Tag: ಎಂಕೆ ಸ್ಟಾಲಿನ್

  • ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

    -ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ
    -ಕಾಲ್ತುಳಿತ ತನಿಖೆಗೆ ಸರ್ಕಾರದಿಂದ ಆಯೋಗ ರಚನೆ

    ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಎಂಕೆ ಸ್ಟಾಲಿನ್‌  (MK Stalin) ಘೋಷಿಸಿದ್ದಾರೆ.

    ಈ ಕುರಿತು ಎಕ್ಸ್‌ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕಾಲ್ತುಳಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೂ 10 ಲಕ್ಷ ರೂ. ಪರಿಹಾರ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಕಾಲ್ತುಳಿತದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದಿದ್ದಾರೆ.ಇದನ್ನೂ ಓದಿ: ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

    ಶನಿವಾರ (ಸೆ.27) ರಾತ್ರಿ ಕರೂರಿಗೆ ಭೇಟಿ ನೀಡಿ, ಸಂತ್ರಸ್ತರ ಕುಟುಂಬಗಳನ್ನು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸುತ್ತೇನೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 8 ಮಕ್ಕಳು ಮತ್ತು 16 ಮಹಿಳೆಯರು ಸೇರಿದಂತೆ 36 ಜನರು ಸಾವನ್ನಪ್ಪಿದ್ದಾರೆ. ಸದ್ಯ ತಿರುಚಿ, ಸೇಲಂ ಮತ್ತು ದಿಂಡಿಗಲ್ ಜಿಲ್ಲಾಧಿಕಾರಿಗಳು ಕರೂರಿಗೆ ಹೋಗಿ ಪರಿಹಾರ ಕಾರ್ಯಗಳ ಬಗ್ಗೆ ಕ್ರಮವಹಿಸಿ ಎಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ನಟ ವಿಜಯ ಶನಿವಾರ (ಸೆ.27) ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

    ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

  • ಸಾಧ್ಯವಾದಷ್ಟು ಬೇಗ ಮಕ್ಕಳನ್ನ ಮಾಡಿಕೊಳ್ಳಿ – ಜನಸಂಖ್ಯೆ ಹೆಚ್ಚಿಸಲು ಎಂ.ಕೆ ಸ್ಟಾಲಿನ್ ಮನವಿ

    ಸಾಧ್ಯವಾದಷ್ಟು ಬೇಗ ಮಕ್ಕಳನ್ನ ಮಾಡಿಕೊಳ್ಳಿ – ಜನಸಂಖ್ಯೆ ಹೆಚ್ಚಿಸಲು ಎಂ.ಕೆ ಸ್ಟಾಲಿನ್ ಮನವಿ

    ಚೆನ್ನೈ: ಜನಸಂಖ್ಯೆಯ (Population) ಆಧಾರದ ಮೇಲೆ ಸಂಸದೀಯ ಸ್ಥಾನಗಳನ್ನು ಪುನರ್ ವಿಂಗಡಿಸಿದರೆ ಅದು ತಮಿಳುನಾಡಿಗೆ (Tamil Nadu) ಹಾನಿ ಮಾಡಬಹುದು. ರಾಜ್ಯದಲ್ಲಿ ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸುವುದರ ಪರಿಣಾಮಗಳನ್ನು ರಾಜ್ಯವು ಅನುಭವಿಸಬೇಕಾಗಬಹುದು. ಹೀಗಾಗಿ ರಾಜ್ಯದ ಜನರು ಸಾಧ್ಯವಾದಷ್ಟು ಬೇಗ ಮಕ್ಕಳನ್ನು ಹೆರುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಮನವಿ ಮಾಡಿದ್ದಾರೆ.

    ಈ ಹಿಂದೆ ನಾವು ಕಡಿಮೆ ಮಕ್ಕಳನ್ನು ಹೆರಬೇಕೆಂದು ಹೇಳುತ್ತಿದ್ದೆವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಈಗ ತಕ್ಷಣ ಮಕ್ಕಳನ್ನು ಹೆರಬೇಕೆಂದು ಹೇಳುವಂತಾಗಿದೆ. ಕೇಂದ್ರ ಸರ್ಕಾರ ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆ ಮಾಡಿದರೆ, ತಮಿಳುನಾಡಿನಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆ ಮತ್ತು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯ ಕಡಿಮೆಯಾಗಬಹುದು ಎಂದು ಹೇಳಿದರು. ಇದನ್ನೂ ಓದಿ: ಹೆಚ್‌ಡಿಕೆ ಕೇಂದ್ರ ಮಂತ್ರಿಯಾಗಿ ರಾಜ್ಯಕ್ಕೆ ಯಾವುದೇ ಅನುದಾನ ತಂದಿಲ್ಲ: ಹೆಚ್‌ಸಿ ಬಾಲಕೃಷ್ಣ

    ಕ್ಷೇತ್ರ ಪುನರ್ವಿಂಗಡಣೆ ವಿಷಯದ ಕುರಿತು ಮಾರ್ಚ್ 5 ರಂದು ಸರ್ವಪಕ್ಷಗಳ ಸಭೆ ಕರೆದಿದ್ದು, ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಮನವಿ ಮಾಡಿದರು ಮತ್ತು ಕ್ಷೇತ್ರ ಪುನರ್ವಿಂಗಡಣೆ ವಿಷಯವು ತಮಿಳುನಾಡಿಗೆ ಬಹಳ ಮುಖ್ಯವಾಗಿದೆ ಎಂದರು. ಇದನ್ನೂ ಓದಿ: ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

    ತಮ್ಮ 72ನೇ ಹುಟ್ಟುಹಬ್ಬದ ಸಂದರ್ಭದಲ್ಲೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದ ಸ್ಟಾಲಿನ್, ಇಂದು ತಮಿಳುನಾಡು ಎರಡು ಪ್ರಮುಖ ಸವಾಲುಗಳನ್ನು ಎದುರಿಸುತ್ತಿದೆ. ಇವುಗಳಲ್ಲಿ ಒಂದು ಭಾಷೆಗಾಗಿ ಹೋರಾಟ, ಅದು ನಮ್ಮ ಜೀವನಾಡಿ. ಇನ್ನೊಂದು ಹೋರಾಟ ಗಡಿ ನಿರ್ಣಯಕ್ಕಾಗಿ, ಅದು ನಮ್ಮ ಹಕ್ಕು. ಈ ಹೋರಾಟದ ಬಗ್ಗೆ ಜನರಿಗೆ ತಿಳಿಸಲು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. ಕ್ಷೇತ್ರ ಪುನರ್ವಿಂಗಡಣೆಯು ರಾಜ್ಯದ ಸ್ವಾಭಿಮಾನ, ಸಾಮಾಜಿಕ ನ್ಯಾಯ ಮತ್ತು ಜನರ ಕಲ್ಯಾಣ ಯೋಜನೆಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ರಾಜ್ಯದ ಪ್ರತಿಯೊಬ್ಬ ನಾಗರಿಕರು ಒಂದಾಗಿ ರಾಜ್ಯವನ್ನು ಉಳಿಸಲು ಸಾಧ್ಯವಾಗುವಂತೆ ನೀವು ಕೆಲಸ ಮಾಡಬೇಕು ಎಂದಿದ್ದರು. ಇದನ್ನೂ ಓದಿ: ಪಾಕ್ ಮೂಲದ ಭಯೋತ್ಪಾದಕರ 1.8 ಎಕ್ರೆ ಜಾಗ ಮುಟ್ಟುಗೋಲು

  • ಚೆನ್ನೈನಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯನಿಗೆ 7 ಬಾರಿ ಚಾಕು ಇರಿತ – ಪೊಲೀಸರಿಂದ ಓರ್ವನ ಬಂಧನ

    ಚೆನ್ನೈನಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯನಿಗೆ 7 ಬಾರಿ ಚಾಕು ಇರಿತ – ಪೊಲೀಸರಿಂದ ಓರ್ವನ ಬಂಧನ

    ಚೆನ್ನೈ: ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯನಿಗೆ ರೋಗಿಯ ಮಗ ಚಾಕುವಿನಿಂದ 7 ಬಾರಿ ಮನಬಂದಂತೆ ಇರಿದಿರುವ ಘಟನೆ ಚೆನ್ನೈನಲ್ಲಿ (Chennai) ನಡೆದಿದೆ.

    ವೈದ್ಯ ಡಾ.ಬಾಲಾಜಿ ಹಲ್ಲೆಗೊಳಗಾದ ವ್ಯಕ್ತಿ. ಆರೋಪಿಯನ್ನು ಪೆರುಗುಳತ್ತೂರಿನ ವಿಘ್ನೇಶ್ ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಬೆಂಬಲಿಗನಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್‌ ಪಟ್ಟ

    ಚೆನ್ನೈನ ಕಲೈಂಜರ್ ಸೆಂಟಿನರಿ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್‌ನಲ್ಲಿ ಈ ಘಟನೆ ನಡೆದಿದೆ. ಡಾ. ಬಾಲಾಜಿ ಕೆಲಸ ಮಾಡುತ್ತಿದ್ದ ವೇಳೆ ವಿಘ್ನೇಶ್ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ವೈದ್ಯರಿಗೆ ಏಳು ಬಾರಿ ಇರಿದಿದ್ದು, ವಿಘ್ನೇಶ್ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಅಲ್ಲಿದ್ದ ಇತರರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಠೀಕರಣ ಎಲ್ಲೆ ಮೀರಿದೆ-ಟೆಂಡರ್‌ನಲ್ಲಿ 4% ಮೀಸಲಾತಿ ವಿಚಾರಕ್ಕೆ ಶೋಭಾ ಕರಂದ್ಲಾಜೆ ಆಕ್ರೋಶ

    ವಿಘ್ನೇಶ್ ತಾಯಿ ಕಳೆದ ಕೆಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ (Cancer) ಚಿಕಿತ್ಸೆ ಪಡೆದಿದ್ದರು. ಜೊತೆಗೆ ಆರು ಬಾರಿ ಕಿಮೋಥೆರಪಿ ಚಿಕಿತ್ಸೆಗೆ ಒಳಗಾಗಿದ್ದರು. ಶ್ವಾಸಕೋಶದ ಸಮಸ್ಯೆ ಎದುರಿಸುತ್ತಿದ್ದರಿಂದ ಅವರನ್ನು ಮನೆಗೆ ಕರೆದೊಯ್ದಿದ್ದರು. ಕೆಲ ದಿನಗಳ ಹಿಂದೆ ಆಕೆಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಇಂದು ಗಿಂಡಿಯಲ್ಲಿರುವ ಕಲೈಂಜರ್ ಸೆಂಟಿನರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದಾಗ ಬಾಲಾಜಿ ಅವರ ಕೊಠಡಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಎಲ್.ಪಾರ್ಥಸಾರಥಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಮತಗಟ್ಟೆಯಲ್ಲಿ ಸರ್ಕಾರಿ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಅಭ್ಯರ್ಥಿ

    ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಡಾ.ಬಾಲಾಜಿ ಅವರಿಗೆ ರೋಗಿಯ ಕುಟುಂಬದ ಸದಸ್ಯ ಚಾಕುವಿನಿಂದ ಇರಿದಿರುವುದು ಆಘಾತಕಾರಿಯಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸಲಾಗಿದೆ. ಎಲ್ಲಾ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ. ಬಾಲಾಜಿ ಅವರಿಗೆ ಮತ್ತು ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಸಬೇಕು ಹೇಳಿದರು. ಇದನ್ನೂ ಓದಿ: ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ದೆಹಲಿಗೆ ಮೊದಲ ಸ್ಥಾನ

    ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ನಮ್ಮ ಸರ್ಕಾರಿ ವೈದ್ಯರ ನಿಸ್ವಾರ್ಥ ಕೆಲಸ ಅಪಾರವಾಗಿದೆ. ಅವರ ಸುರಕ್ಷತೆಯನ್ನು ನೋಡಿಕೊಳ್ಳುವುದು ನಮ್ಮ ಕರ್ತವ್ಯ, ಮುಂದೆ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಬಿಹಾರದ ಕಾರ್ಯಕ್ರಮದಲ್ಲಿ ಮೋದಿ ಪಾದಸ್ಪರ್ಶಕ್ಕೆ ನಿತೀಶ್ ಯತ್ನ – ವೀಡಿಯೋ ವೈರಲ್

  • ತಮಿಳುನಾಡು ಸಿಎಂ ಪುತ್ರಿ ಸತ್ತೈನಾಥರ್ ದೇವಸ್ಥಾನಕ್ಕೆ ಭೇಟಿ

    ತಮಿಳುನಾಡು ಸಿಎಂ ಪುತ್ರಿ ಸತ್ತೈನಾಥರ್ ದೇವಸ್ಥಾನಕ್ಕೆ ಭೇಟಿ

    ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ ಪುತ್ರ ಉದಯನಿಧಿ ಅವರ ಸನಾತನ ಧರ್ಮದ ವಿರುದ್ಧದ ಹೇಳಿಕೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ಸ್ಟಾಲಿನ್ ಪುತ್ರಿ ಸೆಂತಾಮರೈ ಸ್ಟಾಲಿನ್ (Senthamarai Stalin) ಅವರು ಮೈಲಾಡುತುರೈ (Mayiladuthurai) ಜಿಲ್ಲೆಯ ಸಿರ್ಕಾಜಿಯಲ್ಲಿರುವ (Sirkazhi) ಸತ್ತೈನಾಥರ್ (Sattainathar) ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ವಿಶೇಷ ದರ್ಶನ ಪಡೆದಿದ್ದಾರೆ.

    ಸ್ಟಾಲಿನ್ ಪುತ್ರಿ ದೇವಾಲಯಕ್ಕೆ ಆಗಮಿಸಿದ ವೇಳೆ ಆಕೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಸ್ವಾಗತಿಸಿತು. ಸೆಂತಾಮರೈ ಸ್ಟಾಲಿನ್ ಸ್ವಾಮಿ ಅಂಬಲ್ ಚಟ್ಟನಾಥರ್ ಮತ್ತು ಅಷ್ಟ ಭೈರವ ದೇಗುಲಗಳಿಗೆ ಭೇಟಿ ನೀಡಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸತ್ತೈನಾಥರ್ ದೇವಾಲಯವು ಬೆಟ್ಟದ ಮೇಲಿರುವ ದೇವಾಲಯವಾಗಿದ್ದು, ಮೂರು ಹಂತಗಳಲ್ಲಿ ಭಗವಾನ್ ಶಿವನಿಂದ ಸ್ತೋತ್ರಗಳನ್ನು ಪಡೆದಿದೆ ಎಂದು ನಂಬಲಾಗಿದೆ. ಇದನ್ನೂ ಓದಿ: ಭಾರತದ 74 ಲಕ್ಷ ವಾಟ್ಸಪ್ ಖಾತೆಗಳು ನಿಷೇಧ

    ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ಸೆಪ್ಟೆಂಬರ್ 2 ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿ, ಸನಾತನ (Sanatana) ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ಮಾತ್ರ ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ಟ್ರ್ಯಾಕ್ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ

    ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಎಂಬ ಹೆಸರು ಸಂಸ್ಕೃತದಿಂದ ಬಂದಿದೆ. ಇದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಆಡಳಿತಾರೂಢ ಡಿಎಂಕೆ ಸರ್ಕಾರದಲ್ಲಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದರು. ಇದನ್ನೂ ಓದಿ: ಭಯೋತ್ಪಾದಕರಿಗೆ ಕಾಂಗ್ರೆಸ್‌ ಮುಕ್ತ ಅವಕಾಶ ಕೊಟ್ಟಿದೆ; ಉದಯಪುರ ಟೈಲರ್‌ ಹತ್ಯೆ ಖಂಡಿಸಿದ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸನಾತನ ಧರ್ಮದ ವಿರುದ್ಧ ಹೇಳಿಕೆ ನಿಲ್ಲಿಸಿ, ಬಿಜೆಪಿ ಭ್ರಷ್ಟಚಾರದ ಬಗ್ಗೆ ಮಾತನಾಡಿ: ಕಾರ್ಯಕರ್ತರಿಗೆ ಸ್ಟಾಲಿನ್ ಸಲಹೆ

    ಸನಾತನ ಧರ್ಮದ ವಿರುದ್ಧ ಹೇಳಿಕೆ ನಿಲ್ಲಿಸಿ, ಬಿಜೆಪಿ ಭ್ರಷ್ಟಚಾರದ ಬಗ್ಗೆ ಮಾತನಾಡಿ: ಕಾರ್ಯಕರ್ತರಿಗೆ ಸ್ಟಾಲಿನ್ ಸಲಹೆ

    ನವದೆಹಲಿ: ಸನಾತನ ಧರ್ಮದ (Sanatana Dharma) ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿ. ಬಿಜೆಪಿ (BJP) ನೇತೃತ್ವದ ಕೇಂದ್ರವನ್ನು ಭ್ರಷ್ಟಾಚಾರದ (Corruption) ಮೇಲೆ ಗುರಿಯಾಗಿಸಬೇಕು ಎಂದು ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ತಮ್ಮ ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

    ಸನಾತನ ಧರ್ಮವನ್ನು ರಕ್ಷಿಸುವ ದೃಷ್ಟಿಯಿಂದ ಪ್ರತಿ ಹೇಳಿಕೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದು, ಅವರು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆ ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

    ಇದಕ್ಕೆ ಪೂರಕವಾಗಿ ಹೇಳಿಕೆ ನೀಡುವ ಮೂಲಕ ಕೇಂದ್ರ ಸಚಿವರೊಬ್ಬರು ಉದ್ದೇಶಪೂರ್ವಕವಾಗಿ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯ ವೈಫಲ್ಯಗಳನ್ನು ಮರೆಮಾಚುವ ತಂತ್ರಕ್ಕೆ ನಮ್ಮ ಜನರು ಬಲಿಯಾಗಬಾರದು. ಭ್ರಷ್ಟಾಚಾರದ ಬಗ್ಗೆ ಚರ್ಚೆಯನ್ನು ತಡೆಯಲು ಬಿಜೆಪಿ ಬಯಸುತ್ತದೆ ಮತ್ತು ಸನಾತನ ಧರ್ಮದ ಮೇಲೆ ಕೇಂದ್ರೀಕರಿಸುವ ಮೂಲಕ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ. ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಹೆಚ್ಚು ಮಾತನಾಡಬೇಕು ಎಂದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ- ಸೇನಾಧಿಕಾರಿಗಳಿಬ್ಬರು ಹುತಾತ್ಮ

    ಕೋಮುವಾದಿ ಮತ್ತು ನಿರಂಕುಶ ಬಿಜೆಪಿ ಆಡಳಿತವನ್ನು ಸೋಲಿಸುವ ಮೂಲಕ ದೇಶ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ನಾವು ಪಾಲಿಸಬೇಕಾದ ಗುರಿಯನ್ನು ಗೆಲ್ಲಲು ಸಮರ್ಪಣಾ ಭಾವದಿಂದ ಕೆಲಸ ಮಾಡೋಣ ಮತ್ತು ನಮ್ಮ ಗಮನ ಬೇರೆಡೆಗೆ ಅವಕಾಶ ನೀಡದಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಬಿಜೆಪಿ ನಾಯಕರು ನಿಜವಾದ ಸಮಸ್ಯೆಗಳನ್ನು ಬಿಟ್ಟು ಜನರ ಗಮನವನ್ನು ಬೇರೆಡೆಗೆ ಸೆಳೆಯುವಲ್ಲಿ ನಿಪುಣರು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕುಡಿಯುವ ನೀರಿನ ಹೆಸರಿನಲ್ಲಿ ತಮಿಳುನಾಡು ರೈತರಿಗೆ ಅನ್ಯಾಯ: ತ.ನಾಡು ಸಚಿವ

    ಭಾರತ್ ಮಾಲಾ ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ ವೇ ಯೋಜನೆಗಳು ಸೇರಿದಂತೆ ಕೇಂದ್ರದ ಯೋಜನೆಗಳಲ್ಲಿ 7.50 ಲಕ್ಷ ಕೋಟಿ ರೂ.ಗಳ ಅಕ್ರಮ ನಡೆದಿದೆ ಎಂದು ಸಿಎಜಿ ವರದಿಯು ಬಹಿರಂಗಪಡಿಸಿದೆ. ಮಣಿಪುರ ಹಿಂಸಾಚಾರವನ್ನು ಉಲ್ಲೇಖಿಸಿ, ಬಿಜೆಪಿ ಆಡಳಿತಕ್ಕೆ ಬೆಂಕಿ ನಂದಿಸಲು ಬೆನ್ನುಮೂಳೆಯಿಲ್ಲ ಮತ್ತು ಅದು ರಾಷ್ಟ್ರೀಯ ಭಾಷಣದ ಹಾದಿಯನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಜಿ20 ಸಭೆಗೆ ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಆಗಮಿಸಿದ್ದ ಚೀನಾ – ತಪಾಸಣೆಗೆ ನಿರಾಕರಿಸಿ ಹೋಟೆಲ್‌ನಲ್ಲಿ ಹೈಡ್ರಾಮಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ – ಮುತಾಲಿಕ್ ಕಿಡಿ

    ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ – ಮುತಾಲಿಕ್ ಕಿಡಿ

    ಧಾರವಾಡ: ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ (Pramod Muthalik) ತಿಳಿಸಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್‌, ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ (Udhayanidhi Stalin) ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

    ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಆಕ್ರೋಶ; ಆನ್‌ಲೈನ್ ಮೂಲಕ ದೂರು ದಾಖಲಿಸಲು ಮುಂದಾದ ಹಿಂದೂ ಸಂಘಟನೆಗಳು

    ಪೆರಿಯಾರ್‌ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್‌ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ – ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಾವ್ದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ – ಬಿಜೆಪಿಗೆ ಎಂ.ಕೆ ಸ್ಟಾಲಿನ್ ಪುತ್ರ ಸವಾಲ್

    ಯಾವ್ದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ – ಬಿಜೆಪಿಗೆ ಎಂ.ಕೆ ಸ್ಟಾಲಿನ್ ಪುತ್ರ ಸವಾಲ್

    ಚೆನ್ನೈ: ಸನಾತನ ಧರ್ಮವು (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ಬಿಜೆಪಿ ನಾಯಕರಿಗೆ ಮತ್ತೊಂದು ಸವಾಲ್ ಹಾಕಿದ್ದಾರೆ.

    ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದ್ದಂತೆ ಬಿಜೆಪಿ ನಾಯಕರು ತಿರುಗಿಬಿದ್ದಿದ್ದರು. ಪಿಎಂ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಉದಯನಿಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದ್ದರು. ಈ ಬೆನ್ನಲ್ಲೇ ಉದಯನಿಧಿ ನನ್ನ ವಿರುದ್ಧ ಬಿಜೆಪಿ (BJP) ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ ಎಂದು ಸವಾಲ್ ಎಸೆದಿದ್ದಾರೆ. ಇದನ್ನೂ ಓದಿ: INDIA ಹಿಂದೂ ಧರ್ಮವನ್ನ ದ್ವೇಷಿಸುತ್ತಿದೆ, ಪರಂಪರೆಯ ಮೇಲೆ ದಾಳಿ ಮಾಡ್ತಿದೆ: ಶಾ ಗುಡುಗು

    ನಾನು ಸನಾತನ ಧರ್ಮವನ್ನ ಮಾತ್ರ ಟೀಕಿಸಿದ್ದೇನೆ. ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ಇದನ್ನ ನಿರಂತರವಾಗಿ ಹೇಳುತ್ತೇನೆ. ಆದ್ರೆ ನಾನು ನರಮೇಧಕ್ಕೆ ಆಹ್ವಾನ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಇನ್ನೂ ಕೆಲವರು ದ್ರಾವಿಡಂ (ದ್ರಾವಿಡರು) ನಿರ್ಮೂಲನೆಯಾಗಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ರೆ ಡಿಎಂಕೆ ಪಕ್ಷದವರನ್ನ ಕೊಲ್ಲಬೇಕೇ? ಈ ಹಿಂದೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಅಂತಾ ಕರೆ ಕೊಟ್ಟಿದ್ದರು. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ಸಿಗರನ್ನು ಕೊಲ್ಲಬೇಕು ಎಂದು ಅರ್ಥವೇ ಎಂದು ಪ್ರಶ್ನಿಸಿದ್ದಾರೆ.

    ಬಿಜೆಪಿ ನನ್ನ ಹೇಳಿಕೆಯನ್ನ ತಿರುಚಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಬಿಜೆಪಿಗೆ INDIA ಒಕ್ಕೂಟವನ್ನ ಕಂಡ್ರೆ ಭಯ. ಐಎನ್‌ಡಿಐಎ ಮೈತ್ರಿಗೆ ಹೆದರಿ ಹೀಗೆಲ್ಲಾ ಹೇಳುತ್ತಿದೆ. ನಾನು ನರಮೇಧಕ್ಕೆ ಕರೆ ಕೊಟ್ಟಿಲ್ಲ. ಬಿಜೆಪಿಯವರು ನನ್ನ ವಿರುದ್ಧ ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ರೆಡಿ ಇದ್ದೀನಿ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

    ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

    ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

    ಚೆನ್ನೈ: ಸನಾತನನ ಧರ್ಮವು (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (M.K.Stalin) ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸುವ ಮೂಲಕ ಬಿಜೆಪಿ ನಾಯಕರನ್ನು ತೀವ್ರವಾಗಿ ಟೀಕಿಸಿದ್ದು, ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ: ನಿದ್ರೆಗೆ ಜಾರಿದ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌

    ಸಾಮಾಜಿಕ ಜಾಲಾತಾಣದಲ್ಲಿ ಇವರ ಹೇಳಿಕೆ ಕುರಿತು ಅನೇಕ ಕಾಮೆಂಟ್‌ಗಳು ಬರತೊಡಗಿದ್ದು, ನೆಟ್ಟಿಗರು ತಮಿಳುನಾಡು ಮುಖ್ಯಮಂತ್ರಿಯ ಮಗನ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಬಿಜೆಪಿಯ ಅಮಿತ್ ಮಾಳವೀಯ (Amit Malviya) ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ (Rahul Gandhi) ಮೊಹಬ್ಬತ್ ಕಿ ದುಕಾನ್ ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್‌ನ ಮಿತ್ರಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನ ಈ ನರಮೇಧದ ಕರೆಗೆ ಬೆಂಬಲವಾಗಿದೆ. INDIA ಒಕ್ಕೂಟಕ್ಕೆ ಒಂದು ಅವಕಾಶವನ್ನು ನೀಡಿದರೆ ಅದು ನಮ್ಮ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿ

    ಸನಾತನ ಧರ್ಮವನ್ನು ಸರಳವಾಗಿ ವಿರೋಧಿಸಲು ಸಾಧ್ಯವಿಲ್ಲ. ಆದರೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಚೆನ್ನೈನಲ್ಲಿ (Chennai) ನಡೆದ ಲೇಖಕರ ಸಮಾವೇಶದಲ್ಲಿ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು. ಈ ಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ವಾದಿಸಿದ್ದರು. ಇದನ್ನೂ ಓದಿ: ಚಂದ್ರ, ಸೂರ್ಯ ಮಿಷನ್‌ ಆಯ್ತು; ಇಸ್ರೋ ಮುಂದಿನ ಆಪರೇಷನ್‌ ಯಾವುದು?

    ಮಾಳವೀಯ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ. ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತು ಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿ ಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದ ಜನರ ಪರವಾಗಿ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: G20ಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ

    ಸನಾತನ ಧರ್ಮ ಮತ್ತು ಸಮಾಜದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ವ್ಯಾಪಕ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ. ನಾನು ಭಾಷಣದಲ್ಲಿ ಏನು ಹೇಳಿದ್ದೇನೆ ಎಂಬುದನ್ನು ಮತ್ತೊಮ್ಮೆ ಹೇಳುತ್ತೇನೆ. ಸೊಳ್ಳೆಗಳಿಂದ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳು ಹರಡುವಂತೆ, ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂದು ನಾನು ನಂಬುತ್ತೇನೆ ಎಂದು ಮತ್ತೊಮ್ಮೆ ಅವರ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಜಿ20ಗೂ ಮುನ್ನ ಮೋದಿ – ಬೈಡೆನ್ ನಡುವೆ ದ್ವಿಪಕ್ಷೀಯ ಮಾತುಕತೆ

    ಅಲ್ಲದೇ ನ್ಯಾಯಾಲಯ ಅಥವಾ ಜನತಾ ನ್ಯಾಯಾಲಯದಲ್ಲಿ ನನ್ನ ಮುಂದೇ ಯಾವುದೇ ಸವಾಲುಗಳು ಎದುರಾದರೂ ಅದನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಎಂಕೆ ಫೈಲ್ಸ್ ರಿಲೀಸ್ – ಅಣ್ಣಾಮಲೈ ವಿರುದ್ಧ ಮಾನನಷ್ಟ ಕೇಸ್

    ಡಿಎಂಕೆ ಫೈಲ್ಸ್ ರಿಲೀಸ್ – ಅಣ್ಣಾಮಲೈ ವಿರುದ್ಧ ಮಾನನಷ್ಟ ಕೇಸ್

    ಚೆನ್ನೈ: ಡಿಎಂಕೆ ಫೈಲ್ಸ್ (DMK Files) ರಿಲೀಸ್ ಮಾಡಿ ಭ್ರಷ್ಟಾಚಾರದ ಆರೋಪ ಹೊರಿಸಿದ್ದ ರಾಜ್ಯ ಬಿಜೆಪಿ (BJP) ಮುಖ್ಯಸ್ಥ ಕೆ ಅಣ್ಣಾಮಲೈ (Annamalai) ವಿರುದ್ಧ ತಮಿಳುನಾಡು ಸರ್ಕಾರ (Tamil Nadu Government) ಬುಧವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಅಣ್ಣಾಮಲೈ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ ಮಾನಹಾನಿ ಮಾಡುತ್ತಿದ್ದಾರೆ ಎಂದು ಪಕ್ಷ ಆರೋಪಿಸಿದೆ.

    2011ರಲ್ಲಿ ಚೆನ್ನೈ ಮೆಟ್ರೋ ಒಪ್ಪಂದವನ್ನು ಸರಿಪಡಿಸಲು ಎಂಕೆ ಸ್ಟಾಲಿನ್‌ಗೆ 200 ಕೋಟಿ ರೂ. ನೀಡಲಾಗಿದೆ ಎಂದು ಅಣ್ಣಾಮಲೈ ಇತ್ತೀಚೆಗೆ ಆರೋಪಿಸಿದ್ದರು. ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ನಾಯಕರು 1.34 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವೆಲ್ಲವನ್ನೂ ಭ್ರಷ್ಟಾಚಾರದ ಮೂಲಕ ಗಳಿಸಿದ್ದಾರೆ. ಮುಖ್ಯಮಂತ್ರಿ ಅವರ ಕುಟುಂಬ ಸದಸ್ಯರು ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವ ದುಬೈ ಕಂಪನಿಯ ನಿರ್ದೇಶಕರು ಎಂದು ಅಣ್ಣಾಮಲೈ ಆರೋಪಿಸಿದ್ದರು.

    ಈ ಬಗ್ಗೆ ವಾಗ್ದಾಳಿ ನಡೆಸಿರುವ ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್, ಅಣ್ಣಾಮಲೈ ಅವರಿಗೆ ಶಿಕ್ಷೆ ನೀಡುವುದೇ ಉತ್ತಮ ಕ್ರಮ. ಇದಕ್ಕೆ ಹೋಲಿಸಿದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏನೂ ಹೇಳಿರಲಿಲ್ಲ. ಆದರೂ ಅವರನ್ನು ಅನರ್ಹಗೊಳಿಸಲಾಗಿದೆ. ಇದೀಗ ಅಣ್ಣಾಮಲೈ ವಿರುದ್ಧ ಮೊಕದ್ದಮೆ ಹೂಡಲು ಬೇಕಾದಷ್ಟು ಕಾರಣಗಳಿವೆ ಎಂದಿದ್ದಾರೆ. ಇದನ್ನೂ ಓದಿ: ರಾಮನಗರ, ಉಡುಪಿಯಲ್ಲಿ ಭರ್ಜರಿ ಮತದಾನ – ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ನೀರಸ ಪ್ರತಿಕ್ರಿಯೆ

    ಈ ಹಿಂದೆ ಡಿಎಂಕೆಯ ಲೀಗಲ್ ನೋಟಿಸ್ ಬಳಿಕ ಅಣ್ಣಾಮಲೈ ಕ್ಷಮೆಯಾಚಿಸಲು ನಿರಾಕರಿಸಿದ್ದು, ಅವರು ಈ ಪ್ರಕರಣವನ್ನು ನ್ಯಾಯಾಲಯದಲ್ಲಿಯೇ ಎದುರಿಸಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

  • ತಮಿಳುನಾಡಿನಲ್ಲಿ ಓಲಾದಿಂದ 7,614  ಕೋಟಿ  ಹೂಡಿಕೆ- ಸಿಎಂ ಸ್ಟಾಲಿನ್‌ ಸಹಿ

    ತಮಿಳುನಾಡಿನಲ್ಲಿ ಓಲಾದಿಂದ 7,614 ಕೋಟಿ ಹೂಡಿಕೆ- ಸಿಎಂ ಸ್ಟಾಲಿನ್‌ ಸಹಿ

    ಚೆನ್ನೈ: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ (Electric Vehicle) ಉತ್ಪಾದನೆ ಹೆಚ್ಚಿಸುವ ದೃಷ್ಟಿಯಿಂದ ತಮಿಳುನಾಡು (Tamil Nadu) ಸರ್ಕಾರ ಓಲಾ ಎಲೆಕ್ಟ್ರಿಕ್ ಮೊಬಿಲಿಟಿ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, 7,614 ಕೋಟಿ ರೂ. ಹೂಡಿಕೆಯ 20 GW ಬ್ಯಾಟರಿ ಸಾಮರ್ಥ್ಯದ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸಿಎಂ ಎಂ.ಕೆ ಸ್ಟಾಲಿನ್ (MK Stalin) ಸಹಿ ಹಾಕಿದರು.

    ತಮಿಳುನಾಡು ಸರ್ಕಾರವು ಫೆ. 14ರಂದು ತನ್ನ ಎಲೆಕ್ಟ್ರಿಕ್ ವೆಹಿಕಲ್ (ಇವಿ) ನೀತಿ 2023 ಅನ್ನು ಅನಾವರಣಗೊಳಿಸಿತು. ಇವಿ ಉದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ 50,000 ಕೋಟಿ ರೂ.ಗಳಷ್ಟು ಹೂಡಿಕೆಗಳನ್ನು ಗಳಿಸುವ ಮತ್ತು 1.50 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ.

    ಹೊಸ ಒಪ್ಪಂದದಿಂದ 3,111 ಜನರಿಗೆ ಹೊಸ ಉದ್ಯೋಗ ಸಿಗಲಿದೆ ಎಂದು ನಿರೀಕ್ಷೆ ಮಾಡಿದ್ದು, ರಾಜ್ಯದಲ್ಲಿ 4 ಚಕ್ರದ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ. ಇದರಿಂದ ಮಾಲಿನ್ಯದ ಪ್ರಮಾಣ ತಗುಲಿದ್ದು, ಪೆಟ್ರೋಲ್, ಡಿಸೇಲ್ ಮೇಲಿನ ಅವಲಂಬನೆಯೂ ಕಡಿಮೆಯಾಗಲಿದೆ. ಇದನ್ನೂ ಓದಿ: ಕೊನೆ ಉಸಿರೆಳೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಟಿಪ್ಪು, ಭಯೋತ್ಪಾದನೆ, ಎಸ್‍ಡಿಪಿಐ ಆಕ್ಸಿಜನ್ ಆಗ್ತಿದೆ: ಯುಟಿ ಖಾದರ್

    ಶೆ. 100ರಷ್ಟು ರಸ್ತೆ ತೆರಿಗೆ ವಿನಾಯಿತಿಯೊಂದಿಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಗೆ ಸರ್ಕಾರ ಉತ್ತೇಜನ ನೀಡುತ್ತಿದ್ದು, ಕಳೆದ 5 ವರ್ಷಗಳಲ್ಲಿ ರಾಜ್ಯವು ಏಥರ್ ಎಲೆಕ್ಟ್ರಿಕ್ ಮತ್ತು ಓಲಾ ಎಲೆಕ್ಟ್ರಿಕ್ ಸೇರಿದಂತೆ ಹೊಸ ಕಂಪನಿಗಳಿಗೆ ಅವಕಾಶ ನೀಡುತ್ತಿದ್ದು EV ಉತ್ಪಾದನಾ ಕೇಂದ್ರವಾಗಿ ರೂಪಾಂತರಗೊಳ್ಳುತ್ತಿದೆ. ಇದನ್ನೂ ಓದಿ: ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಯಲ್ಲಿ ವಾರ್ಷಿಕ ಪರೀಕ್ಷೆ ಬರೆದ ಮಹಿಳೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k