Tag: ಉತ್ತರಾಖಂಡ್

  • ಏರ್‌ಲಿಫ್ಟ್‌ ವೇಳೆ  ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ

    ಏರ್‌ಲಿಫ್ಟ್‌ ವೇಳೆ ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ

    ಡೆಹ್ರಾಡೂನ್‌: ದುರಸ್ತಿಗಾಗಿ ಎತ್ತಿಕೊಂಡು ಸಾಗುತ್ತಿದ್ದಾಗ ಖಾಸಗಿ ಹೆಲಿಕಾಪ್ಟರ್‌ (Private Helicopter) ಪತನಗೊಂಡ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ (Uttarakhand Kedarnath) ನಡೆದಿದೆ.

    ಈ ಹಿಂದೆ ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಹಾನಿಗೊಳಗಾದ ಹೆಲಿಕಾಪ್ಟರ್ ಅನ್ನು ವಾಯುಸೇನೆಯ MI-17 ಹೆಲಿಕಾಪ್ಟರ್‌ ಎತ್ತಿಕೊಂಡು ಸಾಗುತ್ತಿತ್ತು. ಈ ವೇಳೆ ಹೆಲಿಕಾಪ್ಟರ್‌ ಜಾರಿ ಬಿದ್ದು ಮಂದಾಕಿನಿ ನದಿಯ (Mandakini River) ಬಳಿ ಪತನಗೊಂಡಿದೆ.

    ಅಪಘಾತದಲ್ಲಿ ಯಾರಾದರೂ ಗಾಯಗೊಂಡಿದ್ದಾರೆಯೇ ಎಂಬುದು ತಕ್ಷಣ ತಿಳಿದು ಬಂದಿಲ್ಲ. ಹೆಲಿಕಾಪ್ಟರ್‌ ಪತನಗೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಭಾರೀ ಮಳೆಯಿಂದಾಗಿ ಖಾಸಗಿ ಕಂಪನಿ ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್‌ ಹಾಳಾಗಿತ್ತು. ಈ ಹೆಲಿಕಾಪ್ಟರ್‌ ಅನ್ನು ದುರಸ್ತಿಗಾಗಿ ವಾಯುಸೇನೆಯ ಹೆಲಿಕಾಪ್ಟರ್‌ ಮೂಲಕ ಏರ್‌ ಲಿಫ್ಟ್‌ ಮಾಡಿ ತೆಗೆದುಕೊಂಡು ಹೋಗಲಾಗುತ್ತಿತ್ತು.

    ಆಗಸ್ಟ್‌ನಲ್ಲಿ ಚಾರಣ ಮಾರ್ಗವನ್ನು ಹೆಚ್ಚಾಗಿ ಸ್ಥಗಿತಗೊಳಿಸಲಾಗಿದ್ದರೂ, ಯಾತ್ರಾರ್ಥಿಗಳು ಹೆಲಿಕಾಪ್ಟರ್‌ಗಳಲ್ಲಿ ಹಿಮಾಲಯ ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.

  • ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ ನಿಧನ!

    ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ ನಿಧನ!

    ಡೆಹ್ರಾಡೂನ್: ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ (68) (Shaila Rani Rawat) ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಡೆಹ್ರಾಡೂನ್‌ನ ಮ್ಯಾಕ್ಸ್‌ ಆಸ್ಪತ್ರೆಯಲ್ಲಿ (Dehradun Max Hospital) ಅವರು ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ದೃಢಪಡಿಸಿವೆ. ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ – ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆ

    ಬೆನ್ನುಮೂಳೆ ಗಾಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾವತ್‌ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!

    2012ರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ಪಡೆದಿದ್ದ ರಾವತ್‌ ಕೇದಾರನಾಥ ಕ್ಷೇತ್ರದಲ್ಲಿ ಮೊದಲಬಾರಿಗೆ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. 2016ರಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಬಂಡಾಯವೆದ್ದು ಬಿಜೆಪಿ ಸೇರಿದ್ದರು. ಇವರೊಂದಿಗೆ ಇನ್ನೂ ಅನೇಕ ಕಾಂಗ್ರೆಸ್‌ ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದರು.

    2017ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಸೋತಿದ್ದ ರಾವತ್‌, 2022ರಲ್ಲಿ ಮತ್ತೆ ಬಿಜೆಪಿಯಿಂದಲೇ ಕೇದಾರನಾಥದಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ನಟ ದರ್ಶನ್‌ ವಿಚಾರಣಾಧೀನ ಕೈದಿ ನಂಬರ್‌ ಹಾಕಿಕೊಂಡು ಆಟೋ ವ್ಹೀಲಿಂಗ್‌ ಮಾಡ್ತಿದ್ದ ಚಾಲಕ ಬಂಧನ

  • ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

    ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

    ಡೆಹ್ರಾಡೂನ್‌: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆ(UCC) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.

    ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದರು. ಮಸೂದೆ ಮಂಡನೆಯ ವೇಳೆ ಬಿಜೆಪಿ ಸದಸ್ಯರು ರಾಮ್‌ ರಾಮ್‌ ಎಂದು ಮೇಜು ಕುಟ್ಟಿ ಸಂತಸ ವ್ಯಕ್ತಪಡಿಸಿದರು.

    ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಅಂಶ ಈ ಮಸೂದೆಯಲ್ಲಿದೆ.

    ಏಕರೂಪದ ನಾಗರಿಕ ಸಂಹಿತೆ ರಚನೆ ಸಂಬಂಧ ಸರ್ಕಾರ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶ ರಂಜನಾ ಪ್ರಕಾಶ್‌ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಈ ಸಮಿತಿ 4 ಸಂಪುಟ ಹೊಂದಿರುವ 749 ಪುಟಗಳಿರುವ ವರದಿ ಮತ್ತು ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿತ್ತು. ಇದನ್ನೂ ಓದಿ: ನಾಯಿ ತಿನ್ನದ ಬಿಸ್ಕತ್ತನ್ನು ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ – ವಿಡಿಯೋ ವೈರಲ್

    ಸಮಿತಿ ಆನ್‌ಲೈನ್‌ ಮೂಲಕ 2.33 ಲಕ್ಷ ಪ್ರತಿಕ್ರಿಯೆ ಪಡೆದಿದ್ದರೆ 70ಕ್ಕೂ ಹೆಚ್ಚು ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿ ಜನರಿಂದ ಅಭಿಪ್ರಾಯ ಸಂಗ್ರಹಿಸಿತ್ತು.

    ಬಹುಪತ್ನಿತ್ವ ಮತ್ತು ಬಾಲ್ಯವಿವಾಹದ ಮೇಲೆ ಸಂಪೂರ್ಣ ನಿಷೇಧ, ಎಲ್ಲಾ ಧರ್ಮದ ಹೆಣ್ಣು ಮಕ್ಕಳಿಗೆ ಪ್ರಮಾಣೀಕೃತ ಮದುವೆಯ ವಯಸ್ಸು ಮತ್ತು ವಿಚ್ಛೇದನಕ್ಕೆ ಏಕರೂಪದ ಪ್ರಕ್ರಿಯೆ ಸೇರಿದಂತೆ ಹಲವು ಪ್ರಸ್ತಾಪಗಳಿವೆ. ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಂಡು ರಾಜ್ಯಪಾಲರಿಂದ ಅಂಕಿತ ಬಿದ್ದರೆ ಯುಸಿಸಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ.

    ಗುಜರಾತ್ ಹಾಗೂ ಅಸ್ಸಾಂ ಸೇರಿದಂತೆ ದೇಶದ ಹಲವು ಬಿಜೆಪಿ ಆಡಳಿತದ ರಾಜ್ಯಗಳು ಉತ್ತರಾಖಂಡ ಯುಸಿಸಿಯನ್ನು ಮಾದರಿಯಾಗಿ ಅನುಸರಿಸಲು ಮುಂದಾಗಿವೆ.

  • ಸುರಂಗದಿಂದ ಕಾರ್ಮಿಕ ಬಚಾವಾದ್ರೂ ಅಪ್ಪನನ್ನು ಕೊನೇಸಲ ಜೀವಂತವಾಗಿ ನೋಡಲು ಸಿಗಲೇ ಇಲ್ಲ ಅವಕಾಶ

    ಸುರಂಗದಿಂದ ಕಾರ್ಮಿಕ ಬಚಾವಾದ್ರೂ ಅಪ್ಪನನ್ನು ಕೊನೇಸಲ ಜೀವಂತವಾಗಿ ನೋಡಲು ಸಿಗಲೇ ಇಲ್ಲ ಅವಕಾಶ

    ರಾಂಚಿ: ಉತ್ತರಾಖಂಡದ (Uttarakhand) ಸಿಲ್ಕ್ಯಾರಾ ಸುರಂಗದಲ್ಲಿ (Tunnel) ಸಿಲುಕಿದ್ದ 41 ಕಾರ್ಮಿಕರ (Worker) ರಕ್ಷಣೆಯೇನೋ ಆಗಿದೆ. ಆದರೆ ಈ 41 ಕಾರ್ಮಿಕರನ್ನು ಸುರಂಗದಿಂದ ಸುರಕ್ಷಿತವಾಗಿ ಹೊರತರುವುದಕ್ಕೂ ಕೆಲವೇ ಗಂಟೆಗಳ ಮುನ್ನ ಕಾರ್ಮಿಕನೊಬ್ಬನ ತಂದೆ (Father) ಮೃತಪಟ್ಟ ಘಟನೆ ನಡೆದಿದೆ.

    ಉತ್ತರಕಾಶಿ ಸುರಂಗದಿಂದ ರಕ್ಷಣೆಗೊಳಗಾದ ಕಾರ್ಮಿಕ ಭಕ್ತು ಅವರ ತಂದೆ ಜಾರ್ಖಂಡ್ ಮೂಲದ ಬಾಸೆಟ್ ಅಲಿಯಾಸ್ ಬರ್ಸಾ ಮುರ್ಮು (70) ಮಗನ ರಕ್ಷಣೆಗೂ ಕೆಲವೇ ಗಂಟೆಗಳ ಮುನ್ನ ಮೃತಪಟ್ಟಿದ್ದಾರೆ. ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ಬಹ್ದಾ ಗ್ರಾಮದ ನಿವಾಸಿ ಬರ್ಸಾ ಮುರ್ಮು ಮಂಗಳವಾರ ಬೆಳಗ್ಗೆ 8 ಗಂಟೆಗೆ ತಮ್ಮ ಹಾಸಿಗೆಯ ಮೇಲೆ ಕುಳಿತಿದ್ದಾಗಲೇ ಕುಸಿದು ಸಾವನ್ನಪ್ಪಿದ್ದಾರೆ.

    ನವೆಂಬರ್ 12 ರಂದು ತಮ್ಮ ಮಗ ಸುರಂಗದೊಳಗೆ ಸಿಲುಕಿದ್ದಾಗಿನಿಂದಲೂ ಬರ್ಸಾ ಮುರ್ಮು ಆಘಾತಕ್ಕೊಳಗಾಗಿದ್ದರು. ಭಕ್ತು ಸೇರಿದಂತೆ ಒಟ್ಟು 41 ಕಾರ್ಮಿಕರು ಸುರಂಗದಿಂದ ಹೊರಬಂದ ಕೇವಲ 12 ಗಂಟೆ ಮೊದಲು ಬರ್ಸಾ ಮುರ್ಮು ಸಾವನ್ನಪ್ಪಿರುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಜೋಧ್‌ಪುರದಿಂದ 600 ಕೆಜಿ ಪರಿಶುದ್ಧ ತುಪ್ಪ ರವಾನೆ

    ಬರ್ಸಾ ಮುರ್ಮು ತನ್ನ ಮಗನ ರಕ್ಷಣೆಗೆ ಸಂಬಂಧಿಸಿದ ಮಾಹಿತಿಗಾಗಿ ಕಾತರದಿಂದ ಕಾಯುತ್ತಿದ್ದರು. ಆದರೆ ಅವರು ತಮ್ಮ ಹಾಸಿಗೆ ಮೇಲೆ ಕುಳಿತಿದ್ದಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಇದು ಹೃದಯಾಘಾತ ಎನ್ನಲಾಗುತ್ತಿದೆಯಾದರೂ ಅವರ ವೈದ್ಯಕೀಯ ವರದಿ ಇನ್ನೂ ಬಂದಿಲ್ಲ ಎಂದು ದುಮಾರಿಯಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಸಂಜೀವನ್ ಓರಾನ್ ತಿಳಿಸಿದ್ದಾರೆ.

    ಜಾರ್ಖಂಡ್‌ನ ಇತರ 14 ಕಾರ್ಮಿಕರೊಂದಿಗೆ ಭಕ್ತು ಸದ್ಯ ಏಮ್ಸ್ ರಿಷಿಕೇಶ್‌ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ 41 ಕಾರ್ಮಿಕರೊಂದಿಗೆ ಭಕ್ತು 17 ದಿನಗಳ ಬಳಿಕ ಸೂರ್ಯನ ಬೆಳಕು ಕಂಡರೂ ತಂದೆಯ ಸಾವಿನ ಸುದ್ದಿಯಿಂದ ಮತ್ತೆ ಕತ್ತಲೆ ಆವರಿಸಿದಂತಾಗಿದೆ. ತಾವು ಮೃತ್ಯುಂಜಯರಾಗಿ ಸುರಂಗದಿಂದ ಹೊರಬಂದರೂ ತಂದೆಯನ್ನು ಕೊನೇ ಬಾರಿ ಜೀವಂತವಾಗಿ ನೋಡಲು ಸಾಧ್ಯವಾಗದೇ ಹೋಗಿರುವುದು ದುರಂತವಾಗಿದೆ. ಇದನ್ನೂ ಓದಿ: ಚೀನಾ ನಿಗೂಢ ವೈರಸ್ ಭೀತಿ – ರಾಜ್ಯದಲ್ಲಿ ನ್ಯೂಮೋನಿಯಾ ನಿಯಂತ್ರಣಕ್ಕೆ ಕ್ರಮ

  • ಮಾನವೀಯತೆ, ಟೀಮ್‌ವರ್ಕ್‌ಗೆ ಅದ್ಭುತ ಉದಾಹರಣೆ – ಕಾರ್ಯಾಚರಣೆಯಲ್ಲಿ ಭಾಗಿಯಾದವರಿಗೆ ನಮಸ್ಕರಿಸುತ್ತೇನೆ: ಮೋದಿ

    ಮಾನವೀಯತೆ, ಟೀಮ್‌ವರ್ಕ್‌ಗೆ ಅದ್ಭುತ ಉದಾಹರಣೆ – ಕಾರ್ಯಾಚರಣೆಯಲ್ಲಿ ಭಾಗಿಯಾದವರಿಗೆ ನಮಸ್ಕರಿಸುತ್ತೇನೆ: ಮೋದಿ

    ನವದೆಹಲಿ: ಮಾನವೀಯತೆ, ಟೀಮ್‌ವರ್ಕ್‌ಗೆ ಅದ್ಭುತ ಉದಾಹರಣೆ. ಉತ್ತರಕಾಶಿ ಸುರಂಗ ರಕ್ಷಣಾ ಕಾರ್ಯಾಚರಣೆಯಲ್ಲಿ (Uttarakhand Tunnel Rescue Operation) ಭಾಗಿಯಾಗಿದ್ದ ಎಲ್ಲಾ ಜನರಿಗೆ ನಾನು ನಮಸ್ಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ.

    ಸುರಂಗದ ಒಳಗಡೆ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ ನಡೆಸಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಕೃತಜ್ಞತೆ ಸಲ್ಲಿಸಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ಹೆಜ್ಜೆ ಹೆಜ್ಜೆಗೂ ಅಡೆತಡೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ

    ಪೋಸ್ಟ್‌ನಲ್ಲಿ ಏನಿದೆ?
    ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಸುರಂಗದಲ್ಲಿ ಸಿಕ್ಕಿಬಿದ್ದ ಸ್ನೇಹಿತರಿಗೆ ಹೇಳುತ್ತೇನೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆಗೆ ವರವಾಯ್ತು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ – ನಿಷೇಧಿಸಿದ್ದು ಯಾಕೆ?

    ನಾನು ನಿಮ್ಮೆಲ್ಲರಿಗೂ ಒಳ್ಳೆಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ದೀರ್ಘಾವಧಿಯ ಕಾಯುವಿಕೆಯ ನಂತರ ನಮ್ಮ ಈ ಸ್ನೇಹಿತರು ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ತುಂಬಾ ತೃಪ್ತಿಯ ವಿಷಯ,

    ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಸಾಕಷ್ಟು ಪ್ರಶಂಸಿನೀಯ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ.

     

  • ಸುರಂಗದಲ್ಲಿ ಸಿಲುಕಿರೋ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬ

    ಸುರಂಗದಲ್ಲಿ ಸಿಲುಕಿರೋ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬ

    ಡೆಹ್ರಾಡೂನ್: ಉತ್ತರಾಖಂಡದ (Uttarakhand)  ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ (Silkyara Tunnel) ಕುಸಿತದಲ್ಲಿ ಸಿಲುಕಿರುವ 41 ಮಂದಿ ಕಾರ್ಮಿಕರನ್ನು ಹೊರ ತರುವ ರಕ್ಷಣಾ ಕಾರ್ಯಾಚರಣೆ (Rescue  Operation) ಮತ್ತಷ್ಟು ವಿಳಂಬವಾಗಿದೆ.

    ಡ್ರೀಲಿಂಗ್ ಮಷಿನ್‍ನಲ್ಲಿ ಪದೇ ಪದೇ ದೋಷ ಕಂಡು ಬರುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು. ಡ್ರಿಲ್ಲಿಂಗ್ ಮಷಿನ್ ನಲ್ಲಿ ಕಂಡು ಬಂದಿರುವ ತಾಂತ್ರಿಕ ಸಮಸ್ಯೆಯನ್ನು ಪತ್ತೆ ಹಚ್ಚಿ ಸರಿಪಡಿಸಲು ವಿಶೇಷ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ಯಂತ್ರವನ್ನು ಸರಿಪಡಿಸಿದ ಬಳಿಕ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಹೇಗೆ ಕರೆತರುತ್ತಾರೆ ಗೊತ್ತಾ? – ಪ್ರಾತ್ಯಕ್ಷಿಕೆ ವಿಡಿಯೋ ನೋಡಿ..

    ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಪರಿಸ್ಥಿತಿ ಮೇಲ್ವಿಚಾರಣೆ ಮಾಡಿ ಕೊನೆಯ ಹಂತದ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತ ಗತಿಯಲ್ಲಿ ಮತ್ತು ಸಂಪೂರ್ಣ ಎಚ್ಚರಿಕೆಯಿಂದ ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಯಂತ್ರವು ಇಲ್ಲಿಯವರೆಗೆ 46.8-ಮೀಟರ್ ಕೊರೆದಿದ್ದು, ಒಟ್ಟು 57-ಮೀಟರ್ ಕೊರೆದು ಪೈಪ್ ಗಳನ್ನು ಹಾಕುವ ಮೂಲಕ ಪ್ರತ್ಯೇಕ ದಾರಿಯನ್ನು ನಿರ್ಮಿಸಬೇಕಿದೆ. ಯಂತ್ರಕ್ಕೆ ಕಬ್ಬಿಣ ಕವಚ ಅಡ್ಡಿಯಾಗಿದ್ದು ಅದನ್ನು ಕೊರೆಯಲಾಗದ ಯಂತ್ರ ಕೆಟ್ಟು ನಿಲ್ಲುತ್ತಿದೆ.

    ನವೆಂಬರ್ 12 ರಂದು ಸುರಂಗ ಕುಸಿದಿದ್ದು ಕಳೆದ 14 ದಿನಗಳ ಕಾರ್ಮಿಕರು ಟನಲ್ ಒಳಗೆ ಸಿಲುಕಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೂ ನಿರಂತರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

  • ಅಮ್ಮ ನನ್ನ ಬಗ್ಗೆ ಚಿಂತಿಸಬೇಡ, ಸಮಯಕ್ಕೆ ಸರಿಯಾಗಿ ಊಟ ಮಾಡಿ – ಸುರಂಗದಲ್ಲಿ ಸಿಲುಕಿದ ಕಾರ್ಮಿಕನ ಭಾವುಕ ಸಂದೇಶ

    ಅಮ್ಮ ನನ್ನ ಬಗ್ಗೆ ಚಿಂತಿಸಬೇಡ, ಸಮಯಕ್ಕೆ ಸರಿಯಾಗಿ ಊಟ ಮಾಡಿ – ಸುರಂಗದಲ್ಲಿ ಸಿಲುಕಿದ ಕಾರ್ಮಿಕನ ಭಾವುಕ ಸಂದೇಶ

    ಡೆಹ್ರಾಡೂನ್‌: ʻʻಅಮ್ಮ ನನ್ನ ಬಗ್ಗೆ ಚಿಂತಿಸಬೇಡ, ನಾನು ಚೆನ್ನಾಗಿದ್ದೇನೆ, ದಯವಿಟ್ಟು ನೀವು ಮತ್ತು ಅಪ್ಪ, ಸಮಯಕ್ಕೆ ಸರಿಯಾಗಿ ಊಟ ಮಾಡಿ, ನಿಮ್ಮ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ…ʼʼ ಕಳೆದ 10 ದಿನಗಳಿಂದ ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರೊಬ್ಬರು (Labor) ತಮ್ಮ ತಾಯಿಗೆ ತಲುಪಿಸಿದ ಭಾವುಕ ಸಂದೇಶ ಇದಾಗಿತ್ತು.

    ಸಿಲ್ಕಿಯಾರ ಸುರಂಗದೊಳಗೆ (Silkyara Tunnel) ಸಿಲುಕಿರುವ 41 ಕಾರ್ಮಿಕರಿಗೆ ಕಳೆದ 10 ದಿನಗಳಿಂದ 6 ಇಂಚಿನ ಪೈಪ್ ಮೂಲಕ ನೀರು, ಆಹಾರ ಕಳುಹಿಸಲಾಗುತ್ತಿದೆ. ಇದೀಗ ಕಾರ್ಮಿಕರು ಸುರಕ್ಷಿತರಾಗಿದ್ದಾರೆಯೇ ಎಂಬುದನ್ನು ತಿಳಿದುಕೊಳ್ಳಲು ಇದೇ ಪೈಪ್ ಮೂಲಕ ಎಂಡೋಸ್ಕೋಪಿ ಕ್ಯಾಮೆರಾವನ್ನ ಸುರಂಗದೊಳಗೆ ಕಳುಸಿದ್ದು, ಕಾರ್ಮಿಕರ ದೃಶ್ಯಗಳನ್ನ ಸೆರೆಹಿಡಿಯಲಾಗಿದೆ. ಸ್ವಲ್ಪ ಸಮಯದ ನಂತ್ರ ಕಾರ್ಮಿಕರೊಂದಿಗೆ ಸಂವಹನ ನಡೆಸಲಾಗಿದ್ದು, ಇದರಿಂದ ಕಾರ್ಮಿಕರ ರಕ್ಷಣೆಗೆ ಬಹುತೇಕ ಪರಿಹಾರ ಸಿಕ್ಕಂತಾಗಿದೆ. ಇದನ್ನೂ ಓದಿ: ಭಾರತೀಯರ ಹತ್ಯೆಗೆ ಈ ಸಂಘಟನೆಯೇ ಹೊಣೆ: ಲಷ್ಕರ್‌-ಎ-ತೊಯ್ಬಾ ಬ್ಯಾನ್‌ ಮಾಡಿದ ಇಸ್ರೇಲ್‌

    ರಕ್ಷಣಾ ತಂಡದ ಅಧಿಕಾರಿಗಳು ಸುರಂಗದಲ್ಲಿ ಸಿಲುಕಿಕೊಂಡವರೊಂದಿಗೆ ಸಂವಹನ ನಡೆಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡಿದ್ದಾರೆ. ಈ ವೇಳೆ ಸುರಂಗದಲ್ಲಿ ಸಿಲುಕಿದ ಕಾರ್ಮಿಕರಲ್ಲಿ ಒಬ್ಬರಾದ ಜೈದೇವ್‌, ಮೇಲ್ವಿಚಾರಕರೊಂದಿಗೆ ಮಾತನಾಡುತ್ತಾ ತನ್ನ ಹೇಳಿಕೆಯನ್ನ ರೆಕಾರ್ಡ್‌ ಮಾಡುವಂತೆ ಕೇಳಿಕೊಂಡಿದ್ದಾರೆ. ಬಳಿಕ ಹೇಳಿಕೆಯನ್ನು ತನ್ನ ತಾಯಿಗೆ ತಲುಪಿಸುವಂತೆ ಕೋರಿಕೊಂಡಿದ್ದಾರೆ. ಮೇಲ್ವಿಚಾರಕರು ಕಾರ್ಮಿಕನ ಹೇಳಿಕೆ ರೆಕಾರ್ಡ್‌ ಮಾಡುತ್ತಿದ್ದಂತೆ, ಅಮ್ಮ ನನ್ನ ಬಗ್ಗೆ ಚಿಂತಿಸಬೇಡ, ನಾನು ಚೆನ್ನಾಗಿದ್ದೇನೆ, ದಯವಿಟ್ಟು ನೀವು ಮತ್ತು ಅಪ್ಪ ಸಮಯಕ್ಕೆ ಸರಿಯಾಗಿ ಊಟ ಮಾಡಿ ಆರೋಗ್ಯ ನೋಡಿಕೊಳ್ಳಿ ಎಂದು ಭಾವುಕ ನುಡಿಗಳನ್ನಾಡಿದ್ದಾರೆ. ಬಳಿಕ ಮೇಲ್ವಿಚಾರಕರು ಚಿಂತಿಸಬೇಡಿ ಶೀಘ್ರದಲ್ಲೇ ಸ್ಥಳಾಂತರಿಸುವುದಾಗಿ ಅಭಯ ನೀಡಿದ್ದಾರೆ.

    ಕಾರ್ಮಿಕರ ಸುರಕ್ಷತೆಗೆ ಹವನ ಯಾಗ: ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ಸುರಕ್ಷತೆಗಾಗಿ ಜಮ್ಮು ಮತ್ತು ಕಾಶ್ಮೀರ ವಿಭಾಗದ ಬಜರಂಗದಳ ಹವನ ಯಾಗ ನಡೆಸಿ ಪ್ರಾರ್ಥಿಸಿದೆ. ಇದನ್ನೂ ಓದಿ: ಹಸು ಸಗಣಿ ಕೆಜಿಗೆ 2 ರೂ., ರಾಜ್ಯದ ಪ್ರತಿ ಮಗುವಿಗೂ ಇಂಗ್ಲಿಷ್‌ ಶಿಕ್ಷಣ – ರಾಜಸ್ಥಾನಕ್ಕೆ ಕಾಂಗ್ರೆಸ್‌ ಗ್ಯಾರಂಟಿ

    ಸದ್ಯ ರಕ್ಷಣಾ ಅಧಿಕಾರಿಗಳು ವಾಕಿ ಟಾಕೀಸ್ ಮೂಲಕ ಕೆಲ ಕಾರ್ಮಿಕರೊಂದಿಗೆ ಮಾತನಾಡಿದ್ದಾರೆ. ಸೆರೆಹಿಡಿಯಲಾದ ವೀಡಿಯೋದಲ್ಲಿ ರಕ್ಷಣಾ ಅಧಿಕಾರಿಗಳು ಕಾರ್ಮಿಕರಿಗೆ ಕ್ಯಾಮೆರಾ ಮುಂದೆ ಬರುವಂತೆ ಕೇಳಿರುವುದು ಕಂಡುಬಂದಿದೆ. ಕಾರ್ಮಿಕರಿಗೆ ಮೊಬೈಲ್, ಚಾರ್ಜರ್‌ಗಳನ್ನು ಪೈಪ್ ಮೂಲಕ ಕಳುಹಿಸಲಾಗುವುದು ಎಂದು ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ಕರ್ನಲ್ ದೀಪಕ್ ಪಾಟೀಲ್ ಹೇಳಿದ್ದಾರೆ.

    ಕಾರ್ಮಿಕರು ಸುರಂಗದೊಳಗೆ ಸಿಲುಕಿದಾಗಿನಿಂದ ಅವರಿಗೆ ಸೇವಿಸಲು ಪೈಪ್ ಮೂಲಕ ಒಣ ಹಣ್ಣುಗಳನ್ನು ಮಾತ್ರವೇ ಕಳುಹಿಸಲಾಗಿತ್ತು. ಕಳೆದ ರಾತ್ರಿ ಗಾಜಿನ ಬಾಟಲಿಗಳಲ್ಲಿ ಕಿಚಡಿಯನ್ನು ತುಂಬಿ ಕಳುಹಿಸಲಾಗಿದೆ. ಈ ಮೂಲಕ 10 ದಿನಗಳ ಬಳಿಕ ಕಾರ್ಮಿಕರಿಗೆ ಬಿಸಿ ಊಟ ದೊರಕಿದಂತಾಗಿದೆ. ಇದನ್ನೂ ಓದಿ: ಸುರಂಗದೊಳಗೆ ಸಿಲುಕಿ 10 ದಿನ – ಪೈಪ್ ಮೂಲಕ ಕ್ಯಾಮೆರಾ ಕಳುಹಿಸಿ ಕಾರ್ಮಿಕರ ಮೊದಲ ವೀಡಿಯೋ ಸೆರೆ

  • ಸುರಂಗದೊಳಗೆ ಸಿಲುಕಿ 10 ದಿನ – ಪೈಪ್ ಮೂಲಕ ಕ್ಯಾಮೆರಾ ಕಳುಹಿಸಿ ಕಾರ್ಮಿಕರ ಮೊದಲ ವೀಡಿಯೋ ಸೆರೆ

    ಸುರಂಗದೊಳಗೆ ಸಿಲುಕಿ 10 ದಿನ – ಪೈಪ್ ಮೂಲಕ ಕ್ಯಾಮೆರಾ ಕಳುಹಿಸಿ ಕಾರ್ಮಿಕರ ಮೊದಲ ವೀಡಿಯೋ ಸೆರೆ

    ಡೆಹ್ರಾಡೂನ್: ಕಳೆದ 10 ದಿನಗಳಿಂದ ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarkashi) ಸುರಂಗದೊಳಗೆ (Tunnel) ಸಿಲುಕಿರುವ ಕಾರ್ಮಿಕರ ಮೊದಲ ವೀಡಿಯೋವನ್ನು (Video) ರಕ್ಷಣಾ ಅಧಿಕಾರಿಗಳು ಸೆರೆಹಿಡಿದಿದ್ದಾರೆ.

    ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರಿಗೆ ಕಳೆದ 10 ದಿನಗಳಿಂದ 6 ಇಂಚಿನ ಪೈಪ್ ಮೂಲಕ ನೀರು, ಆಹಾರವನ್ನು ಕಳುಹಿಸಲಾಗುತ್ತಿದೆ. ಇದೀಗ ಕಾರ್ಮಿಕರು ಸುರಕ್ಷಿತರಾಗಿದ್ದಾರೆಯೇ ಎಂಬುದನ್ನು ತಿಳಿದುಕೊಳ್ಳಲು ಇದೇ ಪೈಪ್ ಮೂಲಕ ಎಂಡೋಸ್ಕೋಪಿ ಕ್ಯಾಮೆರಾವನ್ನು ಸುರಂಗದೊಳಗೆ ಕಳುಸಿದ್ದು, ಕಾರ್ಮಿಕರ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

    ರಕ್ಷಣಾ ಅಧಿಕಾರಿಗಳು ವಾಕಿ ಟಾಕೀಸ್ ಮೂಲಕ ಕೆಲ ಕಾರ್ಮಿಕರೊಂದಿಗೆ ಮಾತನಾಡಿದ್ದಾರೆ. ಸೆರೆಹಿಡಿಯಲಾದ ವೀಡಿಯೋದಲ್ಲಿ ರಕ್ಷಣಾ ಅಧಿಕಾರಿಗಳು ಕಾರ್ಮಿಕರಿಗೆ ಕ್ಯಾಮೆರಾ ಮುಂದೆ ಬರುವಂತೆ ಕೇಳಿರುವುದು ಕಂಡುಬಂದಿದೆ. ಕಾರ್ಮಿಕರಿಗೆ ಮೊಬೈಲ್, ಚಾರ್ಜರ್‌ಗಳನ್ನು ಪೈಪ್ ಮೂಲಕ ಕಳುಹಿಸಲಾಗುವುದು ಎಂದು ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ಕರ್ನಲ್ ದೀಪಕ್ ಪಾಟೀಲ್ ಹೇಳಿದ್ದಾರೆ.

    ಕಾರ್ಮಿಕರು ಸುರಂಗದೊಳಗೆ ಸಿಲುಕಿದಾಗಿನಿಂದ ಅವರಿಗೆ ಸೇವಿಸಲು ಪೈಪ್ ಮೂಲಕ ಒಣ ಹಣ್ಣುಗಳನ್ನು ಮಾತ್ರವೇ ಕಳುಹಿಸಲಾಗಿತ್ತು. ಕಳೆದ ರಾತ್ರಿ ಗಾಜಿನ ಬಾಟಲಿಗಳಲ್ಲಿ ಕಿಚಡಿಯನ್ನು ತುಂಬಿ ಕಳುಹಿಸಲಾಗಿದೆ. ಈ ಮೂಲಕ 10 ದಿನಗಳ ಬಳಿಕ ಕಾರ್ಮಿಕರಿಗೆ ಬಿಸಿ ಊಟ ದೊರಕಿದಂತಾಗಿದೆ.

    ಕಳೆದ ಭಾನುವಾರ ಸುರಂಗದ ಒಂದು ಭಾಗ ಕುಸಿದ ಕಾರಣ ಅಂದಿನಿಂದ ಸುರಂಗದೊಳಗೆ 41 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಸದ್ಯ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಮತ್ತು ಅವರನ್ನು ಸುರಕ್ಷಿತವಾಗಿ ಹೊರತರಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದನ್ನೂ ಓದಿ: ವಿದ್ಯುತ್ ಕೊರತೆ ಮಧ್ಯೆ ಕಲ್ಲಿದ್ದಲು ಕಳ್ಳಾಟ – ಕಳ್ಳರ ಪಾಲಾಗುತ್ತಿದೆ ಟನ್‌ಗಟ್ಟಲೇ ಕಲ್ಲಿದ್ದಲು

    ನಿರ್ಮಾಣ ಹಂತದಲ್ಲಿರುವ ಈ ಸುರಂಗ ಚಾರ್ ಧಾಮ್ ಯೋಜನೆಯ ಭಾಗವಾಗಿದೆ. ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಕಲ್ಪಿಸುವ ಯೋಜನೆಯಾಗಿದೆ. ಇದನ್ನೂ ಓದಿ: ಸತ್ತೇ ಹೋಗಿದ್ದೇನೆ ಎಂದು ಬಿಂಬಿಸಿ ತಲೆಮರೆಸಿಕೊಂಡಿದ್ದ ರೌಡಿ ಬಂಧನ

  • ನಕಲಿ ಔಷಧಗಳ ಹಾವಳಿ- 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದು

    ನಕಲಿ ಔಷಧಗಳ ಹಾವಳಿ- 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದು

    ನವದೆಹಲಿ: ನಕಲಿ ಔಷಧಗಳನ್ನು (Spurious medicines) ತಯಾರಿಸುತ್ತಿದ್ದ ಆರೋಪದ ಮೇಲೆ 18 ಫಾರ್ಮಾ ಕಂಪನಿಗಳ (Pharma Companies) ಪರವಾನಗಿಯನ್ನು ಔಷಧ ನಿಯಂತ್ರಣ ಇಲಾಖೆ (DCGI) ರದ್ದುಗೊಳಿಸಿದೆ.

    20 ರಾಜ್ಯಗಳ 76 ಕಂಪನಿಗಳ ಮೇಲೆ ತಪಾಸಣೆ ನಡೆಸಿದ ನಂತರ ಇಲಾಖೆ ಈ ಕ್ರಮವನ್ನು ಕೈಗೊಂಡಿದೆ. ಅಲ್ಲದೆ ಹಿಮಾಚಲ ಪ್ರದೇಶದ (Himachal Pradesh) 70, ಉತ್ತರಾಖಂಡ್‍ನ (Uttarakhand) 45 ಮತ್ತು ಮಧ್ಯಪ್ರದೇಶದ 23 ಕಂಪನಿಗಳ ಮೇಲೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾನೇನಾದ್ರೂ ರೇಪ್ ಮಾಡಿದ್ನಾ: ಏನ್ ತಪ್ಪು ಮಾಡಿದ್ದೆ? – ಟಿಕೆಟ್ ಕೈತಪ್ಪಿದ್ದಕ್ಕೆ ಸವದಿ ಬೇಸರ

    ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಕ್ರಮ ಕೈಗೊಳ್ಳಲಾಗಿರುವ ಹೆಚ್ಚಿನ ಕಂಪನಿಗಳು ನೋಂದಣಿಯಾಗಿವೆ. ಡೆಹ್ರಾಡೂನ್‍ನಲ್ಲಿ ನೋಂದಾಯಿಸಲಾದ ಹಿಮಾಲಯ ಮೆಡಿಟೆಕ್ ಪ್ರೈವೇಟ್ ಲಿಮಿಟೆಡ್‍ನ ಪರವಾನಗಿಯನ್ನು 2022ರ ಡಿ.30 ರಂದು ಅಮಾನತುಗೊಳಿಸಲಾಗಿತ್ತು. 12 ಉತ್ಪನ್ನಗಳನ್ನು ತಯಾರಿಸಲು ನೀಡಿದ್ದ ಅನುಮತಿಯನ್ನು 2023ರ ಫೆ.7 ರಂದು ರದ್ದುಗೊಳಿಸಲಾಗಿತ್ತು.

    ಈ ಹಿಂದೆ ಹಿಮಾಚಲ ಪ್ರದೇಶದ ಶ್ರೀ ಸಾಯಿ ಬಾಲಾಜಿ ಕಂಪನಿಗೆ ಶೋಕಾಸ್ ನೋಟಿಸ್ ನೀಡಿ, ಔಷಧಗಳ ತಯಾರಿಕೆ ನಿಲ್ಲಿಸುವಂತೆ ಸೂಚಿಸಲಾಗಿತ್ತು. ಪರಿಶೀಲನೆಯ ನಂತರ ಹಿಂದಿನ ಆದೇಶವನ್ನು ರದ್ದುಗೊಳಿಸಲಾಗಿತ್ತು.

    ಅಲ್ಲದೆ ಇಜಿ ಫಾರ್ಮಾಸ್ಯುಟಿಕಲ್ಸ್, ವಿಲ್ ಮಂಡಲ, ತೆಹ್ ಕಸೌಲಿ, ಡಿಸ್ಟ್ ಸೋಲನ್ ಸಂಸ್ಥೆಗಳಿಗೂ ನೋಟಿಸ್ ನೀಡಲಾಗಿತ್ತು. ಪರಿಶೀಲನೆಯ ನಂತರ ಉತ್ಪಾದನೆ ನಿಷೇಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಅಥೆನ್ಸ್ ಲೈಫ್ ಸೈನ್ಸಸ್ ಕಂಪನಿಗೂ ಸಹ ಎಚ್ಚರಿಕೆಯನ್ನು ನೀಡಲಾಗಿತ್ತು.

    ಹಿಮಾಚಲದ ಸೋಲನ್‍ನ ಜಿಎನ್‍ಬಿ ಮೆಡಿಕಾ ಲ್ಯಾಬ್‍ಗೆ ಮಾತ್ರೆಗಳು, ಕ್ಯಾಪ್ಸುಲ್‍ಗಳು, ಕೆಮ್ಮಿನ ಔಷಧಿಗಳು, ಚುಚ್ಚುಮದ್ದು ಮತ್ತು ಪ್ರೋಟಿನ್ ಪೌಡರ್ ಉತ್ಪಾದನೆಯನ್ನು ನಿಲ್ಲಿಸುವಂತೆ ಆದೇಶಿಸಲಾಗಿದೆ. ಕಂಪನಿಯ ಔಷಧಗಳನ್ನು ಪರಿಶೀಲನೆಗಾಗಿ ಕಳುಹಿಸಲಾಗಿದೆ.

    ಫರಿದಾಬಾದ್‍ನಲ್ಲಿ ನೋಂದಾಯಿಸಲಾದ ನೆಸ್ಟರ್ ಕಂಪನಿಗೆ ಜ.30 ರಂದು ಶೋಕಾಸ್ ನೋಟಿಸ್ ನೀಡಲಾಗಿತ್ತು. ಪರಿಶೀಲನೆ ನಡೆಸಿದ ನಂತರ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯಿದೆಯ ಅಡಿಯಲ್ಲಿ ರೂಪಿಸಲಾದ ನಿಯಮಗಳನ್ನು ಅನುಸರಿಸಲು ಎಚ್ಚರಿಕೆ ನೀಡಲಾಗಿತ್ತು.

    ನಕಲಿ ಔಷಧಗಳ ತಯಾರಿಕೆಗೆ ಸಂಬಂಧಿಸಿದಂತೆ ದೇಶಾದ್ಯಂತ ಫಾರ್ಮಾ ಕಂಪನಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ವೇಳೆ ಶಾಂತಿ ಕದಡಲು ವಿಎಚ್‍ಪಿ ಅಧ್ಯಕ್ಷನ ಮೇಲೆ ಫೈರಿಂಗ್: ಬೋಪಯ್ಯ

  • ಅಂತರ್ಜಾತಿ ವಿವಾಹ – ದಲಿತನೆಂದು ಅಳಿಯನನ್ನೇ ಕೊಂದ ಅತ್ತೆ

    ಅಂತರ್ಜಾತಿ ವಿವಾಹ – ದಲಿತನೆಂದು ಅಳಿಯನನ್ನೇ ಕೊಂದ ಅತ್ತೆ

    ಡೆಹ್ರಾಡೂನ್: ತನ್ನ ಅಳಿಯ ದಲಿತನೆಂಬ ಕಾರಣಕ್ಕೆ ಹುಡುಗಿ ತಾಯಿಯೇ ಅಳಿಯನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಇಂದು ಉತ್ತರಾಖಂಡದ ಅಲ್ಮೊರಾ ಜಿಲ್ಲೆಯಲ್ಲಿ ನಡೆದಿದೆ.

    ಇಲ್ಲಿನ ಪನು ಅಧೋಖಾನ್ ರಾಜಕೀಯ ದಲಿತ ಮುಖಂಡ ಜಗದೀಶ್ ಚಂದ್ರ ಅವರಿಂದು ಭಿಕಿಯಾಸೈನ್ ಪಟ್ಟಣದಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಉಪ್ಪಿನ ಉಪವಿಭಾಗದ ತಹಸೀಲ್ದಾರ್ ನಿಶಾ ರಾಣಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾಯ್ ಫ್ರೆಂಡ್ ಜೊತೆ ಲಾಡ್ಜ್‌ಗೆ ಹೋಗಿದ್ದ ವಿದ್ಯಾರ್ಥಿನಿ ಹೆಣವಾದ್ಲು – ಕಾರಣ ಮಾತ್ರ ಸಸ್ಪೆನ್ಸ್

    ಮೃತದೇಹವನ್ನು ವಿಲೇವಾರಿ ಮಾಡಲು ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪತ್ನಿಯ ತಾಯಿ, ಆಕೆಯ ಮಲತಂದೆ ಹಾಗೂ ಮಲ ಸಹೋದರ ಸಿಕ್ಕಿಬಿದ್ದಿದ್ದು, ತಕ್ಷಣವೇ ಬಂಧಿಸಲಾಗಿದೆ.

    ಆಗಸ್ಟ್ 21ರಂದು ಜಗದೀಶ್ ಚಂದ್ರ ಅಂತರ್ಜಾತಿ ಮಹಿಳೆಯೊಂದಿಗೆ ವಿವಾಹವಾಗಿದ್ದರು. ತಮಗೆ ಜೀವ ಬೆದರಿಕೆ ಬಂದಿರುವುದಾಗಿ ಆಗಸ್ಟ್ 27ರಂದು ಭದ್ರತೆ ಕೋರಿ, ಆಡಳಿತಕ್ಕೆ ಪತ್ರ ಬರೆದಿದ್ದರು. ಸೂಕ್ತ ವ್ಯವಸ್ಥೆ ಕಲ್ಪಿಸ ಹಿನ್ನೆಲೆಯಲ್ಲಿ ಅವರು ಸಾವನ್ನಪ್ಪಿದ್ದಾರೆ. ನಿನ್ನೆ ಪತ್ನಿಯ ತಾಯಿಯೇ ಚಂದ್ರನನ್ನು ಅಪಹರಿಸಿ, ಹತ್ಯೆ ಮಾಡಿದ್ದಾರೆ ಎಂದು ತಹಸೀಲ್ದಾರ್ ಹೇಳಿದ್ದಾರೆ. ಇದನ್ನೂ ಓದಿ: 60 ವರ್ಷ ವಯಸ್ಸಾಗಿದ್ದು, ಹೃದಯ ತುಂಬಾ ಸೂಕ್ಷ್ಮವಾಗಿದ್ರಿಂದ ಪ್ರಾಬ್ಲಂ ಬರೋದು ಸಹಜ: ಡಾ. ರಂಗನಾಥ್

    KILLING CRIME

    ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಉತ್ತರಾಖಂಡ್ ಪರಿವರ್ತನ್ ಪಕ್ಷದ ನಾಯಕ ಪಿ.ಸಿ ತಿವಾರಿ, ಜಗದೀಶ್ ಚಂದ್ರ ಉಪ್ಪಿನ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದರು. ಅವರ ದೂರಿನ ಮೇರೆಗೆ ಭದ್ರತೆ ನೀಡಿದ್ದರೆ ರಕ್ಷಿಸಬಹುದಿತ್ತು. ಈ ಹತ್ಯೆ ಉತ್ತರಾಖಂಡ್‌ಗೆ ನಾಚಿಗೇಡಿನ ಸಂಗತಿಯಾಗಿದೆ. ಮೃತರ ಪತ್ನಿಗೆ 1 ಕೋಟಿ ರೂ. ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]