Tag: ಉಮೇಶ್ ಕತ್ತಿ

  • ಉಮೇಶ್ ಕತ್ತಿಗೆ ಟಿವಿಗಳಲ್ಲಿ ಹೆಡ್‍ಲೈನ್ ಆಗೋದಕ್ಕೆ ಇಷ್ಟ – ದಿನೇಶ್ ಗುಂಡೂರಾವ್ ವ್ಯಂಗ್ಯ

    ಉಮೇಶ್ ಕತ್ತಿಗೆ ಟಿವಿಗಳಲ್ಲಿ ಹೆಡ್‍ಲೈನ್ ಆಗೋದಕ್ಕೆ ಇಷ್ಟ – ದಿನೇಶ್ ಗುಂಡೂರಾವ್ ವ್ಯಂಗ್ಯ

    – ರಮೇಶ್ ಜಾರಕಿಹೊಳಿ ನನ್ನ ಸಂಪರ್ಕಕ್ಕೆ ಸಿಗುತ್ತಿಲ್ಲ

    ಬೆಂಗಳೂರು: ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರಿಗೆ ಟಿವಿಗಳಲ್ಲಿ ಹೆಡ್‍ಲೈನ್ ಆಗುವುದಕ್ಕೆ ಇಷ್ಟ. ಹೀಗಾಗಿ 24 ಗಂಟೆಯಲ್ಲಿ ಸರ್ಕಾರ ಬೀಳುತ್ತದೆ ಅಂತ ಹೇಳಿಕೆ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

    ನಗರದ ಕೆಪಿಸಿಸಿ ಕಚೇರಿಯಲ್ಲಿ ಉಮೇಶ್ ಕತ್ತಿ ಅವರ ಹೇಳಿಕೆ ವಿರುದ್ಧ ಕಿಡಿಕಾರಿದ ದಿನೇಶ್ ಗುಂಡೂರಾವ್, ಶಾಸಕರು ಸುದ್ದಿಯಾಗುತ್ತಿರಲಿಲ್ಲ. ಹೀಗಾಗಿ ಸರ್ಕಾರ ಬೀಳುತ್ತದೆ ಅಂತಾ ಹೇಳಿಕೆ ಕೊಟ್ಟರೆ ಒಂದು ದಿನ ಸುದ್ದಿಯಾಗಬಹುದೆಂದು ಪ್ಲಾನ್ ಮಾಡಿದ್ದರು. ಶಾಸಕರು ಹೇಳಿಕೆ ಕೊಟ್ಟು 24 ಗಂಟೆ ಕಳೆದಿದ್ದು, ಮೈತ್ರಿ ಸರ್ಕಾರ ಸುಭದ್ರವಾಗಿದೆ. ಈಗ ಉಮೇಶ್ ಕತ್ತಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು ಎಂದು ಕಿಡಿಕಾರಿದರು.

    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಲ್ಲಿಯೂ ಹೋಗಲ್ಲ. ಗೋಕಾಕ್‍ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ರಮೇಶ್ ಜಾರಕಿಹೊಳಿ ನನ್ನ ಸಂಪರ್ಕಕ್ಕೆ ಸಿಗುತ್ತಿಲ್ಲ. ಕೇವಲ ಆಪ್ತರೊಂದಿಗೆ ಮಾತ್ರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

    ಶಕ್ತಿ ಯೋಜನೆ:
    ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಎಐಸಿಸಿ ಜಾರಿಗೆ ತಂದ ಶಕ್ತಿ ಯೋಜನೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಈ ಯೋಜನೆ ಅಡಿ ಅನೇಕರು ಪಕ್ಷದ ಸದಸ್ಯತ್ವ ಪಡೆದಿದ್ದಾರೆ. ರಾಜ್ಯದಲ್ಲಿ 10.50 ಲಕ್ಷ ಜನರು ಸದಸ್ಯತ್ವಕ್ಕೆ ನೋಂದಣಿ ಪಡೆದಿದ್ದಾರೆ. ಶಕ್ತಿ ಯೋಜನೆಯಲ್ಲಿ ಯಾವುದೇ ಗೋಲ್‍ಮಾಲ್ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಶಕ್ತಿ ಯೋಜನೆಯನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಪ್ರಚಾರ ಮಡಲಾಗಿದೆ. ಸದಸ್ಯರ ನೋಂದಣಿಯಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿದ್ದರೆ, ರಾಜಸ್ತಾನ ಎರಡನೇ ಸ್ಥಾನದಲ್ಲಿದೆ. ರಾಜ್ಯದ 7 ವಿಧಾನಸಭಾ ಕ್ಷೇತ್ರಗಳಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಪಕ್ಷದ ಸದಸ್ಯತ್ವ ಪಡೆದಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರವೊಂದರಲ್ಲಿಯೇ 1.12 ಲಕ್ಷ ಜನರು ಶಕ್ತಿ ಯೋಜನೆ ಮೂಲಕ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪರಮೇಶ್ವರ್ ಜೊತೆ ಡಿಶುಂ ಡಿಶುಂ ಸುಳ್ಳು – ಖಾತೆ ಇಲ್ಲದ ಅಸಮಾಧಾನವಿದೆ ಅಂದ್ರು ಸಿದ್ದರಾಮಯ್ಯ

    ಪರಮೇಶ್ವರ್ ಜೊತೆ ಡಿಶುಂ ಡಿಶುಂ ಸುಳ್ಳು – ಖಾತೆ ಇಲ್ಲದ ಅಸಮಾಧಾನವಿದೆ ಅಂದ್ರು ಸಿದ್ದರಾಮಯ್ಯ

    ಬೆಂಗಳೂರು: ಗೃಹ ಖಾತೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆ ಭಿನ್ನಾಭಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಿನ್ನೆಯ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದ ನಡೆದಿಲ್ಲ. ಮಾಧ್ಯಮಗಳಲ್ಲಿ ಬಂದಂತೆ ಜಗಳವಾಡಲು ನಮ್ಮಲ್ಲಿ ಯಾರೂ ಮಕ್ಕಳಿಲ್ಲ. ನನ್ನ ಹಾಗೂ ಪರಮೇಶ್ವರ್ ಜೊತೆ ಯಾವುದೇ ಅಸಮಾಧಾನವಿಲ್ಲ. ಸಮಾನವಾಗಿ ಖಾತೆ ಹಂಚಿಕೆ ಮಾಡಲಾಗಿದೆ ಅಂತ ಸ್ಪಷ್ಟ ಪಡಿಸಿದ್ದಾರೆ.

    ಇದೇ ವೇಳೆ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡಲ್ಲ. ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಜಾರಕಿಹೊಳಿಗೆ ಬೇಸರವಿದೆ. ನನಗೂ ಖಾತೆ ಇಲ್ಲ ಅಂತ ಬೇಸರವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಖಾತೆ ಹಂಚಿಕೆ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಕಿತ್ತಾಟ!

    ಟ್ವೀಟ್ ನಲ್ಲೇನಿದೆ..?
    ಡಾ.ಜಿ.ಪರಮೇಶ್ವರ್, ನನ್ನ ನಡುವೆ ಭಿನ್ನಾಭಿಪ್ರಾಯವೇ ಇಲ್ಲ. ನಿನ್ನೆಯ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದ ನಡೆದಿಲ್ಲ. ಇದನ್ನು ಹೇಳಿದವರು ಯಾರು? ವಿರೋಧ ಪಕ್ಷಗಳ ಕೆಲವು ನಾಯಕರು ಹತಾಶರಾಗಿದ್ದಾರೆ.

    ಸಚಿವ ಖಾತೆ ಮರುಹಂಚಿಕೆ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆ ಸೌಹಾರ್ದತಯುತವಾಗಿಯೇ ನಡೆದಿದೆ. ಸಭೆಯಲ್ಲಿದ್ದ ನಾಯಕರೆಲ್ಲ ಹಿರಿಯರು, ಅನುಭವಿಗಳು, ಈ ರೀತಿ ಜಗಳವಾಡಲು ನಮ್ಮಲ್ಲಿ ಯಾರೂ ಮಕ್ಕಳಿಲ್ಲ. ಕಪೋಲ ಕಲ್ಪಿತ ಸುದ್ದಿಗಳನ್ನು ನಂಬಬೇಡಿ, ಹರಡಬೇಡಿ ಅಂತ ತಿಳಿಸಿದ್ದಾರೆ.

    ಸಚಿವ ಖಾತೆ ಮರುಹಂಚಿಕೆ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಎಲ್ಲ ನಾಯಕರಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ಕೆ.ಸಿ.ವೇಣುಗೋಪಾಲ್ ಅವರು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುತ್ತಾರೆ. ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ ಕೈಗೊಳ್ಳುತ್ತಾರೆ ಅಂದಿದ್ದಾರೆ.

    ನಾನು ಮುಖ್ಯಮಂತ್ರಿಯಾಗಿದ್ದ 5 ವರ್ಷಗಳ ಕಾಲ ನನ್ನ ಮತ್ತು ಡಾ.ಪರಮೇಶ್ವರ್ ಸಂಬಂಧ ಕೆಡಿಸುವ ಪ್ರಯತ್ನವನ್ನು ವಿರೋಧ ಪಕ್ಷಗಳ ನಾಯಕರು ಮಾಡುತ್ತಲೇ ಇದ್ದರು. ಅದು ಈಗಲೂ ಮುಂದುವರಿದಿದೆ. ಅಂತಹ ಯಾವ ಪ್ರಯತ್ನವೂ ಯಶಸ್ವಿಯಾಗುವುದಿಲ್ಲ. ಇಂತಹ ಸುದ್ದಿಗಳನ್ನು ಕೇಳಿ ನಾವಿಬ್ಬರೂ ನಕ್ಕು ಸುಮ್ಮನಾಗುತ್ತೇವೆ ಅಂದಿದ್ದಾರೆ.

    ರಮೇಶ್ ಜಾರಕಿಹೊಳಿ ಮಾತ್ರವಲ್ಲ ಅವರ ಇಡೀ ಕುಟುಂಬ ಹಲವಾರು ವರ್ಷಗಳಿಂದ ನನಗೆ ಗೊತ್ತು. ರಮೇಶ್ ಅಪ್ಪಟ ಕಾಂಗ್ರೆಸಿಗ, ಅವರು ಪಕ್ಷ ಬಿಟ್ಟುಹೋಗುವುದಿಲ್ಲ. ಬಿಜೆಪಿ ಪ್ರಯತ್ನ ಯಶಸ್ಸಾಗುವುದಿಲ್ಲ ಅಂತ ಕಿಡಿಕಾರಿದ್ದಾರೆ.

    ಉಮೇಶ್ ಕತ್ತಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಶಾಸಕ ಉಮೇಶ್ ಕತ್ತಿಯವರ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ. ಅವರ ಅಧ್ಯಕ್ಷರಾದ ಯಡಿಯೂರಪ್ಪನವರೇ ಕತ್ತಿಯವರಿಗೆ ಬುದ್ದಿ ಹೇಳಿದ್ದಾರೆ. ಸರ್ಕಾರ ಪತನದ ಕನಸು ಕೈ ಬಿಟ್ಟು, ಮೊದಲು ಅವರೊಳಗಿನ ಭಿನ್ನಾಭಿಪ್ರಾಯವನ್ನು ಸರಿಮಾಡಿಕೊಳ್ಳಲಿ ಅಂತ ಶಾಸಕರ ವಿರುದ್ಧ ಗರಂ ಆಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರ ಪತನ ಕುರಿತು ಉಮೇಶ್ ಕತ್ತಿ ಹೇಳಿಕೆ ನೀಡಬಾರದಿತ್ತು- ಬಿಎಸ್‍ವೈ

    ಸರ್ಕಾರ ಪತನ ಕುರಿತು ಉಮೇಶ್ ಕತ್ತಿ ಹೇಳಿಕೆ ನೀಡಬಾರದಿತ್ತು- ಬಿಎಸ್‍ವೈ

    ವಿಜಯಪುರ: ಸಮ್ಮಿಶ್ರ ಸರ್ಕಾರ ಪತನದ ಕುರಿತು ಶಾಸಕ ಉಮೇಶ್ ಕತ್ತಿ ಹೇಳಿಕೆ ನೀಡಬಾರದಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಒಟ್ಟು 104 ಜನ ಶಾಸಕರಿದ್ದೇವೆ. ಸರ್ಕಾರ ತಾನಾಗಿಯೇ ಪತನವಾದರೇ ಮಾತ್ರ, ಸರ್ಕಾರ ರಚನೆ ಮಾಡುವ ವಿಚಾರ ಮಾಡಬಹುದು. ಸಚಿವರು ಖಾತೆಗಾಗಿ ಕಿತ್ತಾಟ ನಡೆಸುತ್ತಿರುವುದು ಸರಿಯಲ್ಲ. ಹೀಗಾಗಿ ಸರ್ಕಾರ ಪತನ ಕುರಿತು ಉಮೇಶ್ ಕತ್ತಿ ಹೇಳಿಕೆ ನೀಡಬಾರದಿತ್ತು ಅಂತ ಹೇಳಿದ್ರು.ಇದನ್ನೂ ಓದಿ : 24 ಗಂಟೆಯಲ್ಲಿ ದೋಸ್ತಿ ಸರ್ಕಾರ ಪತನ – ಉಮೇಶ್ ಕತ್ತಿ

    ಬೆಳಗಾವಿ ಅಧಿವೇಶನದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಷ್ಕ್ರೀಯವಾಗಿವೆ. ಇನ್ನಾದರೂ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ :  24 ಗಂಟೆಯಲ್ಲಿ ದೋಸ್ತಿ ಸರ್ಕಾರ ಬೀಳದೇ ಇದ್ರೆ, ಕತ್ತಿ ರಾಜೀನಾಮೆ ಕೊಡಲಿ: ದಿನೇಶ್ ಗುಂಡೂರಾವ್

    ಇದೇ ವೇಳೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ವಿರುದ್ಧ ದೇವೇಗೌಡ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರು ಎಲ್ಲಿಂದ ಸ್ಪರ್ಧಿಸುತ್ತಾರೆ ನಮಗೆ ಸಂಬಂಧವಿಲ್ಲ. ನಾವು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುತ್ತೇವೆ ಎಂದರು. ಇದೇ ವೇಳೆ ನಾನೇನು ಸಿಎಂ ಆಗುತ್ತೇನೆಂದು ಎಲ್ಲಿಯೂ ಹೇಳಿಲ್ಲವೆಂದು, ಅವರಪ್ಪನಾಣೆ ಯಡಿಯೂರಪ್ಪ ಸಿಎಂ ಆಗಲ್ಲವೆಂದು ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದು ಮಧ್ಯಾಹ್ನದೊಳಗೆ ದೋಸ್ತಿ ಸರ್ಕಾರ ಬೀಳುತ್ತಾ..?

    ಇಂದು ಮಧ್ಯಾಹ್ನದೊಳಗೆ ದೋಸ್ತಿ ಸರ್ಕಾರ ಬೀಳುತ್ತಾ..?

    ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರ 24 ಗಂಟೆಗಳಲ್ಲೇ ಪತನವಾಗಲಿದ್ದು, ನಂತರ ಒಂದು ವಾರದಲ್ಲಿ ಬಿಜೆಪಿ ಹೊಸ ಸರ್ಕಾರವನ್ನು ರಚಿಸುತ್ತದೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಬೆಳಗಾವಿಯಲ್ಲಿ ಭವಿಷ್ಯ ನುಡಿದಿದ್ದು, ಇಂದು ಮಧ್ಯಾಹ್ನ 1.30ಕ್ಕೆ ಕುಮಾರಸ್ವಾಮಿ ಸರ್ಕಾರ ಬೀಳುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

    ಕತ್ತಿ ಹೇಳಿದ ಡೆಡ್‍ಲೈನ್ ಮುಗಿಯಲು ಇನ್ನು ಕೆಲವೇ ಗಂಟೆ ಮಾತ್ರ ಬಾಕಿ ಇದ್ದು, ಕತ್ತಿ ಬಾಂಬ್ ಠುಸ್ ಆಗುತ್ತಾ ಅಥವಾ ಸರ್ಕಾರ ಪತನವಾಗುತ್ತಾ ಅನ್ನೋದು ತಿಳಿದುಬರಲಿದೆ.

    ಬೆಳಗಾವಿಯಲ್ಲಿ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ ಉಮೇಶ್ ಕತ್ತಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಕಾಂಗ್ರೆಸ್ಸಿನ 15 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಯಾವುದೇ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ. ಇನ್ನು 24 ಗಂಟೆಗಳಲ್ಲೆ ದೋಸ್ತಿ ಸರ್ಕಾರ ಪತನವಾಗಲಿದೆ. ಅಲ್ಲದೇ ಮುಂಬರುವ ಒಂದು ವಾರದಲ್ಲೇ ಬಿಜೆಪಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದ್ದರು.

    ಇವರೆಲ್ಲಾ ಬಿಜೆಪಿ ಸೇರ್ತಾರಾ….?
    1. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಎಸ್ ಟಿ ಸಮುದಾಯದವಾರಾಗಿದ್ದು, 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
    2. ಬಳ್ಳಾರಿ ಗ್ರಾಮಾಂತರ ಶಾಸಕರಾಗಿರುವ ನಾಗೇಂದ್ರ ಇವರು ಕೂಡ ಎಸ್ ಟಿ ಸಮುದಾಯದವರಾಗಿದ್ದು, 3 ಬಾರಿ ಶಾಸಕರಾಗಿದ್ದಾರೆ.
    3. ಕಂಪ್ಲಿ ಶಾಸಕರಾಗಿರುವ ಗಣೇಶ್ ಅವರು ಎಸ್‍ಟಿ ಸಮುದಾಯದವರಾಗಿದ್ದು, ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
    4. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರು ಎಸ್‍ಸಿ/ಲಂಬಾಣಿ ಸಮುದಾಯದವರಾಗಿದ್ದು, 2 ಬಾರಿ ಶಾಸಕರಾಗಿದ್ದಾರೆ.
    5. ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಅವರು ಲಿಂಗಾಯತ ಸಮುದಾಯದವರಾಗಿದ್ದು, 3 ಬಾರಿ ಶಾಸಕರಕಾಗಿ ಆಯ್ಕೆಯಾಗಿದ್ದಾರೆ.
    6. ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರು ಬ್ರಾಹ್ಮಣರಾಗಿದ್ದು, 2 ಬಾರಿ ಶಾಸಕರಾಗಿದ್ದಾರೆ.


    7. ಹೊಸಪೇಟೆ ಶಾಸಕ ಆನಂದ್‍ಸಿಂಗ್ ಅವರು ಒಬಿಸಿಯಾಗಿದ್ದು, 3 ಬಾರಿ ಶಾಸಕ ಸ್ಥಾನವನ್ನು ಅಲಂಕರಿಸಿದ್ದಾರೆ.
    8. ಭದ್ರಾವತಿ ಶಾಸಕ ಸಂಗಮೇಶ್ ಲಿಂಗಾಯತ ಸಮುದಾಯದವರಾಗಿದ್ದು, 2 ಬಾರಿ ಶಾಸಕರಾಗಿದ್ದಾರೆ.
    9. ರಾಯಚೂರು ಗ್ರಾಮೀಣ ಶಾಸಕರಾಗಿರುವ ಬಸವರಾಜ್ ದದ್ದಲ್ ಅವರು ಎಸ್‍ಟಿ ಸಮುದಾಯದವರಾಗಿದ್ದು ಮೊದಲ ಬಾರಿ ಶಾಸಕರಾಗಿದ್ದಾರೆ.
    10. ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಕೂಡ ಎಸ್‍ಟಿ ಸಮುದಾಯದವರಾಗಿದ್ದು, 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
    11. ಅಥಣಿ ಶಾಸಕ ಮಹೇಶ್ ಕಮಟಳ್ಳಿ ಅವರು ಲಿಂಗಾಯತ ಸಮುದಾಯದವರಾಗಿದ್ದು, ಮೊದಲ ಬಾರಿ ಶಾಸಕರಾಗಿದ್ದಾರೆ.
    12. ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರು ಕೂಡ ಲಿಂಗಾಯತ ಸಮುದಾಯದವರಾಗಿದ್ದು, ಮೊದಲ ಬಾರಿಯ ಶಾಸಕರಾಗಿದ್ದಾರೆ. ಇವರೆಲ್ಲರೂ ಬಿಜೆಪಿ ಸೇರುವ ಸಾಧ್ಯತೆಗಳಿವೆ.

    ಶಾಸಕ ಉಮೇಶ್ ಕತ್ತಿ ಹೇಳಿಕೆಯ ಬಗ್ಗೆ ನಿಮ್ಮ  ಅಭಿಪ್ರಾಯಗಳನ್ನು ಕಮೆಂಟ್ ಮಾಡಿ..

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 24 ಗಂಟೆಯಲ್ಲಿ ದೋಸ್ತಿ ಸರ್ಕಾರ ಬೀಳದೇ ಇದ್ರೆ, ಕತ್ತಿ ರಾಜೀನಾಮೆ ಕೊಡಲಿ: ದಿನೇಶ್ ಗುಂಡೂರಾವ್

    24 ಗಂಟೆಯಲ್ಲಿ ದೋಸ್ತಿ ಸರ್ಕಾರ ಬೀಳದೇ ಇದ್ರೆ, ಕತ್ತಿ ರಾಜೀನಾಮೆ ಕೊಡಲಿ: ದಿನೇಶ್ ಗುಂಡೂರಾವ್

    ಬೆಂಗಳೂರು: 24 ಗಂಟೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿ ಸರ್ಕಾರ ಬೀಳದೇ ಇದ್ದರೇ, ಬಿಜೆಪಿ ಶಾಸಕ ಉಮೇಶ್ ಕತ್ತಿ ರಾಜೀನಾಮೆ ಕೊಟ್ಟು ಬರಲಿ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲು ಎಸೆದಿದ್ದಾರೆ.

    ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಸರ್ಕಾರ ಉರುಳಿಸುವ ಬಗ್ಗೆ ಉಮೇಶ್ ಕತ್ತಿ ಬಳಿ ಏನು ದಾಖಲೆ ಇದೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ, ಸರ್ಕಾರವನ್ನು ಬೀಳಿಸಲಿ. 24 ಗಂಟೆ ಯಾಕೆ? ಈಗಲೇ ಬೀಳುತ್ತೆ ಎಂದು ಹೇಳಬಹುದಿತ್ತಲ್ಲವೇ? ಕತ್ತಿಯವರ ಮಾತು ನಿಜವಾಗದೇ ಇದ್ದರೆ ಅವರಿಗೆ ತಾಕತ್ತಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಅದನ್ನು ಬಿಟ್ಟು ಹೀಗೆ ಹುಚ್ಚು ಹುಚ್ಚಾಗಿ ಈ ರೀತಿ ಮಾತನಾಡಬಾರದು ಎಂದು ಕಿಡಿಕಾರಿದ್ದಾರೆ.

    ದೋಸ್ತಿ ಸರ್ಕಾರ ಸಚಿವ ಸಂಪುಟ ವಿಸ್ತರಣೆಯ ಬಳಿಕ ಖಾತೆಗಳ ಹಂಚಿಕೆ ಬಗ್ಗೆ ಒಳ್ಳೆಯ ಮಾತುಕತೆ ಆಗಿದೆ. ಆದರೆ ಇವರಿಗೆ ಆ ಖಾತೆ, ಅವರಿಗೆ ಈ ಖಾತೆ ಎನ್ನುವುದು ಸುಳ್ಳು. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಪರಮೇಶ್ವರ್ ನಡುವೇ ಯಾವುದೇ ಮಾತಿನ ಚಕಮಕಿ ನಡೆದಿಲ್ಲ. ಅದೆಲ್ಲವೂ ಸತ್ಯಕ್ಕೆ ದೂರವಾಗಿದ್ದು ಎಂದು ಸ್ಪಷ್ಟಪಡಿಸಿದ್ದಾರೆ.

    ಉಮೇಶ್ ಕತ್ತಿ ಹೇಳಿದ್ದೇನು?
    ಕಾಂಗ್ರೆಸ್ಸಿನ 15 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಯಾವುದೇ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ. ಇನ್ನು 24 ಗಂಟೆಗಳಲ್ಲಿ ದೋಸ್ತಿ ಸರ್ಕಾರ ಪತನವಾಗಲಿದೆ. ಅಲ್ಲದೇ ಮುಂಬರುವ ಒಂದು ವಾರದಲ್ಲೇ ಬಿಜೆಪಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸುತ್ತದೆ ಎಂದು ಹೇಳಿದ್ದರು. ಇದನ್ನೂ ಓದಿ : 24 ಗಂಟೆಯಲ್ಲಿ ದೋಸ್ತಿ ಸರ್ಕಾರ ಪತನ – ಉಮೇಶ್ ಕತ್ತಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 24 ಗಂಟೆಯಲ್ಲಿ ದೋಸ್ತಿ ಸರ್ಕಾರ ಪತನ – ಉಮೇಶ್ ಕತ್ತಿ

    24 ಗಂಟೆಯಲ್ಲಿ ದೋಸ್ತಿ ಸರ್ಕಾರ ಪತನ – ಉಮೇಶ್ ಕತ್ತಿ

    ಬೆಳಗಾವಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರ 24 ಗಂಟೆಗಳಲ್ಲೇ ಪತನವಾಗಲಿದ್ದು, ನಂತರ ಒಂದು ವಾರದಲ್ಲಿ ಬಿಜೆಪಿ ಹೊಸ ಸರ್ಕಾರವನ್ನು ರಚಿಸುತ್ತದೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಕಾಂಗ್ರೆಸ್ಸಿನ 15 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಯಾವುದೇ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ. ಇನ್ನು 24 ಗಂಟೆಗಳಲ್ಲೆ ದೋಸ್ತಿ ಸರ್ಕಾರ ಪತನವಾಗಲಿದೆ. ಅಲ್ಲದೇ ಮುಂಬರುವ ಒಂದು ವಾರದಲ್ಲೇ ಬಿಜೆಪಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮ ಆತ್ಮೀಯ ಮಿತ್ರರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತವನ್ನು ಬಯಸುತ್ತೇವೆ. ಅಲ್ಲದೇ ಬಿಎಸ್‍ವೈ ಹಾಗೂ ರಮೇಶ್ ಇದೂವರೆಗೂ ಯಾವುದೇ ಗುಪ್ತ ಸಭೆ ನಡೆದಿಲ್ಲ. ಇಂದು ನಡೆಯಲಿರುವ ಸಭೆಯಲ್ಲಿ ಕೇವಲ ಬೆಳಗಾವಿ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಆಯ್ಕೆ ವಿಚಾರವನ್ನು ಮಾತ್ರ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಅಚಲ ನಿರ್ಧಾರ : ಉಮೇಶ್ ಕತ್ತಿ

    ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಅಚಲ ನಿರ್ಧಾರ : ಉಮೇಶ್ ಕತ್ತಿ

    ಬೆಳಗಾವಿ: ರಾಜ್ಯ ಸರ್ಕಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನೆಪ ಮಾತ್ರಕ್ಕೆ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಚರ್ಚೆ ನಡೆಸದೆ ಅನಗತ್ಯವಾಗಿ ಅಧಿವೇಶನ ನಡೆಸಿದ್ದಾರೆ. ಸಿಎಂ ಅವರಿಗೆ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಆದ್ದರಿಂದ ನಾನು ಈಗಾಗಲು ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಅಚಲನಾಗಿದ್ದೇನೆ ಎಂದು ಬಿಜೆಪಿ ಮುಖಂಡ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಉಮೇಶ್ ಕತ್ತಿ ಅವರು, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಕಳೆದ 10 ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ಅಭಿವೃದ್ಧಿ ಮಾಡದಿದ್ದರೆ ಪ್ರತ್ಯೇಕ ರಾಜ್ಯ ಮಾಡಿ ಎಂದು ಹೇಳಿದ್ದೆ. ಈ ನಿರ್ಧಾರದಿಂದ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅಭಿವೃದ್ಧಿ ಮಾಡಿಲ್ಲ, ಉತ್ತರ ಕರ್ನಾಟಕ ಪ್ರತ್ಯೇಕ ಮಾಡಿ ಎಂದು ಒತ್ತಾಯ ಮಾಡುತ್ತೇವೆ ಎಂದರು.

    ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ: ರಾಜ್ಯದ ಉಸ್ತುವಾರಿ ವಹಿಸಿರುವ ಸಿಎಂ ಅವರಿಗೆ ಉತ್ತರ ಕರ್ನಾಟಕ ಅಗತ್ಯವಿಲ್ಲದಿದ್ದರೆ ದಯಾ ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ. ಆ ಮೂಲಕ ರಾಜ್ಯ ಇಬ್ಭಾಗ ಮಾಡುವ ಬಗ್ಗೆ ಸ್ಪಷ್ಟಪಡಿಸಿ. ಕಳೆದ ಐದು ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರ ಸರ್ಕಾರ ಹಾಗೂ ಹೊಸ ಸರ್ಕಾರವೂ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿಲ್ಲ. ಮಠಾಧೀಶರು ಕೂಡ ಅಭಿವೃದ್ಧಿ ಕುರಿತು ಒಳ್ಳೆ ಸಲಹೆ ಕೊಟ್ಟಿದ್ದರು ಅದರ ಬಗ್ಗೆ ಕೂಡ ಸಿಎಂ ಮಾತನಾಡಿಲ್ಲ. ರಾಜ್ಯ ರೈತರ ಸಾಲಮನ್ನಾ ಬಗ್ಗೆಯೂ ಸ್ಪಷ್ಟನೆ ಇಲ್ಲ ಆರೋಪಿಸಿದರು.

    ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಕ್ಕರೆ ಕಾರ್ಖಾನೆಗಳು ಇದ್ದು, ಅಭಿವೃದ್ಧಿಯ ವಿಚಾರವಾಗಿ ಕೆಲ ಸರ್ಕಾರ ಇಲಾಖೆಯನ್ನು ಸುವರ್ಣ ಸೌಧಕ್ಕೆ ವರ್ಗಾವಣೆ ಮಾಡಲು ಮನವಿ ಮಾಡಲಾಗಿತ್ತು. ಆದರೆ ಇದು ಯಾವುದು ಆಗಿಲ್ಲ. ರಾಜ್ಯದಲ್ಲಿ ಸರ್ಕಾರವಿದ್ದರು ಸರಿಯಾದ ಅಭಿವೃದ್ಧಿ ಯೋಜನೆಗಳು ಜಾರಿ ಆಗುತ್ತಿಲ್ಲ. ಆದ್ದರಿಂದ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕ ಬಗ್ಗೆ ಒತ್ತಾಯ ಮಾಡುತ್ತಿರುವುದಾಗಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಕ್ಷ ಯಾವುದಿದ್ರೂ ಅನಂತಕುಮಾರ್ ಸ್ನೇಹ ಅಜರಾಮರ : ಉಮೇಶ್ ಕತ್ತಿ

    ಪಕ್ಷ ಯಾವುದಿದ್ರೂ ಅನಂತಕುಮಾರ್ ಸ್ನೇಹ ಅಜರಾಮರ : ಉಮೇಶ್ ಕತ್ತಿ

    ಬೆಳಗಾವಿ: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಬಿಜೆಪಿ ಮುಖಂಡ ಹಾಗೂ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಂತಾಪ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅನಂತಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಅನಂತಕುಮಾರ್ ತುಂಬಾ ಆತ್ಮೀಯರಾಗಿದ್ದೇವು. ಸಾಕಷ್ಟು ಬಾರಿ ರೈಲಿನಲ್ಲಿ ಇಬ್ಬರು ಕುಳಿತು ಜೋಳದ ರೊಟ್ಟಿ ಊಟ ಸವಿಯುತ್ತಿದ್ದೇವು. ಉತ್ತರ ಕರ್ನಾಟಕದ ಬಗ್ಗೆ ಅವರು ಆತ್ಮವಿಶ್ವಾಸದ ಮಾತನಾಡುತ್ತಿದ್ದರು. ಮೊದಲು ನಮ್ಮ ಪಕ್ಷಗಳು ಬೇರೆ ಇದ್ದರು ನನ್ನ ಹಾಗೂ ಅವರ ಸ್ನೇಹ ಅಜರಾಮರ. ಅನಂತಕುಮಾರ್ ಅವರ ಅಗಲಿಕೆ ಬಿಜೆಪಿ ಪಕ್ಷಕ್ಕೆ ತುಂಬಲಾರದ ಹಾನಿಯಾಗಿದೆ ಎಂದರು.

    ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನ ಒಳ್ಳೆಯ ರೀತಿಯಲ್ಲಿ ಕಟ್ಟಿದ್ದರು. ರಾಜ್ಯದ ಹೆಸರನ್ನ ರಾಷ್ಟ್ರಮಟ್ಟದಲ್ಲಿ ತಂದರು. ತನ್ನ ತಂದೆ ತಾಯಿಗೆ ಆದಂತ ಕಷ್ಟ ಬೇರೆ ಯಾರಿಗೂ ಆಗದಿರಲಿ ಎಂದು ಜೆನೆರಿಕ್ ಔಷಧಿ ಯೋಜನೆ ತಂದರು. ಆದರೆ ಅವರು ಕ್ಯಾನ್ಸರ್ ರೋಗಕ್ಕೆ ಬಲಿಯಾಗಿದ್ದು ಮಾತ್ರ ಅತೀವ ನೋವು ತಂದಿದೆ. ಅವರ ಕುಟುಂಬದ ದುಃಖದಲ್ಲಿ ನಾನು ಪಾಲ್ಗೊಳ್ಳುತ್ತೇನೆ ಎಂದರು. ಇದೇ ವೇಳೆ ಮಾಜಿ ಸಚಿವ ಶಶಿಕಾಂತ ನಾಯಕ ಕೂಡ ಅಗಲಿದ ಅನಂತಕುಮಾರ್ ಅವರಿಗೆ ಸಂತಾಪ ಸೂಚಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 30 ಶಾಸಕರು ರಾಜೀನಾಮೆ ನೀಡ್ತಾರೆ: ಉಮೇಶ್ ಕತ್ತಿ ಭವಿಷ್ಯ

    30 ಶಾಸಕರು ರಾಜೀನಾಮೆ ನೀಡ್ತಾರೆ: ಉಮೇಶ್ ಕತ್ತಿ ಭವಿಷ್ಯ

    ಚಿಕ್ಕೋಡಿ: ಬಿಜೆಪಿ ಪಕ್ಷ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ. ನನಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ 30 ಜನ ಶಾಸಕರು ರಾಜೀನಾಮೆ ನೀಡಲಿದ್ದು ಸರ್ಕಾರ ಬಿದ್ದರೆ ಬಿಜೆಪಿ ಪಕ್ಷ ಅಧಿಕಾರ ರಚನೆ ಮಾಡುತ್ತೆ ಎಂದು ಹುಕ್ಕೇರಿಯ ಬಿಜೆಪಿ ಶಾಸಕ, ಮಾಜಿ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನಗೆ ಆಪರೇಷನ್ ಕಮಲದ ಜವಾಬ್ದಾರಿ ನೀಡಿಲ್ಲ. ಕಾಂಗ್ರೆಸ್ ಜೆಡಿಎಸ್ ಒಳಜಗಳವನ್ನ ಆಪರೇಷನ್ ಕಮಲ ಅಂತಿದ್ದಾರೆ. ಆಪರೇಷನ್ ಕಮಲ ಮಾಡುವುದಾದರೆ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಮೂರು ತಿಂಗಳು ಹಿಂದೆ ಮಾಡಬೇಕಿತ್ತು. ಒಳ ಜಗಳದಿಂದ ಸರ್ಕಾರ ಬಿದ್ದರೆ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್‍ನಿಂದ ಬರುವ ಶಾಸಕರಿಗೆ ನಾವು ಸ್ವಾಗತ ಮಾಡುತ್ತೇವೆ ಎಂದರು.

    ಬಿಜೆಪಿ ರೆಸಾರ್ಟ್ ರಾಜಕಾರಣ ಮಾಡುತ್ತಿಲ್ಲ. ನಾಳೆ ಶಾಸಕಾಂಗ ಸಭೆ ಕರೆಯಲಾಗಿದೆ ನಾನು ಹೋಗುತ್ತೇನೆ. ಸಚಿವ ರಮೇಶ ಜಾರಕಿಹೊಳಿ, ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಸತೀಶ ಜಾರಕಿಹೊಳಿ ಬಂದರು ಸ್ವಾಗತ ಮಾಡುತ್ತೇವೆ. ಮುಂದಿನ 5 ವರ್ಷ ಬಿಜೆಪಿ ಸರ್ಕಾರ ರಚನೆ ಆದರೂ ನನಗೆ ಸಚಿವ ಸ್ಥಾನ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಬೇಡ ಎಂದು ರಮೇಶ ಜಾರಕಿಹೊಳಿಗೆ ಬಿಟ್ಟು ಕೊಡುವ ಅರ್ಥದಲ್ಲಿ ಪರೋಕ್ಷವಾಗಿ ಮಾತನಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸರ್ಕಾರ 1 ವಾರ ಅಥವಾ 15 ದಿನದ ಒಳಗಡೆ ಬೀಳುತ್ತೆ: ಉಮೇಶ್ ಕತ್ತಿ ಭವಿಷ್ಯ

    ಸರ್ಕಾರ 1 ವಾರ ಅಥವಾ 15 ದಿನದ ಒಳಗಡೆ ಬೀಳುತ್ತೆ: ಉಮೇಶ್ ಕತ್ತಿ ಭವಿಷ್ಯ

    ಚಿಕ್ಕೋಡಿ: ಒಂದು ವಾರ ಅಥವಾ 15 ದಿನಗಳ ಒಳಗೆ ಸಿಎಂ ಕುಮಾರಸ್ವಾಮಿ ಸರ್ಕಾರ ಬೀಳುತ್ತದೆ ಎಂದು ಹೇಳುವ ಮೂಲಕ ಹುಕ್ಕೇರಿಯ ಬಿಜೆಪಿ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಸಿಎಂ ಎನ್ನುವ ಹೇಳಿಕೆ ಬಳಿಕ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಚರ್ಚೆಗಳು ಜೋರಾಗಿದೆ. ಸಮ್ಮಿಶ್ರ ಸರಕಾರ ರಿಜಿಸ್ಟರ್ ಮದುವೆ ಆಗಿದೆ. ಆದರೆ ಈ ಸರ್ಕಾರ ಮದುವೆಯಾಗಿಲ್ಲ. ಇದೊಂದು ಅನೈತಿಕ ಸಂಬಂಧದಿಂದ ಕೂಡಿದ ಸರ್ಕಾರವಾಗಿದೆ. ಅನೈತಿಕ ಸಂಬಂಧದ ಕಿತ್ತಾಟದಿಂದ ಸರ್ಕಾರ ಬೀಳುವುದು ಖಚಿತ. ಮಾಜಿ ಸಿಎಂ ಸಿದ್ದರಾಮಯ್ಯ ನಾನೇ ಸಿಎಂ ಎನ್ನುತ್ತಾರೆ. ಕುಮಾರಸ್ವಾಮಿ ಕುರ್ಚಿಗೆ ಅಂಟಿ ಕೂತಿಲ್ಲ ಎಂದು ಹೇಳಿದ್ದಾರೆ. ಇದರ ಮಧ್ಯೆ ರಾಜಕೀಯ ಗಂಧ ಗೊತ್ತಿಲ್ಲದ ರಾಹುಲ್‍ಗಾಂಧಿ ಸೆಪ್ಟೆಂಬರ್ ತಿಂಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ ಎಂದು ವ್ಯಂಗ್ಯವಾಡಿದರು.

    ಹೊಂದಾಣಿಕೆ ಇಲ್ಲದ ಕಾರಣ ಸಂಪುಟ ವಿಸ್ತರಣೆ ಸಾಧ್ಯವಿಲ್ಲ. ಅನೈತಿಕ ಸಂಬಂಧದಿಂದ ನೊಂದು ಬಹಳಷ್ಟು ಶಾಸಕರು ಬಿಜೆಪಿಗೆ ಬರುತ್ತಾರೆ. ಹೀಗಾಗಿ ಸರ್ಕಾರ ಬಿದ್ದು ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ. ಅನೈತಿಕ ಸಂಬಂಧದಿಂದ ಸ್ಥಳೀಯ ಸಂಸ್ಥೆಗಳಿಗೆ ಬಿಜೆಪಿಗೆ ಲಾಭವಾಗಲಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಮ್ಮಿಶ್ರ ಸರಕಾರಕ್ಕೆ ಮುಖಭಂಗವಾಗಲಿದೆ ಎಂದು ಕತ್ತಿ ಭವಿಷ್ಯ ನುಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv