ಚೆನ್ನೈ: ಇಂಡಿಯಾ (INDIA) ಒಕ್ಕೂಟ ಒಟ್ಟಾಗಿ ಉಪರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಎಂದು ಹೇಳಿದರು.
ತಮಿಳುನಾಡಿನ (Tamilnadu) ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಕುರಿತಾಗಿ ಮಾತನಾಡಿದ ಅವರು, ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್‌ಡಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ. ಅಡ್ಡ ಮತದಾನವಾಗುವ ಸಾಧ್ಯತೆ ಇರುತ್ತೆ. ಆದರೆ ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ. ಅಡ್ಡ ಮತದಾನದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದರು.ಇದನ್ನೂ ಓದಿ: ಇಂದು ಉಪರಾಷ್ಟ್ರಪತಿ ಚುನಾವಣೆ – ಸಂಜೆ ಫಲಿತಾಂಶ ಪ್ರಕಟ
ಸುಪ್ರೀಂ ಕೋರ್ಟ್ ಆಧಾರ್ ಗುರುತಿನ ಚೀಟಿಯನ್ನು 12ನೇ ದಾಖಲೆ ಎಂದು ಪರಿಗಣಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಧಾರ್ ಗುರುತಿನ ಚೀಟಿ ಪ್ರತಿಯೊಬ್ಬ ಭಾರತೀಯರಿಗೂ ಅತ್ಯವಶ್ಯವಾದ ದಾಖಲೆ. ಈ ಹಿಂದಿನ ಯುಪಿಎ ಸರ್ಕಾರ ಜಾರಿಗೆ ತಂದ ಈ ಯೋಜನೆ ಪ್ರತಿಯೊಬ್ಬ ನಾಗರಿಕರಿಗೂ ಅನುಕೂಲ ಮಾಡಿದೆ ಎಂದು ತಿಳಿಸಿದರು.
ನವದೆಹಲಿ: ಸೆ.9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ (CP Radhakrishnan) ಅವರಿಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಇದು ಎನ್‌ಡಿಎ ಕೂಟದ ಒಗ್ಗಟಿನ ಪ್ರದರ್ಶನವೂ ಆಗಿದೆ.
ಮಹಾರಾಷ್ಟ್ರದ ಹಾಲಿ ರಾಜ್ಯಪಾಲರು ಆಗಿರುವ ರಾಧಾಕೃಷ್ಣನ್ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದು ಬೆಂಬಲ ಸೂಚಿಸಿದ್ದಾರೆ. ಒಟ್ಟು 4 ಸೆಟ್ ಅರ್ಜಿಯನ್ನು ಅಲ್ಲಿಸಲಾಗಿದ್ದು, ಮೊದಲ ಸೆಟ್‌ನಲ್ಲಿ ದಾಖಲೆ ಸಲ್ಲಿಸುವ ವೇಳೆ ಮೋದಿ ಮುಖ್ಯ ಪ್ರತಿಪಾದಕರಾಗಿದ್ದರು.
ಯಾರು ಸಿಪಿ ರಾಧಾಕೃಷ್ಣನ್?
* ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್, ಕಳೆದ ವರ್ಷ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
* 68 ವರ್ಷ ವಯಸ್ಸಿನ ಅವರು ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮಾರ್ಚ್ ಮತ್ತು ಜುಲೈ 2024 ರ ನಡುವೆ ಅವರು ತೆಲಂಗಾಣ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದರು.
* 2023 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ನೇಮಕಗೊಂಡ ಮೊದಲ ನಾಲ್ಕು ತಿಂಗಳೊಳಗೆ, ರಾಧಾಕೃಷ್ಣನ್ ಅವರು ರಾಜ್ಯದ ಎಲ್ಲಾ 24 ಜಿಲ್ಲೆಗಳಿಗೆ ಪ್ರಯಾಣಿಸಿ ನಾಗರಿಕರು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದರು.
* ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನ ಸಂಘದೊಂದಿಗೆ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ ಇವರು 1998 ಮತ್ತು 1999 ರಲ್ಲಿ ಎರಡು ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
* ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದಾಗ(2004-2007) ಅವರು 93 ದಿನಗಳ ಕಾಲ 19 ಸಾವಿರ ಕಿಮೀ ‘ರಥ ಯಾತ್ರೆ’ಯನ್ನು ಕೈಗೊಂಡಿದ್ದರು. ಭಾರತದ ಎಲ್ಲಾ ನದಿಗಳ ಜೋಡಣೆ, ಭಯೋತ್ಪಾದನೆ ನಿರ್ಮೂಲನೆ, ಏಕರೂಪ ನಾಗರಿಕ ಸಂಹಿತೆ ಜಾರಿ, ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಮತ್ತು ಮಾದಕ ದ್ರವ್ಯಗಳ ಪಿಡುಗನ್ನು ಎದುರಿಸುವುದು ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಯಾತ್ರೆಯನ್ನು ಆಯೋಜಿಸಲಾಗಿತ್ತು. ಅವರು ವಿಭಿನ್ನ ಕಾರಣಗಳಿಗಾಗಿ ಇನ್ನೂ ಎರಡು ಪಾದಯಾತ್ರೆಗಳನ್ನು ಕೈಗೊಂಡಿದ್ದರು.
* ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ರಾಧಾಕೃಷ್ಣನ್ ಅವರು ತಮಿಳುನಾಡಿನ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಗೌರವಾನ್ವಿತ ಹೆಸರನ್ನು ಹೊಂದಿದ್ದಾರೆ.
*1957 ರಲ್ಲಿ ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ ಅವರು ಕೊಯಮತ್ತೂರಿನ ಚಿದಂಬರಂ ಕಾಲೇಜಿನಿಂದ ಬಿಬಿಎ ಪದವಿ ಪಡೆದಿದ್ದಾರೆ. ಒಬ್ಬ ಉತ್ಸಾಹಿ ಕ್ರೀಡಾಪಟುವಾಗಿರುವ ಇವರು ಟೇಬಲ್ ಟೆನ್ನಿಸ್‌ನಲ್ಲಿ ಕಾಲೇಜು ಚಾಂಪಿಯನ್ ಆಗಿದ್ದರು. ಅಷ್ಟೇ ಅಲ್ಲದೇ ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದರು.
* ಸಂಸದರಾಗಿದ್ದಾಗ ಅವರು ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಹಣಕಾಸು ಮತ್ತು ಸಾರ್ವಜನಿಕ ಉದ್ಯಮಗಳಿಗೆ ಸಂಬಂಧಿಸಿದ ಹಲವಾರು ಸಮಿತಿಗಳಿಗೆ ಕೊಡುಗೆ ನೀಡಿದ್ದಾರೆ.
* ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (2004) ಸಂಸದೀಯ ನಿಯೋಗದ ಭಾಗವಾಗಿದ್ದರು ಮತ್ತು ತೈವಾನ್‌ಗೆ ತೆರಳಿದ್ದ ಮೊದಲ ಭಾರತೀಯ ನಿಯೋಗದ ಭಾಗವಾಗಿದ್ದರು. ಇದನ್ನೂ ಓದಿ: ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ – ಹಲ್ಲೆ ಖಂಡಿಸಿದ ಅತಿಶಿ
ನವದೆಹಲಿ: ಉಪ ರಾಷ್ಟ್ರಪತಿ ಧನಕರ್ (Jagdeep Dhankhar) ರಾಜೀನಾಮೆ ಬೆನ್ನಲ್ಲೇ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದೆ. ಚುನಾವಣೆಗೆ ಅಧಿಕಾರಿಗಳನ್ನು ಅಂತಿಮಗೊಳಿಸಲಾಗುತ್ತಿದ್ದು, ಶೀಘ್ರದಲ್ಲೇ ಚುನಾವಣೆಗೆ (Vice President Election) ದಿನಾಂಕ ಘೋಷಣೆಯಾಗಲಿದೆ.
ಮೂಲಗಳ ಪ್ರಕಾರ, ಆಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಮೊನ್ನೆ ರಾಜೀನಾಮೆ ನೀಡುವ ಮುನ್ನ ರಾಷ್ಟ್ರಪತಿ ಭವನಕ್ಕೆ ಅನಿರೀಕ್ಷಿತವಾಗಿ ಧನಕರ್ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಯನ್ನು ತಬ್ಬಿಬ್ಬುಗೊಳಿಸಿರುವುದಾಗಿ ತಿಳಿದುಬಂದಿದೆ. ರಾಷ್ಟ್ರಪತಿಗಳ ಜೊತೆ ಚರ್ಚಿಸಿದ ಬಳಿಕ ರಾಜೀನಾಮೆ ನೀಡಿರುವುದಾಗಿ ಗೊತ್ತಾಗಿದೆ.
ಮುಂದಿನ ಬಿಹಾರ ಚುನಾವಣೆಯ (Bihar Election) ದೃಷ್ಟಿಯಿಂದ ಎನ್‌ಡಿಎ ಅಭ್ಯರ್ಥಿಯಾಗಿ ಅಚ್ಚರಿ ವ್ಯಕ್ತಿಯನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಭಾರತರತ್ನ ಪ್ರಶಸ್ತಿ ಪುರಸ್ಕೃತ ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್ ನಾಥ್ ಠಾಕೂರ್ ಅವರ ಹೆಸರು ಮುಂಚೂಣಿಯಲ್ಲಿದೆ. ಅತ್ಯಂತ ಹಿಂದುಳಿದ ವರ್ಗ (ಕ್ಷೌರಿಕ) ಸಮಾಜಕ್ಕೆ ರಾಮ್‌ನಾಥ್ ಠಾಕೂರ್ ಸೇರಿದವರಾಗಿದ್ದಾರೆ. ಇದನ್ನೂಓದಿ: ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್ ರಿಸೈನ್ ಮಾಡಿದ್ದು ಯಾಕೆ?
ಬಿಜೆಪಿ ಅಧ್ಯಕ್ಷ ನಡ್ಡಾ, ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ, ಬಿಹಾರ ರಾಜ್ಯಪಾಲ ಮೊಹಮ್ಮದ್ ಆರಿಫ್ ಖಾನ್, ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೆಸರು ಕೂಡ ಕೇಳಿಬರುತ್ತಿದೆ. ಇದನ್ನೂಓದಿ: ಅಲ್-ಖೈದಾ ಸಂಘಟನೆಯೊಂದಿಗೆ ನಂಟು ಹೊಂದಿದ್ದ ನಾಲ್ವರು ಉಗ್ರರ ಬಂಧನ
ಈ ಮಧ್ಯೆ, ಧನಕರ್ ರಾಜೀನಾಮೆ ಅನುಮಾನಸ್ಪದವಾಗಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕು ಅಂತ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ. ಜಗದೀಪ್ ಧನಕರ್ ಬಿಜೆಪಿ-ಆರ್‌ಎಸ್‌ಎಸ್ ಸಮರ್ಥಿಸಿಕೊಳ್ಳುತ್ತಿದ್ದರು. ಅವರ ನಿಷ್ಠೆ ಬಿಜೆಪಿ- ಆರ್‌ಎಸ್‌ಎಸ್ ಜೊತೆಗಿತ್ತು ಆದ್ರೂ, ರಾಜೀನಾಮೆ ಕೊಟ್ಟಿದ್ಯಾಕೆ ಅಂತ ಪ್ರಶ್ನೆ ಮಾಡಿದ್ದಾರೆ.
ಸಂಸತ್ತಿನಲ್ಲಿ ಎನ್‌ಡಿಎ ಬಲ
ಈಗಿನ ಬಲ – 782, ಬಹುಮತ: 392
(ಲೋಕಸಭೆ 1 ಖಾಲಿ; ರಾಜ್ಯಸಭೆ- 5 ಸ್ಥಾನ ಖಾಲಿ)
ಎನ್‌ಡಿಎ ಪರ – 427
ಲೋಕಸಭೆ – 293
ರಾಜ್ಯಸಭೆ – 134
ಸಂಸತ್ತಿನಲ್ಲಿ ವಿಪಕ್ಷಗಳ ಬಲ
ವಿಪಕ್ಷಗಳ ಪರ – 355
ಲೋಕಸಭೆ – 249
ರಾಜ್ಯಸಭೆ – 106
ರಾಷ್ಟ್ರಪತಿ ಚುನಾವಣೆಯಲ್ಲೂ ಟಿಆರ್‌ಎಸ್ ವಿರೋಧ ಪಕ್ಷದ ಪರವಾಗಿ ನಿಂತು ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿತ್ತು. ಇಂದು ಸಂಜೆ ಮಾರ್ಗರೇಟ್ ಆಳ್ವಾ ಟಿಆರ್‌ಎಸ್ ಸಂಸದರನ್ನು ಭೇಟಿ ಮಾಡಲಿದ್ದಾರೆ ಎಂದು ರಾವ್ ತಿಳಿಸಿದ್ದಾರೆ. ಇದನ್ನೂ ಓದಿ: ಸತತ 3ನೇ ಬಾರಿ ಆರ್‌ಬಿಐ ರೆಪೊ ದರ ಹೆಚ್ಚಳ
ಆಳ್ವ ಅವರು ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ವಿರುದ್ಧ ಪ್ರತಿಪಕ್ಷಗಳಿಂದ ಉಪರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿದಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ರೀತಿಯಲ್ಲೇ ಉಪರಾಷ್ಟ್ರಪತಿ ಚುನಾವಣೆಗೂ ಒಮ್ಮತ ಅಭ್ಯರ್ಥಿ ಆಯ್ಕೆ ಮಾಡಲು ಚಿಂತಿಸಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಇಡಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ ವಹಿಸಿ ವಿಪಕ್ಷಗಳ ಸಭೆ ಕರೆದಿದ್ದರು. ಬಳಿಕ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆ ಈ ಬಾರಿ ಅತಿದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ ಇತರೆ ಪಕ್ಷದ ನಾಯಕರಿಗಿಂತ ಮುಂಚೆಯೇ ಎಚ್ಚೆತ್ತುಕೊಂಡಿದ್ದು ಅಭ್ಯರ್ಥಿ ಆಯ್ಕೆಯನ್ನು ತಾನೇ ನೇತೃತ್ವ ವಹಿಸಿಕೊಳ್ಳುವ ಪ್ರಯತ್ನದಲ್ಲಿದೆ. ಇದನ್ನೂ ಓದಿ: ಸಂಭವಾಮಿ ಯುಗೇ ಯುಗೇ – ಗೀತೋಪದೇಶದ ಸಾಲನ್ನು ಪೋಸ್ಟ್ ಮಾಡಿದ್ದ ಗುರೂಜಿ ಹಂತಕ
ಹಿರಿಯ ನಾಯಕ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಹೈಕಮಾಂಡ್ ಈ ಜವಾಬ್ದಾರಿ ನೀಡಿದ್ದು, ಇತರೆ ಪಕ್ಷಗಳ ಜೊತೆಗೆ ಮಾತುಕತೆ ನಡೆಸಲು ಸೂಚಿಸಿದೆ. ಈ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ಶೀಘ್ರದಲ್ಲಿ ವಿಪಕ್ಷಗಳ ಸಭೆ ಕರೆಯಲು ತಯಾರಿ ನಡೆಸಿದ್ದು, ಒಮ್ಮತದ ಅಭ್ಯರ್ಥಿಗಾಗಿ ಪ್ರಯತ್ನಗಳು ನಡೆಯಲಿದೆ. ಇದನ್ನೂ ಓದಿ: ಸಂಭವಾಮಿ ಯುಗೇ ಯುಗೇ – ಗೀತೋಪದೇಶದ ಸಾಲನ್ನು ಪೋಸ್ಟ್ ಮಾಡಿದ್ದ ಗುರೂಜಿ ಹಂತಕ
ಉಪರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಪಕ್ಷದ ನಾಯಕರು ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಪ್ರಶ್ನೆಗೆ ವಿಶ್ವಾಸರ್ಹ ನಾಯಕರು ಉತ್ತರಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಆಯ್ಕೆ ಆಗಬಹುದು ಅಥವಾ ಬೇರೆ ಪಕ್ಷದಿಂದಲೂ ಆಗಬಹುದು. ಆದರೆ ಅವರು ಒಮ್ಮತದ ಅಭ್ಯರ್ಥಿಯಾಗಿರಲಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ಸಮಾವೇಶಕ್ಕಾಗಿ ವಿವಿಧ ಸಮಿತಿಗಳ ರಚನೆ – ಡಿಕೆಶಿಗಿಲ್ಲ ಸ್ಥಾನ
ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅಭ್ಯರ್ಥಿಯಾಗಿದ್ದು, ಅವರು ಬುಡಕಟ್ಟು ಸಮುದಾಯ ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಕೆಲವು ಪ್ರಾದೇಶಿಕ ಪಕ್ಷಗಳು ಅವರಿಗೆ ಬೆಂಬಲ ನೀಡಿವೆ. ಆದರೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪರಿಸ್ಥಿತಿ ಭಿನ್ನವಾಗಿರಲಿದೆ. ಈ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿ ಗೆಲ್ಲುವ ಸಾಧ್ಯತೆಗಳು ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]