Tag: ಉಮೇಶ್ ಕತ್ತಿ

  • ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು ಹೇಳಿಕೆ ವಾಪಸ್ ಪಡೆಯಲ್ಲ: ಕತ್ತಿ

    ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು ಹೇಳಿಕೆ ವಾಪಸ್ ಪಡೆಯಲ್ಲ: ಕತ್ತಿ

    ಚಾಮರಾಜನಗರ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿ ಸಾಕು ಎಂಬ ಹೇಳಿಕೆಯನ್ನು ವಾಪಾಸ್ ಪಡೆಯುವುದಿಲ್ಲ ಎಂದು ಹೇಳುವ ಮೂಲಕ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ  ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

    ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾದರೆ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂದಿದ್ದಾರೆ. ರಾಜಕೀಯದ ದುರುದ್ದೇಶದಿಂದ ಈ ರೀತಿ ಹೇಳಿದ್ದಾರೆ. ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕಿ.ಜಿ. ಅಕ್ಕಿ ಸಾಕು. ಈ ಹೇಳಿಕಿಗೆ ನಾನು ಈಗಲೂ ಬದ್ಧ, ಇದನ್ನು ಹಿಂಪಡೆಯುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ

    ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾದರೆ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂದು ಘೋಷಣೆ ಮಾಡುತ್ತಿದ್ದಾರೆ. ಇದನ್ನು ಸಿಎಂ ಆದ ಬಳಿಕ ಕೊಡುತ್ತಾರೆ. ಆದರೆ ಈ ಹಿಂದೆ ಅವರೇ ಮುಖ್ಯಮಂತ್ರಿ ಆಗಿದ್ದಾಗ ಯಾಕೆ ಕೊಡಲಿಲ್ಲ. ಮೊದಲು ಪ್ರತಿಯೊಬ್ಬರಿಗೆ ತಿಂಗಳಿಗೆ 5 ಕೆ.ಜಿ. ನೀಡಿದರು, ಬಳಿಕ 7 ಕೆ.ಜಿ.ಗೆ ಹೆಚ್ಚಿಸಿದರು. ಇದಾದ ನಂತರ ಮತ್ತೆ ಒಂದು ಕೆ.ಜಿ.ಅಕ್ಕಿಯನ್ನು ಕಡಿಮೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಉಮೇಶ್ ಕತ್ತಿ ಹೇಳಿದ್ದೇನು?
    ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿ ಸಾಕು, ಅದನ್ನು ನಾವು ಆಹಾರ ಭದ್ರತೆಯಡಿ 4.1 ಕೋಟಿ ಫಲಾನುಭವಿಗಳಿಗೆ ವಿತರಿಸುತ್ತಿದ್ದೇವೆ. ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿ ಸಾಕು. ಆದರೆ ರಾಜಕೀಯ ಕಾರಣದಿಂದ ಸಿದ್ದರಾಮಯ್ಯ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎನ್ನುತ್ತಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ವಿರುದ್ಧ ಬಂಡೀಪುರದಲ್ಲಿ ಗುರುವಾರ ಹರಿಹಾಯ್ದಿದ್ದರು.

    ಪಡಿತರದಾರರ ಇ ಕೆವೈಸಿ ಶೇ.70 ಮುಗಿದಿದ್ದು, ಅನರ್ಹ ಪಡಿತರದಾರರನ್ನು ಕೈ ಬಿಡುವ ಉದ್ದೇಶದಿಂದ ಕಾರ್ಯಕ್ರಮ ನಡೆಯುತ್ತಿದೆ. ಇ ಕೆವೈಸಿ ಪ್ರಕ್ರಿಯೆ ಪೂರ್ಣವಾದ ಬಳಿಕ ಎಷ್ಟು ಪಡಿತರ ಉಳಿತಾಯ ಆಗಲಿದೆ ಎಂಬುದು ಗೊತ್ತಾಗಲಿದೆ ಎಂದು ಹೇಳಿದ್ದರು.

  • ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ

    ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ

    – ರಾಜಕೀಯ ಕಾರಣದಿಂದ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಎನ್ನುತ್ತಿದ್ದಾರೆ

    ಚಾಮರಾಜನಗರ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, ಅದನ್ನು ನಾವು ಆಹಾರ ಭದ್ರತೆಯಡಿ 4.1 ಕೋಟಿ ಫಲಾನುಭವಿಗಳಿಗೆ ವಿತರಿಸುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದರು.

    ಬಂಡೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಆದರೆ ರಾಜಕೀಯ ಕಾರಣದಿಂದ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡುತ್ತೇನೆ ಎನ್ನುತ್ತಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್

    ಪಡಿತರದಾರರ ಇ ಕೆವೈಸಿ ಶೇ.70 ಮುಗಿದಿದ್ದು, ಅನರ್ಹ ಪಡಿತರದಾರರನ್ನು ಕೈ ಬಿಡುವ ಉದ್ದೇಶದಿಂದ ಕಾರ್ಯಕ್ರಮ ನಡೆಯುತ್ತಿದೆ. ಇ ಕೆವೈಸಿ ಪ್ರಕ್ರಿಯೆ ಪೂರ್ಣವಾದ ಬಳಿಕ ಎಷ್ಟು ಪಡಿತರ ಉಳಿತಾಯ ಆಗಲಿದೆ ಎಂಬುದು ಗೊತ್ತಾಗಲಿದೆ ಎಂದು ತಿಳಿಸಿದರು.

  • ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ: ಉಮೇಶ್ ಕತ್ತಿ

    ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ: ಉಮೇಶ್ ಕತ್ತಿ

    ಚಿಕ್ಕೋಡಿ: ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ ಎಂದು ವಿದ್ಯಾರ್ಥಿಗಳಲ್ಲಿ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಮನವಿ ಮಾಡಿಕೊಂಡಿದ್ದಾರೆ.

    ಎಲ್ಲ ಮುನ್ನೆಚ್ಚರಿಕೆ ಕ್ರಮಗಳಿಂದ ಇಂದಿನಿಂದ ಶಾಲಾ ಕಾಲೇಜುಗಳನ್ನ ಆರಂಭಿಸಲಾಗಿದ್ದು, ಯಾವುದೇ ಭಯ, ಆತಂಕವಿಲ್ಲದೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕು. ಇಂದಿನಿಂದ ಶಾಲಾ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಗುಡಸ್ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬುವ ಕಾರ್ಯ ಮಾಡಿದರು. ಕೊರೊನಾ ಕುರಿತು ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನ ಕೈ ಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಶಾಲೆಗೆ ಆಗಮಿಸಿದ ಸಚಿವ ಸುಧಾಕರ್‌ಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

    ಕಳೆದ ಎರಡು ವರ್ಷಗಳಿಂದ ವಿದ್ಯಾಭ್ಯಾಸ ವಿಲ್ಲದೇ ಸಾಕಷ್ಟು ವಿದ್ಯಾರ್ಥಿಗಳು ಕಷ್ಟಪಡುವಂತಾಗಿದೆ. ಹೀಗಾಗಿ ಸರ್ಕಾರ ಇಂದಿನಿಂದ ಶಾಲೆಗಳನ್ನು ಆರಂಭ ಮಾಡಿದ್ದು ಶಾಲೆಗೆ ಬಂದು ವಿದ್ಯಾರ್ಥಿಗಳು ಜ್ಞಾನ ಪಡೆಯುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಷಕರು, ಎಸ್‍ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

  • ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿ

    ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿ

    ಚಿಕ್ಕೋಡಿ: ನೆರೆ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂತ್ರಸ್ತರು ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹದಿಂದಾಗಿ ಬಿದ್ದಿರುವ ಮನೆಗಳ ಸರ್ವೆಕಾರ್ಯವನ್ನ ಕ್ಷೀಪ್ರಗತಿಯಲ್ಲಿ ಮುಗಿಸಬೇಕು. ಬಿದ್ದಿರುವ ಯಾವುದೇ ಮನೆಗಳು ಸರ್ವೆ ಆಗದೇ ಉಳಿಯಬಾರದು ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರು ಕನಸಿನ ಲೋಕದಲ್ಲಿದ್ದಾರೆ: ಬಿ.ಸಿ ಪಾಟೀಲ್

    ಸರ್ಕಾರ ಈಗಾಗಲೇ ಮನೆ ನಿರ್ಮಾಣಕ್ಕೆ ಪರಿಹಾರ ಘೋಷಿಸಿದ್ದು, ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಕು. ಪ್ರವಾಹ ಬಂದು ಹೋದ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಸಭೆಯಲ್ಲಿ ಹುಕ್ಕೇರಿ ತಾಲೂಕಿನ ಪಿಡಿಓಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ತಾಲೂಕಿನ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

  • ಡಿಸಿಎಂ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ, ಸಚಿವನಾಗುವುದು ನಿಶ್ಚಿತ: ಉಮೇಶ್ ಕತ್ತಿ

    ಡಿಸಿಎಂ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ, ಸಚಿವನಾಗುವುದು ನಿಶ್ಚಿತ: ಉಮೇಶ್ ಕತ್ತಿ

    ಚಿಕ್ಕೋಡಿ: ಸಿಎಂ ಸ್ಥಾನ ಬಿಟ್ಟು ಈಗ ಡಿಸಿಎಂ ಆಗುವ ಇಂಗಿತವನ್ನು ಹುಕ್ಕೇರಿ ಬಿಜೆಪಿ ಶಾಸಕ, ಮಾಜಿ ಸಚಿವ ಉಮೇಶ್ ಕತ್ತಿ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಆಗಬೇಕೆಂದು ಬಯಸಿಲ್ಲ ಅವಕಾಶ ಕೊಟ್ಟರೆ ಅದನ್ನು ನಿಭಾಯಿಸುತ್ತೇನೆ ಆದರೆ ಸಚಿವನಾಗುವುದು ನಿಶ್ಚಿತ ಎಂದಿದ್ದಾರೆ.

    ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕತ್ತಿ, ನೂರಕ್ಕೆ ನೂರರಷ್ಟು ನಾನು ಸಚಿವನಾಗುತ್ತೇನೆ ಎಂಬ ವಿಶ್ವಾಸವಿದೆ. ಬಿಜೆಪಿ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಮನೆಯಲ್ಲಿ ಅಣ್ಣ ತಮ್ಮಂದಿರು ಜಗಳವಾಡುವುದು ಸ್ವಾಭಾವಿಕ. ಪೂರ್ಣ ಪ್ರಮಾಣದಲ್ಲಿ ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಮುಂದಿನ ದಿನಗಳಲ್ಲಿ ಒಳ್ಳೆಯ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಕೊಡುಗೆ ಕೊಡುತ್ತಾರೆ. ಮುಂದೆ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ದೇವೇಗೌಡರು, ಯಡಿಯೂರಪ್ಪ ನನ್ನ ಮೆಚ್ಚಿನ ನಾಯಕರು: ಕೆ.ಎಸ್.ಈಶ್ವರಪ್ಪ

    ದೆಹಲಿಗೆ ಹೋಗಿ ನಡ್ಡಾ ಅವರನ್ನು ಭೇಟಿ ಆಗುವುದು ನನ್ನ ಕರ್ತವ್ಯ ಭೇಟಿ ಆಗೋದು ತಪ್ಪಾ? ಎಂದು ಮಾಧ್ಯಮಗಳಿಗೆ ಪ್ರಶ್ನೆ ಮಾಡಿದ ಉಮೇಶ ಕತ್ತಿ, ಅಮಿತ್ ಶಾ ಸೇರಿದಂತೆ ನಡ್ಡಾ ಅವರನ್ನು ಭೇಟಿ ಆಗಿದ್ದು ನಿಜ. ಅವರು ಅವಕಾಶ ಕೊಟ್ಟರೆ ಸಚಿವನಾಗುತ್ತೇನೆ ಇಲ್ಲವಾದಲ್ಲಿ ಶಾಸಕನಾಗಿ ಮುಂದುವರೆಯುತ್ತೇನೆ ಎಂದರು.

    ಪ್ರವಾಹ ಸಂದರ್ಭದಲ್ಲಿ ಶಾಸಕರು ಸಚಿವ ಸ್ಥಾನಕ್ಕೆ ಲಾಬಿ ನಡೆಸುವ ವಿಚಾರವಾಗಿ ಮಾತನಾಡಿದ ಅವರು, ನಾನು ಮೂರು ದಿನಗಳಿಂದ ಕ್ಷೇತ್ರದಲ್ಲಿದ್ದು ಸಂತ್ರಸ್ತರ ಸಮಸ್ಯೆ ಆಲಿಸಿದ್ದೇನೆ. ರೈತರು, ಸಂತ್ರಸ್ತರು ತೊಂದರೆಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ಕರೆದಿದ್ದೇನೆ. ಪ್ರವಾಹ ಕುರಿತು ಚರ್ಚೆ ನಡೆಸಿ ಸಂತ್ರಸ್ಥರಿಗೆ ಸಹಾಯ ಮಾಡುವ ಕೆಲಸ ಸರ್ಕಾರ ಮಾಡುತ್ತದೆ. ಮುಖ್ಯಮಂತ್ರಿಗಳು ಬಂದು ಪರಿಹಾರ ಘೋಷಣೆ ಮಾಡುತ್ತಾರೆ. 224 ಶಾಸಕರು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ಹುಕ್ಕೇರಿ ತಾಲೂಕು ಅಧಿಕಾರಿಗಳ ಸಭೆ ನಡೆಸಿ ಪ್ರವಾಹದ ಕುರಿತು ಮಾಹಿತಿ ಪಡೆದು ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ಕಾರ್ಯನಿರ್ವಹಿಸಲು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ತಹಶೀಲ್ದಾರ್ ಡಿ.ಎಚ್.ಹೂಗಾರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ, ಆರೋಗ್ಯಾಧಿಕಾರಿ ಉದಯ ಕುಡಚಿ ಸೇರಿದಂತೆ ತಾಲೂಕಿನ ಅಧಿಕಾರಿಗಳು ಉಪಸ್ಥಿತರಿದ್ದರು.

  • ನನ್ನನ್ನು ಬಿಟ್ಟು ಕ್ಯಾಬಿನೆಟ್ ಮಾಡಲ್ಲ – ಮಂತ್ರಿಗಿರಿಗಾಗಿ ದೆಹಲಿಯಲ್ಲಿ ಕತ್ತಿ ಲಾಬಿ

    ನನ್ನನ್ನು ಬಿಟ್ಟು ಕ್ಯಾಬಿನೆಟ್ ಮಾಡಲ್ಲ – ಮಂತ್ರಿಗಿರಿಗಾಗಿ ದೆಹಲಿಯಲ್ಲಿ ಕತ್ತಿ ಲಾಬಿ

    ನವದೆಹಲಿ : ಬಿ.ಎಸ್ ಯಡಿಯೂರಪ್ಪ ಸರ್ಕಾರದಲ್ಲಿ ಆಹಾರ ಖಾತೆ ಸಚಿವರಾಗಿದ್ದ ಹಿರಿಯ ನಾಯಕ ಉಮೇಶ್ ಕತ್ತಿ ಈಗ ಸಿಎಂ ಬಸವರಾಜ್ ಬೊಮ್ಮಾಯಿಗಿಂತಲೂ ಮುಂಚೆ ದೆಹಲಿ ತಲುಪಿದ್ದು ವರಿಷ್ಠರ ಭೇಟಿಗೆ ಸಮಯ ಕೇಳಿದ್ದಾರೆ.

    ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದು ಶೀಘ್ರದಲ್ಲಿ ಸಚಿವ ಸಂಪುಟ ರಚನೆಯಾಗಲಿದೆ. ಈ ಹಿನ್ನಲೆ ಸಂಪುಟ ಸೇರಲು ಲಾಬಿ ಶುರುವಾಗಿದ್ದು ಕೆಲವು ಹಿರಿಯ ನಾಯಕರು ಈಗ ದೆಹಲಿಯಲ್ಲಿರುವ ವರಿಷ್ಠರ ಮನೆ ಕದ ತಟ್ಟಲು ಶುರು ಮಾಡಿದ್ದಾರೆ.

    ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಬೊಮ್ಮಾಯಿ ಸರಕಾರದಲ್ಲಿ ಮಂತ್ರಿ ಆಗುತ್ತೇನೆ ಎಂಬ ನಂಬಿಕೆ ಇದೆ. ನನ್ನನ್ನು ಬಿಟ್ಟು ಕ್ಯಾಬಿನೆಟ್ ಮಾಡಲ್ಲ ಎಂದುಕೊಂಡಿದ್ದೇನೆ. ಹಿಂದೆ ನಾಲ್ಕು ಬಾರಿ ಮಂತ್ರಿಯಾಗಿದ್ದೇನೆ. ಮುಂದೆಯೂ ಆಗುತ್ತೇನೆ ಎಂಬ ನಂಬಿಕೆ ಇದೆ. ಅಖಂಡ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.  ಇದನ್ನೂ ಓದಿ : ನನ್ನ ಪ್ರೀತಿಯ ಊರು ಹುಬ್ಬಳ್ಳಿ : ಸಿಎಂ ಬೊಮ್ಮಾಯಿ 

    ಮಂತ್ರಿಯಾಗದಿದ್ದರೆ ಶಾಸಕನಾಗಿ ಮುಂದುವರೆಯುತ್ತೇನೆ. ಅಮಿತ್ ಶಾ, ಜೆ.ಪಿ ನಡ್ಡಾ, ಬಿ.ಎಲ್ ಸಂತೋಷ್ ಭೇಟಿಗೆ ಸಮಯ ಕೇಳಿದ್ದೇನೆ. ಅವಕಾಶ ಸಿಕ್ಕಲ್ಲಿ ಭೇಟಿ ಮಾಡುವೆ ಎಂದ ಅವರು, ಹಿರಿಯ ನಾಯಕರಿಗೆ ಕೊಕ್ ಎನ್ನುವುದು ಮಾಧ್ಯಮದ ವರದಿಯಷ್ಟೇ. ಜಗದೀಶ್ ಶೆಟ್ಟರ್ ಹೇಳಿಕೆ ವೈಯಕ್ತಿಕ ಎಂದು ಕತ್ತಿ ಪ್ರತಿಕ್ರಿಯಿಸಿದರು.

  • ಸಿಎಂ ಬದಲಾವಣೆ ಮಾಡಿದ್ರೆ ಮುಂದಿನ ಅಭ್ಯರ್ಥಿ ನಾನೇ: ಉಮೇಶ್ ಕತ್ತಿ

    ಸಿಎಂ ಬದಲಾವಣೆ ಮಾಡಿದ್ರೆ ಮುಂದಿನ ಅಭ್ಯರ್ಥಿ ನಾನೇ: ಉಮೇಶ್ ಕತ್ತಿ

    – ಸಿಎಂ ಆಗಲು ಎಲ್ಲಾ ಯೋಗ್ಯತೆಗಳು ನನ್ನಲ್ಲಿವೆ
    – ಯಾವುದೇ ರೀತಿಯ ಬ್ಲ್ಯಾಕ್ ಸ್ಪಾಟ್ ನನ್ನಲ್ಲಿಲ್ಲ

    ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ವಿಚಾರವಾಗಿ, ಸಿಎಂ ಬದಲಾವಣೆ ಮಾಡಿದ್ರೆ ಮುಂದಿನ ಅಭ್ಯರ್ಥಿ ನಾನೇ ಎಂದು ಆಹಾರ ಸಚಿವ ಉಮೇಶ್ ಕತ್ತಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕತ್ತಿ, ಹುಕ್ಕೇರಿ ಮತಕ್ಷೇತ್ರದ ಜನ 8 ಬಾರಿ ಶಾಸಕನಾಗಿ ಮಾಡಿ ಆಶೀರ್ವಾದ ಮಾಡಿದ್ದಾರೆ. ಎಂಟು ಬಾರಿ ಶಾಸಕನಾದ ಮೇಲೆ ಮಂತ್ರಿ ಆಗಬೇಕೆಂಬ ಆಸೆ ಇತ್ತು, ನಾಲ್ಕು ಬಾರಿ ರಾಜ್ಯದ ಮಂತ್ರಿಯಾಗಿ ನಾನು ಕೆಲಸ ಮಾಡಿದ್ದೇನೆ. ರಾಜ್ಯದ ಮುಖ್ಯಮಂತ್ರಿ ಆಗಲು ಎಲ್ಲಾ ಯೋಗ್ಯತೆಗಳು ನನ್ನಲ್ಲಿ ಇವೆ. ಯಾವುದೇ ರೀತಿಯ ಬ್ಲ್ಯಾಕ್ ಸ್ಪಾಟ್ ನನ್ನಲ್ಲಿ ಇಲ್ಲ, ಕಳಂಕರಹಿತ ವ್ಯಕ್ತಿತ್ವ ಇದೆ. ಅದರ ಜೊತೆ ಹುಕ್ಕೇರಿ ಜನರ ಆಶೀರ್ವಾದ ಇದೆ. ರಾಜ್ಯದ ಜನ ಆಶೀರ್ವದಿಸಿದ್ರೆ, ಪಕ್ಷದ ಹೈಕಮಾಂಡ್ ಮನಸ್ಸು ಮಾಡಿದ್ರೆ ನಾನು ಸಿಎಂ ಆಗುವ ಆಸೆ ಉಳ್ಳವನು ಎಂದಿದ್ದಾರೆ.

    ಪಕ್ಷ ಮನಸ್ಸು ಮಾಡಿದ್ರೆ ರಾಜ್ಯದ ಸಿಎಂ ಆಗಬೇಕೆಂದು ಮನಸು ಮಾಡಿದ್ದೇನೆ. ಆದರೆ ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ, ಹೀಗಾಗಿ ಅದರ ಬಗ್ಗೆ ಚರ್ಚಿಸಲ್ಲ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಕರೆದ ಸಂಘಟನಾತ್ಮಕ ಸಭೆಗೆ ಬಂದಿದ್ದೇನೆ. ರಾಜ್ಯದಲ್ಲಿ ಸಿಎಂ ಇದ್ದಾರೆ, ಸರ್ಕಾರ ಇದೇ ಒಳ್ಳೆಯ ಸರ್ಕಾರ ನಡೀತಿದೆ. ಕಳೆದ ವರ್ಷದಿಂದ ಸಿಎಂ ಬದಲಾವಣೆ ಕೂಗು ಇದ್ದೇ ಇದೆ ಅದು ಯಾರು ಬದಲಾಯಿಸುತ್ತಿದ್ದಾರೋ ನನ್ನ ಗಮನಕ್ಕೆ ಬಂದಿಲ್ಲ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಉಮೇಶ್ ಕತ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಸಿಎಂ ಹುದ್ದೆ ಖಾಲಿ ಇಲ್ಲ, ಖಾಲಿ ಆದಾಗ ಆ ಬಗ್ಗೆ ವಿಚಾರ ಮಾಡುತ್ತೇನೆ. ಈಗ ಸಿಎಂ ಸ್ಥಾನ ಬದಲಾವಣೆ ಆದರೆ ಉತ್ತರ ಕರ್ನಾಟಕಕ್ಕೆ ಕೊಡಬೇಕೆಂಬುದು ನಮ್ಮ ವಾದ. ಯಾರೇ ಸಿಎಂ ಆದರೂ ಅಖಂಡ ರಾಜ್ಯ ಆಳುವ ಸಿಎಂ ಇರಬೇಕು. ಸಿಎಂ ಹುದ್ದೆ ಖಾಲಿ ಆದ್ರೆ ಮುಂದಿನ ಅಭ್ಯರ್ಥಿ ನಾನೇ. ಸಿಎಂ ಸ್ಥಾನ ಬದಲಾವಣೆ ಆದ್ರೆ ನಂದೇ ನಂಬರ್ ಇದೆ. ಅವಧಿ ಮತ್ತು ಕಳಂಕರಹಿತ ಎಲ್ಲ ಅರ್ಹತೆ ಇರುವ ಕ್ಯಾಂಡಿಡೇಟ್ ನಾನು. ನಸೀಬ್ ಗಟ್ಟಿ ಇದ್ರೆ, ಹೈಕಮಾಂಡ್ ನಿರ್ಣಯ ಮಾಡಿದರೆ ನಾನು ಸಿಎಂ ಆಗುವ ಆಸೆ ಇಟ್ಟುಕೊಂಡಿದ್ದೇನೆ. ಈ ಬಗ್ಗೆ ಬೆಳಗಾವಿಯಲ್ಲಿ ನಾನು ಯಾವುದೇ ಸಭೆ ಮಾಡಿಲ್ಲ ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ನೀವೇ ಹೇಳುತ್ತಿದ್ದೀರಿ. ಯತ್ನಾಳ್ ಬೆಳಗಾವಿಗೆ ಬರುತ್ತಿರುತ್ತಾರೆ. ನಾನು ವಿಜಯಪುರಕ್ಕೆ ಹೋಗುತ್ತಿರುತ್ತೇನೆ. ಎಲ್ಲರೂ ಕೂಡಿ ಊಟ ಮಾಡಿದ್ದೇವೆ ವಿನಃ ನಾವು ಯಾವುದೇ ಸಭೆ ಮಾಡಿಲ್ಲ ಎಂದರು. ಇದನ್ನೂ ಓದಿ: ಸಿಎಂ ಮಾಡಿ ಅಂದವರಿಗೆ ಮೋದಿ ಕಪಾಳಕ್ಕೆ ಹೊಡಿತಾರೆ: ಯತ್ನಾಳ್

    ನಳಿನ್‍ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿ, ನಳಿನ್ ಕುಮಾರ್ ಕಟೀಲ್ ಆಡಿಯೋ ಬಗ್ಗೆ ಅವರು ತಮ್ಮ ಅನಿಸಿಕೆ ಹೇಳಿರಬಹುದು. ನಾನು ನಳಿನ್ ಕುಮಾರ್ ಕಟೀಲ್ ಅನಿಸಿಕೆ ನೋಡಿಲ್ಲ, ನೋಡಿದ ಮೇಲೆ ಪ್ರತಿಕ್ರಿಯಿಸುತ್ತೇನೆ. ಕಟೀಲ್ ತಮ್ಮ ಆಡಿಯೋ ಅಲ್ಲ ಅಂದಾಗ ನಾನೇನು ಪ್ರತಿಕ್ರಿಯೆ ನೀಡಲಿ. ಆ ಆಡಿಯೋ ಯಾರು ಮಾಡಿದ್ದು ಎಂದು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ನೀವೇ ಮಾಡಿರಬಹುದು ಎಂದು ಉಮೇಶ್ ಕತ್ತಿ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದರು. ಇದನ್ನೂ ಓದಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು: ಉಮೇಶ್ ಕತ್ತಿ

    ದೆಹಲಿ ಭೇಟಿ ವಿಚಾರವಾಗಿ, ಜೋಳದ ಬೆಂಬಲ ಬೆಲೆ ಚರ್ಚೆಗೆ ನಾನು 6 ಬಾರಿ ದೆಹಲಿ ಭೇಟಿ ನೀಡಿದ್ದು ನಿಜ. ಜೋಳದ ಬೆಂಬಲ ಬೆಲೆ ಮೂರುವರೆ ಸಾವಿರದಿಂದ ನಾಲ್ಕು ಸಾವಿರವರೆಗೂ ಮಾಡಬೇಕೆಂಬ ಆಸೆ ಇದೆ ಎಂದು ನುಡಿದರು.

  • ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು: ಉಮೇಶ್ ಕತ್ತಿ

    ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು: ಉಮೇಶ್ ಕತ್ತಿ

    ಚಿಕ್ಕೋಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಚಿಕ್ಕೋಡಿಯಲ್ಲಿ ಹಾಡಿಹೊಗಳಿದ್ದಾರೆ.

    ಇಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಉಮೇಶ್ ಕತ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಶಿಕ್ಷಣ ಸಚಿವರು ಜವಾಬ್ದಾರಿಯುತ ಮಂತ್ರಿಯಾಗಿದ್ದಾರೆ. ಉತ್ತಮ ರೀತಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಪರೀಕ್ಷೆ ಆಯೋಜನೆ ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರೈಲಿನ ಕೆಳಗೆ ಸಿಲುಕಿದ ವೃದ್ಧ – ಸಾವಿನ ಅಂಚಿನಿಂದ ಪಾರು

    ಹುಕ್ಕೇರಿ ತಾಲೂಕಿನ ಎಸ್ ಕೆ ಪ್ರೌಢ ಶಾಲೆ, ಎಲಿಮುನ್ನೋಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ, ನೀಡಸೋಶಿ ಗ್ರಾಮ ಹಾಗೂ ಸಂಕೇಶ್ವರ ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ಸಚಿವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಸರ್ಕಾರ ಸೂಚಿಸಿರುವ ನಿಯಮಾವಳಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಹುಕ್ಕೇರಿ ತಹಶೀಲ್ದಾರ ಡಿ.ಎಚ್.ಹೂಗಾರ್, ಮೋಹನ ದಂಡಿನ್, ಪಿಎಸ್‍ಐ ಸಿದ್ದರಾಮಪ್ಪ ಉನ್ನದ, ಪರಗೌಡ ಪಾಟೀಲ್, ಜಯಗೌಡ ಪಾಟೀಲ್, ಪಿಂಟು ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ: ಸಚಿನ್, ಸೆಹ್ವಾಗ್ ಬಳಿಕ ಆರಂಭಿಕನಾಗಿ ಶಿಖರ್ ಧವನ್ ನೂತನ ಮೈಲಿಗಲ್ಲು

  • ಕತ್ತಿಯವರನ್ನು ಯಾವುದಾದರೂ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡಿ: ರಾಜೂಗೌಡ

    ಕತ್ತಿಯವರನ್ನು ಯಾವುದಾದರೂ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡಿ: ರಾಜೂಗೌಡ

    ಯಾದಗಿರಿ: ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿದ ಸಚಿವ ಉಮೇಶ್ ಕತ್ತಿ ಅವರನ್ನು ಯಾವುದಾದರೂ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡಿ ಎಂದು ಸುರಪುರ ಶಾಸಕ ರಾಜೂಗೌಡ ಸ್ವಪಕ್ಷದ ಸಚಿವರಿಗೆ ಟಾಂಗ್ ನೀಡಿದ್ದಾರೆ.

    ಈ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನಮ್ಮದೇ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ ಆಗಿದೆ ಎಂದು ಸ್ವಪಕ್ಷದ ಸಚಿವರಾದ ಉಮೇಶ್ ಕತ್ತಿಯವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜೂಗೌಡ, ಬೆಳಗಾವಿಗೆ ಇನ್ನೂ ಏನು ಕೊಡಬೇಕು, ಅನ್ಯಾಯ ಎನ್ನುವ ಪದ ಬೆಂಗಳೂರು ಮತ್ತು ಬೆಳಗಾವಿ ಭಾಗದವರ ಬಾಯಿಯಲ್ಲಿ ಬರಬಾರದು. ಬಸವಣ್ಣನವರ ಆಶೀರ್ವಾದದಿಂದ ನಮ್ಮ ಭಾಗದಲ್ಲಿ ನಮ್ಮ ಪಕ್ಷದಿಂದ ಎಷ್ಟು ಜನ ಗೆದ್ದರು ನಮಗೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ -ಬಲೆಗೆ ಬಿದ್ದವರೆಲ್ಲ ಕೋಟಿ ಕೋಟಿ ಕುಳಗಳು

    ಕಲ್ಯಾಣ ಕರ್ನಾಟಕದಂತೆ, ಕರಾವಳಿ ಮತ್ತು ಮೈಸೂರು ಭಾಗಕ್ಕೆ ಸಹ ಅನ್ಯಾಯವಾಗಿದೆ. ಆದರೆ ಬೆಳಗಾವಿಗೆ ಸಾಕಷ್ಟು ಕೊಟ್ಟಿದ್ದಾರೆ. ಇವರಿಗೆ ಮತ್ತೇನು ಬೇಕು, ಮೋದಿಯವರೇ ದಯವಿಟ್ಟು ಉಮೇಶ್ ಕತ್ತಿಯವರನ್ನು ಯಾವುದಾದರೂ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡಿ ಎಂದು ಉಮೇಶ್ ಕತ್ತಿಗೆ ರಾಜೂಗೌಡ ಚಮಕ್ ನೀಡಿದ್ದಾರೆ.

  • ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಿ: ಉಮೇಶ್ ಕತ್ತಿ

    ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಿ: ಉಮೇಶ್ ಕತ್ತಿ

    ಬೆಂಗಳೂರು: ವೈಟ್ ಫೀಲ್ಡ್ ನಲ್ಲಿರುವ ಭಾರತೀಯ ಆಹಾರ ನಿಗಮದ ಮುಖ್ಯ ಆಹಾರ ಸಂಗ್ರಹಣಾಗಾರಕ್ಕೆ ಬೇಟಿ ನೀಡಿದ್ದ ವೇಳೆ, ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಿ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ್ ಕತ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಭಾರತೀಯ ಆಹಾರ ನಿಗಮದ ಮುಖ್ಯ ಆಹಾರ ಸಂಗ್ರಹಣಾಗಾರಕ್ಕೆ ಇಂದು ದಿಢೀರ್ ಭೇಟಿ ನೀಡಿದ ಅವರು, ಆಹಾರ ನಿರ್ವಹಣೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು. ಗುಣಮಟ್ಟದ ಆಹಾರ ಧಾನ್ಯಗಳನ್ನು ಮಾತ್ರ ಜನರಿಗೆ ಬಿಡುಗಡೆ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ:  ನಾಳೆಯಿಂದ ಪಿಯುಸಿ ಕಾಲೇಜುಗಳು ಪ್ರಾರಂಭ- ಆನ್‍ಲೈನ್ ಮೂಲಕ ಪಠ್ಯ ಬೋಧನೆ

    ಈ ಸಂಗ್ರಹಣಾಗಾರವು ರಾಜ್ಯದಲ್ಲೇ ಅತಿ ದೊಡ್ಡ ಸಂಗ್ರಹಣಾಗಾರಗಳಲ್ಲಿ ಒಂದಾಗಿದೆ. ಇಲ್ಲಿ 1.05 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಸಂಗ್ರಹಿಸಬಹುದು. ಈ ಸಂಕೀರ್ಣದಲ್ಲಿ 17 ಉಗ್ರಾಣಗಳಿದ್ದು, ಪ್ರತಿ ಉಗ್ರಾಣದಲ್ಲಿ 5000 ಮೆಟ್ರಿಕ್ ಟನ್ ಆಹಾರ ದಾಸ್ತಾನು ಮಾಡಬಹುದಾಗಿದೆ. ಸಂಗ್ರಹಣಾಗಾರಕ್ಕೆ ರೈಲು ಕಂಟೇನರ್ ಮೂಲಕ ಆಹಾರ ಧಾನ್ಯಗಳ ಆಗಮನ, ಧಾನ್ಯಗಳ ವೈಜ್ಞಾನಿಕ ಸಂಗ್ರಹಣೆ ಹಾಗೂ ವಿತರಣೆ ಪ್ರಕ್ರಿಯೆಗಳನ್ನು ಸಚಿವರು ಪರಿಶೀಲಿಸಿದರು.

    ನಂತರ ನಿಗಮದ ಆಹಾರ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಭೇಟಿ ನೀಡಿ ಧಾನ್ಯ ವಿಶ್ಲೇಷಣಾ ವಿಧಾನಗಳನ್ನು ವೀಕ್ಷಿಸಿದರು. ನಿಗಮದ ಕಾರ್ಯವಿಧಾನಗಳ ಬಗ್ಗೆ ರಾಜ್ಯದ ಪ್ರಧಾನ ವ್ಯವಸ್ಥಾಪಕರಾದ ರಾಜು ವಿವರಿಸಿದರು. ನಿಗಮದ ಉಪ ಪ್ರಧಾನ ವ್ಯವಸ್ಥಾಪಕ ಕಮಲಾಕರ್, ಜಿಲ್ಲಾ ವ್ಯವಸ್ಥಾಪಕ ಭಾಸ್ಕರ್, ಗುಣಮಟ್ಟ ವಿಶ್ಲೇಷಕರಾದ ಜನಾರ್ಧನ ಹಾಗೂ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಡಾ.ಕೆ.ರಾಮೇಶ್ವರಪ್ಪ, ಮತ್ತಿತರರು ಉಪಸ್ಥಿತರಿದ್ದರು.