Tag: ಉದಿತ್ ರಾಜ್

  • ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌ (Udit Raj ಹೇಳಿಕೆ ನೀಡಿದ್ದಾರೆ.

    ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅ.9 ರಂದು ಭಾರತಕ್ಕೆ ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಭೇಟಿ

    ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

    ಕರ್ನಾಟಕದ ಉಪಮುಖ್ಯಮಂತ್ರಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದ ಕಾಂಗ್ರೆಸ್ ಶಾಸಕ ಹೆಚ್.ಡಿ.ರಂಗನಾಥ್‌ಗೆ ನೋಟಿಸ್‌ ಕುರಿತು ಮಾತನಾಡಿ, ಯಾವುದೇ ಸಂಘರ್ಷ ನಡೆಯುತ್ತಿಲ್ಲ. ಇದು ಎಲ್ಲಾ ಪಕ್ಷಗಳಲ್ಲೂ ನಡೆಯುತ್ತದೆ. ಕೆಲವರು ತಮ್ಮ ಆಪ್ತರನ್ನು ಹೊಗಳುತ್ತಾರೆ. ಇತರರು ಹಾಗೆಯೇ ಮಾಡುತ್ತಾರೆ. ಹಾಗಾದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಗ್ಗೆ ಕೆಲವು ಒಳ್ಳೆಯ ಮಾತುಗಳನ್ನು ಹೇಳಿದ್ದರೆ, ಅದು ನಿಜವಾಗಿಯೂ ಸಂಘರ್ಷ ಇದೆ ಎಂದರ್ಥವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು, ನಾಲ್ವರಿಗೆ ಗಾಯ

  • ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ

    ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ

    ನವದೆಹಲಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಉದಿತ್ ರಾಜ್ (Udit Raj) ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನ ಅಂಬೇಡ್ಕರ್‌ಗೆ ಹೋಲಿಕೆ ಮಾಡಿದ್ದಾರೆ. ಎಕ್ಸ್‌ನಲ್ಲಿ ಸಂದೇಶವೊಂದನ್ನ ಹಂಚಿಕೊಂಡಿದ್ದು, ರಾಹುಲ್ ಗಾಂಧಿ (Rahul Gandhi) ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ ಅಂತ ಬಣ್ಣಿಸಿದ್ದಾರೆ.

    ಉದಿತ್‌ ಎಕ್ಸ್‌ ನಲ್ಲಿ ಏನಿದೆ?
    ಇತಿಹಾಸವು ಪದೇ ಪದೇ ಪ್ರಗತಿಗೆ ಅವಕಾಶ ನೀಡುವುದಿಲ್ಲ ಎಂಬುದನ್ನ ಒಬಿಸಿಗಳು ಯೋಚಿಸಬೇಕು. ಟಾಲ್ಕಟೋರಾ ಕ್ರೀಡಾಂಗಣದಲ್ಲಿ ನಡೆದ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಹೇಳಿದ್ದನ್ನ ನಾವೆಲ್ಲ ಅನುಸರಿಸೋಣ ಹಾಗೂ ಬೆಂಬಲಿಸೋಣ. ಒಬಿಸಿ ಸಮುದಾಯದ (OBCs Community) ಸದಸ್ಯರು ರಾಹುಲ್ ಗಾಂಧಿ ಅವರನ್ನ ಬೆಂಬಲಿಸಿ ಅನುಸರಿಸಿದ್ರೆ ಅವರು ʻ2ನೇ ಅಂಬೇಡ್ಕರ್ʼ (Ambedkar) ಆಗಬಹುದು. ಅವರು ಹೇಳಿದ ಹಾಗೆ ಮಾಡಿದ್ರೆ 2ನೇ ಅಂಬೇಡ್ಕರ್‌ ಅಂತ ಸಾಬೀತುಮಾಡ್ತಾರೆ ಅಂತ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

    ಕೆರಳಿ ಕೆಂಡವಾದ ಬಿಜೆಪಿ
    ಕಾಂಗ್ರೆಸ್‌ ಮುಖಂಡ ಉದಿತ್ ರಾಜ್ ಹೇಳಿಕೆಗೆ ಬಿಜೆಪಿ ಕೆರಳಿ ಕೆಂಡವಾಗಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ To ಮುಂಬೈ – ಮೆದುಳು ಜ್ವರದಿಂದ ಬಳಲುತ್ತಿದ್ದ ಯುವತಿಯ ಏರ್‌ಲಿಫ್ಟ್

    ಅಂಬೇಡ್ಕರ್ ಅವರ ಪರಂಪರೆಯನ್ನು ಕುಂದಿಸಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ. ಕಾಂಗ್ರೆಸ್ ಈಗ ಮತ್ತೊಬ್ಬ ಅಂಬೇಡ್ಕರ್ ಅವರನ್ನ ಹುಡುಕುವ ಬಗ್ಗೆ ಚಿಂತಿತವಾಗಿದೆ. ಆದ್ರೆ ಈ ಹಿಂದೆ ಅಂಬೇಡ್ಕರ್‌ಗೆ ಕಾಂಗ್ರೆಸ್‌ ಹೇಗೆ ದ್ರೋಹ ಬಗೆದಿದೆ, ಪದೇ ಪದೇ ಅವಮಾನಿಸಿದೆ ಎಂಬುದನ್ನು ಇಡೀ ದೇಶ ಕಂಡಿದೆ. ಇದು ಇತಿಹಾಸದಲ್ಲಿಯೂ ಉಳಿದಿದೆ. ಇತಿಹಾಸ ವೈಫಲ್ಯಗಳನ್ನು ಎಂದಿಗೂ ಮುಚ್ಚಿಸಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

    ಮುಂದುವರಿದು… ಕಾಂಗ್ರೆಸ್‌ ಕಾಂಗ್ರೆಸ್ ಇನ್ನೊಬ್ಬ ನೆಹರೂ ರನ್ನ ಏಕೆ ಹುಡುಕುತ್ತಿಲ್ಲ? ಏಕೆಂದ್ರೆ ಅಂಬೇಡ್ಕರ್‌ ಅವರ ಪರಂಪರೆ ಮತ್ತು ಶ್ರೇಷ್ಠತೆಯನ್ನ ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 10 ವರ್ಷ ಸಿಎಂ ಆಗ್ಬಿಟ್ರೆ ತಾಯಿ ಚಾಮುಂಡಿಗಿಂತ ದೊಡ್ಡವರಾಗಿಬಿಡ್ತಾರೆ: ಪ್ರತಾಪ್‌ ಸಿಂಹ ಕಿಡಿ

  • ಅಮೆರಿಕದಲ್ಲಿ ಇವಿಎಂನಿಂದ ಚುನಾವಣೆ ನಡೆದಿದ್ರೆ ಟ್ರಂಪ್ ಸೋಲ್ತಿದ್ರಾ- ಕಾಂಗ್ರೆಸ್ ನಾಯಕ ಪ್ರಶ್ನೆ

    ಅಮೆರಿಕದಲ್ಲಿ ಇವಿಎಂನಿಂದ ಚುನಾವಣೆ ನಡೆದಿದ್ರೆ ಟ್ರಂಪ್ ಸೋಲ್ತಿದ್ರಾ- ಕಾಂಗ್ರೆಸ್ ನಾಯಕ ಪ್ರಶ್ನೆ

    ನವದೆಹಲಿ: ಸದಾ ವಿವಾದಾತ್ಮಕ ಟ್ವೀಟ್‍ಗಳಿಂದ ಹೆಚ್ಚು ಚರ್ಚೆ ಗ್ರಾಸವಾಗುವ ಕಾಂಗ್ರೆಸ್ ನಾಯಕ ಉದಿತ್ ರಾಜ್ ಈ ಬಾರಿಯೂ ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

    ಇವಿಎಂ ಕುರಿತು ಟ್ವೀಟ್ ಮಾಡಿ ಸಂಶಯ ವ್ಯಕ್ತಪಡಿಸಿರುವ ಅವರು, ಅಮೆರಿಕದಲ್ಲಿ ಇವಿಎಂ ಮೂಲಕ ಚುನಾವಣೆ ನಡೆದಿದ್ದರೆ ಡೊನಾಲ್ಡ್ ಟ್ರಂಪ್ ಸೋಲುತ್ತಿದ್ದರೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಜಾಲತಾಣಗಳಲ್ಲಿ ಈ ಕುರಿತು ಇದೀಗ ಭಾರೀ ಚರ್ಚೆ ನಡೆಯುತ್ತಿದ್ದು, ಉದಿತ್ ರಾಜ್ ಅವರನ್ನು ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಕಮೆಂಟ್ ಮಾಡುತ್ತಿದ್ದಾರೆ.

    ಈ ಕುರಿತು ದಿಗ್ವಿಜಯ್ ಸಿಂಗ್ ಸಹ ಪ್ರತಿಕ್ರಿಯಿಸಿದ್ದು, ಇವಿಎಂಗಳನ್ನು ಟ್ಯಾಂಪರ್ ಪ್ರೋಫ್ ಮಾಡಲಾಗಿಲ್ಲ, ಆಯ್ದ ಕೆಲವನ್ನು ಮಾತ್ರ ಮಾಡಲಾಗಿದೆ. ಎಂತಹ ಪರಿಸ್ಥಿತಿಯಲ್ಲಿಯೂ ನಾವು ಕಳೆದುಕೊಳ್ಳಲಾರದ ಸ್ಥಾನಗಳನ್ನು ಸಾವಿರಾರು ಮತಗಳ ಅಂತರದಿಂದ ಸೋತಿದ್ದೇವೆ. ಈ ಕುರಿತು ಚರ್ಚಿಸಲು ನಾಳೆ ಸಭೆ ಕರೆಯಲಾಗಿದೆ. ಫಲಿತಾಂಶದ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ ನಾಯಕ ಉದಿತ್ ರಾಜ್ ಅವರು ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದಿನ ಚುನಾವಣೆಯಲ್ಲಿ ಇವಿಎಂ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಅನುಮಾನಿಸಿ ಹೇಳಿಕೆ ನೀಡಿದ್ದರು. ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಕೂಡ ಭಾಗಿಯಾಗಿದೆಯೇ ಎಂದು ಪ್ರಶ್ನಿಸಿ ಉದಿತ್ ರಾಜ್ ವಿವಾದಕ್ಕೆ ಗುರಿಯಾಗಿದ್ದರು.

    ಆಗ ಸಹ ಟ್ವೀಟ್ ಮಾಡುವ ಮೂಲಕ ದೂರಿದ್ದರು. ಸುಪ್ರೀಂಕೋರ್ಟ್ ಕೂಡ ಚುನಾವಣೆ ಅಕ್ರಮದಲ್ಲಿ ಭಾಗಿಯಾಗಿದೆ. ಎಲ್ಲ ಇವಿಎಂಗಳ ವಿವಿಪ್ಯಾಟ್‍ಗಳ ಸ್ಲಿಪ್‍ಗಳನ್ನು ಎಣಿಕೆ ಮಾಡಬೇಕೆಂಬ ವಿರೋಧ ಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದು ಯಾಕೆ? ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಸಹ ಭಾಗಿಯಾಗಿದ್ಯಾ ಎಂದು ಪ್ರಶ್ನಿಸಿದ್ದರು.

    ಉದಿತ್ ರಾಜ್ ಅವರು ತಮ್ಮ ಇಂಡಿಯನ್ ಜಸ್ಟಿಸ್ ಪಾರ್ಟಿ (ಐಜೆಪಿ)ಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದರು. ಈ ಮೂಲಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಕಳೆದ ಬಾರಿಯ ಚುನಾವಣೆಯಲ್ಲಿ ಪಕ್ಷ ಅವರಿಗೆ ಟಿಕೆಟ್ ನೀಡಲಿಲ್ಲ. ಬದಲಾಗಿ ಪಂಜಾಬ್‍ನ ಜನಪದ ಹಾಗೂ ಸೂಫಿ ಗಾಯಕ ಹನ್ಸ್ ರಾಜ್ ಹಸ್ಸ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದಾಗಿ ಅಸಮಾಧಾನ ಹೊರ ಹಾಕಿದ ಉದಿತ್ ರಾಜ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

  • ಕುಂಭ ಮೇಳಕ್ಕೆ ಹಣ ನೀಡುವುದನ್ನು ನಿಲ್ಲಿಸಬೇಕು – ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌

    ಕುಂಭ ಮೇಳಕ್ಕೆ ಹಣ ನೀಡುವುದನ್ನು ನಿಲ್ಲಿಸಬೇಕು – ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌

    ನವದೆಹಲಿ: ಉತ್ತರ ಪ್ರದೇಶದಲ್ಲಿ ನಡೆಯಲಿರುವ ಕುಂಭ ಮೇಳ ವಿಷಯದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಉದಿತ್ ರಾಜ್ ವಿವಾದದ ಕಿಡಿ ಹೊತ್ತಿಸಿದ್ದಾರೆ.

    ಉತ್ತರ ಪ್ರದೇಶ ಸರ್ಕಾರ 4200 ಕೋಟಿ ವೆಚ್ಚದಲ್ಲಿ ಕುಂಭಮೇಳ ಮಾಡಲು ತಯಾರಿ ನಡೆಸಿದೆ. ಧರ್ಮಾಧಾರಿತವಾಗಿ ನಡೆಯುವ ಯಾವುದೇ ಕಾರ್ಯಕ್ರಮಗಳಿಗೆ ಸರ್ಕಾರ ಹಣ ನೀಡಬಾರದು. ಇದನ್ನು ನಿಲ್ಲಿಸಬೇಕು ಎಂದು ಟ್ವೀಟ್ ಮಾಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

    ತಕ್ಷಣವೇ ಈ ಟ್ವೀಟ್ ಡಿಲಿಟ್ ಮಾಡಿದ್ದ ಉದಿತ್ ರಾಜ್, ನಂತರ ಸ್ಪಷ್ಟನೆ ಕೊಟ್ಟು ಪ್ರತಿಬಾರಿ ನಾನು ಟ್ವೀಟ್ ಮಾಡುವಾಗ ಐಎನ್‍ಸಿಗೆ ಟ್ಯಾಗ್ ಮಾಡ್ತೇನೆ. ಇದು ನನ್ನ ವೈಯಕ್ತಿಯ ಅಭಿಪ್ರಾಯವೇ ಹೊರತು ಕಾಂಗ್ರೆಸ್ ಪಕ್ಷದ್ದಲ್ಲ ಎಂದು ತಿಳಿಸಿದರು.

    ಖಜಾನೆಗೆ ಹೊರೆಯಾಗಲಿದೆ ಅಂತ ಅಸ್ಸಾಂನಲ್ಲಿ ಕುರಾನ್ ಮತ್ತು ಸಂಸ್ಕೃತ ಶಾಲೆಗೆ ಅನುದಾನ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ಶಿಕ್ಷಣ ಸಚಿವ ಹಿಮಾಂಶ ಬಿಸ್ವಾಸ್ ಶರ್ಮಾ ಹೇಳಿಕೆ ನೀಡಿದ ಬೆನ್ನಲ್ಲೇ ಉದಿತ್ ರಾಜ್ ಈ ಟ್ವೀಟ್ ಮಾಡಿದ್ದರು.

    ಕಾಂಗ್ರೆಸ್ ನಾಯಕನ ವಿರುದ್ಧ ಕೇಂದ್ರ ಸಚಿವರು ಕಿಡಿಕಾರಿದ್ದಾರೆ. ಕುಂಭ ಮೇಳ ಜಾಗತಿಕ ಕಾರ್ಯಕ್ರಮ. ಪ್ರಪಂಚದ ಮೂಲೆ ಮೂಲೆಗಳಿಂದಲೂ ಲಕ್ಷಾಂತರ ಭಕ್ತರು ಬರ್ತಾರೆ ಅಂತ ಉತ್ತರ ಪ್ರದೇಶದ ಸಚಿವ ಬ್ರಿಜೇಶ್ ಪಾಠಕ್ ತಿರುಗೇಟು ಕೊಟ್ಟಿದ್ದಾರೆ.

    ಕೆಲವು ನಾಯಕರಿಗೆ ಐಡಿಯಾನೇ ಇಲ್ಲ, ಅಭಿವೃದ್ಧಿಯೇ ಬೇಕಿಲ್ಲ ಅಂತ ಅನುರಾಗ್ ಠಾಕೂರ್ ಹೇಳಿದ್ದಾರೆ. ಅಲ್ಲದೆ, ಕಳೆದ ಬಾರಿ ಬಸ್‍ಗಳನ್ನು ಕಳಿಸಿಕೊಟ್ಟಿದ್ದ ಪ್ರಿಯಾಂಕಾ ಗಾಂಧಿ, ಈಗ ಸ್ಪಷ್ಟನೆ ಕೊಡ್ಬೇಕು ಅಂತ ಆಗ್ರಹಿಸಿದ್ದಾರೆ. ಮಹಾಕುಂಭ ಮೇಳಕ್ಕೆ 2013ರಲ್ಲಿ 1300 ಕೋಟಿ ರೂ. ಅನುದಾನ ನೀಡಲಾಗಿತ್ತು.

  • ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೂಡ ಭಾಗಿಯೇ: ಕೈ ನಾಯಕ ಉದಿತ್ ರಾಜ್ ಪ್ರಶ್ನೆ

    ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೂಡ ಭಾಗಿಯೇ: ಕೈ ನಾಯಕ ಉದಿತ್ ರಾಜ್ ಪ್ರಶ್ನೆ

    ನವದೆಹಲಿ: ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಕೂಡ ಭಾಗಿಯಾಗಿದೆಯೇ ಎಂದು ಕಾಂಗ್ರೆಸ್ ಮುಖಂಡ ಉದಿತ್ ರಾಜ್ ಪ್ರಶ್ನಿಸಿ ವಿವಾದಕ್ಕೆ ಗುರಿಯಾಗಿದ್ದಾರೆ.

    ಟ್ವೀಟ್ ಮೂಲಕ ದೂರಿರುವ ಉದಿತ್ ರಾಜ್ ಅವರು, ಸುಪ್ರೀಂಕೋರ್ಟ್ ಕೂಡ ಚುನಾವಣೆ ಅಕ್ರಮದಲ್ಲಿ ಭಾಗಿಯಾಗಿದೆ. ಎಲ್ಲ ಇವಿಎಂಗಳ ವಿವಿಪ್ಯಾಟ್‍ಗಳ ಸ್ಲಿಪ್‍ಗಳನ್ನು ಎಣಿಕೆ ಮಾಡಬೇಕೆಂಬ ವಿರೋಧ ಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದು ಯಾಕೆ? ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಸಹ ಭಾಗಿಯಾಗಿದ್ಯಾ ಎಂದು ಪ್ರಶ್ನಿಸಿದ್ದಾರೆ.

    ಉದಿತ್ ರಾಜ್ ಅವರು ತಮ್ಮ ಇಂಡಿಯನ್ ಜಸ್ಟಿಸ್ ಪಾರ್ಟಿ (ಐಜೆಪಿ)ಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದರು. ಈ ಮೂಲಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಈ ಬಾರಿ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ. ಬದಲಾಗಿ ಪಂಜಾಬ್‍ನ ಜನಪದ ಹಾಗೂ ಸೂಫಿ ಗಾಯಕ ಹನ್ಸ್ ರಾಜ್ ಹಸ್ಸ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದಾಗಿ ಅಸಮಾಧಾನ ಹೊರ ಹಾಕಿದ ಉದಿತ್ ರಾಜ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದರು.

    ಎನ್‍ಡಿಎ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ತಿಳಿಸಿದ ಬೆನ್ನಲ್ಲೇ ವಿಪಕ್ಷಗಳು ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿವೆ. ಸಂಸದ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ಎಕ್ಸಿಟ್ ಪೋಲ್‍ನಂತೆ ರಾಜ್ಯದಲ್ಲಿ ಎರಡು ಮೂರು ಸೀಟು ಬಂದರೆ ಇವಿಎಂ ಗಡಿಬಿಡಿಯಾಗಿದೆ ಎಂದೇ ಅರ್ಥ. ಮೋದಿ ಮೊದಲಿನಿಂದಲೂ ಕಾಂಗ್ರೆಸ್ 40 ಸೀಟು ದಾಟಲ್ಲ ಎಂದು ಹೇಳುತ್ತಿದ್ದಾರೆ. ಹೇಗೆ ಹೇಳಿದ್ದಾರೆ ಎಂದು ಗೊತ್ತಿಲ್ಲ. ಮೋದಿ ಯಾವುದನ್ನ ದುರುಪಯೋಗ ಮಾಡಿಕೊಂಡು ಹೇಳಿದ್ದಾರೋ ಗೊತ್ತಿಲ್ಲ. ಇದರಲ್ಲಿ ಏನಾದರೂ ಗೋಲ್ ಮಾಲ್ ಇದೆ ಎಂದು ಅನಿಸುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.