Tag: ಎಂಐ-17ವಿ5 ಹೆಲಿಕಾಪ್ಟರ್

  • ಹೆಲಿಕಾಪ್ಟರ್ ದುರಂತದ ಬಗ್ಗೆ ಸಂಸತ್‍ನಲ್ಲಿ ಮಾಹಿತಿ ನೀಡಿದ್ರು ರಾಜನಾಥ್ ಸಿಂಗ್

    ಹೆಲಿಕಾಪ್ಟರ್ ದುರಂತದ ಬಗ್ಗೆ ಸಂಸತ್‍ನಲ್ಲಿ ಮಾಹಿತಿ ನೀಡಿದ್ರು ರಾಜನಾಥ್ ಸಿಂಗ್

    ನವದೆಹಲಿ: ತಮಿಳುನಾಡಿನ ನೀಲಗಿರಿ ಅರಣ್ಯ ಪ್ರದೇಶದಲ್ಲಿ (ಕೂನೂರು ಬಳಿ) ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾರ್ಲಿಮೆಂಟ್‍ಗೆ ಇಂದು ವಿವರಿಸಿದರು.

    ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಪಾರ ದುಃಖ ಮತ್ತು ಭಾರವಾದ ಹೃದಯದಿಂದ ನಿನ್ನೆ ಮಧ್ಯಾಹ್ನ ಸಂಭವಿಸಿದ ಹೆಲಿಕಾಪ್ಟರ್ ಪತನದ ದುರದೃಷ್ಟಕರ ಸುದ್ದಿಯನ್ನು ತಿಳಿಸಲು ನಾನು ನಿಂತಿದ್ದೇನೆ. ಭಾರತದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ದುರಂತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿದ್ದರು. ವಾಯುಪಡೆಯ ಹೆಲಿಕಾಪ್ಟರ್ ನಿನ್ನೆ ಬೆಳಗ್ಗೆ 11:48ಕ್ಕೆ ಸೂಲೂರ್ ಏರ್‌ಬೇಸ್‌ನಿಂದ ಹೊರಟು, ಮಧ್ಯಾಹ್ನ 12:15ಕ್ಕೆ ವೆಲ್ಲಿಂಗ್‍ಟನ್‍ನಲ್ಲಿ ಇಳಿಯುವ ನಿರೀಕ್ಷೆ ಇತ್ತು. ಆದರೆ ಮಧ್ಯಾಹ್ನ 12:08ರ ಸುಮಾರಿಗೆ ಸೂಳೂರು ವಾಯುನೆಲೆಯಲ್ಲಿ ಏರ್ ಟ್ರಾಫಿಕ್ ತನ್ನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ ಎಂದು ವಿವರಿಸಿದರು. ಇದನ್ನೂ ಓದಿ: ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಬ್ಲ್ಯಾಕ್‌ ಬಾಕ್ಸ್ ಪತ್ತೆ- ಬಯಲಾಗುತ್ತಾ ದುರಂತದ ರಹಸ್ಯ?

    ಕೆಲವು ಸ್ಥಳೀಯರು ಕೂನೂರು ಸಮೀಪದ ಕಾಡಿನಲ್ಲಿ ಬೆಂಕಿಯನ್ನು ಕಂಡು ಸ್ಥಳಕ್ಕೆ ಧಾವಿಸಿದರು. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರ್ ಅನ್ನು ಸ್ಥಳೀಯರು ನೋಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಎಲ್ಲರನ್ನೂ ಮಿಲಿಟರಿ ಆಸ್ಪತ್ರೆಗೆ ಸಾಗಿಸಲಾಯಿತು. ದುರಾದೃಷ್ಟವಶಾತ್ ಸಿಡಿಎಸ್ ಜನರಲ್ ಬಿಪಿನ್ ರಾವತ್, ಪತ್ನಿ ಸೇರಿದಂತೆ ಹೆಲಿಕಾಪ್ಟರ್‌ನಲ್ಲಿದ್ದ 13 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು – ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತು

    ಈ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಸ್ಥಿತಿ ಗಂಭೀರವಾಗಿದ್ದರೂ, ಆರೋಗ್ಯ ಸ್ಥಿರವಾಗಿದೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ. ಗ್ರೂಪ್ ಕ್ಯಾಪ್ಟನ್ ಸಿಂಗ್ ಅವರು ತೀವ್ರ ಸುಟ್ಟ ಗಾಯಗಳಿಂದ ವೆಲ್ಲಿಂಗ್ಟನ್‍ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತಕ್ಕೆ ಬಲಿಯಾಗಿರುವ ಸಾಯಿ ತೇಜ್‍ಗೆ 27 ವರ್ಷ!

    ಹೆಲಿಕಾಪ್ಟರ್ ಪತನಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆ ತನಿಖೆಗೆ ಆದೇಶಿಸಲಾಗಿದೆ. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತನಿಖಾ ತಂಡವು ನಿನ್ನೆಯೇ ದುರಂತದ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್ ಪತನ – ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಯಾರು ಗೊತ್ತಾ?

    ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸೇನಾ ಗೌರವಗಳೊಂದಿಗೆ ನೆರವೇರಿಸಲಾಗುವುದು. ಇತರ ಸೇನಾ ಸಿಬ್ಬಂದಿಯ ಅಂತಿಮ ವಿಧಿವಿಧಾನಗಳನ್ನು ಸೂಕ್ತ ಮಿಲಿಟರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದರು. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಇದಕ್ಕೂ ಮುನ್ನ ದುರಂತದಲ್ಲಿ ಸಾವಿಗೀಡಾದ ಬಿಪಿನ್ ರಾವತ್, ಪತ್ನಿ ಹಾಗೂ ಸೇನಾ ಸಿಬ್ಬಂದಿಗೆ ಪಾರ್ಲಿಮೆಂಟ್‍ನಲ್ಲಿ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ದುರ್ಮರಣ

  • ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಬ್ಲ್ಯಾಕ್‌ ಬಾಕ್ಸ್ ಪತ್ತೆ- ಬಯಲಾಗುತ್ತಾ ದುರಂತದ ರಹಸ್ಯ?

    ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಬ್ಲ್ಯಾಕ್‌ ಬಾಕ್ಸ್ ಪತ್ತೆ- ಬಯಲಾಗುತ್ತಾ ದುರಂತದ ರಹಸ್ಯ?

    ಚೆನ್ನೈ: ರಕ್ಷಣಾ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಎಂಐ-17ವಿ5 ಹೆಲಿಕಾಪ್ಟರ್ ಪತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧರ ತಂಡ ಶೋಧ ಕಾರ್ಯ ಮುಂದುವರಿಸಿದೆ. ಈ ವೇಳೆ ಹೆಲಿಕಾಪ್ಟರ್‌ನ ಬ್ಲ್ಯಾಕ್‌ ಬಾಕ್ಸ್ ಒಂದು ಪತ್ತೆಯಾಗಿದ್ದು, ವಶಕ್ಕೆ ಪಡೆದುಕೊಳ್ಳಲಾಗಿದೆ.

    ಏನಿದು ಬ್ಲ್ಯಾಕ್‌ ಬಾಕ್ಸ್?
    ಹೆಲಿಕಾಪ್ಟರ್ ಪತನ ಹೇಗಾಯಿತು, ಅದಕ್ಕೆ ಕಾರಣವೇನು ಎಂಬ ಮಾಹಿತಿ ತಿಳಿದುಕೊಳ್ಳಲು ಬ್ಲ್ಯಾಕ್‌ ಬಾಕ್ಸ್ ಸಹಕಾರಿಯಾಗಿದೆ. ಹೆಲಿಕಾಪ್ಟರ್‌ಗೆ ಸಂಬಂಧಿಸಿದ ಹಲವಾರು ಮಾಹಿತಿಗಳು ಆ ಬ್ಲ್ಯಾಕ್ ಬಾಕ್ಸ್‌ನಲ್ಲಿ ಲಭ್ಯವಿರುತ್ತದೆ. ಇಂದು ಬ್ಲ್ಯಾಕ್‌ ಬಾಕ್ಸ್ ಪತ್ತೆಯಾಗಿದ್ದು, ಹೆಲಿಕಾಪ್ಟರ್ ಪತನದ ರಹಸ್ಯ ಮಾಹಿತಿಯನ್ನು ಬಹಿರಂಗಪಡಿಸುವ ಸಾಕ್ಷಿಯಾಗಿದೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ- ಪ್ರಾಣ ಕಳೆದುಕೊಂಡ ವಿವೇಕ್ ಕುಮಾರ್‌ಗಿದೆ 2 ತಿಂಗಳ ಪುಟ್ಟ ಕಂದಮ್ಮ

    ನಿನ್ನೆ ತಮಿಳುನಾಡಿನ ನೀಲಗಿರಿ ಅರಣ್ಯ ವ್ಯಾಪ್ತಿಯ (ಕೂನೂರು ಬಳಿ) ಸಂಭವಿಸಿದ ಹೆಲಿಕಾಪ್ಟರ್ ಪತನದಿಂದಾಗಿ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ವಿಂಗ್ ಕಮಾಂಡರ್ ಆರ್.ಭಾರದ್ವಾಜ್ ನೇತೃತ್ವದಲ್ಲಿ 25 ಸಿಬ್ಬಂದಿಯ ವಿಶೇಷ ತಂಡವು ಹೆಲಿಕಾಪ್ಟರ್ ಪತನಗೊಂಡ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ. ತಂಡ ಇಂದು ಹೆಲಿಕಾಪ್ಟರ್ ಬಾಕ್ಸ್ ಅನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದೆ. ಹೆಲಿಕಾಪ್ಟರ್‌ಗೆ ಸಂಬಂಧಿಸಿದ ದತ್ತಾಂಶವನ್ನು ಇನ್ನಷ್ಟೇ ಬಹಿರಂಗಪಡಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ತೀರಾ ಕೆಳಮಟ್ಟದಲ್ಲೇ ಹಾರಾಡ್ತಿದ್ದ ಹೆಲಿಕಾಪ್ಟರ್ ಕೊನೆಯ ದೃಶ್ಯ ಲಭ್ಯ

    ಬ್ಲ್ಯಾಕ್‌ ಬಾಕ್ಸ್‌ನಲ್ಲಿ ಹೆಲಿಕಾಪ್ಟರ್‌ನ ಡೇಟಾ ರೆಕಾರ್ಡ್ ಆಗಿರುತ್ತದೆ. ಹೆಲಿಕಾಪ್ಟರ್ ಡೇಟಾ ಜೊತೆಗೆ ಕಾಕ್‍ಪಿಟ್ ಸಂಭಾಷಣೆಗಳು ದಾಖಲಾಗಿರುತ್ತದೆ.

  • ಬಿಪಿನ್ ರಾವತ್ ಸ್ಥಿತಿ ಗಂಭೀರ – Mi-17 V5 ಹೆಲಿಕಾಪ್ಟರ್ ವಿಶೇಷತೆ ಏನು?

    ಬಿಪಿನ್ ರಾವತ್ ಸ್ಥಿತಿ ಗಂಭೀರ – Mi-17 V5 ಹೆಲಿಕಾಪ್ಟರ್ ವಿಶೇಷತೆ ಏನು?

    ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ (ಕೂನೂರು ಬಳಿ) ಪತನಗೊಂಡಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ. ಆದರೆ ಸುರಕ್ಷತೆ, ಸಾಮರ್ಥ್ಯದಲ್ಲಿ ಎಂಐ-17ವಿ5 ಹೆಲಿಕಾಪ್ಟರ್ ಬಹಳ ಹೆಸರುವಾಸಿ ಎಂಬ ವಿಚಾರ ಈಗ ಲಭ್ಯವಾಗಿದೆ.

    ಎಂಐ-17ವಿ5 ವಿಶೇಷತೆ ಏನು?
    ಭಾರತೀಯ ವಾಯುಪಡೆ ಹೆಚ್ಚಾಗಿ ಬಳಸುವ ಎಂಐ-17ವಿ5 ಆಧುನಿಕ ಸಾರಿಗೆ ಹೆಲಿಕಾಪ್ಟರ್ ಆಗಿದೆ. ಪ್ರಯಾಣಿಕರು, ಸರಕು ಹಾಗೂ ವಸ್ತುಗಳನ್ನು ಸಾಗಿಸಲು ಪೂರಕವಾಗಿ ಈ ಹೆಲಿಕಾಪ್ಟರ್ ಅನ್ನು ವಿನ್ಯಾಸಗೊಳಿಸಲಾಗಿದೆ. ಯುದ್ಧತಂತ್ರದ ವಾಯುಪಡೆ ಹಾಗೂ ಸೈನಿಕರ ತಂಡಗಳನ್ನು ಸಾಗಿಸಿ ಯಾವುದೇ ಸ್ಥಳದಲ್ಲೂ ಅವರನ್ನು ಇಳಿಸುವ ಸಾಮರ್ಥ್ಯವನ್ನು ಈ ಹೆಲಿಕಾಪ್ಟರ್ ಹೊಂದಿದೆ. ಇದನ್ನೂ ಓದಿ: ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿದ್ದ Mi-17V5 ಪತನ – 11 ಮಂದಿಯ ಮೃತದೇಹ ಪತ್ತೆ

    ಆಧುನಿಕ ಏವಿಯಾನಿಕ್ಸ್ ನೊಂದಿಗೆ ಸಜ್ಜುಗೊಂಡಿರುವ ಎಂಐ-17ವಿ5 ಹೆಲಿಕಾಪ್ಟರ್ ಯಾವುದೇ ಭೌಗೋಳಿಕ ಮತ್ತು ಹವಾಮಾನ ಪರಿಸ್ಥಿತಿ, ಹಗಲು-ರಾತ್ರಿ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ.

    ಭಾರತೀಯ ವಾಯುಪಡೆಯು ಹೆಲಿಕಾಪ್ಟರ್ ಅನ್ನು ಸರಕು ಸಾಗಿಸಲು ಮಾತ್ರವಲ್ಲದೇ ರಕ್ಷಣಾ ಕಾರ್ಯ ಹಾಗೂ ಕಾರ್ಯಾಚರಣೆ ಪ್ರದೇಶಗಳಲ್ಲಿ ಸೇನೆಯನ್ನು ನಿಯೋಜಿಸಲು ಸಹ ಇದನ್ನು ಬಳಸಿಕೊಳ್ಳಬಹುದು. ಇದನ್ನೂ ಓದಿ: 500 ಕೋಟಿ ಮೌಲ್ಯದ ಡ್ರಗ್ಸ್ ಪೊಲೀಸರ ವಶಕ್ಕೆ

    ಸೋವಿಯತ್ ರಾಷ್ಟ್ರ ರಷ್ಯಾ ವಿನ್ಯಾಸಗೊಳಿಸಿರುವ ಹೆಲಿಕಾಪ್ಟರ್ ಇದಾಗಿದೆ. ಯಾವುದೇ ಹವಾಮಾನ ಪರಿಸ್ಥಿತಿಯಲ್ಲೂ ನಿಗದಿತವಲ್ಲದ ಪ್ರದೇಶಗಳಲ್ಲೂ ಲ್ಯಾಂಡಿಂಗ್ ಆಗುವ ಸಾಮರ್ಥ್ಯವನ್ನು ಹೊಂದಿದೆ. ಸುಮಾರು 1,300 ಕೆಜಿಯಷ್ಟು ತೂಕದ ವಸ್ತುಗಳನ್ನು ಹೊತ್ತು ಸಾಗಿಸಲು ಸಮರ್ಥವಾಗಿದೆ. ಅಲ್ಲದೇ ಗಂಟೆಗೆ ಸುಮಾರು 250 ಕಿ.ಮೀ.ನಷ್ಟು ವೇಗವಾಗಿ ಹಾರುವ ಸಾಮರ್ಥ್ಯವನ್ನು ಹೊಂದಿದೆ.

    ಕೆಲ ವರ್ಷಗಳ ಹಿಂದೆ ರಷ್ಯಾದಿಂದ 80 ಎಂಐ-17 ಹೆಲಿಕಾಪ್ಟರ್‍ಗಳನ್ನು ಭಾರತ ಖರೀದಿಸಿತ್ತು. ಇವು ಭಾರತೀಯ ವಾಯುಪಡೆಯ ಸಾರಿಗೆ ನೌಕಾಪಡೆಯ ಕಾರ್ಯಚಟುವಟಿಕೆಗಳಿಗೆ ಮೀಸಲಾಗಿವೆ.

    ರಷ್ಯಾ ನಿರ್ಮಿತ ಹೆಲಿಕಾಪ್ಟರ್ ಎಂಐ-17ವಿ5 ಪ್ರಧಾನ ಮಂತ್ರಿ ಸೇರಿದಂತೆ ಎಲ್ಲಾ ಗೌರವಾನ್ವಿತರ ಪ್ರಯಾಣಕ್ಕೆ ಬಳಸುವ ವಿಶ್ವಾಸಾರ್ಹ ವಿಮಾನವಾಗಿದೆ. ಇದು ಸಮರ್ಥ ಹೆಲಿಕಾಪ್ಟರ್‍ಗಳ ಸರಣಿಯ ಅಗ್ರಸ್ಥಾನದಲ್ಲಿದೆ. ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ಭಾರತವು ಪಾಕಿಸ್ತಾನದ ಬಾಲ್‍ಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿದ ಮರುದಿನ ಅಂದರೆ 2019ರ ಫೆಬ್ರವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಒಂದು ಅಪಘಾತ ಹೊರತುಪಡಿಸಿದರೆ, ಈ ಹೆಲಿಕಾಪ್ಟರ್‍ನಿಂದ ಈವರೆಗೂ ಯಾವುದೇ ದೊಡ್ಡ ಅಪಘಾತ ಸಂಭವಿಸಿಲ್ಲ.