Tag: ಉಮೇಶ್ ಕತ್ತಿ

  • ಕತ್ತಿ, ಜಾರಕಿಹೊಳಿ ಸಹೋದರರ ಮಧ್ಯೆ ಸಂಘರ್ಷಕ್ಕೆ ವೇದಿಕೆಯಾಗುತ್ತಾ ಬೆಳಗಾವಿ ಜಿಲ್ಲಾ ವಿಭಜನೆ ಕೂಗು?

    ಕತ್ತಿ, ಜಾರಕಿಹೊಳಿ ಸಹೋದರರ ಮಧ್ಯೆ ಸಂಘರ್ಷಕ್ಕೆ ವೇದಿಕೆಯಾಗುತ್ತಾ ಬೆಳಗಾವಿ ಜಿಲ್ಲಾ ವಿಭಜನೆ ಕೂಗು?

    ಬೆಳಗಾವಿ: ಸಚಿವ ಉಮೇಶ್ ಕತ್ತಿ ಮತ್ತು ರಮೇಶ್ ಜಾರಕಿಹೊಳಿ ಸಹೋದರರ ಮಧ್ಯೆ ಬೆಳಗಾವಿ ಜಿಲ್ಲಾ ವಿಭಜನೆ ಕೂಗು ಮತ್ತೊಂದು ಸಂಘರ್ಷಕ್ಕೆ ವೇದಿಕೆ ಆಗುವ ಸಾಧ್ಯತೆ ದಟ್ಟವಾಗಿದೆ. ಬೆಳಗಾವಿಯನ್ನು ಮೂರು ಜಿಲ್ಲೆಯಾಗಿಸಲು ಸಚಿವ ಉಮೇಶ್ ಕತ್ತಿ ಒಲವು ತೋರಿಸಿದ್ದಾರೆ.

    ಅದರಲ್ಲಿ ಪ್ರಮುಖವಾಗಿ ಬೆಳಗಾವಿ, ಚಿಕ್ಕೋಡಿ, ಬೈಲಹೊಂಗಲ ಜಿಲ್ಲೆ ಮಾಡುವಂತೆ ಉಮೇಶ್ ಕತ್ತಿ ಆಗ್ರಹಿಸಿದ್ದಲ್ಲದೇ ಸದ್ಯದಲ್ಲೇ ಸಿಎಂ ಭೇಟಿಯಾಗಿ ಮನವಿ ಮಾಡಲು ಉಮೇಶ್ ಕತ್ತಿ ನಿರ್ಧಾರ ಮಾಡಿದ್ದಾರೆ. ಇನ್ನೂ ಉಮೇಶ್ ಕತ್ತಿ ಬೆಂಬಲಕ್ಕೆ ರಮೇಶ್ ಜಾರಕಿಹೊಳಿ ಬದ್ಧವೈರಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಾಥ್ ನೀಡಿರೋದು ಗೋಕಾಕ್ ಭಾಗದ ಜನರ ಆಕ್ರೋಶಕ್ಕೂ ಕಾರಣವಾಗಿದೆ.

    ಹೌದು, ಇಂತಹದೊಂದು ಚರ್ಚೆಗಳು ರಾಜಕೀಯ ವಲಯದಲ್ಲಿ ಶುರುವಾಗಿದ್ದು, ಈಗಾಗಲೇ ಉಮೇಶ್ ಕತ್ತಿ ಹೇಳಿಕೆಗೆ ಜಾರಕಿಹೊಳಿ ಸಹೋದರರ ಪರಮಾಪ್ತ ಆಗಿರೋ ಮಾಜಿ ಜಿಲ್ಲಾಪಂಚಾಯಿತಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ಸರ್ಜರಿ ಫೈನಲ್: ಸಿಎಂ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ್ ಅನ್ನು ಜಿಲ್ಲೆಯನ್ನಾಗಿ ಮಾಡಲು ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿತ್ತು. ಆದರೆ, ರಾಜಕೀಯ ಕಾರಣದಿಂದ ಅದು ರದ್ದಾಗಿತ್ತು. ಕಳೆದ 20 ವರ್ಷದಿಂದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಬೆಳಗಾವಿ, ಚಿಕ್ಕೋಡಿ ಗೋಕಾಕ ಜಿಲ್ಲೆಯಾಗಿ ಘೋಷಣೆ ಮಾಡಬೇಕೆಂದು ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಆದರೆ, ಸಚಿವ ಉಮೇಶ್ ಕತ್ತಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ ಎಂದು ಹೇಳಿದ್ದಾರೆ.

    ಲಕ್ಷ್ಮಿ ಹೆಬ್ಬಾಳಕರ್ ಅವರು ಕೂಡ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮಾತನಾಡಿದ್ದಾರೆ. ಅವರಿಗೂ ನಾವು ವಿನಂತಿಸುತ್ತೇವೆ. ಬೆಳಗಾವಿ ಜಿಲ್ಲೆ ವಿಭಜನೆ ಮಾಡುವುದಾದರೇ ಬೆಳಗಾವಿ, ಚಿಕ್ಕೋಡಿ, ಗೋಕಾಕ್ ಅನ್ನು ಜಿಲ್ಲೆಯಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಒತ್ತು: ನರೇಂದ್ರಮೋದಿ

  • ಆನ್‌ಲೈನ್‌ನಲ್ಲಿ ಆಯ್ಕೆ ನೀಡಿ – ಹಲಾಲ್ ವಿರುದ್ಧ ಕತ್ತಿಗೆ ಸಂಬರಗಿ ಪತ್ರ

    ಆನ್‌ಲೈನ್‌ನಲ್ಲಿ ಆಯ್ಕೆ ನೀಡಿ – ಹಲಾಲ್ ವಿರುದ್ಧ ಕತ್ತಿಗೆ ಸಂಬರಗಿ ಪತ್ರ

    ಬೆಂಗಳೂರು: ಹಲಾಲ್ ಮಾಂಸವನ್ನು ಖರೀದಿಸದಂತೆ ಹಿಂದೂ ಸಂಘಟನೆಗಳು ಅಭಿಯಾನ ಮಾಡುತ್ತಿರುವ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಗೆ ಪತ್ರ ಬರೆದಿದ್ದಾರೆ.

    ಬಹುಸಂಖ್ಯಾತ ಜನರು ಹಲಾಲ್ ಆಚರಣೆಯ ಅನುಯಾಯಿಗಳಲ್ಲದ ಕಾರಣ, ಇದು ಗ್ರಾಹಕರ ಹಕ್ಕುಗಳ ಉದ್ದೇಶಪೂರ್ವಕ ಉಲ್ಲಂಘನೆ ಮತ್ತು ಸಾರ್ವಜನಿಕರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುತ್ತದೆ. ಹೀಗಾಗಿ ಆನ್‌ಲೈನ್‌ನಲ್ಲಿ ಮಾಂಸ ಖರೀದಿಯ ಆಯ್ಕೆಯನ್ನು ಕೊಡಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಪತ್ರದಲ್ಲಿ ಏನಿದೆ?
    ಹಲಾಲ್ ಅಥವಾ ಶರಿಯಾ ಉತ್ಪನ್ನಗಳ ಹೆಸರಿನಲ್ಲಿ ಸಾಮಾನ್ಯ ಗ್ರಾಹಕರ ಮೇಲೆ ಒಂದು ನಿರ್ದಿಷ್ಟ ಧಾರ್ಮಿಕ ಆಚರಣೆಯನ್ನು ಬಲವಂತವಾಗಿ ಹೇರುವ ಪ್ರವೃತ್ತಿಯನ್ನು ನಾವು ಗಮನಿಸುತ್ತಿರುವುದು ಆತಂಕ ಮತ್ತು ಕಾಳಜಿಯ ವಿಷಯ. ಯಾವುದೇ ಸ್ಥಳೀಯ, ರಾಜ್ಯ ಅಥವಾ ರಾಷ್ಟ್ರೀಯ ಕಾನೂನಿನಲ್ಲಿ ಯಾವುದೇ ಆಧಾರವನ್ನು ಹೊಂದಿರದ ‘ಹಲಾಲ್’ ಪ್ರಮಾಣೀಕರಣ ಒಂದು ನಿರ್ದಿಷ್ಟ ಧರ್ಮದ ಧಾರ್ಮಿಕ ಆಚರಣೆಯಾಗಿದೆ. ಆದಾಗ್ಯೂ, ರೆಸ್ಟೋರೆಂಟ್‌ಗಳು, ಪ್ಯಾಕ್ ಮಾಡಿದ ಆಹಾರ ಮತ್ತು ಸೌಂದರ್ಯವರ್ಧಕಗಳಲ್ಲಿಯೂ ಕೂಡ ಈ ಧಾರ್ಮಿಕ ಆಚರಣೆಯನ್ನು ಹೇರಿಕೆ ಮಾಡಲಾಗುತ್ತಿದೆ. ಇದನ್ನೂ ಓದಿ: ಅಲ್ಲಾಹ್‍ನಿಗೆ ಅರ್ಪಿಸಿದ ಕೋಳಿ ಹಿಂದೂಗಳಿಗೆ ಯಾಕೆ?, ಮುಸ್ಲಿಮರು ವರ್ತನೆ ಸರಿಮಾಡಿಕೊಳ್ಳಬೇಕು: ರಘುಪತಿ ಭಟ್

    ಇದು ಧಾರ್ಮಿಕ ಪ್ರಚಾರದ ಹೊರತಾಗಿ, ಬಹುಪಾಲು ಜನಸಂಖ್ಯೆಯ ಗ್ರಾಹಕರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಮತ್ತೆ ಹೇಳಬೇಕಾಗಿಲ್ಲ. ಆನ್‌ಲೈನ್‌ನಲ್ಲಿ ಮಾಂಸ ಮತ್ತು ಇತರೇ ವಸ್ತುಗಳನ್ನು ಪೂರೈಕೆದಾರರಲ್ಲಿ ಈ ಹಲಾಲಿಕರಣ ಹೆಚ್ಚುತ್ತಿದೆ. ಮಾಂಸ ಮತ್ತು ಮಾಂಸಾಹಾರಿ ಉತ್ಪನ್ನಗಳನ್ನು ಮಾರಾಟ ಮಾಡುವ ಮತ್ತು ವಿತರಿಸುವ ವೆಬ್‌ಸೈಟ್‌ಗಳು ನಿರ್ದಿಷ್ಟವಾಗಿ ‘ಹಲಾಲ್ ಪ್ರಮಾಣೀಕೃತ’ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡುತ್ತವೆ. ಆದರೆ ಗ್ರಾಹಕರು ಧಾರ್ಮಿಕೇತರ ಉತ್ಪನ್ನಗಳು ಅಥವಾ ಸರ್ಕಾರದ ಪ್ರಮಾಣೀಕರಣವನ್ನು ಅನುಸರಿಸುವ ಉತ್ಪನ್ನಗಳನ್ನು ಸೇವಿಸುವ ಆಯ್ಕೆಯನ್ನು ನೀಡುವುದಿಲ್ಲ.

    ಬಹುಸಂಖ್ಯಾತ ಜನರು ಹಲಾಲ್ ಆಚರಣೆಯ ಅನುಯಾಯಿಗಳಲ್ಲದ ಕಾರಣ, ಇದು ಗ್ರಾಹಕರ ಹಕ್ಕುಗಳ ಉದ್ದೇಶಪೂರ್ವಕ ಉಲ್ಲಂಘನೆ ಮತ್ತು ಸಾರ್ವಜನಿಕರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುತ್ತದೆ. ಆನ್‌ಲೈನ್ ಮಾರಾಟಗಾರರು ಗ್ರಾಹಕ ಸಂರಕ್ಷಣಾ ಕಾಯ್ದೆಯ ಹಲವು ನಿಬಂಧನೆಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುತ್ತಿದ್ದಾರೆ. ಗ್ರಾಹಕರಿಗೆ ಇತರ ಆಯ್ಕೆಗಳಿಲ್ಲದ ಹಲಾಲ್ ಪ್ರಮಾಣೀಕರಣವು ‘unfair trade practice,'(ಅನ್‌ಫೇರ್ ಟ್ರೇಡ್ ಪ್ರ್ಯಾಕ್ಟೀಸ್) ಮತ್ತು ‘ಸೇವೆಯ ಕೊರತೆ’ ಎಂದು ನಾನು ನಿಮ್ಮ ಗಮನಸೆಳೆಯಲು ಬಯಸುತ್ತೇನೆ. ಇದನ್ನೂ ಓದಿ: ಅಕ್ರಮ ವೇಶ್ಯಾವಾಟಿಕೆಗೆ ಕುಮ್ಮಕ್ಕು – ಸಿಪಿಐ ಉದಯರವಿ ವಿರುದ್ಧ ಗೃಹ ಸಚಿವರಿಗೆ ದೂರು

    ಆದ್ದರಿಂದ ವೆಬ್‌ಸೈಟ್‌ಗಳಲ್ಲಿ ಹಲಾಲ್ ಅಲ್ಲದ ಮಾಂಸ/ಉತ್ಪನ್ನಗಳ ಪ್ರತ್ಯೇಕ ಆಯ್ಕೆಯನ್ನು ಹೊಂದಲು ಕಟ್ಟುನಿಟ್ಟಾದ ಆದೇಶಗಳನ್ನು ನೀಡುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ. ಬೆಂಗಳೂರಿನಲ್ಲಿ ಹಲಾಲ್ ಅಲ್ಲದ ಉತ್ಪನ್ನಗಳನ್ನು ಹೊಂದಿರದ ವೆಬ್‌ಸೈಟ್‌ಗಳ ಭಾಗಶಃ ಪಟ್ಟಿ ಇಲ್ಲಿದೆ. Freshtohome.com, Licious.in, Zappfresh.com, Bigbasket.com, TenderCuts.com, hibachi.com

    ನೀವು ಈ ಸಮಸ್ಯೆಯನ್ನು ಪರಿಹರಿಸುತ್ತೀರಿ ಮತ್ತು ಬಹುಸಂಖ್ಯಾತ ಹಿಂದೂ ನಾಗರಿಕರಿಗೆ ಸಹಾಯ ಮಾಡುತ್ತೀರಿ ಮತ್ತು ಆನ್‌ಲೈನ್‌ನಲ್ಲಿ ಮಾಂಸ ಖರೀದಿಯ ಆಯ್ಕೆಯನ್ನು ಹೊಂದಲು ಅವರಿಗೆ ಸಹಾಯ ಮಾಡುತ್ತೀರಿ ಎಂದು ನಾನು ಪ್ರಾಮಾಣಿಕವಾಗಿ ನಂಬಿದ್ದೇನೆ.

  • ಅದ್ದೂರಿ ಹುಟ್ಟುಹಬ್ಬ ಆಚರಿಸಿಕೊಂಡ ಉಮೇಶ್ ಕತ್ತಿ

    ಅದ್ದೂರಿ ಹುಟ್ಟುಹಬ್ಬ ಆಚರಿಸಿಕೊಂಡ ಉಮೇಶ್ ಕತ್ತಿ

    ಚಿಕ್ಕೋಡಿ: ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ತಮ್ಮ 62ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡರು.

    ಉಮೇಶ್ ಕತ್ತಿ ಅವರ ಹುಟ್ಟುಹಬ್ಬಕ್ಕೆ ಒಂದು ಲಕ್ಷಕ್ಕೂ ಹೆಚ್ಚಿನ ಜನ ಸಾಕ್ಷಿಯಾದದ್ದು ವಿಶೇಷವಾಗಿತ್ತು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ವಿಶ್ವರಾಜ ಭವನದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನ ಆಚರಿಸಿಕೊಂಡರು. ಉಮೇಶ್ ಕತ್ತಿ ಅವರ ಧರ್ಮ ಪತ್ನಿ, ಸಹೋದರ ರಮೇಶ್ ಕತ್ತಿ ಸೇರಿದಂತೆ ಕತ್ತಿ ಕುಟುಂಬಸ್ಥರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:  ಕಾಶ್ಮೀರದಲ್ಲಿದ್ದ ನನ್ನ ಪೂರ್ವಜರು ನೋವು ತಿಂದೆ ಕಾಶ್ಮೀರ ಬಿಟ್ಟರು : ಅನಂತ್ ನಾಗ್ ಬಿಚ್ಚಿಟ್ಟ ಕಾಶ್ಮೀರಿ ಕ್ರೌರ್ಯ 

    ಕ್ಷೇತ್ರದ ಸಾವಿರಾರು ಜನ ಪುಷ್ಪಗುಚ್ಛ ನೀಡಿ ಕತ್ತಿ ಅವರಿಗೆ ಶುಭಾಶಯ ಕೋರಿದರು. ಕತ್ತಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕ್ಷೇತ್ರದ ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಹಿಳೆಯರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚಿನ ಜನರು ಆಗಮಿಸಿ ಭೋಜನ ಸವಿದರು. ಅದರ ಜೊತೆಗೆ ಕಬ್ಬಿನ ಹಾಲಿನ ವ್ಯವಸ್ಥೆ ಕೂಡ ಮಾಡಲಾಗಿತ್ತು.

    ಮೈಸೂರಿನಿಂದ ಆಗಮಿಸಿದ್ದ ಕಲಾತಂಡಗಳಿಂದ ವಿವಿಧ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿ ಹುಕ್ಕೇರಿ ಮತಕ್ಷೇತ್ರದ ಜನರ ಆರ್ಶೀವಾದದಿಂದ 8 ಬಾರಿ ಉಮೇಶ್ ಕತ್ತಿ ಅವರು ಶಾಸಕರಾಗಿದ್ದಾರೆ. ಹೀಗಾಗಿ ಕ್ಷೇತ್ರದ ಜನರಿಗೆ ಭೋಜನ ವ್ಯವಸ್ಥೆ ಮಾಡುವುದರ ಜೊತೆಗೆ ಆರ್ಶೀವಾದ ಪಡೆಯುವುದಕ್ಕಾಗಿ ಈ ಅದ್ದೂರಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ದಿಢೀರ್ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ಕೊಟ್ಟು ಕುತೂಹಲ ಕೆರಳಿಸಿದ ವಿಜಯೇಂದ್ರ

  • ಸದನದಲ್ಲಿ ಸದ್ದು ಮಾಡಿದ ರೈತ ಮಹಿಳೆ ವಿಷ ಕುಡಿದ ಪ್ರಕರಣ

    ಸದನದಲ್ಲಿ ಸದ್ದು ಮಾಡಿದ ರೈತ ಮಹಿಳೆ ವಿಷ ಕುಡಿದ ಪ್ರಕರಣ

    ಬೆಂಗಳೂರು: ಮುಂಡರಗಿ ತಾಲೂಕಿನಲ್ಲಿ ರೈತ ಮಹಿಳೆಯರು ವಿಷ ಕುಡಿದ ಪ್ರಕರಣ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಅರಣ್ಯ ಇಲಾಖೆಯ ಕಿರುಕುಳದಿಂದ ವಿಷ ಕುಡಿದ ಪ್ರಕರಣವನ್ನು ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಶಾಸಕ ಎಚ್‍ಕೆ ಪಾಟೀಲ್ ಪ್ರಸ್ತಾಪ ಮಾಡಿ ಗಂಭೀರತೆಯನ್ನು ವಿವರಿಸಿದರು.

    ಇದೇ ವೇಳೆ ಎಚ್.ಕೆ. ಪಾಟೀಲ್ ಬೆಂಬಲಕ್ಕೆ ಮಾಜಿ ಸಿಎಂ ಯಡಿಯೂರಪ್ಪ ನಿಂತರು. ಇದೊಂದು ಗಂಭೀರವಾದ ಪ್ರಕರಣ. ಎಚ್.ಕೆ. ಪಾಟೀಲ್ ಹೇಳಿರುವುದು ಸತ್ಯವಾಗಿದೆ. ಸಿಎಂ ಆದಷ್ಟು ಬೇಗ ಕ್ರಮವಹಿಸಿ ಸಮಸ್ಯೆ ಕೊನೆಗಾಣಿಸಬೇಕು. ಸಮಸ್ಯೆ ಮುಂದುವರಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದಿಲ್ಲ. ಅಗತ್ಯ ಬಿದ್ದರೆ ಸದನ ಸಮಿತಿ ರಚಿಸಿ ಎಂದು ಯಡಿಯೂರಪ್ಪ ಆಗ್ರಹಿಸಿದರು.

    ಇನ್ನೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಧ್ವನಿಗೂಡಿಸಿ ಸಮಸ್ಯೆ ಪರಿಹಾರ ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯಾಧಿಕಾರಿಗಳ ಧೋರಣೆ ಸರಿಯಲ್ಲ. ಕೂಡಲೇ ಸಾಗುವಳಿ ಮಾಡಿದ ರೈತರ ಸಂಕಷ್ಟ ಪರಿಹಾರ ಮಾಡಲು ಆಗ್ರಹಿಸಿದರು.

    ಇದೇ ವೇಳೆ ಸ್ಪೀಕರ್ ಕಾಗೇರಿ ಸೇರಿದಂತೆ ಬಹುತೇಕ ಹಿರಿಯ ಸದಸ್ಯರಿಂದ ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ:  ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ಇನ್ನು ಅರಣ್ಯ ಸಚಿವ ಉಮೇಶ್ ಕತ್ತಿಗೆ ಸದನದಲ್ಲಿ ಆಡಳಿತ ಪಕ್ಷದ ಶಾಸಕ ಕಳಕಪ್ಪ ಬಂಡಿ ಟಕ್ಕರ್ ಕೊಟ್ಟರು. ಅರಣ್ಯ ಇಲಾಖೆ ಬ್ರಿಟಿಷರ ಪಳೆಯುಳಿಕೆಯಾಗಿದೆ. ಅರಣ್ಯ ಸಚಿವರಿಗೆ ಇಲಾಖೆಯ ಬಗ್ಗೆ ಮಾಹಿತಿ ಇಲ್ಲ, ಅವರು ಬಯಲು ಸೀಮೆಯವರು ಅಂತಾ ಕಳಕಪ್ಪ ಬಂಡಿ ಕಿಡಿಕಾರಿದರು.

    ಆಗ ಸ್ಪೀಕರ್ ಮಧ್ಯಪ್ರವೇಶ ಮಾಡಿ ಇಲ್ಲ, ಅವರು ಖಾನಾಪುರ ಕಡೆ ಅರಣ್ಯ ನೋಡಿದ್ದಾರೆ ಎಂದರು. ಅಂತಿಮವಾಗಿ ಪ್ರಕರಣದ ಬಗ್ಗೆ ಸದನಕ್ಕೆ ಸಚಿವ ಮಾಧುಸ್ವಾಮಿ ಉತ್ತರ ಕೊಟ್ಟರು. ರೈತರಿಗೆ ಸಮಸ್ಯೆ ಆಗುತ್ತಿದೆ ನಿಜ. ಅರಣ್ಯ ಕಾಯ್ದೆಗೆ ತಿದ್ದುಪಡಿ ಕಾಯ್ದೆ ತರುವ ಕೆಲಸ ಮಾಡುತ್ತೇವೆ. ಅರಣ್ಯ ಇಲಾಖೆ ಕಟಾವು ಮಾಡಿರುವ ರೈತರ ಬೆಳೆಗೆ ಪರಿಹಾರ ಕೊಡುತ್ತೇವೆ. ಸರ್ಕಾರ ಸೂಕ್ತ ಕ್ರಮ ಜರುಗಿಸಲಿದೆ ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದರು. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

  • ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಕೈ ಬಿಡಲಾಗಿದೆ: ಉಮೇಶ್ ಕತ್ತಿ

    ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಕೈ ಬಿಡಲಾಗಿದೆ: ಉಮೇಶ್ ಕತ್ತಿ

    ಚಿಕ್ಕೋಡಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಬಿಜೆಪಿ ಸರ್ಕಾರ ಕೈ ಬಿಟ್ಟಿದೆ ಎಂದು ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಸಿಎಂ ಜೊತೆಗೆ ಚರ್ಚಿಸಿ ರಾಜ್ಯದಲ್ಲಿ ಈ ಯೋಜನೆಯನ್ನು ಕೈ ಬಿಡಲಾಗಿದೆ. ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು ಎಂದರು. ಇದನ್ನೂ ಓದಿ: ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ ರಾಜ್ಯ ಬಜೆಟ್: ಕೆ.ಗೋಪಾಲಯ್ಯ

    ಸಿಎಂ ಬಸವರಾಜ ಬೊಮ್ಮಾಯಿಯ ಚೊಚ್ಚಲ ಬಜೆಟ್ ಕುರಿತು ಪ್ರಶಂಸೆ ವ್ಯಕ್ತಪಡಿಸಿದ ಉಮೇಶ ಕತ್ತಿ, ಬಜೆಟ್‍ನಲ್ಲಿ ಕೃಷಿಗೆ 8 ಸಾವಿರ ಕೋಟಿ ರೂ. ನೀಡಿ ರೈತ ಪರ ಬಜೆಟ್ ಮಂಡಿಸಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕರು ಬೋಗಸ್ ಬಜೆಟ್ ಎಂದಿದ್ದಾರೆ. ರಾಜ್ಯದಲ್ಲಿ ಜನ ಪರ ಬಜೆಟ್ ಹಾಗೂ ರಾಜ್ಯಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸುವ ಬಜೆಟ್‍ನ್ನು ಸಿಎಂ ಮಂಡಿಸಿದ್ದಾರೆ. ನೀರಾವರಿ ಯೋಜನೆಗೆ 25 ಸಾವಿರ ಕೋಟಿ ರೂ. ಬಜೆಟ್‍ನಲ್ಲಿ ಮೀಸಲಿಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ: ಗಗನಕ್ಕೇರಿದ ಅಡುಗೆ ಎಣ್ಣೆ ದರ

    ಹಿಡಕಲ್ ಜಲಾಶಯ ಅಭಿವೃದ್ದಿ ಪಡಿಸಲು 148 ಕೋಟಿ ರೂ. ನೀಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಾಲ ಮಾಡಿಲ್ಲ ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಲ ಮಾಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಮಾತ್ರ ಬಿಜೆಪಿ ಅವಧಿಯಲ್ಲಿ ಸಾಲ ಮಾಡಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

  • ಮಂತ್ರಿಮಂಡಲದ ಮೇಲೆ ಬೊಮ್ಮಾಯಿ ನಿಯಂತ್ರಣ ಸಾಧಿಸಬೇಕು: ಸತೀಶ್ ಜಾರಕಿಹೊಳಿ

    ಮಂತ್ರಿಮಂಡಲದ ಮೇಲೆ ಬೊಮ್ಮಾಯಿ ನಿಯಂತ್ರಣ ಸಾಧಿಸಬೇಕು: ಸತೀಶ್ ಜಾರಕಿಹೊಳಿ

    ಬೆಳಗಾವಿ: ಕ್ಯಾಬಿನೆಟ್ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲು ನಿಯಂತ್ರಣ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಎಂದರೆ ಎಲ್ಲವೂ ಅವರ ನಿಯಂತ್ರಣದಲ್ಲಿ ಇರಬೇಕು. ಆದರೆ ಬೊಮ್ಮಾಯಿ ಸರ್ಕಾರದ ಮಂತ್ರಿಗಳು ಏನೇನೋ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಿಎಂ ಮಾತನ್ನು ಮೀರಿ ಯಾರೂ ಹೇಳಿಕೆ ಕೊಡಬಾರದು ಎಂದು ಸಲಹೆ ನೀಡಿದರು.

    ಜಾರಕಿಹೊಳಿ ಬ್ರದರ್ಸ್ ವಿರುದ್ಧ ಸಚಿವ ಉಮೇಶ್ ಕತ್ತಿ ಮತ್ತು ಅವರ ತಂಡ ಸಿಎಂಗೆ ದೂರು ವಿಚಾರವಾಗಿ ಮಾತನಾಡಿ, ಅವರ ಪಕ್ಷ ಇದೆ. ಎರಡು ಗುಂಪು ಇದೆ. ಆ ವಿಷಯದ ಕುರಿತಾಗಿ ಸಿಎಂ ಅವರು ಉತ್ತರ ಹೇಳಬೇಕು. ಅದರ ಬಗ್ಗೆ ನಾವು ಹೇಳೋಕೆ ಆಗಲ್ಲ. ನಾನು ಮಾಧ್ಯಮಗಳಲ್ಲಿ ಗಮನಿಸಿದೆ ಅದು ಅವರ ಪಕ್ಷಕ್ಕೆ ಸಂಬಂಧಿಸಿದ್ದು ಎಂದು ತಿಳಿಸಿದ ಅವರು, ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ಗೆ ಬರುವುದು ಜಗತ್ತಿನ ಎಂಟನೇ ಅದ್ಭುತ. ಅವರು ಅಲ್ಲೇ ಇದ್ದಾರೆ ಅಲ್ಲೇ ಇರಲಿ ಎಂದು ವ್ಯಂಗ್ಯವಾಡಿದರು.

    satish jarkiholi

    ಇದೇ ವೇಳೆ ಕತ್ತಿ ಸಹೋದರರು ಕಾಂಗ್ರೆಸ್‍ಗೆ ಬರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಮೇಶ್ ಕತ್ತಿ, ಉಮೇಶ್ ಕತ್ತಿ ಅವರೇ ಇದಕ್ಕೆ ಉತ್ತರಿಸಬೇಕು. ಈ ವರೆಗೂ ನಮ್ಮ ಗಮನಕ್ಕೆ ಬಂದಿಲ್ಲ ಹಾಗೂ ಯಾರೂ ನಮ್ಮನ್ನು ಕೇಳಿಲ್ಲ ಎಂದ ಅವರು, ಇನ್ನೂ ಹೊಗೆ ಏನೂ ಆಡಿಲ್ಲ. ಇದಕ್ಕೆ ಒಂದು ವರ್ಷ ಕಾಯಬೇಕು. ಆಗ ಡೋರ್ ಓಪನ್ ಇರುತ್ತದೆ. ಈಗ ಡೋರ್ ಕ್ಲೋಸ್ ಇದೆ. ಆ ಸಂದರ್ಭದಲ್ಲಿ ಫ್ಲೈಟ್, ಟ್ರೇನ್‍ನಲ್ಲಿ ಸೀಟ್ ಬ್ಲಾಕ್ ಮಾಡಿದ ಹಾಗೇ ಬ್ಲಾಕ್ ಮಾಡೋದು ಅಷ್ಟೇ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಸೋಮವಾರದಿಂದ ಶಾಲೆ ಆರಂಭ: ಬಿ.ಸಿ ನಾಗೇಶ್

    ಪಂಚರಾಜ್ಯ ಚುನಾವಣೆ ಅದರಲ್ಲೂ ಯುಪಿ ಚುನಾವಣೆ ಇಡೀ ದೇಶದ ಮೇಲೆ ಎಫೆಕ್ಟ್ ಆಗುತ್ತದೆ ಎಂದ ಅವರು, ಪಕ್ಷಾಂತರವಾಗುವುದಕ್ಕೆ ಇನ್ನು ಒಂದು ವರ್ಷ ಕಾಯಬೇಕು. ಈ ಬಜೆಟ್ ಅಲ್ಲ ಮುಂದಿನ ಬಜೆಟ್‍ಗೆ ಪಕ್ಷಾಂತರ ಪರ್ವ ಶುರು ಆಗುತ್ತದೆ. ಮುಂದಿನ ಫೆಬ್ರವರಿ 1 ರಂದು ಹೇಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ನೈಟ್ ಕರ್ಫ್ಯೂ ರದ್ದು – ಸಿನಿಮಾಗೆ ಶೇ.50 ರಷ್ಟು ನಿರ್ಬಂಧ ಮುಂದುವರಿಕೆ

    bjp - congress

    ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್‍ಗೆ ಯಾರೂ ಸೇರುತ್ತಾರೆ ಎನ್ನುವುದು ಗೊತ್ತಿಲ್ಲ ಎಂದ ಅವರು, ಮುಂದಿನ ಮಾರ್ಚ್‍ನಲ್ಲಿ ಬಜೆಟ್ ಮೇಲೆ ಆ ಪರ್ವ ಶುರುವಾಗುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ 10ರಿಂದ 12 ಕ್ಷೇತ್ರ ಗೆಲ್ಲುವ ಟಾರ್ಗೆಟ್ ಮಾಡಿಕೊಂಡಿದ್ದೇವೆ. ಬೆಳಗಾವಿಯಲ್ಲಿ 10 ರಿಂದ 12 ಕ್ಷೇತ್ರ ಗೆದ್ದರೆ ರಾಜ್ಯದಲ್ಲಿ ಸರ್ಕಾರ ರಚಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಪಾಕಿಸ್ತಾನ‌, ಬಾಂಗ್ಲಾದೇಶದ ಉಸ್ತುವಾರಿ ನೀಡಲು ಆಗುವುದಿಲ್ಲ: ಸಚಿವ ಉಮೇಶ್‌ ಕತ್ತಿ

    ಪಾಕಿಸ್ತಾನ‌, ಬಾಂಗ್ಲಾದೇಶದ ಉಸ್ತುವಾರಿ ನೀಡಲು ಆಗುವುದಿಲ್ಲ: ಸಚಿವ ಉಮೇಶ್‌ ಕತ್ತಿ

    ಬೆಳಗಾವಿ: ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿರುವ ಸಚಿವ ಉಮೇಶ್‌ ಕತ್ತಿ ಅವರು, ಕೊಟ್ಟಿರುವ ಜವಾಬ್ದಾರಿಯನ್ನು ಸಂತೋಷದಿಂದ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

    ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಲ್ಲೋಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಉಸ್ತುವಾರಿ ಸಚಿವ ಸ್ಥಾನ ನೀಡಲು ಆಗುವುದಿಲ್ಲ. ವಿಜಯಪುರದ ಉಸ್ತುವಾರಿ ವಹಿಸಿರುವುದು ತೃಪ್ತಿ ತಂದಿದೆ. ಜಿಲ್ಲೆಗೆ ಹೋಗಿ ಕೊಟ್ಟಿರುವ ಉಸ್ತುವಾರಿ ಸಚಿವ ಸ್ಥಾನವನ್ನು ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೈ ತಪ್ಪಿದ್ದಕ್ಕೆ ಅಸಮಾಧಾನ ಇಲ್ಲ, ತುಮಕೂರು ಸಿಕ್ಕಿದ್ರೆ ಖುಷಿಯಾಗ್ತಿತ್ತು: ಮಾಧುಸ್ವಾಮಿ

    UMESH KATTI

    ಸಂಪುಟ ಪುನಾರಚನೆ ಕುರಿತು ಮಾತನಾಡಿದ ಅವರು, ಸಂಪುಟ ಪುನಾರಚನೆ ಮಾಧ್ಯಮಗಳ ಸೃಷ್ಟಿ. ಪಂಚರಾಜ್ಯ ಚುನಾವಣೆ ಮುಗಿದ ಮೇಲೆ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹಿರಿಯ ಸಚಿವರಿಗೆ ಕೊಕ್ ಕೊಡುವುದರ ಬಗ್ಗೆ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ. ಹೈಕಮಾಂಡ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ಸಿಎಂ ಬೊಮ್ಮಾಯಿ ಅವರು ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಿ. ದೇವರು ಅವರಿಗೆ ಒಳ್ಳೆಯ ಆರೋಗ್ಯ ನೀಡಲಿ ಹಾರೈಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು – ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!

    ಜಾರಕಿಹೊಳಿ ಸಹೋದರರ ಬಿಟ್ಟು ಸಭೆ ನಡೆಸಿದ ಬಗ್ಗೆ ಪ್ರಕ್ರಿಯಿಸಿ, ಪರಿಷತ್ ಸೋಲಿನ‌ ಪರಾಮರ್ಶೆ ಕುರಿತು ಸಭೆ ಕರೆಯಲಾಗಿತ್ತು. ಅವರು ಯಾಕೆ ಬಂದಿಲ್ಲ ಎಂದು ನನಗೆ ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ತಿಳಿಸಿದ್ದಾರೆ.

  • ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ

    ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ

    ಬೆಳಗಾವಿ: ಉದ್ದೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಸಚಿವ ಉಮೇಶ್ ಕತ್ತಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿರುಗೇಟು ನೀಡಿದರು.

    ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ನಡೆದ ಗೌಪ್ಯ ಸಭೆ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಬೆಳಗಾವಿಯಲ್ಲಿ ನಡೆದ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ. ಹೀಗಾಗಿ ಈ ಸಭೆಗೆ ಹೆಚ್ಚಿನ ಮಹತ್ವ ಬೇಡ ಎಂದು ತಿಳಿಸಿದರು.

    ಯಾರನ್ನು ಹೊರಗಿಟ್ಟು ಈ ಸಭೆಯನ್ನು ಮಾಡಲಾಗಿದೆ ಎನ್ನುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಯಾರು ಎಷ್ಟು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂಬುದು ಪಕ್ಷದ ವರಿಷ್ಠರಿಗೆ ಗೊತ್ತಿದೆ. ದಿನಕ್ಕೊಬ್ಬರಂತೆ ಸಭೆ ನಡೆಸುತ್ತ ಹೋದರೆ ಅದಕ್ಕೆಲ್ಲ ಉತ್ತರಿಸುವ ಗೋಜಿಗೆ ಹೋಗಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

    2008ರಿಂದ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಕೆಲಸ ಮಾಡುತ್ತೇವೆ. ಈಗ ನಡೆದಿರುವ ವಿದ್ಯಮಾನಗಳನ್ನು ಪಕ್ಷದ ವರಿಷ್ಠರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

  • ಮಂತ್ರಿ ಮಂಡಲದ ಬಗ್ಗೆ ಚರ್ಚಿಸಿಲ್ಲ : ಶಾಸಕ ಅಭಯ್ ಪಾಟೀಲ್

    ಮಂತ್ರಿ ಮಂಡಲದ ಬಗ್ಗೆ ಚರ್ಚಿಸಿಲ್ಲ : ಶಾಸಕ ಅಭಯ್ ಪಾಟೀಲ್

    ಬೆಳಗಾವಿ: ಸಭೆಯಲ್ಲಿ ಮಂತ್ರಿ ಮಂಡಲದ ಬಗ್ಗೆ ಏನೂ ಚರ್ಚೆ ಮಾಡಿಲ್ಲ, ಬದಲಿಗೆ ಬಜೆಟ್ ವಿಚಾರವನ್ನು ಚರ್ಚಿಸಲಾಗಿದೆ ಎಂದು ಶಾಸಕ ಅಭಯ ಪಾಟೀಲ್ ಹೇಳಿದರು.

    ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ಬೆಳಗಾವಿ ಬಿಜೆಪಿ ನಾಯಕರ ಗೌಪ್ಯ ಸಭೆ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಉಮೇಶ್ ಕತ್ತಿ ಹಾಗೂ ಜೊಲ್ಲೆ ಅವರು ಮಂತ್ರಿ ಇರುವುದರಿಂದ ನಮ್ಮ ಜಿಲ್ಲೆಯ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದ್ದೇವೆ. ಈ ಬಗ್ಗೆ ಸಚಿವ ಉಮೇಶ್ ಕತ್ತಿ ಸಿಎಂ ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

    ಸಭೆಯಲ್ಲಿ ಸಂಪುಟ ವಿಸ್ತರಣೆ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಮಧ್ಯಾಹ್ನ 2 ಗಂಟೆಗೆ ಸಭೆ ಕರೆದಿದ್ದರು. ನಾನು 5 ಗಂಟೆಗೆ ಹೋಗಿದ್ದೆ. ನಾನು ಹೋದಾಗ ಚರ್ಚೆ ಎಲ್ಲಾ ಮುಗಿದಿತ್ತು. ಹೀಗಾಗಿ ಮೊದಲು ಸಭೆಯಲ್ಲಿ ಏನು ಚರ್ಚೆ ಆಗಿದೆ ಎನ್ನುವುದರ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಕೊರೊನಾ ಹರಡದಂತೆ ತಡೆಯಲು ನಿಗಾ ವಹಿಸಿ: ಕೆ.ಎಸ್.ಈಶ್ವರಪ್ಪ

    ಬೆಳಗಾವಿ ಬಿಜೆಪಿಯಲ್ಲಿ ಗುಂಪುಗಾರಿಕೆ ನಡೀತಿದೆ ಎಂಬ ವಿಚಾರಕ್ಕೆ ಮಾತನಾಡಿ, ಮಂತ್ರಿ ಮನೆಗೆ ಹೋಗೋದು ಗುಂಪುಗಾರಿಕೆಯಾ? ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲಾ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: NDRF ಟ್ವಿಟ್ಟರ್ ಖಾತೆ ಹ್ಯಾಕ್

  • ಬಿಜೆಪಿಯವರಿಂದಲೇ ಹೆಚ್ಚು ಕೊರೊನಾ ನಿಯಮ ಉಲ್ಲಂಘನೆ : ಸಿದ್ದು

    ಬಿಜೆಪಿಯವರಿಂದಲೇ ಹೆಚ್ಚು ಕೊರೊನಾ ನಿಯಮ ಉಲ್ಲಂಘನೆ : ಸಿದ್ದು

    – ಪದೇ ಪದೇ ವೀಕೆಂಡ್ ಲಾಕ್‍ಡೌನ್ ಮಾಡುವುದು ಸರಿಯಲ್ಲ

    ಮಂಡ್ಯ: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕೊರೊನಾ ನಿಯಮಗಳು ಅತೀ ಹೆಚ್ಚು ಉಲ್ಲಂಘನೆ ಆಗಿದ್ದರೆ ಅದು ಬಿಜೆಪಿ ಅವರಿಂದನೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

    ಮಂಡ್ಯದ ಗೌಡಹಳ್ಳಿ ಗೇಟ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಮಗಳನ್ನು ಅತೀ ಹೆಚ್ಚು ಉಲ್ಲಂಘನೆ ಮಾಡುತ್ತಿರುವುದು ಬಿಜೆಪಿ ಅವರು. ಬಿಜೆಪಿ ಅವರದ್ದು, ಡಬಲ್ ಸ್ಟ್ಯಾಂಡ್.  ಹೇಳುವುದೇ ಒಂದು ಮಾಡುವುದು ಇನ್ನೊಂದು ಎಂದು ಹೇಳಿದರು. ಇದನ್ನೂ ಓದಿ:  ಮಹಿಳಾ ಉದ್ದೇಶಿತ ಆಯವ್ಯಯದಡಿ ಮುದ್ರಣ, ವಿದ್ಯುನ್ಮಾನ ಮಾಧ್ಯಮ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ

    ಉಮೇಶ್ ಕತ್ತಿ ವಿಚಾರವಾಗಿ ಮಾತನಾಡಿದ ಅವರು, ಅವನ್ಯಾರೋ ಕತ್ತಿ ಇದಾನಲ್ಲಾ ಅವನು ಮಾಸ್ಕ್ ಹಾಕೋದೇ ಇಲ್ಲ. ಕೇಳಿದ್ರೆ ಅದು ಅವರವರ ಇಷ್ಟ ಅಂತಾನೇ. ಮಂತ್ರಿಯಾದವನು ಹೀಗೆ ಹೇಳ್ತಾನೆ ಅಂದ್ರೆ, ಆತ ಮಂತ್ರಿ ಆಗಲು ಲಾಯಕ್ಕಾ? ಬೇರೆಯವರು ಮಾಸ್ಕ್ ಹಾಕದೇ ಇದ್ದರೆ ಫೈನ್ ಹಾಕ್ತಾರೆ, ಮಂತ್ರಿಗೆ ಯಾಕ್ ಫೈನ್ ಹಾಕಿಲ್ಲ ಎಂದು ಕಿಡಿಕಾರಿದರು.

    ವೀಕೆಂಡ್ ಲಾಕ್‍ಡೌನ್ ಕುರಿತು ಮಾತನಾಡಿದ ಅವರು, ವೀಕೆಂಡ್ ಕರ್ಫ್ಯೂನಿಂದ ಕೊರೊನಾ ತಡೆಯಲು ಅಸಾಧ್ಯ. ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಕ್ಸಿನ್ ಮಾಡಲಿ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಅವುಗಳು ಸರಿಯಾಗಿ ಪಾಲನೆಯಾಗುವಂತೆ ಕ್ರಮವಹಿಸಬೇಕು. ಅದನ್ನು ಬಿಟ್ಟು ಹೀಗೆ ವೀಕೆಂಡ್ ಲಾಕ್‍ಡೌನ್ ಎಂದು ಪದೇ ಪದೇ ಹೇಳುವುದು ಸರಿಯಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕರು!