Tag: ಉಲ್ಫಾ

  • ಬೆಂಗ್ಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ರಹಸ್ಯ ಸ್ಫೋಟ – ಆ.15ರಂದು ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ

    ಬೆಂಗ್ಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ರಹಸ್ಯ ಸ್ಫೋಟ – ಆ.15ರಂದು ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ

    – ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್; ತನಿಖೆ ತೀವ್ರ

    ಬೆಂಗಳೂರು: ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಬಂಧಿತನಾಗಿದ್ದ ಉಲ್ಫಾ ಉಗ್ರನಿಂದ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಶಂಕಿತ ಉಗ್ರನ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಅಸ್ಸಾಂನ (Assam) ಉತ್ತರ ಲಖೀಂಪುರದಲ್ಲಿ ಜೀವಂತ ಐಇಡಿಗಳನ್ನ (ಸುಧಾರಿತ ಸ್ಫೋಟಕ ಸಾಧನ) ವಶಕ್ಕೆ ಪಡೆದಿದ್ದಾರೆ.

    ಎನ್‌ಐಎ ಅಧಿಕಾರಿಗಳ ವಿಚಾರಣೆ ವೇಳೆ ಶಂಕಿತ (Suspected Terrorist) ಉಗ್ರ ಗಿರಿಸ್ ಬೋರಾ ಅಲಿಯಾಸ್‌ ಗೌತಮ್, ಅಸ್ಸಾಂನಲ್ಲಿ ಐಇಡಿ ಇಟ್ಟ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾನೆ. ಅಲ್ಲದೇ ಉಲ್ಫಾ(I) ಸಂಘಟನೆಯ ನಾಯಕರು ಹೇಳಿದಂತೆ ಐಇಡಿಗಳನ್ನ ಇಟ್ಟಿದ್ದೆ. ಆಗಸ್ಟ್‌ 15ರಂದು ಸ್ಫೋಟಿಸಲು ಸಂಜು ರೂಪಿಸಲಾಗಿತ್ತು ಎಂದೂ ಸಹ ಒಪ್ಪಿಕೊಂಡಿದ್ದಾನೆ. ಶಂಕಿತ ಉಗ್ರನ ಮಾಹಿತಿ ಮೇರೆಗೆ ತನಿಖೆ ನಡೆಸಿದ ಎನ್‌ಐಎ ಅಧಿಕಾರಿಗಳು ಲಖೀಂಪುರ ಜಿಲ್ಲೆಯಲ್ಲಿ ಇಟ್ಟಿದ್ದ ಕೆಲವು ಜೀವಂತ ಐಇಡಿಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತನಿಖೆಯನ್ನೂ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು: ಸುಪ್ರೀಂ

    ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್; ತನಿಖೆ ತೀವ್ರ
    ಪಾಕಿಸ್ತಾನಿ ನ್ಯಾಷನಲಾಟಿ ಗುಮಾನಿ ಮೇಲೆ ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್ ಪ್ರಕರಣದ ತನಿಖೆ ದಿನ ಕಳೆದಂತೆ ತೀವ್ರಗೊಳ್ಳುತ್ತಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್ ಹಿತೇಂದ್ರ ಭೇಟಿ ನೀಡಿ ತನಿಖೆ ಬಗ್ಗೆ ಚರ್ಚೆ ನಡೆಸಿದ್ದು, ಒಂದಷ್ಟು ಸಲಹೆ ಸೂಚನೆ ನೀಡಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR

    ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಶೀದ್ ಆಲಿ ಸಿದ್ಧಕಿ ಕುಟುಂಬದ ತನಿಖೆ ಮುಂದುವರಿದಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಹಿನ್ನೆಲೆ ಭಾರತಕ್ಕೆ ಅಕ್ರಮವಾಗಿ ಎಂಟ್ರಿ ಕೊಟ್ಟ ಉದ್ದೇಶ ಮತ್ತು ಭಾಗ ದಾಖಲೆಗಳ ಸೃಷ್ಟಿ ಬಗ್ಗೆ ತನಿಖೆಯನ್ನು ಕೇಂದ್ರಿಕರಿಸಲಾಗಿದೆ. ಆರೋಪಿಗಳು ಮೆಹದಿ ಫೌಂಡೇಷನ್ ನ ಪರ್ವೇಜ್ ಭಾರತಕ್ಕೆ ಬರುವಂತೆ ಹೇಳಿ ದಾಖಲೆಗಳು ಸೇರಿದಂತೆ ಅಗತ್ಯ ಸೌಲಭ್ಯ ವ್ಯವಸ್ಥೆ ಕಲ್ಲಿಸಿದನು. ಯೂನಸ್ ಅಲ್ಗೋರ್ ಧರ್ಮ ಗುರುಗಳ ಪ್ರವಚನ ಪ್ರಚಾರಕ್ಕೆ ಹಣ ನೀಡುತ್ತಿದ್ದರು. ಜೀವನಕ್ಕಾಗಿ ಬಿರಿಯಾನಿ ಹೊಟೇಲ್ ವ್ಯವಹಾರ ಮಾಡುತ್ತಿದ್ದೆವು ಎನ್ನುತ್ತಿದ್ದಾರೆ. ಆದ್ರೆ ಆರೋಪಿಗಳ ಹೇಳಿಕೆ ನಂಬಲು ಸಾಧ್ಯವಿಲ್ಲ ಎಂಬ ವಿಚಾರಗಳು ಪ್ರಾಥಮಿಕ ತನಿಖೆಯಲ್ಲಿ ಲಭ್ಯವಾಗಿದೆ. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ

    ಬಂಧಿತ ಪಾಕ್ ಪ್ರಜೆಗಳಾದ ರಶೀದ್ ಅಲಿ ಸಿದ್ಧಕಿ ಮತ್ತು ಆತನ ಪತ್ನಿ ಆಯೇಷಾ ಹನೀಫ್‌ಳನ್ನು IB ಮತ್ತು NIA ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಬಾಂಗ್ಲಾದೇಶ ದೇಶದ ಗಲಭೆಯಲ್ಲಿ ಜೈಲಿನಿಂದ ಪರಾರಿಯಾದ ಖೈದಿಗಳ ಸಂಪರ್ಕ. ಪಾಕಿಸ್ತಾನಿ ಉಗ್ರ ಸಂಘಟನೆಗಳ ಲಿಂಕ್ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಆರೋಪಿಗಳ ವಾಸವಿದ್ದ ಮನೆಯಲ್ಲಿ ಮೊಬೈಲ್, ಲ್ಯಾಪ್‌ಟಾಪ್, ಕೆಲ ಎಲೆಕ್ಟ್ರಾನಿಕ್ ವಸ್ತುಗಳು ದೊರೆತ್ತಿದ್ದು, ಅವುಗಳನ್ನು FSLಗೆ ರವಾನಿಸಲಾಗಿದೆ. ಧರ್ಮ ಪ್ರಚಾರದ ಜೊತೆ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದ ಬಗ್ಗೆ ಯಾವುದೇ ಪುರಾವೆ ಇಲ್ಲಿಯವರೆಗೆ ಸಿಕ್ಕಿಲ್ಲ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಬಂಧಿತ ಮೊಹಮ್ಮದ್ ಹನೀಫ್ ಮಗಳಾದ ಫಾತಿಮಾ ಪತಿ ಅಲ್ತಾಫ್‌ ದಾವಣಗೆರೆ ಮೂಲದವನಾಗಿದ್ದು, ಚೆನ್ನೈನಲ್ಲಿ ಬಂಧಿಸಲಾಗಿದೆ. ಚೆನ್ನೈ NIA ಅಧಿಕಾರಿಗಳ ಜೊತೆಯು ಸಂಪರ್ಕದಲ್ಲಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ಎಡಿಜಿಪಿ ಅರ್‌. ಹಿತೇಂದ್ರ ತಿಳಿಸಿದ್ದಾರೆ.

    ಪಾಕ್ ಪ್ರಜೆಗಳ ಬಂಧನದ ಪ್ರಕರಣದ ಜಾಡು ಮುಂಬೈ ಮತ್ತು ದೆಹಲಿವರೆಗೆ ವ್ಯಾಪಿಸಿದ್ದು, ಬಂಧಿತರ ಜೊತೆ ನೂರಕ್ಕೂ ಅಧಿಕ ಮಂದಿ ನಿರಂತರ ಸಂಪರ್ಕದಲ್ಲಿರುವುದು ತನಿಖೆ ವೇಳೆ ಪತ್ತೆಯಾಗಿದ್ದು, ಅವರೆಲ್ಲರೂ ಪಾಕಿಸ್ತಾನ ಮೂಲದವರ ಎಂಬುದು ಪೊಲೀಸರ ತನಿಖೆಯಿಂದ ದೃಢವಾಗಬೇಕಿದೆ.

  • ಎನ್‌ಐಎಯಿಂದ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್‌

    ಎನ್‌ಐಎಯಿಂದ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್‌

    ಬೆಂಗಳೂರು: ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ.

    ಗಿರಿಸ್ ಬೋರಾ ಅಲಿಯಾಸ್‌ ಗೌತಮ್ ಬಂಧಿತ ಶಂಕಿತ ಉಗ್ರ. ಅಸ್ಸಾಂ (Assam) ಎನ್ಐಎ ಅಧಿಕಾರಿಗಳು ಅನೇಕಲ್ ಬಳಿಯ ಜಿಗಣಿಯಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆ ಅಧಿಕಾರಕ್ಕೆ ಬ್ರೇಕ್‌

    ಉಲ್ಫಾ (United Liberation Front of Asom -ULFA) ಸಂಘಟನೆಗೆ ಸೇರಿದ್ದ ಗಿರಿಸ್‌ ಬೋರಾ ಅಸ್ಸಾಂ ಗುವಾಹಟಿಯಲ್ಲಿ ಐಇಡಿ ಇಟ್ಟು ಬೆಂಗಳೂರಿಗೆ ಕುಟುಂಬ ಸಮೇತ ಬಂದಿದ್ದ. ಖಾಸಗಿ ಕಂಪನಿಯಲ್ಲಿ ಗೌತಮ್‌ ಹೆಸರಿನಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದ.

    ಈತನ ಬಗ್ಗೆ ಖಚಿತ ಮಾಹಿತಿಯನ್ನು ಸಂಗ್ರಹಿಸಿದ್ದ ಎನ್‌ಐಎ ಇಂದು ಬಂಧಿಸಿದೆ.

     

  • ಮ್ಯಾನ್ಮಾರ್‌ನಲ್ಲಿರುವ ಉಗ್ರರ ಶಿಬಿರದ ಮೇಲೆ ಭಾರತದಿಂದ ಬಾಂಬ್‌ ದಾಳಿ!

    ಮ್ಯಾನ್ಮಾರ್‌ನಲ್ಲಿರುವ ಉಗ್ರರ ಶಿಬಿರದ ಮೇಲೆ ಭಾರತದಿಂದ ಬಾಂಬ್‌ ದಾಳಿ!

    – ತನ್ನ ಶಿಬಿರದ ಮೇಲೆ ಬಾಂಬ್‌ ದಾಳಿಯಾಗಿದೆ
    – ಉಲ್ಫಾ-I ಸಂಘಟನೆಯಿಂದ ಹೇಳಿಕೆ ಬಿಡುಗಡೆ

    ಗುವಾಹಟಿ: ಮ್ಯಾನ್ಮಾರ್‌ನಲ್ಲಿರುವ (Myanmar) ಉಗ್ರರ ಶಿಬಿರದ ಮೇಲೆ ಭಾರತ ಡ್ರೋನ್‌ (Drone) ಮೂಲಕ ಬಾಂಬ್‌ ದಾಳಿ (Bomb Attack) ನಡೆಸಿದೆ.

    ಭಾನುವಾರ ತನ್ನ ಶಿಬಿರದ ಮೇಲೆ ಮೂರು ಬಾಂಬ್‌ಗಳನ್ನು ಡ್ರೋನ್‌ಗಳಿಂದ ಬೀಳಿಸಲಾಗಿದೆ ಎಂದು ಪರೇಶ್ ಬರುವಾ ನೇತೃತ್ವದ ಉಲ್ಫಾ-I ಸೋಮವಾರ ಹೇಳಿಕೊಂಡಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ; ಮುಸ್ಲಿಮರ ಮೇಲಿನ ದ್ವೇಷ ಕೊನೆಗೊಳ್ಳುವ ವಿಶ್ವಾಸವಿದೆ: ಫಾರೂಕ್‌ ಅಬ್ದುಲ್ಲಾ

    ಭಾನುವಾರ ಸಂಜೆ 4:10, 4:12 ಮತ್ತು 4:20 ಕ್ಕೆ ಮೂರು ಬಾಂಬ್‌ಗಳನ್ನು ಡ್ರೋನ್‌ಗಳಿಂದ ಬೀಳಿಸಲಾಗಿದೆ. ದಾಳಿಯಿಂದ ಇಬ್ಬರು ಗಾಯಗೊಂಡಿದ್ದು, ಡ್ರೋನ್‌ ದಾಳಿಯನ್ನು ಭಾರತೀಯ ಭದ್ರತಾ ಪಡೆಗಳು ನಡೆಸಿವೆ ಎಂದು ಸಂಘಟನೆಯು ಹೇಳಿಕೊಂಡಿದೆ. ಇದನ್ನೂ ಓದಿ: ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗ್ಳೂರಿನ CEO – ಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್

    ಮೊದಲ ಎರಡು ಸ್ಫೋಟಗಳಲ್ಲಿ ನಮ್ಮ ಸಂಘಟನೆಯ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂರನೇ ಬಾಂಬ್ ಸ್ಫೋಟಿಸಲಿಲ್ಲ. ಈ ರೀತಿಯ ದಾಳಿಯಿಂದ ನಾವು ನಮ್ಮ ಉದ್ದೇಶದಿಂದ ವಿಚಲಿತಗೊಳ್ಳುವುದಿಲ್ಲ ಎಂದು ಹೇಳಿದೆ.

    ಭಾರತದ ವಿದೇಶಾಂಗ ಸಚಿವಾಲಯ ಇಲ್ಲಿಯವರೆಗೆ ಈ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

     

  • ಅಸ್ಸಾಂನಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕಾರಕ್ಕೆ ಉಗ್ರಸಂಘಟನೆಗಳ ಕರೆ- ಪೊಲೀಸರಿಂದ ಬಿಗಿ ಭದ್ರತೆ

    ಅಸ್ಸಾಂನಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕಾರಕ್ಕೆ ಉಗ್ರಸಂಘಟನೆಗಳ ಕರೆ- ಪೊಲೀಸರಿಂದ ಬಿಗಿ ಭದ್ರತೆ

    ಡಿಸ್ಪುರ: ಉಗ್ರಗಾಮಿ ಸಂಘಟನೆಗಳಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ (ULFA) (Independent)) ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ (NSCN) /ಜೆಪಿಆರ್‌ಎನ್ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ಬಹಿಷ್ಕರಿಸಲು ಕರೆ ನೀಡಿದ್ದು, ಈ ಹಿನ್ನೆಲೆ ಅಸ್ಸಾಂ (Assam) ರಾಜ್ಯದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

    ನಾವು ಪ್ರದೇಶದ ಪ್ರಾಬಲ್ಯ ಮತ್ತು ನಾಕಾ ತಪಾಸಣೆ ಸೇರಿದಂತೆ ಎಲ್ಲಾ ನಿಯಮಿತ ಭದ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಸ್ವಾತಂತ್ರ್ಯ ದಿನಾಚರಣೆಯಲ್ಲಿ ಯಾವುದೇ ಅಡ್ಡಿಯಾಗದಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ವಿರುದ್ಧ 50% ಕಮಿಷನ್ ಆರೋಪ – ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರಕರಣ ದಾಖಲು

    ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ಗುವಾಹಟಿಯಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಿದ್ದು, ಇತರ ಸಚಿವರು ಮತ್ತು ಉನ್ನತ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ನನ್ನ 19 ವರ್ಷಗಳ ರಾಜಕೀಯ ಜೀವನದಲ್ಲಿ ಮಣಿಪುರದಂಥ ಘೋರ ಅನುಭವ ಎಂದೂ ಆಗಿಲ್ಲ: ರಾಹುಲ್‌ ಗಾಂಧಿ

    ಕಾರ್ಯಕ್ರಮ ನಡೆಯುವ ಮೈದಾನದಲ್ಲಿ ಭದ್ರತೆಯನ್ನು ಪರಿಶೀಲಿಸಿದ್ದು, ಶಾಂತಿಯುತ ಆಚರಣೆಗೆ ಬೇಕಾಗುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ಟಿಎಂಸಿ ರಕ್ತದೊಂದಿಗೆ ಆಟವಾಡಿದೆ: ಮೋದಿ ವಾಗ್ದಾಳಿ

    ಆಗಸ್ಟ್ 12ರಂದು ಉಲ್ಫಾ ಸಂಘಟನೆಯು ಇ- ಮೇಲ್ (E-Mail) ಮೂಲಕ ಅಸ್ಸಾಂ, ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಜನರನ್ನು ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಿಷ್ಕರಿಸುವಂತೆ ಕೇಳಿಕೊಂಡಿತ್ತು. ಆಗಸ್ಟ್ 15ರ ಸಂಜೆ 6 ಗಂಟೆಯವರೆಗೆ ತುರ್ತು ಸೇವೆಗಳು, ಮಾಧ್ಯಮ ಸೇವೆಗಳು ಹಾಗೂ ಧಾರ್ಮಿಕ ಚಟುವಟಿಕೆಗಳನ್ನು ಸಾರ್ವತ್ರಿಕ ಮುಷ್ಕರದ ವ್ಯಾಪ್ತಿಯಿಂದ ಹೊರಗಿಟ್ಟು ಬಂದ್‌ಗೆ ಕರೆ ನೀಡಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ಸಕ್ರಿಯ – ಈವರೆಗೂ ಹತರಾದ ಉಗ್ರರ ಸಂಖ್ಯೆ ಎಷ್ಟು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]