Tag: ಉಮೇಶ್ ಕತ್ತಿ

  • ಕತ್ತಿ ಅಥವಾ ಬಾಲಚಂದ್ರರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು: ಸತೀಶ್ ಜಾರಕಿಹೊಳಿ

    ಕತ್ತಿ ಅಥವಾ ಬಾಲಚಂದ್ರರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು: ಸತೀಶ್ ಜಾರಕಿಹೊಳಿ

    ಬೆಳಗಾವಿ(ಚಿಕ್ಕೋಡಿ): ಶಾಸಕ ಉಮೇಶ್ ಕತ್ತಿ ಅಥವಾ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಅವರಿಬ್ಬರಿಗೂ ಸಿಕ್ಕಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಹುಕ್ಕೇರಿ ತಾಲೂಕಿನ ಪಾಶ್ಚಪೂರ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯಿಂದ ಉಮೇಶ್ ಕತ್ತಿ ಅಥವಾ ಬಾಲಚಂದ್ರ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಇಬ್ಬರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಮಂತ್ರಿಗಿರಿ ಸಿಗದೇ ಇದ್ದಿದ್ದು ಅವರ ಪಕ್ಷದ ಆಂತರಿಕ ವಿಚಾರ ಎಂದು ಬಿಜೆಪಿ ಸರ್ಕಾರದ ಸಚಿವ ಸಂಪುಟದ ಬಗ್ಗೆ ಪ್ರತಿಕ್ರಿಯಿಸಿದರು.

    ಇತ್ತ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡಿ, ಅವರು ಇಂದು ಎರಡು ವಸ್ತುಗಳನ್ನ ಕಳೆದುಕೊಂಡಿದ್ದಾರೆ. ಅವರ ಆಸೆ ಪಟ್ಟಿದ್ದ ವಸ್ತು ಕೂಡ ಸಿಗಲಿಲ್ಲ, ಮಂತ್ರಿಗಿರಿಯು ಅವರಿಗೆ ಸಿಗಲಿಲ್ಲ. ರಮೇಶ ಎರಡೂ ವಸ್ತು ಕಳೆದುಕೊಂಡಿದ್ದು ನಮಗೂ ನಿರಾಶೆಯಾಗಿದೆ ಎಂದು ವ್ಯಂಗ್ಯವಾಡಿದರು.

    ಜಾರಕಿಹೊಳಿ ಕುಟುಂಬಕ್ಕೆ ಸಚಿವ ಸ್ಥಾನ ತಪ್ಪಿದ್ದು ಇದೇ ಮೊದಲೇನಲ್ಲ. ಕೆಲವೊಂದು ಸಂದರ್ಭಗಳಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದು ಬಿಡುವುದು ಅವರ ಪಕ್ಷದ ನಿರ್ಧಾರ ಎಂದು ಹೇಳಿದರು.

    ಇನ್ನೊಂದೆಡೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಉಮೇಶ್ ಕತ್ತಿ ಬಂಡಾಯ ಎದ್ದಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಶಾಸಕನಾಗಿ 35 ವರ್ಷ ಆಯಿತು. ನಾನು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ. 1996ಯಿಂದ 1999ವರೆಗೂ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. 2008-2013ವರೆಗೂ ಕೂಡ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ಕೂಡ ಮಂತ್ರಿ ಆಗಬೇಕೆಂಬ ಆಸೆ ಇತ್ತು. ಆದರೆ ಅರ್ಧ ಸಂಪುಟ ವಿಸ್ತರಣೆ ಮಾಡಿದ್ದಾರೆ. ಈಗ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ. ಇನ್ನು ಅರ್ಧ ಸಂಪುಟ ವಿಸ್ತರಣೆ ಮಾಡಬೇಕಿದೆ. ಕಾದು ನೋಡಬೇಕಿದೆ. ನಾನು ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

    8 ಸಲ ಜನ ಆಶೀರ್ವಾದ ಮಾಡಿದ್ದಾರೆ. ಹಾಗಾಗಿ ಹಿರಿಯನಾಗಿದ್ದೇನೆ. ನಾನು ಚಿಕ್ಕ ವಯಸ್ಸಿನಲ್ಲೇ ಶಾಸಕನಾಗಿದ್ದೆ. 6-8 ಬಾರಿ ಶಾಸಕನಾಗಿ, 13 ವರ್ಷಗಳ ಕಾಲ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಆಸೆ ಇದೆ, ವಯಸ್ಸಿದೆ. ಕೆಲಸ ಮಾಡುವ ಹಂಬಲ ಇದೆ. ಬೆಳಗಾವಿಯಲ್ಲಿ ಅತಿವೃಷ್ಟಿಯಿಂದ ತೊಂದರೆಯಾಗುತ್ತಿದ್ದು, ಅದನ್ನು ನಿಭಾಯಿಸಬೇಕು ಎಂಬ ಮನಸ್ಸಿದೆ. ಸಿಎಂ ನನಗೆ ಮಂತ್ರಿ ಸ್ಥಾನ ಕೊಡುತ್ತಾರೆ ಎಂಬ ಭರವಸೆ ಇದೆ ಎಂದರು.

    ಬೆಳಗ್ಗೆ 6 ಗಂಟೆಯವರೆಗೂ ನನ್ನ ಹೆಸರು ಇತ್ತು. ಆದರೆ 6.10ಕ್ಕೆ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ. ನಾನು ಹಾಗೂ ತಿಪ್ಪರೆಡ್ಡಿ ಹಿರಿಯರು. ಸಾಕಷ್ಟು ಜನರು ಆಶೀರ್ವಾದ ಮಾಡಿದ್ದಾರೆ. ಜನರ ಸೇವೆ ಮಾಡುವ ಇಚ್ಛೆ ನಮಗಿದೆ. ಅಂತಹ ಸಂದರ್ಭದಲ್ಲಿ ಹಿರಿಯರನ್ನು ಕೈಬಿಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಯುವಕರನ್ನು ಬೆಳೆಸಬೇಕು ಎಂದು ಬಯಸುತ್ತಿದ್ದಾರೆ. ಇನ್ನು ಸಂಪುಟ ವಿಸ್ತರಣೆ ಆಗಬೇಕಿದೆ. ಕಾದು ನೋಡಬೇಕು ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

  • ಇಂದಲ್ಲ, ನಾಳೆ ನಾನು ಮಂತ್ರಿಯಾಗ್ತೀನಿ: ಬಾಲಚಂದ್ರ ಜಾರಕಿಹೊಳಿ

    ಇಂದಲ್ಲ, ನಾಳೆ ನಾನು ಮಂತ್ರಿಯಾಗ್ತೀನಿ: ಬಾಲಚಂದ್ರ ಜಾರಕಿಹೊಳಿ

    -ಉಮೇಶ್ ಕತ್ತಿಗೆ ಅನ್ಯಾಯವಾಗಿದೆ

    ಬೆಂಗಳೂರು: ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹೆಸರು ಸಚಿವ ಸ್ಥಾನದ ಪಟ್ಟಿಯಲ್ಲಿ ಕೇಳಿ ಬಂದಿತ್ತು. ಆದ್ರೆ ಬಾಲಚಂದ್ರ ಜಾರಕಿಹೊಳಿ ಅವರ ಹೆಸರನ್ನು ಸಚಿವರ ಪಟ್ಟಿಯಿಂದ ಬಿಜೆಪಿ ಹೈಕಮಾಂಡ್ ಕೈ ಬಿಟ್ಟಿತ್ತು. ಈ ಕುರಿತು ಬಾಲಚಂದ್ರ ಜಾರಕಿಹೊಳಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಇಂದಲ್ಲ, ನಾಳೆ ನಾನು ಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾರೆ.

    ನಿನ್ನೆ ತಡರಾತ್ರಿ ಬೆಂಗಳೂರಿಗೆ ಬಂದಿದ್ದೇನೆ. ಮಾಧ್ಯಮಗಳಲ್ಲಿ ಸಚಿವ ಸ್ಥಾನದಲ್ಲಿ ನನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಬಲಿಗರು ಬೆಂಗಳೂರಿಗೆ ಬಂದಿದ್ದಾರೆ. ನನ್ನನ್ನು ಮಂತ್ರಿ ಮಾಡಿ ಎಂದು ಸಿಎಂ ಬಳಿ ಕೇಳಿಲ್ಲ. ಸಚಿವ ಸ್ಥಾನ ನೀಡಿದ್ರೆ ನಿರ್ವಹಿಸಲು ಸಿದ್ಧನಿದ್ದೇನೆ. ಸಚಿವ ಸ್ಥಾನ ನೀಡಿಲ್ಲ, ಹಾಗಾಗಿ ನಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತೇವೆ. ಕಳೆದ ಮೂರು ದಿನಗಳಿಂದ ಮಾಧ್ಯಮಗಳು ನನ್ನನ್ನು ಮಂತ್ರಿ ಮಾಡಿದಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ನಕ್ಕರು.

    2005ರಿಂದಲೂ ಜಾರಕಿಹೊಳಿ ಕುಟುಂಬದಲ್ಲಿ ಒಬ್ಬರು ಮಂತ್ರಿಯಾಗುತ್ತಾ ಬಂದಿದ್ದಾರೆ. ಇಂದಲ್ಲ ಅಥವಾ ನಾಳೆ ನಾನು ಮಂತ್ರಿಯಾಗುತ್ತೇನೆ ಎಂಬ ನಂಬಿಕೆ ಹೊಂದಿದ್ದೇನೆ. ಲಕ್ಷ್ಮಣ್ ಸವದಿ ಅಥಣಿ ಮತ್ತು ಕಾಗವಾಡ ಕ್ಷೇತ್ರದ ವ್ಯಕ್ತಿ. ಹಾಗಾಗಿ ಮುಂದೆ ನಡೆಯುವ ಉಪಚುನಾವಣೆಯನ್ನು ಗೆಲ್ಲುವ ಉದ್ದೇಶದಿಂದ ಲಕ್ಷ್ಮಣ್ ಸವದಿಯವರಿಗೆ ಹೈಕಮಾಂಡ್ ಸಚಿವ ಸ್ಥಾನ ನೀಡಿರುವ ಸಾಧ್ಯತೆಗಳಿವೆ. ಸಚಿವ ಸ್ಥಾನದ ಯಾವುದೇ ಆಸೆಯೂ ನನಗಿಲ್ಲ, ಪಕ್ಷಕ್ಕೆ ನಿಷ್ಠನಾಗಿರುತ್ತೇನೆ ಎಂದರು.

    ಕ್ಷೇತ್ರದ ಜನತೆಗೆ ಮತ್ತು ಬೆಂಬಲಿಗರಿಗೆ ನಮ್ಮ ನಾಯಕ ಸಚಿವ ಆಗಬೇಕೆಂದು ಆಸೆ ಇರುತ್ತದೆ. ಅಂತಿಮ ಆದೇಶ ಬರೋವರೆಗೂ ಬೆಂಗಳೂರಿಗೆ ಬರೋದು ಬೇಡ ಅಂತಾ ಹೇಳಿದ್ದರೂ ಬಂದಿದ್ದಾರೆ. ಸಹಜವಾಗಿಯೇ ಕ್ಷೇತ್ರದ ಜನತೆಗೆ ನಿರಾಸೆಯುಂಟಾಗಿದ್ದರಿಂದ ಆಕ್ರೋಶ ಹೊರ ಹಾಕುತ್ತಿದ್ದಾರೆ. ದೈವ ಬಲ ನಮಗಿದ್ದು, ಜಾರಕಿಹೊಳಿ ಕುಟುಂಬದಿಂದ ಒಬ್ಬರು ಖಂಡಿತ ಮಂತ್ರಿ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

    ಉಮೇಶ್ ಕತ್ತಿಯವರು ನನ್ನ ಆಪ್ತರು. ಒಂಬತ್ತು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಉಮೇಶ್ ಕತ್ತಿಯವರ ಸೋದರನಿಗೆ ಟಿಕೆಟ್ ನೀಡಿರಲಿಲ್ಲ. ಅಂದು ಯಡಿಯೂರಪ್ಪನವರು ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದರು. ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು ಎಂಬುವುದು ನನ್ನ ವೈಯಕ್ತಿಯ ಅಭಿಪ್ರಾಯ. ಸಂಪುಟ ರಚನೆಯಲ್ಲಿ ಉಮೇಶ್ ಕತ್ತಿಯವರಿಗೆ ಅನ್ಯಾಯವಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ಬೇಸರ ಹೊರ ಹಾಕಿದರು.

  • ಬೆಳಗ್ಗೆ 6 ಗಂಟೆವರೆಗೆ ಇದ್ದ ನನ್ನ ಹೆಸ್ರನ್ನು 6.10ಕ್ಕೆ ಕೈ ಬಿಟ್ರು: ಉಮೇಶ್ ಕತ್ತಿ

    ಬೆಳಗ್ಗೆ 6 ಗಂಟೆವರೆಗೆ ಇದ್ದ ನನ್ನ ಹೆಸ್ರನ್ನು 6.10ಕ್ಕೆ ಕೈ ಬಿಟ್ರು: ಉಮೇಶ್ ಕತ್ತಿ

    ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಯವರೆಗೂ ನನ್ನ ಹೆಸರು ಇತ್ತು. ಆದರೆ 6.10ಕ್ಕೆ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ ಎಂದು ಶಾಸಕ ಉಮೇಶ್ ಕತ್ತಿ ಬೇಸರ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಶಾಸಕನಾಗಿ 35 ವರ್ಷ ಆಯಿತು. ನಾನು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ. 1996ಯಿಂದ 1999ವರೆಗೂ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. 2008-2013ವರೆಗೂ ಕೂಡ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ಕೂಡ ಮಂತ್ರಿ ಆಗಬೇಕೆಂಬ ಆಸೆ ಇತ್ತು. ಆದರೆ ಅರ್ಧ ಸಂಪುಟ ವಿಸ್ತರಣೆ ಮಾಡಿದ್ದಾರೆ, ಈಗ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ. ಇನ್ನು ಅರ್ಧ ಸಂಪುಟ ವಿಸ್ತರಣೆ ಮಾಡಬೇಕಿದೆ. ಕಾದು ನೋಡಬೇಕಿದೆ. ನಾನು ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

    8 ಸಲ ಜನ ಆಶೀರ್ವಾದ ಮಾಡಿದ್ದಾರೆ. ಹಾಗಾಗಿ ಹಿರಿಯನಾಗಿದ್ದೇನೆ. ನಾನು ಚಿಕ್ಕ ವಯಸ್ಸಿನಲ್ಲೇ ಶಾಸಕನಾಗಿದ್ದೆ. 6-8 ಬಾರಿ ಶಾಸಕನಾಗಿ, 13 ವರ್ಷಗಳ ಕಾಲ ಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ನನಗೆ ಆಸೆ ಇದೆ, ವಯಸ್ಸಿದೆ. ಕೆಲಸ ಮಾಡುವ ಹಂಬಲ ಇದೆ. ಬೆಳಗಾವಿಯಲ್ಲಿ ಅತಿವೃಷ್ಟಿಯಿಂದ ತೊಂದರೆಯಾಗುತ್ತಿದ್ದು, ಅದನ್ನು ನಿಭಾಯಿಸಬೇಕು ಎಂಬ ಮನಸ್ಸಿದೆ. ಸಿಎಂ ನನಗೆ ಮಂತ್ರಿ ಸ್ಥಾನ ಕೊಡುತ್ತಾರೆ ಎಂಬ ಭರವಸೆ ಇದೆ ಎಂದರು.

    ಬೆಳಗ್ಗೆ 6 ಗಂಟೆಯವರೆಗೂ ನನ್ನ ಹೆಸರು ಇತ್ತು. ಆದರೆ 6.10ಕ್ಕೆ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ. ನಾನು ಹಾಗೂ ತಿಪ್ಪರೆಡ್ಡಿ ಹಿರಿಯರು. ಸಾಕಷ್ಟು ಜನರು ಆಶೀರ್ವಾದ ಮಾಡಿದ್ದಾರೆ. ಜನರ ಸೇವೆ ಮಾಡುವ ಇಚ್ಛೆ ನಮಗಿದೆ. ಅಂತಹ ಸಂದರ್ಭದಲ್ಲಿ ಹಿರಿಯರನ್ನು ಕೈಬಿಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಯುವಕರನ್ನು ಬೆಳೆಸಬೇಕು ಎಂದು ಬಯಸುತ್ತಿದ್ದಾರೆ. ಇನ್ನು ಸಂಪುಟ ವಿಸ್ತರಣೆ ಆಗಬೇಕಿದೆ. ಕಾದು ನೋಡಬೇಕು ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

  • ರಮೇಶ್ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬಂದ್ರೆ, ಮಂತ್ರಿ-ಡಿಸಿಎಂ ಸ್ಥಾನ ಕೊಡ್ತೀವಿ: ಉಮೇಶ್ ಕತ್ತಿ

    ರಮೇಶ್ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬಂದ್ರೆ, ಮಂತ್ರಿ-ಡಿಸಿಎಂ ಸ್ಥಾನ ಕೊಡ್ತೀವಿ: ಉಮೇಶ್ ಕತ್ತಿ

    ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಅವರ ಪ್ರಮಾಣವಚನ ಸಮಾರಂಭಕ್ಕೆ ಕೆಲವೇ ಗಂಟೆ ಬಾಕಿ ಇದೆ. ಆದರೆ ಇತ್ತ ರಮೇಶ್ ಜಾರಕಿಹೊಳಿಗಾಗಿ ಸಚಿವ ಸ್ಥಾನ ತ್ಯಾಗಕ್ಕೆ ಬಿಜೆಪಿ ಶಾಸಕ ಉಮೇಶ್ ಕತ್ತಿ ಮುಂದಾಗಿದ್ದಾರ ಎಂಬ ಮಾತುಗಳು ಕೇಳಿಬರುತ್ತಿದೆ.

    ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಬಂದು ಡಿಸಿಎಂ ಸ್ಥಾನ ಕೇಳಿದರೂ ಕೊಡುವುದಕ್ಕೆ ಸಿದ್ಧ. ನನ್ನ ರಮೇಶ್ ಜಾರಕಿಹೊಳಿ ಮಧ್ಯೆ ಯಾವುದೇ ಕಿತ್ತಾಟವಿಲ್ಲ. ಚುನಾವಣೆ ಬಂದಾಗ ಮಾತ್ರ ನಾವು ಎದುರಾಗುತ್ತಿದ್ವಿ. ಹೊರಗಿನಿಂದ ಪಕ್ಷಕ್ಕೆ ಬರುವವರಿಗೆ ಸಚಿವ ಸ್ಥಾನ ಬಿಟ್ಟು ಕೊಡಲು ಸಿದ್ಧ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಮೇಶ್ ಕತ್ತಿ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿ. ಆದರೆ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಹೊಸ ಸರ್ಕಾರ ಬರುತ್ತಿದೆ. ನಾಲ್ಕು ವರ್ಷಗಳ ಕಾಲ ರಾಜ್ಯದಲ್ಲಿ ಉತ್ತಮ ಆಡಳಿತವನ್ನು ಕೊಡುವುದೇ ನಮ್ಮ ಗುರಿಯಾಗಿದೆ. ನಾವು ಮೊದಲಿಂದಲೂ ಸ್ಥಾನ ತ್ಯಾಗ ಮಾಡುತ್ತಾ ಬಂದಿದ್ದೇವೆ. ಈಗ ಹೊರಗಿನಿಂದ ಬಂದವರಿಗೆ ಸ್ಥಾನ ಕೊಡಲು ಸಿದ್ಧರಿದ್ದೇವೆ. ರಮೇಶ್ ಜಾರಕಿಹೊಳಿ ಬಂದರೂ ಸ್ವಾಗತ, ಕುಮಾರಸ್ವಾಮಿ, ಸಿದ್ದರಾಮಯ್ಯ ಬಂದರೂ ಸ್ವಾಗತ ಎಂದಿದ್ದಾರೆ.

    ರಮೇಶ್ ಜಾರಕಿಹೊಳಿ ಮತ್ತು ನಮ್ಮ ಜಗಳ ಕುಟುಂಬ ಜಗಳ ಅಲ್ಲ. ಚುನಾವಣೆ ಬಂದಾಗ ಮಾತ್ರ ನಾವು ಎದುರಾಗಿ ನಿಲ್ಲುತ್ತಿದ್ದೆವು. ರಮೇಶ್ ಅವರು ನನ್ನ ಮಿತ್ರರು. ನಮ್ಮ ಪಕ್ಷಕ್ಕೆ ಬಂದರೆ ಅವರು ಮಂತ್ರಿಯಾಗುತ್ತಾರೆ. ನಮ್ಮ ಪಕ್ಷದ ನಾಯಕರು ಮಂತ್ರಿಯಾಗುತ್ತಾರೆ. ರಮೇಶ್ ಡಿಸಿಎಂ ಹುದ್ದೆ ಕೇಳಿದರೂ ಕೊಡುತ್ತೀವಿ. ಒಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೂಡಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸಬೇಕು ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

  • ಒಂದು ವರ್ಷ ಎರಡು ತಿಂಗಳ ಅನೈತಿಕ ಸಂಬಂಧ ಇಂದಿಗೆ ಅಂತ್ಯ – ಉಮೇಶ್ ಕತ್ತಿ

    ಒಂದು ವರ್ಷ ಎರಡು ತಿಂಗಳ ಅನೈತಿಕ ಸಂಬಂಧ ಇಂದಿಗೆ ಅಂತ್ಯ – ಉಮೇಶ್ ಕತ್ತಿ

    ಬೆಂಗಳೂರು: ಮೈತ್ರಿ ಸರ್ಕಾರದ ಒಂದು ವರ್ಷ ಎರಡು ತಿಂಗಳ ಅನೈತಿಕ ಸಂಬಂಧ ಮುರಿದು ಹೋಯ್ತು ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ವ್ಯಂಗ್ಯವಾಡಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಯಡಿಯೂರಪ್ಪ ಅವರನ್ನು ಅಧಿಕಾರದಿಂದ ದೂರ ಇಡಲು ಅನೈತಿಕ ಸಂಬಂಧ ಬೆಳೆಸಿಕೊಂಡು ಬಂದರು. ಒಂದು ವರ್ಷ ಎರಡು ತಿಂಗಳಿಗೆ ಅದು ಬಿದ್ದು ಹೋಯ್ತು. ಮುಂದೆ ಹೊಸ ಸರ್ಕಾರ ರಚನೆ ಮಾಡುತ್ತೇವೆ ಮತ್ತು ಉತ್ತಮ ಆಡಳಿತ ಕೊಡುತ್ತೇವೆ ಎಂದು ಹೇಳಿದರು.

    ಕಾಂಗ್ರೆಸ್, ಜೆಡಿಎಸ್ ಅನೈತಿಕ ಸಂಬಂಧ ಇಂದಿಗೆ ಅಂತ್ಯವಾಗಿದೆ. ಈ ಸಂಬಂಧ ಅಂತ್ಯವಾಗಲು ಸಿದ್ದರಾಮಯ್ಯ ಎಂದ ಅವರು, ಸರ್ಕಾರ ರಚನೆ ಮಾಡಲು ರಾಜ್ಯಪಾಲರನ್ನು ಭೇಟಿ ಆಗುತ್ತೇವೆ. ಇಲ್ಲದೆ ಇದ್ದರೆ ಮತ್ತೊಂದು ಚುನಾವಣೆಗೂ ಹೋಗಲು ನಾವು ಸಿದ್ಧ ಎಂದು ಹೇಳಿದರು.

  • ಸಮ್ಮಿಶ್ರ ಸರ್ಕಾರ ಉಳಿವಿಗೆ ಸಿಎಂ ನಡೆಸಿರೋ ತಂತ್ರಗಾರಿಕೆ ವ್ಯರ್ಥ: ಉಮೇಶ್ ಕತ್ತಿ

    ಸಮ್ಮಿಶ್ರ ಸರ್ಕಾರ ಉಳಿವಿಗೆ ಸಿಎಂ ನಡೆಸಿರೋ ತಂತ್ರಗಾರಿಕೆ ವ್ಯರ್ಥ: ಉಮೇಶ್ ಕತ್ತಿ

    ಚಿಕ್ಕೋಡಿ (ಬೆಳಗಾವಿ): ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ನಡೆಸುತ್ತಿರುವ ತಂತ್ರಗಾರಿಕೆ ಪ್ರಯೋಜನವಾಗುವುದಿಲ್ಲ ಎಂದು ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಬರ ನಿರ್ವಹಣೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಶಾಸಕರು, ಮೇ 30ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುತ್ತಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ. ಪಕ್ಷಕ್ಕೆ ಸೇರಲಿರುವ ಶಾಸಕರ ವಿಶ್ವಾಸ ಪಡೆದು ಸರ್ಕಾರ ರಚನೆಗೆ ಮುಂದಾಗಲಿದ್ದೇವೆ ಎಂದು ಆಪರೇಷನ್ ಕಮಲದ ಗುಟ್ಟು ಬಿಚ್ಚಿಟ್ಟರು.

    ರಾಜ್ಯದಲ್ಲಿ ಆವರಿಸಿರುವ ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬರ ನಿರ್ವಹಣೆ ಮಾಡಬೇಕಿದ್ದ ರಾಜ್ಯದ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರು ವಿದೇಶದಲ್ಲಿ ಮೋಜು ಮಸ್ತಿ ಮಾಡಿ ಬಂದಿದ್ದಾರೆ. ಬರಗಾಲ ಸಂದರ್ಭದಲ್ಲಿ ಕೃಷ್ಣಾ ನದಿಗೆ ನೀರು ತರಿಸುವಲ್ಲಿ ಬೇಜವಾಬ್ದಾರಿ ತೋರಿದ ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅವರಂತೆ ಲೋಕಸಭಾ ಚುನಾವಣೆಯ ಜನಾದೇಶವನ್ನು ಅರಿತು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಮೂಲಕ ಸರ್ಕಾರ ನಡೆಸಲು ಬಿಜೆಪಿಗೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

  • ಬೆಳಗಾವಿ ಪಾಲಿಟಿಕ್ಸ್‌ಗೆ ಇಂದು ಮೆಗಾ ಟ್ವಿಸ್ಟ್

    ಬೆಳಗಾವಿ ಪಾಲಿಟಿಕ್ಸ್‌ಗೆ ಇಂದು ಮೆಗಾ ಟ್ವಿಸ್ಟ್

    ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಿಗೆ ಬಂಡಾಯದ ಉಂಡೆಯಂತಾಗಿದೆ. ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಅಣ್ಣಾ ಸಾಹೇಬ್ ಜೊಲ್ಲೆ ಪಾಲಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ರಮೇಶ್ ಕತ್ತಿ ಸಿಡಿದೆದ್ದಿದ್ದಾರೆ.

    ಅಂದಹಾಗೆ ರಾಜ್ಯದ ಮಟ್ಟಿಗೆ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಸದಾ ಬೆಂಬಲವಾಗಿ ನಿಲ್ಲುತ್ತಿದ್ದ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ಟಿಕೆಟ್ ಸಿಗದೇ ಇರೋದಕ್ಕೆ ಗರಂ ಆಗಿದ್ದಾರೆ. ಅಷ್ಟೇ ಅಲ್ಲದೆ ಯುಗಾದಿ ಮುನ್ನ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದ್ದು, ಬೆಳಗಾವಿಯಿಂದಲೇ ಹೊಸ ಯುಗ ಆರಂಭವಾಗಲಿದೆ ಎಂದು ಎಚ್ಚರಿಸಿದ್ದರು.

    ಹೀಗಾಗಿ ಬಿಎಸ್‍ವೈ ಕತ್ತಿ ಮನವೊಲಿಕೆಗಾಗಿ ಇಂದು ಬೆಳಗಾವಿಗೆ ದೌಡಾಯಿಸುತ್ತಿದ್ದಾರೆ. ಕಳೆದರೆಡು ದಿನಗಳಿಂದ ಈ ಬೆಳವಣಿಗೆಳನ್ನ ಗಮನಿಸಿರುವ ಯಡಿಯೂರಪ್ಪ ಉಮೇಶ್ ಕತ್ತಿ ಮನವೊಲಿಕೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಧಾನ ಸಭೆ ನಡೆಯಲಿದ್ದು, ಬೆಳಗಾವಿಯ ಕೆಎಲ್‍ಇ ಗೆಸ್ಟ್ ಹೌಸ್‍ನಲ್ಲಿ ಮೀಟಿಂಗ್ ನಡೆಯಲಿದೆ.

  • ಚಿಕ್ಕೋಡಿಯಲ್ಲಿ ಬಂಡಾಯವೆದ್ದ ಉಮೇಶ್ ಕತ್ತಿ – ನಾಲ್ವರು ಶಾಸಕರು ಬಿಜೆಪಿಗೆ ಗುಡ್ ಬೈ?

    ಚಿಕ್ಕೋಡಿಯಲ್ಲಿ ಬಂಡಾಯವೆದ್ದ ಉಮೇಶ್ ಕತ್ತಿ – ನಾಲ್ವರು ಶಾಸಕರು ಬಿಜೆಪಿಗೆ ಗುಡ್ ಬೈ?

    ಬೆಳಗಾವಿ: ಯುಗಾದಿಗೆ ಮುನ್ನವೇ ರಾಜ್ಯ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಲಿದೆ. ಸಹೋದರ ರಮೇಶ್ ಕತ್ತಿಗೆ ಟಿಕೆಟ್ ತಪ್ಪಿದ್ದಕ್ಕೆ ಹೊಸ ತಂತ್ರವೊಂದನ್ನು ರೂಪಿಸಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಲಿದ್ದೇನೆ ಎಂದಿರುವ ಶಾಸಕ ಉಮೇಶ್ ಕತ್ತಿ ಗುಟ್ಟು ಬಿಟ್ಟುಕೊಡದೆ ಯಾವುದಕ್ಕೂ ಕಾದು ನೋಡಿ ಎಂದು ಹೇಳಿದ್ದಾರೆ.

    ಬೆಳಗಾವಿಯ ನಾಲ್ಕಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆ ಅನ್ನೋ ಮಾಹಿತಿಯೊಂದು ಲಭಿಸಿದೆ. ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ದೊಡ್ಡದಾದ ಜಿಲ್ಲೆಯಲ್ಲಿ 18 ಶಾಸಕರಿದ್ದಾರೆ. ಅದರಲ್ಲಿ ಕುಟುಂಬ ರಾಜಕಾರಣಕ್ಕೆ ಹೆಸರಾದ ಕತ್ತಿ ಸಹೋದರರು ಪಕ್ಷಕ್ಕಿಂತ ವೈಯಕ್ತಿಕ ವರ್ಚಸ್ಸು ಹೊಂದಿದ್ದಾರೆ. ಚಿಕ್ಕೋಡಿ ಲೋಕಸಭೆಯಿಂದ ಸಹೋದರ ರಮೇಶ್ ಕತ್ತಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ ಶಾಸಕ ಉಮೇಶ್ ಕತ್ತಿ ಗರಂ ಆಗಿದ್ದಾರೆ.

    ತೆರೆಮರೆಯಲ್ಲಿ ತಂತ್ರ ಹೆಣೆದ ಉಮೇಶ್ ಕತ್ತಿ ಬಂಡಾಯದ ಬಾವುಟ ಹಾರಿಸುವುದಂತೂ ಖಚಿತವಾಗಿದೆ ಎಂದು ಮೂಲಗಳು ದೃಢಪಡಿಸಿವೆ. ಈ ಚುನಾವಣೆಯಲ್ಲಿ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಮೇಶ್ ಕತ್ತಿಯನ್ನು ಕಣಕ್ಕಿಳಿಸಲು ಸರ್ವ ಸಿದ್ಧತೆ ನಡೆಸಿದ್ದಾರೆ. ಅದಲ್ಲದೆ ಇನ್ನುಳಿದ ಮೂರು ಬಿಜೆಪಿ ಶಾಸಕರ ಜೊತೆಗೆ ತಾವೂ ಬಿಜೆಪಿ ಪಕ್ಷ ತೊರೆದು ಶಾಕ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

    ತಾವೇ ಸಾಕಿದ ಗಿಣಿಗಳು ತಮ್ಮನ್ನೇ ಕುಕ್ಕುತ್ತಿವೆ, ಕಚ್ಚುತ್ತಿವೆ. ಮುಂದಿನ ದಿನಮಾನಗಳಲ್ಲಿ ರಾಜಕಾರಣ ಮತ್ತಷ್ಟು ಹದಗೆಡಲಿದೆ. ಅದಕ್ಕೆ ಬೆಂಬಲಿಗಳು ಹಿತೈಷಿಗಳು ಕಾರ್ಯಕರ್ತರು ಸಂಯಮದಿಂದ ವರ್ತಿಸಬೇಕು, ಜೊತೆಗೆ ಶಾಂತತೆಯಿಂದ ನಡೆದುಕೊಳ್ಳಬೇಕು. ಯುಗಾದಿಗೆ ಮುನ್ನ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ. ಚಿಕ್ಕೋಡಿ ಬಿಜೆಪಿ ಟಿಕೆಟ್‍ಗಾಗಿ ಬಿಎಸ್‍ವೈ ಪುನರ್ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲಿಯವರೆಗೆ ಕಾದು ನೋಡೋಣ. ನಮ್ಮ ಮುಂದಿನ ತೀರ್ಮಾನ ತಿಳಿಸುತ್ತೇವೆ ಎಂದು ಕತ್ತಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಎಲ್ಲವೂ ಉಮೇಶ್ ಕತ್ತಿ ಅಂದುಕೊಂಡಂತೆ ಆದರೆ ಸಹೋದರ ರಮೇಶ್ ಕತ್ತಿ ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ಚಿಕ್ಕೋಡಿಯಿಂದ ಟಿಕೆಟ್ ಫೋಷಣೆಯಾದ ಪ್ರಕಾಶ್ ಹುಕ್ಕೇರಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಹಾರಲಿದ್ದಾರೆ.

  • ಕುಮಾರಸ್ವಾಮಿ ಸರ್ಕಾರ ಬಂದಿದ್ದೆ ಒಂದು ವಿಚಿತ್ರ: ಉಮೇಶ್ ಕತ್ತಿ ವ್ಯಂಗ್ಯ

    ಕುಮಾರಸ್ವಾಮಿ ಸರ್ಕಾರ ಬಂದಿದ್ದೆ ಒಂದು ವಿಚಿತ್ರ: ಉಮೇಶ್ ಕತ್ತಿ ವ್ಯಂಗ್ಯ

    ಬೆಳಗಾವಿ (ಚಿಕ್ಕೋಡಿ): ಸಿಎಂ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ವಿಚಿತ್ರ. ಕೇವಲ 72 ಜನ ಶಾಸಕರ ಬೆಂಬಲ ಪಡೆದ ಮಂತ್ರಿಯಾದ ಏಕೈಕ ಸರ್ಕಾರ ಇದು. ಪ್ರಪಂಚದಲ್ಲಿ ಎಲ್ಲೂ ಈ ರೀತಿಯ ಸರ್ಕಾರ ಕಾಣ ಸಿಗುವುದಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ವ್ಯಂಗ್ಯವಾಡಿದ್ದಾರೆ.

    ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಕೇವಲ 29 ಮಂದಿ ಶಾಸಕರನ್ನು ಇಟ್ಟುಕೊಂಡು ಕಾಂಗ್ರೆಸ್ ಬೆಂಬಲ ಪಡೆದು ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. 104 ಶಾಸಕರನ್ನು ಇಟ್ಟುಕೊಂಡು ಬಿಜೆಪಿ ವಿರೋಧ ಪಕ್ಷದಲ್ಲಿದೆ. ಕುಮಾರಸ್ವಾಮಿ ಸರ್ಕಾರ ಬಂದ ಮೇಲೆ ಹಾಸನ ಹಾಗೂ ಮಂಡ್ಯ ಬಿಟ್ಟು ಬೇರೆ ಎಲ್ಲೂ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಬೇರೆ ಯಾವುದೇ ಕ್ಷೇತ್ರಗಳಿಗೆ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ಸಾಲ ಮನ್ನಾ ಹೆಸರಲ್ಲಿ ಸಿಎಂ ಕುಮಾರಸ್ವಾಮಿ ಕಥೆ ಹೇಳುತ್ತಿದ್ದಾರೆ. ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಕಿತ್ತಾಟದಿಂದ ಸರ್ಕಾರ ಬಿದ್ದು ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಲೋಕಸಭೆ ಚುನಾವಣೆ ಮಾರಿ ಹಬ್ಬ ಇದ್ದ ಹಾಗೆ ಐದು ವರ್ಷಕೊಮ್ಮೆ ಬರುತ್ತೆ. ಹೀಗಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ 5 ಜನ ಆಕಾಂಕ್ಷಿಗಳಿದ್ದಾರೆ. ನನ್ನ ಸಹೋಧರ ರಮೇಶ್ ಕತ್ತಿ ಕೂಡ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಆಕಾಂಕ್ಷಿಯಾಗಿದ್ದಾರೆ. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಆ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಮೇಶ್ ಕತ್ತಿ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದರಾಮಯ್ಯನವರೇ ಆಪರೇಷನ್ ಕುಮಾರಸ್ವಾಮಿ ಮಾಡ್ತಿದ್ದಾರೆ – ಉಮೇಶ್ ಕತ್ತಿ

    ಸಿದ್ದರಾಮಯ್ಯನವರೇ ಆಪರೇಷನ್ ಕುಮಾರಸ್ವಾಮಿ ಮಾಡ್ತಿದ್ದಾರೆ – ಉಮೇಶ್ ಕತ್ತಿ

    ಚಿಕ್ಕೋಡಿ: ಸಂಕ್ರಾಂತಿ ಹಬ್ಬ ಮುಗಿದ ಮೇಲೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತೆ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯನವರೇ ಆಪರೇಷನ್ ಕುಮಾರಸ್ವಾಮಿ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಹಾಕಿದ್ದಾರೆ.

    ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿಯ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಬರಲಿದ್ದು, ನಾಡಿನ ಜನತೆಗೆ ಒಳ್ಳೆಯ ಆಡಳಿತ ನೀಡುವ ಸರ್ಕಾರ ಬರುತ್ತದೆ. ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಒಳ್ಳೆಯ ತೀರ್ಮಾನ ತೆಗೆದುಕೊಂಡು ನಾಡಿನ ಜನತೆಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎನ್ನುವ ಆಶ್ವಾಸನೆ ನೀಡಿದರು.


    ಇದೇ ವೇಳೆ ಸಿದ್ದರಾಮಯ್ಯ ಅವರ ಆಪರೇಷನ್ ಕಮಲ ಟೀಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಉಮೇಶ್ ಕತ್ತಿ, ಕಳೆದ 10 ವರ್ಷದಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇಲ್ಲ. ನಮ್ಮ ಬಳಿ ದುಡ್ಡಿಲ್ಲ ಸಿದ್ದರಾಮಯ್ಯ ಅವರು ಹೇಳಿದಷ್ಟು ಹಣವೂ ಇಲ್ಲ. ಆದರೆ ಸಿದ್ದರಾಮಯ್ಯ ಅವರು ಹೇಳುವುದನ್ನು ನೋಡಿದರೆ ಅವರೇ ಆಪರೇಷನ್ ಕುಮಾರಸ್ವಾಮಿ ಮಾಡುತ್ತಿದ್ದಾರೆ ಎನಿಸುತ್ತದೆ. ಸಮ್ಮಿಶ್ರ ಸರ್ಕಾರ ಬೀಳಿಸಲು ಸಿದ್ದರಾಮಯ್ಯ ಅವರೇ ಹಣ ನಿಯೋಜನೆ ಮಾಡುತ್ತಿದ್ದಾರೆ. ಏಕೆಂದರೆ ಕಳೆದ 5 ವರ್ಷ ಅಧಿಕಾರದಲ್ಲಿ ಬಳಿಕ ಈಗ ಅಧಿಕಾರ ಕಳೆದುಕೊಂಡಿದ್ದಾರೆ. ಅವರೇ ಸರ್ಕಾರ ಉರುಳಿಸುವ ಪ್ರಯತ್ನ ಮಾಡಿ ಬಿಜೆಪಿ ಪಕ್ಷದ ಹೆಸರನ್ನು ಲೇಪನ ಮಾಡುತ್ತಿದ್ದಾರೆ. ಸರ್ಕಾರ ಉರುಳಿಸುವ ಮುಂಚೂಣಿಯಲ್ಲಿ ಸಿದ್ದರಾಮಯ್ಯ ಅವರು ಇದ್ದಾರೆ ಎಂದು ತಿರುಗೇಟು ನೀಡಿದರು.

    ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾರನ್ನು ಭೇಟಿ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಇದೆಲ್ಲಾ ಊಹಾಪೋಹಗಳನ್ನು ಸಿದ್ದರಾಮಯ್ಯ ಅವರೇ ಎಬ್ಬಿಸುತ್ತಿದ್ದಾರೆ. ಶಾಸಕರಿಗೆ 25 ರಿಂದ 30 ಕೋಟಿ ರೂ. ಕೊಟ್ಟು ಅವರೇ ಸರ್ಕಾರವನ್ನು ಬೀಳಿಸುತ್ತಿದ್ದಾರೆ. ಅವರ ಈ ಪ್ರಯತ್ನಕ್ಕೆ ಧನ್ಯವಾದ ಹೇಳುತ್ತಿದ್ದೇನೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv