Tag: ಉತ್ತರಾಖಂಡ

  • ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು

    ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು

    ಡೆಹರಾಡೂನ್: ಚಾರ್‌ಧಾಮ ಯಾತ್ರೆಯ ಪ್ರಮುಖ ತಾಣವಾದ ಕೇದಾರನಾಥ (Kedarnath Temple) ಧಾಮದ ಬಾಗಿಲುಗಳನ್ನು ಇಂದು (ಅ.23) ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಚಳಿಗಾಲದಲ್ಲಿ ಭಾರಿ ಹಿಮಪಾತ ಹಾಗೂ ಹವಾಮಾನ ಪರಿಸ್ಥಿತಿ ಹಿನ್ನೆಲೆ ಇಂದು ಬಾಗಿಲುಗಳನ್ನು ಮುಚ್ಚಲಾಯಿತು.

    ಮೇ 2ರಂದು ತೆರೆದಿದ್ದ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಅ.23ರಂದು ಬೆಳಿಗ್ಗೆ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಬಿಕೆಟಿಸಿ ಅಧ್ಯಕ್ಷ ಹೇಮಂತ್ ದ್ವಿವೇದಿ, ಉಪಾಧ್ಯಕ್ಷ ರಿಷಿ ಪ್ರಸಾದ್ ಸತಿ, ವಿಜಯ್ ಕಪ್ರವನ್, ಕೇದಾರ ಸಭಾದ ಅಧ್ಯಕ್ಷ ಪಂಡಿತ್ ರಾಜ್‌ಕುಮಾರ್ ತಿವಾರಿ, ಕೇದಾರ ಸಭಾ ಸಚಿವ ಪಂಡಿತ್ ಅಂಕಿತ್ ಪ್ರಸಾದ್ ಸೆಂವಾಲ್, ಧರ್ಮಾಧಿಕಾರಿ ಓಂಕಾರ್ ಶುಕ್ಲಾ, ಅರ್ಚಕ ಬಾಗೇಶ್ ಲಿಂಗ್, ಆಚಾರ್ಯ ಸಂಜಯ್ ತಿವಾರಿ, ಅಖಿಲೇಶ್ ಶುಕ್ಲಾ ಮುಂತಾದವರು ಉಪಸ್ಥಿತರಿದ್ದರು.ಇದನ್ನೂ ಓದಿ: ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಸಚಿವ ಪ್ರಹ್ಲಾದ್‌ ಜೋಶಿ

    ಈ ವರ್ಷ ಕೇದಾರನಾಥ ಯಾತ್ರೆಯ ಸಮಯದಲ್ಲಿ 17.39 ಲಕ್ಷ ಭಕ್ತರು ಕೇದಾರನಾಥಕ್ಕೆ ಭೇಟಿ ನೀಡಿದ್ದಾರೆ. ಬುಧವಾರವೂ (ಅ.22) ಐದು ಸಾವಿರಕ್ಕೂ ಹೆಚ್ಚು ಭಕ್ತರು ಕೇದಾರನಾಥ ದರ್ಶನಕ್ಕೆ ಆಗಮಿಸಿದ್ದರು. ಈ ದೇವಾಲಯವು ಮುಂದಿನ ವರ್ಷದ ವಸಂತ ಋತು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪುನಃ ತೆರೆಯಲಿದೆ. ಚಳಿಗಾಲದಲ್ಲಿ ದೇವಾಲಯದ ಆಡಳಿತ ಮಂಡಳಿ ಯಾತ್ರಿಗಳ ಸುರಕ್ಷತಾ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳುತ್ತದೆ.

    ಇನ್ನೂ ಗುರುವಾಋ ಮಧ್ಯಾಹ್ನ 12:30ಕ್ಕೆ ಯಮುನೋತ್ರಿಯಲ್ಲಿರುವ ಮಾತೃ ಯಮುನಾ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು. ಮಾತೃ ಯಮುನಾ ದೇವಾಲಯದ ಉತ್ಸವ ಮೂರ್ತಿಯನ್ನು ಖರ್ಸಾಲಿ ಗ್ರಾಮದಲ್ಲಿ ಪ್ರದರ್ಶಿಸಲಾಗುವುದು. ಚಳಿಗಾಲದ ಹಿನ್ನೆಲೆ ಇತರ ಧಾಮಗಳಾದ ಬದರಿನಾಥ, ಗಂಗೋತ್ರಿ ಬಾಗಿಲುಗಳೂ ಶೀಘ್ರದಲ್ಲೇ ಬಂದ್ ಆಗಲಿವೆ.ಇದನ್ನೂ ಓದಿ: ಆರ್‌ಎಸ್‌ಎಸ್‌ಗೆ ಕಡಿವಾಣ | ಹೊಸ ಬಿಲ್‌ಗೆ ಸರ್ಕಾರದಿಂದ ರೆಡ್‌ ಸಿಗ್ನಲ್‌

  • ಬದರಿನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ

    ಬದರಿನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ

    ಉತ್ತರಾಖಂಡದ (Uttarakhand) ಬದರಿನಾಥ (Badrinath) ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ (Actor Rajanikanth) ಭೇಟಿ ನೀಡಿ, ದರ್ಶನ ಪಡೆದಿದ್ದಾರೆ.

    ಸೋಮವಾರ (ಅ.6) ದೇಗುಲಕ್ಕೆ ಆಗಮಿಸಿದ ನಟನನ್ನು ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡರು. ಜೊತೆಗೆ ತುಳಸಿ ಮಾಲೆ ಹಾಗೂ ದೇವರ ಪ್ರಸಾದವನ್ನು ರಜನಿಕಾಂತ್‌ಗೆ ನೀಡಿದರು.ಇದನ್ನೂ ಓದಿ: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸೋನಂ ಕಪೂರ್

    ಚಳಿಗಾಲದ ಹಿನ್ನೆಲೆ ದೇಗುಲದ ಬಾಗಿಲುಗಳನ್ನು ಇನ್ನು ಕೆಲ ದಿನಗಳಲ್ಲಿ ಮುಚ್ಚಲಾಗುತ್ತಿದ್ದು, ಅದಕ್ಕೂ ಮುನ್ನವೇ ರಜನಿಕಾಂತ್ ದರ್ಶನ ಪಡೆದುಕೊಂಡಂತಾಗಿದೆ. ಬೆಚ್ಚಗಿನ ಉಡುಪು ಧರಿಸಿ, ರಜನಿಕಾಂತ್ ಅವರು ಯಾತ್ರಾ ಮಾರ್ಗದಲ್ಲಿ ಸಾಗುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    ಇದಕ್ಕೂ ಮುನ್ನ ಶನಿವಾರ (ಟ.4) ಋಷಿಕೇಶದ ಗಂಗಾ ನದಿಯ ದಡದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿದರು.ಇದನ್ನೂ ಓದಿ: ಅಮೆರಿಕಕ್ಕೆ ಅಪರೂಪದ ಖನಿಜಗಳ ಮೊದಲ ರಫ್ತು ಕಳುಹಿಸಿದ್ದೇವೆ : ಪಾಕ್

  • ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತಕ್ಕೆ ತಾಯಿ, ಇಬ್ಬರು ಮಕ್ಕಳು ಬಲಿ – ಕಂದಮ್ಮಗಳನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಅಮ್ಮ

    ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತಕ್ಕೆ ತಾಯಿ, ಇಬ್ಬರು ಮಕ್ಕಳು ಬಲಿ – ಕಂದಮ್ಮಗಳನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಅಮ್ಮ

    ಡೆಹ್ರಾಡೂನ್:‌ ಉತ್ತರಾಖಂಡದ (Uttarakhand) ಚಮೋಲಿಯಲ್ಲಿ (Chamoli Landslide) ಸಂಭವಿಸಿದ ಭೂಕುಸಿತದ ಅವಶೇಷಗಳ ಅಡಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

    ವಿಪತ್ತು ಪೀಡಿತ ಚಮೋಲಿ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ಮೂವರ ಮೃತದೇಹಗಳು ಪತ್ತೆಯಾಗಿವೆ. ಮಹಿಳೆಯ ಪತಿ ಕುನ್ವರ್ ಸಿಂಗ್ ಅವರನ್ನು ಅವಶೇಷಗಳಿಂದ ಪವಾಡಸದೃಶವಾಗಿ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಟ್ರಕ್ ಡ್ರೈವರ್ ಕಿಡ್ನ್ಯಾಪ್‌ ಕೇಸ್‌ – ಪೂಜಾ ಖೇಡ್ಕರ್ ಕಾರು ಚಾಲಕ ಅರೆಸ್ಟ್‌

    ಭಾರೀ ಮಳೆ ಮತ್ತು ಮೇಘಸ್ಫೋಟದಿಂದಾಗಿ ಜಿಲ್ಲೆಯ ನಂದನಗರ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿತ್ತು. 38 ವರ್ಷದ ಮಹಿಳೆ ತನ್ನ 10 ವರ್ಷದ ಮಕ್ಕಳಾದ ವಿಶಾಲ್ ಮತ್ತು ವಿಕಾಸ್ ಅಪ್ಪಿಕೊಂಡೇ ಪ್ರಾಣಬಿಟ್ಟಿದ್ದಾರೆ. ವಿಪತ್ತು ಸಂಭವಿಸಿದ ಸಮಯದಲ್ಲಿ ಮಕ್ಕಳನ್ನು ರಕ್ಷಿಸಲು ತಾಯಿ ಪ್ರಯತ್ನ ನಡೆಸಿದ್ದರು.

    ಬುಧವಾರ ಈ ಪ್ರದೇಶದಲ್ಲಿ ಸಂಭವಿಸಿದ ವಿಪತ್ತಿನ ನಂತರ ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದಾಗಿ ಜಿಲ್ಲಾಡಳಿತ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಿವೆ. ಹಠಾತ್ ಪ್ರವಾಹ ಮತ್ತು ಭೂಕುಸಿತಗಳು ಮೂಲಸೌಕರ್ಯಗಳಿಗೆ ಭಾರಿ ಹಾನಿಯುಂಟು ಮಾಡಿವೆ. ಸ್ಥಳಾಂತರಗೊಂಡ ಕುಟುಂಬಗಳಿಗಾಗಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಪೀಡಿತ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ. ಇದನ್ನೂ ಓದಿ: ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್

  • ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – 5ಕ್ಕೂ ಹೆಚ್ಚು ಜನ ನಾಪತ್ತೆ, ಕಟ್ಟಡಗಳು ನೆಲಸಮ

    ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – 5ಕ್ಕೂ ಹೆಚ್ಚು ಜನ ನಾಪತ್ತೆ, ಕಟ್ಟಡಗಳು ನೆಲಸಮ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಚಮೋಲಿಯಲ್ಲಿ (Chamoli) ಮತ್ತೆ ಮೇಘಸ್ಫೋಟ (Cloudburst) ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

    ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ಬುಧವಾರ (ಸೆ.17) ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮೇಘಸ್ಫೋಟ ಸಂಭವಿಸಿದೆ. ಭಾರೀ ಪ್ರಮಾಣದ ನೀರು ಹರಿದು ಬಂದಿದ್ದು, 6 ಕಟ್ಟಡಗಳು ನೆಲಸಮಗೊಂಡಿವೆ.ಇದನ್ನೂ ಓದಿ: ಬೆಂಗಳೂರಲ್ಲಿ ಧಾರಾಕಾರ ಮಳೆ; ಹಲವೆಡೆ ಅವಾಂತರ – ರಸ್ತೆಗೆ ಉರುಳಿದ ಮರ, ವಿದ್ಯುತ್‌ ಕಂಬ

    ಇನ್ನೂ 5ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಸದ್ಯ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಲೋಕೋಪಯೋಗಿ ಇಲಾಖೆಯ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಜೊತೆಗೆ ಜೆಸಿಬಿ ಮತ್ತು ಇತರ ಉಪಕರಣಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.

    ಅಧಿಕಾರಿಗಳ ಮಾಹಿತಿ ಪ್ರಕಾರ, ಅವಶೇಷಗಳಡಿಯಲ್ಲಿ ಸಿಲುಕಿದ್ದ ಇಬ್ಬರನ್ನು ಜೀವಂತವಾಗಿ ಹೊರತೆಗೆಯಲಾಗಿದೆ. ಸ್ಥಳದಲ್ಲೇ ಆಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡ ಬೀಡುಬಿಟ್ಟಿವೆ ಎಂದು ತಿಳಿಸಿದ್ದಾರೆ.

    ಇನ್ನೂ ಕೆಲವು ದಿನ ಚಮೋಲಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೂ ಮುನ್ನ ಡೆಹ್ರಾಡೂನ್‌ನ ಸಹಸ್ರಧಾರದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್‌ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

  • ಪ್ರವಾಹ ಪೀಡಿತ ಉತ್ತರಾಖಂಡಕ್ಕೆ ಮೋದಿ ಭೇಟಿ – 1,200 ಕೋಟಿ ನೆರವು ಘೋಷಣೆ

    ಪ್ರವಾಹ ಪೀಡಿತ ಉತ್ತರಾಖಂಡಕ್ಕೆ ಮೋದಿ ಭೇಟಿ – 1,200 ಕೋಟಿ ನೆರವು ಘೋಷಣೆ

    ಡೆಹ್ರಾಡೂನ್: ಪ್ರವಾಹ (Flood) ಮತ್ತು ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಗುರುವಾರ ಉತ್ತರಾಖಂಡಕ್ಕೆ (Uttarakhand) ಭೇಟಿ ನೀಡಿದರು.

    ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರುಪ್ರೀತ್ ಸಿಂಗ್ ಸ್ವಾಗತಿಸಿದರು. ತಮ್ಮ ಭೇಟಿಯ ಸಮಯದಲ್ಲಿ ಮೋದಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಅಲ್ಲದೇ ಪ್ರವಾಹ ಪೀಡಿತ ಕುಟುಂಬಗಳೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ 1,200 ಕೋಟಿ ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ನೇಪಾಳ ದಂಗೆ | Gen-Z ನಲ್ಲಿ ಬಿರುಕು – ಮಧ್ಯಂತರ ಪ್ರಧಾನಿ ಹುದ್ದೆಗೆ ಸುಶೀಲಾ ಕರ್ಕಿ Vs ಕುಲ್ಮನ್ ನಡ್ವೆ ಫೈಟ್‌

    ಅಲ್ಲದೇ ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಸಹ ಘೋಷಿಸಿದರು. ಪ್ರವಾಹ ಮತ್ತು ಭೂಕುಸಿತದಿಂದ ಅನಾಥರಾದ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯಡಿಯಲ್ಲಿ ಸಂಪೂರ್ಣ ಸಹಾಯ ನೀಡುವುದಾಗಿ ಮೋದಿ ಭರವಸೆ ನೀಡಿದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಹಿಂದುಳಿದ ಕಾಲೋನಿಗಳ ಅಭಿವೃದ್ಧಿಗೆ 398 ಕೋಟಿ ರಿಲೀಸ್ – ಸಂಪುಟ ನಿರ್ಧಾರಕ್ಕೆ ಬಿಜೆಪಿ ತೀವ್ರ ಟೀಕೆ

    ಇನ್ನು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಆಪ್ದಾ ಮಿತ್ರ ಸ್ವಯಂಸೇವಕರೊಂದಿಗೆ ಸಂವಾದ ನಡೆಸಿದ ಮೋದಿ ಅವರ ನಿರಂತರ ಕೆಲಸ ಹಾಗೂ ಪ್ರಯತ್ನವನ್ನು ಶ್ಲಾಘಿಸಿದರು. ಪೀಡಿತ ಪ್ರದೇಶಗಳಲ್ಲಿ ಹಾನಿಗೊಳಗಾದ ಮೂಲಸೌಕರ್ಯಗಳ ಪುನಃಸ್ಥಾಪನೆ ಮತ್ತು ಪುನರ್ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದೆ. ಹವಾಮಾನ ವೈಪರೀತ್ಯದಿಂದಾಗಿ ಮೋದಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

  • ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ

    ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ರುದ್ರಪ್ರಯಾಗ, (Rudraprayag) ಚಮೋಲಿ, (Chamoli) ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ (Cloudburst) ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

    ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಮತ್ತು ಮಂದಾಕಿನಿ ನದಿಗಳ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ಹನುಮಾನ್ ದೇವಾಲಯ ಮುಳುಗಡೆಯಾಗಿದೆ.ಇದನ್ನೂ ಓದಿ: ಹಾಸನ | ರಸ್ತೆಗೆ ಮರ ಕೆಡವಿ ವಾಹನ ಸವಾರರನ್ನು ತಡೆದ ಗಜರಾಜ!

    ಶ್ರೀನಗರ ಮತ್ತು ರುದ್ರಪ್ರಯಾಗ ನಡುವಿನ ಬದರಿನಾಥ ಹೆದ್ದಾರಿ ಮುಳುಗಡೆಯಾದ ಹಿನ್ನೆಲೆ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಾಗಿ ಯಾತ್ರಿಕರನ್ನು ಪರ್ಯಾಯ ಮಾರ್ಗಗಳ ಮೂಲಕ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಭದ್ರತಾ ದೃಷ್ಟಿಯಿಂದ ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

    ಇನ್ನೂ ಕೇದಾರನಾಥ ಕಣಿವೆಯ ಲಾವಾರಾ ಗ್ರಾಮದಲ್ಲಿಯೂ ಭೀಕರ ಪ್ರವಾಹ ಉಂಟಾಗಿದೆ. ಪರಿಣಾಮ ರಸ್ತೆಯ ಸೇತುವೆಯೊಂದು ಕೊಚ್ಚಿಹೋಗಿದ್ದು, ಚೆನಾಗಡ್‌ನಲ್ಲಿಯೂ ಗಂಭೀರ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯ ಹಿನ್ನೆಲೆ ರುದ್ರಪ್ರಯಾಗ, ಬಾಗೇಶ್ವರ, ಚಮೋಲಿ, ಹರಿದ್ವಾರ ಮತ್ತು ಪಿಥೋರಗಢ ಜಿಲ್ಲೆಗಳಾದ್ಯಂತ ಇಂದು (ಆ.29) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿ ನಿಭಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಸಾಮೂಹಿಕ ಗಣೇಶ ವಿಸರ್ಜನೆಗೆ ಬೆಂಗ್ಳೂರಿನ ಕೆಲವು ಏರಿಯಾಗಳಲ್ಲಿ ಮದ್ಯ ನಿಷೇಧ

  • ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – ಮನೆಗಳು ಸರ್ವನಾಶ, ಹಲವರು ನಾಪತ್ತೆ ಶಂಕೆ

    ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – ಮನೆಗಳು ಸರ್ವನಾಶ, ಹಲವರು ನಾಪತ್ತೆ ಶಂಕೆ

    – ವಾಹನಗಳು, ಅಂಗಡಿಗಳು ಜಲಸಮಾಧಿ

    ಡೆಹ್ರಾಡೂನ್: ಶನಿವಾರ ಮುಂಜಾನೆ ಉತ್ತರಾಖಂಡದ (Uttarakhand) ಚಮೋಲಿ (Chamoli) ಜಿಲ್ಲೆಯಲ್ಲಿ ಮೇಘಸ್ಫೋಟ (Cloudburst) ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

    ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದಿಂದ ಅನೇಕ ವಾಹನಗಳು ಹಾಗೂ ಅಂಗಡಿಗಳು ಸಹ ಜಲಸಮಾಧಿಯಾಗಿದೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್‌ ಕಿರುಕುಳ ಆರೋಪ – ಗೃಹಿಣಿ ಆತ್ಮಹತ್ಯೆ

    ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಕ್ಷಣಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ವರದಿಗಳು ತಿಳಿಸಿವೆ. ಮೇಘಸ್ಫೋಟದ ಪರಿಣಾಮ ಅವಶೇಷಗಳು ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದನ್ನೂ ಓದಿ: ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

    ಪಿಥೋರಗಢದಲ್ಲಿ, ಭೂಕುಸಿತದಿಂದಾಗಿ ಥಾಲ್-ಮುನ್ಸಾರಿ ಮತ್ತು ಮುನ್ಸಾರಿ-ಮಿಲಮ್ ರಸ್ತೆಗಳು ಮುಚ್ಚಲ್ಪಟ್ಟಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಮಳೆ ಮತ್ತು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ನಿವಾಸಿಗಳು ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ.  ಅನೇಕ ಗ್ರಾಮಸ್ಥರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಉಡುಪಿ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

  • ಮೇಘಸ್ಪೋಟಕ್ಕೆ ನಾಶವಾಯ್ತು ಧರಾಲಿ – ಗ್ರಾಮದ ವಿಶೇಷತೆ ಏನು? ಮೊದಲು ಹೇಗಿತ್ತು?

    ಮೇಘಸ್ಪೋಟಕ್ಕೆ ನಾಶವಾಯ್ತು ಧರಾಲಿ – ಗ್ರಾಮದ ವಿಶೇಷತೆ ಏನು? ಮೊದಲು ಹೇಗಿತ್ತು?

    ತ್ತೀಚಿಗಷ್ಟೇ ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿರುವ (Uttarakashi) ಧರಾಲಿ (Dharali) ಗ್ರಾಮದಲ್ಲಿ ಬೆಚ್ಚಿ ಬೀಳಿಸುವಂತಹ ಭಯಾನಕ ಘಟನೆ ಎಂದು ಸಂಭವಿಸಿತು. ಕ್ಷಣಾರ್ಧದಲ್ಲಿ ಊರಿಗೆ ಊರೇ ಕೊಚ್ಚಿಕೊಂಡು ಹೋಗಿ ಸರ್ವನಾಶವಾಯಿತು. ಬೆಟ್ಟದಿಂದ ರೌದ್ರಾವತಾರದಲ್ಲಿ ಹರಿದು ಬಂದ ನೀರು ಗ್ರಾಮವನ್ನೇ ನೆಲಸಮಗೊಳಿಸಿತು. ಈ ದುರಂತಕ್ಕೂ ಮುನ್ನ ಈ ಧರಾಲಿ ಗ್ರಾಮ ಒಂದು ಸುಂದರ ತಾಣ. ಧಾರ್ಮಿಕ ಮತ್ತು ಪೌರಾಣಿಕ ಮಹತ್ವದ ಒಂದು ನೆಲೆ. ಯಾತ್ರೆಗಳಿಗೆ ಹೋಗುವವರಿಗೆ ಒಂದು ನೆಮ್ಮದಿಯ ತಂಗುದಾಣವಾಗಿತ್ತು. ಎಲ್ಲವೂ ಬದಲಾಗಿದೆ. ಹಿಂದೆ ಇಲ್ಲೊಂದು ಪ್ರದೇಶವಿತ್ತು ಎಂಬುದನ್ನೇ ಅಳಿಸಿ ಹಾಕಿದೆ. 

    ಸಾಮಾನ್ಯವಾಗಿ ಉತ್ತರ ಭಾರತದ (North India) ಉತ್ತರ ಗಡಿಯಲ್ಲಿರುವ ರಾಜ್ಯಗಳಾದ ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಇವೆಲ್ಲವೂ ಹಿಮಾಲಯ ಬೆಟ್ಟಗಳಿಂದ ಸುತ್ತುವರೆದಿದೆ. ಇನ್ನು ಮಳೆಗಾಲದಲ್ಲಿ ಮಳೆಯ ಪ್ರಮಾಣವೂ ಹೆಚ್ಚಾಗಿಯೇ ಇರುತ್ತದೆ. ಈ ಪ್ರದೇಶಗಳಲ್ಲಿ ಈ ಹಿಂದೆಯೂ ಹಲವು ಮೇಘಸ್ಫೋಟಗಳು (Cloudburst) ಸಂಭವಿಸಿದ್ದವು. ಇದರಿಂದ ಹಲವರು ಪ್ರಾಣ ಕಳೆದುಕೊಂಡರೆ, ಇನ್ನೂ ಕೆಲವರು ತಮ್ಮದನ್ನೆಲ್ಲ ಕಳೆದುಕೊಂಡು ಏನು ಇಲ್ಲದಂತೆ ಬದುಕುತ್ತಿದ್ದಾರೆ. ಇಂತಹ ಸ್ಥಿತಿಗೆ ಮತ್ತೊಮ್ಮೆ ಉತ್ತರ ಕಾಶಿಯ ಧರಾಲಿ ಗ್ರಾಮ ಉದಾಹರಣೆಯಾಗಿದೆ. 

    ಹೌದು, ಧರಾಲಿ ಗ್ರಾಮ ಈ ಮೇಘಸ್ಫೋಟಕ್ಕೂ ಮುನ್ನ ಹೇಗಿತ್ತು ಗೊತ್ತಾ? ಅದೊಂದು ನೈಸರ್ಗಿಕ ತಾಣವೇ ಹೌದು, ಈ ಗ್ರಾಮ ಭಗೀರಥಿ ನದಿಯಿಂದ ಸುತ್ತುವರೆಯಲ್ಟಟ್ಟಿದ್ದು, ಸೇಬು, ರಾಜಮ, ಪೈನ್, ಡಿಯೋಡರ್ ಕಾಡುಗಳು ಈ ಪ್ರದೇಶದ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆಧ್ಯಾತ್ಮಿಕತೆ, ಸೌಂದರ್ಯ ಎಲ್ಲದರಿಂದಲೂ ಪರಿಪೂರ್ಣಗೊಂಡಿರುವ ಈ ಗ್ರಾಮವನ್ನು ದೇವರನಾಡು ಎಂದೇ ಕರೆಯುತ್ತಾರೆ. ಗಂಗೋತ್ರಿ ಹೆದ್ದಾರಿಯಲ್ಲಿ ಕಂಡುಬರುವ ಒಂದು ಅದ್ಭುತ ನಗರವೇ ಧರಾಲಿ. ಪ್ರಾಚೀನ ಕಾಲದಲ್ಲಿ ಋಷಿಮುನಿಗಳಿಗೆ ಇದೊಂದು ಧ್ಯಾನ ಮಾಡುವ ಸ್ಥಳವಾಗಿತ್ತು. ಇಲ್ಲಿನ ಸ್ಥಳೀಯ ಜಾನಪದ ಕಲೆಯು ಜನರನ್ನ ಪ್ರತಿಬಿಂಬಿಸುತ್ತದೆ. 

    ಈ ಗ್ರಾಮವು ಪ್ರವಾಸಿಗರನ್ನು ಕೈಬೀಸಿ ತನ್ನೆಡೆಗೆ ಕರೆಯುತ್ತದೆ. ಚಾರಣಕ್ಕೆ ಸೂಕ್ತವಾದ ಪ್ರದೇಶ. ಪಕ್ಷಿ ವೀಕ್ಷಣೆಗೆ ಮತ್ತು ಪ್ರಕೃತಿ ಪ್ರೇಮಿಗಳಿಗೆ ಇದೊಂದು ಸ್ವರ್ಗವೇ ಹೌದು. ಇಲ್ಲಿ ಹಿಮಾಲಯನ್ ಪಕ್ಷಿ ಪ್ರಭೇದಗಳ ಸೌಂದರ್ಯಕ್ಕೆ ಜನರು ಕರಗಿ ಹೋಗುವುದಂತೂ ಖಂಡಿತ. ಇನ್ನು ಚಾರ್ ಧಾಮ್ ಯಾತ್ರೆಗೆ (Chardham Yatra) ಹೋಗುವ ಯಾತ್ರಾರ್ಥಿಗಳಿಗೆ ಇದೊಂದು ನಿಲ್ದಾಣ. ಧರಾಲಿಯಿಂದ ಗಂಗಾ ನದಿಯ (Ganga River) ಉಗಮ ಸ್ಥಾನ ಗಂಗೋತ್ರಿಯು (Gangotri) ಕೇವಲ 20 ಕಿ.ಮೀ ದೂರದಲ್ಲಿದೆ. ಅದಲ್ಲದೆ ಗಂಗಾ ನದಿ  ಎಂಬ ನೈಸರ್ಗಿಕ ಬಿಸಿನೀರಿನ ಬಗ್ಗೆಗಳು ಇಲ್ಲಿ ಕಂಡು ಬರುವುದರಿಂದ ಆಯುರ್ವೇದ ಚಿಕಿತ್ಸೆಗಾಗಿ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಹೀಗಾಗಿ ಇದೊಂದು ಜನಪ್ರಿಯ ತಾಣವಾಗಿದೆ.

    ಇದೆಲ್ಲದರ ಹೊರತಾಗಿ ಧರಾಲಿಯಲ್ಲಿ ಪೌರಾಣಿಕ ಇತಿಹಾಸವನ್ನು ಹೊಂದಿರುವ ಒಂದು ದೇವಾಲಯವಿದೆ ಅದೇ ಕಲ್ಪ ಕೇದಾರ ದೇಗುಲ (Kalpa Kedar Temple). ಪಾಂಡವರು (Pandavas) ನಿರ್ಮಿಸಿದ್ದಾರೆ ಎಂದು ನಂಬಲಾಗಿರುವ ದೇವಾಲಯವೇ ಇದು. ಪ್ರಾಚೀನ ಕಾಲದಿಂದಲೂ ಉಳಿದುಕೊಂಡು ಬಂದಂತಹ ಆ ಯುಗದ ಕೊನೆಯ ಅವಶೇಷವೇ ಇದು. ಸಮುದ್ರಮಟ್ಟದಿಂದ 2,100 ಅಡಿ ಎತ್ತರದಲ್ಲಿರುವ ಈ ದೇವಾಲಯವನ್ನು ಆಧ್ಯಾತ್ಮಿಕ ರತ್ನವೆಂದು ಕರೆಯಲಾಗುತ್ತದೆ. ಪೌರಾಣಿಕ ಮಾಹಿತಿ ಪ್ರಕಾರ, ಪಾಂಡವರು ತಮ್ಮ ವನವಾಸದ ಸಂದರ್ಭದಲ್ಲಿ ಹಿಮಾಲಯಕ್ಕೆ ಭೇಟಿ ನೀಡಿದಾಗ ಈ ದೇವಾಲಯವನ್ನು ನಿರ್ಮಿಸಿದರು ಎನ್ನಲಾಗಿದೆ. 1935 ಮತ್ತು 1938ರ ನಡುವೆ ಹಿಮನದಿಯಿಂದಾಗಿ ಈ ದೇಗುಲ ಹೂತುಹೋಗಿತ್ತು. ಆದರೂ ಕೂಡ ಈ ಗುಮ್ಮಟ ಹಾಗೆ ಉಳಿದುಕೊಂಡು ಬಂದಿದೆ. ದೇವಾಲಯದ ಮೇಲ್ಭಾಗ ಕಾಲಭೈರವನ ಮುಖದಿಂದ ಅಲಂಕರಿಸಲ್ಪಟ್ಟಿದೆ. ಈ ದೇಗುಲದ ಇನ್ನೊಂದು ವಿಶೇಷತೆ ಏನೆಂದರೆ ಇದು ಐದು ಮುಖದ ಶಿವಲಿಂಗವನ್ನು ಹೊಂದಿದೆ. ಜೊತೆಗೆ ನಂದಿಯ ಬೆನ್ನಿನ ಆಕಾರದಲ್ಲಿ ಈ ಶಿವಲಿಂಗವಿದೆ. ಪ್ರತಿ ಮಳೆಗಾಲದಲ್ಲಿ ಖೀರ್ ಗಂಗಾ ನದಿಯು (Kheera Ganga) ಉಕ್ಕಿ ಹರಿಯುತ್ತದೆ. ಈ ಮೂಲಕ ನದಿಯ ನೀರು ಗರ್ಭಗುಡಿಯೊಳಗಿರುವ ಲಿಂಗವನ್ನು ಸ್ಪರ್ಷಿಸಿ ಅಭಿಷೇಕ ಮಾಡುತ್ತದೆ ಎಂಬ ನಂಬಿಕೆ ಇದೆ.  ಈ ದೇವಾಲಯ ಭಾಗಶಃ ನೆಲದಲ್ಲಿ ಹುದುಗಿಕೊಂಡಿರುವ ರೀತಿಯಲ್ಲಿದೆ.  ನಂಬಿಕೆಗಳ ಪ್ರಕಾರ ಶಿವನು ಪಾಪ ಮುಕ್ತಿಗಾಗಿ ದಶಕಗಳ ಕಾಲ ತನ್ನನ್ನು ತಾನು ಮರೆಮಾಡಿಕೊಂಡಿದ್ದನು ಎನ್ನಲಾಗುತ್ತದೆ. ಆದರೆ ಇತ್ತೀಚಿಗೆ ಸಂಭವಿಸಿದ ಪ್ರವಾಹದಿಂದಾಗಿ ಎಲ್ಲವು ಬದಲಾಗಿದೆ. ಶಿವಲಿಂಗದ ಮೇಲೆ ಹರಿಯುತ್ತಿದ್ದ ನದಿಯು ಈಗ ಇಡೀ ದೇವಾಲಯವನ್ನೇ ಆಕ್ರಮಿಸಿಕೊಂಡಿದೆ. 

    ಈ ದೇವಾಲಯದ ವಾಸ್ತುಶಿಲ್ಪ ಕೇದಾರನಾಥ ಧಾಮದಂತೆಯೇ (Kedarnath Dham) ಇದೆ. 1945ರಲ್ಲಿ ಗ್ರಾಮಸ್ಥರಿಗೆ ಈ ದೇವಸ್ಥಾನದ ಇರುವಿಕೆಯ ಕುರಿತು ಮಾಹಿತಿ ಬೆಳಕಿಗೆ ಬಂದಿತ್ತು. ದಿನಗಳೆದಂತೆ ಸ್ಥಳೀಯರು ಪೂಜೆ ಮಾಡಲು ಪ್ರಾರಂಭಿಸಿದರು. ಸುಮಾರು ಹಲವು ದಶಕಗಳಿಂದ ಹುದುಗಿಕೊಂಡಿರುವ 240 ದೇವಾಲಯಗಳ ಪೈಕಿ ಕಲ್ಪ ಕೇದಾರ ದೇವಾಲಯ ಒಂದೇ ಉಳಿದುಕೊಂಡಿದೆ. ಪೌರಾಣಿಕ ಸಂಪರ್ಕವನ್ನು ಹೊಂದಿದ್ದ ಈ ದೇವಾಲಯ ಮತ್ತೆ ಭೂಮಿಯ ಒಳಗೆ ಸೇರಿಕೊಂಡ ಹಾಗೆ ಆಗಿದೆ.

    ಇದೀಗ ಧರಾಲಿ ಗ್ರಾಮದಲ್ಲಿ ಸಂಭವಿಸಿದ ಜಲಪ್ರಳಯಕ್ಕೆ ಇಡೀ ಗ್ರಾಮವೇ ಕೊಚ್ಚಿ ಹೋಗಿ ಐವರು ಸಾವನ್ನಪ್ಪಿದ್ದಾರೆ. ಇನ್ನು ಹಲವಾರು ಜನರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ತಜ್ಞರ ಮಾಹಿತಿ ಪ್ರಕಾರ ಇದು ಮೇಘಸ್ಪೋಟವಲ್ಲ, ಹಿಮ ಕೊಳ ಸ್ಫೋಟ ಎಂದು ಹೇಳುತ್ತಿದ್ದಾರೆ. ವಿನಾಶದ ಪ್ರಮಾಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಭೀಕರತೆಯನ್ನ ತೋರಿಸುತ್ತಿದೆ. 

    ಹಿಂದೆ ಯಾವಾಗ ಮೇಘಸ್ಫೋಟವಾಗಿತ್ತು?

    ಇದಕ್ಕೂ 2025ರಲ್ಲಿ ಮುನ್ನ ಹಿಮಾಚಲ ಪ್ರದೇಶದಲ್ಲಿ (Himachal Pradesh) ಮಳೆಯ ಪ್ರಮಾಣದಲ್ಲಿ ಏರಿಕೆಯಾಗಿ ಮಂಡಿ, ಕುಲ್ಲು, ಚಾಂಬಾ ರಸ್ತೆಗಳಲ್ಲಿ ಮೇಘ ಸ್ಫೋಟ ಉಂಟಾಗಿ ಭಾರೀ  ದುರಂತ ಸಂಭವಿಸಿತ್ತು. ಈ ಸಮಯದಲ್ಲಿ ಮಳೆ ಸಂಭಂಧಿತ ಅವಘಡದಿಂದಾಗಿ 106 ಜನ ಸಾವನ್ನಪ್ಪಿದ್ದರು. 

    2012ರಲ್ಲಿ ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಪ್ರಭಾವದಿಂದಾಗಿ 31 ಜನ ಸಾವನ್ನಪ್ಪಿದ್ದರೆ, 40 ಜನ ನಾಪತ್ತೆಯಾಗಿದ್ದರು. 

    2010ರಲ್ಲಿ ಹಿಮಾಚಲ ಪ್ರದೇಶದ ಕರ್ಹಲ್ ಕಣಿವೆಯಲ್ಲಿ ಮೇಘ ಸ್ಫೋಟ ಸಂಭವಿಸಿ ಲಕ್ಷಾಂತರ ಮೌಲ್ಯದ ಆಸ್ತಿ ನಾಶವಾಗಿತ್ತು.

  • ಉತ್ತರಕಾಶಿಯಲ್ಲಿ ಮೇಘಸ್ಫೋಟ – ಕರ್ನಾಟಕದ 6 ಪ್ರವಾಸಿಗರ ರಕ್ಷಣೆ

    ಉತ್ತರಕಾಶಿಯಲ್ಲಿ ಮೇಘಸ್ಫೋಟ – ಕರ್ನಾಟಕದ 6 ಪ್ರವಾಸಿಗರ ರಕ್ಷಣೆ

    ಡೆಹ್ರಾಡೂನ್: ಉತ್ತರಕಾಶಿಯಲ್ಲಿ (Uttarakashi) ಮೇಘಸ್ಫೋಟ, ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ 6 ಮಂದಿ ಪ್ರವಾಸಿಗರನ್ನು ರಕ್ಷಿಸಲಾಗಿದೆ.

    ಮೇಘಸ್ಫೋಟ ಉಂಟಾಗಿದ್ದ ಹರ್ಷಿಲ್ ಗ್ರಾಮದಿಂದ ಪ್ರವಾಸಿಗರನ್ನು ಮಟ್ಲಿ, ಜ್ಯೋಲಿಗ್ರಾಂಟ್‌ಗೆ ಏರ್ ಲಿಫ್ಟ್ ಮಾಡಲಾಗಿದೆ. ಅವರನ್ನು ಭಾರತೀಯ ಸೇನಾ ವಿಮಾನದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: ಹೇಗಿತ್ತು.. ಹೇಗಾಯ್ತು!?- ಉತ್ತರಾಖಂಡದಲ್ಲಿ ಭೀಕರ ಪ್ರವಾಹದ ಸ್ಯಾಟಲೈಟ್‌ ದೃಶ್ಯ ಹಂಚಿಕೊಂಡ ಇಸ್ರೋ

    ಶುಕ್ರವಾರ ಬೆಳಗ್ಗೆಯಿಂದ ಈವರೆಗೆ 136 ಪ್ರವಾಸಿಗರ ರಕ್ಷಣೆಯಾಗಿದೆ. ನಾಲ್ಕನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಕ್ಷಿಸಲಾದ ವ್ಯಕ್ತಿಗಳನ್ನು ಅವರವರ ಸ್ಥಳಗಳಿಗೆ ಕಳುಹಿಸುವುದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

    ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ನಂತರ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಾಲ್ಕನೇ ದಿನವೂ ಮುಂದುವರೆದಿದೆ. ಹರ್ಸಿಲ್ ಮತ್ತು ನೆಲೋಂಗ್‌ನಲ್ಲಿರುವ ಮಿಲಿಟರಿ ಹೆಲಿಪ್ಯಾಡ್ ಕಾರ್ಯನಿರ್ವಹಿಸುತ್ತಿದ್ದು, ಗಂಗೋತ್ರಿಯೊಂದಿಗೆ ರಸ್ತೆ ಮೂಲಕ ಸಂಪರ್ಕ ಹೊಂದಿದೆ. ಎಂಜಿನಿಯರ್‌ಗಳು, ವೈದ್ಯಕೀಯ ತಂಡಗಳು ಮತ್ತು ರಕ್ಷಣಾ ಸಿಬ್ಬಂದಿ ಸೇರಿದಂತೆ 225 ಸೈನಿಕರು ಸ್ಥಳದಲ್ಲಿದ್ದಾರೆ ಎಂದು ಸೇನೆ ತಿಳಿಸಿದೆ. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಈವರೆಗೆ 274 ಮಂದಿ ರಕ್ಷಣೆ, ಪತ್ತೆಯಾಗದ 59 ಜನರು

  • ಹೇಗಿತ್ತು.. ಹೇಗಾಯ್ತು!?- ಉತ್ತರಾಖಂಡದಲ್ಲಿ ಭೀಕರ ಪ್ರವಾಹದ ಸ್ಯಾಟಲೈಟ್‌ ದೃಶ್ಯ ಹಂಚಿಕೊಂಡ ಇಸ್ರೋ

    ಹೇಗಿತ್ತು.. ಹೇಗಾಯ್ತು!?- ಉತ್ತರಾಖಂಡದಲ್ಲಿ ಭೀಕರ ಪ್ರವಾಹದ ಸ್ಯಾಟಲೈಟ್‌ ದೃಶ್ಯ ಹಂಚಿಕೊಂಡ ಇಸ್ರೋ

    ನವದೆಹಲಿ: ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarakashi) ಸಂಭವಿಸಿದ ಭೀಕರ ಪ್ರವಾಹದಿಂದ ಉಂಟಾದ ವಿನಾಶದ ಪ್ರಮಾಣದ ಚಿತ್ರಣಗಳನ್ನು ಇಸ್ರೋ (ISRO) ಬಹಿರಂಗಪಡಿಸಿದೆ.

    ಆ.5 ರಂದು ಸಂಭವಿಸಿದ ಈ ದುರಂತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. 50 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಹಿಮನದಿಯ ಕೊಳ ಸ್ಫೋಟವೇ ಪ್ರವಾಹಕ್ಕೆ ಕಾರಣ ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಈವರೆಗೆ 274 ಮಂದಿ ರಕ್ಷಣೆ, ಪತ್ತೆಯಾಗದ 59 ಜನರು

    ಪ್ರವಾಹದ ಎರಡು ದಿನಗಳ ನಂತರ ಇಸ್ರೋದ ಕಾರ್ಟೊಸ್ಯಾಟ್-2S ಉಪಗ್ರಹವು, ಪ್ರವಾಹ ಪೀಡಿತ ವಲಯದ ಚಿತ್ರಗಳನ್ನು ಸೆರೆಹಿಡಿದಿದೆ. ಆ.7 ರಂದು ತೆಗೆದ ಈ ಚಿತ್ರಗಳು, ಖೀರ್ ಗಡ್ ಹೊಳೆ ಭಾಗೀರಥಿ ನದಿಯನ್ನು ಸೇರುವ ಧರಾಲಿ ಗ್ರಾಮದಲ್ಲಿ ಮಣ್ಣು ಮತ್ತು ಕಲ್ಲಿನ ರಾಶಿ ಸುಮಾರು 20 ಹೆಕ್ಟೇರ್‌ಗಳನ್ನು ಆವರಿಸುವುದನ್ನು ತೋರಿಸಿವೆ.

    ಈ ಚಿತ್ರಗಳು, ರಕ್ಷಣಾ ಕಾರ್ಯಾಚರಣೆ, ಪ್ರವಾಹದಲ್ಲಿ ಮುಳುಗಿರುವ ಪ್ರದೇಶಗಳು, ಸಂಪರ್ಕ ಕಡಿತಗೊಂಡ ಹಳ್ಳಿಗಳ ಸಂಪರ್ಕ ಪುನಃಸ್ಥಾಪಿಸಲು ಅಧಿಕಾರಿಗಳಿಗೆ ಸಹಾಯ ಮಾಡುತ್ತಿವೆ ಎಂದು ಇಸ್ರೋ ತಿಳಿಸಿದೆ. ಇದನ್ನೂ ಓದಿ: ಅಪ್ಪಾ.. ನಾವು ಬದುಕುಳಿಯಲ್ಲ, ಇಲ್ಲಿ ನೀರು ತುಂಬಿದೆ: ಉತ್ತರಾಖಂಡ ಪ್ರವಾಹದಲ್ಲಿ ಮಗನ ಕೊನೆ ಮಾತು ನೆನೆದು ತಂದೆ ಕಣ್ಣೀರು

    ಕಾಲುವೆ ಹೊಳೆಯಂತೆ ಹರಿದಿರುವುದು, ಮೂಲಸೌಕರ್ಯಗಳ ನಾಶ, ಹಲವಾರು ಮನೆಗಳ ಕಣ್ಮರೆ, ರಸ್ತೆ-ತೋಟ-ಸೇತುವೆಗಳು ನಾಶವಾಗಿರುವುದನ್ನು ಈ ಚಿತ್ರಗಳಲ್ಲಿ ಕಾಣಬಹುದಾಗಿದೆ. ಮನೆಗಳು ಮಣ್ಣು ಮತ್ತು ಅವಶೇಷಗಳಡಿ ಕೊಚ್ಚಿ ಹೋಗಿವೆ. ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ.

    ಪ್ರವಾಹಕ್ಕೂ ಹಿಂದಿನ ಚಿತ್ರಣ ಹಾಗೂ ಪ್ರವಾಹ ನಂತರದ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಧರಾಲಿ ಮತ್ತು ಭಾಗೀರಥಿ ನದಿಯ 2024 ರ ಜೂನ್‌ ತಿಂಗಳಲ್ಲಿ ತೆಗೆದ ಚಿತ್ರ ಇದರಲ್ಲಿದೆ. ನದಿಯ ದಡದಲ್ಲಿ ಮನೆಗಳು ಸಾಲಾಗಿ ನಿಂತಿವೆ. ಆದರೆ, ಈಗಿನ ಚಿತ್ರಗಳು ಪ್ರವಾಹದಿಂದಾಗಿ ಎಲ್ಲೆಡೆ ಮಣ್ಣು ಮತ್ತು ಕಲ್ಲಿನ ರಾಶಿ ತುಂಬಿರುವುದು ಕಾಣುತ್ತದೆ. ಜನವಸತಿ ಪ್ರವಾಹಕ್ಕೆ ಸಿಲುಕಿ ನಾಶವಾಗಿವೆ. ಇದನ್ನೂ ಓದಿ: ಮೇಘಸ್ಫೋಟವಲ್ಲ ಉತ್ತರಾಖಂಡದಲ್ಲಿ ಸಂಭವಿಸಿದ್ದು ಹಿಮಕೊಳ ಸ್ಫೋಟ!