Tag: ಉಮೇಶ್ ಕತ್ತಿ

  • ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು: ಕತ್ತಿಗೆ ಹೊರಟ್ಟಿ ತಿರುಗೇಟು

    ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು: ಕತ್ತಿಗೆ ಹೊರಟ್ಟಿ ತಿರುಗೇಟು

    ಹುಬ್ಬಳ್ಳಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು. ಏಕೀಕರಣ ಹೋರಾಟದ ಉದ್ದೇಶ ಸಹಬಾಳ್ವೆ. ಆ ಉದ್ದೇಶ ಮರೆತು ಮಾತನಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಸಚಿವ ಉಮೇಶ್ ಕತ್ತಿಗೆ ತಿರುಗೇಟು ನೀಡಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಮೇಶ್ ಕತ್ತಿ 2009ರಲ್ಲಿ ಹೀಗೆಯೇ ಹೇಳಿದ್ದರು. ನನ್ನ ಮಗ ಮುಖ್ಯಮಂತ್ರಿ ಆಗುತ್ತಾನೆ ಎಂದಿದ್ದರು. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು. ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಸರ್ಕಾರಕ್ಕೆ ಕೇಳೋಣ. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

    ಪಠ್ಯ ಪುಸ್ತಕ ಪೂರೈಕೆ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಗೊಂದಲ ಉಂಟಾಗಿ ವಿಳಂಬವಾಗಿದೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುವೆ. ಪಠ್ಯ ವಿಚಾರದಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಮಿತಿಗೆ ಬಿಡಬೇಕು. ಅದರಲ್ಲಿ ಸರ್ಕಾರ ಹಾಗೂ ರಾಜಕಾರಣಿಗಳು ಭಾಗವಹಿಸುವುದು ಸರಿಯಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಾನಿಯಾಗಬಾರದು ಎಂದರು. ಇದನ್ನೂ ಓದಿ: ಮೋದಿಯವರ ವ್ಯಕ್ತಿತ್ವ, ಜೀವನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

    ಶಿಕ್ಷಕರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಶಿಕ್ಷಕರ ಸಭೆ ಕರೆದಿದ್ದೇನೆ. ಬಳಿಕ ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೆನೆ ಎಂದರು.

    Live Tv

  • ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು: ಬಸವರಾಜ ಹೊರಟ್ಟಿ

    ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು: ಬಸವರಾಜ ಹೊರಟ್ಟಿ

    ಹುಬ್ಬಳ್ಳಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.

    ರಾಜ್ಯದಲ್ಲಿ ನಡೆಯುತ್ತಿರುವ ವಿವಾದಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಮಟ್ಟದ ಶಿಕ್ಷಕರ ಸಭೆ ಕರೆದಿದ್ದೇನೆ. ಚುನಾವಣೆಯಲ್ಲಿ ನನ್ನನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಿದ್ದಾರೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಿದ್ದೇನೆ. ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು. ಕರ್ನಾಟಕ ಏಕೀಕರಣದಲ್ಲಿ ನಡೆದ ಹೋರಾಟ ನೆನಪಿಸಿಕೊಳ್ಳಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಡಿಜೆ ಹಳ್ಳಿಯ ದರ್ಗಾದಲ್ಲಿ ಬೆಂಕಿ ಅವಘಡ

    ಬಿಜೆಪಿಯಲ್ಲಿ ಯಾರು ಖಂಡಿಸುತ್ತಾರೋ, ಇಲ್ವೋ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ. ಏಕೀಕರಣ ಹೋರಾಟದ ಉದ್ದೇಶ ಸಹಬಾಳ್ವೆ. ಏಕೀಕರಣ ಉದ್ದೇಶ ಮರೆತು ಮಾತನಾಡುವುದು ಸರಿಯಲ್ಲ. ಉಮೇಶ್ ಕತ್ತಿ 2009ರಲ್ಲಿ ಹೀಗೆಯೇ ಹೇಳಿದ್ದರು. ನನ್ನ ಮಗ ಮುಖ್ಯಮಂತ್ರಿ ಆಗ್ತಾನೆ ಅಂತ ಹೇಳಿದ್ದರು. ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಸರ್ಕಾರಕ್ಕೆ ಕೇಳೋಣ, ಅನ್ಯಾಯ ಸರಿಪಡಿಸಲು ಕೇಳೋಣ ಎಂದರು.

    ಪಠ್ಯಪುಸ್ತಕ ಪೂರೈಕೆ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಗೊಂದಲ ಉಂಟಾಗಿ ವಿಳಂಬವಾಗಿದೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುವೆ. ಪಠ್ಯ ವಿಚಾರದಲ್ಲಿ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಪಠ್ಯಪುಸ್ತಕ ಪರಿಷ್ಕರಣ ವಿಚಾರ ಸಮಿತಿಗೆ ಬಿಡಬೇಕು. ಅದರಲ್ಲಿ ಸರ್ಕಾರ ಹಾಗೂ ರಾಜಕಾರಣಿಗಳು ಭಾಗವಹಿಸುವುದು ಸರಿಯಿಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಾನಿಯಾಗಬಾರದು. ಆ ದೃಷ್ಠಿಯಿಂದ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ಕೊಟ್ಟರು. ಇದನ್ನೂ ಓದಿ: ಪತಿ ಜೊತೆ ಬಳೆ ಖರೀದಿಸಲು ಹೋದವಳು ಲವ್ವರ್ ಜೊತೆ ಜೂಟ್

    Live Tv 

  • ಉಮೇಶ್ ಕತ್ತಿಯನ್ನು ಸಂಪುಟದಿಂದ ಕಿತ್ತು ಹಾಕಿ: ಸಿದ್ದರಾಮಯ್ಯ ವಾಗ್ದಾಳಿ

    ಉಮೇಶ್ ಕತ್ತಿಯನ್ನು ಸಂಪುಟದಿಂದ ಕಿತ್ತು ಹಾಕಿ: ಸಿದ್ದರಾಮಯ್ಯ ವಾಗ್ದಾಳಿ

    ಬೆಂಗಳೂರು: 2024ಕ್ಕೆ ಕರ್ನಾಟಕ ಇಬ್ಭಾಗವಾಗೋದು ಖಚಿತ ಎಂಬ ಸಚಿವ ಉಮೇಶ್ ಕತ್ತಿ ಮಾತಿಗೆ ಪಕ್ಷಾತೀತವಾಗಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಉಮೇಶ್ ಕತ್ತಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಕರ್ನಾಟಕ ಸ್ಥಾಪನೆಯಾಗಿದೆ. ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು-ನುಡಿಗೆ ಬಗೆವ ದ್ರೋಹವಾಗುತ್ತದೆ. ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ, ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇದನ್ನೂ ಓದಿ: BBMP 243 ವಾರ್ಡ್ ವಿಂಗಡಣೆಗೆ ಸರ್ಕಾರ ಗ್ರೀನ್ ಸಿಗ್ನಲ್ – 40ಕ್ಕೂ ಹೆಚ್ಚು ವಾರ್ಡ್‌ಗಳ ಸೇರ್ಪಡೆ

    ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಈ ವಿವಾದದಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಈ ಬಗ್ಗೆ ಕತ್ತಿಯನ್ನೇ ಕೇಳಿ.. ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಸಚಿವ ಅಶ್ವಥ್‍ನಾರಾಯಣ್ ಕೂಡ ಉಮೇಶ್ ಕತ್ತಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಉಮೇಶ್ ಕತ್ತಿ ಪ್ರತ್ಯೇಕ ರಾಜ್ಯ, ಇನ್ನೊಂದು ವಿಚಾರದ ಬಗ್ಗೆ ಹಗುರವಾಗಿ ಮಾತನಾಡುವ ಕೆಲಸ ಮಾಡಬಾರದು. ಅವರ ಹೇಳಿಕೆಯನ್ನು ಆರುವರೆ ಕೋಟಿ ಕನ್ನಡಿಗರ ಪರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

    ಸಿಟಿ ರವಿಯಂತೆ ಕತ್ತಿಗೂ ಕುಡಿಯುವ ಚಟ ಇದೆ ಅನ್ನೋದು ಇದರಿಂದ ಗೊತ್ತಾಗಿದೆ. ಆದರೆ ಅವರು ಹೀಗೆ ಮಾತಾಡೋದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ವಾಗ್ದಾಳಿ ನಡೆಸಿದ್ರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತ್ರ ಚಿಕ್ಕ ರಾಜ್ಯಗಳನ್ನು ಮಾಡೋದು ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದು. ಇಲ್ಲಿ ಪ್ರತ್ಯೇಕ ರಾಜ್ಯ ಅನ್ನೋ ಪ್ರಶ್ನೆ ಇಲ್ಲ.. ಎಂದಿದ್ದಾರೆ.

    Live Tv

  • ಉತ್ತರ ಕರ್ನಾಟಕ ರಾಜ್ಯ ನಿರ್ಮಾಣ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಬೊಮ್ಮಾಯಿ

    ಉತ್ತರ ಕರ್ನಾಟಕ ರಾಜ್ಯ ನಿರ್ಮಾಣ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಬೊಮ್ಮಾಯಿ

    ನವದೆಹಲಿ: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಉಮೇಶ್ ಕತ್ತಿ ಹೀಗೆ ಹಲವು ಬಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು. ಸರ್ಕಾರದ ಮುಂದೆ ಆ ರೀತಿಯಾದ ಯಾವುದೇ ಪ್ರಸ್ತಾಪಗಳಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು – ನಾಳೆ ನಾಮಪತ್ರ ಸಲ್ಲಿಕೆ

    ದೆಹಲಿ ಭೇಟಿ ಕುರಿತು ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಸೂಚಕರಾಗಿ ಸಹಿ ಮಾಡಲು ಆಗಮಿಸಿದ್ದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಿಲ್ಲ. ಕೇಂದ್ರ ಸಚಿವರನ್ನೂ ಭೇಟಿ ಮಾಡಲ್ಲ. ನಾಮಪತ್ರ ಸಲ್ಲಿಕೆ ವಿಚಾರವೇ ಹೊರತು ಇನ್ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹಾರಿಕೆ ಉತ್ತರ ನೀಡಿದರು. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಿಮ್ಮ ಬಳಿ ದಾಖಲೆಗಳಿದ್ದರೇ ಕೊಡಿ ಪರಿಶೀಲನೆ ನಡೆಸುತ್ತೇನೆ ಎಂದಿದ್ದಾರೆ.

    Live Tv

  • 2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ: ಸಚಿವ ಉಮೇಶ್ ಕತ್ತಿ

    2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ: ಸಚಿವ ಉಮೇಶ್ ಕತ್ತಿ

    ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು‌ ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ನಿಶ್ಚಿತ. 2024 ರ ಲೋಕಸಭಾ ಚುನಾವಣೆ ನಂತರ ಕರ್ನಾಟಕ 2 ರಾಜ್ಯವಾಗಲಿದೆ. ದೇಶದಲ್ಲಿ 50 ಹೊಸ ರಾಜ್ಯಗಳಾಗಲಿದ್ದು, ಈ ಕುರಿತು ಚರ್ಚೆ ಈಗಾಗಲೇ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ: ಬೊಮ್ಮಾಯಿ

    ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ಖಚಿತ. ನಾವು ನೀವು ಸೇರಿ ಮಾಡೋಣ. ಮಹಾರಾಷ್ಟ್ರದಲ್ಲಿ 3, ಉತ್ತರ ಪ್ರದೇಶದಲ್ಲಿ 4, ಕರ್ನಾಟಕದಲ್ಲಿ 2 ರಾಜ್ಯಗಳಾಗಲಿವೆ. ಉತ್ತರ ಕರ್ನಾಟಕ ರಾಜ್ಯವಾಗಲೇಬೇಕು ಎಂದು ಹೇಳಿದ್ದಾರೆ.

    ಬೆಂಗಳೂರಲ್ಲಿ ಕುಡಿಯಲು ನೀರಿಲ್ಲ. ಬೆಂಗಳೂರು ಟ್ರಾಫಿಕ್ ಜಾಮ್ ಹೇಳತೀರದು. 10 ಕಿಮೀ ಹೋಗಲು 1 ತಾಸು ಬೇಕು. ನನ್ನ ಮನೆಯಿಂದ ವಿಧಾನಸೌಧಕ್ಕೆ ಹೋಗಲು ಒಂದೂವರೆ ಗಂಟೆ ಬೇಕು. ನಡೆದುಕೊಂಡು ಹೋದರೆ ಅದಕ್ಕಿಂತ ಬೇಗ ಹೋಗಬಹುದು. ಸದ್ಯ ಬೆಳಗಾವಿಯಲ್ಲಿ ವಿಧಾನಸೌಧ ಆಗಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಹೈಕೋರ್ಟ್ ಆಗಿದೆ. ಕಿತ್ತೂರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಚರ್ಚೆ ನಡೆದಿದೆ. ಹಾಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲು ಎಲ್ಲ ಸೌಲಭ್ಯಗಳಿವೆ ಎಂದು ತಿಳಿಸಿದ್ದಾರೆ.

    Live Tv

  • ಕಾಂಗ್ರೆಸ್ ಸರ್ಕಾರ 90ರ ದಶಕದಲ್ಲಿಯೇ ಅಗ್ನಿಪಥ್ ಜಾರಿಗೆ ತರಲು ಚಿಂತಿಸಿತ್ತು: ಉಮೇಶ್ ಕತ್ತಿ ಹೊಸ ಬಾಂಬ್

    ಕಾಂಗ್ರೆಸ್ ಸರ್ಕಾರ 90ರ ದಶಕದಲ್ಲಿಯೇ ಅಗ್ನಿಪಥ್ ಜಾರಿಗೆ ತರಲು ಚಿಂತಿಸಿತ್ತು: ಉಮೇಶ್ ಕತ್ತಿ ಹೊಸ ಬಾಂಬ್

    ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರವೇ 90ರ ದಶಕದಲ್ಲಿ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರಲು ಚಿಂತಿಸಿತ್ತು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಆಯೋಜಿಸಿದ್ದ ಹಸಿರು ಹಬ್ಬ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಮೇಶ್ ಕತ್ತಿ, ಇದು ಸ್ವತಃ ಕಾಂಗ್ರೆಸ್‌ನವರೇ ಜಾರಿಗೆ ತರಲು ಯತ್ನಿಸಿದ ಕಾರ್ಯಕ್ರಮ. ಆದರೆ ಇಂದು ಮೋದಿ ನೇತೃತ್ವದ ಸರ್ಕಾರ ಅಗ್ನಿಪಥ್ ಯೋಜನೆಗೆ ಚಾಲನೆ ನೀಡಿದೆ. ಆದರೆ ಕಾಂಗ್ರೆಸ್‌ನವರು ಈಗ ಈ ಯೋಜನೆಗೆ ಯಾಕೆ ವಿರೋಧ ಮಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

    ಯುವಕರು ಬಿಜೆಪಿ ಪರವಾಗಿ ಹೋಗುತ್ತಿದ್ದಾರೆ ಎಂದು ಅವರಿಗೆ ಅನ್ನಿಸುತ್ತಿದೆ. ಇಂದಿನ ಸಮಾಜ ಮತ್ತು ಯುವಕರು ಬಿಜೆಪಿ ಪರವಾಗಿಯೇ ಇದ್ದಾರೆ. 75 ಸಾವಿರ ಯುವಕರಿಗೆ ನೌಕರಿ ಕೊಡುವ ಉದ್ದೇಶವನ್ನು ಅಗ್ನಿಪಥ್ ಹೊಂದಿದೆ. ಅಗ್ನಿವೀರರು 4 ವರ್ಷಗಳ ಕಾಲ ಸೇವೆ ಮಾಡುವುದು ಯೋಜನೆಯಲ್ಲಿದೆ. ಅವರು ದುಡಿದ 11 ಲಕ್ಷ, ನಾವು ಕೊಡುವ 11 ಲಕ್ಷ ರೂ. ಸೇರಿಸಿ ಅವರಿಗೆ ನೀಡುವ ಯೋಜನೆ ಇದಾಗಿದೆ. ಇಷ್ಟೆಲ್ಲಾ ಅನುಕೂಲವಿದ್ದರೂ ಕಾಂಗ್ರೆಸ್ ಯಾಕಿಷ್ಟು ವಿರೋಧ ಮಾಡುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಗ್ನಿಪಥ್‌ ಯೋಜನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ದೋವಲ್‌

    Live Tv

  • ಬಿಜೆಪಿಯಲ್ಲಿ 75 ವರ್ಷಕ್ಕೆ ಮನೆಗೆ ಕಳಿಸ್ತಾರೆ, ಕಾಂಗ್ರೆಸ್‌ನಲ್ಲಿ 90 ಆದ್ರೂ ಚುನಾವಣೆಗೆ ನಿಲ್ಲಿಸ್ತಾರೆ: ಕತ್ತಿ

    ಬಿಜೆಪಿಯಲ್ಲಿ 75 ವರ್ಷಕ್ಕೆ ಮನೆಗೆ ಕಳಿಸ್ತಾರೆ, ಕಾಂಗ್ರೆಸ್‌ನಲ್ಲಿ 90 ಆದ್ರೂ ಚುನಾವಣೆಗೆ ನಿಲ್ಲಿಸ್ತಾರೆ: ಕತ್ತಿ

    ಚಿಕ್ಕೋಡಿ: ಬಿಜೆಪಿಯಲ್ಲಿ 75 ವರ್ಷವಾದರೆ ಮನೆಗೆ ಕಳುಹಿಸುತ್ತಾರೆ. ಆದರೆ ಕಾಂಗ್ರೆಸ್‌ನಲ್ಲಿ 90 ವರ್ಷ ಆದರೂ ಚುನಾವಣೆಗೆ ನಿಲ್ಲಿಸುತ್ತಾರೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ವ್ಯಂಗ್ಯವಾಡಿದರು.

    ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ವಾಯುವ್ಯ ಶಿಕ್ಷಕರ ಪದವೀಧರ ಮತಕ್ಷೇತ್ರ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉದ್ಯೋಗ ಕಳೆದುಕೊಂಡ ಬಳಿಕ ಉದ್ಯೋಗ ಹುಡುಕಾಡುವ ಕೆಲಸವನ್ನು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಮಾಡುತ್ತಿದ್ದಾರೆ. ಪ್ರಕಾಶ್ ಹುಕ್ಕೇರಿ ಮೊದಲು ಪಂಚಾಯಿತಿ ಸದಸ್ಯನಾಗಿ, ರಾಜ್ಯದ ವಿಧಾನ ಪರಿಷತ್, ವಿಧಾನಸಭೆ, ಲೋಕಸಭೆ ಸದಸ್ಯರಾಗಿ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

    bjP

    ಅವರು ಒಂದು ಕಡೆ ಶಿಕ್ಷಕರೂ ಅಲ್ಲ, ಪದವೀಧರರೂ ಅಲ್ಲ, ಉದ್ಯೋಗವೂ ಬರಲ್ಲ. ಅವರಿಗೆ ಬರುವುದು ರಾಜಕಾರಣ ಒಂದೇ. ಇಂದು ಅವರನ್ನು ವಾಯುವ್ಯ ಶಿಕ್ಷಕ ಮತಕ್ಷೇತ್ರ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಕಣಕ್ಕಿಳಿಸಿದ್ದಾರೆ. ನಮ್ಮದು ಕೂಡ ಅವರಂತಹದೇ ರಾಜಕಾರಣ. ಆದರೆ ನಾವು ಸ್ವಲ್ಪ ಬೇರೆ ಉದ್ಯೋಗವೂ ಮಾಡುತ್ತೇವೆ ಎಂದರು. ಇದನ್ನೂ ಓದಿ: ಧೀಮಂತ ಜನ ನಾಯಕ: ಪ್ರಚಾರ ಸಮಯದಲ್ಲಿ ತಂದೆ ಸಾಧನೆಯನ್ನು ಗುಣಗಾನ ಮಾಡಿದ ವಿಜಯೇಂದ್ರ

    ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ 77 ವರ್ಷ. ಬಿಜೆಪಿಯಲ್ಲಿ 75 ವರ್ಷವಾದರೆ ಮನೆಗೆ ಕಳುಹಿಸುತ್ತಾರೆ. ಆದರೆ ಕಾಂಗ್ರೆಸ್‌ನಲ್ಲಿ 90 ವರ್ಷ ಆದರೂ ಚುನಾವಣೆಗೆ ನಿಲ್ಲಿಸುತ್ತಾರೆ ಎಂದು ಕುಟುಕಿದರು.

    ಅರುಣ್ ಶಹಾಪುರ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಚುನಾವಣೆ ಕಣಕ್ಕಿಳಿದಿದ್ದಾರೆ. ಅವರು ಶಿಕ್ಷಕರಾಗಿದ್ದು, ಶಿಕ್ಷಕರ ಬಗ್ಗೆ ಅವರಿಗೆ ಕಾಳಜಿಯೂ ಇದೆ. ಪದವೀಧರ ಕ್ಷೇತ್ರಕ್ಕೆ ಹಣಮಂತ ನಿರಾಣಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರು ಕೂಡ ಪದವೀಧರರಿದ್ದಾರೆ. ಕಾಂಗ್ರೆಸ್‌ನಿಂದ ಅಭ್ಯರ್ಥಿ ಸಿಗದ ಕಾರಣ ಅವನ್ಯಾವನೊ ಒಬ್ಬನನ್ನು ನಿಲ್ಲಿಸಿದ್ದಾರೆ, ಅವನ ಹೆಸರೂ ಗೊತ್ತಿಲ್ಲ. ಮೊದಲು ಅವನ ಅಣ್ಣ, ಅಜ್ಜ, ಅಪ್ಪ, ತಮ್ಮ ಕಾಂಗ್ರೆಸ್‌ನಲ್ಲಿ ಇದ್ದರಂತೆ. ಹೀಗಾಗಿ ಅವನನ್ನು ಹುಡುಕಾಡಿ ತಂದು ಕಣಕ್ಕಿಳಿಸಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಯೋಗ, ಯೋಗ್ಯತೆ ಇದ್ದವರು ಸಿಎಂ ಆಗ್ತಾರೆ: ಸಿ.ಟಿ.ರವಿ

    ಕಾಂಗ್ರೆಸ್ ಪದವೀಧರ ಅಭ್ಯರ್ಥಿ ಸುನಿಲ್ ಸಂಖ ಯಾರು ಎಂಬುದೇ ಗೊತ್ತಿಲ್ಲ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಮನೆಗೆ ಕಳುಹಿಸುವ ಕೆಲಸ ಮಾಡಿ ಎಂದು ಉಮೇಶ್ ಕತ್ತಿ ಹೇಳಿದರು.

  • ರಾಷ್ಟ್ರೀಯ ಭಾಷೆ ಹಿಂದಿ, ಜಗತ್ತಿನ ಭಾಷೆ ಇಂಗ್ಲಿಷ್ ಕಲಿಯಲೇಬೇಕು: ಉಮೇಶ್ ಕತ್ತಿ

    ರಾಷ್ಟ್ರೀಯ ಭಾಷೆ ಹಿಂದಿ, ಜಗತ್ತಿನ ಭಾಷೆ ಇಂಗ್ಲಿಷ್ ಕಲಿಯಲೇಬೇಕು: ಉಮೇಶ್ ಕತ್ತಿ

    ಮಡಿಕೇರಿ: ರಾಷ್ಟ್ರೀಯ ಭಾಷೆಯನ್ನು ಯಾರಿಗೆ ಯಾರೂ ಹೇರಿಕೆ ಮಾಡಲು ಸಾಧ್ಯವಿಲ್ಲ. ತಮ್ಮ ತಮ್ಮ ಭಾಷೆಗಳನ್ನು ಮಾತನಾಡುವ ಜೊತೆಯಲ್ಲಿ ರಾಷ್ಟ್ರೀಯ ಭಾಷೆ ಹಿಂದಿ ಹಾಗೂ ಜಗತ್ತಿನ ಭಾಷೆ ಇಂಗ್ಲಿಷ್ ಅನ್ನು ಕಲಿಯಲೇಬೇಕು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದರು.

    ದೇಶದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದ್ದ ಹಿಂದಿ ಹೇರಿಕೆ ವಿವಾದವನ್ನು ತಮ್ಮ ಹೇಳಿಕೆ ಮೂಲಕ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮತ್ತೆ ಹೊರತೆಗೆದಿದ್ದಾರೆ. ಇದೀಗ ಕೇಂದ್ರ ಸರ್ಕಾರ ಎಲ್ಲರ ಮೇಲೂ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಮುಂದಾಗಿದ್ದು, ದೇಶದ ಜನತೆ ಹಿಂದಿಯಲ್ಲೇ ಮಾತನಾಡಬೇಕು ಎಂದು ಮೌಖಿಕವಾಗಿ ಹುಕುಂ ಹೊರಡಿಸಿದೆ. ಇದನ್ನೂ ಓದಿ: ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಭಾಷೆ ಬಳಕೆಯಾಗಬೇಕು: ಅಮಿತ್ ಶಾ

    Amith

    ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಮಿತ್ ಶಾ, ಬೇರೆ ಬೇರೆ ರಾಜ್ಯದ ಜನರು ಪರಸ್ಪರ ಸಂವಹನ ನಡೆಸುವಾಗ ದೇಶದ ಭಾಷೆ ಹಿಂದಿಯಲ್ಲಿ ಮಾತನಾಡಬೇಕೇ ವಿನಃ ಇಂಗ್ಲಿಷ್ ಭಾಷೆಯಲ್ಲಿ ಅಲ್ಲ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಪ್ರಗತಿ ನಿಲ್ಲಿಸಲು ಸಾಧ್ಯವಿಲ್ಲ, ತಮಿಳುನಾಡು, ತೆಲಂಗಾಣ ರಾಜ್ಯಗಳಿಗೆ ಹತಾಶೆ ಕಾಡುತ್ತಿದೆ: ಬೊಮ್ಮಾಯಿ

    ಅಮಿತ್ ಶಾ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ ಉಮೇಶ್ ಕತ್ತಿ, ಬದುಕು ನಡೆಸಲು ಹಿಂದಿ ಹಾಗೂ ಇಂಗ್ಲಿಷ್ ಭಾಷೆಯನ್ನು ಕಲಿಯಲೇಬೇಕು ಎಂದು ಹೇಳಿಕೆ ನೀಡಿದರು.

  • ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಇಬ್ಬರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿ: ಉಮೇಶ್ ಕತ್ತಿ

    ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಇಬ್ಬರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿ: ಉಮೇಶ್ ಕತ್ತಿ

    ಮಡಿಕೇರಿ: ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಬ್ಬರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದರು.

    ಅಲ್ ಖೈದಾ ಮುಖ್ಯಸ್ಥ ಮಸ್ಕಾನ್‍ನನ್ನು ಹೊಗಳಿದ ವೀಡಿಯೋ ಆರ್‍ಎಸ್‍ಎಸ್ ಬಿಡುಗಡೆ ಮಾಡಿದೆ ಎಂಬ ಸಿದ್ದರಾಮಯ್ಯ ಹೇಳಿಕೆಯ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಮುಖ್ಯಮಂತ್ರಿ ಆಗಿ ಒಳ್ಳೆಯ ಕೆಲಸ ಮಾಡಿದ್ದವರು. ಆದರೆ ಈಗ ರಾಜಕೀಯ ನಿವೃತ್ತಿ ಪಡೆದುಕೊಂಡರೆ ಒಳ್ಳೆಯದು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಶಕ್ತಿ ಸ್ವರೂಪಿಣಿ ದೇವಿಯು ಅಪಾರ ದ್ವೇಷದಿಂದ ಕೂಡಿದ ಬಿಜೆಪಿ ನಾಯಕರ ಆತ್ಮವನ್ನು ಶುದ್ಧೀಕರಿಸಲಿ: ಸುರ್ಜೇವಾಲಾ

    Siddaramaiah

    ಮುಸಲ್ಮಾನ ಶಿಲ್ಪಿಗಳು ಕೆತ್ತಿದ ಮೂರ್ತಿಗಳ ತಿರಸ್ಕರಿಸುವಂತೆ ಒತ್ತಾಯಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೂರ್ತಿ ಕೆತ್ತನೆ ಬಗ್ಗೆ ಕುಮಾರಸ್ವಾಮಿ ಅವರ ಬಳಿಯೇ ಕೇಳಬೇಕು. ಅವರು ಕೂಡ ಸಿಎಂ ಆಗಿದ್ದವರು. ಈಗಾಗಲೇ ಕೆತ್ತನೆ ಆಗಿರುವ ವಿಗ್ರಹಗಳು ಪೂಜಿಸಲ್ಪಪಡುತ್ತಿವೆ. ಆದ್ದರಿಂದ ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಿಬಿಡಬೇಕು ಎಂದರು. ಇದನ್ನೂ ಓದಿ: ಮದ್ಯದ ಬಾಟಲಿಯಿಂದ ಸಿಕ್ಕಿ ಬಿದ್ರು 2 ಕೋಟಿ ಕದ್ದ ಖದೀಮರು

    ಹಿಂದೂಪರ ಸಂಘಟನೆಗಳು ಮೂರ್ತಿ ತ್ಯಜಿಸುವಂತೆ ಒತ್ತಾಯಿಸುತ್ತಿರುವ ವಿಚಾರ ಹಿನ್ನೆಲೆ ಅದು ಹಿಂದಿನಿಂದಲೂ ವಿರೋಧ ಇದೆ. ಆ ವಿರೋಧ ಸದ್ಯಕ್ಕೆ ನಿಲ್ಲುವುದಿಲ್ಲ. ಇನ್ನು 10 ವರ್ಷಗಳಾದರೂ ಇರುತ್ತದೆ. ಇದರ ಬಗ್ಗೆ ರಾಜಕೀಯ ಮಾಡುವ ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯ ಇಬ್ಬರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲಿ ಎಂದು ಸಲಹೆ ನೀಡಿದರು.

    ಸಮಾಜದಲ್ಲಿ ಆಗುತ್ತಿರುವ ಗಲಭೆಗೆ ಸರ್ಕಾರ ಮಧ್ಯಸ್ಥಿಕೆ ವಹಿಸದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಎಲ್ಲದಕ್ಕೂ ಮಧ್ಯಸ್ಥಿಕೆ ವಹಿಸಲಾಗುವುದಿಲ್ಲ. ಅಂತಹ ಸಂದರ್ಭ ಬಂದರೆ ಮುಖ್ಯಮಂತ್ರಿಗಳೇ ಮಧ್ಯಸ್ಥಿಕೆ ವಹಿಸುತ್ತಾರೆ ಎಂದು ತಿಳಿಸಿದರು.

  • ಪಕ್ಷ ಅಧಿಕಾರಕ್ಕೆ ಬರಬೇಕಾದ್ರೆ ಹಿರಿಯ ಸಚಿವರನ್ನು ತೆಗೆಯಬೇಕು: ಉಮೇಶ್ ಕತ್ತಿ

    ಪಕ್ಷ ಅಧಿಕಾರಕ್ಕೆ ಬರಬೇಕಾದ್ರೆ ಹಿರಿಯ ಸಚಿವರನ್ನು ತೆಗೆಯಬೇಕು: ಉಮೇಶ್ ಕತ್ತಿ

    ಚಾಮರಾಜನಗರ: ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಹಿರಿಯ ಸಚಿವರನ್ನು ತೆಗೆಯಬೇಕು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಅಭಿಪ್ರಾಯಪಟ್ಟಿದ್ದಾರೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿರಿಯ ಸಚಿವರಿಗೆ ಕೋಕ್ ನೀಡುವ ವಿಚಾರಕ್ಕೆ ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಸ್ವಾಗತ ಮಾಡ್ತೇನೆ. ಕೋಕ್ ಕೊಟ್ರೂ ಸ್ವಾಗತ, ಇಟ್ಕೊಂಡ್ರು ಸ್ವಾಗತ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾದ್ರೆ ಹಿರಿಯ ಸಚಿವರನ್ನು ತೆಗೆಯಬೇಕು ಎಂದರು. ಇದನ್ನೂ ಓದಿ: ಮುಸ್ಲಿಮರಿಂದ ಕೆತ್ತಿದ ಮೂರ್ತಿ ಪೂಜೆಗೆ ಯೋಗ್ಯವಲ್ಲ: ಆಂದೋಲಾ ಶ್ರೀ

    ಯಾರನ್ನು ತೆಗೆಯುತ್ತಾರೋ ತೆಗೆಯಲಿ ಯುವಕರಿಗೆ, ಹೊಸಬರಿಗೆ ಆದ್ಯತೆ ನೀಡಬೇಕು. ಬಹಳಷ್ಟು ಜನ ಹೊಸ ಶಾಸಕರಿದ್ದಾರೆ. ನಾವು ಹಳೆಯ ಶಾಸಕರು ನಾನು 10 ಚುನಾವಣೆ ಎದುರಿಸಿ 9ರಲ್ಲಿ ಗೆದ್ದಿದ್ದೇನೆ. ನನ್ನನ್ನು ತೆಗೆದ್ರೂ ಸೈ, ಇಟ್ಕೊಂಡ್ರು ಸೈ. ಪಾರ್ಟಿ ಕೆಲಸ ಕೊಟ್ಟರು ಓಕೆ. ಸಚಿವ ಸಂಪುಟ ವಿಚಾರ ಹೈಕಮಾಂಡ್‍ಗೆ ಬಿಟ್ಟ ವಿಚಾರ. ಪುನರ್‌ರಚನೆಯೋ, ವಿಸ್ತರಣೆಯೋ ನನಗೆ ಗೊತ್ತಿಲ್ಲ. ಒಂದು ವರ್ಷ ನಾವೇ ಅಧಿಕಾರದಲ್ಲಿ ಇರುತ್ತೇವೆ. ಸರ್ಕಾರ ನಡೆಸುವಾಗ ಹೆಚ್ಚು-ಕಡಿಮೆ ಆಗುವುದು ಸಹಜ ಆಗ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ನುಡಿದರು. ಇದನ್ನೂ ಓದಿ: ಪಾಪ ಸಿದ್ದರಾಮಯ್ಯಗೆ ಇತ್ತೀಚೆಗೆ ಏನಾಗ್ತಿದೆಯೋ ಗೊತ್ತಾಗ್ತಿಲ್ಲ: ಸುಧಾಕರ್ ತಿರುಗೇಟು

    ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರ ಕುರಿತಂತೆ ಮಾತನಾಡಿ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿದ್ರೆ ಸ್ವಾಗತ ಮಾಡುತ್ತೇನೆ. ಮಾಜಿ ಮುಖ್ಯಮಂತ್ರಿಗಳ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಿದ್ರೆ ತಪ್ಪಿಲ್ಲ ಎಂದು ವಿಜಯೇಂದ್ರ ಪರ ಉಮೇಶ್ ಕತ್ತಿ ಬ್ಯಾಟಿಂಗ್ ಮಾಡಿದರು.