Tag: ಎಂಆರ್‌ಟಿ ಮ್ಯೂಸಿಕ್‌

  • ‘ಬ್ಯಾಚುರಲ್ ಪಾರ್ಟಿ’ ಕಾಪಿರೈಟ್ ಕೇಸ್: ಕಾನೂನು ಹೋರಾಟ ಮಾಡುತ್ತೇನೆ ಎಂದ ರಕ್ಷಿತ್ ಶೆಟ್ಟಿ

    ‘ಬ್ಯಾಚುರಲ್ ಪಾರ್ಟಿ’ ಕಾಪಿರೈಟ್ ಕೇಸ್: ಕಾನೂನು ಹೋರಾಟ ಮಾಡುತ್ತೇನೆ ಎಂದ ರಕ್ಷಿತ್ ಶೆಟ್ಟಿ

    ‘ಬ್ಯಾಚುಲರ್ ಪಾರ್ಟಿ’ (Bachelor Party) ಕಾಪಿರೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ರಿಯಾಕ್ಟ್ ಮಾಡಿದ್ದಾರೆ. ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ, ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ ಎಂದು ಪರಂವಃ ಸ್ಟೂಡಿಯೋಸ್ (Paramvah Studios) ಪ್ರತಿಕ್ರಿಯೆ ನೀಡಿದೆ. ಕಾನೂನು ಹೋರಾಟ ಮಾಡುವುದಾಗಿ ರಕ್ಷಿತ್ ಶೆಟ್ಟಿ ಸುದೀರ್ಘ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ಅಪ್ಪು ಕಪ್ ಸೀಸನ್ 2: ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

    ನಾವು ಈ ಬಹಿರಂಗ ಪತ್ರವನ್ನು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು. ಅಲ್ಲದೆ, ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ ಎಂಬುದಾಗಿ ಪತ್ರವನ್ನು ಹಂಚಿಕೊಳ್ಳಲಾಗಿದೆ.

    ಈ ಮುಂಚೆ, ಅಂದರೆ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ತೆರೆಕಾಣುವುದಕ್ಕೂ ಮುನ್ನವೆ ನಾವು ಎಂ ಆರ್ ಟಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತು ಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ, ನಮ್ಮ ಬಜೆಟ್ ಅನ್ನು ಮೀರಿತ್ತು. ಎಂಆರ್‌ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರು ಮಾತುಕತೆಗೆ ತಯಾರಿರರಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂ ಆರ್ ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

    ಹಾಗಾಗಿ, ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿಸಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು, ನಮ್ಮ ಈ ಪ್ರಾಮಾಣಿಕ ಪ್ರಯತ್ನ ಎಂದು ಪರಂವಃ ಸ್ಟುಡಿಯೋಸ್ ಪತ್ರದ ಮೂಲಕ ಉತ್ತರಿಸಿದ್ದಾರೆ.

    ಏನಿದು ಪ್ರಕರಣ?
    ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಂವಃ ಸ್ಟೂಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ಗಾಳಿ ಮಾತು’ ಮತ್ತು ‘ನ್ಯಾಯ ಎಲ್ಲಿದೆ’ ಚಿತ್ರದ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನ ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ.

    2024ರ ಜನವರಿಯಲ್ಲಿ ಚಿತ್ರದ ಹಾಡುಗಳ ಬಳಕೆ ಬಗ್ಗೆ ಮಾತುಕತೆಯಾಗಿತ್ತು. ಆದರೆ ಈ ಸಿನಿಮಾದ ಹಾಡಿನ ಬಳಕೆ ಬಗ್ಗೆ ಮಾತುಕತೆ ಸರಿ ಹೊಂದದೇ ಇದ್ದರಿಂದ ಅಲ್ಲಿಗೆ ನಿಲ್ಲಿಸಲಾಗಿತ್ತು. ಬಳಿಕ 2024ರ ಮಾರ್ಚ್‌ನಲ್ಲಿ ಒಟಿಟಿಯಲ್ಲಿ ರಕ್ಷಿತ್ ಶೆಟ್ಟಿ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿತ್ತು. ಈ ವೇಳೆ, ಸಿನಿಮಾ ಗಮಿಸಿದಾಗ ಎರಡು ಚಿತ್ರಗಳ ಹಾಡು ಬಳಕೆಯಾಗಿತ್ತು.

  • ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್; ಎಂಆರ್‌ಟಿ ಮ್ಯೂಸಿಕ್ ಮ್ಯಾನೇಜರ್ ಸ್ಪಷ್ಟನೆ ಏನು?

    ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್; ಎಂಆರ್‌ಟಿ ಮ್ಯೂಸಿಕ್ ಮ್ಯಾನೇಜರ್ ಸ್ಪಷ್ಟನೆ ಏನು?

    ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ಕಮ್ ನಿರ್ಮಾಪಕ ರಕ್ಷಿತ್ ಶೆಟ್ಟಿ (Rakshit Shetty) ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪರಮ್ವಾ ಸ್ಟುಡಿಯೋ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ (Bachelor Party) ಚಿತ್ರದಲ್ಲಿ ‘ಗಾಳಿ ಮಾತು’ ಮತ್ತು ‘ನ್ಯಾಯ ಎಲ್ಲಿದೆ’ ಹಾಡನ್ನು ಅಕ್ರಮವಾಗಿ ಬಳಸಿದ್ದಾರೆ ಎಂಬ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದು, ಪ್ರಸಾರದ ಹಕ್ಕು ಪಡೆಯಲು ಅನುಮತಿ ಪಡೆದಿಲ್ಲ ಎಂದು ಎಂಆರ್‌ಟಿ ಮ್ಯಾನೇಜರ್ (MRT Music) ಚೇತನ್ ಸ್ಪಷ್ಟನೆ ನೀಡಿದ್ದಾರೆ.

    ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ‘ಗಾಳಿ ಮಾತು’ ಮತ್ತು ‘ನ್ಯಾಯ ಎಲ್ಲಿದೆ’ ಹಾಡನ್ನು ಬಳಸಿಕೊಂಡಿದ್ದಾರೆ. ಈ ಹಿಂದೆ ಪರಮ್ವಾ ಸ್ಟುಡಿಯೋ ಟೀಮ್ ನಮ್ಮನ್ನು ಸಂಪರ್ಕಿಸಿತ್ತು. ಈ ಸಿನಿಮಾದ ಹಾಡನ್ನು ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದ್ದರು. ಸಾಂಗ್ ರೈಟ್ಸ್ ಕೊಡಿ ಸಿನಿಮಾದಲ್ಲಿ ಬಳಸೋದಕ್ಕೆ ಅಂತ ಕೇಳಿದ್ದರು. ನಮ್ಮ ಸಂಸ್ಥೆಗೆ ರಾಯಲ್ಟಿ ಪೇ ಮಾಡಿ ಹಾಡು ಬಳಸಿಕೊಳ್ಳಿ ಎಂದು ತಿಳಿಸಿದ್ವಿ. ಅವರು ಒಪ್ಪಿಕೊಂಡಿದ್ದರು. ಎಂದು ಎಂಆರ್‌ಟಿ ಮ್ಯಾನೇಜರ್ ಚೇತನ್ ಮಾತನಾಡಿದ್ದಾರೆ.

    ಯಾವುದೇ ರೀತಿ ಈ ಸಿನಿಮಾಗೆ ತಡೆ ಹಾಕಬೇಡಿ ರಾಯಲ್ಟಿ ಪೇ ಏನಿದೆ ಅದನ್ನು ನಾವು ಮಾಡುತ್ತೇವೆ ಅಂತ ಪರಮ್ವಾ ಸ್ಟುಡಿಯೋದವರು ಹೇಳಿದ್ದರು. ಅದಕ್ಕೆ ನಾವು ಸರಿ ಎಂದು ಒಪ್ಪಿಕೊಂಡಿದ್ದೇವು. ಮುಂದಿನ ಪ್ರೋಸಿಜರ್‌ಗೆ ಮಾತನಾಡಲು ಕರೆ ಮಾಡಿದಾಗ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಮಾರ್ಚ್‌ನಲ್ಲಿ ರಿಲೀಸ್ ಆಯ್ತು. ಆಗ ನಮ್ಮ ಗಮನಕ್ಕೆ ಬಂದಿದೆ. ಕಾಪಿರೈಟ್ ಲಾ ಪ್ರಕಾರ ಇರುವ ರೂಲ್ಸ್ ಅವರು ಪೂರ್ಣಗೊಳಿಸಬೇಕಾಗುತ್ತದೆ. ನಮ್ಮ ಕಡೆಯಿಂದ ಏನು ಮಾಡಬೇಕು ನಾವು ಮಾಡುತ್ತೇವೆ. ನ್ಯಾಯ ಯಾರ ಕಡೆ ಇದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ಎಂಆರ್‌ಟಿ ಮ್ಯಾನೇಜರ್ ಚೇತನ್ ಮಾತನಾಡಿದ್ದಾರೆ.

    ಏನಿದು ಪ್ರಕರಣ?
    ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ಗಾಳಿ ಮಾತು’ ಮತ್ತು ‘ನ್ಯಾಯ ಎಲ್ಲಿದೆ’ ಚಿತ್ರದ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನ ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ.

    2024ರ ಜನವರಿಯಲ್ಲಿ ಚಿತ್ರದ ಹಾಡುಗಳ ಬಳಕೆ ಬಗ್ಗೆ ಮಾತುಕತೆಯಾಗಿತ್ತು. ಆದರೆ ಈ ಸಿನಿಮಾದ ಹಾಡಿನ ಬಳಕೆ ಬಗ್ಗೆ ಮಾತುಕತೆ ಸರಿ ಹೊಂದದೇ ಇದ್ದರಿಂದ ಅಲ್ಲಿಗೆ ನಿಲ್ಲಿಸಲಾಗಿತ್ತು. ಬಳಿಕ 2024ರ ಮಾರ್ಚ್ನಲ್ಲಿ ಒಟಿಟಿಯಲ್ಲಿ ರಕ್ಷಿತ್ ಶೆಟ್ಟಿ `ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿತ್ತು. ಈ ವೇಳೆ, ಸಿನಿಮಾ ಗಮಿಸಿದಾಗ ಎರಡು ಚಿತ್ರಗಳ ಹಾಡು ಬಳಕೆಯಾಗಿತ್ತು.