Tag: ಉಪ ನಿರ್ದೇಶಕಿ

  • ತೀರ್ಥಹಳ್ಳಿಯಲ್ಲಿ ಪ್ರತಿಮಾ ಅಂತ್ಯಕ್ರಿಯೆ – ಪುತ್ರನಿಂದ ತಾಯಿಯ ಚಿತೆಗೆ ಅಗ್ನಿಸ್ಪರ್ಶ

    ತೀರ್ಥಹಳ್ಳಿಯಲ್ಲಿ ಪ್ರತಿಮಾ ಅಂತ್ಯಕ್ರಿಯೆ – ಪುತ್ರನಿಂದ ತಾಯಿಯ ಚಿತೆಗೆ ಅಗ್ನಿಸ್ಪರ್ಶ

    ಶಿವಮೊಗ್ಗ: ಬೆಂಗಳೂರಿನಲ್ಲಿ ಹತ್ಯೆಯಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ (Department Of Mines And Geology) ಉಪ ನಿರ್ದೇಶಕಿ (Deputy Director) ಪ್ರತಿಮಾ (Prathima) ಅಂತ್ಯಕ್ರಿಯೆ (Funeral) ಇಂದು ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿಯ (Thirthahalli) ಹಿಂದೂ ರುದ್ರಭೂಮಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಕುಟುಂಬಸ್ಥರು ನೆರವೇರಿಸಿದರು.

    ಪ್ರತಿಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯವರಾದ ಪ್ರತಿಮಾ ಉದ್ಯೋಗದ ನಿಮಿತ್ತ ಬೆಂಗಳೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಪತಿ ಸತ್ಯನಾರಾಯಣ ಕೃಷಿಕರಾಗಿದ್ದ ಕಾರಣ ಪತಿ ಹಾಗು ಪುತ್ರ ಪಾರ್ಥ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದರು. ಪ್ರತಿಮಾ ರಜಾ ದಿನಗಳಲ್ಲಿ ಆಗಾಗ ತೀರ್ಥಹಳ್ಳಿಗೆ ಬಂದು ಹೋಗುತ್ತಿದ್ದರು. ಇದನ್ನೂ ಓದಿ:‌ 2013 ರಿಂದ ದಲಿತ ಸಿಎಂ ಓಡ್ತಿದೆ, ಪಿಕ್ಚರ್‌ ರಿಲೀಸ್ ಆಗ್ತಿಲ್ಲ: ಸತೀಶ್ ಜಾರಕಿಹೊಳಿ

    ಸಣ್ಣ ವಯಸ್ಸಿನಲ್ಲೇ ಉನ್ನತ ಹುದ್ದೆಯಲ್ಲಿದ್ದ ಪ್ರತಿಮಾ ಇಲಾಖೆಯಲ್ಲಿ ಉತ್ತಮ ಹೆಸರು ಗಳಿಸಿದ್ದರು. ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡಿದ್ದರು. ಆದರೆ ಇಂತಹ ಅಧಿಕಾರಿ ಪ್ರತಿಮಾ ಅವರನ್ನು ಶನಿವಾರ ರಾತ್ರಿ ಅವರ ಅಪಾರ್ಟ್ಮೆಂಟ್‌ನಲ್ಲೇ ಕೊಲೆ ಮಾಡಿದ್ದಾರೆ. ಕೊಲೆಯಾಗಿದ್ದ ಪ್ರತಿಮಾ ಅವರ ಮರಣೋತ್ತರ ಶವ ಪರೀಕ್ಷೆ ನಂತರ ಕುಟುಂಬಸ್ಥರು ಪ್ರತಿಮಾ ಮೃತದೇಹವನ್ನು ಭಾನುವಾರ ರಾತ್ರಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಕರೆತಂದಿದ್ದರು. ತೀರ್ಥಹಳ್ಳಿಯ ಸತ್ಯನಾರಾಯಣ ಅವರ ಮೂಲ ಮನೆಯಲ್ಲಿ ರಾತ್ರಿಯಿಂದ ಮುಂಜಾನೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಕಳೆದ ವಾರವಷ್ಟೇ ಗೃಹ ಪ್ರವೇಶವಾಗಿದ್ದ ನೂತನ ಮನೆಗೆ ಮುಂಜಾನೆ 10 ಗಂಟೆಗೆ ಹಳೆ ಮನೆಯಿಂದ ಹೊಸ ಮನೆಗೆ ಮೃತದೇಹ ಕೊಂಡೊಯ್ಯಲಾಯಿತು. ಅಲ್ಲಿ 10 ನಿಮಿಷಗಳ ಕಾಲ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಕೊಡಗಿನ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

    ನಂತರ ಪ್ರತಿಮಾ ಪಾರ್ಥಿವ ಶರೀರವನ್ನು ತುಂಗಾ ನದಿ ದಡದಲ್ಲಿರುವ ಹಿಂದೂ ರುದ್ರ ಭೂಮಿಗೆ ಕೊಂಡೊಯ್ಯಲಾಯಿತು. ಹಿಂದೂ ರುದ್ರಭೂಮಿಯಲ್ಲಿ ಪ್ರತಿಮಾ ಅವರಿಗೆ ಕುಟುಂಬಸ್ಥರು ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದರು. ತಾಯಿಯ ಚಿತೆಗೆ ಪುತ್ರ ಪಾರ್ಥ ಅಗ್ನಿ ಸ್ಪರ್ಶ ನೆರವೇರಿಸಿದ್ದಾನೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿದೆ. ಸರ್ಕಾರ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು. ಇಂತಹ ಘಟನೆ ಮರುಕಳಿಸದಂತೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಮಾ ಕುಟುಂಬಸ್ಥರು ಹಾಗೂ ಸ್ಥಳೀಯರ ಆಗ್ರಹವಾಗಿದೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಒಲವು ಕಂಡು ಮೋದಿಗೆ ನೋವಾಗಿದೆ: ಚಲುವರಾಯ ಸ್ವಾಮಿ

    ಒಟ್ಟಾರೆ ಬಾಳಿ ಬದುಕಬೇಕಾದ ವಯಸ್ಸಿನಲ್ಲಿ, ಇನ್ನು ಹಂತ ಹಂತವಾಗಿ ಉನ್ನತ ಹುದ್ದೆ ಅಲಂಕರಿಸುವ ಕನಸು ಕಂಡಿದ್ದ ಪ್ರತಿಮಾ ಕನಸು ಕಮರಿ ಹೋಗಿದೆ. ಇದನ್ನೂ ಓದಿ: ಉಚಿತ ಭಾಗ್ಯದಿಂದ ಪರಿಶಿಷ್ಟರ ಅಂತ್ಯಕ್ರಿಯೆಗೂ ಸರ್ಕಾರದ ಬಳಿ ದುಡ್ಡಿಲ್ಲ: ಬಿಎಸ್‌ವೈ

  • ಅಕ್ರಮ ಗಣಿಗಾರಿಕೆ ತಡೆದಿದ್ದೇ ಪ್ರತಿಮಾ ಕೊಲೆಗೆ ಕಾರಣವಾಯ್ತಾ? – ಹಲವು ಆಯಾಮಗಳಲ್ಲಿ ಪೊಲೀಸ್‌ ತನಿಖೆ

    ಅಕ್ರಮ ಗಣಿಗಾರಿಕೆ ತಡೆದಿದ್ದೇ ಪ್ರತಿಮಾ ಕೊಲೆಗೆ ಕಾರಣವಾಯ್ತಾ? – ಹಲವು ಆಯಾಮಗಳಲ್ಲಿ ಪೊಲೀಸ್‌ ತನಿಖೆ

    ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (Pratima) ಅವರ ಕೊಲೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸರಿಂದ ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಪ್ರತಿಮಾ ಈ ಹಿಂದೆ ಕಲ್ಲು ಕ್ವಾರಿಗಳ ಬಳಿ ಹೋಗಿ ಎಚ್ಚರಿಕೆ ನೀಡಿದ್ದರಂತೆ. ಅಲ್ಲದೇ ಅಕ್ರಮ ಗಣಿಗಾರಿಕೆ (Mining) ನಡೆಸುವ ಜಾಗದ ಮೇಲೆ ರೇಡ್‌ ಮಾಡುತ್ತಿದ್ದ ಪ್ರತಿಮಾ, ಸಹಜವಾಗಿಯೇ ಕೆಲವರೊಂದಿಗೆ ವಿರೋಧ ಸಹ ಕಟ್ಟಿಕೊಂಡಿದ್ದರಂತೆ. ಹಾಗಾಗಿ ವೃತ್ತಿಯಲ್ಲಿ ಯಾರಾದ್ರೂ ವೈಷಮ್ಯ ಹೊಂದಿದ್ರಾ? ಅಥವಾ ವೈಯಕ್ತಿಕ ಕಾರಣಗಳಿಗಾಗಿ ಕೊಲೆ ಮಾಡಿದ್ರಾ ಅನ್ನೋ ಆಯಾಮಗಳಲ್ಲೂ ಪೊಲೀಸರು ತನಿಖೆ (Police Investigation) ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಇದರಿಂದ ಅಕ್ರಮ ಗಣಿಗಾರಿಕೆ ತಡೆದಿದ್ದೇ ಕೊಲೆಗೆ ಕಾರಣನಾ? ಗಣಿಗಾರಿಕೆ ಪರವಾನಗಿ ನವೀಕರಣ ವಿಚಾರಕ್ಕೆ ಎಲ್ಲಿಯಾದ್ರೂ ಗಲಾಟೆಯಾಗಿತ್ತಾ? ಗಣಿಗಾರಿಕೆ ಪರವಾನಗಿ ಕೊಡುವ ವಿಚಾರದಲ್ಲಿ ವೈಷಮ್ಯ ಸಾಧಿಸಿ ಕೊಲೆ ಮಾಡಿದ್ರಾ? ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯಾರಾದರೂ ಕೊಲೆ ಮಾಡಿದ್ರಾ? ಅನ್ನೋ ಆಯಾಮಗಳಲ್ಲೂ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉಪನಿರ್ದೇಶಕಿ ಹತ್ಯೆ ಪ್ರಕರಣ- ವಿಚ್ಛೇದನ ಪಡೆದಿದ್ರಿಂದ ಬೆಂಗಳೂರಲ್ಲಿ ಒಂಟಿಯಾಗಿದ್ದರು ಪ್ರತಿಮಾ

    ಪ್ರತಿಮಾ ಕರ್ತವ್ಯಕ್ಕೆ ಸೇರಿದ ನಂತರ ರಾಮನಗರದಲ್ಲಿ ಹೆಚ್ಚು ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಬೆಂಗಳೂರು ನಗರ ಜಿಲ್ಲೆಗೆ ವರ್ಗಾವಣೆಯಾಗಿದ್ದರು. ಬೇರೆ ಇಲಾಖೆ ಅಧಿಕಾರಿಗಳೊಂದಿಗೂ ಉತ್ತಮ ಒಡನಾಟ ಹೊಂದಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ

    ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ (Deputy Director) ಪ್ರತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ (Subrahmanyapura) ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶನಿವಾರ (ನ.4) ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

    ಕಳೆದ 8 ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪೂರ್ಣಿಮಾ ಶನಿವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದರು. ರಾತ್ರಿ 8 ಗಂಟೆ ವೇಳೆಗೆ ತಮ್ಮ ಡ್ರೈವರ್‌ ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದರು. ಭಾನುವಾರ (ನ.5) ಬೆಳಗ್ಗೆ 8 ಗಂಟೆಗೆ ಪ್ರತಿಮಾ ಸಹೋದರ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ. ಬಳಿಕ ಫ್ಲ್ಯಾಟ್ ಬಳಿ ಹೋಗಿ ನೋಡಿದಾಗ ಕೊಲೆಯಾದ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ

    ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ

    ಬೆಂಗಳೂರು: ನನ್ನ ಸಹೋದರಿಯನ್ನು ಕೆಲಸದ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಸರ್ಕಾರದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ? ಎಂದು ಹತ್ಯೆಯಾದ ಉಪ ನಿರ್ದೇಶಕಿ ಪ್ರತಿಮಾ (Prathima) ಅವರ ಸಹೋದರ ಗೋಳಾಡಿದ್ದಾರೆ.

    ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ (Deputy Director) ತಿಮಾ ತೀರ್ಥಹಳ್ಳಿ ಮೂಲದವರಾಗಿದ್ದು, ಸುಬ್ರಹ್ಮಣ್ಯಪುರದ (Subrahmanyapur) ದೊಡ್ಡಕಲ್ಲಸಂದ್ರ ಬಳಿಕ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ರಾತ್ರಿ ಅವರನ್ನು ತಮ್ಮ ಮನೆಯಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

    ಕಳೆದ 8 ವರ್ಷಗಳಿಂದ ಅದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪೂರ್ಣಿಮಾ ಕಳೆದ ರಾತ್ರಿ ಮನೆತಲ್ಲಿ ಒಬ್ಬರೇ ಇದ್ದರು. ರಾತ್ರಿ 8 ಗಂಟೆ ವೇಳೆಗೆ ಅವರನ್ನು ಡ್ರೈವರ್ ಕಚೇರಿಯಿಂದ ಮನೆಗೆ ಬಿಟ್ಟು ಬಂದಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಪ್ರತಿಮಾ ಸಹೋದರ ಕರೆ ಮಾಡಿದರೂ ಅದನ್ನು ಸ್ವೀಕರಿಸಿರಲಿಲ್ಲ. ಬಳಿಕ ಫ್ಲ್ಯಾಟ್ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

    ಪ್ರತಿಮಾ ಅವರನ್ನು ಕಳೆದ ರಾತ್ರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ 8:30ರ ವೇಳಗೆ ಘಟನೆ ಬೆಳಕಿಗೆ ಬಂದಿದೆ. ಇದೀಗ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಧಿ ನಿಕ್ಷೇಪ ತೋರಿಸುವುದಾಗಿ 16 ಲಕ್ಷ ರೂ. ನಾಮ – ವಂಚಿತರಿಂದ ಜ್ಯೋತಿಷಿಯ ಕಿಡ್ನಾಪ್