Tag: ಎಂಜಿನಿಯರಿಂಗ್

  • CET: ಎಂಜಿನಿಯರಿಂಗ್ ಆಪ್ಷನ್ಸ್ ದಾಖಲು ಆರಂಭ- ಕೆಇಎ

    CET: ಎಂಜಿನಿಯರಿಂಗ್ ಆಪ್ಷನ್ಸ್ ದಾಖಲು ಆರಂಭ- ಕೆಇಎ

    ಬೆಂಗಳೂರು: ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಹೆಚ್‌ಎಸ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಲಿಂಕ್ ಬಿಟ್ಟಿದ್ದು, ಜುಲೈ 15ರವರೆಗೆ ಅವಕಾಶ ನೀಡಿದೆ.

    ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿಎಸ್‌ಸಿ ನರ್ಸಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್‌ಗಳಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಸಂಬಂಧಪಟ್ಟ ಇಲಾಖೆಗಳಿಂದ ಇನ್ನೂ ಬಂದಿಲ್ಲ. ಹೀಗಾಗಿ ಮ್ಯಾಟ್ರಿಕ್ಸ್ ಬಂದ ನಂತರ ಈ ಕೋರ್ಸ್‌ಗಳ ಪ್ರವೇಶಕ್ಕೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸೂಪರ್ ಮಾರ್ಟ್‌ನಲ್ಲಿ ಖರೀದಿಸಿ, ಬಳಿಕ ಬಿಲ್ ಕಟ್ಟು ಅಂದ್ರೆ ಚಾಕು ತೋರಿಸಿ ಎಸ್ಕೇಪ್

    ಅಣಕು ಫಲಿತಾಂಶವನ್ನು ಜುಲೈ 19ರಂದು ಪ್ರಕಟಿಸಲಾಗುವುದು. ಅದರ ಬಳಿಕ ಆದ್ಯತೆಗಳನ್ನು ಅದಲು- ಬದಲು ಮಾಡಿಕೊಳ್ಳಲು ಜು.22ರವರೆಗೆ ಅವಕಾಶ ಇರುತ್ತದೆ. ಜುಲೈ 25ರಂದು ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರ, ಹೈಕೋರ್ಟ್ ಆದೇಶ ಸ್ವಾಗತಾರ್ಹ: ಆರ್ ಅಶೋಕ್

    ಅಭ್ಯರ್ಥಿಗಳು ಸೀಟ್ ಮ್ಯಾಟ್ರಿಕ್ಸ್ ನೋಡಿಕೊಂಡು ಇಚ್ಛೆ/ಆಯ್ಕೆಗಳನ್ನು ದಾಖಲಿಸುವಾಗ ಆದ್ಯತಾ ಕ್ರಮಗಳನ್ನು ಅನುಸರಿಸಬೇಕು. ಈ ಕುರಿತ ಹೆಚ್ಚಿನ ಮಾಹಿತಿಯನ್ನು ಯುಜಿಸಿಇಟಿ-25 ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು. ಅಲ್ಲದೆ, ಕೆಇಎ ವಿಕಸನ ಯೂಟ್ಯೂಬ್ ಚಾನಲ್‌ನಲ್ಲಿ ಇರುವ ವೀಡಿಯೊ ಕೂಡ ನೋಡಬಹುದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಏಕೆ? ಹೈಕಮಾಂಡ್ ಏನೂ ಇಲ್ಲ ಅಂದಿದೆ: ಸತೀಶ್ ಜಾರಕಿಹೊಳಿ

    ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, ಕೃಷಿ ವಿಜ್ಞಾನ ಕೋರ್ಸ್‌ಗಳಿಗೆ ಪ್ರಾಕ್ಟಿಕಲ್ ರಾಂಕ್ ಪಡೆದಿರುವ ಅಭ್ಯರ್ಥಿಗಳು, ಪ್ರಾಕ್ಟಿಕಲ್ ಮತ್ತು ರೆಗ್ಯುಲರ್ ಸೀಟುಗಳಿಗೆ ಪ್ರತ್ಯೇಕವಾಗಿಯೇ ಆಪ್ಷನ್ಸ್ ದಾಖಲಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

    ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮತ್ತು ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ ಹಾಗೂ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳ ಪ್ರಕಾರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಹೆಚ್‌ಡಿ ಕುಮಾರಸ್ವಾಮಿ

  • DCET: ಅರ್ಜಿ ತಿದ್ದುಪಡಿಗೆ ಜೂ.8ರವರೆಗೆ ಅವಕಾಶ – ಕೆಇಎ

    DCET: ಅರ್ಜಿ ತಿದ್ದುಪಡಿಗೆ ಜೂ.8ರವರೆಗೆ ಅವಕಾಶ – ಕೆಇಎ

    ಬೆಂಗಳೂರು: ಎಂಜಿನಿಯರಿಂಗ್ (Engineering) ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ ಡಿಸಿಇಟಿ-25 (DCET 25) ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜೂ.5 ರಿಂದ 8ರವರೆಗೆ ಅವಕಾಶ‌ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

    ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ನೀಡಲಾಗಿದೆ. ಅಭ್ಯರ್ಥಿಯ ಹೆಸರು, ತಂದೆ- ತಾಯಿ ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ನಂಬರ್ ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

  • ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ

    ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ

    ಬೆಂಗಳೂರು: ಇಂದು (ಮೇ 12) ದೇಶಾದ್ಯಂತ ಕಾಮೆಡ್-ಕೆ  (COMEDK) ಪರೀಕ್ಷೆ ನಡೆಯಲಿದೆ. ಬೆಂಗಳೂರು (Bengaluru) ಸೇರಿ ದೇಶದ 182 ನಗರಗಳ 264 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ.

    ಒಂದೇ ದಿನ 3 ಅವಧಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 1.18 ಲಕ್ಷ ವಿದ್ಯಾರ್ಥಿಗಳು (Students) ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. ಬೆಳಗ್ಗೆ 8.30ರಿಂದ 11.30, ಮಧ್ಯಾಹ್ನ 1ರಿಂದ 4 ಗಂಟೆ ಹಾಗೂ ಸಂಜೆ 5.30ರಿಂದ 8.30ರ ವರೆಗೆ ಮೂರು ಸೆಷನ್‌ಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಕಾಮೆಡ್-ಕೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಕೋಟೆನಾಡಲ್ಲಿ ಧಾರಾಕಾರ ಮಳೆ – 10 ಮನೆಗಳಿಗೆ ಹಾನಿ, ಐವರು ಆಸ್ಪತ್ರೆಗೆ ದಾಖಲು

    ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಡೀಮ್ಡ್ ವಿವಿಗಳಲ್ಲಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಾತಿಗೆ ಕಾಮೆಡ್-ಕೆ ಪರೀಕ್ಷೆ ನಡೆಸಲಾಗುತ್ತದೆ. ಇದನ್ನೂ ಓದಿ: ಪರಿಷತ್‌ ಚುನಾವಣೆಯಲ್ಲೂ ಮೈತ್ರಿ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌; ಕಮಲಕ್ಕೆ 5, ಜೆಡಿಎಸ್‌ಗೆ 1 ಸ್ಥಾನ

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಬಡ ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಾಳಲ್ಲಿ `ಬೆಳಕು’

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಬಡ ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಾಳಲ್ಲಿ `ಬೆಳಕು’

    ಚಿಕ್ಕಬಳ್ಳಾಪುರ: ಪಬ್ಲಿಕ್ ಟಿವಿಯ ಬೆಳಕು (PBLiC TV Belaku) ಕಾರ್ಯಕ್ರಮದ ಮತ್ತೊಂದು ಇಂಪ್ಯಾಕ್ಟ್ ಆಗಿದೆ. ಬಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಭವ್ಯ ಅವರಿಗೆ ಶಿಡ್ಲಘಟ್ಟ ಶಾಸಕ ರವಿಕುಮಾರ್ ನೆರವು ನೀಡಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ವರಸಂದ್ರ ಗ್ರಾಮದ ಬಡ ಕುಟುಂಬದ ಹೆಣ್ಣು ಮಗಳು ಭವ್ಯಗೆ ಬೆಂಗಳೂರಿನ ಪ್ರತಿಷ್ಠಿತ ನ್ಯೂ ಹಾರಿಜನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ 2ನೇ ವರ್ಷದ ಶುಲ್ಕ ಕಟ್ಟಲು ಕಷ್ಟವಾಗಿತ್ತು. ಅಪ್ಪ-ಅಮ್ಮನ ಬಳಿ ಹಣ ಕೇಳಿದರೆ ಓದೋದೇ ಸಾಕು ಮನೆಗೆ ಬಂದುಬಿಡು ಮದುವೆ ಮಾಡ್ತೀವಿ ಅಂದಿದ್ದರು. ದಿಕ್ಕು ತೋಚದ ಭವ್ಯಾ ಸೀದಾ ಪಬ್ಲಿಕ್ ಟಿವಿ ಕಚೇರಿಗೆ ಬಂದು ಸಂಸ್ಥೆಯ ಮುಖ್ಯಸ್ಥರಾದ ಹೆಚ್‌. ಆರ್ ರಂಗನಾಥ್ (HR Ranganath) ಅವರಿಗೆ ಪತ್ರ ಬರೆದಿದ್ದಳು.

    ನವೆಂಬರ್ 17ರಂದು ಪ್ರಸಾರಗೊಂಡ ಬೆಳಕು ಕಾರ್ಯಕ್ರಮವನ್ನು ವೀಕ್ಷಿಸಿದ ಶಿಡ್ಲಘಟ್ಟ ಶಾಸಕ ಮೇಲೂರು ರವಿಕುಮಾರ್ ಅವರು ವಿದ್ಯಾರ್ಥಿನಿಯ ಎಂಜಿನಿಯರಿಂಗ್ ಓದುವ ಸಂಪೂರ್ಣ ವೆಚ್ಚ ಭರಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಅಲ್ಲದೆ 2ನೇ ವರ್ಷದ ಕಾಲೇಜು ಶುಲ್ಕ 1 ಲಕ್ಷದ 27 ಸಾವಿರ ರೂಪಾಯಿಯ ಚೆಕ್ ನೀಡಿದ್ದಾರೆ. ಶಾಸಕರ ನೆರವು ಸಿಕ್ಕಿದ್ದರಿಂದ ಪಬ್ಲಿಕ್ ಟಿವಿಗೆ ವಿದ್ಯಾರ್ಥಿನಿ ಭವ್ಯಾ ಹಾಗೂ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

  • ಎಂಜಿನಿಯರಿಂಗ್, ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಕೋರ್ಸುಗಳಿಗೆ ಪ್ರವೇಶಾತಿ ಅಕ್ಟೋಬರ್ 30ಕ್ಕೆ ವಿಶೇಷ ಸುತ್ತು: KEA

    ಎಂಜಿನಿಯರಿಂಗ್, ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಕೋರ್ಸುಗಳಿಗೆ ಪ್ರವೇಶಾತಿ ಅಕ್ಟೋಬರ್ 30ಕ್ಕೆ ವಿಶೇಷ ಸುತ್ತು: KEA

    ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಲಭ್ಯವಿರುವ ಎಂಜಿನಿಯರಿಂಗ್ ಸೀಟುಗಳ ಜೊತೆಗೆ 2ನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ನಂತರ ರದ್ದುಪಡಿಸಿಕೊಂಡಿರುವ ಪ್ರವೇಶ ಪಡೆಯದಿರುವ ಕಾರಣಕ್ಕೆ ಖಾಲಿ ಸೀಟುಗಳು ಎಂದು ಗುರುತಿಸಲಾಗಿರುವ ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಸೀಟುಗಳ ಹಂಚಿಕೆ ಅಕ್ಟೋಬರ್ 30ರಂದು ನಡೆಯಲಿದೆ. ಈ ಕುರಿತು ಮಾಧ್ಯಮ ಹೇಳಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಬಿಡುಗಡೆ ಮಾಡಿದೆ.

    ಅಕ್ಟೋಬರ್ 27ರ ಮಧ್ಯಾಹ್ನ 1:00 ರಿಂದ ಇಚ್ಚೆ ಆಯ್ಕೆಗಳನ್ನು ದಾಖಲಿಸಲು ಆನ್‌ಲೈನ್ ಪೋರ್ಟಲ್ ಸಕ್ರಿಯಗೊಳಿಸಲಾಗುವುದು. 2023ನೇ ಸಾಲಿನಲ್ಲಿ ಯಾವುದೇ ಕೋರ್ಸಿಗೆ ಸೀಟು ಹಂಚಿಕೆ ಮಾಡಿಕೊಳ್ಳದಿರುವವರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಇಚ್ಚೆ ಆಯ್ಕೆಗಳನ್ನು ದಾಖಲಿಸಲು ಅಕ್ಟೋಬರ್ 29ರ ಬೆಳಗ್ಗೆ 10 ರವರೆಗೆ ಕಾಲಾವಕಾಶವಿರುತ್ತದೆ. ಇಲ್ಲಿಯವರೆಗೆ 2023ನೇ ಸಾಲಿನಲ್ಲಿ ಯಾವುದೇ ಸೀಟನ್ನು ಪ್ರಾಧಿಕಾರದ ಮೂಲಕ ಹಂಚಿಕೆ ಮಾಡಿಕೊಳ್ಳದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಪೋರ್ಟಲ್‌ನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಹಾಗೂ ವೆಟರಿನರಿ, ಫಾರ್ಮ್ ಸೈನ್ಸ್, ಆರ್ಕಿಟೆಕ್ಟರ್ ಸೀಟುಗಳ ಲಭ್ಯತೆಯನ್ನು ಗಮನಿಸಿ, ನಂತರ ತಮ್ಮ ಇಚ್ಛೆ ಆಯ್ಕೆಗಳನ್ನು ಆದ್ಯತೆಯ ಮೇರೆಗೆ ದಾಖಲಿಸಬಹುದು. ಇದನ್ನೂ ಓದಿ: ಭಾರತದ ಕಾನೂನು ಬದಲಿಸುವ ಮೂರು ಮಸೂದೆಗಳು ಶೀಘ್ರದಲ್ಲಿ ಅಂಗೀಕಾರ: ಅಮಿತ್ ಶಾ

    ವಿಶೇಷ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಅಕ್ಟೋಬರ್ 29ರ ಸಂಜೆ 6 ಗಂಟೆಯ ನಂತರ ಪ್ರಕಟಿಸಲಾಗುವುದು. ವಿಶೇಷ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಅಕ್ಟೋಬರ್ 30ರಂದು ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಿ, ಪ್ರವೇಶ ಆದೇಶ ಡೌನ್‌ಲೋಡಿ ಮಾಡಿಕೊಂಡು ಅದೇ ದಿನವೇ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು (Deemed Admission). ಉಳಿದಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಸೀಟುಗಳ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಎಂಜಿನಿಯರಿಂಗ್ ಕಾಲೇಜುಗಳನ್ನು ನೇರವಾಗಿ ಸಂಪರ್ಕಿಸಿ ಸರ್ಕಾರಿ ಕೋಟಾ ಶುಲ್ಕ ಪಾವತಿಸಿ ಎಂಜಿನಿಯರಿಂಗ್ ಸೀಟನ್ನು ಅಕ್ಟೋಬರ್ 30ರ ಸಂಜೆ 5:30 ರೊಳಗೆ ಪಡೆಯಬಹುದಾಗಿದೆ. ಇದನ್ನೂ ಓದಿ: 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್‌ಗಳಿಗೂ ಒಟ್ಟಿಗೆ ಸಿಇಟಿ ಸೀಟು ಹಂಚಿಕೆ – ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?

    ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್‌ಗಳಿಗೂ ಒಟ್ಟಿಗೆ ಸಿಇಟಿ ಸೀಟು ಹಂಚಿಕೆ – ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?

    ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಇದುವರೆಗೂ ಪ್ರತ್ಯಕವಾಗಿಯೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಸುತ್ತಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಸಕ್ತ ಸಾಲಿನಿಂದ (2023-24) ಎಲ್ಲವನ್ನೂ ಒಟ್ಟಿಗೆ ನಡೆಸಲು ತೀರ್ಮಾನಿಸಿದೆ.

    ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅನಗತ್ಯ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಈ ಸುಧಾರಣಾ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ, ಕೃಷಿ, ನರ್ಸಿಂಗ್, ಆರ್ಕಿಟೆಕ್ಟ್ ಹಾಗೂ ಫಾರ್ಮಸಿ ಕೋರ್ಸ್‌ಗಳ ಪ್ರವೇಶಕ್ಕೆ ಸಂಯೋಜಿತ ಸೀಟು ಹಂಚಿಕೆ (Combined Seat Allotment) ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಹೀಗೆ ಮಾಡುತ್ತಿರುವುದು ಇದೇ ಮೊದಲು ಎಂದು ರಮ್ಯಾ ವಿವರಿಸಿದ್ದಾರೆ. ಇದನ್ನೂ ಓದಿ: ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ

    ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯಿಂದಾಗಿ ಸಾಕಷ್ಟು ಅನಾನುಕೂಲಗಳು ಇದ್ದವು. ಒಬ್ಬ ಅಭ್ಯರ್ಥಿ ಒಮ್ಮೆಗೆ ಒಂದಕ್ಕಿಂತ ಹೆಚ್ಚು ಕೋರ್ಸ್‌ಗಳಲ್ಲಿ ಸೀಟು ಪಡೆದು, ನಂತರ ಆತ ಯಾವುದಾದರು ಒಂದಕ್ಕೆ ಪ್ರವೇಶ ಪಡೆಯುವವರೆಗೂ ಉಳಿದ ಕೋರ್ಸ್‌ಗಳಲ್ಲಿನ ಸೀಟು ಬೇರೆಯ ಅಭ್ಯರ್ಥಿಗಳಿಗೆ ಲಭ್ಯವಾಗುತ್ತಿರಲಿಲ್ಲ. ಇದರಿಂದ ಪ್ರತಿಭಾವಂತರಿಗೆ ಆಯ್ಕೆ ಸುತ್ತಿನಲ್ಲಿ ಸೀಟು ಕೈತಪ್ಪುತ್ತಿತ್ತು ಎಂದು ನಿರ್ದೇಶಕಿ ರಮ್ಯಾ ಹೇಳಿದ್ದಾರೆ. ಅಲ್ಲದೇ ಅಭ್ಯರ್ಥಿಗಳು ಯಾವುದೇ ಕೋರ್ಸ್‌ಗಳಿಗೆ ಪ್ರವೇಶ ಬಯಸಿದ್ದಲ್ಲಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಶುಲ್ಕ ಮತ್ತು ಲಭ್ಯವಿರುವ ಸೀಟುಗಳನ್ನು ಪರಿಶೀಲಿಸಿ, ನಂತರ ತಮ್ಮ ಆದ್ಯತೆಯನುಸಾರ ಸೀಟುಗಳ ಆಯ್ಕೆಯನ್ನು ನಮೂದಿಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಆ.10 ಡೆಡ್‌ಲೈನ್ – ಬಂದ್ ಹಿಂಪಡೆದ ಖಾಸಗಿ ಸಾರಿಗೆ ಸಂಘಟನೆಗಳು

    ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?
    ಅಭ್ಯರ್ಥಿಯು ಆಯ್ಕೆಯನ್ನು ನಮೂದಿಸುವಾಗ ತನ್ನ ಮೊದಲ ಆದ್ಯತೆಯ ಕೋರ್ಸ್‌ಗಳನ್ನು ಮೊದಲು ದಾಖಲಿಸಬೇಕು. ಒಂದು ವೇಳೆ ಮೊದಲ ಆದ್ಯತೆಯ ಕೋರ್ಸ್ ಸಿಗದಿದ್ದರೆ ಅದರ ನಂತರದ ಆಯ್ಕೆಯ ಕೋರ್ಸ್ ಯಾವುದು ಎನ್ನುವುದನ್ನು ಎರಡನೇ ಆದ್ಯತೆಯಾಗಿ ದಾಖಲಿಸಬೇಕು. ಉದಾಹರಣೆಗೆ ವೈದ್ಯಕೀಯ (Medical) ಕೋರ್ಸ್ ಬೇಕೆಂದು ಮೊದಲ ಆದ್ಯತೆ ನೀಡುವ ಅಭ್ಯರ್ಥಿ, ಒಂದು ವೇಳೆ ಅದು ಸಿಗದಿದ್ದಾಗ ತನ್ನ ಆದ್ಯತೆ ಎಂಜಿನಿಯರಿಂಗ್ (Engineering) ಎನ್ನುವುದನ್ನು ದಾಖಲಿಸಬೇಕು. ಆಗ ವೈದ್ಯಕೀಯ ಸೀಟು ಸಿಗದಿದ್ದಾಗ ನಂತರದ ಆದ್ಯತೆಯಾದ ಎಂಜಿನಿಯರಿಂಗ್‌ನಲ್ಲಿ ಸೀಟು ಹಂಚಿಕೆ ಆಗುತ್ತದೆ. ಇದೇ ರೀತಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಎಷ್ಟು ಕೋರ್ಸ್‌ಗಳು ಇವೆಯೋ ಅಷ್ಟೂ ಕೋರ್ಸ್‌ಗಳಿಗೆ ಆದ್ಯತೆಯನುಸಾರ ತನ್ನ ಆಯ್ಕೆಯನ್ನು ನಮೂದಿಸುವ ಮೂಲಕ ಸೀಟು ಪಡೆಯಬಹುದು.

    ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಆಯ್ಕೆಯ ನಮೂದಿನ ಆಧಾರದ ಮೇಲೆ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯುತ್ತದೆ. ಕೆಲ ಅಭ್ಯರ್ಥಿಗಳಿಗೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಎರಡೂ ಕೋರ್ಸ್‌ಗಳಲ್ಲಿ ಸೀಟು ದೊರೆಯುವ ಸಾಧ್ಯತೆ ಇರುತ್ತದೆ. ಅಂತಹವರು ಚಾಯ್ಸ್ ಎಂಟ್ರಿ ಸ್ಕ್ರೀನ್‌ನಲ್ಲಿ ವೈದ್ಯಕೀಯ ಅಥವಾ ಎಂಜಿನಿಯರಿಂಗ್ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಚಲನ್ ಮೂಲಕ ಶುಲ್ಕ ಪಾವತಿಸಿ ಅಡ್ಮಿಷನ್ ಆರ್ಡರ್ ಅನ್ನು ಆನ್‌ಲೈನ್ ಮೂಲಕ ಪಡೆದು ಸಂಬಂಧಪಟ್ಟ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ಬಳಿಕ ಅದನ್ನು ಕಾಲೇಜಿನ ಪೋರ್ಟಲ್‌ನಲ್ಲಿ ತಪ್ಪದೇ ಅಪ್‌ಡೇಟ್ ಮಾಡಿಸಬೇಕು. ಒಂದು ವೇಳೆ ಹಾಗೆ ಮಾಡದಿದ್ದರೆ ಸದರಿ ಸೀಟು ಖಾಲಿ ಇದೆ ಎಂದು ಭಾವಿಸಿ ಅದನ್ನು ಮುಂದಿನ ಸುತ್ತಿನ ಹಂಚಿಕೆಗೂ ಬಳಸಿಕೊಳ್ಳುವ ಸಾಧ್ಯತೆಯಿರುತ್ತದೆ.

    ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಅಭ್ಯರ್ಥಿ ನಮೂದಿಸಿರುವ ಆಯ್ಕೆಯ ಪ್ರಕಾರ ಯಾವುದಾದರೊಂದು ಕೋರ್ಸ್‌ನಲ್ಲಿ (ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ ಇತ್ಯಾದಿ) ಸೀಟು ಪಡೆಯಬೇಕು. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರ ಕಡ್ಡಾಯವಾಗಿ ತಮಗೆ ಹಂಚಿಕೆಯಾದ ಸೀಟಿಗೆ ಶುಲ್ಕ ಪಾವತಿಸಿ ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಸದರಿ ಸೀಟುಗಳನ್ನು ದಂಡದ ಮೊತ್ತ ಪಾವತಿಸಿ ರದ್ದುಪಡಿಸಬೇಕು. ಎರಡನೇ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಲು ಅರ್ಹತೆ ಇರುವುದಿಲ್ಲ. ಆದರೆ ಎರಡನೇ ಸುತ್ತಿನಲ್ಲಿ ದಂತ ವೈದ್ಯಕೀಯ ಸೀಟು ದೊರೆತ ಅಭ್ಯರ್ಥಿಗಳು ಸೀಟನ್ನು ರದ್ದುಪಡಿಸದೇ ವೈದ್ಯಕೀಯ ಕೋರ್ಸ್‌ನ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

    ಎಂಜಿನಿಯರಿಂಗ್ ಸೀಟುಗಳಿಗೆ ಮೂರನೇ ಸುತ್ತಿನವರೆಗೂ ಭಾಗವಹಿಸಬಹುದು. ಆದರೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಮೂರನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಚಾಯ್ಸ್-3 ಕೊಟ್ಟಿರುವ ಅಭ್ಯರ್ಥಿಗಳು ಹಾಗೂ ಯಾವುದೇ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳ ಮೊದಲೆರಡು ಸುತ್ತಿನಲ್ಲಿ ನಮೂದಿಸಿದ್ದ ಆಯ್ಕೆಗಳನ್ನು ಡಿಲೀಟ್ ಮಾಡಲಾಗಿರುತ್ತದೆ. ಅಭ್ಯರ್ಥಿಯು ಮೂರನೇ ಸುತ್ತಿಗೆ ಹೊಸದಾಗಿ ಆಯ್ಕೆಯನ್ನು ನಮೂದಿಸಬೇಕು. ಮೂರನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟನ್ನು ರದ್ದುಪಡಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳು ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಎಚ್ಚರಿಕೆಯಿಂದಲೇ ಮೂರನೇ ಸುತ್ತಿನ ಆಯ್ಕೆಯನ್ನು ನಮೂದಿಸಬೇಕು.

    ಮಾಪ್‌ಅಪ್ ಸುತ್ತು:
    ಎರಡನೇ ಸುತ್ತಿನಲ್ಲಿ ಎಂಜಿನಿಯರಿಂಗ್, ನರ್ಸಿಂಗ್, ಆರ್ಕಿಟೆಕ್ಚರ್, ಪಶುವೈದ್ಯಕೀಯ, ಕೃಷಿ ಸೀಟು ದೊರೆತ ಅಭ್ಯರ್ಥಿಗಳು ದಂಡ ಪಾವತಿಸಿ, ತಮ್ಮ ಸೀಟನ್ನು ರದ್ದುಪಡಿಸಿದ ನಂತರವೇ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ನ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಬಹದು. ಅದೇ ರೀತಿ ಎರಡನೇ ಸುತ್ತಿನಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳು ಹಂಚಿಕೆಯಾದ ಅಭ್ಯರ್ಥಿಗಳು ಸದರಿ ಸೀಟುಗಳನ್ನು ದಂಡ ಪಾವತಿಸಿ ರದ್ದುಪಡಿಸಿದ ನಂತರ ಎಂಜಿನಿಯರಿಂಗ್ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಬಹುದು. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ – ಸೈಬರ್ ಕೇಂದ್ರಗಳಿಗೆ ಬೀಗ ಜಡಿದ ಅಧಿಕಾರಿಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಮ್ಮ, ಅಪ್ಪ ನನ್ನನ್ನು ಕ್ಷಮಿಸಿ ಅಂತಾ ಬರೆದಿಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ಅಮ್ಮ, ಅಪ್ಪ ನನ್ನನ್ನು ಕ್ಷಮಿಸಿ ಅಂತಾ ಬರೆದಿಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ಬೆಂಗಳೂರು: ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ಎಂದು ಡೆತ್‍ನೋಟ್ ಬರೆದಿಟ್ಟು ಮೆಕ್ಯಾನಿಕಲ್ ಎಂಜಿನಿಯರಿಂಗ್ (Mechanical Engineering Student) ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ತೇಜಸ್ (22) ಆತ್ಮಹತ್ಯೆಗೆ ಶರಣಾದವ. ಯಲಹಂಕದ (Yalahanka) ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದು, ಕಾಲೇಜಿಗೆ ಟಾಪರ್ ಆಗಿದ್ದ.

    ತೇಜಸ್ ತನ್ನ ಸ್ನೇಹಿತ ಮಹೇಶ್‍ಗಾಗಿ ಚೈನಿಸ್ ಲೋನ್ ಆಪ್ (Chinees Loan App) ಮೂಲಕ ಸಾಲ ಪಡೆದಿದ್ದನು. ಸ್ನೇಹಿತ ಮಹೇಶ್ ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದನು. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ನೀಡಿದ್ದ ಲೋನ್ ಕಂಪನಿಗಳು ವಿಪರೀತ ಟಾರ್ಚರ್ ಕೊಡುತ್ತಿದ್ದವು. ಈ ಟಾರ್ಚರ್ ತಾಳಲಾರದೆ ಮಂಗಳವಾರ ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಡಬಲ್ ಮರ್ಡರ್ ಬಳಿಕ ಹೋಟೆಲ್ ರೂಂನಲ್ಲಿ ತಣ್ಣಗೆ ಎಣ್ಣೆ ಪಾರ್ಟಿ – ಫೆಲಿಕ್ಸ್ ಸೇರಿ ಮೂವರು ಲಾಕ್

    ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕನ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಹೆಚ್‍ಎಂಟಿ ಕ್ವಾಟ್ರಸ್ ನಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.

    ಡೆತ್‍ನೋಟ್‍ನಲ್ಲೇನಿದೆ..?: ಅಮ್ಮ ಅಪ್ಪ ನನ್ನನ್ನು ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ. ನಾನು ಮಾಡಿರುವ ಸಾಲ ತೀರಿಸಲು ಆಗೋದಿಲ್ಲ ಅದಕ್ಕಾಗಿ ಇದು ನನ್ನ ಕೊನೆಯ ತೀರ್ಮಾನ. ಥ್ಯಾಂಕ್ಸ್ ಗುಡ್ ಬಾಯ್ ಎಂದು ತೇಜಸ್ ಬರೆದುಕೊಂಡಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 18ರಿಂದ 21ರವರೆಗೆ ಹೊರನಾಡು, ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳ ಸಿಇಟಿ ದಾಖಲಾತಿಗಳ ಪರಿಶೀಲನೆ: ಕೆಇಎ

    18ರಿಂದ 21ರವರೆಗೆ ಹೊರನಾಡು, ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳ ಸಿಇಟಿ ದಾಖಲಾತಿಗಳ ಪರಿಶೀಲನೆ: ಕೆಇಎ

    ಬೆಂಗಳೂರು : ಎಂಜಿನಿಯರಿಂಗ್ ಪ್ರವೇಶಾತಿ ಬಯಸಿ, ‘ಬಿ, ಸಿ, ಡಿ, ಇ, ಎಫ್, ಜಿ, ಎಚ್, ಐ, ಜೆ, ಕೆ, ಎಲ್, ಎಂ, ಎನ್ ಮತ್ತು ಓ’ ಅರ್ಹತಾ ಕಂಡಿಕೆಗಳನ್ನು (ಎಲಿಜಿಬಿಲಿಟಿ ಕ್ಲಾಸಸ್- ಉದಾಹರಣೆಗೆ ಹೊರನಾಡು ಕನ್ನಡಿಗರು, ರಾಜ್ಯದ ಸೈನಿಕರು, ರಕ್ಷಣಾ ಸಿಬ್ಬಂದಿ ಮಕ್ಕಳು ಇತ್ಯಾದಿ) ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆಯು ಜುಲೈ 18ರಿಂದ 21ರವರೆಗೆ ಬೆಂಗಳೂರಿನ (Bengaluru) ಮಲ್ಲೇಶ್ವರದಲ್ಲಿರುವ (Malleshwaram) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

    ಈ ಬಗ್ಗೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಮೇಲ್ಕಂಡ ನಾಲ್ಕೂ ದಿನ ಬೆಳಿಗ್ಗೆ 9:30ರಿಂದ ದಾಖಲಾತಿಗಳ ಪರಿಶೀಲನೆ ಆರಂಭವಾಗಲಿದೆ. ಯಾವ್ಯಾವ ರ‍್ಯಾಂಕ್ ಪಡೆದಿರುವ ಅಭ್ಯರ್ಥಿಗಳು ಯಾವ ದಿನದಂದು ಈ ಪ್ರಕ್ರಿಯೆಗೆ ಮೂಲದಾಖಲಾತಿಗಳು ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು ಎನ್ನುವುದನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಇದರಂತೆ ಅಭ್ಯರ್ಥಿಗಳು ಆಗಮಿಸಬೇಕು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಿಗದಿಗಿಂತ ಚುನಾವಣೆಯಲ್ಲಿ ಅಧಿಕ ವೆಚ್ಚ – ಇಬ್ಬರೂ ಬಿಜೆಪಿ ನಾಯಕರಿಗೆ ನೋಟಿಸ್

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಜಾಲತಾಣ http://kea.kar.nic.in ನೋಡಬಹುದು.

    ಇನ್ನು ಆರ್ಕಿಟೆಕ್ಚರ್ ಕೋರ್ಸಿಗೆ ಪ್ರವೇಶಾತಿ ಬಯಸಿ, ತಮ್ಮ ಅರ್ಜಿಯಲ್ಲಿ ಇದುವರೆಗೂ ನಾಟಾ- 1 ಅಥವಾ ನಾಟಾ-2 ಪರೀಕ್ಷೆಗಳಲ್ಲಿ ಗಳಿಸಿರುವ ಅಂಕಗಳನ್ನು ನಮೂದಿಸದೆ ಇರುವ ಅಭ್ಯರ್ಥಿಗಳು ನಿಯಮಾನುಸಾರ ರ‍್ಯಾಂಕಿಂಗ್ ಪಡೆಯಲು ಅನುಕೂಲವಾಗಲೆಂಬ ಹಿನ್ನೆಲೆಯಲ್ಲಿ, ಜುಲೈ 5ರ ಬೆಳಿಗ್ಗೆ 11 ಗಂಟೆಯವರೆಗೂ ಪ್ರಾಧಿಕಾರವು ಮತ್ತೊಂದು ಅವಕಾಶ ಕಲ್ಪಿಸಿದೆ ಎಂದು ಕೆಇಎ ತಿಳಿಸಿದೆ. ಇದನ್ನೂ ಓದಿ: ಸಿಎಂ ಕಚೇರಿಯಲ್ಲಿ ಕೆಲಸ ಆಗಬೇಕಾದ್ರೆ 30 ಲಕ್ಷ ಲಂಚ ಕೊಡಬೇಕು: ಕುಮಾರಸ್ವಾಮಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • CET Results: ಎಂಜಿನಿಯರಿಂಗ್‌ನಲ್ಲಿ ವಿಘ್ನೇಶ್‌, BNYS ನಲ್ಲಿ ಪ್ರತೀಕ್ಷಾ ಫಸ್ಟ್‌ – ಟಾಪ್‌ ರ‍್ಯಾಂಕ್‌ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ

    CET Results: ಎಂಜಿನಿಯರಿಂಗ್‌ನಲ್ಲಿ ವಿಘ್ನೇಶ್‌, BNYS ನಲ್ಲಿ ಪ್ರತೀಕ್ಷಾ ಫಸ್ಟ್‌ – ಟಾಪ್‌ ರ‍್ಯಾಂಕ್‌ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ

    ಬೆಂಗಳೂರು: ಸಿಇಟಿ ಪರೀಕ್ಷೆಯ (CET Exam) ಫಲಿತಾಂಶ ಪ್ರಕಟಗೊಂಡಿದ್ದು ಎಂಜಿನಿಯರಿಂಗ್‌ (Engineering) ವಿಭಾಗದಲ್ಲಿ ಬೆಂಗಳೂರಿನ ಮಲ್ಲಸಂದ್ರದ ಶ್ರೀ ಕುಮಾರನ್ಸ್‌ ಕಾಲೇಜಿನ ವಿಘ್ನೇಶ್‌ ನಟರಾಜ್‌ ಕುಮಾರ್‌ ಪ್ರಥಮ ರ‍್ಯಾಂಕ್‌ ಪಡೆದರೆ ಬೆಂಗಳೂರಿನ ಆರ್‌ವಿ ಕಾಲೇಜಿನ ಅರುಣ್‌ ಕೃಷ್ಣಮೂರ್ತಿ ದ್ವಿತೀಯ ರ‍್ಯಾಂಕ್‌ ಪಡೆದಿದ್ದಾರೆ.

    ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ಫಲಿತಾಂಶ ಪ್ರಕಟ ಮಾಡಿದರು. ಈ ವೇಳೆ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ಉಪಸ್ಥಿತರಿದ್ದರು.

    ಒಟ್ಟಾರೆ 2,61,610 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಕೆ ಮಾಡಿದ್ದರು ಈ ಪೈಕಿ 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ಪರೀಕ್ಷೆ ಬರೆದವರ ಪೈಕಿ ಎಂಜಿನಿಯರಿಂಗ್ ಕೋರ್ಸ್ 203381 ವಿದ್ಯಾರ್ಥಿಗಳು ರ‍್ಯಾಂಕ್‌ ಪಡೆದಿದ್ದಾರೆ. ಕೃಷಿ ವಿಜ್ಞಾನ ಕೋರ್ಸ್ 164187 ವಿದ್ಯಾರ್ಥಿಗಳಿಗೆ ರ‍್ಯಾಂಕ್‌ ನೀಡಲಾಗಿದೆ. ಪಶುಸಂಗೋಪನೆ ಕೋರ್ಸ್ 1,66,756 ರ‍್ಯಾಂಕ್‌, ಯೋಗ, ನ್ಯಾಚುರೋಪತಿ ಕೋರ್ಸ್ 1,66,746 ರ‍್ಯಾಂಕ್‌, ಬಿ ಫಾರ್ಮ್ ಕೋರ್ಸ್ 2,06,191 ರ‍್ಯಾಂಕ್‌, ಫಾರ್ಮ್ ಡಿ ಕೋರ್ಸ್ ನಲ್ಲಿ 2,06,340 ವಿದ್ಯಾರ್ಥಿಗಳು ರ‍್ಯಾಂಕ್‌ಪಡೆದಿದ್ದಾರೆ. ನರ್ಸಿಂಗ್ ಕೋರ್ಸ್‌ನಲ್ಲಿ 1,66,808 ವಿದ್ಯಾರ್ಥಿಗಳಿಗೆ ರ‍್ಯಾಂಕ್‌ ನೀಡಲಾಗಿದೆ.

    ಈ ಬಾರಿ ಗಣಿತ ಮತ್ತು ಭೌತಶಾಸ್ತ್ರ ವಿಷಯಕ್ಕೆ ಒಂದೊಂದು ಗ್ರೇಸ್ ಅಂಕ ನೀಡಲಾಗಿದೆ. ಒಂದು ವಾರದಲ್ಲಿ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿಯಲಿದ್ದು, ಶೀಘ್ರವಾಗಿ ಸೀಟು ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿ, ಸೀಟು ಹಂಚಿಕೆ ಪ್ರಕ್ರಿಯೆ ಶುರು ಮಾಡುವುದಾಗಿ ಸಚಿವರು ತಿಳಿಸಿದರು.

    ವಿದ್ಯಾರ್ಥಿಗಳು ಅರ್ಜಿ ತುಂಬಲು ಸಹಾಯವಾಗಲು ವಿಶೇಷ ಆಪ್ ತರುವುದಾಗಿ ಸಚಿವರು ತಿಳಿಸಿದ್ದಾರೆ. ಕಳೆದ ವರ್ಷದ ಶುಲ್ಕಕ್ಕೆ ಈ ಬಾರಿ 10% ಶುಲ್ಕ ಹೆಚ್ಚಳಕ್ಕೆ ಕಳೆದ ಸರ್ಕಾರ ಅನುಮತಿ ನೀಡಿದೆ.ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.

    ಸಿಇಟಿ ರಾಂಕ್ ನಲ್ಲಿ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳು ಸಿಂಹಪಾಲು ಪಡೆದಿದ್ದಾರೆ. ಎಂಜಿನಿಯರಿಂಗ್ ವಿಭಾಗದಲ್ಲಿ ಟಾಪ್ 10 ರಲ್ಲಿ 8 ರ‍್ಯಾಂಕ್‌ ಬೆಂಗಳೂರಿನ ಕಾಲೇಜಿನ ವಿದ್ಯಾರ್ಥಿಗಳು ಪಡೆದಿದ್ದಾರೆ.ಯೋಗ, ನ್ಯಾಚುರೋಪತಿಯಲ್ಲಿ 5 ರ‍್ಯಾಂಕ್‌ಬೆಂಗಳೂರು, ಬಿಎಸ್ಸಿ ಕೃಷಿಯಲ್ಲಿ 5 ರ‍್ಯಾಂಕ್‌ ಬೆಂಗಳೂರು, ಪಶು ವೈದ್ಯಕೀಯ ಕೋರ್ಸ್ ನಲ್ಲಿ ಟಾಪ್ 6 ರ‍್ಯಾಂಕ್‌, ಬಿ ಫಾರ್ಮ್ ಕೋರ್ಸ್ ನಲ್ಲಿ 7 ರ‍್ಯಾಂಕ್‌ ಹಾಗೂ ಫಾರ್ಮ್ ಡಿ ಕೋರ್ಸ್ ನಲ್ಲಿ 7 ಮತ್ತು ಬಿಎಸ್ಸಿ ನರ್ಸಿಂಗ್ ನಲ್ಲಿ 6 ರ‍್ಯಾಂಕ್‌ಗಳನ್ನು ಬೆಂಗಳೂರು ವಿದ್ಯಾರ್ಥಿಗಳು ಪಡೆದಿದ್ದಾರೆ.

    ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಮೂಲಕ ಫಲಿತಾಂಶ ವೀಕ್ಷಿಸಬಹುದು.

    ಎಂಜಿನಿಯರಿಂಗ್ ಟಾಪ್ 3 ರ‍್ಯಾಂಕ್‌
    1.ವಿವಿಘ್ನೇಶ್‌ ನಟರಾಜ್‌ ಕುಮಾರ್ (ಶ್ರೀ ಕುಮಾರನ್ಸ್‌, ಮಲ್ಲಸಂದ್ರ)
    2.ಅರ್ಜುನ್ ಕೃಷ್ಣಸ್ವಾಮಿ (ಆರ್.ವಿ ಕಾಲೇಜು, ಜಯನಗರ, ಬೆಂಗಳೂರು)
    3.ಸಮೃದ್ದ ಶೆಟ್ಟಿ (ವಿದ್ಯಾನಿಕೇತನ ಪಿಯು ಕಾಲೇಜು, ಹುಬ್ಬಳ್ಳಿ)

    ಬಿಎನ್‍ವೈಎಸ್ ಟಾಪ್ 3 ರ‍್ಯಾಂಕ್‌
    1. ಪ್ರತೀಕ್ಷಾ. ಆರ್ ( ಶ್ರೀ ಕುಮಾರನ್ಸ್‌, ಪದ್ಮನಾಭನಗರ, ಬೆಂಗಳೂರು)
    2. ಭೈರೇಶ್, ಎಸ್‍ಎಚ್ (ಎಕ್ಸ್‌ಪರ್ಟ್‌ ಕಾಲೇಜು, ಮಂಗಳೂರು)
    3. ಶ್ರೀಜಾನ್. ಎಂ.ಎಚ್.( ಬೇಸ್ ಪಿಯು ಕಾಲೇಜು, ಹುಬ್ಬಳ್ಳಿ

    ಬಿಎಸ್‍ಸಿ ಕೃಷಿ ಟಾಪ್ 3 ರ‍್ಯಾಂಕ್‌
    1. ಭೈರೇಶ್. ಎಸ್‍ಎಚ್(ಎಕ್ಸ್‌ಪರ್ಟ್‌ ಕಾಲೇಜು, ಮಂಗಳೂರು)
    2. ಅನುರಾಗ್ ರಂಜನ್( ಪ್ರಮಾಣ ಕಾಲೇಜು, ರಾಯಚೂರು)
    3. ಕಾರ್ತಿಕ್ ಮನೋಹರ್(ಲೇಡಿ ಅನುಸೂಯ ಅಕಾಡೆಮಿ, ರಾಜಸ್ಥಾನ)

     

    ಬಿವಿಎಸ್‍ಸಿ ಪಶು ವಿಜ್ಞಾನ ಟಾಪ್ 3 ರ‍್ಯಾಂಕ್‌
    1. ಮಾಳವಿಕ ಕಪೂರ್ (ಮಹೇಶ್ ಪಿಯು ಕಾಲೇಜ್, ಚಾಮರಾಜಪೇಟೆ, ಬೆಂಗಳೂರು)
    2. ಪ್ರತೀಕ್ಷಾ( ಶ್ರೀ ಕುಮಾರನ್ಸ್‌, ಪದ್ಮನಾಭನಗರ, ಬೆಂಗಳೂರು)
    3. ಚಂದನ್ ಗೌಡ(ಮಹೇಶ್ ಪಿಯು ಕಾಲೇಜ್, ಚಾಮರಾಜಪೇಟೆ, ಬೆಂಗಳೂರು)

    ಬಿ ಫಾರ್ಮಾ ಟಾಪ್ 3 ರ‍್ಯಾಂಕ್‌
    1. ಪ್ರತೀಕ್ಷಾ (ಶ್ರೀ ಕುಮಾರನ್ಸ್‌, ಪದ್ಮನಾಭನಗರ, ಬೆಂಗಳೂರು)
    2. ಮಾಳವಿಕ ಕಪೂರ್ (ಮಹೇಶ್‌ ಪಿಯು ಕಾಲೇಜ್‌, ಚಾಮರಾಜಪೇಟೆ, ಬೆಂಗಳೂರು)
    3. ಮಾಧವ ಸೂರ್ಯ( ನಾರಾಯಣ ಇ ಟೆಕ್ನೋ ಸ್ಕೂಲ್‌, ಮಾರತ್‌ಹಳ್ಳಿ, ಬೆಂಗಳೂರು)

    ಬಿಎಸ್‍ಸಿ ನರ್ಸಿಂಗ್‌ ಟಾಪ್ 3 ರ‍್ಯಾಂಕ್‌
    1.ಮಾಳವಿಕ ಕಪೂರ್ (ಮಹೇಶ್‌ ಪಿಯು ಕಾಲೇಜ್‌, ಚಾಮರಾಜಪೇಟೆ, ಬೆಂಗಳೂರು)
    2. ಪ್ರತೀಕ್ಷಾ (ಶ್ರೀ ಕುಮಾರನ್ಸ್‌, ಪದ್ಮನಾಭನಗರ, ಬೆಂಗಳೂರು)
    3.ಚಂದನ್ ಗೌಡ. (ಮಹೇಶ್ ಪಿಯು ಕಾಲೇಜ್, ಚಾಮರಾಜಪೇಟೆ, ಬೆಂಗಳೂರು)

     

     

  • ಎಂಜಿನಿಯರಿಂಗ್ ಕಾಲೇಜಿನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

    ಎಂಜಿನಿಯರಿಂಗ್ ಕಾಲೇಜಿನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

    ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಪ್ರೆಸಿಡೆನ್ಸಿ ಕಾಲೇಜಿನ (Presidency University Bengaluru) ಬಿ.ಟೆಕ್ ವಿದ್ಯಾರ್ಥಿನಿಗೆ (BTech Student) ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಾನುಕುಂಟೆ ಠಾಣಾ (Rajanukunte Police Station) ವ್ಯಾಪ್ತಿಯಲ್ಲಿ ನಡೆದಿದೆ.

    ನೃಪತುಂಗ ರಸ್ತೆಯಲ್ಲಿರುವ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಇ ವಿದ್ಯಾರ್ಥಿ ಪವನ್ ಕಲ್ಯಾಣ್ ಕೊಲೆ ಆರೋಪಿ. ಪ್ರೆಸಿಡೆನ್ಸಿ ಕಾಲೇಜಿನ ಲಯಸ್ಮಿತ (19) ಮೃತ ಯುವತಿ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದ್ರೆ ಪ್ರೀತಿ ವಿಚಾರಕ್ಕೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕರುವಿನ ಮೇಲೆ ಅನೈಸರ್ಗಿಕ ಲೈಂಗಿಕ ಕ್ರಿಯೆ- ಯುವಕ ಅರೆಸ್ಟ್

    ರಾಜಾನುಕುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿ, ಗಾಯಾಳು ವಿದ್ಯಾರ್ಥಿಯನ್ನು ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ (Bengaluru Rural) ಎಸ್ಪಿ ಸಹ ಭೇಟಿ ನೀಡಿ ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾ ಬೀಚ್‌ನಲ್ಲಿ ಭೀಕರ ಹೆಲಿಕಾಪ್ಟರ್ ದುರಂತ – ನಾಲ್ವರು ಸಾವು, ಮೂವರಿಗೆ ಗಾಯ

    CRIME 2

    19 ವರ್ಷದ ಲಯಸ್ಮಿತ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದಳು. ಇಂದು ಅಲ್ಲಿಗೆ ಬಂದಿದ್ದ ಸ್ಪರ್ಶ್ ಕ್ಲಾಸ್ ರೂಮಿನಲ್ಲಿದ್ದ ಲಯಸ್ಮಿತಾಗೆ ಹೊರಗೆ ಬರಲು ಹೇಳಿದ್ದಾನೆ. ಆಕೆ ಬಂದ ಕೂಡಲೇ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಸ್ಥಳಕ್ಕಾಗಿಮಿಸಿರುವ ಪೊಲೀಸರು ಸ್ಪರ್ಶ್ನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪವನ್ ಕಲ್ಯಾಣ್ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.

    ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊಲೆ ಆರೋಪಿ ಪವನ್ ಕಲ್ಯಾಣ್, ನೃಪತುಂಗ ರಸ್ತೆಯಲ್ಲಿರೋ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಇ ಪದವಿ ಓದುತ್ತಿದ್ದ.

    Live Tv
    [brid partner=56869869 player=32851 video=960834 autoplay=true]