Tag: ಉತ್ತರಾಖಂಡ

  • ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ: ಕೃಷ್ಣಬೈರೇಗೌಡ

    ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ: ಕೃಷ್ಣಬೈರೇಗೌಡ

    ಬೆಂಗಳೂರು: ಹಿಮಪಾತದಿಂದ ಉತ್ತರಾಖಂಡದ (Uttarakhand) ಉತ್ತರಕಾಶಿ (Uttarkashi) ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ (Trekking) ತೆರಳಿದ್ದ 20 ಜನರ ಪೈಕಿ 9 ಮಂದಿ ಸಾವನ್ನಪ್ಪಿದ್ದು, ಮೃತ ಚಾರಣಿಗರ ಮೃತದೇಹವನ್ನು ಚಾರ್ಟರ್ ಫ್ಲೈಟ್ (Charter Flight) ಮೂಲಕ ಬೆಂಗಳೂರಿಗೆ ರವಾನಿಸುವ ಸಲುವಾಗಿ ಉತ್ತರಾಖಂಡ ಮುಖ್ಯಕಾರ್ಯದರ್ಶಿ ರಾಧಾ ರಾತುರಿ ಅವರ ಜೊತೆ ಕೃಷ್ಣಬೈರೇಗೌಡ (Krishna Byre Gowda) ಮಾತುಕತೆ ನಡೆಸಿದ್ದಾರೆ. ಮಾತುಕತೆ  ಬಳಿಕ ಉತ್ತರಾಖಂಡ ಮುಖ್ಯಕಾರ್ಯದರ್ಶಿ ಚಾರ್ಟರ್ ಫ್ಲೈಟ್ ಮೂಲಕ ಮೃತದೇಹವನ್ನು ಸಾಗಿಸಲು ಒಪ್ಪಿಕೊಂಡಿದ್ದಾರೆ ಎಂದು ಕೃಷ್ಣಬೈರೇಗೌಡ ತಿಳಿಸಿದ್ದಾರೆ.

    ಉತ್ತರಕಾಶಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 11 ಗಂಟೆಗೆ ಎಲ್ಲಾ 9 ಮೃತದೇಹಗಳನ್ನು ವಿಮಾನದಲ್ಲಿ ಡೆಹ್ರಾಡೂನ್‌ಗೆ ತರಲಾಗುವುದು. ಡೆಹ್ರಾಡೂನ್‌ನಲ್ಲಿ ಎಂಬಾಮಿಂಗ್ ಮಾಡಲಾಗುವುದು. ಎಲ್ಲಾ 9 ಶವಗಳನ್ನು ಬೆಂಗಳೂರಿಗೆ ಸಾಗಿಸಲು ನಾವು ಚಾರ್ಟರ್ ಫ್ಲೈಟ್ ಅನ್ನು ಗುರುತಿಸುತ್ತಿದ್ದೇವೆ. ನಾನೀಗ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಲು ಹೊರಟಿದ್ದೇನೆ. ಮುಖ್ಯ ಕಾರ್ಯದರ್ಶಿಯವರೊಂದಿಗಿನ ನನ್ನ ಸಭೆಯ ನಂತರ ಮೃತದೇಹಗಳ ರವಾನೆಯ ಬಗ್ಗೆ ಸ್ಪಷ್ಟತೆ ನೀಡಬಹುದು ಎಂದು ನಾನು ಭಾವಿಸುತ್ತೇನೆ ಎಂದು ಕೃಷ್ಣಬೈರೇಗೌಡ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ತಿಳಿಸಿದ್ದರು.

    ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದ ಸಾವನ್ನಪ್ಪಿದ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಮೃತರನ್ನು ಪದ್ಮನಾಭ ಕೆ.ಪಿ, ವೆಂಕಟೇಶ್ ಪ್ರಸಾದ್ ಕೆ, ಅನಿತಾ ರಂಗಪ್ಪ, ಪದ್ಮಿನಿ ಹೆಗಡೆ ಎಂದು ಗುರುತಿಸಲಾಗಿದೆ. ಇನ್ನು ಬುಧವಾರ 8 ಜನ ಚಾರಣಿಗರನ್ನು ರಕ್ಷಿಸಿದ್ದು, ಸುರಕ್ಷಿತವಾಗಿ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ.

    ಎಸ್‌ಡಿಆರ್‌ಎಫ್‌ನಿಂದ ಸುರಕ್ಷಿತವಾಗಿ ರಕ್ಷಿಸಲ್ಪಟ್ಟ 11 ಚಾರಣಿಗರ ವಿವರ:
    ಜೈ ಪ್ರಕಾಶ್ ವಿ.ಎಸ್ (61), ಗಿರಿನಗರ ಬೆಂಗಳೂರು ನಿವಾಸಿ
    ಭರತ್ ವಿ (53), ಹಂಪಿನಗರ, ಬೆಂಗಳೂರು ನಿವಾಸಿ
    ಅನೀಲ್ ಭಟ್ (52), ನಿವಾಸಿ ಜೋಪ್ ನಗರ ಬೆಂಗಳೂರು
    ಮಧುಕಿರಣ್ ರೆಡ್ಡಿ (52), ಬೆಂಗಳೂರು ನಿವಾಸಿ
    ಶೀನ ಲಕ್ಷ್ಮಿ (48), ಕೆ.ಆರ್.ಪುರಂ ಬೆಂಗಳೂರು ನಿವಾಸಿ
    ಶೌಮ್ಯಾ ಕೆ (31), ಬೆಂಗಳೂರು ನಿವಾಸಿ
    ಶಿವ ಜ್ಯೋತಿ (45), ಹೆಚ್‌ಎಸ್‌ಆರ್ ಬೆಂಗಳೂರು ನಿವಾಸಿ
    ಸ್ಮೂರ್ತಿ ಪ್ರಕಾಶ್ ಡೋಲಾಸ್ (45), ಮಹಾರಾಷ್ಟ್ರದ ಪುಣೆ ನಿವಾಸಿ
    ವಿನಾಯಕ್ ಎಂ.ಕೆ (47), ರೆಸಿಡೆಂಟ್ ಪ್ರೆಸ್ಟೀಜ್ ಸಿಟಿ, ಬೆಂಗಳೂರು
    ಶ್ರೀರಾಮಲ್ಲು ಸುಧಾಕರ್ (64), ಬೆಂಗಳೂರು ಎಸ್‌ಆರ್‌ಕೆ ನಗರ ನಿವಾಸಿ
    ವಿವೇಕ್ ಶ್ರೀಧರ್ (37), ಬೆಂಗಳೂರು,

    ಸೌಮ್ಯಾ ಕೆನಾಲೆ, ಸ್ಮೃತಿ ಡೋಲಾಸ್, ಶೀನಾ ಲಕ್ಷ್ಮಿ, ಎಸ್ ಶಿವಜ್ಯೋತಿ, ಅನಿಲ್ ಜಮತಿಗೆ ಅರುಣಾಚಲ ಭಟ್, ಭರತ್ ಬೊಮ್ಮನ ಗೌಡರ್, ಮಧು ಕಿರಣ್ ರೆಡ್ಡಿ, ಜೈಪ್ರಕಾಶ್ ಬಿಎಸ್ ಎಂಬವರನ್ನು ಸುರಕ್ಷಿತವಾಗಿ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ. ಎಸ್ ಸುಧಾಕರ್, ವಿನಯ್ ಎಂಕೆ, ವಿವೇಕ್ ಶ್ರೀಧರ್, ನವೀನ್ ಎ, ರಿತಿಕಾ ಜಿಂದಾಲ್ ಎಂಬ 5 ಚಾರಣಿಗರನ್ನು ಕೂಡ ರಕ್ಷಿಸಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಉತ್ತರಕಾಶಿಯಿಂದ ಡೆಹ್ರಾಡೂನ್‌ಗೆ ವಿಮಾನದಲ್ಲಿ ಕಳುಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

    ಬುಧವಾರ ಉತ್ತರಕಾಶಿಗೆ ರವಾನಿಸಿದ ಮೃತದೇಹಗಳು:
    ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಚಾರಣಿಗರ ಮೃತದೇಹಗಳನ್ನು ವಿಮಾನದ ಮೂಲಕ ಉತ್ತರಕಾಶಿಗೆ ರವಾನಿಸಲಾಗಿದೆ. ಮೃತರನ್ನು ಸಿಂಧು ವಕೆಲಂ, ಆಶಾ ಸುಧಾಕರ್, ಸುಜಾತಾ ಮುಂಗುರವಾಡಿ, ವಿನಾಯಕ ಮುಂಗುರವಾಡಿ ಹಾಗೂ ಚಿತ್ರಾ ಪ್ರಣೀತ್ ಎಂದು ಗುರುತಿಸಲಾಗಿದೆ.

    ಜೂನ್ 3 ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ. ಚಾರಣದ ಗಮ್ಯ ತಲುಪಿ ವಾಪಸ್ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತ ಪ್ರಾರಂಭವಾಗಿದೆ.

  • ಬೆಂಗಳೂರಿನಿಂದ ಹೊರಟ ಚಾರಣಿಗರಿಗೆ ನಿಜಕ್ಕೂ ಆಗಿದ್ದೇನು..?

    ಬೆಂಗಳೂರಿನಿಂದ ಹೊರಟ ಚಾರಣಿಗರಿಗೆ ನಿಜಕ್ಕೂ ಆಗಿದ್ದೇನು..?

    ಬೆಂಗಳೂರು: ಉತ್ತರಾಖಂಡದ (Uttarakhand) ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ ಐವರು ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿರುವ ಹಲವರ ರಕ್ಷಣಾ ಕಾರ್ಯಾಚರಣೆ ಹಿನ್ನೆಲೆ ಕರ್ನಾಟಕದ ಸಚಿವ ಕೃಷ್ಣಬೈರೇಗೌಡ (Krishna Byre Gowda) ಅವರು ಉತ್ತರಾಖಂಡಕ್ಕೆ ತೆರಳಿದ್ದಾರೆ.

    ಡೆಹ್ರಾಡೂನ್‌ನ ಬಿಜಾಪುರ ಅತಿಥಿ ಗೃಹದಲ್ಲಿ ರಕ್ಷಿಸಲ್ಪಟ್ಟ 8 ಚಾರಣಿಗರನ್ನು ಭೇಟಿಯಾಗಲು ಸಚಿವರು ಹೋಗಿದ್ದಾರೆ. ಉತ್ತರಾಖಂಡದಲ್ಲಿ ಪರಿಸ್ಥಿತಿ ಏನಾಗಿದೆ ಎಂಬ ಬಗ್ಗೆ ಸಚಿವರು ವಿವರ ಹಂಚಿಕೊಂಡಿದ್ದಾರೆ. ಕರ್ನಾಟಕದಿಂದ ಚಾರಣಕ್ಕೆ ಹೊರಟಿದ್ದ ಸುಜಾತಾ ಮುಂಗುರವಾಡಿ (52), ಆಶಾ ಸುಧಾಕರ್ (72), ಸಿಂಧು ವಕೆಲಂ (45), ವಿನಾಯಕ ಮುಂಗುರವಾಡಿ, ಚಿತ್ರಾ ಪ್ರಣೀತ್ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ಐವರು ಸೇರಿ 9 ಮಂದಿ ಸಾವು

    ನಿಜಕ್ಕೂ ಅಲ್ಲಿ ಆಗಿದ್ದೇನು?
    ಡೆಹ್ರಾಡೂನ್‌ ಚಾರಣಿಗರ ತಂಡದೊಂದಿಗಿನ ಚರ್ಚೆಯಿಂದ ಸಂಗ್ರಹಿಸಿದ ಮಾಹಿತಿಯನ್ನು ಸಚಿವ ಕೃಷ್ಣಬೈರೇಗೌಡ ಮಾಹಿತಿ ಹಂಚಿಕೊಂಡಿದ್ದಾರೆ.

    ಜೂನ್ 3 ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ.

    ಚಾರಣದ ಗಮ್ಯ ತಲುಪಿ ವಾಪಸ್‌ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಅವರು ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತವು ಪ್ರಾರಂಭವಾಗಿದೆ. ಸಂಜೆ 4 ಗಂಟೆಯ ಹೊತ್ತಿಗೆ ಹಿಮಪಾತವು ತೀವ್ರಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಇಬ್ಬರು ಚಾರಣಿಗರು ಹವಾಮಾನ ವೈಪರೀತ್ಯಕ್ಕೆ ಬಲಿಯಾಗಿದ್ದಾರೆ. ಹಿಮ ಮತ್ತು ಹಿಮಗಾಳಿಯು ಚಾರಣಿಗರು ವಾಪಸ್‌ ಶಿಬಿರಕ್ಕೆ ಹಿಂದಿರುಗುವುದನ್ನು ಅಸಾಧ್ಯಗೊಳಿಸಿದೆ. ಗೋಚರತೆಯೂ ಶೂನ್ಯಕ್ಕೆ ಇಳಿದಿದೆ.

    ಆ ರಾತ್ರಿ ಎಲ್ಲರೂ ಒಟ್ಟಿಗೆ ಕಳೆದಿದ್ದಾರೆ. ಆದರೆ, ಈ ವೇಳೆ ಹಿಮಗಾಳಿಯ ತೀವ್ರತೆಗೆ ಕೆಲವರು ಅದೇ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 4 ರ ಬೆಳಗ್ಗೆ, ಮೊಬೈಲ್ ಸಂಪರ್ಕ ಸಿಗಬಹುದಾದ ಸ್ಥಳಕ್ಕೆ ತಂಡದ ಮಾರ್ಗದರ್ಶಕ ತಲುಪಿದ್ದಾನೆ. ಈ ನಡುವೆ ಶಿಬಿರಕ್ಕೆ ಹಿಂತಿರುಗುವ ಸ್ಥಿತಿಯಲ್ಲಿದ್ದ ಕೆಲವು ಚಾರಣಿಗರು ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಬಿರದ ಕಡೆಗೆ ಹೊರಟಿದ್ದಾರೆ. ಮಾರ್ಗದರ್ಶಕ ಶಿಬಿರಕ್ಕೆ ಬಂದು, ಸಿಕ್ಕಿಬಿದ್ದ ಚಾರಣಿಗರನ್ನು ಕಾಪಾಡಲು ಬೇಕಾದ ಸಾಮಗ್ರಿಗಳೊಂದಿಗೆ ಮತ್ತೆ ಹಿಂತಿರುಗಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದವರ ರಕ್ಷಣೆಗೆ ಕ್ರಮ – ಕೃಷ್ಣಬೈರೇಗೌಡಗೆ ರಕ್ಷಣಾ ಕಾರ್ಯದ ಹೊಣೆ

    ಜೂನ್ 4 ರ ಸಂಜೆ ವೇಳೆಗೆ ಮಾರ್ಗದರ್ಶಿಯು ಫೋನ್ ಸಿಗ್ನಲ್ ಲಭ್ಯವಿರುವ ಸ್ಥಳವನ್ನು ತಲುಪಿಕೊಂಡಿದ್ದು, ಪರಿಸ್ಥಿತಿಯ ಬಗ್ಗೆ ಕರ್ನಾಟಕ ಪರ್ವತಾರೋಹಣ ಸಂಸ್ಥೆ ಮತ್ತು ಭಾರತೀಯ ಪರ್ವತಾರೋಹಣ ಒಕ್ಕೂಟ ಸಂಸ್ಥೆಗಳಿಗೆ ದುರ್ಘಟನೆಯ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿದ್ದಾರೆ. ಕರ್ನಾಟಕ ಮತ್ತು ಉತ್ತರಾಖಂಡ ಸರ್ಕಾರಗಳು ಜೂನ್ 4 ರ ರಾತ್ರಿ ವೇಳೆಗೆ ರಕ್ಷಣಾ ಕಾರ್ಯಾಚರಣೆಗಳ ಸಿದ್ಧತೆಗಳನ್ನು ಪ್ರಾರಂಭಿಸಿತ್ತು. ಭೂ ಸೇನೆ, ವಾಯುಪಡೆ, ಎಸ್‌ಡಿಆರ್‌ಎಫ್ ಮತ್ತು ವಿವಿಧ ಸರ್ಕಾರಿ-ಸರ್ಕಾರೇತರ ಸಂಸ್ಥೆಗಳು ಜೂನ್ 5 ರ ಬೆಳಿಗ್ಗೆ 5 ಗಂಟೆ ವೇಳೆಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಸಚಿವರು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

    ಚಾರಣಕ್ಕೆ ಹೋಗಿದ್ದವರು ಇವರು
    ಭರತ್‌ ಬೊಮ್ಮನ ಗೌಡರ್‌, ಆಶಾ ಸುಧಾಕರ್‌, ಕೆ.ಪಿ.ಪದ್ಮನಾಭ, ವಿವೇಕ್‌ ಶ್ರೀಧರ್‌, ಸೌಮ್ಯಾ ಕನಾಲೆ, ಬಿ.ಎಸ್‌.ಜಯಪ್ರಕಾಶ್‌, ಎಸ್‌.ಸುಧಾಕರ್‌, ಸಿಂಧು ವಕೇಕಮಲ್‌, ರಿತಿಕಾ ಜಿಂದಾಲ್‌, ಎ.ನವೀನ್‌, ಎಸ್‌.ಶಿವ ಜ್ಯೋತಿ, ಎಂ.ಕೆ.ವಿನಯ್‌, ಶೀನಾ ಲಕ್ಷ್ಮಿ, ಕೆ.ಎನ್.ವೆಂಕಟೇಶ ಪ್ರಸಾದ್‌, ಅನಿತಾ ರಂಗಪ್ಪ, ಪದ್ಮಿನಿ ಹೆಗ್ಡೆ, ಮಧು ಕಿರಣ್‌ ರೆಡ್ಡಿ, ಚಿತ್ರಾ ಪ್ರಣೀತ್‌, ವಿನಾಯಕ್‌ ಮುಂಗರ್‌ವಾಡಿ, ಸುಜಾತಾ ಮುಂಗುರ್‌ವಾಡಿ, ಸ್ಮೃತಿ ಡೋಲಸ್‌, ಅನಿಲ್‌ ಭಟ್ಟ. ಇದನ್ನೂ ಓದಿ:

  • ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದವರ ರಕ್ಷಣೆಗೆ ಕ್ರಮ – ಕೃಷ್ಣಬೈರೇಗೌಡಗೆ ರಕ್ಷಣಾ ಕಾರ್ಯದ ಹೊಣೆ

    ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದವರ ರಕ್ಷಣೆಗೆ ಕ್ರಮ – ಕೃಷ್ಣಬೈರೇಗೌಡಗೆ ರಕ್ಷಣಾ ಕಾರ್ಯದ ಹೊಣೆ

    – ಹವಾಮಾನ ವೈಪರೀತ್ಯದಿಂದ ಐವರು ಕರ್ನಾಟಕದವರ ಸಾವು: ಸಿಎಂ ಸಂತಾಪ

    ಬೆಂಗಳೂರು: ಉತ್ತರಾಖಂಡದ (Uttarakhand) ಶಾಸ್ತ್ರತಾಳ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ಐವರು ಮೃತಪಟ್ಟಿದ್ದು, ಇನ್ನೂ ಕೆಲವರು ಅಪಾಯದಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಸಚಿವ ಕೃಷ್ಣಬೈರೇಗೌಡರಿಗೆ (Krishna Byre Gowda) ಉಸ್ತುವಾರಿ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿದ್ದರಾಮಯ್ಯ (Siddaramaiah), ಉತ್ತರಾಖಂಡದ ಶಾಸ್ತ್ರತಾಳ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದವರು ಸೇರಿ 9 ಮಂದಿ ಸಾವು

    ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

    ಸಚಿವರಾದ ಕೃಷ್ಣಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜೀನಾಮೆ ಪತ್ರ ವೈರಲ್-‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದೇನು?

  • ಉತ್ತರಾಖಂಡದಲ್ಲಿ ಕನ್ನಡಿಗ ಪ್ರವಾಸಿಗರ ನಾಪತ್ತೆ ಪ್ರಕರಣ- ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

    ಉತ್ತರಾಖಂಡದಲ್ಲಿ ಕನ್ನಡಿಗ ಪ್ರವಾಸಿಗರ ನಾಪತ್ತೆ ಪ್ರಕರಣ- ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

    ಬೆಂಗಳೂರು: ಉತ್ತರಾಖಂಡದಲ್ಲಿ (Uttarakhand) ಕನ್ನಡಿಗ ಪ್ರವಾಸಿಗರು ನಾಪತ್ತೆ ಪ್ರಕರಣ ಸಂಬಂಧ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಉತ್ತರಾಖಂಡದ ಉತ್ತರಕಾಶಿಯ ಸಹಸ್ತ್ರ ತಾಲ್‌ಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕರ್ನಾಟಕದ 18 ಮಂದಿ ಪ್ರವಾಸಿಗರು ಸೇರಿ 22 ಜನ ನಾಪತ್ತೆಯಾಗಿರುವ ಸುದ್ದಿ ವರದಿಯಾಗಿದೆ. ಪ್ರತಿಕೂಲ ವಾತಾವರಣದಿಂದ ದಿಕ್ಕು ತಪ್ಪಿರಬಹುದಾದ ಸಾಹಸಿ ಚಾರಣಿಗರು ಸುರಕ್ಷಿತವಾಗಿ ವಾಪಸ್ ಬರುವಂತಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

    ಈ ನಿಟ್ಟಿನಲ್ಲಿ ಅವರನ್ನು ಪತ್ತೆ ಹಚ್ಚಲು ನಡೆಯುತ್ತಿರುವ ಕಾರ್ಯಾಚರಣೆ ಯಶಸ್ವಿಯಾಗುವಂತೆ ಹಾಗೂ ಕರ್ನಾಟಕ ಸರ್ಕಾರ ಉತ್ತರಾಖಂಡ ಸರ್ಕಾರದೊಂದಿಗೆ ಈ ಕೂಡಲೇ ಸಂಪರ್ಕ ಬೆಳೆಸಿ 18 ಕನ್ನಡಿಗ ಪ್ರವಾಸಿಗರೂ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಬರುವಂತಾಗಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿ ಎಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಪರ ಜನ ನಿಂತಿಲ್ಲ ಅನ್ನಿಸುತ್ತೆ.. ಗ್ಯಾರಂಟಿಗಳಿಗೆ ಹಿನ್ನಡೆಯಾಗಿದೆ: ಸಚಿವ ಚಲುವರಾಯಸ್ವಾಮಿ

    ಕನ್ನಡಿಗರು ಸೇರಿ 9 ಮಂದಿ ಸಾವು: ಉತ್ತರಾಖಂಡದಲ್ಲಿ (Uttarakhand) ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ (Karnataka) ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ. ಮೇ 29ರಿಂದ ಜೂನ್ 7ರವರೆಗೆ ಭಟವಾಡಿ ಮಲ್ಲಾ – ಸಿಲ್ಲಾ – ಕುಶಕಲ್ಯಾಣ – ಸಹಸ್ತ್ರತಾಲ್ ಟ್ರೆಕ್ಕಿಂಗ್‌ಗೆ (Trekking) ಅನುಮತಿ ಪಡೆದಿದ್ದರು.

    9 ಚಾರಣಿಗರು ಮೃತಪಟ್ಟಿದ್ದನ್ನು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ದೇವೇಂದ್ರ ಪಟವಾಲ್ ಖಚಿತ ಪಡಿಸಿದ್ದಾರೆ.
    ಮೃತರನ್ನು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್‌ (50) ವಿನಾಯಕ್ ಎಂದು ಗುರುತಿಸಲಾಗಿದೆ.

  • ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ಐವರು ಸೇರಿ 9 ಮಂದಿ ಸಾವು

    ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ಐವರು ಸೇರಿ 9 ಮಂದಿ ಸಾವು

    ಡೆಹ್ರಾಡೂನ್‌: ಉತ್ತರಾಖಂಡದಲ್ಲಿ (Uttarakhand) ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ (Karnataka) ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ.

    ಕರ್ನಾಟಕದಿಂದ ಚಾರಣಕ್ಕೆ ಹೊರಟಿದ್ದ ಸುಜಾತಾ ಮುಂಗುರವಾಡಿ (52), ಆಶಾ ಸುಧಾಕರ್ (72), ಸಿಂಧು ವಕೆಲಂ (45), ವಿನಾಯಕ ಮುಂಗುರವಾಡಿ, ಚಿತ್ರಾ ಪ್ರಣೀತ್ ಮೃತಪಟ್ಟಿದ್ದಾರೆ.

    ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್‌ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ (Sahastra Tal) ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ ಕನಾಲೆ, ಶೀನಾ ಲಕ್ಷ್ಮಿ, ಎಸ್.ಶಿವ ಜ್ಯೋತಿ, ಅನಿಲ್ ಜಮತಿಗೆ ಅರುಣಾಚಲ ಭಟ್, ಭರತ್ ಬೊಮ್ಮನ ಗೌಡರ್, ಮಧು ಕಿರಣ್ ರೆಡ್ಡಿ, ಜಯಪ್ರಕಾಶ್ ಬಿ.ಎಸ್. ಅವರನ್ನು ರಕ್ಷಣೆ ಮಾಡಲಾಗಿದೆ.


    ನಾಟಿನ್-ಭಟ್ವಾಡಿಯಲ್ಲಿ ಎಸ್.ಸುಧಾಕರ್, ವಿನಯ್ ಎಂ.ಕೆ, ವಿವೇಕ್ ಶ್ರೀಧರ್ ಚಾರಣಿಗರನ್ನು ರಕ್ಷಿಸಲಾಗಿದೆ. ಎ.ನವೀನ್‌, ರಿತಿಕಾ ಜಿಂದಾಲ್ ಅವರು ಸಿಲ್ಲಾ ಗ್ರಾಮವನ್ನು ತಲುಪಿದ್ದಾರೆ.

    9 ಚಾರಣಿಗರು ಮೃತಪಟ್ಟಿದ್ದನ್ನು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ದೇವೇಂದ್ರ ಪಟವಾಲ್ ಖಚಿತ ಪಡಿಸಿದ್ದಾರೆ. ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು. ಗಢವಾಲ್‌ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದು ಭಾರತೀಯ ವಾಯುಪಡೆಯ ನೆರವನ್ನು ಪಡೆಯಲಾಗುತ್ತಿದೆ.

  • ಪತಂಜಲಿ ಆಯುರ್ವೇದದ ವಿರುದ್ಧ ಕ್ರಮ ಕೈಗೊಳ್ಳದ ಉತ್ತರಾಖಂಡ್ ಸರ್ಕಾರಕ್ಕೆ ಸುಪ್ರೀಂ ಚಾಟಿ

    ಪತಂಜಲಿ ಆಯುರ್ವೇದದ ವಿರುದ್ಧ ಕ್ರಮ ಕೈಗೊಳ್ಳದ ಉತ್ತರಾಖಂಡ್ ಸರ್ಕಾರಕ್ಕೆ ಸುಪ್ರೀಂ ಚಾಟಿ

    ನವದೆಹಲಿ: ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಆಯುರ್ವೇದ (Patanjali Ayurveda) ವಿರುದ್ಧ ಕ್ರಮ ಕೈಗೊಳ್ಳದೆ ನಿಷ್ಕ್ರಿಯತೆ ತೋರಿದ ಉತ್ತರಾಖಂಡ್ (Uttarakhand) ರಾಜ್ಯ ಪರವಾನಗಿ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಚಾಟಿ ಬೀಸಿದೆ. ನ್ಯಾಯಾಲಯದ ಆದೇಶಗಳನ್ನು ಪರವಾನಗಿ ಪ್ರಾಧಿಕಾರ ಪಾಲಿಸುತ್ತಿಲ್ಲ ಎಂದು ಹೇಳಿದೆ.

    ನ್ಯಾ. ಹಿಮಾ ಕ್ಲೊಹಿ ನೇತೃತ್ವದ ದ್ವಿ-ಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿತು. ಸರ್ಕಾರದ ಪರ ವಾದ ಮಂಡಿಸಿದ ವಕೀಲರು ಪತಂಜಲಿ ಮತ್ತು ಅದರ ಸಹೋದರ ಸಂಸ್ಥೆ ದಿವ್ಯಾ ಫಾರ್ಮಸಿಯ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಗಳನ್ನು ಏಪ್ರಿಲ್ 15 ರಂದು ‘ತಕ್ಷಣದ ಪರಿಣಾಮ’ ದೊಂದಿಗೆ ಅಮಾನತುಗೊಳಿಸಲಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ಜಮ್ಮು, ಕಾಶ್ಮೀರದಲ್ಲಿ ಪ್ರವಾಹ- ಐವರ ದುರ್ಮರಣ

    ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪತಂಜಲಿ ಉತ್ಪನ್ನಗಳನ್ನು ಯಾವಗ ನಿಷೇಧಿಸಲಾಗಿದೆ ಎಂದು ಪ್ರಶ್ನಿಸಿತು. ನಾವು ಆಕ್ಷೇಪ ವ್ಯಕ್ತಪಡಿಸಿದ ಮೇಲೆ ನಿಷೇಧ ಹೇರಲಾಯಿತೆ ಅಥವಾ ಅದಕ್ಕೂ ಮುನ್ನ ನಿಷೇಧ ಮಾಡಲಾಗಿತ್ತೆ ಎಂದು ಸ್ಪಷ್ಟನೆ ಕೇಳಿತು. ಪತಂಜಲಿ ವಿರುದ್ಧ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿತು. ಇದನ್ನೂ ಓದಿ: ಪ್ರಜ್ವಲ್ ಪ್ರಕರಣವನ್ನು ಕಾಂಗ್ರೆಸ್ ಎನ್‌ಡಿಎ ಅಪರಾಧ ಅನ್ನೋ ಥರ ಬಿಂಬಿಸಲು ಯತ್ನಿಸುತ್ತಿದೆ: ಸಿ.ಟಿ ರವಿ

    ಬಳಿಕ ಪತಂಜಲಿ ಬೇಷರತ್ ಕ್ಷಮೆ ಬಗ್ಗೆ ಆಲಿಸಿದ ಕೋರ್ಟ್ ನಮಗೆ ಇ-ಪ್ರತಿಗಳು ಬೇಡ, ಮುದ್ರಣವಾಗಿರುವ ಅಸಲಿ ಪ್ರತಿಗಳನ್ನು ನಮಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು. ಇದೇ ವೇಳೆ ಮುಂದಿನ ವಿಚಾರಣೆಗೆ ಖುದ್ದು ಹಾಜರಾತಿಯಿಂದ ಯೋಗ ಗುರು ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ವಿನಾಯತಿ ನೀಡಲಾಯಿತು. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ 7 ಮಂದಿ ನಕ್ಸಲರ ಹತ್ಯೆ

  • ಉತ್ತರಾಖಂಡ ಪ್ರಾಧಿಕಾರದಿಂದ 14 ಪತಂಜಲಿ ಉತ್ಪನ್ನಗಳ ಲೈಸನ್ಸ್‌ ರದ್ದು

    ಉತ್ತರಾಖಂಡ ಪ್ರಾಧಿಕಾರದಿಂದ 14 ಪತಂಜಲಿ ಉತ್ಪನ್ನಗಳ ಲೈಸನ್ಸ್‌ ರದ್ದು

    ಡೆಹ್ರಾಡೂನ್‌: ಬಾಬಾ ರಾಮ್‌ದೇವ್ (Baba Ramdev) ಅವರ ದಿವ್ಯ ಫಾರ್ಮಸಿ ಮತ್ತು ಪತಂಜಲಿ (Patanjali) ಆಯುರ್ವೇದ್ ಲಿಮಿಟೆಡ್ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿರುವುದಾಗಿ ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಔಷಧ ಜಾಹೀರಾತು ಕಾನೂನನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಅವರ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಿದೆ.

    ಕಾನೂನಿಗೆ ವಿರುದ್ಧವಾದ ಜಾಹೀರಾತುಗಳನ್ನು ಪ್ರಕಟಿಸಿದರೆ ದಂಡ, ಜೈಲು ಶಿಕ್ಷೆ ಅಥವಾ ಎರಡನ್ನೂ ಒಳಗೊಂಡಂತೆ ಕಠಿಣ ಶಿಸ್ತು ಮತ್ತು ಕಾನೂನು ಕ್ರಮಗಳನ್ನು ರಾಜ್ಯ ಪರವಾನಗಿ ಪ್ರಾಧಿಕಾರವು (ಎಸ್‌ಎಲ್‌ಎ) ತೆಗೆದುಕೊಳ್ಳುತ್ತದೆ ಎಂದು ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ

    ಎಸ್‌ಎಲ್‌ಎ ಏ.15 ರಂದು ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ಆದೇಶ ಹೊರಡಿಸಿದ್ದು, ಅದರಲ್ಲಿ ಅವರ 14 ಉತ್ಪನ್ನಗಳಾದ ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಳೇಹ್, ಮುಕ್ತಾವತಿ ಎಕ್ಸ್‌ಟ್ರಾ ಪವರ್, ಲಿಪಿಡೋಮ್, ಬಿಪಿ ಗ್ರಿಟ್, ಮಧುಗ್ರಿತ್, ಮಧುನಾಶಿನಿವತಿ ಎಕ್ಸ್‌ಟ್ರಾ ಪವರ್, ಲಿವಾಮೃತ್ ಅಡ್ವಾನ್ಸ್, ಲಿವೋಗ್ರಿಟ್, ಐಗ್ರಿಟ್ ಗೋಲ್ಡ್ ಮತ್ತು ಪತಂಜಲಿ ದೃಷ್ಟಿ ಐ ಡ್ರಾಪ್ ಅನ್ನು ದಿ ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ರೂಲ್ಸ್, 1945 ರ ನಿಯಮ 159 (1) ರ ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪರವಾನಗಿ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

    ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ಕಾನೂನಿನಲ್ಲಿ ಸೂಚಿಸಲಾದ ಕಾರ್ಯವಿಧಾನ ಮತ್ತು ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುವುದಾಗಿ SLA ಹೇಳಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ

  • ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದವರನ್ನು ರಕ್ಷಿಸಿದ್ದ ರ‍್ಯಾಟ್ ಹೋಲ್ ಮೈನಿಂಗ್ ಹೀರೋ ಮನೆ ನೆಲಸಮಗೊಳಿಸಿದ ಅಧಿಕಾರಿಗಳು

    ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದವರನ್ನು ರಕ್ಷಿಸಿದ್ದ ರ‍್ಯಾಟ್ ಹೋಲ್ ಮೈನಿಂಗ್ ಹೀರೋ ಮನೆ ನೆಲಸಮಗೊಳಿಸಿದ ಅಧಿಕಾರಿಗಳು

    – ಮಗಳ ಪರೀಕ್ಷೆಗೆ ಹಾಜರಾಗಲಿಲ್ಲ ಎಂದು ಕಣ್ಣೀರಿಟ್ಟ ತಾಯಿ

    ನವದೆಹಲಿ: ಕಳೆದ ವರ್ಷ ಉತ್ತರಾಖಂಡದಲ್ಲಿ (Uttarakhand )‌ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದ ರ‍್ಯಾಟ್-ಹೋಲ್ ಗಣಿಗಾರಿಕೆ ತಜ್ಞ ವಕೀಲ್ ಹಸನ್ ಅವರ ಮನೆಯನ್ನು ಅಕ್ರಮ ಎಂದು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಇದರಿಂದ ತಮ್ಮ ಮಗಳು ಗುರುವಾರ ಬರೆಯಬೇಕಾಗಿದ್ದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಅವರ ಕುಟುಂಬ ಹೇಳಿಕೊಂಡಿದೆ.

    ಹಸನ್ ಅವರ ಪುತ್ರಿಯ ಪುಸ್ತಕಗಳು ಮತ್ತು ಶಾಲಾ ಸಮವಸ್ತ್ರ ಸೇರಿದಂತೆ ಮನೆಯ ವಸ್ತುಗಳು ಮನೆಯ ಅವಶೇಷಗಳ ಅಡಿ ಸಿಲುಕಿವೆ. ಇದರಿಂದ 10ನೇ ತರಗತಿ ವಿದ್ಯಾರ್ಥಿನಿಯಾದ ಅಲಿಜಾ ವಿಜ್ಞಾನ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಅವರ ಕುಟುಂಬದ ಸದಸ್ಯರು ಹೇಳಿಕೊಂಡಿದ್ದಾರೆ.

    ಪರೀಕ್ಷೆಯ ದಿನದಂದು ನನ್ನ ಮಗಳು ರಸ್ತೆಯಲ್ಲಿ ನಿಂತಿದ್ದಾಳೆ. ಆಕೆಯ ಪುಸ್ತಕಗಳು, ಶಾಲಾ ಉಡುಗೆ ಎಲ್ಲವೂ ಅವಶೇಷಗಳ ಅಡಿಯಲ್ಲಿ ಎಲ್ಲೋ ಚದುರಿಹೋಗಿವೆ ಎಂದು ಹಸನ್ ಅವರ ಪತ್ನಿ ಸಬಾನಾ ಮಾಧ್ಯಮಗಳ ಮುಂದೆ ದುಃಖವನ್ನು ತೋಡಿಕೊಂಡಿದ್ದಾರೆ.

    ದೆಹಲಿ ಅಭಿವೃದ್ಧಿ ಪ್ರಾಧಿಕಾರ (Delhi Development Authority) ಅಧಿಕಾರಿಗಳು ಮನೆಗೆ ಬಂದಾಗ ನಮ್ಮ ಮಗ ಮತ್ತು ಮಗಳು ಮಾತ್ರ ಮನೆಯಲ್ಲಿ ಇದ್ದರು. ಈ ವೇಳೆ ಬೇರೆ ಯಾರು ಮನೆಯಲ್ಲಿ ಇರಲಿಲ್ಲ. ಬಳಿಕ ಮಾಹಿತಿ ತಿಳಿದು ನಾನು ಮತ್ತು ನನ್ನ ಪತಿ ಇಲ್ಲಿಗೆ ಬಂದು ಅಧಿಕಾರಿಗಳಿಗೆ ಮನವಿ ಮಾಡಿಕೊಂಡೆವು. ಉತ್ತರಾಖಂಡ್‍ನ ಸುರಂಗದಲ್ಲಿ ಸಿಲುಕಿದವರ ರಕ್ಷಣೆಯಲ್ಲಿ ಹಸನ್ ಪಾತ್ರವನ್ನು ತಿಳಿಸಿದೆವು ಆದರೂ ಅಧಿಕಾರಿಗಳು ಮನೆಯನ್ನು ಕೆಡವಿದ್ದಾರೆ ಎಂದು ಸಬಾನಾ ಅವರು ಹೇಳಿಕೊಂಡಿದ್ದಾರೆ.

    ಇನ್ನೂ ಉತ್ತರಕಾಶಿಯ ಸಿಲ್ಕ್ಯಾರಾ ಬರ್ಕೋಟ್ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ವಕೀಲ್ ಅವರ ಕೊಡುಗೆಯ ಬಗ್ಗೆ ನಮಗೆ ತಿಳಿದಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಪರೀಕ್ಷೆಯಲ್ಲಿ ತಪ್ಪಿಸಿಕೊಂಡ ನಂತರ ಅಲಿಜಾ ತನ್ನ ಶಿಕ್ಷಕರೊಂದಿಗೆ ಮಾತನಾಡಿದ್ದಾಳೆ, ಅವರು ಸಹಾಯ ಮಾಡುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿದು ಬಂದಿದೆ.

  • ಯಾವುದೇ ಧರ್ಮದವರಿಗೂ 2ನೇ ಮದುವೆ ಅವಕಾಶವಿಲ್ಲ, ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ – UCC ಮಸೂದೆಯಲ್ಲಿ ಏನಿದೆ?

    ಯಾವುದೇ ಧರ್ಮದವರಿಗೂ 2ನೇ ಮದುವೆ ಅವಕಾಶವಿಲ್ಲ, ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ – UCC ಮಸೂದೆಯಲ್ಲಿ ಏನಿದೆ?

    – ಉತ್ತರಾಖಂಡದಲ್ಲಿ ಐತಿಹಾಸಿಕ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

    ಡೆಹ್ರಾಡೂನ್‌: ಉತ್ತರಾಖಂಡ (Uttarakhand) ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆ ಮಂಡನೆ ಆಗಿದೆ. ಲಿವ್ ಇನ್ ಸಂಬಂಧಕ್ಕೆ (Live in Relationship) ನೋಂದಣಿ ಕಡ್ಡಾಯ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ. ಇದು ಉತ್ತರಾಖಂಡ ಸರ್ಕಾರ ಮಂಡಿಸಿದ ಐತಿಹಾಸಿಕ ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು.

    ಮಸೂದೆಯಲ್ಲಿ ಏನಿದೆ?
    ರಾಜ್ಯದ ಮುಸ್ಲಿಮರು (Muslims) ಸೇರಿದಂತೆ ಎಲ್ಲಾ ಧರ್ಮದವರು ಎರಡನೇ ವಿವಾಹವಾಗುವುದು ಅಪರಾಧ. ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ.  ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ. ಇದನ್ನೂ ಓದಿ: ಆಸ್ಟ್ರೇಲಿಯಾ ಸೆನೆಟರ್‌ ಆಗಿ ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ವರುಣ್‌

    ಲಿವ್ ಇನ್ ಸಂಬಂಕ್ಕೆ ನೋಂದಣಿ ಕಡ್ಡಾಯ ಮಾಡಲಾಗಿದೆ. ನೋಂದಣಿ 1 ತಿಂಗಳು ತಡವಾದರೆ 3 ತಿಂಗಳು ಜೈಲು, 25ಸಾವಿರ ದಂಡ ವಿಧಿಸಲಾಗುತ್ತದೆ. ನೋಂದಣಿ ಸಂಶಯಾಸ್ಪದ ಆಗಿದ್ದರೆ ತನಿಖೆ ನಡೆಸಲಾಗುತ್ತದೆ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ ಸೇರಿದಂತೆ ಆಸ್ತಿಯಲ್ಲೂ ಸಮಪಾಲು ಸಿಗಲಿದೆ. ಲಿವ್ ಇನ್ ಸಂಗಾತಿ ತೊರೆದಲ್ಲಿ ಜೀವನಾಂಶ ಪಡೆಯಬಹುದು. ಸಂಬಂಧ ಮುಂದುವರಿಸಲು ಇಷ್ಟವಿಲ್ಲದ ಜೋಡಿ, ದಾಖಲೆಗಳನ್ನು ಸಲ್ಲಿಸಿ ಲಿಖಿತ ಹೇಳಿಕೆ ನೀಡಿ ಲಿವ್‌ ಇನ್‌ ಸಂಬಂಧ ಕಡಿತಗೊಳಿಸಬಹುದು.

    ಈ ಮಸೂದೆಯಿಂದ ಬುಡಕಟ್ಟು ಸಮುದಾಯವನ್ನು ಹೊರಗಿಡಲಾಗಿದೆ.  ಇದನ್ನೂ ಓದಿ: ರಾಜ್ಯಪಾಲ ಗೆಹ್ಲೋಟ್‌ ಮೊಮ್ಮಗನ ವಿವಾಹ ಆರತಕ್ಷತೆ – ಸಿಎಂ, ಡಿಸಿಎಂ ಭಾಗಿ

    ಅತ್ಯಾಚಾರ ಅಥವಾ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಪತಿಗೆ ವಿಚ್ಛೇದನ ನೀಡುವ ಹಕ್ಕನ್ನು ಮಸೂದೆ ಮಹಿಳೆಯರಿಗೆ ನೀಡುತ್ತದೆ. ಮದುವೆಯಾದ ಒಂದೇ ವರ್ಷದೊಳಗೆ ವಿವಾಹ ವಿಚ್ಛೇದನ ಪಡೆಯುವುದನ್ನು ಅಸಾಧಾರಣ ಸಂದರ್ಭ ಹೊರತುಪಡಿಸಿ ಉಳಿದ ಸನ್ನಿವೇಶಗಳಲ್ಲಿ ನಿರ್ಬಂಧಿಸುವ ಅಂಶವಿದೆ. ಅತ್ಯಾಚಾರ ಪ್ರಕರಣದಲ್ಲಿ ಪತಿ ಪತಿ ಸಿಲುಕಿದರೆ ಆತನಿಂದ ಪತ್ನಿ ವಿಚ್ಛೇದನ ಕೇಳಬಹುದು.

    ವಿವಾಹವಾದ 60 ದಿನದ ಒಳಗಡೆ ನೋಂದಣಿ ಮಾಡಿಸಬೇಕು. 2010ರ ಮಾ.26ರ ನಂತರ ಮದುವೆಯಾದವರು 6 ತಿಂಗಳೊಳಗೆ ನೋಂದಣಿ ಮಾಡಿಸುವುದು ಕಡ್ಡಾಯ. ನಿರ್ಲಕ್ಷಿಸಿದರೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಆದರೆ ನೋಂದಣಿಯಾಗದ ವಿವಾಹವನ್ನು ಅಸಿಂಧು ಎಂದು ಪರಿಗಣನೆ ಮಾಡುವುದಿಲ್ಲ.

     

    ವಿರೋದಿಸಲ್ಲ ಎಂದ ಕಾಂಗ್ರೆಸ್‌:
    ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದ್ದಾರೆ. ಈ ವೇಳೆ ಬಿಜೆಪಿ ಶಾಸಕರು ವಂದೇಮಾತರಂ, ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರು.

    ವಿಶೇಷ ಏನೆಂದರೆ ನಾವು ಏಕರೂಪ ನಾಗರಿಕಾ ಸಂಹಿತೆ ವಿಧೇಯಕವನ್ನು ನಾವು ವಿರೋಧಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು (Congress Leaders) ಹೇಳಿಕೊಂಡಿದ್ದಾರೆ. ವಿಸ್ತೃತ ಚರ್ಚೆ ನಂತರ ಈ ವಿಧೇಯಕವನ್ನು ಮತಕ್ಕೆ ಹಾಕಲಾಗುತ್ತದೆ. ಇದಕ್ಕೆ ಅನುಮೋದನೆ ಸಿಕ್ಕರೆ ಸ್ವಾತಂತ್ರ್ಯದ ನಂತರ ದೇಶದಲ್ಲೇ ಮೊದಲ ಬಾರಿಗೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದ ಗರಿಮೆಗೆ ಉತ್ತರಾಖಂಡ್ ಪಾತ್ರವಾಗಲಿದೆ.

    ಪೋರ್ಚುಗೀಸರ ಕಾಲದಿಂದಲೂ ಗೋವಾದಲ್ಲಿ ಏಕರೂಪ ನಾಗರಿಕಾ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ರಾಜಸ್ಥಾನದಲ್ಲೂ ಯುಸಿಸಿ ಜಾರಿಗೆ ಬಿಜೆಪಿ ಸರ್ಕಾರ ಮುಂದಾಗಿದೆ. ಈಗಾಗಲೇ ಚರ್ಚೆಗಳು ನಡೆಯುತ್ತಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಗಳಿವೆ.

    ಏಕರೂಪದ ನಾಗರಿಕ ಸಂಹಿತೆ ರಚನೆ ಸಂಬಂಧ ಉತ್ತರಾಖಂಡ ಸರ್ಕಾರ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶ ರಂಜನಾ ಪ್ರಕಾಶ್‌ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಈ ಸಮಿತಿ 4 ಸಂಪುಟ ಹೊಂದಿರುವ 749 ಪುಟಗಳಿರುವ ವರದಿ ಮತ್ತು ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿತ್ತು.

  • ಏಕರೂಪ ನಾಗರಿಕ ಸಂಹಿತೆ ವರದಿಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ

    ಏಕರೂಪ ನಾಗರಿಕ ಸಂಹಿತೆ ವರದಿಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ

    ಡೆಹ್ರಾಡೂನ್: ಏಕರೂಪ ನಾಗರಿಕ ಸಂಹಿತೆ (Uniform Civil Code) ವರದಿಗೆ ಉತ್ತರಾಖಂಡ ಸಚಿವ ಸಂಪುಟ ಭಾನುವಾರ ಅನುಮೋದನೆ ನೀಡಿದೆ.

    ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅಧ್ಯಕ್ಷತೆಯಲ್ಲಿ ಅವರ ನಿವಾಸದಲ್ಲಿ ನಡೆದ ಸಂಪುಟ ಸಭೆಯಲ್ಲಿ ಯುಸಿಸಿ ವರದಿಗೆ ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: ಶ್ರೀಲಂಕಾ ನೌಕಾಪಡೆಯಿಂದ ಮತ್ತೆ 23 ಭಾರತೀಯ ಮೀನುಗಾರರ ಬಂಧನ

    ಏಕರೂಪ ನಾಗರಿಕ ಸಂಹಿತೆಯ ಅಂತಿಮ ಕರಡನ್ನು ಉತ್ತರಾಖಂಡ ಮುಖ್ಯಮಂತ್ರಿ ಅವರಿಗೆ ತಜ್ಞರ ಸಮಿತಿ ಈಚೆಗೆ ಸಲ್ಲಿಸಿತ್ತು.

    ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್‌ ದೇಸಾಯಿ ನೇತೃತ್ವದ ಐವರು ಸದಸ್ಯರ ಸಮಿತಿಯು ಈ ಕರಡನ್ನು ಸಿಎಂಗೆ ಹಸ್ತಾಂತರಿಸಿತ್ತು. ಇದನ್ನೂ ಓದಿ: ತಾಯಿ ತನ್ನ ತಂಗಿಯನ್ನೇ ಹೆಚ್ಚು ಪ್ರೀತಿಸ್ತಾರೆ ಅಂತಾ ಬುರ್ಕಾ ಧರಿಸಿ ಸ್ವಂತ ಮನೆಗೆ ಕನ್ನ ಹಾಕಿದ ಮಗಳು

    2022 ರ ವಿಧಾನಸಭೆ ಚುನಾವಣೆ ವೇಳೆ ರಾಜ್ಯದ ಜನರಿಗೆ ನೀಡಿದ್ದ ಭರವಸೆ ಈಡೇರಿಸುವ ಕಡೆಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ.