Tag: ಉದ್ಯಮಿ

  • ಹುಬ್ಬಳ್ಳಿ ಪ್ರತಿಷ್ಠಿತ ಉದ್ಯಮಿ ಗಡಿಪಾರು!

    ಹುಬ್ಬಳ್ಳಿ ಪ್ರತಿಷ್ಠಿತ ಉದ್ಯಮಿ ಗಡಿಪಾರು!

    ಹುಬ್ಬಳ್ಳಿ: ಪಡಿತರ (Ration) ಅಕ್ಕಿ ಕಳ್ಳಸಾಗಣೆ ಮಾಡಿ, ಸರ್ಕಾರಿ ಯೋಜನೆಗೆ ಮೋಸ ಮತ್ತು ಬೊಕ್ಕಸದ ನಷ್ಟಕ್ಕೆ ಕಾರಣವಾಗಿದ್ದ, ಹುಬ್ಬಳ್ಳಿ ಪ್ರತಿಷ್ಠಿತ ಉದ್ಯಮಿ ಮೇಲೆ ಧಾರವಾಡ ಜಿಲ್ಲಾ ಪೊಲೀಸ್ ಮತ್ತು ಕಂದಾಯ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ.

    ಬಡವರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಉದ್ಯಮಿ ಮಂಜುನಾ‌ಥ್ ವಿರೂಪಾಕ್ಷಪ್ಪ ಹರ್ಲಾಪುರ ಎಂಬವರನ್ನು ಧಾರವಾಡದಿಂದ ಬೀದರ್‍ಗೆ ಆರು ತಿಂಗಳ ಕಾಲ ಗಡಿಪಾರು ಮಾಡಲಾಗಿದೆ. ಹುಬ್ಬಳಿಯ ಬಿಡನಾಳ ನಿವಾಸಿಯಾಗಿರುವ ಮಂಜುನಾ‌ಥ್ ಹರ್ಲಾಪುರ, ಹಲವಾರು ವರ್ಷಗಳಿಂದ ಬಾಲಾಜಿ ಟ್ರೇಡಿಂಗ್ (balaji Trading) ಹೆಸರಿನಲ್ಲಿ ನಲ್ಲಿ ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಬೇರೆ ರಾಜ್ಯಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ. ಅಲ್ಲದೆ ಇದರ ವಿರುದ್ಧ ಧ್ವನಿ ಎತ್ತುವ ಸಾಕ್ಷಿಗಳನ್ನು ಕೂಡ ನಾಶ ಮಾಡುತ್ತಿದ್ದ.

    ಇದರಿಂದಾಗಿ ಧಾರವಾಡ ಪೊಲೀಸ್ ಎಸ್‍ಪಿ ಲೋಕೇಶ್ ಅವರು ಆರೋಪಿಸಿ, ಮಂಜುನಾ‌ಥ್ ಗಡಿಪಾರು ಮಾಡುವಂತೆ ಎಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವಿಚಾರಣೆ ನಡೆಸಿದ ಎಸಿ ಅಶೋಕ್ ತೆಲಿ ಅವರು, ಆರು ತಿಂಗಳು ಮಂಜುನಾಥ್ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಆರೋಪಿಗೆ ಮುಂದಿನ ವಿಧಾಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ನಾಯಕರ ಹಠಮಾರಿತನ- ಬಿಜೆಪಿ ಕಾರ್ಯಕರ್ತರ ನಡುವೆಯೇ ಡಿಶುಂ ಡಿಶುಂ!

  • ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು

    ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು

    ರಾಮನಗರ: ಕಗ್ಗಲೀಪುರದ ಉದ್ಯಮಿ ಪ್ರದೀಪ್ (Businessman Pradeep) ಶೂಟೌಟ್ ಕೇಸ್‍ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಇನ್ನೊಂದು ವಾರದಲ್ಲಿ ನ್ಯಾಯಾಲಯಕ್ಕೆ ತನಿಖಾ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ.

    ಬರೋಬ್ಬರಿ ಇಪ್ಪತ್ತು ಮಂದಿಯ ಹೇಳಿಕೆಯನ್ನ ದಾಖಲಿಸಿರೋ ಪೊಲೀಸ್ರು, ಎ3 ಆರೋಪಿ ಅರವಿಂದ್ ಲಿಂಬಾವಳಿ ಸೇರಿದಂತೆ ಎಲ್ಲರ ಮೇಲೂ ಬಿ ರಿಪೋರ್ಟ್ ಸಲ್ಲಿಕೆ ಸಾಧ್ಯತೆ ಇದೆ. ಪೊಲೀಸರು ಪ್ರಕರಣ ಸಂಬಂಧ ಶಾಸಕ ಅರವಿಂದ ಲಿಂಬಾವಳಿ (Aravind Limbavali) ಬಳಿ ಎರಡು ಪುಟಗಳ ಹೇಳಿಕೆ ಪಡೆದಿದ್ದಾರೆ ಎನ್ನಲಾಗ್ತಿದೆ. ಆದರೆ ನನಗೂ ಪ್ರದೀಪ್ ಆತ್ಮಹತ್ಯೆ ಕೇಸ್‍ಗೂ ಸಂಬಂಧವಿಲ್ಲ. ಪ್ರದೀಪ್ ಪರಿಚಿತ ವ್ಯಕ್ತಿವಾಗಿದ್ದು, ಸ್ನೇಹಿತರ ನಡುವಿನ ಹಣಕಾಸಿನ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದೇ ಅಷ್ಟೇ ಎಂದು ಅರವಿಂದ ಲಿಂಬಾವಳಿ ಹೇಳಿಕೆ ನೀಡಿದ್ದಾರೆ ಎನ್ನಲಾಗ್ತಿದೆ. ಇದನ್ನೂ ಓದಿ: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮೂರು ಡೆತ್‍ನೋಟ್ ಪತ್ತೆ

    ಅಲ್ಲದೆ ಡೆತ್‍ನೋಟ್‍ನಲ್ಲಿ ಪ್ರದೀಪ್ ಮಾಡಿರೋ ಆರೋಪಕ್ಕೆ ಸ್ಪಷ್ಟ ಸಾಕ್ಷ್ಯ ಸಿಗ್ತಿಲ್ಲ. ಮೊಬೈಲ್‍ನ ಟೆಕ್ನಿಕಲ್ ಎವಿಡೆನ್ಸ್ ಹಾಗೂ ಡೆತ್‍ನೋಟ್ ಬಗ್ಗೆಯೂ ಪ್ರಬಲ ಸಾಕ್ಷ್ಯವಿಲ್ಲ. ಸದ್ಯ ಎ1 ಆರೋಪಿ ಗೋಪಿ ಸೇರಿ ಶಾಸಕ ಅರವಿಂದ ಲಿಂಬಾವಳಿ ಒಳಗೊಂಡಂತೆ ಆರು ಮಂದಿ ಆರೋಪಿತರ ಹೇಳಿಕೆಯನ್ನ ದಾಖಲಿಸಿರೋ ಪೊಲೀಸ್ರು ತನಿಖಾ ರಿಪೋರ್ಟ್ ಸಲ್ಲಿಕೆಗೆ ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ನಮ್ಮ ಕಾರ್ಯಕರ್ತನೇ – ಲಿಂಬಾವಳಿ ಸ್ಪಷ್ಟನೆ

  • 20ನೇ ಮಹಡಿಯಿಂದ ಬಿದ್ದು OYO Rooms ಸಂಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!

    20ನೇ ಮಹಡಿಯಿಂದ ಬಿದ್ದು OYO Rooms ಸಂಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!

    ಚಂಡೀಗಢ: ಗಗನಚುಂಬಿ ಕಟ್ಟಡದ 20ನೇ ಮಹಡಿಯಿಂದ ಬಿದ್ದು, ಓಯೋ ರೂಮ್ಸ್ (Oyo Rooms) ಸಂಸ್ಥಾಪಕ ರಿತೇಶ್ ಅಗರ್ವಾಲ್ (Ritesh Agarwal) ಅವರ ತಂದೆ ರಮೇಶ್ ಅಗರ್ವಾಲ್ ಅವರು ಮೃತಪಟ್ಟಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಶುಕ್ರವಾರ ನಡೆದಿದೆ.

    ಗುರುಗ್ರಾಮದ ಸೆಕ್ಟರ್ 54ರಲ್ಲಿರುವ ಡಿಎಲ್‌ಎಫ್‌ನ ದಿ ಕ್ರೆಸ್ಟ್ ಸೊಸೈಟಿಯ 20ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದಿದ್ದಾರೆ ಎಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಿಎಲ್‌ಎಫ್ ಭದ್ರತಾ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ.

    ಪೊಲೀಸರ (Police) ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು. ಘಟನಾ ಸ್ಥಳದಲ್ಲಿ ಪರಿಶೀಲನೆ ವೇಳೆ, ಕಟ್ಟಡದ ಮೇಲಿನಿಂದ ಬಿದ್ದ ವ್ಯಕ್ತಿ ರಮೇಶ್ ಪ್ರಸಾದ್ ಅಗರ್ವಾಲ್ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ರಮೇಶ್ ಅಗರವಾಲ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಇದನ್ನೂ ಓದಿ: ಕೋವಿಡ್‌ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಬೆಲೆ ಭಾರೀ ಇಳಿಕೆ

    ಈ ಕುರಿತು ಪ್ರತಿಕ್ರಿಯಿಸಿರುವ ರಿತೇಶ್ ಅಗರ್ವಾಲ್, ನನಗೆ ನನ್ನ ತಂದೆಯೇ ಮಾರ್ಗದರ್ಶಕರು. ಅವರೇ ನನ್ನ ಶಕ್ತಿ. ಅವರಿಂದು ನಮ್ಮಿಂದ ದೂರವಾಗಿದ್ದಾರೆ. ಅರ್ಥಪೂರ್ಣ ಜೀವನ ನಡೆಸಿದ ಅವರು ನನಗೆ ಪ್ರತಿದಿನ ಸ್ಫೂರ್ತಿಯಾಗಿದ್ದರು. ಅವರ ಪ್ರತಿಯೊಂದು ಮಾತುಗಳು ನನ್ನ ಹೃದಯದಲ್ಲಿ ಆಳವಾಗಿ ಬೇರೂರಿದೆ. ಈ ದುಃಖದ ಸಮಯದಲ್ಲಿ ನನ್ನ ಖಾಸಗಿ ತನವನ್ನೂ ಗೌರವಿಸುವಂತೆ ಎಲ್ಲರಿಗೂ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ರಮೇಶ್ ಅವರ 29 ವರ್ಷದ ಮಗ ರಿತೇಶ್ ಅಗರವಾಲ್ ಅವರ ವಿವಾಹವು ಗೀತಾಂಶಾ ಸೂದ್ ಜತೆ ನಡೆದಿತ್ತು. ಮಾರ್ಚ್ 7 ರಂದು ದೆಹಲಿಯ ತಾಜ್ ಪ್ಯಾಲೇಸ್ ಪಂಚತಾರಾ ಹೋಟೆಲ್‌ನಲ್ಲಿ ಅದ್ಧೂರಿ ಆರತಕ್ಷತೆ ಸಹ ನಡೆದಿತ್ತು ಎನ್ನಲಾಗಿದೆ. ಇದನ್ನೂ ಓದಿ: ಸೆಲೆಬ್ರಿಟಿ, ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಹೊಸ ಗೈಡ್‌ಲೈನ್ಸ್

  • ಶಾಸಕರ ಮನೆ ಬೆನ್ನಲ್ಲೇ ಪ್ರತಿಷ್ಠಿತ ಉದ್ಯಮಿ ಮನೆಯಲ್ಲಿದ್ದ ಕೋಟಿ.. ಕೋಟಿ.. ಅಕ್ರಮ ಹಣ ಸೀಜ್

    ಶಾಸಕರ ಮನೆ ಬೆನ್ನಲ್ಲೇ ಪ್ರತಿಷ್ಠಿತ ಉದ್ಯಮಿ ಮನೆಯಲ್ಲಿದ್ದ ಕೋಟಿ.. ಕೋಟಿ.. ಅಕ್ರಮ ಹಣ ಸೀಜ್

    -ಹುಬ್ಬಳಿ- ಧಾರವಾಡದಲ್ಲಿ ಸಿಬಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ
    -ಉದ್ಯಮಿ ರಮೇಶ್ ಬೊಣಗೇರಿ ಮನೆಯಲ್ಲಿ ಕೋಟಿ ಕೋಟಿ ಹಣ ಕಂಡು ಪೊಲೀಸರೇ ಶಾಕ್

    ಹುಬ್ಬಳಿ: ರಾಜ್ಯದಲ್ಲಿ ಬಿಜೆಪಿ (BJP) ಶಾಸಕ ವಿರೂಪಾಕ್ಷಪ್ಪನ ಮಗನ ಮನೆಯಲ್ಲಿ 8 ಕೋಟಿಗೂ ಹೆಚ್ಚು ಹಣ ಸಿಕ್ಕ ಬೆನ್ನಲ್ಲೇ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ (Hubballi) ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ.

    ಖಚಿತ ಮಾಹಿತಿ ಮೇರೆಗೆ ಹುಬ್ಬಳಿ-ಧಾರವಾಡ ಸಿಸಿಬಿ ಪೊಲೀಸರು (CCB Police), ಪ್ರತಿಷ್ಠಿತ ಉದ್ಯಮಿ ರಮೇಶ್ ಬೊಣಗೇರಿಯ ಭವಾನಿ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ್ದು, 3 ಕೋಟಿ ಹಣ ಪತ್ತೆಯಾಗಿದೆ. ಇದನ್ನೂ ಓದಿ: PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

    ಇಲ್ಲಿಯವರೆಗೆ ಹಣದ ಆದಾಯದ ಮೂಲ ಮಾತ್ರ ಬಯಲಿಗೆ ಬಂದಿಲ್ಲ. ಉದ್ಯಮಿ ರಮೇಶ್ ರಸಗೊಬ್ಬರ ಮತ್ತು ಕ್ರಿಮಿನಾಶಕ ಮಾರಾಟ ವ್ಯಾಪಾರಿಯಾಗಿದ್ದಾನೆ. ಜೊತೆಗೆ ರಾಜ್ಯ ಸರ್ಕಾರದ (Government Of Karnataka) ಕೃಷಿ ಇಲಾಖೆಗೂ ಸಹ ಬೀಜ, ರಸಗೊಬ್ಬರ ಮತ್ತು ಕ್ರಿಮಿನಾಶಕ ಸರಬರಾಜು ಮಾಡುತ್ತಿದ್ದಾನೆ. ಶನಿವಾರ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 3 ಕೋಟಿ ರೂ.ಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಬ್ಲಿಂಕ್ ಸಿನಿಮಾದಲ್ಲಿ ಗಾಯಕಿ ಚೈತ್ರಾ ಆಚಾರ್: ದೇವಕಿ ಝಲಕ್ ರಿಲೀಸ್

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅಶೋಕ್ ನಗರ ಪೊಲೀಸರು, ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಆದಾಯ ತೆರಿಗೆ ಅಧಿಕಾರಿಗಳು ಸಿಸಿಬಿ ಪೊಲೀಸರ ಜೊತೆಗೆ ಸೇರಿ ಹಣ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಒಂದು ವೇಳೆ ಹಣದ ಮೂಲ ಅಪರಾಧದ ಹಿನ್ನೆಲೆ ಹೊಂದಿದ್ದರೆ, ಉದ್ಯಮಿ ರಮೇಶ್ ಬಂಧನವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

    ಲೋಕಾಯುಕ್ತ (Lokayukta) ದಾಳಿಯ ಬೆನ್ನಲ್ಲೇ ಹುಬ್ಬಳಿ-ಧಾರವಾಡ ಸಿಸಿಬಿ ಪೊಲೀಸರು ಈ ಮಹತ್ವದ ಪ್ರಕರಣ ಬಯಲಿಗೆಳೆದಿದ್ದಾರೆ. ಅಧಿಕಾರಿಗಳಿಗೆ ಪೊಲೀಸ್ ಆಯುಕ್ತ ರಮಣಗುಪ್ತಾ ಅಭಿನಂದನೆ ಸಲ್ಲಿಸಿ, 25 ಸಾವಿರ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

  • ಬೆಳಗಾವಿಯಲ್ಲಿ ಉದ್ಯಮಿ ಕೊಲೆ ಪ್ರಕರಣ – 6 ದಿನಗಳ ಬಳಿಕ ಮೃತದೇಹ ಪತ್ತೆ

    ಬೆಳಗಾವಿಯಲ್ಲಿ ಉದ್ಯಮಿ ಕೊಲೆ ಪ್ರಕರಣ – 6 ದಿನಗಳ ಬಳಿಕ ಮೃತದೇಹ ಪತ್ತೆ

    ಬೆಳಗಾವಿ: ಜಿಲ್ಲೆಯ ಗೋಕಾಕ್‌ನಲ್ಲಿ (Gokak) ಕೊಲೆಯಾದ (Murder) ಉದ್ಯಮಿ (Businessman) ರಾಜು ಝಂವರ ಅವರ ಮೃತದೇಹ 6 ದಿನಗಳ ಬಳಿಕ ಪತ್ತೆಯಾಗಿದೆ.

    ಗೋಕಾಕ್ ನಗರದ ರಾಜು ಝಂವರ ಮೃತದೇಹಕ್ಕಾಗಿ ಮೆಗಾ ಸರ್ಚ್ ಆಪರೇಷನ್ ಕೈಗೊಳ್ಳಲಾಗಿತ್ತು. 2 ಜಿಲ್ಲೆಗಳ 350 ಪೊಲೀಸರಿಂದ ಶವ ಪತ್ತೆ ಕಾರ್ಯ ನಡೆದಿತ್ತು. ಗುರುವಾರ ಸಂಜೆ 8:30ರ ಸುಮಾರಿಗೆ ಪಂಚನಾಯಕನಟ್ಟಿ ಬಳಿ ಘಟಪ್ರಭಾ ಬಲದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು ಬೆಳಗಾವಿ, ಬಾಗಲಕೋಟೆ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದೆ.

    ಪ್ರಕರಣ ಹಿನ್ನೆಲೆ:
    ಫೆಬ್ರವರಿ 10ರ ರಾತ್ರಿ ಗೋಕಾಕ್ ನಗರದಿಂದ ಉದ್ಯಮಿ ರಾಜು ಝಂವರ ನಾಪತ್ತೆ ಆಗಿದ್ದರು. ಈ ವೇಳೆ ಗೋಕಾಕ್ ಸಿಟಿ ಆಸ್ಪತ್ರೆ ಬಳಿ ರಾಜು ಝಂವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಆಗ ಆಸ್ಪತ್ರೆ ವೈದ್ಯ ಡಾ. ಸಚಿನ್ ಶಿರಗಾವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾಗಿ ಡಾ. ಸಚಿನ್ ಶಿರಗಾವಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಗೆಳೆಯನ ಶವವನ್ನು ರಸ್ತೆ ಬದಿಯಲ್ಲೇ ಬಿಟ್ಟು ಹೋದ ವ್ಯಾಪಾರಿಗಳು

    ಗೋಕಾಕ್‌ನ ಯೋಗಿಕೊಳ್ಳ ಮಾರ್ಗದಲ್ಲಿ ಮಾರ್ಕಂಡೇಯ ನದಿ ದಡದಲ್ಲಿ ಹರಿತವಾದ ಆಯುಧದಿಂದ ಹಲ್ಲೆಗೈದು ರಾಜು ಅವರನ್ನು ಕೊಲೆ ಮಾಡಲಾಗಿತ್ತು. ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಮೃತದೇಹ ತಂದು ಕೊಳವಿ ಬಳಿ ಕಾಲುವೆಗೆ ಎಸೆದು ಪರಾರಿಯಾಗಿದ್ದರು. ಘಟಪ್ರಭಾ ಬಲದಂಡೆ ಕಾಲುವೆಗೆ ಮೃತದೇಹವನ್ನು ಎಸೆಯಲಾಗಿದ್ದು, ನದಿ ದಡದಲ್ಲಿ ರಕ್ತದ ಕಲೆ, ಮುರಿದ ಕನ್ನಡಕ, ಪೆನ್ ಪತ್ತೆಯಾಗಿತ್ತು. ಆರೋಪಿ ವೈದ್ಯನ ಮಾಹಿತಿ ಮೇರೆಗೆ ಕೊಳವಿ ಗ್ರಾಮದಿಂದ 37 ಕಿಮೀ ದೂರದ ಕಾಲುವೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು.

    CRIME

    ಬೆಳಗಾವಿ ಜಿಲ್ಲೆಯ 3 ಡಿವೈಎಸ್‌ಪಿ, 8 ಇನ್ಸ್ಪೆಕ್ಟರ್, ಬಾಗಲಕೋಟೆ ಎಎಸ್‌ಪಿ ಸೇರಿ 350ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಐವರು ಆರೋಪಿಗಳ ಪೈಕಿ ಮೂವರ ಬಂಧನವಾಗಿದ್ದು ಇನ್ನೂ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ಮಡಿದ ಮಗನ ಹೆಸರಲ್ಲಿ ಮನೆ ನಿರ್ಮಿಸಿದ ತಂದೆ-ತಾಯಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉದ್ಯಮಿಯೊಬ್ಬರನ್ನು 64ನೇ ವಯಸ್ಸಿನಲ್ಲಿ 3ನೇ ಮದುವೆಯಾದ ನಟಿ ಜಯಸುಧಾ

    ಉದ್ಯಮಿಯೊಬ್ಬರನ್ನು 64ನೇ ವಯಸ್ಸಿನಲ್ಲಿ 3ನೇ ಮದುವೆಯಾದ ನಟಿ ಜಯಸುಧಾ

    ಹುಭಾಷಾ ನಟಿ ಜಯಸುಧಾ ತಮ್ಮ 64ನೇ ವಯಸ್ಸಿನಲ್ಲಿ ಮತ್ತೊಂದು ಮದುವೆ ಆಗಿರುವ ಸುದ್ದಿ ತಮಿಳು ಚಿತ್ರೋದ್ಯಮದಲ್ಲಿ ಹರಿದಾಡುತ್ತಿದೆ. ಈಗಾಗಲೇ ಎರಡು ಮದುವೆ ಆಗಿದ್ದ ಅವರು, ಎರಡರಿಂದಲೂ ವಿಚ್ಚೇದನೆ ಪಡೆದಿದ್ದರು. ಇದೀಗ ಮೂರನೇ ಮದುವೆ ಕೂಡ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಉದ್ಯಮಿಯೊಂದಿಗೆ ಹೊಸ ಬದುಕಿಗೆ ಕಾಲಿಟ್ಟಿದ್ದಾರಂತೆ.

    ಈ ಹಿಂದೆ ನಿರ್ಮಾಪಕ ವಡ್ಡೆ ರಮೇಶ್ ಜೊತೆ ಜಯಸುಧಾ ಮದುವೆ ಆಗಿದ್ದರು. ಹೊಂದಾಣಿಕೆಯ ಕೊರತೆಯಿಂದಾಗಿ ಈ ಜೋಡಿ ಬೇರ್ಪಟ್ಟಿತ್ತು. ಇದು ತಮಿಳು ಚಿತ್ರೋದ್ಯಮದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ರಮೇಶ್ ಅವರಿಂದ ವಿಚ್ಚೇದನೆ ಪಡೆದುಕೊಂಡ ನಂತರ ಬಾಲಿವುಡ್ ನಟ ಜಿತೇಂದ್ರ ಕಪೂರ್ ಸಹೋದರ ಸಂಬಂಧಿ ನಿತಿನ್ ಕಪೂರ್ ಜೊತೆ ಸಪ್ತಪದಿ ತುಳಿದಿದ್ದರು. ನಿತಿನ್ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡು ಜಯಸುಧಾ ಅವರನ್ನು ಒಂಟಿಯಾಗಿ ಬಿಟ್ಟು ಹೋದರು. ಇದನ್ನೂ ಓದಿಹನಿಮೂನ್ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ಹರಿಪ್ರಿಯಾ- ವಸಿಷ್ಠ

    ಇಷ್ಟಪಟ್ಟು ಮದುವೆ ಆಗಿದ್ದ ನಿತಿನ್ ಸಾವಿನ ನಂತರ ಜಯಸುಧಾ ತಮ್ಮ ಮಕ್ಕಳೊಟ್ಟಿಗೆ ಜೀವನ ಸಾಗಿಸುತ್ತಿದ್ದರು. ಈ ಹೊತ್ತಲ್ಲಿ ಉದ್ಯಮಿಯೊಬ್ಬರ ಜೊತೆ ಜಯಸುಧಾ ಮದುವೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಲವು ಕಾರ್ಯಕ್ರಮಗಳಲ್ಲಿ ಅವರು ಆ ಉದ್ಯಮಿಯೊಂದಿಗೆ ಭಾಗಿಯಾಗಿದ್ದು ಅನುಮಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ನಡೆದ ಆಲಿ ಮಗಳ ಮದುವೆ ಮತ್ತು ವಾರೀಸು ಸಿನಿಮಾದ ಈವೆಂಟ್ ಗೂ ಕೂಡ ಆ ಉದ್ಯಮಿಯನ್ನು ಜಯಸುಧಾ ಕರೆತಂದಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮೂರು ಡೆತ್‍ನೋಟ್ ಪತ್ತೆ

    ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಮೂರು ಡೆತ್‍ನೋಟ್ ಪತ್ತೆ

    ರಾಮನಗರ: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ (Businessman Pradeep) ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೂ ಮುನ್ನ ಪ್ರದೀಪ್ ಬರೆದಿಟ್ಟಿದ್ದ ಮೂರು ಡೆತ್‍ನೋಟ್ ಪತ್ತೆಯಾಗಿದೆ.

    ನ್ಯೂ ಇಯರ್ ಸೆಲೆಬ್ರೇಷನ್‍ (New Year Celebration) ಗೆ ಅಂತ ಪ್ರದೀಪ್ ತನ್ನ ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಕಗ್ಗಲೀಪರ ಸಮೀಪದ ರೆಸಾರ್ಟ್‍ಗೆ ಹೋಗಿದ್ರು. ರಾತ್ರಿ ಪಾರ್ಟಿ ಮುಗಿಸಿದ ಬಳಿಕ ಮಂಕಾಗಿದ್ದ ಪ್ರದೀಪ್, ಬೆಳಗ್ಗೆ ಯಾರಿಗೂ ಹೇಳದೆ ಬೆಳ್ಳಂದೂರಿನ ಮನೆಗೆ ಬಂದಿದ್ದರು. ಮನೆಗೆ ಬಂದವರೇ ಆತ್ಮಹತ್ಯೆಗೆ ನಿರ್ಧಾರ ಮಾಡಿ, ಮನೆಯಲ್ಲಿದ್ದ ಲೈಸೆನ್ಸ್ ಪಿಸ್ತೂಲ್ ತೆಗೆದುಕೊಂಡಿದ್ದರು. ಬಳಿಕ ಬರೆದಿದ್ದ ಮೂರು ಡೆತ್‍ನೋಟ್‍ಗಳಲ್ಲಿ ಒಂದನ್ನು ಪತ್ನಿ ನಮಿತಾ ವಾರ್ಡ್ ರೋಬ್‍ನಲ್ಲಿಟ್ಟಿದ್ದರು. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಪ್ರಕರಣ – ಲಿಂಬಾವಳಿ ಸೇರಿ 6 ಜನರ ವಿರುದ್ಧ FIR

    ಇದಾದ ಬಳಿಕ ರೆಸಾರ್ಟ್ (Resort) ಗೆ ತೆರಳಿ ಸಂಬಂಧಿಕರ ಕಾರಿನ ವೈಪರ್ ಬಳಿ ಒಂದನ್ನು ಇಟ್ಟಿದ್ದರು. ಮತ್ತೊಂದು ಡೆತ್ ನೋಟನ್ನ ಬ್ಯಾಂಕ್ ದಾಖಲೆಗಳನ್ನ ಅಟ್ಯಾಚ್ ಮಾಡಿ ಕಾರಿನಲ್ಲಿಟ್ಟಿದ್ದರು. ಅದನ್ನ ಗಮನಿಸದ ಸಂಬಂಧಿಕರು ರೆಸಾರ್ಟ್‍ನಿಂದ ಹೊರಟಿದ್ರು. ಪ್ರದೀಪ್ ಸಂಬಂಧಿಕರು ಹೋಗ್ತಿದ್ದ ಕಾರನ್ನ ಓವರ್ ಟೇಕ್ ಮಾಡಿ, ಒಂದು ಕಿ.ಮೀ ದೂರದಲ್ಲಿ ನಿಟ್ಟಿಗೆರೆ ಎಂಬಲ್ಲಿ ಪಿಸ್ತೂಲ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರದೀಪ್ ಕಾರು ಹತ್ತಿರ ಬಂದು ಸಂಬಂಧಿಕರು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ತಾನು ಆತ್ಮಹತ್ಯೆ ಮಾಡಿಕೊಂಡ್ರೆ ಅನಾಥ ಶವವಾಗಬಾರದು ಅನ್ನೋ ಕಾರಣಕ್ಕೆ ಇಷ್ಟೆಲ್ಲಾ ಸರ್ಕಸ್ ಮಾಡಿದ್ದರು ಎನ್ನಲಾಗ್ತಿದೆ.

    ಸದ್ಯ ಡೆತ್‍ನೋಟ್‍ನಲ್ಲಿದ್ದ ಶಾಸಕ ಅರವಿಂದ ಲಿಂಬಾವಳಿ (Aravind Limbavali) ಸೇರಿದಂತೆ ಐವರು ಆರೋಪಿಗಳಿಗೆ ಕಗ್ಗಲೀಪುರ ಪೊಲೀಸ (Kaggalipura Police) ರಿಂದ ನೊಟೀಸ್ ನೀಡಲಾಗಿದೆ. ಪ್ರದೀಪ್ ಪತ್ನಿಯ ಮೇಲೂ ಕೆಲವು ಅನುಮಾನಗಳು ಇರುವುದರಿಂದ ನಮಿತಾಳ ಫೋನ್‍ನ ಸಿಡಿಆರ್ ಅನ್ನು ಪೊಲೀಸರು ಕಲೆಕ್ಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ನಮ್ಮ ಕಾರ್ಯಕರ್ತನೇ – ಲಿಂಬಾವಳಿ ಸ್ಪಷ್ಟನೆ

    ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ನಮ್ಮ ಕಾರ್ಯಕರ್ತನೇ – ಲಿಂಬಾವಳಿ ಸ್ಪಷ್ಟನೆ

    ಬೆಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಉದ್ಯಮಿ (Businessman) ಪ್ರದೀಪ್ ನಮ್ಮ ಪಕ್ಷದ ಕಾರ್ಯಕರ್ತನೇ ಎಂದು ಶಾಸಕ ಅರವಿಂದ್ ಲಿಂಬಾವಳಿ (Arvind Limbavali) ಸ್ಪಷ್ಟನೆ ನೀಡಿದ್ದಾರೆ.

    ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಎಫ್‌ಐಆರ್ (FIR) ದಾಖಲಾಗಿರುವ ಕುರಿತು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ. ನಿನ್ನೆಯಿಂದಲೂ ಕುತೂಹಲದಿಂದ ಬಹಳ ಜನ ನನಗೆ ಕರೆ ಮಾಡಿದ್ದರು. ಆ ಘಟನೆ ಬಗ್ಗೆ ಸ್ಪಷ್ಟಿಕರಣ ಕೊಡಲು ಮಾತನಾಡುತ್ತಿದ್ದೇನೆ. ಮೊದಲನೆಯದಾಗಿ ಪ್ರದೀಪನ ಆತ್ಮಕ್ಕೆ ಶಾಂತಿ ಸಿಗಲಿ, ಅವನು ನಮ್ಮ ಕಾರ್ಯಕರ್ತನೆ ಎಂದು ತಿಳಿಸಿದ್ದಾರೆ. 

    ಪ್ರದೀಪ್ ನಮ್ಮ ಪಕ್ಷದ ಕಾರ್ಯಕರ್ತ, 2019ರ ಚುನಾವಣೆಯಲ್ಲಿ (Election) ಸೋಷಿಯಲ್ ಮೀಡಿಯಾ (Social Media) ಕಾಂಟ್ರ್ಯಾಕ್ಟ್‌ ತೆಗೆದುಕೊಂಡು ಕೆಲಸ ಮಾಡಿದರು. ಆ ನಂತರ ಕಾರ್ಯಕರ್ತನಾಗಿ ವಾರ್ಡ್ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದ. ಅಂತಹವನು ಈ ಸ್ಥಿತಿಗೆ ಹೋಗಿರುವುದು ದುರದೃಷ್ಟಕರ ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕನ ಸಿನಿಮಾದಲ್ಲಿ ನಾನಾ ಪಾಟೇಕರ್: ಏನಿದು ಮಿಸ್ ಮ್ಯಾಚ್ ಜೋಡಿ?

    ಕಳೆದ ಜೂನ್ ತಿಂಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ನನ್ನೊಂದಿಗೆ ಮಾತನಾಡಲು ಬಂದಿದ್ದ. ನನ್ನ ಹತ್ತಿರ ಸಮಸ್ಯೆ ಹೇಳಿಕೊಂಡ. ಕೂಡಲೇ ನಾನು ಅವನು ಹೇಳಿದ ನಂಬರ್‌ಗಳಿಗೆ ಕರೆ ಮಾಡಿದ್ದೆ, ಪ್ರದೀಪ್ ಹೂಡಿಕೆ ಮಾಡಿದ್ದ ಹಣ ವಾಪಸ್ ಕೊಡಿ ಅಂತ ಹೇಳಿದ್ದೆ. ಆದ್ರೆ ಕರೆ ಸ್ವೀಕರಿಸಿದ್ದ ವ್ಯಕ್ತಿ ಕೊರೊನಾ ಸಂಕಷ್ಟ ನಿವಾರಿಸಿಕೊಂಡು ಹಣ ಕೊಡ್ತೀವಿ ಎಂದಿದ್ದರು. 15 ದಿನದ ನಂತರ ಪುನಃ ಬಂದಾಗ ಅವನು ಹೇಳಿದ ಇಬ್ಬರಿಗೂ ಮತ್ತೆ ಕರೆ ಮಾಡಿ ಖಾರವಾಗಿಯೇ ಹೇಳಿದೆ. ಪ್ರದೀಪ್ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾನೆ ಹಣ ಸೆಟ್ಲು ಮಾಡಿ ಅಂತಾ ವಾರ್ನಿಂಗ್ ಸಹ ಮಾಡಿದ್ದೆ. ನಂತರ ಗುದ್ದಲಿ ಪೂಜೆ ಕಾರ್ಯಕ್ರಮವೊಂದರಲ್ಲಿ ಸಿಕ್ಕಿ ಸಮಸ್ಯೆ ಬಗೆಹರಿದಿದೆ ಥ್ಯಾಂಕ್ಸ್ ಅಂತಾ ಹೇಳಿದ್ದ ಎಂದು ವಿವರಿಸಿದ್ದಾರೆ.

    ಅದಾದ ನಂತರ ಬೆಳ್ಳಂದೂರು ಠಾಣೆಯಲ್ಲಿ ಅವರ ಪತ್ನಿ ದೂರು ನೀಡಿದ್ದರು. ಅವರ ಕೌಟುಂಬಿಕ ಸಮಸ್ಯೆ ಆದಾಗ ನನ್ನ ಹತ್ತಿರ ಬಂದಿದ್ದರು. ಆಗಲೂ ಪೊಲೀಸರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೆ. ಈಗ ಡೆತ್ ನೋಟ್ ಬರೆದಿಟ್ಟಿರುವ ಬಗ್ಗೆಯೂ ತನಿಖೆ ನಡೆಯಬೇಕು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

    ಎಫ್‌ಐಆರ್‌ನಲ್ಲಿ ಹೆಸರು ದಾಖಲಾಗಿರೋ ಗೋಪಿ, ಸುಬ್ಬಯ್ಯ ಎಲ್ಲರೂ ನನಗೆ ಪರಿಚಯಸ್ಥರೇ. ಅವರು ವೈಟ್ ಪಟೇಲ್ಸ್‌ನ (White Petals) ಮಾಲಿಕರು. ನಮ್ಮ ಪಕ್ಷದ ಕಾರ್ಯಕ್ರಮಗಳು ಅಲ್ಲಿ ನಡೆಯುತ್ತಿರುತ್ತದೆ. ಆದ್ದರಿಂದ ಸಹಜವಾಗಿಯೇ ಪರಿಚಯ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಪ್ರಕರಣ – ಲಿಂಬಾವಳಿ ಸೇರಿ 6 ಜನರ ವಿರುದ್ಧ FIR

    ಏನಿದು ಪ್ರಕರಣ?
    ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಉದ್ಯಮಿ ಪ್ರದೀಪ್ ಡೆತ್ ನೋಟ್‌ನಲ್ಲಿ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ಬೆಂಗಳೂರಿನ ದಕ್ಷಿಣ ತಾಲೂಕು ನೆಟ್ಟಗೆರೆ ಬಳಿ ತಮ್ಮ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್‌ನಲ್ಲಿ ಅರವಿಂದ ಲಿಂಬಾವಳಿ, ಗೋಪಿ, ರಘುವ ಭಟ್, ಸೋಮಯ್ಯ, ರಮೇಶ್ ರೆಡ್ಡಿ ಹಾಗೂ ಜಯರಾಮ್ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಪ್ರಕರಣ – ಲಿಂಬಾವಳಿ ಸೇರಿ 6 ಜನರ ವಿರುದ್ಧ FIR

    ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಪ್ರಕರಣ – ಲಿಂಬಾವಳಿ ಸೇರಿ 6 ಜನರ ವಿರುದ್ಧ FIR

    ರಾಮನಗರ: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ (businessman) ಪ್ರದೀಪ್ ಆತ್ಮಹತ್ಯೆ (Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅರವಿಂದ ಲಿಂಬಾವಳಿ (Arvind Limbavali) ಸೇರಿದಂತೆ ಒಟ್ಟು 6 ಜನರ ವಿರುದ್ಧ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ.

    ಉದ್ಯಮಿ ಪ್ರದೀಪ್ ಡೆತ್ ನೋಟ್‌ನಲ್ಲಿ (Death Note) ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ಬೆಂಗಳೂರಿನ ದಕ್ಷಿಣ ತಾಲೂಕು ನೆಟ್ಟಗೆರೆ ಬಳಿ ತಮ್ಮ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್‌ನಲ್ಲಿ ಅರವಿಂದ ಲಿಂಬಾವಳಿ, ಗೋಪಿ, ರಘುವ ಭಟ್, ಸೋಮಯ್ಯ, ರಮೇಶ್ ರೆಡ್ಡಿ ಹಾಗೂ ಜಯರಾಮ್ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಘಟನೆಯೇನು?: ಹೊಸ ವರ್ಷಾಚರಣೆ ಸಲುವಾಗಿ ಕುಟುಂಬ ಸಮೇತ ರಾಮನಗರದ ಕಗ್ಗಲೀಪುರ ಸಮೀಪವಿರುವ ನೆಟ್ಟಗೆರೆ ಬಳಿ ಇರುವ ರೆಸಾರ್ಟ್‌ಗೆ ಬಂದಿದ್ದ ಪ್ರದೀಪ್ ರಾತ್ರಿ ಪಾರ್ಟಿ ಮಾಡಿ, ಬೆಳಗ್ಗೆ ಶಿರಾಗೆ ಹೋಗಬೇಕು ಎಂದು ಹೇಳಿ ರೆಸಾರ್ಟ್‌ನಿಂದ ಭಾನುವಾರ ಬೆಳಗ್ಗೆ ಒಬ್ಬರೇ ಬೆಂಗಳೂರಿನಲ್ಲಿನ ತಮ್ಮ ನಿವಾಸಕ್ಕೆ ಹೋಗಿ ಡೆತ್ ನೋಟ್ ಬರೆದಿದ್ದಾರೆ. ಬಳಿಕ ರೆಸಾರ್ಟ್‌ಗೆ ವಾಪಸ್ ಬರುವಾಗ ಕಾರಿನಲ್ಲೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಡೆತ್ ನೋಟ್‌ನಲ್ಲಿ ಕಾರಣ ಉಲ್ಲೇಖಿಸಿರುವ ಪ್ರದೀಪ್, ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಬಳಿ ರೆಸಾರ್ಟ್ ತೆರೆಯಲು 5 ಮಂದಿ ನನ್ನ ಬಳಿ ಮಾತನಾಡಿ, ಒಂದೂವರೆ ಕೋಟಿ ರೂ. ಹಣ ಪಡೆದುಕೊಂಡಿದ್ದರು. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಮನೆ ಮಾರಿದ್ದೆ. ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ, ಪಾಲುದಾರಿಕೆ ಹೆಸರಿನಲ್ಲಿ ನನಗೆ ಮೋಸ ಮಾಡಿದ್ದಾರೆ. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು. ಇದನ್ನೂ ಓದಿ: ಸಂಸದ ರಾಘವೇಂದ್ರರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ದರ್ಮರಣ

    ಈ ನಡುವೆ ರಾಜಕಾರಣಿಯೊಬ್ಬರು ರಾಜಿ ಮಾಡುವ ಪ್ರಯತ್ನ ಮಾಡಿದ್ದರು. ಆದರೂ ನನಗೆ ಪೂರ್ಣ ಹಣ ನೀಡದೇ ಮೋಸ ಮಾಡಲಾಗಿದೆ. ಈ ಬಗ್ಗೆ ಕೇಳಿದರೆ ಆ ರಾಜಕಾರಣಿಯವರು ಸಹ ನನಗೆ ಸಹಾಯ ಮಾಡಿಲ್ಲ. ಹೀಗಾಗಿ ನನ್ನ ಸಾವಿಗೆ ಈ 6 ಮಂದಿ ಕಾರಣ, ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಪ್ರದೀಪ್ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಇದೀಗ ಮೃತ ಉದ್ಯಮಿ ಪತ್ನಿ ನಮಿತಾ ದೂರಿನನ್ವಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಈ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳೆಲ್ಲರಿಗೂ ನೋಟಿಸ್ ನೀಡಿ ಪೊಲೀಸರು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ವೋಟರ್ ಐಡಿ ಗೋಲ್ಮಾಲ್ – ಸ್ಥಳೀಯ ಶಾಸಕರ ಮೇಲೆ ಕಾಂಗ್ರೆಸ್ ಆರೋಪ

    Live Tv
    [brid partner=56869869 player=32851 video=960834 autoplay=true]

  • ಕಾರಿನಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ- ಡೆತ್‌ನೋಟ್‌ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು ಉಲ್ಲೇಖ

    ಕಾರಿನಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ- ಡೆತ್‌ನೋಟ್‌ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು ಉಲ್ಲೇಖ

    ರಾಮನಗರ: ಪ್ರಭಾವಿ ರಾಜಕಾರಣಿ ಸೇರಿ 6 ಮಂದಿ ಉದ್ಯಮಿಗಳ (Businessman) ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು (Bengaluru) ದಕ್ಷಿಣ ತಾಲೂಕಿನ ನೆಟ್ಟಗೆರೆ ಬಳಿ ನಡೆದಿದೆ.

    ಬೆಂಗಳೂರಿನ ಎಚ್‌ಎಸ್ಆರ್ ಲೇಔಟ್ ಬಳಿಯ ಅಮಲೀಪುರದ ನಿವಾಸಿ ಪ್ರದೀಪ್ (47) ಆತ್ಮಹತ್ಯೆಗೆ ಶರಣಾಗಿರುವ ಉದ್ಯಮಿ. ಸಾವಿಗೂ ಮುನ್ನ ರಾಜಕಾರಣಿಯ (Politician) ಹೆಸರು, ಉದ್ಯಮಿಗಳ ಹೆಸರನ್ನು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

    ಹೊಸ ವರ್ಷಾಚರಣೆ ಸಲುವಾಗಿ ಕುಟುಂಬ ಸಮೇತ ರಾಮನಗರದ ಕಗ್ಗಲೀಪುರ ಸಮೀಪವಿರುವ ನೆಟ್ಟಗೆರೆ ಬಳಿ ಇರುವ ರೆಸಾರ್ಟ್‌ಗೆ ಕುಟುಂಬ ಸಮೇತ ಬಂದಿದ್ದ ಪ್ರದೀಪ್ ರಾತ್ರಿ ಪಾರ್ಟಿ ಮಾಡಿ, ಬೆಳಗ್ಗೆ ಶಿರಾಗೆ ಹೋಗಬೇಕು ಎಂದು ಹೇಳಿ ರೆಸಾರ್ಟ್‌ನಿಂದ ಭಾನುವಾರ ಬೆಳಗ್ಗೆ ಒಬ್ಬರೆ ಬೆಂಗಳೂರಿನಲ್ಲಿನ ತಮ್ಮ ನಿವಾಸಕ್ಕೆ ಹೋಗಿ ಡೆತ್ ನೋಟ್ ಬರೆದಿದ್ದಾನೆ. ಬಳಿಕ ರೆಸಾರ್ಟ್‌ಗೆ ವಾಪಸ್ಸು ಬರುವಾಗ ಕಾರಿನಲ್ಲೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಡೆತ್ ನೋಟ್‌ನಲ್ಲಿ ಕಾರಣ ಉಲ್ಲೇಖಿಸಿರುವ ಪ್ರದೀಪ್, ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಬಳಿ ರೆಸಾರ್ಟ್ ತೆರೆಯಲು 5 ಮಂದಿ ನನ್ನ ಬಳಿ ಮಾತನಾಡಿ, ಒಂದೂವರೆ ಕೋಟಿ ಹಣ ಪಡೆದುಕೊಂಡಿದ್ದರು. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಮನೆ ಮಾರಿದ್ದೆ. ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ, ಪಾಲುದಾರಿಕೆ ಹೆಸರಿನಲ್ಲಿ ನನಗೆ ಮೋಸ ಮಾಡಿದ್ದಾರೆ. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು. ಈ ನಡುವೆ ರಾಜಕಾರಣಿಯೊಬ್ಬರು ರಾಜಿ ಮಾಡುವ ಪ್ರಯತ್ನ ಮಾಡಿದ್ದರು. ಆದರೂ ನನಗೆ ಪೂರ್ಣ ಹಣ ನೀಡದೇ ಮೋಸ ಮಾಡಲಾಗಿದೆ‌. ಆಂಧ್ರದ ಮಾಜಿ ಸಿಎಂ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿ

    ಈ ಬಗ್ಗೆ ಕೇಳಿದರೆ ಆ ರಾಜಕಾರಣಿಯವರು ಸಹ ನನಗೆ ಸಹಾಯ ಮಾಡಿಲ್ಲ. ಹಾಗಾಗಿ ನನ್ನ ಸಾವಿಗೆ ಈ 6 ಮಂದಿ ಕಾರಣ, ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಪ್ರದೀಪ್ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಮನಗರ ಎಸ್ಪಿ ಸಂತೋಷ್ ಬಾಬು ಕೂಡಾ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಲಾರ ಸಂಸದ ಮುನಿಸ್ವಾಮಿಗೆ ಮುತ್ತು ಕೊಟ್ಟ ಮಾಜಿ ಸಚಿವ ವರ್ತೂರು ಪ್ರಕಾಶ್

    Live Tv
    [brid partner=56869869 player=32851 video=960834 autoplay=true]