Tag: ಉತ್ತರ ಪ್ರದೇಶ ಸರ್ಕಾರ

  • ಕುಂಭಮೇಳ ಕಾಲ್ತುಳಿತ | ಬೆಳಗಾವಿಯ ಮೃತರ ಕುಟುಂಬಸ್ಥರಿಗೆ ಯುಪಿ ಸರ್ಕಾರದಿಂದ 1 ಕೋಟಿ ಪರಿಹಾರ ಹಣ ಜಮೆ

    ಕುಂಭಮೇಳ ಕಾಲ್ತುಳಿತ | ಬೆಳಗಾವಿಯ ಮೃತರ ಕುಟುಂಬಸ್ಥರಿಗೆ ಯುಪಿ ಸರ್ಕಾರದಿಂದ 1 ಕೋಟಿ ಪರಿಹಾರ ಹಣ ಜಮೆ

    – ಮೃತ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷದಂತೆ ಪರಿಹಾರ

    ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ (MahaKumbhamela Stampede) ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ (Belagavi) ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ (Uttara Pradesh) ಸರ್ಕಾರ ನೀಡಿದೆ.

    ಜ.13 ರಿಂದ ಮಾ.26 ವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಜ.29 ರಂದು ಮೌನಿ ಅಮವಾಸ್ಯೆ ಪ್ರಯುಕ್ತ ಪುಣ್ಯಸ್ನಾನದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಕಾಲ್ತುಳಿತ ದುರಂತದಲ್ಲಿ ಬೆಳಗಾವಿ ಮೂಲದ ನಾಲ್ವರಾದ ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ, ಅರುಣ ಕೋಪರ್ಡೆ, ಮಹಾದೇವಿ ಬಾವನೂರ ಮೃತಪಟ್ಟಿದ್ದರು. ಇದನ್ನೂ ಓದಿ: ಉಡುಪಿ| ನಟೋರಿಯಸ್ ರೌಡಿ ಇಸಾಕ್ ಕಾಲಿಗೆ ಗುಂಡೇಟು

    ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜ.29 ರಂದು ಮೃತರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಪರಿಹಾರ ಘೋಷಿಸಿದಂತೆ ಕಾಲ್ತುಳಿತ ಸಂಭವಿಸಿದ 40 ದಿನಗಳ ಬಳಿಕ ಇಂದು ಪರಿಹಾರ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅಕೌಂಟ್‌ಗೆ ಹಣ ಜಮೆಯಾಗಿದೆ.

    ಈ ಕುರಿತು ಸ್ವತಃ ಡಿಸಿ ಮಾಹಿತಿ ಹಂಚಿಕೊಂಡಿದ್ದು, ಕುಟುಂಬಸ್ಥರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಪರಿಹಾರ ಮೊತ್ತ ಜಮೆಯಾಗಿದೆ. ನಾಲ್ವರಿಗೆ ತಲಾ 25 ಲಕ್ಷ ರೂ.ಯಂತೆ 1 ಕೋಟಿ ರೂ. ಪರಿಹಾರ ವಿತರಣೆಯಾಗಿದ್ದು, ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡುವಂತೆ ಜಿಲ್ಲಾಡಳಿತದಿಂದ ವರದಿ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಶಬ್ದ ನಿಯಂತ್ರಣಕ್ಕೆ ಕ್ರಮ: ಯೋಗಿ ಆದಿತ್ಯನಾಥ್‌

     

  • ಯೋಗಿ ಸರ್ಕಾರದಿಂದ ಐತಿಹಾಸಿಕ ಬಜೆಟ್ ಮಂಡನೆ – ಆರ್ಥಿಕ, ಸಾಮಾಜಿಕ ಕಲ್ಯಾಣಕ್ಕೆ ಆದ್ಯತೆ

    ಯೋಗಿ ಸರ್ಕಾರದಿಂದ ಐತಿಹಾಸಿಕ ಬಜೆಟ್ ಮಂಡನೆ – ಆರ್ಥಿಕ, ಸಾಮಾಜಿಕ ಕಲ್ಯಾಣಕ್ಕೆ ಆದ್ಯತೆ

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸರ್ಕಾರವು 2025-2026ರ ಹಣಕಾಸು ವರ್ಷಕ್ಕೆ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದೆ. ಹಣಕಾಸು ಸಚಿವ ಸುರೇಶ್ ಖನ್ನಾ 8.09 ಲಕ್ಷ ಕೋಟಿ (8,08,736 ಕೋಟಿ ರೂ.) ರೂ.ಗಳ ಐತಿಹಾಸಿಕ ಬಜೆಟ್ ಅನ್ನು ಮಂಡಿಸಿದರು.

    ಉತ್ತರ ಪ್ರದೇಶದ (Uttara Pradesh) ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಜೆಟ್ ಇದಾಗಿದ್ದು, ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಕಲ್ಯಾಣದತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ರಾಜ್ಯದ ಆರ್ಥಿಕ ಶಕ್ತಿ, ಕೈಗಾರಿಕಾ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಸಿದ್ಧಪಡಿಸಲಾಗಿದೆ ಎಂದು ಹಣಕಾಸು ಸಚಿವ ಸುರೇಶ್ ಖನ್ನಾ ಹೇಳಿದರು.ಇದನ್ನೂ ಓದಿ:ಗುರುಪ್ರಸಾದ್‌ ನಿರ್ದೇಶನದ ಎದ್ದೇಳು ಮಂಜುನಾಥ 2 ಸಿನಿಮಾ ಬಿಡುಗಡೆಗೆ ತಡೆ

    ಬಜೆಟ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಶೇ.22, ಶಿಕ್ಷಣಕ್ಕೆ ಶೇ.13, ಕೃಷಿ ಮತ್ತು ಸಂಬAಧಿತ ಸೇವೆಗಳಿಗೆ ಶೇ.11, ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಶೇ.6, ಸಾಮಾಜಿಕ ಭದ್ರತಾ ಕಾರ್ಯಕ್ರಮಗಳಿಗೆ ಶೇ.4ರಷ್ಟು ಸಂಪನ್ಮೂಲಗಳನ್ನು ಹಂಚಿಕೆ ಮಾಡಲಾಗಿದೆ. ಬಜೆಟ್‌ನಲ್ಲಿ ಬಂಡವಾಳ ವೆಚ್ಚವು ಒಟ್ಟು ಬಜೆಟ್‌ನ ಸುಮಾರು 20.5 ಪ್ರತಿಶತದಷ್ಟಿದೆ.

    ರಾಜ್ಯದಲ್ಲಿ ಮೂಲಸೌಕರ್ಯ ಮತ್ತು ಹೂಡಿಕೆಯನ್ನು ಉತ್ತೇಜಿಸಲು ಮತ್ತು ಮೂಲಸೌಕರ್ಯವನ್ನು ಬಲಪಡಿಸಲು ಸರ್ಕಾರವು ಬಜೆಟ್‌ನ ಶೇಕಡ 22ರಷ್ಟು ಹಣವನ್ನು ನಿಗದಿಪಡಿಸಿದೆ. ಇದರಲ್ಲಿ ರಸ್ತೆ ನಿರ್ಮಾಣ, ಕೈಗಾರಿಕಾ ವಿಸ್ತರಣೆ, ಸಾರಿಗೆ ವ್ಯವಸ್ಥೆ ಮತ್ತು ಹೂಡಿಕೆ ಆಕರ್ಷಿಸುವಂತಹ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ.

    ಶಿಕ್ಷಣವನ್ನು ಮತ್ತಷ್ಟು ಬಲಪಡಿಸಲು ಯೋಗಿ ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ಶೇಕಡಾ 13ರಷ್ಟು ಬಜೆಟ್ ಅನ್ನು ನಿಗದಿಪಡಿಸಿದೆ. ಪ್ರಾಥಮಿಕ ಮತ್ತು ಉನ್ನತ ಮಾಧ್ಯಮಿಕ ಶಾಲೆಗಳಲ್ಲಿ ಐಸಿಟಿ ಪ್ರಯೋಗಾಲಯಗಳು ಮತ್ತು ಸ್ಮಾರ್ಟ್ ತರಗತಿಗಳನ್ನು ಸ್ಥಾಪಿಸಲು ಇದು ಪ್ರಸ್ತಾಪಿಸುತ್ತದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಜಿಟಲ್ ಗ್ರಂಥಾಲಯಗಳು ಮತ್ತು ಸ್ಮಾರ್ಟ್ ತರಗತಿಗಳನ್ನು ಪ್ರಾರಂಭಿಸುವ ಯೋಜನೆಗಳು ಸಹ ಸೇರಿವೆ. ಇದಲ್ಲದೆ, ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು ವಿಶೇಷ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಇದನ್ನೂ ಓದಿ: ಎಲ್ಲೋ ಜೋಗಪ್ಪ ನಿನ್ನರಮನೆ – ಭರತನಾಟ್ಯ ಪ್ರವೀಣೆಗೊಲಿದ ಚೆಂದದ ಪಾತ್ರ!

    ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆಯನ್ನು ಉತ್ತೇಜಿಸಲು ಮತ್ತು ಉತ್ತರ ಪ್ರದೇಶವನ್ನು ತಾಂತ್ರಿಕ ಕೇಂದ್ರವನ್ನಾಗಿ ಮಾಡಲು, ಯೋಗಿ ಸರ್ಕಾರವು ಬಜೆಟ್ ಮೂಲಕ ಹಲವಾರು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಪ್ರಸ್ತಾಪಿಸಿದೆ. ಇದರಲ್ಲಿ `ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಿಟಿ’ ಸ್ಥಾಪನೆಯಾಗಲಿದ್ದು, ಇದು ರಾಜ್ಯವನ್ನು ತಾಂತ್ರಿಕ ನಾವೀನ್ಯತೆಯ ಕೇಂದ್ರವನ್ನಾಗಿ ಮಾಡುತ್ತದೆ. ಸೈಬರ್ ಸೆಕ್ಯುರಿಟಿಯಲ್ಲಿ ತಂತ್ರಜ್ಞಾನ ಸಂಶೋಧನಾ ಅನುವಾದ ಪಾರ್ಕ್ ಅನ್ನು ಸ್ಥಾಪಿಸುವ ಯೋಜನೆಯೂ ಇದೆ. ಇದು ಡಿಜಿಟಲ್ ಭದ್ರತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕೃತಕ ಬುದ್ಧಿಮತ್ತೆಯನ್ನು ಉತ್ತೇಜಿಸಲು ಶ್ರೇಷ್ಠತಾ ಕೇಂದ್ರವನ್ನು ಸ್ಥಾಪಿಸುವುದೂ ಈ ಪ್ರಸ್ತಾವನೆಯಲ್ಲಿ ಸೇರಿದೆ.

    ರಾಜ್ಯದಲ್ಲಿ ವಿಜ್ಞಾನ ಮತ್ತು ಸಂಶೋಧನೆಯನ್ನು ಉತ್ತೇಜಿಸಲು ಸರ್ಕಾರ ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ಇದರಲ್ಲಿ ವಿಜ್ಞಾನ ನಗರ, ವಿಜ್ಞಾನ ಉದ್ಯಾನವನ ಮತ್ತು ತಾರಾಲಯಗಳನ್ನು ಸ್ಥಾಪಿಸುವ ಮತ್ತು ಹಳೆಯ ಸಂಸ್ಥೆಗಳ ನವೀಕರಣದ ಯೋಜನೆಯೂ ಸೇರಿದೆ. ವಿದ್ಯಾರ್ಥಿಗಳಿಗೆ ಆಧುನಿಕ ವೈಜ್ಞಾನಿಕ ಸೌಲಭ್ಯಗಳನ್ನು ಒದಗಿಸಲು ವಿಶೇಷ ಗಮನ ನೀಡಲಾಗುವುದು. ರಾಜ್ಯದ 58 ನಗರ ಸಂಸ್ಥೆಗಳನ್ನು `ಆದರ್ಶ ಸ್ಮಾರ್ಟ್ ಮುನ್ಸಿಪಲ್ ಬಾಡೀಸ್’ ಆಗಿ ಅಭಿವೃದ್ಧಿಪಡಿಸಲಾಗುವುದು. ಸ್ಮಾರ್ಟ್ ಸಿಟಿ ಅಭಿವೃದ್ಧಿ ಯೋಜನೆಯಡಿ ಪ್ರತಿ ಪುರಸಭೆಗೆ 2.50 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಇದರ ಮೂಲಕ ಒಟ್ಟು 145 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುವುದು. ಈ ನಗರಗಳಲ್ಲಿ ಆಧುನಿಕ ಸೌಲಭ್ಯಗಳು, ತಾಂತ್ರಿಕ ನಾವೀನ್ಯತೆ ಮತ್ತು ಸ್ವಚ್ಛತಾ ನಿರ್ವಹಣೆಗೆ ಆದ್ಯತೆ ನೀಡಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಕಾರ್ಮಿಕ/ಕಾರ್ಮಿಕ ಶಿಬಿರಗಳನ್ನು ರಚಿಸಲಾಗುವುದು. ಇವುಗಳಲ್ಲಿ ಕ್ಯಾಂಟೀನ್, ಕುಡಿಯುವ ನೀರು, ಸ್ನಾನಗೃಹಗಳು ಮತ್ತು ಶೌಚಾಲಯಗಳಂತಹ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಯೋಜನೆಯು ಕಾರ್ಮಿಕರ ಉದ್ಯೋಗ ಮತ್ತು ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಸಹಾಯಕವಾಗಿದೆ ಎಂದು ಹೇಳಿದರು.

    ಯೋಗಿ ಸರ್ಕಾರವು ಅಕ್ಟೋಬರ್ 2, 2024 ರಿಂದ `ಶೂನ್ಯ ಬಡತನ ಅಭಿಯಾನ’ವನ್ನು ಪ್ರಾರಂಭಿಸಿದೆ. ಈ ಅಭಿಯಾನದಡಿಯಲ್ಲಿ, ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಿಂದ ಬಡ ಕುಟುಂಬಗಳನ್ನು ಗುರುತಿಸಲಾಗುತ್ತದೆ. ಈ ಕುಟುಂಬಗಳ ವಾರ್ಷಿಕ ಆದಾಯವನ್ನು 1,25,000 ರೂ.ಗೆ ತಂದು ಅವರ ಮೂಲಭೂತ ಅಗತ್ಯಗಳನ್ನು ಪೂರೈಸುವ ಗುರಿಯನ್ನು ಸರ್ಕಾರ ಹೊಂದಿದೆ.

    ರಾಜ್ಯದ ಅಭಿವೃದ್ಧಿ, ತಾಂತ್ರಿಕ ಪ್ರಗತಿ, ಶಿಕ್ಷಣ ಸುಧಾರಣೆ, ಬಡವರ ಕಲ್ಯಾಣ ಮತ್ತು ಮೂಲಸೌಕರ್ಯ ವಿಸ್ತರಣೆಯನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶದ ಈ ಬಜೆಟ್ ಅನ್ನು ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ರಾಜ್ಯವು ಆಧುನಿಕತೆ, ನಾವೀನ್ಯತೆ ಮತ್ತು ಸ್ವಾವಲಂಬನೆಯತ್ತ ಸಾಗುತ್ತಿದೆ. ರಾಜ್ಯವನ್ನು ರಾಷ್ಟ್ರೀಯ ಮತ್ತು ಜಾಗತಿಕ ಹೂಡಿಕೆಯ ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಬಜೆಟ್ ಬಲವಾದ ಹೆಜ್ಜೆಯಾಗಿದೆ ಎಂದು ಹೇಳಿದರು.ಇದನ್ನೂ ಓದಿ:ಚಿಕ್ಕಮಗಳೂರಲ್ಲಿ ಯುವಕ, ಯುವತಿ ಸಾವು ಕೇಸ್‌ಗೆ ಟ್ವಿಸ್ಟ್ – ಹುಡ್ಗಿ ಕೊಲೆ ಮಾಡಿ ಹುಡ್ಗ ಸೂಸೈಡ್!

  • ಮಾನ್ಯತೆ ಇಲ್ಲದ ಮದರಸಾಗಳ ಆದಾಯ ಪರಿಶೀಲಿಸಲು ಮುಂದಾದ ಯುಪಿ ಸರ್ಕಾರ

    ಮಾನ್ಯತೆ ಇಲ್ಲದ ಮದರಸಾಗಳ ಆದಾಯ ಪರಿಶೀಲಿಸಲು ಮುಂದಾದ ಯುಪಿ ಸರ್ಕಾರ

    ಲಕ್ನೋ: ರಾಜ್ಯದಲ್ಲಿ ಮಾನ್ಯತೆ ಪಡೆಯದ ಮದರಸಾಗಳಲ್ಲಿರುವ ಶಿಕ್ಷಕರ ಸಂಖ್ಯೆ, ಪಠ್ಯಕ್ರಮ ಮತ್ತು ಅಲ್ಲಿ ಲಭ್ಯವಿರುವ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಉತ್ತರ ಪ್ರದೇಶ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗಿದೆ.

    ಈ ಕುರಿತಂತೆ ಪ್ರತಿಕ್ರಿಯಿಸಿರುವ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಅವರು, ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‍ಸಿಪಿಸಿಆರ್) ಅಗತ್ಯಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಬಂದ ಪಾರ್ಸೆಲ್‍ಗಳನ್ನು ಬೀಸಾಡಿದ ಸಿಬ್ಬಂದಿ – ವೈರಲ್ ವೀಡಿಯೋಗೆ ರೈಲ್ವೆ ಇಲಾಖೆ ಸ್ಪಷ್ಟನೆ

    ಶೀಘ್ರದಲ್ಲೇ ಸಮೀಕ್ಷೆ ಆರಂಭವಾಗಲಿದೆ. ಸಮೀಕ್ಷೆ ವೇಳೆ ಮದರಸಾದ ಹೆಸರು ಮತ್ತು ಅದನ್ನು ನಿರ್ವಹಿಸುವ ಸಂಸ್ಥೆ, ಅದು ಖಾಸಗಿ ಅಥವಾ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆಯೋ, ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಕುಡಿಯುವ ನೀರು, ಶೌಚಾಲಯ, ಪೀಠೋಪಕರಣಗಳು ಮತ್ತು ವಿದ್ಯುತ್ ಸರಬರಾಜು ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಜೊತೆಗೆ ಮದರಸಾದಲ್ಲಿರುವ ಶಿಕ್ಷಕರ ಸಂಖ್ಯೆ, ಪಠ್ಯಕ್ರಮ, ಆದಾಯದ ಮೂಲ ಮತ್ತು ಯಾವುದೇ ಸರ್ಕಾರೇತರ ಸಂಸ್ಥೆ (ಎನ್‍ಜಿಒ)ಯೊಂದಿಗೆ ಹೊಂದಿರುವ ಸಂಬಂಧದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದಿದ್ದಾರೆ.

    ಈ ಸಮೀಕ್ಷೆಯ ನಂತರ ರಾಜ್ಯ ಸರ್ಕಾರ ಹೊಸ ಮದರಸಾಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆಯೇ ಎಂಬ ಪ್ರಶ್ನೆಗೆ, ಸದ್ಯ ಮಾನ್ಯತೆ ಇಲ್ಲದ ಮದರಸಾಗಳ ಬಗ್ಗೆ ಮಾತ್ರ ಮಾಹಿತಿ ಸಂಗ್ರಹಿಸುವುದು ಸರ್ಕಾರದ ಉದ್ದೇಶವಾಗಿದೆ. ಪ್ರಸ್ತುತ ಉತ್ತರ ಪ್ರದೇಶದಲ್ಲಿ ಒಟ್ಟು 16,461 ಮದರಸಾಗಳಿದ್ದು, ಈ ಪೈಕಿ 560ಕ್ಕೆ ಸರ್ಕಾರದ ಅನುದಾನ ನೀಡಿರುವುದು ಗಮನಾರ್ಹವಾಗಿದೆ. ರಾಜ್ಯದಲ್ಲಿ ಕಳೆದ ಆರು ವರ್ಷಗಳಿಂದ ಹೊಸ ಮದರಸಾಗಳು ಅನುದಾನದ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಗರ್ಭಿಣಿ ಪ್ರವಾಸಿ ಸಾವು- ಪೋರ್ಚುಗಲ್‍ನ ಆರೋಗ್ಯ ಸಚಿವೆ ರಾಜೀನಾಮೆ

    Live Tv
    [brid partner=56869869 player=32851 video=960834 autoplay=true]

  • ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ನೀಡಿರೋ ನೋಟಿಸ್‌ ಹಿಂತೆಗೆದುಕೊಳ್ಳಿ – ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

    ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ನೀಡಿರೋ ನೋಟಿಸ್‌ ಹಿಂತೆಗೆದುಕೊಳ್ಳಿ – ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ ನಾಶಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

    ಸಾರ್ವಜನಿಕ ಆಸ್ತಿ ನಾಶದ ನಷ್ಟ ವಸೂಲಾತಿಗಾಗಿ ಪ್ರತಿಭಟನಾಕಾರರಿಗೆ ನೀಡಿರುವ ನೋಟಿಸ್‌ನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು. ಇಲ್ಲವೇ ನಾವೇ ರದ್ದುಗೊಳಿಸುತ್ತೇವೆ ಎಂದು ಯೋಗಿ ನೇತೃತ್ವದ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಹಿಜಬ್‌ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ: ಅಮೆರಿಕ

    ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಸೂರ್ಯ ಕಾಂತ ಅವರಿದ್ದ ನ್ಯಾಯಪೀಠ, ವಸೂಲಾತಿಗೆ ಸಂಬಂಧಿಸಿದಂತೆ ನೀಡಿರುವ ನೋಟಿಸ್‌ ಅನ್ನು ಸರ್ಕಾರ ಹಿಂತೆಗೆದುಕೊಳ್ಳಲು ಕೊನೆಯ ಅವಕಾಶ ನೀಡಲಾಗಿದೆ. ಇಲ್ಲವಾದಲ್ಲಿ ಕಾನೂನು ಉಲ್ಲಂಘನೆ ಎಂದು ನಾವೇ ರದ್ದುಗೊಳಿಸುತ್ತೇವೆ ಎಂದು ತಿಳಿಸಿದೆ.

    ಉತ್ತರ ಪ್ರದೇಶ ಸರ್ಕಾರವು ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ನಡೆಸುವಲ್ಲಿ ಸ್ವತಃ ದೂರುದಾರ, ತೀರ್ಪುಗಾರ ಮತ್ತು ಪ್ರಾಸಿಕ್ಯೂಟರ್‌ನಂತೆ ವರ್ತಿಸಿದೆ ಎಂದು ಪೀಠವು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಜೈಪುರಕ್ಕೆ ಕಾಲಿಟ್ಟ ಹಿಜಬ್ ವಿವಾದ – ಬುರ್ಕಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ನೋ ಎಂಟ್ರಿ ಎಂದ ಕಾಲೇಜ್

    ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಆಸ್ತಿಗಳಿಗೆ ಉಂಟಾದ ಹಾನಿಯನ್ನು ವಸೂಲಿ ಮಾಡಲು ಉತ್ತರ ಪ್ರದೇಶ ಸರ್ಕಾರವು ಹೊರಡಿಸಿದ ವಸೂಲಾತಿ ನೋಟಿಸ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

    ಉತ್ತರ ಪ್ರದೇಶದಲ್ಲಿ ಸಿಎಎ-ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳ ಬಗ್ಗೆ ತನಿಖೆ ನಡೆಸಲು ಸ್ವತಂತ್ರ ನ್ಯಾಯಾಂಗ ತನಿಖೆಯನ್ನು ಸ್ಥಾಪಿಸಲು ನಿರ್ದೇಶನ ನೀಡುವಂತೆ ಕೋರಿ ವಕೀಲ ಪರ್ವೇಜ್‌ ಆರಿಫ್‌ ಟಿಟು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಬ್ಲಿಕ್ ಟಿವಿಯ ತೇರು ʼದಶʼರಥ

    ಯುಪಿ ಸರ್ಕಾರದ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಗರಿಮಾ ಪ್ರಸಾದ್‌ ಅವರು, ರಾಜ್ಯದಲ್ಲಿ 833 ಗಲಭೆಕೋರರ ವಿರುದ್ಧ 106 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 274 ವಸೂಲಾತಿ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

  • ಯುಪಿ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ದುರ್ಗಾ ಶಂಕರ್ ಮಿಶ್ರಾ ನೇಮಕ

    ಯುಪಿ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ದುರ್ಗಾ ಶಂಕರ್ ಮಿಶ್ರಾ ನೇಮಕ

    ಲಕ್ನೋ: ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರನ್ನು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

    ಉತ್ತರ ಪ್ರದೇಶ ಕೇಡರ್‌ನ 1984ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ದುರ್ಗಾ ಶಂಕರ್ ಮಿಶ್ರಾ ಅವರು ಶುಕ್ರವಾರ ನಿವೃತ್ತಿ ಹೊಂದಬೇಕಿತ್ತು. ಆದರೆ ಉತ್ತರ ಪ್ರದೇಶ ರಾಜ್ಯ ಸರ್ಕಾರ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ ಎಂದು ತಿಳಿಸಿದೆ.

    Durga Shanker Mishra

    1985 ರ ಬ್ಯಾಚ್ ಐಎಎಸ್ ಅಧಿಕಾರಿ ರಾಜೇಂದ್ರ ಕುಮಾರ್ ತಿವಾರಿ ಅವರು ಪ್ರಸ್ತುತ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ರಾಜೇಂದ್ರ ಕುಮಾರ್ ತಿವಾರಿ ಅವರು ಫೆಬ್ರವರಿ 2023 ರಲ್ಲಿ ನಿವೃತ್ತರಾಗಲಿದ್ದಾರೆ. ಇದನ್ನೂ ಓದಿ: ಇಂದು 566 ಪ್ರಕರಣ – ಬೆಂಗಳೂರಿನಲ್ಲಿ 400 ಕೇಸ್, 4 ಸಾವು

    ಸೋಮವಾರ ಸಿಬ್ಬಂದಿ ಸಚಿವಾಲಯ ಮನೋಜ್ ಜೋಶಿ ಅವರನ್ನು ನೂತನ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿಯಾಗಿ ದುರ್ಗಾ ಶಂಕರ್ ಮಿಶ್ರಾ ಅವರ ಸ್ಥಾನದಲ್ಲಿ ನೇಮಿಸಿದೆ. ಮನೋಜ್ ಜೋಶಿ ಅವರು 1989ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಕಗೊಂಡಿದ್ದರು.

  • ಪಾಕ್‌ ಕೈಗಾರಿಕೆಗಳ ಬ್ಯಾನ್‌ ಮಾಡ್ಬೇಕೆ: ದಿಲ್ಲಿ ವಾಯುಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

    ಪಾಕ್‌ ಕೈಗಾರಿಕೆಗಳ ಬ್ಯಾನ್‌ ಮಾಡ್ಬೇಕೆ: ದಿಲ್ಲಿ ವಾಯುಮಾಲಿನ್ಯಕ್ಕೆ ಪಾಕ್‌ ಕಾರಣ ಎಂದ ಯುಪಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

    ನವದೆಹಲಿ: ಭಾರತದ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಪಾಕಿಸ್ತಾನ ಕಾರಣ ಎಂದು ಆಪಾದಿಸಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಪಾಕಿಸ್ತಾನ ಕೈಗಾರಿಕೆಗಳ ನಿಷೇಧವನ್ನು ನೀವು ಬಯಸುತ್ತೀರಾ ಎಂದು ಯುಪಿ ಸರ್ಕಾರವನ್ನು ಸುಪ್ರೀಂ ಪ್ರಶ್ನಿಸಿದೆ.

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಳಕ್ಕೆ ಉತ್ತರ ಪ್ರದೇಶದ ಕೈಗಾರಿಕೆಗಳು ಕಾರಣವಲ್ಲ. ಪಾಕಿಸ್ತಾನದಿಂದ ಬರುತ್ತಿರುವ ಕಲುಷಿತ ಗಾಳಿಯಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠವು, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹಾಗಾದರೆ ನೀವು, ಪಾಕಿಸ್ತಾನದ ಕೈಗಾರಿಕೆಗಳ ನಿಷೇಧವನ್ನು ಬಯಸುತ್ತೀರಾ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಡಿ.4 ರಂದು ಆಂಧ್ರಪ್ರದೇಶ, ಒಡಿಶಾಗೆ ಅಪ್ಪಳಿಸಲಿರುವ ಜವಾದ್ ಚಂಡಮಾರುತ

    ಯುಪಿ ಸರ್ಕಾರದ ಪರವಾಗಿ ಹಿರಿಯ ವಕೀಲ ರಂಜಿತ್‌ ಕುಮಾರ್‌ ವಾದ ಮಂಡಿಸಿ, ಪಾಕಿಸ್ತಾನದಿಂದ ಬರುತ್ತಿರುವ ಮಾಲಿನ್ಯಕಾರಕ ಗಾಳಿಯು ದೆಹಲಿಯ ವಾಯು ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಉತ್ತರ ಪ್ರದೇಶದಲ್ಲಿ ನಡೆಸಿದ 8 ಗಂಟೆಗಳ ಕಾರ್ಯಾಚರಣೆಯಿಂದ ಕಬ್ಬು ಮತ್ತು ಹಾಲಿನ ಉದ್ಯಮಗಳ ಮೇಲೆ ಪರಿಣಾಮ ಉಂಟಾಗಿದೆ ಎಂದು ಪ್ರತಿಪಾದಿಸಿದ್ದರು. ಈ ವೇಳೆ ವಕೀಲರ ವಿರುದ್ಧ ಗರಂ ಆದ ಸಿಜೆಐ ಎನ್‌.ವಿ.ರಮಣ ನೇತೃತ್ವದ ಪೀಠ, ಮೊದಲು ಆಯೋಗದ ಮೊರೆ ಹೋಗಿ, ವಾಯುಮಾಲಿನ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಹೇಳಿ ಎಂದು ಸೂಚಿಸಿತು.

    ವಾಯುಗುಣಮಟ್ಟ ನಿರ್ವಹಣೆ ಆಯೋಗವು ರಾಜಧಾನಿಯಲ್ಲಿನ ವಾಯುಮಾಲಿನ್ಯ ಪರಿಸ್ಥಿತಿಯನ್ನು ಪರಿಶೀಲಿಸಲು ಕಾರ್ಯಪಡೆಯೊಂದನ್ನು ರಚಿಸಿದೆ. ಈ ಹಿನ್ನೆಲೆಯಲ್ಲಿ, ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವನ್ನು ನಿಯಂತ್ರಿಸಲು ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸುಪ್ರೀಂ ಕೋರ್ಟ್‌ 24 ಗಂಟೆಗಳ ಗಡುವು ನೀಡಿದೆ. ಇದನ್ನೂ ಓದಿ: ಕೇರಳ ವಿದ್ಯಾರ್ಥಿಗಳ ಬೀದಿರಂಪಾಟ – ಪೊಲೀಸರ ಮೇಲೆ ಹಲ್ಲೆ

    ಪರಿಸರ ಹೋರಾಟಗಾರ ಆದಿತ್ಯ ದುಬೆ ಮತ್ತು ಕಾನೂನು ವಿದ್ಯಾರ್ಥಿ ಅಮನ್‌ ಬಂಕಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಸಣ್ಣ ಮತ್ತು ಅತಿ ಸಣ್ಣ ಕೃಷಿ ವಲಯದ ರೈತರಿಗೆ ಹುಲ್ಲು ತೆಗೆಯುವ ಯಂತ್ರಗಳನ್ನು ಉಚಿತವಾಗಿ ಒದಗಿಸಲು ನಿರ್ದೇಶನ ನೀಡುವಂತೆ ಕೋರಿ ದುಬೆ ಅವರು ಸುಪ್ರೀಂಗೆ ಮನವಿ ಮಾಡಿದ್ದಾರೆ.

  • ‘ಕೇಮ್ ಚೋ ಟ್ರಂಪ್’ ಕಾರ್ಯಕ್ರಮ – ಯಮುನೆಯ ಕೊಳಕನ್ನು ಮರೆಮಾಚಲು 500 ಕ್ಯೂಸೆಕ್ ನೀರು ಹರಿಸಿದ ಸರ್ಕಾರ

    ‘ಕೇಮ್ ಚೋ ಟ್ರಂಪ್’ ಕಾರ್ಯಕ್ರಮ – ಯಮುನೆಯ ಕೊಳಕನ್ನು ಮರೆಮಾಚಲು 500 ಕ್ಯೂಸೆಕ್ ನೀರು ಹರಿಸಿದ ಸರ್ಕಾರ

    ಲಕ್ನೋ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ನಗರ ಸುಂದರವಾಗಿ ಕಂಗೊಳಿಸಲು ಯುಪಿ ಸರ್ಕಾರ ನಾನಾ ಕಸರತ್ತು ಮಾಡ್ತಿದ್ದು, ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವ ಯಮುನಾ ನದಿಯ ಸೌಂದರ್ಯ ಹೆಚ್ಚಿಸಲು ಸರ್ಕಾರ ನದಿಗೆ ನೀರು ಹರಿಸಿದೆ.

    ಗುಜರಾತಿನ ಅಹಮದಾಬಾದಿನಲ್ಲಿ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆ, ಭಾರತದ ಜೊತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲು ಡೊನಾಲ್ಡ್ ಟ್ರಂಪ್ ಭಾರತಕ್ಕೆ ಬರುತ್ತಿದ್ದಾರೆ. ಟ್ರಂಪ್ ಭೇಟಿ ವೇಳೆ ನದಿಯ ಪರಿಸರ ಸುಂದರವಾಗಿ ಕಾಣಬೇಕು ಎನ್ನುವ ಉದ್ದೇಶದಿಂದ ಉತ್ತರಪ್ರದೇಶದ ನೀರಾವರಿ ಇಲಾಖೆಯು ಯಮುನಾ ನದಿಗೆ 500 ಕ್ಯೂಸೆಕ್ ನೀರನ್ನು ಹರಿಸಿದೆ.ಇದನ್ನೂ ಓದಿ: ಭಾರತಕ್ಕೆ ಬರಲಿರುವ ಟ್ರಂಪ್ ಏನು ತಿನ್ನುತ್ತಾರೆ? ಫೇವರೇಟ್ ಆಹಾರ ಏನು?

    ಆಗ್ರಾಗೆ ಟ್ರಂಪ್ ಭೇಟಿ ನೀಡುತ್ತಾರೆಂಬ ಮಾಹಿತಿ ಇರುವ ಹಿನ್ನೆಲೆ ನದಿಗೆ 500 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. ಫೆಬ್ರವರಿ 20ರಂದು ಮಥುರಾದ ಯಮುನಾ ನದಿಗೆ ಹರಿಬಿಟ್ಟಿರುವ ನೀರು ಸೇರಲಿದ್ದು, ಬಳಿಕ ಫೆಬ್ರವರಿ 21ರಂದು ನೀರು ಆಗ್ರಾ ತಲುಪಲಿದೆ. ನದಿಗೆ ನೀರು ಹರಿಸಿರುವುದರಿಂದ ಅಲ್ಲಿ ಬರುತ್ತಿದ್ದ ದುರ್ನಾತ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತೆ. ನದಿಯ ಪರಿಸರವೂ ಕೂಡ ಮತ್ತಷ್ಟು ಸುಂದರವಾಗುತ್ತೆ ಎಂದು ಅಧಿಕಾರಿ ಧರ್ಮೇಂದರ್ ಸಿಂಗ್ ಫೋಗಟ್ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್ ಜೊತೆಗೆ ಭಾರತಕ್ಕೆ ಬರುತ್ತಿದೆ ದಿ ಬೀಸ್ಟ್ ಕಾರ್- ಕಾರಿನ ವಿಶೇಷತೆ ಏನು? ಮೈಲೇಜ್ ಎಷ್ಟು?

    ಅಲ್ಲದೇ ಮಾಲಿನ್ಯವನ್ನು ನಿಯಂತ್ರಿಸಲು 500 ಕ್ಯೂಸೆಕ್ ನೀರನ್ನು ಯಮುನಾ ನದಿಗೆ ಹರಿಬಿಡಲಾಗುತ್ತಿದೆ. ಇದು ನದಿ ಮೇಲೆ ಕೆಲ ಪರಿಣಾಮ ಬೀರಲಿದೆ. ಇದರಿಂದ ಮಥುರಾ ಹಾಗೂ ಆಗ್ರಾದಲ್ಲಿ ಹರಿಯುವ ಯುವನಾ ನದಿ ಆಮ್ಲಜನಕವನ್ನು ಹೆಚ್ಚಿಸುತ್ತದೆ. ನೀರು ಹರಿಸಿದ ಮಾತ್ರಕ್ಕೆ ಈ ನದಿ ನೀರು ಕುಡಿಯಲು ಯೋಗ್ಯವಾಗಲ್ಲ ಆದರೆ ನದಿಯ ದುರ್ವಾಸನೆ ದೂರವಾಗುತ್ತೆ ಎಂದು ಅಧಿಕಾರಿ ಹೇಳಿದ್ದಾರೆ.

    ಅಮೆರಿಕದ ಅನಿವಾಸಿ ಭಾರತೀಯರು ಹೂಸ್ಟನ್‍ನಲ್ಲಿ ಆಯೋಜಿಸಿದ್ದ `ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಟ್ರಂಪ್ ಭಾಗವಹಿಸಿದ್ದರು. ಅಲ್ಲಿನ ಅನಿವಾಸಿ ಭಾರತೀಯರ ಜೊತೆಗೆ ಕೆಲ ವಿಚಾರಗಳನ್ನು ಹಂಚಿಕೊಳ್ಳಲು ಪ್ರಧಾನಿ ಮೋದಿ ಅವರಿಗೆ ಸಹಾಯಕವಾಗಿತ್ತು. ಹೀಗಾಗಿ ಭಾರತಕ್ಕೆ ಆಗಮಿಸುತ್ತಿರುವ ಟ್ರಂಪ್ ಅವರಿಗೆ ಇಂತಹದ್ದೇ ವೇದಿಕೆ ಕಲ್ಪಿಸಿಕೊಡಲು `ಕೇಮ್ ಚೋ ಟ್ರಂಪ್’ ಸಾರ್ವಜನಿಕ ಸಭೆಗೆ ಭಾರೀ ಸಿದ್ಧತೆ ನಡೆದಿದೆ.

    ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಫೆಬ್ರವರಿ 24 ಹಾಗೂ 25 ರಂದು ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕ ಫಸ್ಟ್ ಲೇಡಿ ಮೆಲಾನಿಯಾ ಟ್ರಂಪ್ ಕೂಡ ಭಾರತಕ್ಕೆ ಆಗಮಿಸುತ್ತಿದ್ದಾರೆ. ನವದೆಹಲಿಗೆ ಆಗಮಿಸಲಿರುವ ಡೊನಾಲ್ಡ್ ಟ್ರಂಪ್ ಅವರು ಫೆಬ್ರವರಿ 25 ರಂದು ಗುಜರಾತ್‍ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಜಂಟಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

  • ತಾಜ್‍ಮಹಲ್ ಧ್ವಂಸಗೊಳಿಸಿದರೆ ನಾನು ಉತ್ತರ ಪ್ರದೇಶ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ: ಅಜಂ ಖಾನ್

    ತಾಜ್‍ಮಹಲ್ ಧ್ವಂಸಗೊಳಿಸಿದರೆ ನಾನು ಉತ್ತರ ಪ್ರದೇಶ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ: ಅಜಂ ಖಾನ್

    ನವದೆಹಲಿ: ತಾಜ್‍ಮಹಲ್ ನಾಶಮಾಡಿದರೆ ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿನಾಥ್ ಅವರ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.

    ತಾಜ್ ಮಹಲ್, ಕೆಂಪು ಕೋಟೆ, ಸಂಸತ್ ಭವನಗಳು ಹಾಗೂ ಕುತುಬ್ ಮಿನಾರ್ ಮುಂತಾದ ಸ್ಮಾರಕಗಳು ಗುಲಾಮಗಿರಿಯ ಸಂಕೇತವಾಗಿವೆ. ಈ ವಾದ-ವಿವಾದಗಳು ಕಳೆದ ಕೆಲವು ದಶಕಗಳಿಂದ ನಡೆಯುತ್ತಿದೆ. ಒಂದು ವೇಳೆ ಸರ್ಕಾರ ತಾಜ್‍ಮಹಲ್ ಅನ್ನು ಧ್ವಂಸಗೊಳಿಸುವ ನಿರ್ಧಾರ ತೆಗೆದುಕೊಂಡರೆ ನಾನು ಆ ನಿರ್ಧಾರವನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ.

    ಪ್ರವಾಸೋದ್ಯಮ ಇಲಾಖೆ 32 ಪುಟಗಳುಳ್ಳ `ಉತ್ತರ ಪ್ರದೇಶದ ಪ್ಯಾರ್ಯಟನ್- ಅಪಾರ ಸಂಭವನೀಯೆನ್’ ಶೀರ್ಷಿಕೆ ಅಡಿಯಲ್ಲಿ ಒಂದು ಕೈಪಿಡಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ರಾಜ್ಯದ ಸಾಂಸ್ಕøತಿಕ ಮತ್ತು ಪರಂಪರೆಯ ತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿದೆ. ಆದರೆ ಈ ಕೈಪಿಡಿಯಲ್ಲಿ ವಿಶ್ವದ ಏಳು ಅದ್ಭುತ ತಾಣಗಳಲ್ಲಿ ಒಂದಾಗಿರುವ ತಾಜ್‍ಮಹಲ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ.

    ಈ ಕೈಪಿಡಿಯನ್ನು ರಾಜ್ಯ ಪ್ರವಾಸೋದ್ಯಮ ಸಚಿವೆ ರೀಟಾ ಬಹುಗುಣ ಅವರು ಬಿಡುಗಡೆ ಮಾಡಿದ್ದು, ಇದರಲ್ಲಿ ವಾರಣಾಸಿಯಲ್ಲಿರುವ ಗಂಗಾ ಆರತಿಯ ಚಿತ್ರವು ಮುಖಪುಟದಲ್ಲಿದೆ. ಜೊತೆಗೆ ಸಿಎಂ ಆದಿತ್ಯನಾಥ್ ಮತ್ತು ಬಹುಗುಣ ಅವರ ಸಾಂಪ್ರದಾಯಿಕ ದೀಪವು ಪುಸ್ತಕದ ಒಳಗಡೆ ಇದೆ. ಈ ಕೈಪಿಡಿ ಬಿಡುಗಡೆ ಮಾಡಿದ ಕೆಲವು ಗಂಟೆಗಳಲ್ಲಿ ಅಜಂ ಖಾನ್ ವಿವಾದಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

    ಇವರ ಪ್ರತಿಕ್ರಿಯೆಗೆ ಬಹುಗುಣ ಅವರು, ತಾಜ್‍ಮಹಲ್ ವಿಶ್ವ ಪರಂಪರೆಯ ಮತ್ತು ಪ್ರಖ್ಯಾತ ಪ್ರವಾಸಿಗರ ಆಕರ್ಷಣೆಯ ಸ್ಥಳವಾಗಿದೆ. ಇದರ ಸುತ್ತಲಿನ ಸೌಕರ್ಯಗಳ ಸುಧಾರಣೆಗಾಗಿ ನಾವು 156 ಕೋಟಿ ರೂ.ಗಳನ್ನು ನೀಡಿದ್ದೇವೆ ಎಂದು ಹೇಳಿದರು.

    ಹೊಸದಾಗಿ ಬಿಡುಗಡೆಯಾದ ಕೈಪಿಡಿಯಲ್ಲಿ ಪ್ರೀತಿಯ ಸಂಕೇತವಾದ, ಸಾಂಪ್ರದಾಯಿಕ ಸ್ಮಾರಕವಾದ ತಾಜ್‍ಮಹಲ್ ಹೆಸರನ್ನು ಬಿಟ್ಟಿರುವುದರಿಂದ ಕಾಂಗ್ರೆಸ್ ಉಪಾಧ್ಯಾಕ್ಷ ರಾಹುಲ್ ಗಾಂಧಿ ಅವರು ಕೂಡ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.

    ದೀಪದ ಬೆಳಕಿನಿಂದ ಸೂರ್ಯನೇನೂ ಸುಂದರವಾಗಿ ಕಾಣಿಸುವುದಿಲ್ಲ. ಹೀಗಾಗಿ ಕವಿ ಭರತೇಂದು ಒಂದು ಮಾತನ್ನು ಹೇಳ್ತಾರೆ, `ಕತ್ತಲೆಯ ರಾಜ್ಯ, ಹುಚ್ಚು ದೊರೆ’ ಎಂದು ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ.