Tag: ಉಮೇಶ್ ಕತ್ತಿ

  • ನಾನು ಮಾಸ್ಕ್ ಹಾಕಲ್ಲ : ಸಚಿವ ಉಮೇಶ್ ಕತ್ತಿ

    ನಾನು ಮಾಸ್ಕ್ ಹಾಕಲ್ಲ : ಸಚಿವ ಉಮೇಶ್ ಕತ್ತಿ

    ಬೆಳಗಾವಿ: ದಿನೇ ದಿನೇ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರ ಮಾರ್ಗಸೂಚಿಯನ್ನು ಪಾಲಿಸದಿದ್ದರೆ, ಸಾಮಾನ್ಯರಿಗೆ ದಂಡವನ್ನು ವಿಧಿಸುತ್ತಿದೆ. ಆದರೆ ಜನ ಸಾಮಾನ್ಯರಿಗೆ ಸರ್ಕಾರದ ಮಾರ್ಗಸೂಚಿಯನ್ನು ಮನವರಿಕೆ ಮಾಡುವ ಸಚಿವರೇ ನಾನು ಮಾಸ್ಕ್ ಧರಿಸಲ್ಲ ಎಂದು ಉಡಾಫೆ ಉತ್ತರ ನೀಡಿ ಟೀಕೆಗೆ ಗುರಿಯಾಗಿದ್ದಾರೆ.

    ಸಚಿವ ಉಮೇಶ್ ಕತ್ತಿ ಅವರು ಅಥಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸಚಿವರು ಸೇರಿ ಮಾಜಿ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ್ ಪಾಟೀಲ್, ಶಾಸಕ ಕುಮಟಳ್ಳಿ ಮಾಸ್ಕ್ ಧರಿಸಿರಲಿಲ್ಲ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಸಚಿವ ಉಮೇಶ್‍ಕತ್ತಿ ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಹಾಕೋದು ನನಗೆ ಬಿಟ್ಟಿದ್ದು. ನನಗೆ ಮಾಸ್ಕ್ ಹಾಕಬೇಕು ಎಂದು ಅನ್ನಿಸಿಲ್ಲ. ಹಾಗಾಗಿ ನಾನು ಮಾಸ್ಕ್ ಹಾಕಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕ್ಯೂನಲ್ಲಿ ನಿಂತೆ 16 ಸಾವಿರ ರೂಪಾಯಿ ಸಂಪಾದಿಸುತ್ತಾನೆ

    ನಿನ್ನೆ ರಾತ್ರಿ ಪ್ರಧಾನಿಮಂತ್ರಿ ತಿಳಿಸಿದ್ದಾರೆ. ಯಾವುದೇ ನಿರ್ಬಂಧ ವಿಧಿಸಲ್ಲ. ತಮ್ಮ ಸ್ವಂತ ನಿರ್ಧಾರವನ್ನು ತೆಗೆದುಕೊಂಡು ಮಾಸ್ಕ್ ಹಾಕಿಕೊಳ್ಳಬೇಕು. ಅದು ಅವರಿಗೆ ಬಿಟ್ಟಿದ್ದು. ಇದರಿಂದಾಗಿ ನಾನು ಮಾಸ್ಕ್ ಹಾಕಲ್ಲ ಎಂದು ಹೇಳಿದರು. ಲಸಿಕೆ ವಿಚಾರವಾಗಿ ಯಾರಿಗೂ ಒತ್ತಾಯ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ಗೆ ತಿಳಿಸಿತ್ತು. ಇದನ್ನೂ ಓದಿ:  ದೂಧ್ ಸಾಗರ್ ಬಳಿ ಹಳಿ ತಪ್ಪಿದ ಅಮರಾವತಿ ಎಕ್ಸ್‌ಪ್ರೆಸ್‌ ರೈಲು

  • ಲಾಕ್‍ಡೌನ್ ಮಾಡದೇ ಇದ್ರೆ ಸರ್ಕಾರದ ಕ್ರಮವನ್ನ ಸ್ವಾಗತಿಸುತ್ತೇನೆ: ಉಮೇಶ್ ಕತ್ತಿ

    ಲಾಕ್‍ಡೌನ್ ಮಾಡದೇ ಇದ್ರೆ ಸರ್ಕಾರದ ಕ್ರಮವನ್ನ ಸ್ವಾಗತಿಸುತ್ತೇನೆ: ಉಮೇಶ್ ಕತ್ತಿ

    ಚಿಕ್ಕೋಡಿ: ಕೊರೊನಾ ನಿಯಂತ್ರಿಸಲು ಸರ್ಕಾರ ಲಾಕ್‍ಡೌನ್ ಮಾಡದೆ ಇದ್ರೆ ಸ್ವಾಗತಾರ್ಹ ಎಂದು ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

    ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ವಿಕಲಚೇತನರಿಗೆ ಟ್ರೈಸಿಕಲ್ ವಾಹನ ವಿತರಿಸಿ ಮಾತನಾಡಿದ ಅವರು, ಲಾಕ್‍ಡೌನ್ ಮಾಡುವ ಬದಲು ಜನರೇ ಮುನ್ನೆಚ್ಚರಿಕೆ ಕ್ರಮ ಪಾಲಿಸಬೇಕು. ಕೊರೊನಾ ಮುನ್ನೆಚ್ಚರಿಕೆ ಪಾಲಿಸಿದರೆ ಲಾಕ್‍ಡೌನ್ ಅವಶ್ಯಕತೆ ಇಲ್ಲ. ನೂರಾರು ಜನ ಸೇರಿ ಜಾತ್ರೆ, ಹಬ್ಬ ಮಾಡುವುದನ್ನು ನಿಲ್ಲಿಸಬೇಕು. ಮಾಸ್ಕ್ ಸ್ಯಾನಿಟೈಸರ್ ಬಳಸಿ ಮುಂಜಾಗೃತೆಯಿಂದ ರಾಜ್ಯದ ಜನ ಇದ್ರೆ ಸರ್ಕಾರಕ್ಕೆ ಲಾಕ್‍ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!

    ಜೆ.ಜೆ.ಎಂ ಯೋಜನೆ ಅಡಿಯಲ್ಲಿ ಹುಕ್ಕೇರಿ ತಾಲೂಕಿನ ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಕೊಡುವ ಯೋಜನೆ ಜಾರಿಯಲ್ಲಿದೆ. ಶೀಘ್ರದಲ್ಲಿ ಹುಕ್ಕೇರಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ 24 ಗಂಟೆ ಕುಡಿಯುವ ನೀರು ದೊರೆಯಲಿದೆ. ಜನರಿಗೆ ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛ ವಾತಾವರಣ ಕಲ್ಪಿಸುವುದು ನಮ್ಮ ಗುರಿ ಎಂದು ಹೇಳಿದರು.

    ನಾನು ಹುಕ್ಕೇರಿ ಭಾಗದ ಶಾಸಕನಾಗಿ ಕ್ಷೇತ್ರದ ಚಿತ್ರಣ ಬದಲು ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ರೆ ಹುಕ್ಕೇರಿ ಮಾದರಿ ವಿಧಾನಸಭಾ ಕ್ಷೇತ್ರ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: 12 ಕೋಟಿ ರೂ. ಬಂಪರ್ ಲಾಟರಿ ಗೆದ್ದ ಪೇಂಟರ್!

    ಈ ವೇಳೆ ಹುಕ್ಕೇರಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ತಹಶಿಲ್ದಾರರು ಸೇರಿದಂತೆ ತಾಲೂಕಾಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

  • ಮುಂಬರುವ ಬಜೆಟ್‍ನಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತ ಮಾಡ್ಬೇಡಿ: ಉಪ ಸಂರಕ್ಷಣಾಧಿಕಾರಿ ಮನವಿ

    ಮುಂಬರುವ ಬಜೆಟ್‍ನಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತ ಮಾಡ್ಬೇಡಿ: ಉಪ ಸಂರಕ್ಷಣಾಧಿಕಾರಿ ಮನವಿ

    ಚಿಕ್ಕೋಡಿ(ಬೆಳಗಾವಿ): ಮುಂಬರುವ ಬಜೆಟ್ ನಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತವಾಗದಂತೆ ಕ್ರಮ ವಹಿಸುವಂತೆ ಬೆಳಗಾವಿ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ ಬಾನು ಜಿಪಿ ಅರಣ್ಯ ಸಚಿವ ಉಮೇಶ್ ಕತ್ತಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ 8 ವರ್ಷಗಳಿಂದ ಬಜೆಟ್ ನಲ್ಲಿ ಅರಣ್ಯ ಇಲಾಖೆಗೆ ನೀಡುವ ಅನುದಾನದಲ್ಲಿ ಶೇ.8 ರಿಂದ 10 ರಷ್ಟು ಕಡಿತ ಮಾಡುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಯಾವುದೇ ಕಡಿತವಾಗದಂತೆ ಕ್ರಮ ವಹಿಸುವಂತೆ ಮನವಿ ಮಾಡಿಕೊಂಡರು.

    ನಗರ ಪ್ರದೇಶಗಳಲ್ಲಿ ಹಸಿರುಕರಣ ಮಾಡಲು ಸಾಕಷ್ಟು ಹಣ ಮೀಸಲಿಟ್ಟಿದ್ದರು. ಆ ಹಣದ ಸದ್ಬಳಕೆ ಆಗುತ್ತಿಲ್ಲ. ಮಹಾ ನಗರ ಸಭೆ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್‍ಗಳಲ್ಲಿ ಅರಣ್ಯೀಕರಣಕ್ಕೆ ಮೀಸಲಿಟ್ಟಿರುವ ಹಣ ಪೋಲಾಗುತ್ತಿದೆ. ನಗರದಲ್ಲಿ ಅರಣ್ಯ ಬೆಳೆಸುವ ಬದಲು ಆ ಹಣದಲ್ಲಿ ಕಾಂಕ್ರಿಟ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಇವೆಲ್ಲವುಗಳಿಗೂ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಇದನ್ನೂ ಓದಿ: ಮದುವೆ ಮನೆಯಲ್ಲಿ ಕೊರಗಜ್ಜನಿಗೆ ಅವಮಾನ – ಇಬ್ಬರು ಅರೆಸ್ಟ್, ಮದುಮಗ ನಾಪತ್ತೆ

    ಇದಕ್ಕೆ ಸ್ಪಂದನೆ ನೀಡಿದ ಸಚಿವ ಉಮೇಶ್ ಕತ್ತಿ, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ. ಈ ಬಾರಿಯ ಬಜೆಟ್ ನಲ್ಲಿ ಅರಣ್ಯ ಇಲಾಖೆಯ ಅನುದಾನದ ಪಾಲಿನಲ್ಲಿ ಯಾವುದೇ ಕಡಿತಗೊಳಿಸದಂತೆ ಮನವಿ ಮಾಡುತ್ತೇನೆ. ಹಾಗೂ ನಗರ ಪ್ರದೇಶಗಳಲ್ಲಿನ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

    ಸಭೆಯಲ್ಲಿ ಅರಣ್ಯ ಇಲಾಖೆಯ ಮುಖ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ್ ಸಾಲಿಮಠ, ವಲಯ ಅರಣ್ಯಾಧಿಕಾರಿ ಪ್ರಸನ್ನ ಬೆಲ್ಲದ್, ಉಪ ವಲಯ ಅರಣ್ಯಾಧಿಕಾರಿ ಗಜಾನನ ಪಾಟೀಲ್, ಪ್ರದೀಪ್ ಮಗದುಮ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • 100 ರೇಷನ್ ಕಾರ್ಡ್ ತಾಂಡಾಗಳಿಗೊಂದು ನ್ಯಾಯ ಬೆಲೆ ಅಂಗಡಿ

    100 ರೇಷನ್ ಕಾರ್ಡ್ ತಾಂಡಾಗಳಿಗೊಂದು ನ್ಯಾಯ ಬೆಲೆ ಅಂಗಡಿ

    ಬೆಳಗಾವಿ: 100 ರೇಷನ್ ಕಾರ್ಡ್ ಹೊಂದಿರುವ ತಾಂಡಾಗಳಿಗೆ ಪ್ರತ್ಯೇಕ ನ್ಯಾಯ ಬೆಲೆ ಅಂಗಡಿ ಕೊಡಲು ಸರ್ಕಾರ ಸಿದ್ಧ ಎಂದು ವಿಧಾನಪರಿಷತ್ ಅಧಿವೇಶನದಲ್ಲಿ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

    ನಿಯಮ 330ರ ಅಡಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ವಿಷಯ ಪ್ರಸ್ತಾಪ ಮಾಡಿದರು. 100 ರೇಷನ್ ಕಾರ್ಡ್ ಹೊಂದಿರುವ ತಾಂಡಾಗಳಿಗೆ ಒಂದು ನ್ಯಾಯಬೆಲೆ ಅಂಗಡಿ ಮಂಜೂರು ಮಾಡಬೇಕು. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಯೋಜನೆ ಘೋಷಣೆ ಮಾಡಿದ್ದರು. ಯೋಜನೆ ಘೋಷಣೆ ಮಾಡಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ಕೂಡಲೇ ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು. ತಾಂಡಾಗಳಲ್ಲಿನ ಜನರ ದೌರ್ಜನ್ಯ ತಡೆಗೆ ಸಮಿತಿ ಇದ್ದರೂ ದೌರ್ಜನ್ಯ ನಿಂತಿಲ್ಲ. ಈ ಬಗ್ಗೆ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಅಂಜಲಿ ಪಾದಯಾತ್ರೆಗೆ ಸಿದ್ದರಾಮಯ್ಯ ಸಾಥ್ – ಪೋಲಿಸರಿಗೆ ಎಚ್ಚರಿಕೆ

    ಇದಕ್ಕೆ ಉತ್ತರ ನೀಡಿದ ಸಚಿವ ಉಮೇಶ್ ಕತ್ತಿ, 100 ರೇಷನ್ ಕಾರ್ಡ್ ಇರುವ ತಾಂಡಾಗಳಿಗೆ ಒಂದು ನ್ಯಾಯ ಬೆಲೆ ಅಂಗಡಿ ನೀಡಲು ಆದೇಶ ಹೊರಡಿಸಲಾಗಿದೆ. ಈಗಾಗಲೇ ರಾಜ್ಯಾದ್ಯಂತ 375 ನ್ಯಾಯ ಬೆಲೆ ಅಂಗಡಿ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಜಿಲ್ಲಾ ಆಹಾರ ಇಲಾಖೆಯ ಜಿಲ್ಲೆಯ ಅಧಿಕಾರಿಗೆ ಅಧಿಕಾರ ನೀಡಲಾಗಿದೆ. ನ್ಯಾಯಬೆಲೆ ಅಂಗಡಿ ಬೇಕು ಎಂದು ಅರ್ಜಿ ಸಲ್ಲಿಸಿದರೆ ನ್ಯಾಯಬೆಲೆ ಅಂಗಡಿ ಪ್ರಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಉಭಯ ಸದನಗಳಲ್ಲೂ ‘ಅಪ್ಪು’ ಗುಣಗಾನ

  • ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಬಿಜೆಪಿಗೆ ಹಿನ್ನಡೆ ಇಲ್ಲ:  ಉಮೇಶ್ ಕತ್ತಿ

    ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಬಿಜೆಪಿಗೆ ಹಿನ್ನಡೆ ಇಲ್ಲ:  ಉಮೇಶ್ ಕತ್ತಿ

    ಚಿಕ್ಕೋಡಿ: ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಬಿಜೆಪಿಗೆ ಹಿನ್ನಡೆ ಇಲ್ಲ. ಗೆದ್ದೆ ಗೆಲ್ಲುತ್ತೇವೆ ಎನ್ನುವ ವಿಶ್ವಾಸವನ್ನು ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    BJP - CONGRESS

    ಪರಿಷತ್ ಚುನಾವಣೆ ಹಿನ್ನೆಲೆ ಹುಕ್ಕೇರಿ ಪುರಸಭೆ ಕಾರ್ಯಾಲಯದಲ್ಲಿ ಉಮೇಶ್ ಕತ್ತಿ ಮತಚಲಾಯಿಸಿದರು. ಈ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿ, ಪ್ರಥಮ ಪ್ರಾಶಸ್ತ್ಯದ ಮತವನ್ನ ಬಿಜೆಪಿಗೆ ನೀಡಿ, ಎರಡನೇ ಪ್ರಾಶಸ್ತ್ಯ ಮತವನ್ನ ನಿಮಗೆ ತಿಳಿದವರಿಗೆ ನೀಡಿ, ಎನ್ನುವ ಸೂಚನೆಯನ್ನ ಮತದಾರರಿಗೆ ನೀಡಿದ್ದೇನೆ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಆಯ್ಕೆ ಬಹುತೇಕ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೊದಲನೇ ಬಾರಿಗೆ ನನ್ನ ಅಣ್ಣನಿಗೆ ವೋಟು ಹಾಕುತ್ತಿರೊದ್ರಿಂದ ಒಳ್ಳೆಯ ನಂಬರ್‌ನಲ್ಲಿ ವೋಟು ಹಾಕ್ದೆ ಅಷ್ಟೇ: ಪ್ರಜ್ವಲ್ ರೇವಣ್ಣ

    ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಬಿಜೆಪಿಗೆ ಯಾವುದೇ ಹಿನ್ನೆಡೆ ಆಗುವದಿಲ್ಲ, ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ಅಭ್ಯರ್ಥಿ ಯಾರು ಅನ್ನೋದು ಗೊತ್ತು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಂತೆ ಮಹಾಂತೇಶ ಕವಟಗಿಮಠ ಅವರಿಗೆ ಬೆಂಬಲ ನೀಡಿದ್ದೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಹುಕ್ಕೇರಿ ಪುರಸಭೆಯ ಸದಸ್ಯರು, ಬಿಜೆಪಿ ಮುಂಖಡ ಗುರುರಾಜ್ ಸೇರಿದಂತೆ ಹುಕ್ಕೇರಿ ತಾಲೂಕು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ:  ಫೋಟೋ ತೆಗೆಯುವಾಗ ಪುರುಷರು ಯಾಕೆ ತುಂಬಾ ಕಷ್ಟಪಡುತ್ತಾರೆ?: ರಾಧಿಕಾ ಪಂಡಿತ್

  • ಹುಬ್ಬಳ್ಳಿ-ಅಂಕೋಲ ರೈಲ್ವೆ ಯೋಜನೆ ತಾತ್ವಿಕ ಒಪ್ಪಿಗೆ: ಉಮೇಶ್ ಕತ್ತಿ

    ಹುಬ್ಬಳ್ಳಿ-ಅಂಕೋಲ ರೈಲ್ವೆ ಯೋಜನೆ ತಾತ್ವಿಕ ಒಪ್ಪಿಗೆ: ಉಮೇಶ್ ಕತ್ತಿ

    ಕಾರವಾರ: ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಈಗಾಗಲೇ ಅರಣ್ಯ ಇಲಾಖೆಯಿಂದ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ, ಕೆಲವು ಸರ್ಕಾರೇತರ ಸಂಘ ಸಂಸ್ಥೆಗಳು ಮತ್ತು ಪರಿಸರವಾದಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಹಿನ್ನಡೆಯಾಗಿತ್ತು ಎಂದು ಅರಣ್ಯ ಮತ್ತು ಪರಿಸರ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    umesh katti

    ಖಾಸಗಿ ಕಾರ್ಯಕ್ರಮದ ನಿಮಿತ್ತ ತಮ್ಮ ಕುಟುಂಬದೊಂದಿಗೆ ಯಲ್ಲಾಪುರಕ್ಕೆ ಭೇಟಿ ನೀಡಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಹೈಕೋರ್ಟ್, ವನ್ಯಜೀವಿ ಮಂಡಳಿಯಿಂದ ಸಾಧಕ ಬಾಧಕದ ವರದಿ ಕೇಳಿರುವುದು ಪರಿಸರವಾದಿಗಳಿಗೆ ಹಿನ್ನಡೆಯಾಗಿದೆ. ಮಂಡಳಿಯು ಯೋಜನೆಗೆ ಪೂರಕ ವರದಿಯನ್ನು ನೀಡಲಿದೆ ಎಂಬ ವಿಶ್ವಾಸ ಸರ್ಕಾರಕ್ಕಿದೆ. ಅದಕ್ಕೆ ಬೇಕಾದ ಅಗತ್ಯ ಮಾಹಿತಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಪರಿಸರ ಪ್ರವಾಸೋದ್ಯಮ ಸ್ಥಾಪಿಸಲು ಯಾರಾದರೂ ಉದ್ಯಮಿಗಳು ಮುಂದೆ ಬಂದರೆ ಅವರಿಗೆ ಅರಣ್ಯ ಇಲಾಖೆ ಎಲ್ಲ ಸಹಕಾರ ನೀಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿ.4 ರಂದು ಆಂಧ್ರಪ್ರದೇಶ, ಒಡಿಶಾಗೆ ಅಪ್ಪಳಿಸಲಿರುವ ಜವಾದ್ ಚಂಡಮಾರುತ

    umesh katti

    ಅರಣ್ಯ ಹಕ್ಕು ನೀಡಲು ತೊಡಕು:
    ಅರಣ್ಯ ಹಕ್ಕು ಪಡೆಯಲು 1980ರ ಪೂರ್ವದ ದಾಖಲೆ ಪೂರೈಸಿ, ಅರಣ್ಯವಾಸಿಗಳಿಗೆ ಅರಣ್ಯ ಹಕ್ಕು ನೀಡಲು ತೊಡಕಾಗುತ್ತಿದೆ. ಕೆಲವೆಡೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗುತ್ತದೆ. ಮಾನವೀಯ ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಇಲಾಖೆಯಿಂದ ಸೂಚನೆ ನೀಡಬೇಕು ಎಂದು ವನವಾಸಿ ಕಲ್ಯಾಣದ ಪ್ರಮುಖರು ವಿನಂತಿಸಿಕೊಂಡರು. ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು- ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯನ ಬರ್ಬರ ಕೊಲೆ

    umesh katti

    ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅರಣ್ಯವಾಸಿಗಳಿಗೆ ಅರಣ್ಯ ಹಕ್ಕು ನೀಡಲು 1980ರ ಪೂರ್ವದ ದಾಖಲೆಗಳನ್ನು ಪೂರೈಸಿ ಅದನ್ನು ಅರಣ್ಯ ಇಲಾಖೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ. ಜೈಲಿಗೆ ಹೋದವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿದ್ದರೆ ಇಲಾಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಆದರೆ, ಬೇರೆ ಯಾವುದೇ ಪ್ರಕರಣವಾದರೆ ಅದನ್ನು ಪರಿಶೀಲಿಸಬಹುದು ಎಂದರು. ಈ ಸಂದರ್ಭದಲ್ಲಿ ಎಂಎಲ್‍ಸಿ ಶಾಂತರಾಮ್ ಸಿದ್ದಿ ಹಾಗೂ ಇತರೆ ಪ್ರಮುಖರು ಹಾಜರಿದ್ದರು.

  • ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಶೇ. 30 ಅರಣ್ಯ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚನೆ

    ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಶೇ. 30 ಅರಣ್ಯ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚನೆ

    ಬೆಳಗಾವಿ: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಶೇ. 3೦ರಷ್ಟು ಅರಣ್ಯ ನಿರ್ಮಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಅರಣ್ಯ ಸಚಿವ ಉಮೇಶ್ ಕತ್ತಿ ಸೂಚನೆ ನೀಡಿದ್ದಾರೆ‌.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಒಂದು ವೇಳೆ ಅರಣ್ಯ ನಿರ್ಮಿಸಲು ಭೂಮಿ ಇಲ್ಲದ ಜಿಲ್ಲೆಗಳು ಸಂಬಂಧಪಟ್ಟ ಕಂದಾಯ ಇಲಾಖೆ, ಜಲ ಸಂಪನ್ಮೂಲ ಇಲಾಖೆ ಸೇರಿದಂತೆ ಬೇರೆ ಇಲಾಖೆಗೆ ಒಳಪಡುವ ಭೂಮಿಯನ್ನು ಅರಣ್ಯ ಇಲಾಖೆಗೆ ವಿಲೀನ ಮಾಡದೆಯೇ ಆ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಗಿಡಗಳನ್ನು ಬೆಳೆಸಿ ಎಂದು ಅರಣ್ಯಾಧಿಕಾರಿಗಳಿಗೆ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ನಾಗರಹಾವಿನೊಂದಿಗೆ ಹುಡುಗಾಟವಾಡಿ ಮಸಣ ಸೇರಿದ ವೃದ್ಧ

    ರಾಜ್ಯದ ಅರಣ್ಯ ಭೂಮಿಯನ್ನು ರಕ್ಷಿಸುವುದರ ಜೊತೆಗೆ ವರ್ಷದಿಂದ ವರ್ಷಕ್ಕೆ ಉತ್ತಮ ಪರಿಸರ ನಿರ್ಮಾಣ ಮಾಡುವುದು ಅರಣ್ಯ ಇಲಾಖೆಯ ಕರ್ತವ್ಯವಾಗಿದೆ. ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೇ. 70 ರಷ್ಟು ಅರಣ್ಯ ಇದೆ‌. ಆದರೆ ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಶೇ. 10 ಕ್ಕಿಂತಲೂ ಕಡಿಮೆ ಅರಣ್ಯ ಭೂಮಿ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ- ತಾಯಿ, ಮರಿಯಾನೆಗಳು ಸಾವು

    ಕಡಿಮೆ ಅರಣ್ಯ ಇರುವ ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯವಾಗುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಹಾಗಾಗಿ ಅರಣ್ಯ ಇಲಾಖೆಯವರು ಹೆಚ್ಚಿನ ಮುತುವರ್ಜಿ ವಹಿಸುವುದು ಅವಶ್ಯಕವಾಗಿದೆ. ನಮಗೆ ಗೊತ್ತಿಲ್ಲದಂತೆ ಮರಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಲೇ ಇದೆ. ಇದರಿಂದ ಆಮ್ಲಜನಕ ಪ್ರಮಾಣ ಕುಸಿಯುತ್ತಿದೆ. ಈಗ ನಮ್ಮ ಯುವಕರು ನೋಡುತ್ತಿರುವ ಸುಂದರವಾದ ಅರಣ್ಯ ಪ್ರದೇಶವನ್ನು ನಮ್ಮ ಮುಂದಿನ ಪೀಳಿಗೆ ನೋಡುವಂತಾಗಬೇಕು. ಇರುವ ಅರಣ್ಯ ಭೂಮಿ ರಕ್ಷಣೆ ಮಾಡಿದರೆ ಸಾಲದು. ಅರಣ್ಯ ಭೂಮಿ ವೃದ್ಧಿಸುವ ಕಡೆಗೂ ಗಮನ ಹರಿಸಬೇಕಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

  • ಕೆಲಸ ಮಾಡಿ ಇಲ್ಲವಾದಲ್ಲಿ ಅಮಾನತು ಮಾಡಿ ಮನೆಗೆ ಕಳಿಸ್ತೀನಿ- ಅಧಿಕಾರಿಗಳಿಗೆ ಕತ್ತಿ ತರಾಟೆ

    ಕೆಲಸ ಮಾಡಿ ಇಲ್ಲವಾದಲ್ಲಿ ಅಮಾನತು ಮಾಡಿ ಮನೆಗೆ ಕಳಿಸ್ತೀನಿ- ಅಧಿಕಾರಿಗಳಿಗೆ ಕತ್ತಿ ತರಾಟೆ

    ಚಿಕ್ಕೋಡಿ(ಬೆಳಗಾವಿ): ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳನ್ನ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಜರುಗಿದೆ.

    ಹುಕ್ಕೇರಿ ಮತಕ್ಷೇತ್ರದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗಿಯಾಗಿದ್ದ ಸಚಿವರು, ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಜಲಜೀವನ ಮಿಶನ್ ಕಾಮಗಾರಿ ಕಳಪೆಯಾದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬಾರಜು ಇಲಾಖೆಯ ಅಭಿಯಂತರಾದ ವಿಜಯ ಮಿಶ್ರಕೋಟಿ ಹಾಗೂ ಬಿ.ಡಿ. ನಾಯಿಕವಾಡಿ ಅವರನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: 2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ

    ಗ್ರಾಮೀಣ ಪ್ರದೇಶದ ಮನೆಗಳಿಗೆ ನಿರಂತರ ನೀರು ಪೂರೈಕೆ ಯೋಜನೆಯ ಬಗ್ಗೆ ಕ್ಷೇತ್ರದ ಜನರು ದೂರು ನೀಡುತ್ತಿದ್ದಾರೆ. ನಿಮಗೆ ನಾಚಿಕೆಯಾಗಲ್ವಾ? ಕಮಿಷನ್ ಹಣ ತಿನ್ನೋದೇ ನಿಮ್ಮ ಕಾಯಕವಾಗಿದೆ. ಕೆಲಸ ಮಾಡಿ ಇಲ್ಲವಾದಲ್ಲಿ ಮನೆಗೆ ಹೋಗಿ. ನಿಮ್ಮ ಬಗ್ಗೆ ಇಲಾಖೆಗೆ ದೂರು ನೀಡಿ ಅಮಾನತು ಮಾಡಿಸಿ ಮನೆಗೆ ಕಳಿಸುತ್ತೇನೆ ಸಚಿವರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ, ಯಡಿಯೂರಪ್ಪ ಕಾಂಗ್ರೆಸ್‍ನಿಂದ ಸಿಎಂ ಆದೆ ಅಂತ ಹೇಳಬೇಕು: ಎ.ಮಂಜು

    ಸಭೆಯಲ್ಲಿ ಹುಕ್ಕೇರಿ ತಹಶೀಲ್ದಾರ್ ಡಿ.ಎಚ್.ಹೂಗಾರ, ತಾಲೂಕಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ನಿಮ್ಮ ಹೊಟ್ಟೆಕಿಚ್ಚಿನಿಂದ ಹಾಳಾಗ್ತಿರೋದು ನೀವೇ ಸಿದ್ದರಾಮಯ್ಯ ಅಲ್ಲ – ಹೆಚ್‍ಡಿಕೆ ವಿರುದ್ಧ ಜಮೀರ್ ಗುಡುಗು

  • ಬೆಳಗಾವಿ ಜನ ಬುದ್ಧಿವಂತರು ಎಂದು ತೋರಿಸಿದ್ದಾರೆ : ಸಚಿವ ಉಮೇಶ್ ಕತ್ತಿ

    ಬೆಳಗಾವಿ ಜನ ಬುದ್ಧಿವಂತರು ಎಂದು ತೋರಿಸಿದ್ದಾರೆ : ಸಚಿವ ಉಮೇಶ್ ಕತ್ತಿ

    ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ನೀಡುವುದರ ಮೂಲಕವಾಗಿ ಬೆಳಗಾವಿ ಜನ ಬುದ್ಧಿವಂತರು ಎನ್ನುವದನ್ನ ತೋರಿಸಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಪಾಲಿಕೆಯ ಮೇಲೆ ಕನ್ನಡ ಧ್ವಜ ಹಾರಿಸಿದಂತಾಗಿದೆ. ಬೆಳಗಾವಿ ಜನ ಬುದ್ದಿವಂತರು ಎನ್ನುವುದನ್ನು ಈ ಗೆಲುವು ನೀಡುವ ಮೂಲಕ ತೋರಿಸಿದ್ದಾರೆ. 58 ಸ್ಥಾನಗಳ ಪೈಕಿ 35 ಸ್ಥಾನಗಳಲ್ಲಿ ಬಿಜೆಪಿಗೆ ಗೆದ್ದಿದೆ ಎಂದರು. ಇದನ್ನೂ ಓದಿ:  ಮಳೆಗಾಗಿ ಹುಡುಗಿಯರ ಬೆತ್ತಲ ಮೆರವಣಿಗೆ

    ಸಂಘ ಪರಿವಾರದವರು ನಗರದ ಮನೆ ಮನೆಗೆ ತೆರಳಿ ನಮ್ಮ ಸರ್ಕಾರ ಜನಪರ ಸೇವೆ ತಿಳಿಸಿಕೊಡುವಲ್ಲಿ ಮುತುವರ್ಜಿ ವಹಿಸಿದ್ದರು. ಇದು ಬಿಜೆಪಿ ಗೆಲುವಿಗೆ ಮೂಲ ಕಾರಣವಾಗಿದೆ. ಹೈಕಮಾಂಡ್ ನಿರ್ದೇಶನ ಮತ್ತು ಜವಾಬ್ದಾರಿ ಹಂಚಿಕೆ ಮಾಡಿದಂತೆ ಸಚಿವರು ಶಾಸಕರು ಹಾಗೂ ಮುಖಂಡರು ವಾರ್ಡ್‍ಗಳಲ್ಲಿ ಹಗಲಿರುಳು ದುಡಿಯುವ ಮೂಲಕ ಜನರ ಮನೆ – ಮನ ತಲುಪಿದ್ದರಿಂದಲೇ ಗೆಲುವು ಲಭಿಸಿದೆ. ಜನರಿಗೆ ನೀಡಿದ ಆಶ್ವಾಸನೆಯಂತೆ ಅಭಿವೃದ್ಧಿ ಕೈಗೊಳ್ಳುವ ಮೂಲಕ ನುಡಿದಂತೆ ನಡೆಯುವ ಪಕ್ಷ ನಮ್ಮದು ಎಂಬುದನ್ನು ಸಾಬೀತು ಮಾಡುವುದಾಗಿ ಕತ್ತಿ ತಿಳಿಸಿದ್ದಾರೆ. ಇದನ್ನೂ ಓದಿ:  ಮುಂಬರುವ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ: ಶ್ರೀಮಂತ್ ಪಾಟೀಲ್

    ಚಿಕ್ಕೋಡಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಗೌಡ ಪಾಟೀಲ್, ತಾಲೂಕಾಧ್ಯಕ್ಷ ರಾಚಯ್ಯ ಹಿರೇಮಠ, ಪುರಸಭೆ ಅಧ್ಯಕ್ಷ ಎ.ಕೆ.ಪಾಟೀಲ್ ಆನಂದ ಗಂಧ, ಕಲಗೌಡ ಪಾಟೀಲ್, ಪರಗೌಡ ಪಾಟೀಲ್, ಪವನ್ ಪಾಟೀಲ್, ರಾಜು ಮುನ್ನೋಳಿ ಶಿವನಗೌಡ ಪಾಟೀಲ್, ನೀಲಪ್ಪ ಕೋಲೆ, ಶಹಜಾನ ಬಡಗಾವಿ, ಗಿರೀಶ್ ಕುಲಕರ್ಣಿ ಇತರರು ಉಪಸ್ಥಿತರಿದ್ದರು.

  • ಕಾಂಗ್ರೆಸ್ 20 ವರ್ಷದಲ್ಲಿ ನಿರ್ನಾಮ ಆಗುತ್ತೆ: ಉಮೇಶ್ ಕತ್ತಿ

    ಕಾಂಗ್ರೆಸ್ 20 ವರ್ಷದಲ್ಲಿ ನಿರ್ನಾಮ ಆಗುತ್ತೆ: ಉಮೇಶ್ ಕತ್ತಿ

    ಬೆಳಗಾವಿ: ಕಾಂಗ್ರೆಸ್ 20 ವರ್ಷದಲ್ಲಿ ನಿರ್ನಾಮ ಆಗುತ್ತದೆ, ಈ ಮೂಲಕ ವಾಜಪೇಯಿ ಅವರ ಕನಸು ನನಸಾಗುತ್ತದೆ ಎಂದು ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಮೇಶ್ ಕತ್ತಿ, ಕರ್ನಾಟಕದ ಮುಸ್ಲಿಮರು ಭಾರತೀಯ ಜನತಾ ಪಕ್ಷಕ್ಕೆ ಮತ ಹಾಕಬೇಕು. ಎಂಐಎಂ ಎಂದರೆ ಅವರು ಪಾಕಿಸ್ತಾನದಿಂದ ಬಂದವರು ಅಲ್ಲ. ಭಾರತದಲ್ಲಿ ಹುಟ್ಟಿರುವ ಮುಸ್ಲಿಮರು, ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ದೂರ ಇಡಲು ಬಿಜೆಪಿ ಪಕ್ಷಕ್ಕೆ ಮತ ಹಾಕಬೇಕು ಎಂದು ಮನವಿಮಾಡಿಕೊಂಡರು. ಇದನ್ನೂ ಓದಿ: ನೀವು ಹೇಳಿದಂತೆಯೇ ಎಲ್ಲವನ್ನೂ ಮಾಡಿದ್ದೀನಿ, ನೀವು ಏನು ಮಾಡಿದ್ರಿ ಹೇಳಿ?: ಸಚಿವ ಗೋಪಾಲಯ್ಯ

    ಎಂಐಎಂ ಹಾಗೂ ಎಂಇಎಸ್ ಧ್ವಜಗಳು ಚುನಾವಣೆ ಬಂದಾಗ ಮಾತ್ರ ಕಾಣುತ್ತಿವೆ. ಅಭಿವೃದ್ಧಿಗಾಗಿ ನಾವು ನಿರಂತರ ದೇಶ ಆಳುತ್ತಿದ್ದೇವೆ. ಹೀಗಾಗಿ ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿ ಪಕ್ಷಕ್ಕೆ ಅವಕಾಶ ನೀಡಿ. ಎಂಐಎಂ ಬಿಜೆಪಿ ಪಕ್ಷದ ಏಜೆಂಟ್ ಎನ್ನುವ ಆರೋಪ ವಿಚಾರವಾಗಿ ಬಿಜೆಪಿ ಪಕ್ಷ ಜನರ ಹಾಗೂ ಅಭಿವೃದ್ಧಿಯ ಏಜೆಂಟ್. ಬೆಳಗಾವಿ ಪಾಲಿಕೆಯಲ್ಲಿ 35ಕ್ಕೂ ಅಧಿಕ ಸೀಟು ಗೆಲ್ಲುತ್ತೇವೆ. ಎಂಇಎಸ್ ಜೊತೆಗೆ ಯಾವುದೇ ಹೊಂದಾಣಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಕಾಂಗ್ರೆಸ್ ಹಾಗೂ ಎಂಇಎಸ್ ಎರಡು ಸೇರಿ ಅಡಳಿತ ಮಾಡುತ್ತಿವೆ. ಜನ ಈ ಎರಡೂ ಪಕ್ಷಗಳಿಗೆ ಬುದ್ಧಿ ಕಲಿಸಬೇಕಿದೆ. ಐದು ವರ್ಷದಲ್ಲಿ ಅಭಿವೃದ್ಧಿ ಮಾಡಲಿಲ್ಲ ಅಂದರೆ ನಮ್ಮನ್ನು ಮನೆಗೆ ಕಳುಹಿಸಿ. ಬೆಳಗಾವಿಗೆ ಕೇಂದ್ರ ಸರ್ಕಾರ ಒಂದು ಸಾವಿರ ಕೋಟಿ ಅನುದಾನ ನೀಡಿದೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಪಕ್ಷ ಇನ್ನೂ 20 ವರ್ಷ ಅಧಿಕಾರದಲ್ಲಿರುತ್ತದೆ. ಬೆಳಗಾವಿಯ ಮಹಾನಗರ ಪಾಲಿಕೆಯಲ್ಲೂ 20 ವರ್ಷ ಬಿಜೆಪಿ ಪಕ್ಷ ಅಧಿಕಾರದಲ್ಲಿರಬೇಕು ಎಂದು ಅಭಿಪ್ರಾಯಪಟ್ಟರು.
    ಇದನ್ನೂ ಓದಿ: ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ

    ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮಹಾವೀರ ನಿಲಜಗಿ, ಬಿಜೆಪಿ ಮುಖಂಡರಾದ ಪರಗೌಡ ಪಾಟೀಲ್, ಗುರು ಕುಲಕರ್ಣಿ, ರೋಹಿತ ಚೌಗಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.