Tag: ಉಮೇಶ್ ಕತ್ತಿ

  • ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು- ಕತ್ತಿ ನಿಧನಕ್ಕೆ ಆರಗ ಸಂತಾಪ

    ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು- ಕತ್ತಿ ನಿಧನಕ್ಕೆ ಆರಗ ಸಂತಾಪ

    ತುಮಕೂರು: ಸಚಿವ ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು ಎಂದು ಹೇಳುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಉಮೇಶ್ ಕತ್ತಿ(Umesh Katti) ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

    ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಮೇಶ್ ಕತ್ತಿ ನಿಧನ ಅತ್ಯಂತ ದುಖವಾಗಿದೆ. ನನ್ನ ಆತ್ಮೀಯರಲ್ಲಿ ಒಬ್ಬರಾಗಿದ್ದರು. ಅನಾರೋಗ್ಯದ ಕಾರಣ ಕಳೆದ ಕ್ಯಾಬಿನೆಟ್ ಗೆ ಅವರು ಹಾಜರಾಗಿರಲಿಲ್ಲ ಎಂದರು. ಇದನ್ನೂ ಓದಿ: ಉಮೇಶ್ ಕತ್ತಿ ಇನ್ನಿಲ್ಲ – ನಿನ್ನೆ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಏನಾಯ್ತು?

    ಅತ್ಯಂತ ಒಳ್ಳೆಯವರು ಮತ್ತು ಹಾಸ್ಯ ಪ್ರಜ್ಞೆ ಉಳ್ಳವರಾಗಿದ್ದರು. ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು. ಅವರ ಕುಟುಂಬಕ್ಕೆ ದುಖ ಭರಿಸುವ ಶಕ್ತಿ ಕೊಡಲಿ. ಅವರ ನಿಧನದಿಂದ ನನ್ನ ಎಲ್ಲಾ ಕೆಲಸ ಕಾರ್ಯ ರದ್ದು ಮಾಡಿದ್ದೇನೆ. ಜನೋತ್ಸವದ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯರು ನಿರ್ಧರಿಸುತ್ತಾರೆ ಎಂದು ಆರಗ ತಿಳಿಸಿದರು.

    ಈಗ ನಾನು ಬೆಂಗಳೂರಿಗೆ ಹೋಗುತ್ತಿದ್ದೇನೆ. ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಶೇ. 300-400 ಪ್ರಮಾಣಕ್ಕಿಂತ ಹೆಚ್ಚಾಗಿದೆ. 3 ಸಾವಿರ ಎಕರೆಯಷ್ಟು ಬೆಳೆಹಾನಿಯಾಗಿದೆ. ಇಲ್ಲಿಯವರೆಗೆ ಸುಮಾರು 10 ಜನ ಸಾವನಪ್ಪಿದ್ದಾರೆ ಎಂದು ಅವರು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಸದನದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದ ಉಮೇಶ್ ಕತ್ತಿ ತಂದೆ

    ಸದನದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದ ಉಮೇಶ್ ಕತ್ತಿ ತಂದೆ

    ಬೆಂಗಳೂರು: ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ(Umesh Katti) ಅವರು ಕೊನೆಯುಸಿರೆಳೆದಿದ್ದಾರೆ. ಅವರ ತಂದೆ ವಿಶ್ವನಾಥ್ ಕತ್ತಿ(Vishwanath Katti) ಅವರು ಸದನದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದರು.

    ರಾಮಕೃಷ್ಣ ಹೆಗಡೆ(Ramakrishna Hegde) ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಚಿವ ಉಮೇಶ್ ಕತ್ತಿ ಅವರ ತಂದೆ ವಿಶ್ವನಾಥ್ ಕತ್ತಿ ಅವರು ಜನತಾ ಪಕ್ಷದ ಶಾಸಕರಾಗಿದ್ದರು. 1984 ಸಮಯದಲ್ಲಿ ಶಾಸಕರಾಗಿದ್ದ ವಿಶ್ವನಾಥ್ ಕತ್ತಿ ಅವರು ವಿಧಾನಸಭೆ ಅಧಿವೇಶನ ನಡೆಯುತ್ತಿದ್ದಾಗ ಸದನದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದರು. ಇದನ್ನೂ ಓದಿ: ಉಮೇಶ್‌ ಕತ್ತಿ ನಿಧನ: ಸಂಜೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ

    ಸದನದೊಳಗೆ ಹೃದಯಾಘಾತ ಆಗುತ್ತಿದ್ದಂತೆ ವಿಶ್ವನಾಥ್ ಕತ್ತಿ ಅಲ್ಲೇ ಕುಸಿದು ಬಿದ್ದಿದ್ದರು. ತಕ್ಷಣ ಆಗಿನ ಸಚಿವ ಡಾ.ಜೀವರಾಜ ಆಳ್ವ(Jeevaraj Alva) ಸದನದೊಳಗೆ ಪ್ರಾಥಮಿಕ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿರಲಿಲ್ಲ. ಸದನದ ಇತಿಹಾಸದಲ್ಲೇ ಶಾಸಕರಾದವರು ಸದನದಲ್ಲಿದ್ದಾಗ ಮೃತಪಟ್ಟದ್ದು ಅದೇ ಮೊದಲು. ಇದನ್ನೂ ಓದಿ: ಬೆಳಗಾವಿಯ ಶಾಲಾ- ಕಾಲೇಜು, ಸರ್ಕಾರಿ ಕಚೇರಿಗೆ ರಜೆ ಘೋಷಣೆ

    Live Tv
    [brid partner=56869869 player=32851 video=960834 autoplay=true]

  • ಬೆಳಗಾವಿಯ ಶಾಲಾ- ಕಾಲೇಜು, ಸರ್ಕಾರಿ ಕಚೇರಿಗೆ ರಜೆ ಘೋಷಣೆ

    ಬೆಳಗಾವಿಯ ಶಾಲಾ- ಕಾಲೇಜು, ಸರ್ಕಾರಿ ಕಚೇರಿಗೆ ರಜೆ ಘೋಷಣೆ

    ಬೆಳಗಾವಿ/ಬೆಂಗಳೂರು: ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ (Umesh Katti) ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಎಲ್ಲಾ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗೆ ರಜೆ ಘೋಷಿಸಲಾಗಿದೆ.

    ಸಚಿವರ ನಿಧಾನಕ್ಕೆ ಸಂತಾಪ ಸೂಚಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಮಾತನಾಡಿ, ಆಹಾರ ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ(Belagavi) ಎಲ್ಲಾ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿದರು.

    ನಿನ್ನೆ ರಾತ್ರಿ ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಕೊನೆಯುಸಿರೆಳೆದಿದ್ದಾರೆ. ಸಚಿವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: 6 ಪಕ್ಷ, 8 ಬಾರಿ ಶಾಸಕ – ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಿಎಂ ಕನಸು ಕಂಡಿದ್ದ ಕತ್ತಿ

    ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಬೆಂಗಳೂರಿನಿಂದ ಬೆಳಗಾವಿಗೆ ಏರ್‌ಲಿಫ್ಟ್ ಮಾಡಲಾಗುವುದು. ಸಂಕೇಶ್ವರದ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ನಂತರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸರ್ಕಾರದ ಗೌರವದೊಂದಿಗೆ ಸಂಜೆ 5 ಗಂಟೆಗೆ ಉಮೇಶ್ ಕತ್ತಿ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಉಮೇಶ್ ಕತ್ತಿ ಇನ್ನಿಲ್ಲ – ನಿನ್ನೆ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಏನಾಯ್ತು?

    Live Tv
    [brid partner=56869869 player=32851 video=960834 autoplay=true]

  • ಉಮೇಶ್‌ ಕತ್ತಿ ನಿಧನ: ಸಂಜೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ

    ಉಮೇಶ್‌ ಕತ್ತಿ ನಿಧನ: ಸಂಜೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ

    ಬೆಳಗಾವಿ: ಉಮೇಶ್ ಕತ್ತಿ(Umesh Katti) ವಿಧಿವಶರಾದ ಹಿನ್ನೆಲೆ ಹುಟ್ಟೂರು ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

    ನಿಧನರಾದ ವಿಷಯ ತಿಳಿದು ಮಧ್ಯರಾತ್ರಿಯೇ ಕತ್ತಿ ನಿವಾಸದತ್ತ ಹರಿದು ಜನರು ಬರುತ್ತಿದ್ದಾರೆ. ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲೇ ಒಂದಷ್ಟು ಕುಟುಂಬ ಸದಸ್ಯರಿದ್ದಾರೆ. ಇದನ್ನೂ ಓದಿ: 6 ಪಕ್ಷ, 8 ಬಾರಿ ಶಾಸಕ – ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಿಎಂ ಕನಸು ಕಂಡಿದ್ದ ಕತ್ತಿ

    ಗಣೇಶ ಚರ್ತುರ್ಥಿ ಹಿನ್ನೆಲೆ ಗ್ರಾಮದಲ್ಲಿ ಹಾಕಿರುವ ವಿದ್ಯುತ್ ದೀಪಾಲಂಕಾರಗಳನ್ನು ತೆರವು ಮಾಡಲಾಗುತ್ತಿದೆ. ಗ್ರಾಮದಲ್ಲಿರುವ ಗಣೇಶ ಮೂರ್ತಿಗಳ ವಿಸರ್ಜನೆಗೆ ಗ್ರಾಮಸ್ಥರು ಚರ್ಚೆ ನಡೆಸಿದ್ದಾರೆ.

    ಬೆಂಗಳೂರು ಎಚ್‌ಎಎಲ್‌ನಿಂದ ಹೊರಟ ವಿಶೇಷ ಹೆಲಿಕಾಪ್ಟರ್‌ನಲ್ಲಿ ಪಾರ್ಥಿವ ಶರೀರವನ್ನು ತರಲಾಗುತ್ತಿದೆ. ಬೆಳಗ್ಗೆ 9 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು 10:30ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಉಮೇಶ್ ಕತ್ತಿ ಇನ್ನಿಲ್ಲ – ನಿನ್ನೆ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಏನಾಯ್ತು?

    ಕತ್ತಿ ಹುಟ್ಟೂರು 12ಗಂಟೆಗೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಂಜೆ 5ಗಂಟೆಗೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ ನೇರವೇರಲಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಮೇಶ್ ಕತ್ತಿ ಇನ್ನಿಲ್ಲ – ನಿನ್ನೆ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಏನಾಯ್ತು?

    ಉಮೇಶ್ ಕತ್ತಿ ಇನ್ನಿಲ್ಲ – ನಿನ್ನೆ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಏನಾಯ್ತು?

    ಬೆಂಗಳೂರು: ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ(umesh katti) ಅವರು ಕೊನೆಯುಸಿರೆಳೆದಿದ್ದಾರೆ.

    ಮಂಗಳವಾರ ಸ್ವಕ್ಷೇತ್ರ ಹುಕ್ಕೇರಿಯಿಂದ ಕತ್ತಿ ವಾಪಸಾಗಿದ್ದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದ ಉಮೇಶ್ ಕತ್ತಿ ಅವರು ರಾತ್ರಿ ಊಟ ಮುಗಿಸಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು.

    ಹತ್ತು ನಿಮಿಷವಾದರೂ ಹೊರಗೆ ಬರದಿದ್ದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಇದರಿಂದಾಗಿ ಬಾಗಿಲು ಬಡಿದಿದ್ದಾರೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆಯೂ ಬಾರದ ಹಿನ್ನೆಲೆಯಲ್ಲಿ ಸಹಾಯಕರು ಶೌಚಾಲಯದ ಬಾಗಿಲನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಉಮೇಶ್ ಕತ್ತಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡು ಬಂತು.

    ಕೂಡಲೇ ಅವರನ್ನು ಕಾರಿನಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಸಚಿವ ಉಮೇಶ್‌ ಕತ್ತಿ ನಿಧನ

    ಹಿಂದೆಯೂ 2 ಬಾರಿ ಹೃದಯಾಘಾತ: ಉಮೇಶ್ ಕತ್ತಿ ಅವರಿಗೆ ಈ ಹಿಂದೆಯೂ 2 ಬಾರಿ ಹೃದಯಾಘಾತವಾಗಿತ್ತು. ಈ ವೇಳೆ ಎರಡು ಸ್ಟಂಟ್‌ಗಳನ್ನು ಅಳವಡಿಸಲಾಗಿತ್ತು. ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಂಡಿದ್ದರು. ಆದರೆ ಮೂರನೇ ಬಾರಿಯ ಹೃದಯಸ್ತಂಭನ ಅವರ ಜೀವವನ್ನೇ ಪಡೆಯಿತು.

    ಸಚಿವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(basavaraj bommai), ವಿಪಕ್ಷ ನಾಯಕ ಸಿದ್ದರಾಮಯ್ಯ(siddaramaiah) ಸೇರಿದಂತೆ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಬೆಂಗಳೂರಿನಿಂದ ಬೆಳಗಾವಿಗೆ ಏರ್‌ಲಿಫ್ಟ್ ಮಾಡಲಿದ್ದಾರೆ. ಸಂಕೇಶ್ವರದ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ನಂತರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸರ್ಕಾರದ ಗೌರವದೊಂದಿಗೆ ಸಂಜೆ 5 ಗಂಟೆಗೆ ಉಮೇಶ್ ಕತ್ತಿ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: 6 ಪಕ್ಷ, 8 ಬಾರಿ ಶಾಸಕ – ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಿಎಂ ಕನಸು ಕಂಡಿದ್ದ ಕತ್ತಿ

    Live Tv
    [brid partner=56869869 player=32851 video=960834 autoplay=true]

  • 6 ಪಕ್ಷ, 8 ಬಾರಿ ಶಾಸಕ – ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಿಎಂ ಕನಸು ಕಂಡಿದ್ದ ಕತ್ತಿ

    6 ಪಕ್ಷ, 8 ಬಾರಿ ಶಾಸಕ – ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಿಎಂ ಕನಸು ಕಂಡಿದ್ದ ಕತ್ತಿ

    ಬೆಳಗಾವಿ/ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿ ಇರುತ್ತಿದ್ದ ಸಚಿವ ಉಮೇಶ ಕತ್ತಿ(Umesh Katti) ನಿಧನರಾಗಿದ್ದಾರೆ.

    ಇಲ್ಲಿಯವರೆಗೆ 9 ಸಲ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದರು. 1985ರಲ್ಲಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿಯೂ ಶಾಸಕರಾಗಿ ಆಯ್ಕೆ ಆಗುತ್ತಿದ್ದರು.

    ಬೆಳಗಾವಿಯ ಕೆಎಲ್‌ಇ ಸೊಸೈಟಿಯ ಲಿಂಗರಾಜ್ ಕಾಲೇಜಿನಲ್ಲಿ ಪಿಯುಸಿ ತನಕ ವ್ಯಾಸಂಗ ಮಾಡಿದ್ದ ಕತ್ತಿ ಹುಕ್ಕೇರಿ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಜನತಾ ಪಕ್ಷದಿಂದ ಸ್ಪರ್ಧಿಸಿ ಜಯಗಳಿಸಿದರು. 1989ರಲ್ಲಿ ಜನತಾದಳಕ್ಕೆ ಬಂದು ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದರು. 1994ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಸಾಧಿಸಿದರು. ಇದನ್ನೂ ಓದಿ: ಕೆಲಸ ಮಾಡದೇ ಹೋದ್ರೆ ಬೂಟಿಂದ ಹೊಡಿತೀನಿ -ಕತ್ತಿ

    1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ನಿಂದ ಸ್ಪರ್ಧಿಸಿ 4ನೇ ಬಾರಿಯೂ ಗೆದ್ದರು. 2004ರಲ್ಲಿ ಕಾಂಗ್ರೆಸ್‌ಗೆ ಬಂದ ಉಮೇಶ್ ಕತ್ತಿ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರು. ರಾಜಕೀಯ ಜೀವನದಲ್ಲಿ ಇದೊಂದೇ ಚುನಾವಣೆಯಲ್ಲಿ ಉಮೇಶ್ ಕತ್ತಿ ಸೋಲು ಕಂಡಿರುವುದು.

    2008ರಲ್ಲಿ ಜೆಡಿಎಸ್ ಸೇರಿ ಗೆಲುವು ಕಂಡರು. ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ಕ್ಷೇತ್ರದಿಂದ ಕಣಕ್ಕಿಳಿದು ಜಯ ಸಾಧಿಸಿದರು.

    4 ಬಾರಿ ಸಚಿವ ಸ್ಥಾನ:
    ಶಾಸಕರಾಗಿದ್ದ ತಂದೆ ವಿಶ್ವನಾಥ್ ಕತ್ತಿ ನಿಧನದಿಂದಾಗಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ 1996ರಲ್ಲಿ ಮೊದಲ ಬಾರಿಗೆ ಸಕ್ಕರೆ ಖಾತೆ ಸಚಿವರಾದರು. 2008ರಲ್ಲಿ ತೋಟಗಾರಿಕೆ ಮತ್ತು ಬಂಧಿಖಾನೆ ಸಚಿವರಾದರು. 2010ರಲ್ಲಿ ಕೃಷಿ ಸಚಿವರಾದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಉಮೇಶ್ ಕತ್ತಿ ಅವರದ್ದು. 2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದರು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಿಕ್ಕಿತು. 2021ರಲ್ಲಿಯೂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದರು. ಅರಣ್ಯ ಇಲಾಖೆ ಖಾತೆ ಸಚಿವರಾಗಿದ್ದಾರೆ. ಸಹೋದರ ರಮೇಶ್ ಕತ್ತಿ ಸಹ ರಾಜಕೀಯದಲ್ಲಿದ್ದು, ಮಾಜಿ ಸಂಸದರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಸಚಿವ ಉಮೇಶ್‌ ಕತ್ತಿ ನಿಧನ

    ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಸಚಿವ ಉಮೇಶ್‌ ಕತ್ತಿ ನಿಧನ

    ಬೆಂಗಳೂರು: ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಸಚಿವ ಉಮೇಶ್‌ ಕತ್ತಿ (61) ಅವರಿಂದು ವಿಧಿವಶರಾಗಿದ್ದಾರೆ.

    ಇಲ್ಲಿನ ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    1961 ಮಾರ್ಚ್‌ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ, ರಾಜಕಾರಣಿ, ಕೃಷಿಕ, ಉದ್ಯಮಿ ಆಗಿಯೂ ಸಾರ್ಥಕ ಜೀವನ ನಡೆಸಿದ್ದಾರೆ.

    ಉಮೇಶ್‌ ಕತ್ತಿ ಅವರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಉಮೇಶ್‌ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಸಿಎಂ ಬೊಮ್ಮಾಯಿ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.

    ಸಚಿವ ಉಮೇಶ್ ಕತ್ತಿ 9 ಬಾರಿ ಚುನಾವಣೆಗೆ ಸ್ಪರ್ಧಿಸಿ, 8 ಬಾರಿ ಗೆಲುವು ಕಂಡಿದ್ದರು. 800 ಮತಗಳ ಅಂತರದಲ್ಲಿ ಒಂದು ಬಾರಿ ಸೋತಿದ್ದರು. 6 ಬಾರಿ ಪಕ್ಷವನ್ನು ಬದಲಾವಣೆ ಮಾಡಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ನಾನು ಸಹ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆಗಳಿಂದ ಪ್ರಸಿದ್ಧಿ ಪಡೆದಿದ್ದರು. 1996 ರಲ್ಲಿ ಮೊದಲ ಬಾರಿಗೆ ಸಚಿವ ಅಲಂಕರಿಸಿದ ಕತ್ತಿ ಅಂದು ಮೊದಲಿಗೆ ಸಕ್ಕರೆ ಸಚಿವ ಖಾತೆಯ ಹೊಣೆ ಹೊತ್ತಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸಚಿವ ಉಮೇಶ್‌ ಕತ್ತಿಗೆ ಹೃದಯಾಘಾತ

    ಸಚಿವ ಉಮೇಶ್‌ ಕತ್ತಿಗೆ ಹೃದಯಾಘಾತ

    ಬೆಂಗಳೂರು: ಸಚಿವ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಲ್ಲಿನ ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

    ಉಮೇಶ್‌ ಕತ್ತಿ ಅವರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • 2A ಮೀಸಲಾತಿ ಹೋರಾಟಕ್ಕೆ ಬೆಂಬಲ – ಲಿಂಗಾಯತ ಶಾಸಕರು ಸಿಎಂ ಮೇಲೆ ಒತ್ತಡ ತರ್ತೀವಿ ಎಂದ ಕತ್ತಿ

    2A ಮೀಸಲಾತಿ ಹೋರಾಟಕ್ಕೆ ಬೆಂಬಲ – ಲಿಂಗಾಯತ ಶಾಸಕರು ಸಿಎಂ ಮೇಲೆ ಒತ್ತಡ ತರ್ತೀವಿ ಎಂದ ಕತ್ತಿ

    ಚಿಕ್ಕೋಡಿ: ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಸಚಿವ ಉಮೇಶ್‌ ಕತ್ತಿ ಬೆಂಬಲ ಸೂಚಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರ್ಜುನವಾಡ ಗ್ರಾಮದಲ್ಲಿ ನಡೆದ ಪಂಚಮಸಾಲಿ ಹೋರಾಟದ ಪಾದಯಾತ್ರೆಯಲ್ಲಿ ಭಾಗವಹಿಸಿದ ಸಚಿವರು ಪಂಚಮಸಾಲಿ ಹೋರಾಟಕ್ಕೆ ನನ್ನ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ತಮ್ಮ ಮಗುವಿಗೆ ಭಾರತೀಯ ಖಾದ್ಯದ ಹೆಸರಿಟ್ಟ ವಿದೇಶಿ ದಂಪತಿ

    ಉಮೇಶ್ ಕತ್ತಿ ಬಣಜಿಗ ಸಮುದಾಯಕ್ಕೆ ಸೇರಿದವರಾದರೂ ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

    ಮೀಸಲಾತಿ ಹೋರಾಟವನ್ನುದ್ದೇಶಿಸಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಎಲ್ಲ ಲಿಂಗಾಯತ ಶಾಸಕರು ಒಂದಾಗಿ ಸಿಎಂ ಮೇಲೆ ಒತ್ತಡ ತರುತ್ತೇವೆ. ನೀವು ನಿಮ್ಮ ಹೋರಾಟ ಮುಂದುವರಿಸಿ, ಆದಷ್ಟು ಬೇಗ ನಿಮಗೆ ನ್ಯಾಯ ಕೊಡಿಸಿ ಎಲ್ಲರೂ ಸೇರಿಸಿ ವಿಜಯೋತ್ಸವ ಮಾಡೋಣ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಊಟಕ್ಕಿಂತ ಹೆಚ್ಚಾಗಿದ್ಯಂತೆ ಕಾಂಡೋಮ್ ಸೆಲ್ – ಸ್ವಿಗ್ಗಿ ಸಮೀಕ್ಷೆಯಲ್ಲಿನಿದೆ?

    ಈ ಸಂದರ್ಭದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯಮೃತ್ಯಂಜಯ ಸ್ವಾಮೀಜಿ, ತಾಲೂಕಾ ಅಧ್ಯಕ್ಷ ಗುಂಡು ಪಾಟೀಲ, ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಮುಖಂಡರಾದ ವಿನಯ ಪಾಟೀಲ, ರಾಜು ಮುನ್ನೋಳಿ, ಮಾಜಿ ಸಚಿವ ಶಶಿಕಾಂತ ನಾಯಿಕ, ಬಿಜೆಪಿ ಮುಖಂಡ ಗುರು ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ನಿಲ್ಲಿಸಲ್ಲ: ಉಮೆಶ್ ಕತ್ತಿ

    ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ನಿಲ್ಲಿಸಲ್ಲ: ಉಮೆಶ್ ಕತ್ತಿ

    ವಿಜಯಪುರ: ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ನಿಲ್ಲಿಸಲ್ಲ ಎಂದು ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ.

    ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಬಯಸಿದ್ರೆ ಅನ್ನಭಾಗ್ಯ ಯೋಜನೆ ಬಂದ್ ಮಾಡಲಾಗುವುದು ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಆ ರೀತಿ ಎಲ್ಲಿಯೂ ಹೇಳಿಲ್ಲ. ಅನ್ನಭಾಗ್ಯ ಯೋಜನೆ ಯಾಕೆ ಬಂದ್ ಮಾಡ್ತಾರೆ?, ಅದು ನನ್ನ ಹೇಳಿಕೆಯಲ್ಲ. ಇದು ರಾಜಕೀಯ ಎಂದು ಗರಂ ಆದರು.

    ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವರು, ಸಿದ್ದರಾಮಯ್ಯಗೆ ಹೇಳೋಕೆ ಇಷ್ಟ ಪಡ್ತೀನಿ. ಆಹಾರ ಭದ್ರತಾ ಯೋಜನೆಯಡಿ ಐದು ಕೆಜಿ ಅಕ್ಕಿ ಕೊಡಬೇಕು ಅಂತ ನಾವು ಮಾಡಿದ್ದು. ಕಾನೂನು ನಮ್ಮ ಹಿಂದಿನ ಸರಕಾರ ಮಾಡಿದ್ದು, ಈ ಕಾನೂನು ಇದೆಯೋ ಇಲ್ವೋ. ನಾನು ಮುಖ್ಯಮಂತ್ರಿಯಾದ್ರೆ ಹತ್ತು ಕೆಜಿ ಅಕ್ಕಿ ಕೊಡ್ತೀನಿ ಎಂದು ಹಿಂಗ್ ಹಿಂಗ್ ಹೊರಳಾಡ್ತಾರೆ ಎಂದು ಹೇಳುತ್ತಾ ಸಿದ್ದರಾಮಯ್ಯ ಸ್ಟೈಲ್ ಮಾಡಿ ತೋರಿಸಿದರು.

    ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಹತ್ತು ಕೆಜಿ ಅಕ್ಕಿ ಕೊಟ್ಟಿಲ್ಲ. ನಾಲ್ಕು, ಐದು, ಏಳು ಕೆಜಿ ಅಕ್ಕಿ ಕೊಟ್ಟಿದ್ದಾರೆ. ನಾವು ಮಾತ್ರ ಹತ್ತು ಕೆಜಿ ಅಕ್ಕಿ ಕೊಡುತ್ತಿದ್ದೇವೆ. ಜೊತೆಗೆ ಜೋಳ, ರಾಗಿ ಕೊಡ್ತಿದ್ದೇವೆ. ಸಿದ್ದರಾಮಯ್ಯ ರಾಜಕೀಯವಾಗಿ ತನಗೆ ಏನು ಬೇಕೋ ಅದನ್ನ ಹೇಳುತ್ತಿದ್ದಾರೆ. ಜನ ಅದನ್ನು ನಂಬಬಾರದು ಎಂದರು. ಇದನ್ನೂ ಓದಿ: ಚಿರಯುವಕರಂತೆ ವಾಲಿಬಾಲ್ ಆಡಿದ ಭಗವಂತ್ ಮಾನ್ – ವೀಡಿಯೋ ವೈರಲ್

    ಅನ್ನಭಾಗ್ಯ ಯೋಜನೆ ಬಂದ್ ಮಾಡಿ ಎಂದು ಸುಪ್ರೀಂ ಕೋರ್ಟ್ ಯಾಕೆ ಬಯಸುತ್ತೆ ಹೇಳಿ. ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್ ಬಯಸಿದ್ರೆ ಅನ್ನಭಾಗ್ಯ ಯೋಜನೆ ಬಂದ್ ಮಾಡ್ತೀವಿ ಅಂತ ನಾನು ಹೇಳಿಲ್ಲ. ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಐದು ಕೆಜಿ ಅಕ್ಕಿ ಕೊಡಬೇಕಂತಿದೆ. ನಮ್ಮ ರಾಜ್ಯದಲ್ಲಿ ಅಕ್ಕಿ ಜೊತೆಗೆ ಜೋಳ, ರಾಗಿ ಕೊಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ನಿಲ್ಲಿಸಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.

    Live Tv
    [brid partner=56869869 player=32851 video=960834 autoplay=true]