Tag: ಉಧಂಪುರ ದಾಳಿ

  • BSF ಯೋಧರನ್ನು ಬಲಿ ಪಡೆದಿದ್ದ ಉಗ್ರ ಪಾಕ್‌ನಲ್ಲಿ ಗುಂಡಿನ ದಾಳಿಗೆ ಬಲಿ- 2015ರಲ್ಲಿ ನಡೆದಿದ್ದೇನು?

    BSF ಯೋಧರನ್ನು ಬಲಿ ಪಡೆದಿದ್ದ ಉಗ್ರ ಪಾಕ್‌ನಲ್ಲಿ ಗುಂಡಿನ ದಾಳಿಗೆ ಬಲಿ- 2015ರಲ್ಲಿ ನಡೆದಿದ್ದೇನು?

    ಇಸ್ಲಾಮಾಬಾದ್‌: ಪಾಕಿಸ್ತಾನದ ಕರಾಚಿಯಲ್ಲಿ (Pakistan Karachi) ಅಪರಿಚಿತ ಬಂದೂಕುದಾರಿಗಳಿಂದ ನಡೆದ ಗುಂಡಿನ ದಾಳಿಗೆ 2015ರ ಉಧಂಪುರ ದಾಳಿಯ ಮಾಸ್ಟರ್‌ ಮೈಂಡ್‌ ಲಷ್ಕರ್-ಎ-ತೊಯ್ಬಾ (LET) ಭಯೋತ್ಪಾದಕ ಹಂಜ್ಲಾ ಅದ್ನಾನ್ (Hanzla Adnan) ದುರ್ಮರಣಕ್ಕೀಡಾಗಿದ್ದಾನೆ.

    2015ರಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಉಧಂಪುರದಲ್ಲಿ BSF ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಯ ಮಾಸ್ಟರ್‌ ಮೈಂಡ್‌ ಇತನೇ ಆಗಿದ್ದ. 2008ರ ನವೆಂಬರ್‌ 26ರಂದು ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಎಲ್ಇಟಿ ಮುಖ್ಯಸ್ಥ ಹಫೀಜ್ ಸಯೀದ್‌ನ ನಿಕಟವರ್ತಿಯೂ ಆಗಿದ್ದ ಎಂದು ಪರಿಗಣಿಸಲಾಗಿದೆ.

    ಇತ್ತೀಚೆಗೆ ಹಂಝ್ಲಾ ಅದ್ನಾನ್ ತನ್ನ ಕಾರ್ಯಾಚರಣೆಯ ನೆಲೆಯನ್ನು ರಾವಲ್ಪಿಂಡಿಯಿಂದ ಕರಾಚಿಗೆ ಬದಲಾಯಿಸಿದ್ದ. ಕಳೆದ ಎರಡು ದಿನಗಳ ಹಿಂದೆ ತಡರಾತ್ರಿಯಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ನಡೆದ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಈಗ ವಿಶ್ವದ ಶಕ್ತಿಶಾಲಿ ಮಹಿಳೆ – ನಂ.1 ಸ್ಥಾನದಲ್ಲಿ ಯಾರಿದ್ದಾರೆ?

    ಅಪರಿಚಿತರು ಗುಂಡಿನ ದಾಳಿ ನಡೆಸಿದಾಗ ಹಂಜ್ಲಾ ಅದ್ನಾನ್‌ಗೆ ನಾಲ್ಕು ಬುಲೆಟ್‌ ತಗುಲಿತ್ತು, ಇದರಿಂದ ತೀವ್ರ ರಕ್ತಸ್ರಾವವಾಗಿತ್ತು. ಈ ಸುಳಿವನ್ನು ಬಿಟ್ಟುಕೊಡದ ಪಾಕಿಸ್ತಾನ ಸೇನೆ ರಹಸ್ಯವಾಗಿ ಕರಾಚಿಯ ಆಸ್ಪತ್ರೆಗೆ ಕರೆದೊಯ್ದಿತ್ತು. ಎರಡು ದಿನಗಳ ನಂತ್ರ ಚಿಕಿತ್ಸೆ ಫಲಕಾರಿಯಾಗದೇ ಡಿಸೆಂಬರ್‌ 5ರಂದು ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.

    2015ರಲ್ಲಿ ಏನಾಗಿತ್ತು?
    ಉಗ್ರ ಹಂಝ್ಲಾ ಅದ್ನಾನ್ 2015ರಲ್ಲಿ ಉಧಂಪುರದಲ್ಲಿ ಭಾರತೀಯ ಬಿಎಸ್‌ಎಫ್‌ ಯೋಧರ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದ. ಈ ದಾಳಿಯಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದರು. 13 ಮಂದಿ ಗಾಯಗೊಂಡಿದ್ದರು. ಈ ಬಗ್ಗೆ ಎನ್‌ಐಎ, ಬಿಎಸ್‌ಎಫ್‌ ತನಿಖೆ ನಡೆಸಿ ಆರೋಪಪಟ್ಟಿಯನ್ನೂ ಸಲ್ಲಿಸಿತ್ತು. ಇದನ್ನೂ ಓದಿ: ಭಾರತದ ವಿರುದ್ಧ ಉಗ್ರ ಚಟುವಟಿಕೆಗಳಲ್ಲಿ ಭಾಗಿ – ಖಲಿಸ್ತಾನಿ ಭಯೋತ್ಪಾದಕ ಪಾಕ್‌ನಲ್ಲಿ ಸಾವು

    ಆ ನಂತರವೂ ಉಗ್ರನ ಆಕ್ರೋಶ ಮುಂದುವರಿದಿತ್ತು. 2016ರಲ್ಲಿಯೂ ಜಮ್ಮು ಮತ್ತು ಕಾಶ್ಮೀರದ ಪಾಂಪೋರ್‌ ಪ್ರದೇಶದಲ್ಲಿ ಸಿಆರ್‌ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಬೆಂಗಾವಲು ಪಡೆ ಮೇಲೆ ಎಲ್‌ಇಟಿ ಭಯೋತ್ಪಾದಕ ದಾಳಿ ನಡೆಸಿ, 8 ಸಿಆರ್‌ಪಿಎಫ್ ಯೋಧರನ್ನು ಹತ್ಯೆಗೈದಿದ್ದತ್ತು. 22 ಮಂದಿ ಗಾಯಗೊಂಡಿದ್ದರು. ಈ ದಾಳಿಯಲ್ಲೂ ಹಂಝ್ಲಾ ಅದ್ನಾನ್ ಪ್ರಮುಖ ಪಾತ್ರ ವಹಿಸಿದ್ದ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ನೈಜೀರಿಯಾದಲ್ಲಿ ಗುರಿ ತಪ್ಪಿದ ಸೇನಾ ಡ್ರೋನ್‌ ದಾಳಿ – 85 ಮಂದಿ ನಾಗರಿಕರು ಬಲಿ