Tag: ಉಪ್ಪು ಹುಳಿ ಖಾರ

  • ಇಂದು `ಉಪ್ಪು ಹುಳಿ ಖಾರ’ದ ಜೊತೆ ತೆರೆಗೆ ಬರ್ತಿದ್ದಾನೆ `ಅತಿರಥ’

    ಇಂದು `ಉಪ್ಪು ಹುಳಿ ಖಾರ’ದ ಜೊತೆ ತೆರೆಗೆ ಬರ್ತಿದ್ದಾನೆ `ಅತಿರಥ’

    ಬೆಂಗಳೂರು: ಸ್ಯಾಂಡಲ್‍ ವುಡ್‍ನಲ್ಲಿ ಇಂದು ಎರಡು ಚಿತ್ರಗಳು ಸ್ಪರ್ಧೆಗಿಳಿಯಲಿವೆ. ಮಾಲಾಶ್ರೀ-ಅನುಶ್ರೀ ಅಭಿನಯದ `ಉಪ್ಪು ಹುಳಿ ಖಾರ’ ಒಂದಾಂದ್ರೆ, ಇನ್ನೊಂದು ಚೇತನ್, ಲತಾ ಹೆಗಡೆ ನಟನೆಯ `ಅತಿರಥ’

    ಆರಂಭದಿಂದಲೂ ಭಾರಿ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಉಪ್ಪು ಹುಳಿ ಖಾರ. ಆಕರ್ಷಕ ಟೈಟಲ್‍ನ ಚಿತ್ರಕ್ಕೆ ಇಮ್ರಾನ್ ಸರ್ದಾರಿಯಾ ನಿರ್ದೇಶಕರು. ಬಹುತಾರಾಗಣದ ಈ ಚಿತ್ರದಲ್ಲಿ ಅನುಶ್ರೀ, ಜಯಶ್ರೀ, ಶಶಿ, ಶರತ್ ಮುಂತಾದವರು ಅಭಿನಯಿಸಿದ್ದಾರೆ. ನಟಿ ಮಾಲಾಶ್ರೀ ಇವ್ರನ್ನೆಲ್ಲಾ ದಾರಿಗೆ ತರುವ ದೇವಿ ಹೆಸರಿನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉತ್ತರ ಕರ್ನಾಟಕ ಶೈಲಿಯ ಖಡಕ್ ಡೈಲಾಗ್ ಹೊಡೆದು ಮಾಲಾಶ್ರೀ ಅಭಿಮಾನಿಗಳನ್ನ ರಂಜಿಸಲಿದ್ದಾರೆ.

    ರಾಜ್ಯದ 200 ಚಿತ್ರಮಂದಿರಗಳಲ್ಲಿ `ಉಪ್ಪು ಹುಳಿ ಖಾರ’ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದಲ್ಲಿನ ರೋ ರೋ ರೋಮಿಯೋ ಹಾಡು ಈಗಾಗ್ಲೇ ಫೇಮಸ್ ಆಗಿದೆ. ಎಂ ರಮೇಶ್ ನಿರ್ದೇಶನ ಈ ಚಿತ್ರಕ್ಕಿದೆ. `ಉಪ್ಪು ಹುಳಿ ಖಾರ’ದ ರುಚಿಗಳಂತೆ ಮನುಷ್ಯನ ಜೀವನದಲ್ಲಿ ಬರುವ ಅನುಭವವನ್ನ ಅಚ್ಚುಕಟ್ಟಾಗಿ ಹೇಳಲಾಗಿದೆ. ಒಂದು ವಿಭಿನ್ನ ಶೈಲಿಯ ನಿರೂಪಣೆಯ ಈ ಚಿತ್ರ ಭರಪೂರ ಎಂಟರ್ ಟೈನ್ಮೆಂಟ್ ಕೊಡೋಕೆ ಇಂದು ಥಿಯೇಟರ್‍ಗೆ ಬರಲಿದೆ.

    `ಉಪ್ಪು ಹುಳಿ ಖಾರ’ ಚಿತ್ರದ ಜೊತೆ ತೆರೆಕಾಣೋಕೆ ಸಿದ್ಧವಾಗಿರೋ ಇನ್ನೊಂದು ಚಿತ್ರವೇ `ಅತಿರಥ’. ಮಹೇಶ್ ಬಾಬು ನಿರ್ದೇಶನದ ಅತಿರಥ ರಾಜ್ಯದಲ್ಲಿ 150ಕ್ಕೂ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಚಿತ್ರದಲ್ಲಿ ಆ ದಿನಗಳು ಚೇತನ್, ಲತಾ ಹೆಗಡೆ ಜೋಡಿಯಾಗಿ ಅಭಿನಯಿಸಿದ್ದಾರೆ.

    ಸಾಧು ಕೋಕಿಲಾ ಮಗ ಸುರಾಗ್ ಸಂಗೀತ ನಿರ್ದೇಶನ ಈ ಅತಿರಥ ಚಿತ್ರಕ್ಕಿದೆ. ಚಿತ್ರದಲ್ಲಿ ಚೇತನ್ ಟಿವಿ ಜರ್ನಲಿಸ್ಟ್ ಪಾತ್ರದಲ್ಲಿ ಕಾಣಿಸ್ಕೊಂಡಿದ್ದಾರೆ. ತನಿಖೆ-ಅಪರಾಧ ಅಲ್ಲೊಂದು ಲವ್ ಸ್ಟೋರಿಯನ್ನೊಳಗೊಂಡ ಒಂದು ಅಪರೂಪದ ಕಥೆ ಚಿತ್ರದಲ್ಲಿದೆ. ಒಟ್ಟಿನಲ್ಲಿ `ಅತಿರಥ’ ಕೂಡ ಸಿನಿಪ್ರಿಯರಿಗೆ ಭಾರೀ ಭೋಜನ ಕೊಡೋಕೆ ರೆಡಿಯಾಗಿದೆ.

    https://www.youtube.com/watch?v=gMX4XWTCvxY

  • ಸದನಕ್ಕೆ ಚಕ್ಕರ್, ಉಪ್ಪು ಹುಳಿ ಖಾರಕ್ಕೆ ಅಂಬರೀಶ್ ಹಾಜರ್

    ಸದನಕ್ಕೆ ಚಕ್ಕರ್, ಉಪ್ಪು ಹುಳಿ ಖಾರಕ್ಕೆ ಅಂಬರೀಶ್ ಹಾಜರ್

    ಬೆಂಗಳೂರು: ಬೆಳಗಾವಿಯಲ್ಲಿ ಆಯೋಜನೆಗೊಂಡಿರುವ ವಿಶೇಷ ಅಧಿವೇಶನಕ್ಕೆ ಚಕ್ಕರ್ ಹಾಕಿ ಉಪ್ಪು ಹುಳಿ ಖಾರ ಸಿನಿಮಾದ ಕಾರ್ಯಕ್ರಮಕ್ಕೆ ಮಾಜಿ ವಸತಿ ಸಚಿವ ಅಂಬರೀಶ್ ಹಾಜರಾಗಿದ್ದು ಟೀಕೆಗೆ ಗುರಿಯಾಗಿದೆ.

    ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಆದರೆ ನಟ ಅಂಬರೀಶ್ `ಉಪ್ಪು ಹುಳಿ ಖಾರ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸಿದ್ದಾರೆ.

    ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ `ಉಪ್ಪು ಹುಳಿ ಖಾರ’ ಚಿತ್ರದ ಟೀಸರ್ ಲಾಂಚ್ ಮಾಡಲು ಅಂಬರೀಶ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ  ಟೀಸರ್ ಲಾಂಚ್ ಮಾಡಿದ ಅಂಬರೀಶ್ ಉಪ್ಪು ಹುಳಿ ಖಾರ ಚಿತ್ರದ ರೋಮಿಯೋ ಹಾಡಿಗೆ ಸ್ಜೇಜ್ ಮೇಲೆ ಸ್ಟೆಪ್ ಹಾಕಿದರು. ಮಾಲಾಶ್ರೀ ಅಂಬರೀಶ್‍ಗೆ ಲವ್ ಯು ಅಂದ್ರು ಅದಕ್ಕೆ ಅಂಬರೀಶ್ ಮೀಟು ಲವ್ ಎಂದು ಹೇಳಿ ಸ್ಜೇಜ್ ಮೇಲೆ ಮನೋರಂಜನೆ ನೀಡಿದರು.

    ವಿಧಾನಸಭಾ ಸಚಿವಾಲಯದಿಂದ ಸಿಕ್ಕಿದ ಮಾಹಿತಿ ಪ್ರಕಾರ ಸಚಿವ ಸ್ಥಾನ ಕಳೆದುಕೊಂಡ ಮೇಲೆ ಕೇವಲ ನಾಲ್ಕು ದಿನ ಮಾತ್ರ ಕಲಾಪಕ್ಕೆ ಅಂಬರೀಶ್ ಹಾಜರಾಗಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅಂಬರೀಶ್ ಮೇ 2013ರಿಂದ 2016ರ ಜೂನ್ ವರೆಗೆ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿ ಬಳಿಕ ರಾಜೀನಾಮೆ ನೀಡಿದ್ದರು.

    ಉತ್ತರ ಕರ್ನಾಟಕದ ಸಮಸ್ಯೆ ಪರಿಹಾರಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಕರೆಯಲಾಗಿದೆ. ಒಟ್ಟು 225 ಶಾಸಕರ ಪೈಕಿ ಮೊದಲ ದಿನ ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದು ಕೇವಲ 20 ಮಂದಿ ಮಾತ್ರ.

    ಕೊನೇ ಪಕ್ಷದ ಇದು ವರ್ಷದ ಕೊನೇ ಅಧಿವೇಶನ. ಚುನಾವಣೆ ಹತ್ತಿರ ಇದೆ. ಜನ ನಮ್ಮ ನೋಡುತ್ತಿರುತ್ತಾರೆ. ಈ ಬಾರಿಯಾದ್ರೂ ನಾವು ಸದನದಲ್ಲಿ ಕಾಣಿಸಿಕೊಳ್ಳೋಣ ಎನ್ನುವ ಭಯವೂ ಶಾಸಕರಿಗೆ ಇಲ್ಲ. ಜವಾಬ್ದಾರಿ ಮೊದಲೇ ಇಲ್ಲದಂತೆ ವರ್ತಿಸಿದ್ದಾರೆ. ಶಾಸಕರ ಹಾಜರಾತಿ ಕಡಿಮೆ ಇದ್ದ ಕಾರಣ ಒಂದೇ ನಿಮಿಷಕ್ಕೆ ಸ್ಪೀಕರ್ ಕೋಳಿವಾಡ ಕಲಾಪವನ್ನು ಮುಂದೂಡಿದ್ದರು.

    10 ದಿನಗಳ ಅಧಿವೇಶನಕ್ಕೆ ಬರೋಬ್ಬರಿ 28 ರಿಂದ 30 ಕೋಟಿ ರೂ. ಖರ್ಚು ಆದರೆ ದಿನಕ್ಕೆ ಎರಡೂವರೆಯಿಂದ ಮೂರು ಕೋಟಿ ರೂ. ವೆಚ್ಚವಾಗುತ್ತದೆ. ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಶಾಸಕರಿಗೆ 2,500 ರೂ. ಸಾರಿಗೆ ಭತ್ಯೆ ನೀಡಿದರೆ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿರುವ ಶಾಸಕರಿಗೆ 5 ಸಾವಿರ ರೂ.ಸಾರಿಗೆ ಭತ್ಯೆ ನೀಡಲಾಗುತ್ತದೆ.