Tag: ಉಧಂಪುರ

  • ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಜೈಶ್-ಎ-ಮೊಹಮ್ಮದ್ (Jaish-e-Mohammed) ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ.

    ಶುಕ್ರವಾರ (ಸೆ.20) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದೋಡಾ-ಉಧಂಪುರ ಗಡಿಯ ಬಳಿ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಗಾಯಗೊಂಡಿದ್ದ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಇದೇ ವೇಳೆ ಜೈಶ್-ಎ-ಮೊಹಮ್ಮದ್ ಸಂಘಟನೆಯವರು ಎನ್ನಲಾದ ನಾಲ್ವರು ಶಂಕಿತ ಉಗ್ರರು ಭದ್ರತಾ ಪಡೆಯ ಬಲೆಗೆ ಬಿದ್ದಿದ್ದಾರೆ.ಇದನ್ನೂ ಓದಿ: ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ

    ಈ ಕುರಿತು ಸೇನೆ ಮಾಹಿತಿ ನೀಡಿದ್ದು, ಭದ್ರತಾ ಪಡೆ ಹಾಗೂ ಪೊಲೀಸರು ನಿರ್ದಿಷ್ಟ ಮಾಹಿತಿಯ ಮೇರೆಗೆ ದೋಡಾ-ಉಧಂಪುರ ಗಡಿಯ ದುಡು ಬಸಂತ್‌ಗಢದ ಎತ್ತರ ಪ್ರದೇಶಕ್ಕೆ ತಲುಪಿದಾಗ ಗುಂಡಿನ ಚಕಮಕಿ ನಡೆದಿದೆ. ದಾಳಿ ವೇಳೆ ಯೋಧರೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

  • ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಎನ್‌ಕೌಂಟರ್ – ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

    ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಎನ್‌ಕೌಂಟರ್ – ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಉಧಂಪುರ (Udhampur) ಜಿಲ್ಲೆಯ ಬಸಂತಗಢದಲ್ಲಿ (Basantgarh) ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.

    ‘ಆಪರೇಷನ್ ಬಿಹಾಲಿ’ (Operation Bihali) ಹೆಸರಿನಲ್ಲಿ ಬಸಂತಗಢ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದೆ. ಇದೇ ವೇಳೆ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರ ಹತ್ಯೆಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್

    ಅಮರನಾಥ ಯಾತ್ರೆ ಆರಂಭಗೊಳ್ಳುವ ಒಂದು ವಾರ ಮೊದಲೇ ಈ ಪ್ರದೇಶದಲ್ಲಿ ಉಗ್ರರು ಶಸ್ತ್ರಾಸ್ತ್ರಗಳೊಂದಿಗೆ ಅಡಗಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜಮ್ಮು ವಲಯದ ಪೊಲೀಸ್ ಮಹಾನಿರ್ದೇಶಕ ಭೀಮ್ ಸೇನ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ – ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಸೇರಿದ ಮೊದಲ ಭಾರತೀಯ ಶುಕ್ಲಾ

  • ಜಮ್ಮು-ಕಾಶ್ಮೀರ: ವಾಹನದೊಳಗೆ ಇಬ್ಬರು ಪೊಲೀಸ್‌ ಸಿಬ್ಬಂದಿ ಮೃತದೇಹ ಪತ್ತೆ

    ಜಮ್ಮು-ಕಾಶ್ಮೀರ: ವಾಹನದೊಳಗೆ ಇಬ್ಬರು ಪೊಲೀಸ್‌ ಸಿಬ್ಬಂದಿ ಮೃತದೇಹ ಪತ್ತೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪೊಲೀಸ್ ವಾಹನದೊಳಗೆ ಗುಂಡಿನ ಗಾಯಗಳಿರುವ ಇಬ್ಬರು ಪೊಲೀಸ್‌ ಸಿಬ್ಬಂದಿ ಮೃತದೇಹ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಎಕೆ-47 ರೈಫಲ್ ಗುಂಡೇಟು ಬಿದ್ದಿವೆ ಎಂದು ಉಧಂಪುರ ಪೊಲೀಸರು ತಿಳಿಸಿದ್ದಾರೆ. ಸಿಬ್ಬಂದಿ ಸೋಪೋರ್‌ನಿಂದ ತಲ್ವಾರ ತರಬೇತಿ ಕೇಂದ್ರಕ್ಕೆ ತೆರಳುತ್ತಿದ್ದರು ಎಂದು ಎಸ್‌ಎಸ್‌ಪಿ ಉಧಂಪುರ ಅಮೋದ್ ಅಶೋಕ್ ನಾಗ್‌ಪುರೆ ಮಾಹಿತಿ ನೀಡಿದ್ದಾರೆ.

    ಬೆಳಗ್ಗೆ 6:30 ಕ್ಕೆ ಘಟನೆ ನಡೆದಿದೆ. ಅವರು ಸೋಪೋರ್‌ನಿಂದ ತಲ್ವಾರದಲ್ಲಿರುವ ತರಬೇತಿ ಕೇಂದ್ರದ ಕಡೆಗೆ ಹೋಗುತ್ತಿದ್ದರು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆಯಲ್ಲಿ ಎಕೆ -47 ರೈಫಲ್ ಬಳಸಿರುವುದು ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

    ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮತ್ತು ಇತರ ಕಾರ್ಯವಿಧಾನಗಳಿಗಾಗಿ ಜಿಎಂಸಿ ಉಧಂಪುರಕ್ಕೆ ಸಾಗಿಸಲಾಗಿದೆ.

  • ಉಗ್ರರ ದಾಳಿಯಲ್ಲಿ ಮಾಗಡಿಯ ಯೋಧ ಹುತಾತ್ಮ

    ಉಗ್ರರ ದಾಳಿಯಲ್ಲಿ ಮಾಗಡಿಯ ಯೋಧ ಹುತಾತ್ಮ

    ರಾಮನಗರ: ಜಮ್ಮುವಿನ ಉಧಂಪುರ ಕ್ಯಾಂಪ್ ಬಳಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಮಾಗಡಿಯ ವೀರ ಯೋಧ ಹುತಾತ್ಮರಾಗಿದ್ದಾರೆ.

    ಮಾಗಡಿ ಪಟ್ಟಣದ ಹೊಂಬಾಳಮ್ಮನಪೇಟೆಯ ಪಾಪಣ್ಣ ಅವರ ಪುತ್ರ ವೆಂಕಟ ನರಸಿಂಹಮೂರ್ತಿ(29) ಉಗ್ರರ ಗುಂಡಿಗೆ ಹುತಾತ್ಮರಾದ ವೀರಯೋಧ. ಸಿಐಎಸ್‍ಎಫ್‍ನಲ್ಲಿ ವೆಂಕಟ ನರಸಿಂಹಮೂರ್ತಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಮೃತದೇಹವನ್ನು ಜಮ್ಮುವಿನ ಸರ್ಕಾರಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಕುಟುಂಬಗಳಿಂದ ಮಾಹಿತಿ ಲಭ್ಯವಾಗಿದೆ.

    ಮಾಗಡಿ ಪೊಲೀಸ್ ಠಾಣೆಗೆ ಈ ಬಗ್ಗೆ ಮಾಹಿತಿ ರವಾನೆಯಾಗಿದ್ದು, ಹೆಚ್ಚಿನ ಮಾಹಿತಿ ಬರಬೇಕಾಗಿದೆ. ಈಗಾಗಲೇ ಪೊಲೀಸರು ವೆಂಕಟ ನರಸಿಂಹಮೂರ್ತಿ ಕುಟುಂಬಸ್ಥರಿಗೆ ವಿಷಯ ಮುಟ್ಟಿಸಲಾಗಿದೆ. ವೀರ ಯೋಧ ಸಾವನ್ನಪ್ಪಿದ ವಿಚಾರ ತಿಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಯೋಧ ವೆಂಕಟ ನರಸಿಂಹಮೂರ್ತಿ ಅವರ ಪಾರ್ಥೀವ ಶರೀರ ಯಾವಾಗ ಮಾಗಡಿಗೆ ತಲುಪಲಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಇತ್ತೀಚೆಗಷ್ಟೇ ರಜೆ ಮೇಲೆ ಮಾಗಡಿಗೆ ಬಂದಿದ್ದ ಯೋಧ ವೆಂಕಟ ನರಸಿಂಹಮೂರ್ತಿ ಮರಳಿ ಜಮ್ಮು-ಕಾಶ್ಮೀರ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.