Tag: ಉಮೇಶ್ ಯಾದವ್

  • ಶಮಿಗೆ ಕೊರೊನಾ: T20 ಸರಣಿಯಿಂದ ಔಟ್ – 3 ವರ್ಷಗಳ ಬಳಿಕ ಉಮೇಶ್ ಯಾದವ್ ಕಂಬ್ಯಾಕ್

    ಶಮಿಗೆ ಕೊರೊನಾ: T20 ಸರಣಿಯಿಂದ ಔಟ್ – 3 ವರ್ಷಗಳ ಬಳಿಕ ಉಮೇಶ್ ಯಾದವ್ ಕಂಬ್ಯಾಕ್

    ಮುಂಬೈ: ಆಸ್ಟ್ರೇಲಿಯಾ (Australia) ವಿರುದ್ಧದ ತವರಿನ ಟಿ20 ಸರಣಿ (T20I Series) ಆರಂಭಕ್ಕೂ ಮುನ್ನ ಭಾರತಕ್ಕೆ (India) ಶಾಕ್ ಎದುರಾಗಿದೆ. ಟಿ20 ಸರಣಿಗೆ ಆಯ್ಕೆ ಆಗಿದ್ದ ವೇಗಿ ಮೊಹಮ್ಮದ್ ಶಮಿಗೆ (Mohammed Shami) ಕೊರೊನಾ (Corona) ಪಾಸಿಟಿವ್ ಕಂಡುಬಂದ ಕಾರಣ ಸರಣಿಯಿಂದ ಹೊರ ನಡೆದಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಸೆ.20 ರಿಂದ ಆರಂಭವಾಗಲಿದ್ದು, ಈಗಾಗಲೇ ಆಟಗಾರರು ತಂಡ ಸೇರಿಕೊಂಡಿದ್ದಾರೆ. ಈ ವೇಳೆ ಕೊರೊನಾ ಟೆಸ್ಟ್ ಮಾಡಿದಾಗ ಶಮಿಗೆ ಪಾಸಿಟಿವ್ ವರದಿಯಾಗಿದೆ. ಬಳಿಕ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಿದ್ದು, ಆಸ್ಟ್ರೇಲಿಯಾ ಸರಣಿಯಿಂದ ಹೊರಗುಳಿಯಲಿದ್ದಾರೆ. ಮುಂದಿನ ದಕ್ಷಿಣ ಆಫ್ರಿಕಾ ಸರಣಿ ವೇಳೆ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಬಿಸಿಸಿಐನ (BCCI) ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕೊಹ್ಲಿಯನ್ನು ಆರಂಭಿಕನನ್ನಾಗಿ ಆಡಿಸಿ ತಲೆ ಇಲ್ಲದ ಕೆಲಸ ಮಾಡ್ಬೇಡಿ- ಗಂಭೀರ್ ಗರಂ

    ಶಮಿ ತಂಡದಿಂದ ಹೊರನಡೆದಿರುವುದರಿಂದ ಅವರ ಸ್ಥಾನಕ್ಕೆ ಉಮೇಶ್ ಯಾದವ್ (Umesh Yadav) ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ 3 ವರ್ಷಗಳ ಬಳಿಕ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಿದಂತಾಗಿದೆ. ಉಮೇಶ್ ಯಾದವ್ 2019ರಲ್ಲಿ ಕೊನೆಯದಾಗಿ ಭಾರತ ಪರವಾಗಿ ಟಿ20 ಪಂದ್ಯವಾಡಿದ್ದರು ಬಳಿಕ ಟಿ20 ತಂಡದಿಂದ ಡ್ರಾಪ್ ಆಗಿದ್ದ ಉಮೇಶ್ ಯಾದವ್ 2022ರ ಐಪಿಎಲ್‍ನಲ್ಲಿ (IPL) ಕೋಲ್ಕತ್ತಾ ನೈಟ್ ರೈಡರ್ಸ್ (KKR) ಪರ ಭರ್ಜರಿ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು. ಇದನ್ನೂ ಓದಿ: ಮಹತ್ತರವಾದ ಕಾರಣಕ್ಕಾಗಿ ಮತ್ತೆ ಕ್ರಿಕೆಟ್ ಆಡಲು ಮೈದಾನಕ್ಕಿಳಿದ ಲೆಜೆಂಡ್ ಕ್ರಿಕೆಟಿಗರು

    ಇದೀಗ ಶಮಿ ಬದಲಿಗೆ ಯಾದವ್ ಕಡೆ ಆಯ್ಕೆ ಸಮಿತಿ ಒಲವು ತೋರಿದ್ದು, ಯಾದವ್ ಕೌಂಟಿ ಕ್ರಿಕೆಟ್‍ನಲ್ಲೂ ಗಮನಾರ್ಹ ಬೌಲಿಂಗ್ ಪ್ರದರ್ಶಿಸಿದ್ದರು. ಹಾಗಾಗಿ ಮತ್ತೊಮ್ಮೆ ಟಿ20 ತಂಡಕ್ಕೆ ಯಾದವ್ ಆಯ್ಕೆ ಅಚ್ಚರಿ ಪಡಬೇಕಾಗಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಕಳೆದ ವರ್ಷ ಬೆಂಚ್ ಬಿಸಿ ಮಾಡಿದ ಆಟಗಾರರು ಈ ಬಾರಿ ಮ್ಯಾಚ್ ವಿನ್ನರ್ಸ್‌

    ಕಳೆದ ವರ್ಷ ಬೆಂಚ್ ಬಿಸಿ ಮಾಡಿದ ಆಟಗಾರರು ಈ ಬಾರಿ ಮ್ಯಾಚ್ ವಿನ್ನರ್ಸ್‌

    ಮುಂಬೈ: 14ನೇ ಆವೃತ್ತಿ ಐಪಿಎಲ್‍ನಲ್ಲಿ ಉಮೇಶ್ ಯಾದವ್ ಮತ್ತು ಕುಲ್‍ದೀಪ್ ಯಾದವ್ ಬೆರಳೆಣಿಕೆ ಪಂದ್ಯವಾಡಿದ್ದನ್ನು ಹೊರತು ಪಡಿಸಿ ಹೆಚ್ಚಿನ ಪಂದ್ಯಗಳಲ್ಲಿ ಹೊರಗುಳಿದಿದ್ದರು. ಆದರೆ ಈ ಬಾರಿ ಇವರಿಬ್ಬರೂ ಕೂಡ ಮ್ಯಾಚ್ ವಿನ್ನರ್‌ಗಳಾಗಿ ಸದ್ದು ಮಾಡುತ್ತಿದ್ದಾರೆ.

    14ನೇ ಆವೃತ್ತಿ ಐಪಿಎಲ್‍ನಲ್ಲಿ ಉಮೇಶ್ ಯಾದವ್ ಡೆಲ್ಲಿ ಕಾಪಿಟಲ್ಸ್ ಪರ ಕೇವಲ 2 ಪಂದ್ಯ ಆಡಿದ್ದರು. ಉಳಿದ ಬಹುತೇಕ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಉಮೇಶ್ ಯಾದವ್‍ರಂತೆ ಕುಲ್‍ದೀಪ್ ಯಾದವ್ 14ನೇ ಆವೃತ್ತಿ ಐಪಿಎಲ್‍ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಬೆರಳೆಣಿಕೆಯ ಪಂದ್ಯವಾಡಿ ಆ ಬಳಿಕ ಹೊರಗುಳಿದಿದ್ದರು. ಆದರೆ 15ನೇ ಆವೃತ್ತಿ ಐಪಿಎಲ್‍ನಲ್ಲಿ ಈ ಇಬ್ಬರೂ ಆಟಗಾರರು ಕೂಡ ತಮ್ಮ ಭರ್ಜರಿ ಬೌಲಿಂಗ್ ಮೂಲಕ ಎದುರಾಳಿ ಆಟಗಾರಲ್ಲಿ ನಡುಕ ಹುಟ್ಟಿಸುತ್ತಿದ್ದಾರೆ. ಜೊತೆಗೆ ಪರ್ಪಲ್ ಕ್ಯಾಪ್‍ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಾಹುಲ್ ಗೋಲ್ಡನ್ ಡಕ್ – ನಿರಾಸೆಗೊಂಡ ಆಥಿಯಾ ಶೆಟ್ಟಿ

    ಈಗಾಗಲೇ 15ನೇ ಆವೃತ್ತಿಯ ಮೊದಲ 5 ಪಂದ್ಯಗಳನ್ನು ಗಮನಿಸಿದಾಗ ಉಮೇಶ್ ಯಾದವ್ ಮತ್ತು ಕುಲ್‍ದೀಪ್ ಯಾದವ್ ಎದುರಾಳಿ ತಂಡಕ್ಕೆ ಮಾರಕವಾಗಿ ಪರಿಣಮಿಸಿದ್ದಾರೆ. ಉಮೇಶ್ ಯಾದವ್ 5 ಪಂದ್ಯಗಳಿಂದ 10 ವಿಕೆಟ್ ಕಬಳಿಸಿದ್ದು, ಕುಲ್‍ದೀಪ್ ಯಾದವ್ 4 ಪಂದ್ಯಗಳಿಂದ 10 ವಿಕೆಟ್ ಕಿತ್ತು ಘರ್ಜಿಸುತ್ತಿದ್ದಾರೆ. ಇದನ್ನೂ ಓದಿ: ಡೆಲ್ಲಿ ಗೆಲುವಿನ ಸಂಭ್ರಮಾಚರಣೆ- ಹೌ ಈಸ್ ದಿ ಜೋಶ್: ವಾರ್ನರ್

    ಈ ಹಿಂದಿನ ಆವೃತ್ತಿ ಐಪಿಎಲ್‍ನಲ್ಲಿ ಕಳಪೆ ಪ್ರದರ್ಶನವನ್ನು ಕಂಡು ಫ್ರಾಂಚೈಸಿಗಳು ಈ ಇಬ್ಬರನ್ನು ಬೆಂಚ್ ಬಿಸಿ ಮಾಡಿಸಿತ್ತು. ಈ ಬಾರಿ ನೂತನ ಫ್ರಾಂಚೈಸ್‍ಗಳು ಯಾದವ್ ದ್ವಯರ ಮೇಲೆ ಭರವಸೆ ಇಟ್ಟಿರುವುದಕ್ಕೆ ಸರಿಯಾಗಿ ತಮ್ಮ ಭರ್ಜರಿ ಬೌಲಿಂಗ್ ಮೂಲಕ ತಂಡದ ಮ್ಯಾಚ್ ವಿನ್ನರ್ ಆಟಗಾರರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

  • ಯಾದವ್ ಬೌಲಿಂಗ್‍ಗೆ ಕೇಶವ್ ಕ್ಲೀನ್ ಬೌಲ್ಡ್ – ಎಗರಿ ಮಾರುದ್ದ ಬಿದ್ದ ಮಿಡಲ್ ಸ್ಟಂಪ್

    ಯಾದವ್ ಬೌಲಿಂಗ್‍ಗೆ ಕೇಶವ್ ಕ್ಲೀನ್ ಬೌಲ್ಡ್ – ಎಗರಿ ಮಾರುದ್ದ ಬಿದ್ದ ಮಿಡಲ್ ಸ್ಟಂಪ್

    ಕೇಪ್‍ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ನ ಎರಡನೇ ದಿನ ಭಾರತದ ವೇಗಿ ಉಮೇಶ್ ಯಾದವ್ ಪರ್ಫೆಕ್ಟ್ ಬೌಲಿಂಗ್‍ಗೆ ಮಿಡಲ್ ಸ್ಟಂಪ್ ಎಗರಿ ಮಾರುದ್ದ ಬಿದ್ದಿದೆ. ಈ ವೀಡಿಯೋ ಇದೀಗ ವೈರಲ್ ಆಗ ತೊಡಗಿದೆ.

    ಮೊಹಮ್ಮದ್ ಸಿರಾಜ್ ಗಾಯಾಳುವಾಗಿ ಮೂರನೇ ಟೆಸ್ಟ್‌ನಿಂದ ಹೊರಗುಳಿದಿದ್ದು ಅವರ ಸ್ಥಾನಕ್ಕೆ ಉಮೇಶ್ ಯಾದವ್ ಆಯ್ಕೆಯಾಗಿದ್ದರು. ಎರಡನೇ ದಿನದಾಟದಲ್ಲಿ ಆಫ್ರಿಕಾ ಬ್ಯಾಟ್ಸ್‌ಮ್ಯಾನ್‌ ಕೇಶವ್ ಮಹರಾಜ್ ಸತತ ಬೌಂಡರಿಗಳನ್ನು ಹೊಡೆಯುತ್ತ ಭಾರತಕ್ಕೆ ಮುಳುವಾಗುವ ಸೂಚನೆ ನೀಡಿದ್ದರು. ಈ ವೇಳೆ ದಾಳಿಗಿಳಿದ ಯಾದವ್‍ರ ಉತ್ತಮ ಎಸೆತವನ್ನು ರಕ್ಷಣಾತ್ಮಕ ಆಟವಾಡಲು ಯತ್ನಿಸಿದ ಮಹರಾಜ್ ಕ್ಲೀನ್ ಬೌಲ್ಡ್ ಆದರು. ಅದೂ ಕೂಡ ಮಿಡಲ್ ಸ್ಟಂಪ್ ಎಗರಿ ಬಿತ್ತು.  ಇದನ್ನೂ ಓದಿ: ವಾಷಿಂಗ್ಟನ್ ಸುಂದರ್‌ಗೆ ಕೊರೊನಾ – ಜಯಂತ್ ಯಾದವ್‌ಗೆ ಒಲಿದ ಅದೃಷ್ಟ

    ಇದರೊಂದಿಗೆ ಮಹರಾಜ್‍ರ 25 ರನ್ (45 ಎಸೆತ, 4 ಬೌಂಡರಿ)ಗಳ ಸೊಗಸಾದ ಇನ್ನಿಂಗ್ಸ್ ಕೊನೆಗೊಂಡಿತು. ಇಂದು ಬ್ಯಾಟಿಂಗ್ಸ್ ಮುಂದುವರಿಸುತ್ತಿರುವ ಆಫ್ರಿಕಾ ಪರ ಕೀಗನ್ ಪೀಟರ್ಸನ್ ಅರ್ಧಶತಕ ಸಿಡಿಸಿ ತಂಡಕ್ಕೆ ಚೇತರಿಕೆ ನೀಡಿದ್ದು, 47 ಓವರ್‌ಗಳಲ್ಲಿ ಆಫ್ರಿಕಾ 4 ವಿಕೆಟ್ ಕಳೆದುಕೊಂಡು 136 ರನ್ ಗಳಿಸಿದ್ದು, 87 ರನ್‍ಗಳ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಮುಂದುವರಿಸುತ್ತಿದೆ. ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದ ಬಾಕ್ಸರ್ ಲವ್ಲಿನಾ ಈಗ ಡಿಎಸ್‌ಪಿ

  • ಅರ್ಧದಲ್ಲೇ ಮೈದಾನ ತೊರೆದ ಉಮೇಶ್ ಯಾದವ್

    ಅರ್ಧದಲ್ಲೇ ಮೈದಾನ ತೊರೆದ ಉಮೇಶ್ ಯಾದವ್

    ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡಕ್ಕೆ ಇದೀಗ ಮತ್ತೊಂದು ಅಘಾತ ಎದುರಾಗಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಭಾರತದ ಬಲಗೈ ವೇಗದ ಬೌಲರ್ ಉಮೇಶ್ ಯಾದವ್ ಗಾಯಕ್ಕೆ ತುತ್ತಾಗಿ ಮೈದಾನ ತೊರೆದಿದ್ದಾರೆ.

    ಮೂರನೇ ದಿನದಾಟದ ಆರಂಭದಲ್ಲಿ ಬೌಲಿಂಗ್‍ಗಿಳಿದ ಉಮೇಶ್ ಯಾದವ್ ತಮ್ಮ 4ನೇ ಓವರ್ ಪೂರ್ಣಗೊಳಿಸಲಾಗದೆ ಪೆವಿಲಿಯನ್ ಸೇರಿಕೊಂಡರು. ಮೀನಖಂಡದ ನೋವಿಗೆ ಒಳಗಾದ ಉಮೇಶ್ ಫಿಸಿಯೋ ನಿತೀನ್ ಪಟೇಲ್ ಅವರ ಸಲಹೆಯ ಮೆರೆಗೆ ತಕ್ಷಣ ಮೈದಾನ ತೊರೆಯಬೇಕಾಯಿತು.

    ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ, ಉಮೇಶ್ ಯಾದವ್ ತಮ್ಮ ನಾಲ್ಕನೇ ಓವರ್ ಬೌಲಿಂಗ್ ಮಾಡುತ್ತಿದ್ದಾಗ ಮೀನಖಂಡದ ನೋವಿಗೊಳಗಾಗಿದ್ದಾರೆ. ತಕ್ಷಣ ಬಿಸಿಸಿಐ ವೈದ್ಯಕೀಯ ತಂಡವು ಅವರನ್ನು ಪರೀಕ್ಷಿಸಿದ್ದು, ಸ್ಕ್ಯಾನ್ ಮಾಡಲು ಕರೆದೊಯ್ಯಲಾಗಿದೆ ಎಂದು ಹೇಳಿಕೆ ನೀಡಿದೆ.  ಇದನ್ನೂ ಓದಿ: ಒಂದೇ ದಿನದಲ್ಲಿ 11 ವಿಕೆಟ್‌ ಪತನ – ಆಸ್ಟ್ರೇಲಿಯಾಗೆ 2 ರನ್‌ ಮುನ್ನಡೆ

    ದ್ವಿತಿಯ ಇನ್ನಿಂಗ್ಸ್ ಬ್ಯಾಟಿಂಗ್‍ಗಿಳಿದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಜೋ ಬ‌ರ್ನ್ಸ್‌ ವಿಕೆಟ್ ಪಡೆದು ಭಾರತಕ್ಕೆ ಆರಂಭಿಕ ಯಶಸ್ಸು ತಂದು ಕೊಟ್ಟ ಯಾದವ್, 3.3 ಓವರ್‍ಗಳಲ್ಲಿ 5 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ತಮ್ಮ ನಾಲ್ಕನೇ ಓವರ್‍ನ ಮೂರು ಬಾಲ್ ಬಾಕಿ ಇರುವಂತೆ ಮೈದಾನದಿಂದ ಹೊರ ನಡೆದ ಉಮೇಶ್ ಯಾದವ್ ಅವರ ಓವರ್‍ನ ಮುಂದಿನ ಮೂರು ಎಸೆತವನ್ನು ಮೊದಲ ಪಂದ್ಯವಾಡುತ್ತಿರುವ ವೇಗಿ ಸಿರಾಜ್ ಪೂರ್ಣಗೊಳಿಸಿದರು.

    ಆಸ್ಟ್ರೇಲಿಯಾ ಸರಣಿಯ ಆರಂಭದಲ್ಲಿ ಗಾಯಕ್ಕೆ ತುತ್ತಾಗಿ ಟೂರ್ನಿಯಿಂದ ಇಶಾಂತ್ ಶರ್ಮಾ ಮತ್ತು ಭುವನೇಶ್ವರ್ ಕುಮಾರ್ ಹೊರಗುಳಿದಿದ್ದರೆ, ಟೂರ್ನಿಯ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡ ಶಮಿ ತಂಡದಿಂದ ಈಗಾಗಲೇ ಬೇರ್ಪಟ್ಟಿದ್ದಾರೆ. ಇದೀಗ ಉಮೇಶ್ ಯಾದವ್ ಅವರ ಗಾಯದಿಂದಾಗಿ ಟೀ ಇಂಡಿಯಾದ ಗಾಯದ ಮೇಲೆ ಬರೆ ಎಳೆದಂತಾಗಿದೆ.

  • ಆರ್‌ಸಿಬಿ ಕೊಹ್ಲಿ, ಎಬಿಡಿ ಮೇಲೆ ಅವಲಂಬಿತವಾಗಿಲ್ಲ: ಉಮೇಶ್ ಯಾದವ್

    ಆರ್‌ಸಿಬಿ ಕೊಹ್ಲಿ, ಎಬಿಡಿ ಮೇಲೆ ಅವಲಂಬಿತವಾಗಿಲ್ಲ: ಉಮೇಶ್ ಯಾದವ್

    – ರಣಜಿಯಲ್ಲಿ ಖಾಲಿ ಮೈದಾನದಲ್ಲಿ ಆಡಿ ಅಭ್ಯಾಸವಿದೆ

    ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಮೇಲೆ ಅವಲಂಬಿತವಾಗಿದೆ ಎಂಬ ಮಾತನ್ನು ಆರ್‌ಸಿಬಿ  ತಂಡದ ಅನುಭವಿ ವೇಗಿ ಉಮೇಶ್ ಯಾದವ್ ಅವರು ತಳ್ಳಿ ಹಾಕಿದ್ದಾರೆ.

    ಆರ್‌ಸಿಬಿ ತಂಡ ಐಪಿಎಲ್ ಆಡಲು ಈಗಾಗಲೇ ಯುಎಇಗೆ ತೆರಳಿ ಅಭ್ಯಾಸವನ್ನು ಆರಂಭಿಸಿದೆ. ಈ ಬಾರಿ ಕಪ್ ಗೆಲ್ಲುವ ತವಕದಲ್ಲಿ ಭರ್ಜರಿ ಸಿದ್ಧತೆಯನ್ನು ಕೂಡ ನಡೆಸಿದೆ. ಅಂತಯೇ ತಂಡದ ಪ್ರಮುಖ ವೇಗಿ ಉಮೇಶ್ ಯಾದವ್ ಅವರು ಮಾತನಾಡಿ, ರಣಜಿಯಲ್ಲಿ ಖಾಲಿ ಮೈದಾನದಲ್ಲಿ ಆಡಿ ಅಭ್ಯಾಸವಿದೆ ಎಂದು ಹೇಳಿದ್ದಾರೆ.

    ಇದೇ ವೇಳೆ ಆರ್‌ಸಿಬಿ ತಂಡ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಮೇಲೆ ಜಾಸ್ತಿ ಅವಲಂಬಿತವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಜನರು ನಾವು ಅವರ ಮೇಲೆ ಅವಲಂಬಿತವಾಗಿದ್ದೇವೆ ಎಂದು ಹೇಳುತ್ತಾರೆ. ಅವರು ಕೆಲ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ನಿಜ. ಆದರೆ ಇಡೀ ತಂಡವೇ ಅವರ ಮೇಲೆ ಅವಲಂಬಿತವಾಗಿದೆ ಎಂಬುದನ್ನು ಒಪ್ಪುವುದಿಲ್ಲ. ಒಂದು ಪಂದ್ಯ ಗೆಲ್ಲಬೇಕಾದರೆ ತಂಡದ ಪ್ರತಿಯೊಬ್ಬ ಆಟಗಾರನ ಶ್ರಮವಿರುತ್ತದೆ ಎಂದು ತಿಳಿಸಿದ್ದಾರೆ.

    ತಂಡದಲ್ಲಿ 11 ಜನರು ಒಟ್ಟಿಗೆ ಆಡುತ್ತೇವೆ. ಅದರಲ್ಲಿ ನಾವು ಇಬ್ಬರೇ ಆಟಗಾರರ ಮೇಲೆ ಅವಲಂಬಿತವಾದರೆ, ಇನ್ನುಳಿದ ಆಟಗಾರರು ಏನೂ ಮಾಡುತ್ತಾರೆ. ತಂಡದಲ್ಲಿ ಪ್ರತಿಯೊಬ್ಬ ಆಟಗಾರನೂ ಕೂಡ ಪಂದ್ಯ ಗೆಲ್ಲಲು ತನ್ನದೇ ಆದ ಕೊಡುಗೆ ನೀಡಿರುತ್ತಾನೆ. ಆದರೆ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಉಳಿದ ಆಟಗಾರರಿಗಿಂತ ಜಾಸ್ತಿ ಕೊಡುಗೆ ನೀಡಿದ್ದಾರೆ ಅಷ್ಟೆ. ತಂಡಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅವರು ಜಾಸ್ತಿ ಶ್ರಮಪಟ್ಟಿದ್ದಾರೆ ಎಂದು ಉಮೇಶ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಜೊತೆಗೆ ಖಾಲಿ ಮೈದಾನದಲ್ಲಿ ಐಪಿಎಲ್ ಆಡುವ ಬಗ್ಗೆ ಮಾತನಾಡಿರುವ ಅವರು, ಖಾಲಿ ಮೈದಾನದಲ್ಲಿ ಆಡುವುದು ನಮಗೆ ಹೊಸದೇನಲ್ಲ. ನಾವು ಅದನ್ನು ಯುಎಇಯಲ್ಲಿ ನೋಡಿಲ್ಲ. ಆದರೆ ಭಾರತದಲ್ಲಿ ಬಹಳ ರಣಜಿ ಟ್ರೋಫಿ ಪಂದ್ಯಗಳನ್ನು ಖಾಲಿ ಮೈದಾನದಲ್ಲಿ ಆಡಿದ್ದೇವೆ. ಹಲವಾರು ರಣಜಿ ಪಂದ್ಯದ ನಂತರ ನಾನು ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಬಂದಿದ್ದೇನೆ. ಹೀಗಾಗಿ ಖಾಲಿ ಮೈದಾನದಲ್ಲಿ ನಮ್ಮನ್ನು ನಾವೇ ಹೇಗೆ ಹುರಿದುಂಬಿಸಿಕೊಳ್ಳಬೇಕು ಎಂದು ಗೊತ್ತಿದೆ ಎಂದಿದ್ದಾರೆ.

    ಆರ್‌ಸಿಬಿ ಕಳೆದ ಅಗಸ್ಟ್ 21ರಂದೇ ಯುಎಇಗೆ ಹೋಗಿದ್ದು, ಆರು ದಿನಗಳ ಕ್ವಾಂರಟೈನ್ ಅವಧಿಯನ್ನು ಮುಗಿಸಿ ಅಭ್ಯಾಸವನ್ನು ಆರಂಭ ಮಾಡಿದೆ. ಸೆಪ್ಟಂಬರ್ 19ರಿಂದ ಖಾಲಿ ಮೈದಾನದಲ್ಲಿ ಐಪಿಎಲ್ ಆರಂಭವಾಗಲಿದೆ. ಮೊದಲ ಪಂದ್ಯ ಮುಂಬೈ ಮತ್ತು ಚೆನ್ನೈ ತಂಡಗಳ ನಡುವೆ ನಡೆಯಬೇಕಿತ್ತು. ಆದರೆ ಚೆನ್ನೈ ತಂಡದಲ್ಲಿ 13 ಮಂದಿಗೆ ಕೊರೊನಾ ಕಾಣಿಸಿಕೊಂಡ ಕಾರಣ ಆರ್‌ಸಿಬಿ ಆರಂಭಿಕ ಪಂದ್ಯವನ್ನು ಮುಂಬೈ ಎದುರು ಆಡಲಿದೆ ಎಂದು ಹೇಳಲಾಗಿದೆ.

  • ಸಿಕ್ಸರ್ ಮೇಲೆ ಸಿಕ್ಸರ್ – ಸಚಿನ್ ದಾಖಲೆ ಸರಿಗಟ್ಟಿದ ಉಮೇಶ್ ಯಾದವ್

    ಸಿಕ್ಸರ್ ಮೇಲೆ ಸಿಕ್ಸರ್ – ಸಚಿನ್ ದಾಖಲೆ ಸರಿಗಟ್ಟಿದ ಉಮೇಶ್ ಯಾದವ್

    ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ, 3ನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅರ್ಧ ಶತಕ ಗಳಿಸಿದರು. 118 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ ಜಡೇಜಾ 51 ರನ್ ಗಳಿಸಿದರು. ಇತ್ತ ಅಂತಿಮ ಹಂತದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಉಮೇಶ್ ಯಾದವ್ 5 ಭರ್ಜರಿ ಸಿಕ್ಸರ್ ನೊಂದಿಗೆ 31 ರನ್ ಗಳಿಸಿ ಔಟಾದರು.

    ಟೀಂ ಇಂಡಿಯಾ ಪರ ರೋಹಿತ್ 212 ರನ್, ರಹಾನೆ 115 ರನ್ ಹಾಗೂ ಜಡೇಜಾರ ಅರ್ಧ ಶತಕ ನೆರವನಿಂದ ತಂಡ ಪಂದ್ಯದಲ್ಲಿ ಮೇಲುಗೈ ಸಾಧಿಸಿತ್ತು. ಜಡೇಜಾ ಔಟಾಗುತ್ತಿದಂತೆ ಆಗಮಿಸಿದ ಉಮೇಶ್ ಯಾದವ್ ಬಿರುಸಿನ ಭರ್ಜರಿ ಬ್ಯಾಟಿಂಗ್ ನಡೆಸಿದರು. 112 ಓವರಿನಲ್ಲಿ ತಾನು ಎದುರಿಸಿದ ಮೊದಲ ಎರಡು ಎಸೆತವನ್ನು ಸಿಕ್ಸರ್ ಗಟ್ಟಿದ ಯಾದವ್, ಆ ಬಳಿಕ 116ನೇ ಓವರಿನ 1, 3, 5ನೇ ಎಸೆತಗಳಲ್ಲಿ ಸಿಕ್ಸರ್ ಸಿಡಿಸಿದರು. ಇದೇ ಓವರಿನ 6ನೇ ಎಸೆತವನ್ನು ಸಿಕ್ಸರ್ ಗಟ್ಟುವ ಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು.

    ಕೇವಲ 10 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿ 310 ಸ್ಟ್ರೈಕ್ ನೊಂದಿಗೆ 31 ರನ್ ಗಳಿಸಿ ಔಟಾದರು. ಅಲ್ಲದೇ ಟೆಸ್ಟ್ ಪಂದ್ಯವೊಂದರಲ್ಲಿ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್ ಗಟ್ಟಿದ ಭಾರತದ 4ನೇ ಆಟಗಾರ ಎನಿಸಿಕೊಂಡರು. ಈ ಹಿಂದೆ ಸಚಿನ್, ಧೋನಿ, ಜಹೀರ್ ಖಾನ್ ಈ ಸಾಧನೆ ಮಾಡಿದ್ದರು. ವಿಶೇಷ ಎಂದರೆ ಉಮೇಶ್ ಮೊದಲ ಎಸೆತ ಮಾತ್ರವಲ್ಲದೇ 2ನೇ ಎಸೆತದಲ್ಲೂ ಸಿಕ್ಸರ್ ಸಿಡಿಸಿದ್ದು, ಟೆಸ್ಟ್ ಕ್ರಿಕೆಟ್‍ನಲ್ಲಿ ಈ ಸಾಧನೆ ಮಾಡಿದ 3ನೇ ಆಟಗಾರ ಎನಿಸಿಕೊಂಡರು. ಈ ಹಿಂದೆ 2013 ರಲ್ಲಿ ಸಚಿನ್ ಹಾಗೂ 1948 ರಲ್ಲಿ ಇಂಗ್ಲೆಂಡ್ ಆಟಗಾರ ಫೋಫಿ ವಿಲಿಯಮ್ಸ್ ಈ ಸಾಧನೆ ಮಾಡಿದ್ದರು.

    ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ನಷ್ಟಕ್ಕೆ 497 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು. ಆ ಬಳಿಕ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ 9 ರನ್ ಗಳಿಗೆ ಆರಂಭಿಕ ಆಟಗಾರರಾದ ಡಿಕಾಕ್ ಹಾಗೂ ಎಲ್ಗರ್ ವಿಕೆಟ್ ಕಳೆದು ಸಂಕಷ್ಟಕ್ಕೆ ಸಿಲುಕಿದೆ. ಟೀಂ ಇಂಡಿಯಾ ಪರ ಉಮೇಶ್ ಯಾದವ್ ಮತ್ತು ಶಮಿ ತಲಾ 1 ವಿಕೆಟ್ ಪಡೆದರೆ, ದಕ್ಷಿಣ ಆಫ್ರಿಕಾ ಪರ ಡುಪ್ಲೆಸಿಸ್ 1 ರನ್, ಜುಬೇರ್ ಹಮ್ಜಾ ಶೂನ್ಯ ರನ್ ಗಳಿಸಿ 3ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

  • ಟೀಂ ಇಂಡಿಯಾ ಪರ ಅಪರೂಪದ ದಾಖಲೆ ಬರೆದ ಪೃಥ್ವಿ ಶಾ

    ಟೀಂ ಇಂಡಿಯಾ ಪರ ಅಪರೂಪದ ದಾಖಲೆ ಬರೆದ ಪೃಥ್ವಿ ಶಾ

    ಬೆಂಗಳೂರು: ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಪಾದಾರ್ಪಣೆ ಮಾಡಿರುವ ಪೃಥ್ವಿ ಶಾ ಶತಕ ಸಿಡಿಸುವ ಮೂಲಕ ದಾಖಲೆ ಬರೆದಿದ್ದರು. ಇದರ ಬೆನ್ನಲ್ಲೇ ವಿಂಡೀಸ್ ವಿರುದ್ಧ ಅಂತ್ಯಗೊಂಡ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಗೆಲುವಿನ ರನ್ ಬಾರಿಸಿದ ಕಿರಿಯ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.

    2ನೇ ಇನ್ನಿಂಗ್ಸ್ ನಲ್ಲಿ 72 ರನ್‍ಗಳ ಸುಲಭ ಗುರಿ ಪಡೆದ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 16.1 ಓವರ್ ಗಳಲ್ಲಿ ಭರ್ಜರಿ ಗೆಲುವು ಪಡೆಯಿತು. ಆರಂಭಿಕರಾಗಿ ಕಣಕ್ಕೆ ಇಳಿದ ಪೃಥ್ವಿ ಶಾ 45 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ 33 ರನ್ ಸಿಡಿಸಿದರು. 16 ಓವರ್ ಮೊದಲ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಶಾ ಈ ಅಪರೂಪದ ದಾಖಲೆ ಬರೆದರು.

    ಈಗಾಗಲೇ ಉತ್ತಮ ಆರಂಭಿಕ ಆಟಗಾರ ಎಂದು ಸಾಬೀತು ಪಡಿಸಿರುವ ಶಾ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದರು. 2ನೇ ಟೆಸ್ಟ್ ಮೊದಲ ಇನ್ನಿಂಗ್ಸ್ ನಲ್ಲಿ ಬಿರುಸಿನ ಆಟವಾಡಿ ಕೇವಲ 39 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿ ಮಿಂಚಿದ್ದರು. ಅಂತಿಮವಾಗಿ 70 ಎಸೆತಗಳಲ್ಲಿ 11 ಅಕರ್ಷಕ ಬೌಂಡರಿ, 1 ಸಿಕ್ಸರ್ ನೆರವಿನಿಂದ 70 ರನ್ ಗಳಿಸಿ ಔಟಾದರು. ಇದರೊಂದಿಗೆ ಅರ್ಹವಾಗಿಯೇ ಸರಣಿಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.

    ಇತ್ತ 2ನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್, 2ನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದು ಪಂದ್ಯದ ಗೆಲುವಿಗೆ ಕಾರಣರಾದ ಉಮೇಶ್ ಯಾದವ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಮೂಲಕ ಉಮೇಶ್ ಯಾದವ್ ತವರು ನೆಲದ ಟೆಸ್ಟ್ ಪಂದ್ಯವೊಂದರಲ್ಲಿ 10 ವಿಕೆಟ್ ಪಡೆದ ಸಾಧನೆ ಮಾಡಿದ್ದ ಶ್ರೀನಾಥ್, ಅನಿಲ್ ಕುಂಬ್ಳೆ, ಕಪಿಲ್ ದೇವ್, ವೆಂಕಟೇಶ್ ಪ್ರಸಾದ್, ಜಹೀರ್ ಖಾನ್, ಇಶಾಂತ್ ಶರ್ಮಾ ಮತ್ತು ಇರ್ಫಾನ್ ಪಠಾಣ್ ಸಾಲಿಗೆ ಸೇರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಟ್ಟು 262 ಟೆಸ್ಟ್ ಗಳಲ್ಲಿ ಫಸ್ಟ್ ಟೈಂ ಭುವಿ, ಶಮಿ, ಯಾದವ್‍ರಿಂದ ದಾಖಲೆ ನಿರ್ಮಾಣ

    ಒಟ್ಟು 262 ಟೆಸ್ಟ್ ಗಳಲ್ಲಿ ಫಸ್ಟ್ ಟೈಂ ಭುವಿ, ಶಮಿ, ಯಾದವ್‍ರಿಂದ ದಾಖಲೆ ನಿರ್ಮಾಣ

    ಕೋಲ್ಕತ್ತಾ: ಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್ ನ ಎರಡು ಇನ್ನಿಂಗ್ಸ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಪಡೆಯುವ ಮೂಲಕ ವೇಗದ ಬೌಲರ್ ಗಳು ತವರಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

    ಭಾರತದ ನೆಲದಲ್ಲಿ ಕೋಲ್ಕತ್ತಾ ಟೆಸ್ಟ್ ಸೇರಿ ಒಟ್ಟು 262 ಪಂದ್ಯಗಳು ನಡೆದಿದ್ದು, ಇದೇ ಮೊದಲ ಬಾರಿಗೆ ವಿರೋಧಿ ತಂಡದ ಎಲ್ಲ ವಿಕೆಟ್ ಗಳು ವೇಗದ ಬೌಲರ್ ಗಳ ಪಾಲಾಗಿದೆ.

    ಭುವನೇಶ್ವರ್ ಕುಮಾರ್ ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದಿದ್ದರೆ, ಎರಡನೇ ಇನ್ನಿಂಗ್ಸ್ ನಲ್ಲೂ 4 ವಿಕೆಟ್ ಪಡೆಯುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

    ಮೊದಲ ಇನ್ನಿಂಗ್ಸ್ ನಲ್ಲಿ ಮೊಹಮ್ಮದ್ ಶಮಿ 4 ವಿಕೆಟ್ ಕಿತ್ತರೆ, ಉಮೇಶ್ ಯಾದವ್ 2 ವಿಕೆಟ್ ಕಿತ್ತಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಶಮಿ 2 ವಿಕೆಟ್ ಪಡೆದರೆ, ಉಮೇಶ್ ಯಾದವ್ ಒಂದು ವಿಕೆಟ್ ಪಡೆದರು.

    ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 88.4 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 352 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು. 231 ರನ್ ಗಳ ಗುರಿಯನ್ನು ಪಡೆದ ಲಂಕಾ 26.3 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 75 ರನ್ ಗಳಿಸಿದ್ದ ವೇಳೆ ಪಂದ್ಯವನ್ನು ಕೊನೆಗಳಿಸಿದ ಪರಿಣಾಮ ಡ್ರಾದಲ್ಲಿ ಅಂತ್ಯಗೊಂಡಿತು.

    ಭಾರತದ ಪರ ಕೊಹ್ಲಿ ಔಟಾಗದೇ 104 ರನ್(119 ಎಸೆತ, 12 ಬೌಂಡರಿ, 2 ಸಿಕ್ಸರ್) ಹೊಡೆದರು. ಏಕದಿನದಲ್ಲಿ 32 ಶತಕ ಹೊಡೆದಿದ್ದ ಕೊಹ್ಲಿ ಇಂದು ಟೆಸ್ಟ್ ನಲ್ಲಿ 18ನೇ ಶತಕ ಹೊಡೆದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಒಟ್ಟು 50ನೇ ಶತಕ ಸಿಡಿಸಿದ ಸಾಧನೆ ಮಾಡಿದ ವಿಶ್ವದ 8ನೇ ಬ್ಯಾಟ್ಸ್ ಮನ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.

    ಟೆಸ್ಟ್ ನಲ್ಲಿ 51, ಏಕದಿನದಲ್ಲಿ 49 ಶತಕ ಸಿಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು(100) ಶತಕ ಹೊಡೆದ ದಾಖಲೆ ಮಾಸ್ಟರ್ ಬ್ಲಾಸ್ಟರ್ ತೆಂಡೂಲ್ಕರ್ ಹೆಸರಿನಲ್ಲಿದೆ.

  • ಆಸೀಸ್ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರು ಇನ್? ಯಾರು ಔಟ್?

    ಆಸೀಸ್ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರು ಇನ್? ಯಾರು ಔಟ್?

    ಮುಂಬೈ: ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ಟೀಂ ಇಂಡಿಯಾಗೆ ವಾಪಸ್ ಆಗಿದ್ದಾರೆ.

    ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಪಂದ್ಯಗಳ ಸರಣಿಗೆ ಪ್ರಕಟಿಸಿದ 16 ಮಂದಿಯ ತಂಡದಲ್ಲಿ ಉಮೇಶ್ ಯಾದವ್, ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ.

    ಸ್ಪಿನ್ನರ್ ಗಳಾದ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್ ಸ್ಥಾನ ಸಿಕ್ಕಿದೆ.

    ಶಾರ್ದೂಲ್ ಠಾಕೂರ್ ಅವರನ್ನು ಕೈಬಿಡಲಾಗಿದ್ದು, ಅವರ ಜಾಗದಲ್ಲಿ ಉಮೇಶ್ ಯಾದವ್‍ಗೆ ಸ್ಥಾನ ಸಿಕ್ಕಿದೆ. ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 3ರವರೆಗೆ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ನಾಲ್ಕು ದಿನಗಳ ಪದ್ಯದಲ್ಲಿ ಭಾರತ ಎ ತಂಡದಲ್ಲಿ ಶಾರ್ದೂಲ್ ಠಾಕೂರ್ ಅವರಿಗೆ ಸ್ಥಾನ ಸಿಕ್ಕಿದೆ.

    ಸೆಪ್ಟೆಂಬರ್ 17 ರಂದು ಚೆನ್ನೈನಲ್ಲಿ ಮೊದಲ ಏಕದಿನ ಪಂದ್ಯ ನಡೆದರೆ ಅಕ್ಟೋಬರ್ 1ರಂದು ಐದನೇ ಏಕದಿನ ಪಂದ್ಯ ಕೋಲ್ಕತ್ತಾದಲ್ಲಿ ನಡೆಯಲಿದೆ.

    ಟೀ ಇಂಡಿಯಾ ಪಟ್ಟಿ:
    ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಮನೀಷ್ ಪಾಂಡೆ, ಕೇದಾರ್ ಜಾದವ್, ಅಂಜಿಕ್ಯಾ ರೆಹಾನೆ, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚಹಲ್, ಜಸ್‍ಪ್ರಿತ್ ಬೂಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ.