ಲಕ್ನೋ: ರಾತ್ರಿ ಊಟ ನೀಡಲು ತಡ ಮಾಡಿದ್ದಕ್ಕೆ ಪತಿಯೊಬ್ಬ ತವಾದಿಂದ(Tawa) ಪತ್ನಿಯ(Wife) ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ನೋಯ್ಡಾದಲ್ಲಿ ನಡೆದಿದೆ.
ಬಿಹಾರ್ ಮೂಲದ ಅನುಜ್ ಕುಮಾರ್ (37) ಪತ್ನಿ ಖುಷ್ಬುಳನ್ನು ಹತ್ಯೆ ಮಾಡಿದ್ದಾನೆ. ಈತ ನೋಯ್ಡಾದಲ್ಲಿ ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಅನುಜ್ ರಾತ್ರಿ ಊಟಕ್ಕೆಂದು ಮನೆಗೆ ತೆರಳಿದ್ದ.
ಗಾಂಧೀನಗರ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಅಹಮದಾಬಾದ್‍ನಲ್ಲಿರುವ ಆಟೋ ಚಾಲಕನ(Auto Driver) ಮನೆಯಲ್ಲಿ ಸೋಮವಾರ ರಾತ್ರಿ ಊಟ(Dinner) ಮಾಡಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯ ಎಎಪಿಯ(AAP) ಪ್ರಚಾರದ ಸಲುವಾಗಿ ಅರವಿಂದ್ ಕ್ರೇಜಿವಾಲ್ ಅವರು ಎರಡು ದಿನಗಳ ಕಾಲ ಗುಜರಾತ್ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಅಹಮದಾಬಾದ್‍ನಲ್ಲಿ(Ahmedabad) ನಡೆದ ಆಟೋ ರಿಕ್ಷಾ ಚಾಲಕರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅರವಿಂದ್ ಕ್ರೇಜಿವಾಲ್ ಅವರನ್ನು ಆಟೋ ಚಾಲಕನೋರ್ವ ಅಹಮದಾಬಾದ್‍ನಲ್ಲಿರುವ ತಮ್ಮ ಮನೆಯಲ್ಲಿ ಔತಣಕೂಟಕ್ಕೆ ಬರುವಂತೆ ಆಹ್ವಾನಿಸಿದ್ದನು. ಇದನ್ನೂ ಓದಿ: ಸಚಿವ ಆನಂದ್ ಸಿಂಗ್, ಕಾರ್ಪೊರೇಟರ್ ನಡುವೆ ರಾಜೀನಾಮೆ ಸಮರ
ನಗರದ ಘಟ್ಲೋಡಿಯಾ ಪ್ರದೇಶದ ನಿವಾಸಿ ವಿಕ್ರಮ್ ದಾಂತನಿ( Vikram Dantani) ಎಂಬ ಆಟೋ ಚಾಲಕ “ನಾನು ನಿಮ್ಮ ಅಭಿಮಾನಿ. ಸೋಶಿಯಲ್ ಮೀಡಿಯಾದಲ್ಲಿ ನಾನು ನೋಡಿದ ವೀಡಿಯೋ ಒಂದರಲ್ಲಿ, ನೀವು ಪಂಜಾಬ್‍ನ(Punjab) ಆಟೋ ಡ್ರೈವರ್‌ನ ಮನೆಗೆ ಊಟಕ್ಕೆ ಹೋಗಿದ್ದೀರಿ. ಹಾಗಾದರೆ, ನೀವು ನನ್ನ ಮನೆಗೆ ಊಟಕ್ಕೆ ಬರುತ್ತೀರಾ ಎಂದು ಕೇಳಿದ್ದನು. ಕೂಡಲೇ ಇದಕ್ಕೆ ಪ್ರತಿಕ್ರಿಯಿಸಿದ ಅರವಿಂದ್ ಕೇಜ್ರಿವಾಲ್ ಅವರು, ಪಂಜಾಬ್ ಮತ್ತು ಗುಜರಾತ್ ಆಟೋ ಚಾಲಕರು ನನ್ನನ್ನು ಪ್ರೀತಿಸುತ್ತಿದ್ದಾರೆ. ನಾನು ಇಂದು ಸಂಜೆ ಬರಬೇಕೇ? ಅಥವಾ ರಾತ್ರಿ 8 ಗಂಟೆಗೆ ಬರಬೇಕೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗುಡ್‌ನ್ಯೂಸ್- ಪೊಲೀಸ್ ಇಲಾಖೆಯಲ್ಲಿ ದೊಡ್ಡ ನೇಮಕಾತಿಗೆ ಅಧಿಸೂಚನೆ
ಆಟೋ ಚಾಲಕನ ಆಹ್ವಾನವನ್ನು ಸ್ವೀಕರಿಸಿದ ಕೇಜ್ರಿವಾಲ್ ಅವರು ರಾತ್ರಿ 7.30ರ ಸುಮಾರಿಗೆ ಹೊಟೇಲ್‍ನಿಂದ ಆಟೋದಲ್ಲಿ ಚಾಲಕನ ಮನೆಗೆ ತಲುಪಲು ಯೋಜಿಸಿದ್ದರು. ಮೊದಲಿಗೆ ಕೇಜ್ರಿವಾಲ್ ಅವರನ್ನು ಆಟೋದಲ್ಲಿ ಹೋಗದಂತೆ ಪೊಲೀಸರು ತಡೆದರು. ಇದರಿಂದ ಕೆಲ ಹೊತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ಬಳಿಕ ಆಟೋ ಚಾಲಕನ ಮನೆಗೆ ತೆರಳಲು ಅವಕಾಶ ನೀಡಿ ಆಟೋ ಚಾಲಕನ ಪಕ್ಕದಲ್ಲಿ ಪೊಲೀಸ್‍ಯೊಬ್ಬರು ಕುಳಿತುಕೊಂಡ, ಮತ್ತೆರಡು ಪೊಲೀಸರ ಕಾರುಗಳು ಆಟೋವನ್ನು ಫಾಲೋವ್ ಮಾಡಿದವು. ನಂತರ ಆಟೋ ಚಾಲಕನ ಮನೆಗೆ ಭೇಟಿ ನೀಡಿ ಪ್ರೀತಿಯಿಂದ ಊಟಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮುಂಬೈ: ಇಂದಿನ ಪೀಳಿಗೆಯವರ ಲೈಫ್ ಸ್ಟೈಲ್ ತುಂಬಾ ಚೇಂಜ್ ಆಗಿದೆ. ಇಂದಿನ ಜನ ತಮ್ಮ ಬ್ಯೂಸಿ ಶೆಡ್ಯೂಲ್ ನಡುವೆ ತಮಗೆ ಬೇಕಾದ ವಸ್ತುಗಳನ್ನು ತೆಗೆದುಕೊಳ್ಳಲು ಆಗದೇ ಪರದಾಡುತ್ತಿದ್ದಾರೆ. ಹೀಗಾಗಿ ಅದೆಷ್ಟೋ ಮಂದಿ ಆನ್‍ಲೈನ್ ಆ್ಯಪ್‍ಗಳ ಮೇಲೆ ಅವಲಂಬಿತರಾಗಿದ್ದಾರೆ. ಇತ್ತೀಚಿನ ಜನಪ್ರಿಯ ಡೆಲಿವರಿ ಆ್ಯಪ್‍ನಲ್ಲಿ ಸ್ವಿಗ್ಗಿ ಕೂಡ ಒಂದು. ತಮಗೆ ಬೇಕಾದಂತಹ ವಸ್ತುಗಳನ್ನು ಈ ಆ್ಯಪ್ ಮೂಲಕ ಜನ ಆರ್ಡರ್ ಮಾಡಿ ತಮ್ಮ ಮನೆಯ ಬಾಗಿಲಿಗೆ ತರಿಸಿಕೊಳ್ಳುವುದರ ಮೂಲಕ ಸಮಯ ಮತ್ತು ಹಣ ಎರಡನ್ನೂ ಉಳಿಸುತ್ತಾರೆ. ಸಾಮಾನ್ಯವಾಗಿ ಸ್ವಿಗ್ಗಿ ಇರುವುದು ರುಚಿ ರುಚಿಯಾದ ಊಟವನ್ನು ಆರ್ಡರ್ ಮಾಡಿ ತಿನ್ನುವುದಕ್ಕೆ, ಆದರೆ ಮುಂಬೈ ಜನ ಮಾತ್ರ ತಿನ್ನುವುದನ್ನು ಬಿಟ್ಟು ಬೇರೆ ಕೆಲಸವನ್ನೇ ಮಾಡುತ್ತಿದ್ದಾರಾ ಎಂಬ ಪ್ರಶ್ನೆಯನ್ನು ಜನ ಈಗ ಕೇಳಲು ಆರಂಭಿಸಿದ್ದಾರೆ.
ಹೌದು ಇತ್ತೀಚೆಗೆ ಸ್ವಿಗ್ಗಿ ಡೆಲಿವರಿ ಆ್ಯಪ್ ನಡೆಸಿದ ಸಮೀಕ್ಷೆಯಲ್ಲಿ ಬೆಂಗಳೂರು, ಮುಂಬೈ, ಹೈದರಾಬಾದ್, ದೆಹಲಿ ಮತ್ತು ಚೆನ್ನೈ ಸೇರಿದಂತೆ ಮೆಟ್ರೋ ನಗರಗಳಲ್ಲಿ ವಾಸಿಸುವ ಜನರು ಇನ್‍ಸ್ಟಾಮಾರ್ಟ್ ಅನ್ನು ಹೆಚ್ಚು ಬಳಸುತ್ತಾರೆ ಎಂದು ಬಹಿರಂಗಪಡಿಸಿದೆ. ಆದರೆ ಮುಂಬೈ ಜನ ಮಾತ್ರ ಕಳೆದ 12 ತಿಂಗಳಲ್ಲಿ ಹಿಂದಿನ ವರ್ಷಕ್ಕಿಂತ 570 ಪಟ್ಟು ಹೆಚ್ಚು ಕಾಂಡೋಮ್‍ಗಳನ್ನು ಆರ್ಡರ್ ಮಾಡಿದ್ದಾರೆ ಎಂಬುವುದು ತಿಳಿದುಬಂದಿದೆ. ಇದನ್ನೂ ಓದಿ: ಜನಜಂಗುಳಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್ ಅಟ್ಯಾಕ್
ಸಮೀಕ್ಷೆಯಲ್ಲಿ ಏನಿದೆ? * ಕಳೆದ ವರ್ಷ ಏಪ್ರಿಲ್‍ನಿಂದ ಜೂನ್‍ವರೆಗೆ ಐಸ್‍ಕ್ರೀಮ್ ಬೇಡಿಕೆಯು ಶೇಕಡಾ 42 ರಷ್ಟು ಹೆಚ್ಚಾಗಿತ್ತು. ಅದರಲ್ಲಿಯೂ ಹೆಚ್ಚಿನ ಆರ್ಡರ್‌ಗಳು ರಾತ್ರಿ 10 ಗಂಟೆಯ ನಂತರ ಮಾಡಲಾಗಿದೆ ಎಂದು ಹೇಳಿದೆ. * ಹೈದರಾಬಾದ್ ಜನರು ಬೇಸಿಗೆಯಲ್ಲಿ ಸುಮಾರು 27,000 ತಾಜಾ ಜ್ಯೂಸ್ ಬಾಟಲಿಗಳನ್ನು ಆರ್ಡರ್ ಮಾಡಿದ್ದಾರೆ. * ಗ್ರಾಹಕರು ಸ್ವಿಗ್ಗಿಯಲ್ಲಿ 2021ರಲ್ಲಿ 5 ಕೋಟಿ ಮೊಟ್ಟೆಗಳನ್ನು ಆರ್ಡರ್ ಮಾಡಿದ್ದಾರೆ. * ಸೋಯಾ ಮತ್ತು ಓಟ್ ಡೈರಿ ಮಿಲ್ಕ್ ಅನ್ನು ಹೆಚ್ಚಾಗಿ ಬೆಂಗಳೂರಿನ ಜನರು ಆರ್ಡರ್ ಮಾಡಿದ್ದಾರೆ. ಅದರಲ್ಲಿಯೂ 30 ಮಿಲಿಯನ್ ಆರ್ಡರ್‌ಗಳು ಬೆಂಗಳೂರು ಮತ್ತು ಮುಂಬೈನಲ್ಲಿ ಬೆಳಗಿನ ಹೊತ್ತಿನಲ್ಲಿ ಮಾಡಲಾಗುತ್ತಿತ್ತು. * ಊಟದ ಸಮಯದಲ್ಲಿ ಹೆಚ್ಚಾಗಿ ಅವಲಕ್ಕಿ ಮತ್ತು ರವೆಯನ್ನು ಬೆಂಗಳೂರು, ಮುಂಬೈ ಮತ್ತು ದೆಹಲಿಯ ನಗರಗಳಲ್ಲಿರುವ ಜನರು ಆರ್ಡರ್ ಮಾಡಿದ್ದರು. * ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಹಸಿರು ಮೆಣಸಿನಕಾಯಿಗೆ ಹೆಚ್ಚಿನ ಆರ್ಡರ್‌ಗಳಿವೆ ಎಂದು ಮತ್ತೊಂದು ಸಮೀಕ್ಷೆ ಹೇಳಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ತರಕಾರಿ ಟೆಂಡರ್‌ಗಳನ್ನು ಸ್ವಿಗ್ಗಿ ಪಡೆದುಕೊಂಡಿದೆ.
ಈ ನಡುವೆ ಸ್ವಿಗ್ಗಿಯ ಮತ್ತೊಂದು ಸಮೀಕ್ಷೆಯಲ್ಲಿ ಕಳೆದ ಒಂದು ವರ್ಷದಲ್ಲಿ ಮುಂಬೈನಲ್ಲಿ ಕಾಂಡೋಮ್ ಆರ್ಡರ್ 570 ಪಟ್ಟು ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಇದೀಗ ಸ್ವಿಗ್ಗಿ ಇರೋದು ರುಚಿ ರುಚಿಯಾದ ಊಟವನ್ನು ಆನ್‍ಲೈನ್ ಆರ್ಡರ್ ಮಾಡಿ ತಿನ್ನವುದಕ್ಕೆ ಆದರೆ ಮುಂಬೈ ಜನ ತಿನ್ನುವುದನ್ನು ಬಿಟ್ಟು ಬೇರೆ ಕೆಲಸವನ್ನು ಹೆಚ್ಚು ಮಾಡಿದ್ದಾರೆ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಪೊಲೀಸ್, ಬಿಜೆಪಿ ಮುಖಂಡನ ಹೆಸರು ಬರೆದಿಟ್ಟು, ರಮೇಶ್ ಜಾರಕಿಹೊಳಿ ಆಪ್ತ ಆತ್ಮಹತ್ಯೆ
ಈ ಬಾರಿ ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ, ದೆಹಲಿಯಲ್ಲಿ ಸ್ಯಾನಿಟರಿ ನ್ಯಾಪ್‍ಕಿನ್‍ಗಳು, ಬ್ಯಾಂಡೇಜ್‍ಗಳು ಇತ್ಯಾದಿಗಳ ಹೆಚ್ಚು ಆರ್ಡರ್ ಆಗಿದೆ ಸಮೀಕ್ಷೆ ಬಹಿರಂಗಪಡಿಸಿದೆ.
Live Tv
[brid partner=56869869 player=32851 video=960834 autoplay=true]
ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ದಲಿತ ಬಾಲಕಿಯರಿಗೆ ತಾರತಮ್ಯ ಮಾಡಿದ ಆರೋಪದ ಮೇಲೆ ಅಡುಗೆಯವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಬರೋಡಿ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಲ್ ರಾಮ್ ಗುರ್ಜರ್ ಎಂಬಾತ ತಯಾರಿಸಿದ ಮಧ್ಯಾಹ್ನದ ಊಟವನ್ನು ದಲಿತ ಬಾಲಕಿಯರು ಬಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲಾಲ್ ರಾಮ್, ದಲಿತ ಬಾಲಕಿಯರು ಬಡಿಸಿದ ಊಟವನ್ನು ಎಸೆಯುವಂತೆ ಇತರ ವಿದ್ಯಾರ್ಥಿಗಳಿಗೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಅಡುಗೆಯವನ ಸೂಚನೆಯನ್ನು ಅನುಸರಿಸಿ ಊಟವನ್ನು ಎಸೆದಿದ್ದಾರೆ. ಈ ಘಟನೆಯ ಬಗ್ಗೆ ಬಾಲಕಿಯರು ತಮ್ಮ ಕುಟುಂಬದ ಸದಸ್ಯರಿಗೆ ತಿಳಿಸಿದ್ದು, ಬಳಿಕ ಅವರು ತಮ್ಮ ಕೆಲವು ಸಂಬಂಧಿಕರೊಂದಿಗೆ ಶಾಲೆಗೆ ಆಗಮಿಸಿ, ಅಡುಗೆಯವನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ
ಅಡುಗೆಯವನ ವಿರುದ್ಧ ಗೋಗುಂದ ಪೊಲೀಸ್ ಠಾಣೆಯಲ್ಲಿ ಎಸ್‌ಸಿ ಮತ್ತು ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಿಷಯ ನಿಜವೆಂದು ಕಂಡುಬಂದಿದ್ದರಿಂದ ತ್ವರಿತ ಕ್ರಮ ತೆಗೆದುಕೊಳ್ಳಲಾಗಿದೆ. ದಲಿತ ಬಾಲಕಿಯರು ಊಟವನ್ನು ಬಡಿಸಿದ್ದಕ್ಕೆ ಇತರ ವಿದ್ಯಾರ್ಥಿನಿಯರಿಗೆ ಅದನ್ನು ಎಸೆಯಲು ಹೇಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಡುಗೆಯವನು ಯಾವಾಗಲೂ ತಾನೇ ಆಯ್ಕೆ ಮಾಡಿ, ಮೇಲ್ವರ್ಗದ ವಿದ್ಯಾರ್ಥಿಗಳಿಂದ ಊಟವನ್ನು ಬಡಿಸುತ್ತಿದ್ದರು. ಆದರೆ ನಿನ್ನೆ ವಿದ್ಯಾರ್ಥಿಗಳು ಸರಿಯಾಗಿ ಬಡಿಸುತ್ತಿಲ್ಲ ಎಂಬ ಕಾರಣಕ್ಕೆ ದಲಿತ ಬಾಲಕಿಯರಿಗೆ ಊಟ ಬಡಿಸುವಂತೆ ಶಿಕ್ಷಕರೊಬ್ಬರು ಸೂಚನೆ ನೀಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ – ಮುರುಘಾ ಶ್ರೀಗೆ ಸೋಮವಾರದವರೆಗಿಲ್ಲ ಜಾಮೀನು
Live Tv
[brid partner=56869869 player=32851 video=960834 autoplay=true]
ತೆಲಂಗಾಣ: ವಿವಾಹ ಸಮಾರಂಭವೊಂದರಲ್ಲಿ ವಿಷಪೂರಿತ ಆಹಾರ ಸೇವಿಸಿ 17 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯಲ್ಲಿ ನಡೆದಿದೆ.
Andhra Pradesh | 17 people fell ill after eating contaminated food at a wedding ceremony in Mandapeta, Konaseema dist. Victims were hospitalised at Mandapeta Govt Hospital. At present, their health condition is stable: Dr Priyanka Vahini, Mandapeta Government hospital (20.08) pic.twitter.com/e3GREXiQAW
ಗದಗ: ಊಟದ ಬಿಲ್ ಕೇಳಿದಕ್ಕೆ ಕುಡಿದ ಮತ್ತಿನಲ್ಲಿ 6 ಜನ ಪುಂಡರು ಡಾಬಾ ಪೀಠೋಪಕರಣ ಧ್ವಂಸ ಮಾಡಿರುವ ಘಟನೆ ಜಿಲ್ಲೆ ಗಜೇಂದ್ರಗಡ ತಾಲೂಕಿನ ಬೆವಿನಕಟ್ಟಿ ಬಳಿ ನಡೆದಿದೆ.
ಶ್ರೀಶೈಲ ಕಳ್ಳಿಮಠ ಎಂಬವರಿಗೆ ಸೇರಿದ ಲಕ್ಕಿ ಡಾಬಾ ಪೀಸ್, ಪೀಸ್ ಆಗಿದೆ. ಮುಶಿಗೇರಿ ಗ್ರಾಮದ ಅರವಿಂದ್ ಅಂಗಡಿ ಹಾಗೂ ಸ್ನೇಹಿತರು ಸೇರಿ ದಾಂಧಲೆ ಮಾಡಿದ್ದಾರೆ. ಅರವಿಂದ್ ಅಂಗಡಿ ಬಾಗಲಕೋಟೆ ನವನಗರ ಠಾಣೆ ಪ್ರೋಫೆಷನಲ್ ಪಿಎಸ್ ಆಗಿ ಕೆಲಸ ಮಾಡುತ್ತಿದ್ದು, ಇವರ ಜೊತೆ ಆರ್ಮಿ ಯುವಕರು ಸಹ ಇದ್ದರು. ಇದನ್ನೂ ಓದಿ: ಚಂದ್ರಶೇಖರ ಗುರೂಜಿ ಹುಬ್ಬಳ್ಳಿ ಹೋಟೆಲ್‌ಗೆ ಹೋಗಿದ್ದು ಯಾಕೆ?
ರಜೆಗೆಂದು ಊರಿಗೆ ಬಂದಿದ್ದ ಅರವಿಂದ್ ಅಂಗಡಿ ನಿನ್ನೆ ರಾತ್ರಿ 11 ಗಂಟೆ ವೇಳೆಗೆ ಆರ್ಮಿ ಯುವಕ ಹಾಗೂ ಇತರೆ 6 ಜನ ಸ್ನೇಹಿತರೊಂದಿಗೆ ಊಟಕ್ಕಾಗಿ ಡಾಬಾಗೆ ಬಂದಿದ್ದರು. ಈ ವೇಳೆ ಕಂಠ ಪೂರ್ತಿ ಕುಡಿದು, ಹೊಟ್ಟೆ ಬಿರಿಯುವಂತೆ ಊಟ ಮಾಡಿದ್ದಾರೆ. ನಂತರ ಊಟದ ಬಿಲ್ ಕೇಳಿದಕ್ಕೆ ನಾವು ಯಾರು ಅಂತ ತಿಳಿದಿದೆಯಾ? ನಮ್ಮನ್ನೇ ಬಿಲ್ ಕೇಳ್ತಿಯಾ ಅಂತ ಅಧಿಕಾರದ ಮದ ಹಾಗೂ ಕುಡಿದ ಅಮಲಿನಲ್ಲಿ ಖ್ಯಾತೆ ತೆಗೆದಿದ್ದಾರೆ.
ನೂರಾರು ರೂಪಾಯಿ ಕಡಿಮೆ ಕೊಡಿ. ಆದರೆ ಬಿಲ್ ಕೊಡಿ ಅಂದಿದಕ್ಕೆ ಬಾಟಲ್‍ನಿಂದ ಮಾಲೀಕ ಶ್ರೀಶೈಲನ ತಲೆಗೆ ಹೊಡೆದಿದ್ದಾರೆ. ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ರಕ್ತಸ್ರಾವವಾಗುತ್ತಿ ಮಾಲೀಕನನ್ನು ಅಲ್ಲಿಯೇ ಇದ್ದ ಕೆಲಸಗಾರರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ದುಬೈಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ
ಡಾಬಾದಲ್ಲಿರುವ ಫ್ರಿಜ್, ಕೌಂಟರ್, ಕಬಾಡ್, ಕುರ್ಚಿ, ಅಡುಗೆ ಸಾಮಗ್ರಿಗಳು ಸೇರಿದಂತೆ ಅನೇಕ ಪೀಠೋಪಕರಣಗಳನ್ನು ಒಡೆದುಹಾಕಿ ವಿಕೃತಿ ಮೆರೆದಿದ್ದಾರೆ. ಇವರ ಅಟ್ಟಹಾಸಕ್ಕೆ ಅಂಗಡಿ ಮಾಲೀಕರು ಹಾಗೂ ಕಾರ್ಮಿಕರು ನಲುಗಿಹೋಗಿದ್ದಾರೆ. ಈ ಎಲ್ಲಾ ವೀಡಿಯೋ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ನಂತರ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
ಇದೀಗ ಸಮೀಪದ ಹಿಂಗೋಲಿ ಜಿಲ್ಲೆಯ ಕಲ್ಮನೂರಿನಲ್ಲಿರುವ ಆಸ್ಪತ್ರೆಯಲ್ಲಿ ಸುಮಾರು 40 ರಿಂದ 45 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪುಸಾದ್‍ನಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ 20-25 ಜನರಿಗೆ ವೈದ್ಯಕೀಯ ನೆರವು ನೀಡಲಾಗಿದೆ. ಕೆಲವರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ರೋಗಿಗಳ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾನ್ಪುರ ಹಿಂಸಾಚಾರ – 40 ದಂಗೆಕೋರರ ಫೋಟೋ ರಿಲೀಸ್, ಇಬ್ಬರು ಅರೆಸ್ಟ್
ಕಲಬುರಗಿ: ಊಟ ಕೇಳಿದ 4 ವರ್ಷದ ಮುಗ್ಧ ಮಗುವಿನ ಕೈಯನ್ನು ಕೆಂಡದ ಕಿಡಿಯಿಂದ ಮಲತಾಯಿ ಮನಬಂದಂತೆ ಸುಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ತಾಂಡಾ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ನಾಲವಾರ ತಾಂಡಾದ ತಿಪ್ಪಣ್ಣ ಎಂಬುವರು ಪತ್ನಿ ಮರಣ ನಂತರ ಪುತ್ರಿ ಸೋನಾಲಿಕಾಗೆ ಅಮ್ಮನ ಪ್ರೀತಿ ಸಿಗಬೇಕೆಂದು ಮರೆಮ್ಮಳನ್ನು 2ನೇ ಮದುವೆ ಆಗಿದ್ದರು. ಆದರೆ, ಕೆಲಸದ ನಿಮಿತ್ತ ತಿಪ್ಪಣ್ಣ ಪೂನಾಗೆ ಹೋಗಿದ್ದು, ಇತ್ತ ಸೋನಾಲಿಕಾಗೆ ಮರೆಮ್ಮ ಮನಬಂದಂತೆ ಹಿಂಸಿಸುತ್ತಿದ್ದಾಳೆ. ಇದನ್ನೂ ಓದಿ: ಧರ್ಮ ದಂಗಲ್‌ಗೆ ತೆರೆ ಎಳೆಯಲು ಮುಂದಾದ ಬಿಜೆಪಿ – ರಾಜ್ಯ ಘಟಕಗಳಿಗೆ ಹೈಕಮಾಂಡ್ ವಾರ್ನಿಂಗ್
ನಾಲ್ಕು ವರ್ಷ ಸೋನಲಿಕ ಮಲತಾಯಿಗೆ ಊಟ ಕೇಳಿದರೆ ಹೊಡೆಯುವುದು, ಬಡಿಯುವುದು, ಮಂಚಕ್ಕೆ ಕಟ್ಟಿ ಹಾಕುವುದು, ಮೈ ಕೈ ಸುಡುವುದು ಮಾಡಿದ್ದಾಳೆ. ದಿನನಿತ್ಯ ಹೀಗೆ ಕಿರುಕುಳ ನೀಡುತ್ತಿದ್ದನ್ನು ನೋಡುತ್ತಿದ್ದ ಜನ ಕಳೆದ 3-4 ದಿನಗಳಿಂದ ಆಟವಾಡಲು ಮಗು ಹೊರಗೆ ಬರದೇ ಇರುವುದರಿಂದ ಸಂಶಯಗೊಂಡು ಮನೆಗೆ ಹೋಗಿದ್ದಾರೆ. ಇದನ್ನೂ ಓದಿ: ಭಾರತ ಮತಾಂಧರನ್ನು ಪ್ರಶಂಸಿಸುವುದಿಲ್ಲ: ಪಾಕ್ ಪ್ರಧಾನಿಗೆ ಭಾರತ ಸರ್ಕಾರ ತೀವ್ರ ತರಾಟೆ
ಈ ವೇಳೆ ಮಂಚಕ್ಕೆ ಮಗುವನ್ನು ಕಟ್ಟಿ ಹಾಕಿರುವುದನ್ನು ಗಮನಿಸಿ ನಂತರ ಕಟ್ಟಿದ್ದ ಹಗ್ಗವನ್ನು ಬಿಚ್ಚಿ ಮಗುವನ್ನು ಎತ್ತಿಕೊಂಡು ಹೊರಗೆ ಬಂದಾಗ ಮಗುವಿನ ಎರಡು ಕೈಗಳನ್ನು ಕೆಂಡದ ಕಿಡಿಯಿಂದ ಸುಟ್ಟಿರುವುದು ಬೆಳಕಿಗೆ ಬಂದಿದೆ. ನಂತರ ಮಲತಾಯಿಯನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು ಇದೀಗ ಈ ಸಂಬಂಧ ವಾಡಿ ಠಾಣೆಗೆ ಮರೆಮ್ಮ ವಿರುದ್ಧ ದೂರು ಕೊಟ್ಟಿದ್ದಾರೆ.
ಗಾಂಧಿನಗರ: ಕರಿಯಲ್ಲಿ ಉಪ್ಪು, ಖಾರ ಹೆಚ್ಚಾಗಿದೆ ಎಂದು ಗುಜರಾತ್‍ನಲ್ಲಿ ವ್ಯಕ್ತಿಯೊಬ್ಬ ಪತ್ನಿಯ ತಲೆ ಬೋಳಿಸಿದ ವಿಚಿತ್ರ ಘಟನೆ ಗುಜರಾತ್‍ನಲ್ಲಿ ನಡೆದಿದೆ.
ಉಪ್ಪು ಹೆಚ್ಚಾಗಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಗುಜರಾತ್‍ನಲ್ಲಿ ವ್ಯಕ್ತಿಯೊಬ್ಬ ತನ್ನ 28 ವರ್ಷದ ಪತ್ನಿಯ ತಲೆ ಬೋಳಿಸಿ, ಹಲ್ಲೆ ಮಾಡಿದ್ದಾನೆ. ಈ ಹಿನ್ನೆಲೆ ಕೋಪಗೊಂಡ ಪತ್ನಿ, ಪತಿ ವಿರುದ್ಧ ವತ್ವಾ ಪೊಲೀಸರಿಗೆ ದೂರು ಕೊಟ್ಟಿದ್ದಾಳೆ. ಇದನ್ನೂ ಓದಿ: ತನ್ನ ಪುಟ್ಟ ಮಗುವಿನೊಂದಿಗೆ ಪತ್ನಿಗಾಗಿ ಅಲೆದಾಡುತ್ತಿರುವ ಪತಿ
ನಡೆದಿದ್ದೇನು?
ಪತ್ನಿ ರಿಜ್ವಾನಾ ಪತಿ ವಿರುದ್ಧ ದೂರು ಕೊಟ್ಟಿದ್ದು, 8 ವರ್ಷಗಳ ಹಿಂದೆ ನಾನು ಮತ್ತು ನನ್ನ ಪತಿ ಇಮ್ರಾನ್ ಮದುವೆಯಾಗಿದ್ದೇವೆ. ಅವನು ಕೂಲಿ ಕೆಲಸ ಮಾಡುತ್ತಿದ್ದಾನೆ. ಮೇ 8 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಮ್ರಾನ್ ಊಟಕ್ಕೆ ಮನೆಗೆ ಬಂದಿದ್ದ. ನಾನು ಅವನಿಗೆ ಚಪಾತಿ ಮತ್ತು ಕರಿ ಕೊಟ್ಟೆ. ಅವನು ಊಟವನ್ನು ಇಷ್ಟಪಡಲಿಲ್ಲ. ಆಹಾರಕ್ಕೆ ಹೆಚ್ಚು ಉಪ್ಪು, ಖಾರ ಸೇರಿಸಿದ್ದಕ್ಕಾಗಿ ನನ್ನನ್ನು ನಿಂದಿಸಲು ಪ್ರಾರಂಭಿಸಿದನು. ಬೇರೆ ಏನಾದ್ರೂ ಮಾಡ್ತೀನಿ ಅಂತ ಹೇಳಿದರೂ ಆತ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಲೇ ಇದ್ದ.
ರೇಜರ್ ತೆಗೆದುಕೊಂಡ
ಈ ಕ್ಷುಲ್ಲಕ ಕಾರಣಕ್ಕೆ ಇಮ್ರಾನ್ ಒಂದು ಕೋಲು ತೆಗೆದುಕೊಂಡು ನನಗೆ ಹೊಡೆಯಲು ಪ್ರಾರಂಭಿಸಿದನು. ಆದರೆ ನಾನು ಪೊಲೀಸರಿಗೆ ಕರೆ ಮಾಡುವುದಾಗಿ ಬೆದರಿಕೆ ಹಾಕಿದೆ. ಅವನು ಸುತ್ತಲೂ ನೋಡಿ ರೇಜರ್ ತೆಗೆದುಕೊಂಡ. ಇದು ಏಕೆ ಎಂದು ನಾನು ಅರ್ಥಮಾಡಿಕೊಳ್ಳುವ ಮೊದಲೇ ಅವನು ನನ್ನನ್ನು ಬಲವಂತವಾಗಿ ಹಿಡಿದುಕೊಂಡು ನನ್ನ ಕೂದಲನ್ನು ಬೋಳಿಸಲು ಪ್ರಾರಂಭಿಸಿದನು. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಜಗಳ ಅರಣ್ಯ ರಕ್ಷಕನ ಕೈ ತುಂಡು
ಭಯಗೊಂಡಿದ್ದೆ
ನನ್ನ ಸಂಪೂರ್ಣ ತಲೆ ಬೋಳಿಸಿದ ನಂತರವೇ ಇಮ್ರಾನ್ ನನ್ನನ್ನು ಬಿಟ್ಟ ಎಂದು ನೊಂದುಕೊಂಡು ಹೇಳಿದಳು. ನಾನು ಕಿರುಚಾಡಿದ್ದಾರಿಂದ ನೆರೆಹೊರೆಯವರು ಓಡಿ ಬಂದರು. ಅವರೇ ನನ್ನನ್ನು ಬಿಡಿಸಿ ಪೊಲೀಸರ ಬಳಿಗೆ ಹೋಗುವಂತೆ ಸೂಚಿಸಿದರು. ಆದರೆ ನಾನು ಆ ಸಮಯದಲ್ಲಿ ತುಂಬಾ ಭಯಗೊಂಡಿದ್ದೆ, ಆಘಾತಕ್ಕೊಳಗಾಗಿದ್ದೆ. ಪರಿಣಾಮ ಘಟನೆ ನಡೆದ ಮೂರು ದಿನಗಳ ಬಳಿಕ ದೂರು ಕೊಡುತ್ತಿದ್ದೇನೆ ಎಂದು ದೂರಿನಲ್ಲಿ ವಿವರಿಸಿದ್ದಾಳೆ.
ಪ್ರಸ್ತುತ ಪೊಲೀಸರು ಇಮ್ರಾನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕುತ್ತಿದ್ದಾರೆ.
ಚಂಡೀಗಢ: ಮನುಷ್ಯ ಜೀವನ ನಡೆಸಲು ಶಿಸ್ತು ತುಂಬಾ ಮುಖ್ಯ. ಶಿಸ್ತಿನ ಪಾಠ ಮಾಡಬೇಕಾದವರು ಶಿಕ್ಷಕರು. ಆದರೆ ಶಿಕ್ಷಕರೇ ಶಿಸ್ತು ಮೀರಿ ನಡೆದುಕೊಳ್ಳುತ್ತಿರುವ ದೃಶ್ಯ ಪಂಜಾಬ್‍ನಲ್ಲಿ ನಡೆದಿದೆ.
ಆಮ್ ಆದ್ಮಿ ಪಕ್ಷದ(ಎಎಪಿ) ಪಂಜಾಬ್ ಸಿಎಂ ಭಗವಂತ್ ಮಾನ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯಸ್ಥರು ಮತ್ತು ಶಿಕ್ಷಕರೊಂದಿಗೆ ಸಭೆ ನಡೆಸಲಾಯಿತು. ಈ ಸಭೆಯನ್ನು ಲೂಧಿಯಾನದ ಐಷಾರಾಮಿ ರೆಸಾರ್ಟ್‍ನಲ್ಲಿ ಮಾಡಲಾಯಿತು. ಸಭೆ ಮುಗಿದ ನಂತರ ಎಲ್ಲ ಶಿಕ್ಷಕರು ಮತ್ತು ಪ್ರಾಂಶುಪಾಲರಿಗೆ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಹಿನ್ನೆಲೆ ಶಿಕ್ಷಕರು ಸರದಿ ಸಾಲಿನಲ್ಲಿ ನಿಂತುಕೊಳ್ಳದೆ ಊಟಕ್ಕಾಗಿ ಕಿತ್ತಾಡಿದ್ದಾರೆ ಇದನ್ನೂ ಓದಿ: ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಬಸ್ ಪಲ್ಟಿ
Lunch scene of Principals and Teachers after meeting with CM Bhagwant Mann and Education Minister in Ludhiana, Punjab.
Looks like they have been starving for many days or probably did not want to miss a free lunch! pic.twitter.com/oDj3WH6PHM
— Hinduvaadi Tapan (@hinduvaaditapan) May 11, 2022
ಶಿಕ್ಷಣ ಇಲಾಖೆಯು ಶಿಕ್ಷಣದ ಗುಣಮಟ್ಟದ ಕುರಿತು ಚರ್ಚಿಸಲು ರಾಜ್ಯದಾದ್ಯಂತ 2,600 ಕ್ಕೂ ಹೆಚ್ಚು ಶಾಲಾ ಮುಖ್ಯಸ್ಥರು ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳ ಸಭೆಯನ್ನು ಕರೆದಿದೆ. ಈ ಸಭೆಯಲ್ಲಿ ಶೈಕ್ಷಣಿಕ ಸುಧಾರಣೆಗಳ ಬಗ್ಗೆ ಸಲಹೆಗಳನ್ನು ಚರ್ಚೆ ನಡೆಸಲಾಯಿತು. ನಂತರ ಮಧ್ಯಾಹ್ನದ ಊಟಕ್ಕೆಂದು ಶಿಕ್ಷಕರು ಹೋದಾಗ ತಟ್ಟೆಗಾಗಿ ಗಲಾಟೆ ನಡೆದಿದ್ದು, ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ವೀಡಿಯೋವನ್ನು ಟ್ವಿಟ್ಟರ್‍ನಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಪಂಜಾಬ್‍ನ ಲುಧಿಯಾನಾದಲ್ಲಿ ಸಿಎಂ ಭಗವಂತ್ ಮಾನ್ ಮತ್ತು ಶಿಕ್ಷಣ ಸಚಿವರನ್ನು ಭೇಟಿ ಮಾಡಿದ ನಂತರ ಪ್ರಾಂಶುಪಾಲರು ಮತ್ತು ಶಿಕ್ಷಕರ ಊಟದ ದೃಶ್ಯ. ಅವರು ಅನೇಕ ದಿನಗಳಿಂದ ಹಸಿವಿನಿಂದ ಬಳಲುತ್ತಿರುವಂತೆ ತೋರುತ್ತಿದೆ. ಅಥವಾ ಅವರಿಗೆ ಉಚಿತ ಊಟವನ್ನು ಕಳೆದುಕೊಳ್ಳಲು ಇಷ್ಟವಿಲ್ಲ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆ ಕತ್ತು ಹಿಸುಕಿ ಸಮಾಧಿ ಮಾಡಲು ಹೋಗಿ ತಾನೇ ಸತ್ತ
Lunch scene of Principals and Teachers after meeting with CM Bhagwant Mann and Education Minister in Ludhiana, Punjab.
Looks like they have been starving for many days or probably did not want to miss a free lunch! pic.twitter.com/oDj3WH6PHM
— Hinduvaadi Tapan (@hinduvaaditapan) May 11, 2022
ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದು, ತಮಾಷೆ ಜೊತೆಗೆ ಶಿಕ್ಷಣ ವ್ಯವಸ್ಥೆಯನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ.