Tag: ಉಪಾಧ್ಯಕ್ಷ ಸಿನಿಮಾ

  • ‘ಮಾರ್ಟಿನ್’ ನಿರ್ದೇಶಕನ ಸಿನಿಮಾದಲ್ಲಿ ಚಿಕ್ಕಣ್ಣ

    ‘ಮಾರ್ಟಿನ್’ ನಿರ್ದೇಶಕನ ಸಿನಿಮಾದಲ್ಲಿ ಚಿಕ್ಕಣ್ಣ

    ‘ಉಪಾಧ್ಯಕ್ಷ’ ನಟ ಚಿಕ್ಕಣ್ಣ (Chikkanna) ಮತ್ತೆ ಹೀರೋ ಆಗಿ ಬರುತ್ತಿದ್ದಾರೆ. ಕಾಮಿಡಿ ಪಾತ್ರಗಳ ಮೂಲಕ ಸೈ ಎನಿಸಿಕೊಂಡಿದ್ದ ಚಿಕ್ಕಣ್ಣ ನಾಯಕ ನಟನಾಗಿ ಕೂಡ ಗಮನ ಸೆಳೆದಿದ್ದಾರೆ. ಹೀರೋ ಆಗಿ 2ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ. ‘ಮಾರ್ಟಿನ್’ (Martin) ಡೈರೆಕ್ಟರ್ ಎ.ಪಿ ಅರ್ಜುನ್ (A.P Arjun) ಜೊತೆ ಕೈಜೋಡಿಸಿದ್ದಾರೆ.

    ಉಮಾಪತಿ ಶ್ರೀನಿವಾಸ್ ನಿರ್ಮಾಣದ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ಚಿಕ್ಕಣ್ಣ ನಟಿಸಿದ್ದರು. ಮಲೈಕಾ ವಸುಪಾಲ್ ಜೊತೆ ಚಿಕ್ಕಣ್ಣ ಡ್ಯುಯೇಟ್ ಹಾಡಿದ್ದರು. ಈ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಬಂಪರ್ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಸಿನಿಮಾ ತಾರೆಯರು ಯಾರು?

    ಕಿಸ್, ಮಾರ್ಟಿನ್ ಸಿನಿಮಾ ನಿರ್ದೇಶಕ ಎ.ಪಿ ಅರ್ಜುನ್ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ಕೆರೆಬೇಟೆ’ ನಿರ್ದೇಶಕ ರಾಜಗುರು ಚಿಕ್ಕಣ್ಣಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮೂವರ ಕಾಂಬಿನೇಷನ್ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ. ಸದ್ಯ ಈ ನ್ಯೂಸ್‌ ಕೇಳಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ.

  • ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ಚಿಕ್ಕಣ್ಣ ಇದೇ ಮೊದಲ ಬಾರಿಗೆ ಹೀರೋ ಆಗಿ ನಟಿಸುತ್ತಿರುವ ಉಪಾಧ್ಯಕ್ಷ ಸಿನಿಮಾ ಶೂಟಿಂಗ್ ಮೈಸೂರು ಸುತ್ತಮುತ್ತ ನಡೆಯುತ್ತಿದೆ. ಈ ಸಂದರ್ಭದಲ್ಲಿ ಶೂಟಿಂಗ್ ಸ್ಥಳಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ಮಾಡಿ ಕೆಲ ಹೊತ್ತು ಕಳೆದಿದ್ದಾರೆ. ಬೈರಾಗಿ ಸಿನಿಮಾದ ಪ್ರಚಾರಕ್ಕಾಗಿ ಇಂದು ಮೈಸೂರು ಮತ್ತು ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವ ಶಿವರಾಜ್ ಕುಮಾರ್, ಈ ಸಂದರ್ಭದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ  ದೇವಿಯ ದರ್ಶನ ಕೂಡ ಪಡೆದಿದ್ದಾರೆ.

    ಚಾಮುಂಡಿ ದರ್ಶನದ ನಂತರ ಉಪಾಧ್ಯಕ್ಷ ಸಿನಿಮಾದ ಶೂಟಿಂಗ್ ಸ್ಥಳಕ್ಕೆ ತೆರಳಿದ ಶಿವರಾಜ್ ಕುಮಾರ್, ಕೆಲ ಹೊತ್ತು ಸಿನಿಮಾ ತಂಡದೊಂದಿಗೆ ಕಳೆದರು. ಈ ಸಂದರ್ಭದಲ್ಲಿ ಡಾಲಿ ಧನಂಜಯ್ ಕೂಡ ಶಿವಣ್ಣನಿಗೆ ಸಾಥ್ ನೀಡಿದರು. ಶೂಟಿಂಗ್ ಸ್ಥಳದಲ್ಲಿ ಚಿಕ್ಕಣ್ಣ, ರವಿಶಂಕರ್ ಸೇರಿದಂತೆ ಹಲವು ಕಲಾವಿದರು ಹಾಜರಿದ್ದರು. ಉಪಾಧ್ಯಕ್ಷ ಸಿನಿಮಾಗೆ ಒಳ್ಳೆಯದಾಗಲಿ ಎಂದು ಹಾರೈಸಿ, ಬೈರಾಗಿ ಟೀಮ್ ಜೊತೆ ಶಿವರಾಜ್ ಕುಮಾರ್ ಚಾಮರಾಜನಗರದತ್ತ ಹೊರಟರು. ಇದನ್ನು ಓದಿ:ರಶ್ಮಿಕಾ ಮಂದಣ್ಣ ಸಂಭಾವನೆ 5 ಕೋಟಿನಾ? : ನಂ.1 ಸ್ಥಾನಕ್ಕೆ ಏರಿದ ಕೊಡಗಿನ ಬೆಡಗಿ

    ಇಂದು ಚಾಮರಾಜನಗರದಲ್ಲಿ ಬೈರಾಗಿ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಆಯೋಜನೆಯಾಗಿದೆ. ಆ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ಡಾಲಿ, ಪೃಥ್ವಿ ಅಂಬರ್ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಲಿದ್ದಾರೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಕೂಡ ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಇಂದು ಸಂಜೆ ಪ್ರಿ ರಿಲೀಸ್ ಇವೆಂಟ್ ಚಾಮರಾಜನಗರದಲ್ಲಿ ನಡೆಯಲಿದೆ.

    Live Tv