್ ರ ಕಾಲು ಮುರಿಯುತ್ತೇವೆ ಎಂದು ಬೆದರಿಕೆ ಹಾಕಿದ್ದರು.

    ಬಿಜೆಪಿ ಆಡಳಿತ ಇರುವ ರಾಜಸ್ಥಾನ, ಮಧ್ಯಪ್ರದೇಶ ಜೊತೆ ಕಾಂಗ್ರೆಸ್ ಆಡಳಿತ ಇರುವ ಪಂಜಾಬ್ ಸರ್ಕಾರ ಪದ್ಮಾವತಿಯನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿವೆ.

     

     

     

     

    https://twitter.com/deepikapadukone/status/910668862336544768

    https://twitter.com/deepikapadukone/status/910673498376364033