Tag: ಎಂಜಿನಿಯರಿಂಗ್ ವಿದ್ಯಾರ್ಥಿನಿ

  • ಹಾವೇರಿ| ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ಹಾವೇರಿ| ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    – ಕಸ ತುಂಬುವ ವಾಹನದಲ್ಲಿ ಮೃತದೇಹ ಸಾಗಾಟ

    ಹಾವೇರಿ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ (Engineering Student) ಕೆರೆಗೆ ಹಾರಿ  ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ (Haveri) ತಾಲೂಕಿನ ದೇವಗಿರಿ (Devagiri) ಗ್ರಾಮದ ಬಳಿ ನಡೆದಿದೆ.

    ಉಲ್ಲಾಸ್ ಮುರಳಿ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಉಲ್ಲಾಸ್ ಎಂಜಿನಿಯರಿಂಗ್ 4ನೇ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಒಂದು ವಿಷಯದಲ್ಲಿ ಫೇಲ್ ಆಗಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗ್ರಾಮಸ್ಥರು ಹಾಗೂ ಪೊಲೀಸರು ಮೃತದೇಹವನ್ನ ಹೊರಗೆ ತೆಗೆಯುವ ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಆಯ್ಕೆ ಪ್ರಶ್ನಿಸಿ ಅರ್ಜಿ – ಮಾ.25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

    ಮೃತದೇಹವನ್ನ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಪೊಲೀಸರು ಮಾನವೀಯತೆ ಮರೆತು ಕಸ ತುಂಬುವ ವಾಹನದಲ್ಲಿ ಸಾಗಾಟ ಮಾಡಿದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಸ ತುಂಬುವ ವಾಹನದಲ್ಲಿ ಕಾಲೇಜು ವಿದ್ಯಾರ್ಥಿಯ ಶವ ಸಾಗಿಸಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಸ್ವ ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ: ಹೆಚ್.ಎಂ.ರೇವಣ್ಣ

    ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಆತ್ಮಹತ್ಯೆಗೆ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಮಗೂ ವಯಸ್ಸಾಗಿದೆ, ಅಧ್ಯಕ್ಷರ ಅವಧಿ ಮುಗಿಯೋದ್ರಲ್ಲಿ ದಲಿತ ಸಿಎಂ ಮಾಡಿ – ಖರ್ಗೆಗೆ ಕಾರಜೋಳ ಸವಾಲ್

  • ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ – ಬಸ್‌ಗೆ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

    ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ – ಬಸ್‌ಗೆ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

    ಬೆಂಗಳೂರು: ಕಿಲ್ಲರ್ ಬಿಎಂಟಿಸಿ (BMTC) ಬಸ್‌ಗೆ ಎಂಜಿನಿಯರಿಂಗ್ ವಿದ್ಯಾರ್ಥಿ (Engineering Student) ಬಲಿಯಾದ ಘಟನೆ ಯಶವಂತಪುರದ (Yeswanthpur) ಗೋವರ್ಧನ ಬಳಿ ನಡೆದಿದೆ.

    ಗಂಗಾಧರ್ (21) ಮೃತ ವಿದ್ಯಾರ್ಥಿ. ಗಾರೆಪ್ಪನ ಪಾಳ್ಯ ರಸ್ತೆ ಮಾರ್ಗವಾಗಿ ಹೂವಿನ ಮಾರ್ಕೆಟ್ ಸಮೀಪ ಘಟನೆ ನಡೆದಿದೆ. ಹೆಚ್‌ಎಎಲ್‌ಗೆ (HAL) ಇಂಟರ್ನಿಶಿಪ್ ಸರ್ಟಿಫಿಕೇಟ್ ತರಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಂಗಾಧರ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ, ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ (Accident) ಸಂಭವಿಸಿದೆ. ಇದನ್ನೂ ಓದಿ: ಪ್ರಿಯಕರನಿಂದ ವಂಚನೆ, ಕೊಲೆ ಬೆದರಿಕೆ ಆರೋಪ- ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

    ಈ ವೇಳೆ ಬಸ್‌ನ ಚಕ್ರ ಗಂಗಾಧರ್ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಬಸ್ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದು, ಬಸ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮೃತ ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದ ಸ್ಥಳಕ್ಕೆ ಯಶವಂತಪುರ ಸಂಚಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ಎಸಗಿದ್ದ ಬಿಎಂಟಿಸಿ ಬಸ್ ಚಾಲಕನಿಗೆ ಠಾಣೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಂದ ಕಿರುಕುಳ – ವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 20 ವರ್ಷದ ವಿದ್ಯಾರ್ಥಿ ಮ್ಯಾರಥಾನ್‌ನಲ್ಲಿ ಓಡಿದ ಬಳಿಕ ಹೃದಯಾಘಾತದಿಂದ ಸಾವು

    20 ವರ್ಷದ ವಿದ್ಯಾರ್ಥಿ ಮ್ಯಾರಥಾನ್‌ನಲ್ಲಿ ಓಡಿದ ಬಳಿಕ ಹೃದಯಾಘಾತದಿಂದ ಸಾವು

    ಚೆನ್ನೈ: ಮ್ಯಾರಥಾನ್‌ನಲ್ಲಿ (Marathon) ಭಾಗವಹಿಸಿದ 20 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಆಘಾತಕಾರಿ ಘಟನೆ ಭಾನುವಾರ ತಮಿಳುನಾಡಿನ (Tamil Nadu) ಮಧುರೈನಲ್ಲಿ (Madurai) ನಡೆದಿದೆ.

    ಮೃತನನ್ನು ಕಲ್ಲಕುರಿಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಭಾನುವಾರ ನಡೆದ ಉತಿರಂ 2023 ರಕ್ತದಾನ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ. ಈ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಸುಬ್ರಮಣಿಯನ್ ಹಾಗೂ ವಾಣಿಜ್ಯ ತೆರಿಗೆ ಮತ್ತು ನೋಂದಣಿ ಸಚಿವ ಪಿ ಮೂರ್ತಿ ಅವರು ಚಾಲನೆ ನೀಡಿದ್ದರು.

    ಮುಂಜಾನೆ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಬಳಿಕ ವಿದ್ಯಾರ್ಥಿ 1 ಗಂಟೆಗಳ ಕಾಲ ಆರೋಗ್ಯವಾಗಿಯೇ ಇದ್ದಂತೆ ಕಾಣಿಸುತ್ತಿದ್ದ ಎಂದು ಆತನ ಸಹಪಾಠಿಗಳು ತಿಳಿಸಿದ್ದಾರೆ. ಬಳಿಕ ಆತ ಮೂರ್ಛೆ ಹೋಗಿದ್ದು, ತಕ್ಷಣ ಆತನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಬಾಡಿಗೆ ಮನೆಯಲ್ಲಿದ್ದುಕೊಂಡೇ ಡ್ರಗ್ಸ್ ಸಪ್ಲೈ ಮಾಡ್ತಿದ್ದ ನೈಜೀರಿಯನ್ ಪ್ರಜೆ ಅರೆಸ್ಟ್!

    ಆಸ್ಪತ್ರೆಯ ಅಧಿಕಾರಿಗಳು ವಿದ್ಯಾರ್ಥಿಯನ್ನು 8:45ರ ಸುಮಾರಿಗೆ ತುರ್ತು ವಿಭಾಗಕ್ಕೆ ದಾಖಲಿಸಿದ್ದಾರೆ. ಅಲ್ಲಿ ಆತನಿಗೆ ಕೃತಕ ಉಸಿರಾಟದ ಬೆಂಬಲ ನೀಡಲಾಗಿದೆ. ಆದರೆ ಇದಾದ ಕೆಲವೇ ಗಂಟೆಗಳಲ್ಲಿ ಬೆಳಗ್ಗೆ 10:10ರ ಸುಮಾರಿಗೆ ಆತ ಹೃದಯ ಸ್ಥಂಭನಕ್ಕೆ ಒಳಗಾಗಿದ್ದಾನೆ. ಆತನನ್ನು ವೈದ್ಯರು ಬದುಕಿಸಲು ಪ್ರಯತ್ನಿಸಿದರೂ ಬೆಳಗ್ಗೆ 10:45ಕ್ಕೆ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ದಿನೇಶ್ ಕುಮಾರ್ ಮಧುರೈನ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದು, ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕುಸಿದು ಬಿದ್ದ ಜಿಮ್ ಛಾವಣಿ- 10 ಮಂದಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಲೇಜು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

    ಕಾಲೇಜು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

    ಚಿಕ್ಕಬಳ್ಳಾಪುರ: ಕಾಲೇಜು ಹಾಸ್ಟೆಲ್‌ನಲ್ಲಿ (Hostel) ಎಂಜಿನಿಯರಿಂಗ್ (Engineering) ವಿದ್ಯಾರ್ಥಿನಿ (Student) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನಲ್ಲಿ ನಡೆದಿದೆ.

    ಮೂಲತಃ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ಪ್ರೀತಿ(21) ಸಾವನ್ನಪ್ಪಿದ ವಿದ್ಯಾರ್ಥಿನಿ. ಪ್ರೀತಿ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜುವೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಳು. ಮಂಗಳವಾರ ಕಾಲೇಜಿನ ವಸತಿನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರೀತಿ ಪತ್ತೆಯಾಗಿದ್ದು, ಕೂಡಲೇ ಕಾಲೇಜು ಆಡಳಿತ ಮಂಡಳಿ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ಅದಾಗಲೇ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಕಂಠೀರವದಲ್ಲಿ ಅಥ್ಲಿಟ್ ನಿಂದನೆ – ಕೋಚ್, ಪತ್ನಿ ವಿರುದ್ಧ ಎಫ್‌ಐಆರ್

    ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಯ ಕುರಿತು ಕಾಲೇಜು ಆಡಳಿತ ಮಂಡಳಿಯವರು, ವಿದ್ಯಾರ್ಥಿನಿಯ ಸಾವಿಗೆ ಕಾರಣ ತಿಳಿದುಬಂದಿಲ್ಲ ಎನ್ನುತ್ತಿದ್ದಾರೆ. ಇತ್ತ ಮೃತಳ ಪೋಷಕರು, ಏನಾಗಿದೆ ಎಂಬುದು ನಮಗೂ ಗೊತ್ತಿಲ್ಲ. ಕಾಲೇಜಿನವರು ನಿಮ್ಮ ಮಗಳಿಗೆ ತುಂಬಾ ಹುಷಾರಿಲ್ಲ ಬೇಗ ಬನ್ನಿ ಎಂದು ಹೇಳಿದರು. ನಾವು ಬಂದಾದ ಮೇಲೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದರು ಎಂದು ಹೇಳಿದ್ದಾರೆ. ಈ ಕುರಿತು ಮೃತ ವಿದ್ಯಾರ್ಥಿನಿಯ ತಂದೆ ವಿಜಯಪುರ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಹೆಚ್ಚುತ್ತಿರುವ ಅಪಘಾತ ತಪ್ಪಿಸಲು ಎಕ್ಸ್‌ಪ್ರೆಸ್‌ವೇನಲ್ಲಿ Interceptor ಬಳಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರು ಅಪಘಾತ- 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    ಕಾರು ಅಪಘಾತ- 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    ದಿಸ್ಪುರ್: ಸ್ಕಾರ್ಪಿಯೋ ಕಾರ್ (Scorpio SUV) ಹಾಗೂ ಬೊಲೆರೊ ಟ್ರಕ್ (Truck) ನಡುವೆ ನಡೆದ ಅಪಘಾತದಲ್ಲಿ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ (Assam) ಗುವಾಹಟಿಯಲ್ಲಿ (Guwahati) ಸೋಮವಾರ ನಡೆದಿದೆ.

    ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಮಿತಿ ಮೀರಿದ ವೇಗದ ಪರಿಣಾಮದಿಂದಾಗಿ ಈ ಅವಘಡ ಸಂಭವಿಸಿದೆ. ಇದರಿಂದಾಗಿ ಸ್ಥಳದಲ್ಲಿಯೇ 7 ಜನ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಐಡಿ ಪ್ರೂಫ್ ಇಲ್ಲದೆ 2,000 ರೂ. ನೋಟು ವಿನಿಮಯ ವಿರುದ್ಧ ಮನವಿ- ದೆಹಲಿ ಹೈಕೋರ್ಟ್‌ನಿಂದ ಅರ್ಜಿ ವಜಾ

    ಕಾರಿನಲ್ಲಿ 10 ಮಂದಿ ಪ್ರಯಾಣಿಕರಿದ್ದರು. ಅದರಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರೆಲ್ಲ ಅಸ್ಸಾಂನ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದರು. ಅವರೆಲ್ಲರು ಹಾಸ್ಟೆಲ್‍ನಲ್ಲಿದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ ಎಂದು ಅವರು ಟ್ವಿಟ್ಟರ್‌ನಲ್ಲಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ!

  • ಸ್ನಾನಕ್ಕೆಂದು ಹೋದ 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆ

    ಸ್ನಾನಕ್ಕೆಂದು ಹೋದ 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆ

    ಹೈದರಾಬಾದ್: ಅನಕಾಪಲ್ಲಿಯ DIET ಎಂಜಿನಿಯರಿಂಗ್ ಕಾಲೇಜಿನ ಏಳು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆಂಧ್ರಪ್ರದೇಶದ ಪುಡಿಮಡಕ ಬೀಚ್‍ನಲ್ಲಿ ನಾಪತ್ತೆಯಾಗಿದ್ದಾರೆ.

    ಶುಕ್ರವಾರ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿದ್ದು, ಅವರಲ್ಲಿ ಪವನ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದು, ಮತ್ತೋರ್ವ ತೇಜ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಡೆದಂತಹ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆ: ಮಾಧುಸ್ವಾಮಿ

    ಸ್ನಾನ ಮಾಡಲೆಂದು ಏಳು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಜೋರಾಗಿ ಬಂದ ಅಲೆ ಅವರನ್ನು ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೀಗ ಶನಿವಾರ ರಕ್ಷಣಾ ಅಧಿಕಾರಿಗಳು ಮತ್ತಿಬ್ಬರು ವಿದ್ಯಾರ್ಥಿಗಳ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮೃತರನ್ನು ಜಸ್ವಂತ್ ಕುಮಾರ್ ಮತ್ತು ಪೆಂಟಕೋಟ ಗಣೇಶ್ ಎಂದು ಗುರುತಿಸಲಾಗಿದೆ.

    ಉಳಿದ ಮೂವರು ವಿದ್ಯಾರ್ಥಿಗಳಾದ ಕಂಪಾರ ಜಗದೀಶ್, ಬಯ್ಯಪುನೇನಿ ಸತೀಶ್ ಕುಮಾರ್ ಮತ್ತು ಪುಡಿ ರಾಮಚಂದು ಅವರನ್ನು ಹುಡುಕಲು ಹೆಲಿಕಾಪ್ಟರ್ ಮತ್ತು ಕೋಸ್ಟ್ ಗಾರ್ಡ್ ಬೋಟ್‍ಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್‍ಒ

    ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆನ್‍ಲೈನ್ ಗೇಮಿನಲ್ಲಿ 15 ಲಕ್ಷ ನಷ್ಟ- ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ಆನ್‍ಲೈನ್ ಗೇಮಿನಲ್ಲಿ 15 ಲಕ್ಷ ನಷ್ಟ- ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    – ತಂದೆ ಸಾಲ ತೀರಿಸಲು ಸಿದ್ಧರಿದ್ರೂ ವಿಷ ಸೇವನೆ

    ಹೈದರಾಬಾದ್: ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ಥೋಟಾ ಮಧುಕರ್ (24) ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿ. ಮಧುಕರ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಾಲ್ಕು ದಿನಗಳ ಹಿಂದೆ ನಿಷೇಧಿತ ಆಟದಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಮಧುಕರ್ ವಿಷ ಕುಡಿದಿದ್ದಾನೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧುಕರ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತ ಮಧುಕರ್ ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ ಆಟವಾಡುತ್ತಿದ್ದನು. ಐದು ತಿಂಗಳ ಹಿಂದೆ ಪೋಷಕರು ಮತ್ತು ಕುಟುಂಬದವರು ಗೇಮ್ ಆಡದಂತೆ ಎಚ್ಚರಿಕೆ ನೀಡಿದ್ದರು. ಆದರೂ ಮಧುಕರ್ ಬೆಟ್ಟಿಂಗ್ ಗೇಮ್ ಆಡುತ್ತಿದ್ದನು. ಅಲ್ಲದೇ ಆತ ತನ್ನ ಸ್ನೇಹಿತರಿಂದ ಹಣವನ್ನು ಸಾಲ ಪಡೆದು ಬೆಟ್ಟಿಂಗ್ ಕಟ್ಟಿದ್ದನು. ಇದರಿಂದ ಜೂಲೈ 7 ರಂದು ಮಧುಕರ್ ಬರೋಬ್ಬರಿ 15 ಲಕ್ಷ ಹಣವನ್ನು ಕಳೆದುಕೊಂಡಿದ್ದನು. ಇದರಿಂದ ತುಂಬಾ ಬೇಸರಗೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    ಮಧುಕರ್ ತಂದೆ ಈ ಬಗ್ಗೆ ತಿಳಿದು ಸಾಲವನ್ನು ಮರುಪಾವತಿಸಲು ಸಿದ್ಧವಾಗಿದ್ದರು. ಆದರೂ ಎಂಜಿನಿಯರಿಂಗ್ ವಿದ್ಯಾರ್ಥಿ ವಿಷ ಕುಡಿದಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಸಹೋದರಿಯ ಮೊಬೈಲ್ ಫೋನ್‍ಗೆ ಮೆಸೇಜ್ ಕಳುಹಿಸಿದ್ದನು. ನಂತರ ಪೋಷಕರು ಅವನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮಧುಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಚಿಕಿತ್ಸೆ ಫಲಕಾರಿಯಾಗದೆ ಮಧುಕರ್ ಮೃತಪಟ್ಟಿದ್ದಾನೆ. ಮಧುಕರ್ ತಂದೆ ಶಂಕರ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಕುತ್ತಿಗೆಗೆ ಹಗ್ಗ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ!

    ಕುತ್ತಿಗೆಗೆ ಹಗ್ಗ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ!

    – ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ
    – ಮಗನ ಹೆಸರಲ್ಲಿ ಸ್ಮಾರಕಕ್ಕಾಗಿ ಒತ್ತಾಯ

    ದಾವಣಗೆರೆ: ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಹೊರ ವಲಯದಲ್ಲಿರುವ ಜೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

    ಲಿಖಿತ್ (22)ಸಾವನ್ನಪ್ಪಿದ ಎಂಜಿನಿಯರಿಂಗ್ ವಿದ್ಯಾರ್ಥಿ. ಲಿಖಿತ್ ಜೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ 2ನೇ ಸೆಮಿಸ್ಟರ್ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದನು. ಇದೇ ತಿಂಗಳ 13ರಂದು ಲಿಖಿತ್ ಮೈದಾನದಲ್ಲಿ ಬೈಕಿನಲ್ಲಿ ಹೋಗುವಾಗ ಹಗ್ಗ ಕುತ್ತಿಗೆಗೆ ಸಿಕ್ಕಿ ಹಾಕಿಕೊಂಡು ಮೃತಪಟ್ಟಿದ್ದಾನೆ.

    ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ತಮ್ಮ ಮಗ ಲಿಖಿತ್ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಅಲ್ಲದೆ ಆಡಳಿತ ಮಂಡಳಿಯ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಪೋಷಕರ ಆಕ್ರೋಶ ನೋಡಿ ಆಡಳಿತ ಮಂಡಳಿ ಹಣ ಕೊಡುವುದಾಗಿ ಹೇಳಿದೆ. ಆದರೆ ಇದಕ್ಕೆ ಒಪ್ಪದ ಲಿಖಿತ್ ಪೋಷಕರು, ನಮಗೆ ಹಣ ಬೇಡ ಮಗನ ಹೆಸರಿನಲ್ಲಿ ಕಾಲೇಜಿನ ಒಳಗೆ ಸ್ಮಾರಕ ಭವನ ಕಟ್ಟುವಂತೆ ಪಟ್ಟು ಹಿಡಿದಿದ್ದಾರೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಒಪ್ಪುತ್ತಿಲ್ಲ. ಹಾಗಾಗಿ ಲಿಖಿತ್ ಪೋಷಕರು ಕಾಲೇಜು ಮುಂಭಾಗ ಪ್ರತಿಭಟನೆ ಮಾಡುತ್ತಿದ್ದಾರೆ.

    ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಎಂಜಿನಿಯರಿಂಗ್ ವಿದ್ಯಾರ್ಥಿನಿ ಜೊತೆಗಿನ ಆರೋಪಿ ಫೋಟೋ ವೈರಲ್

    ಎಂಜಿನಿಯರಿಂಗ್ ವಿದ್ಯಾರ್ಥಿನಿ ಜೊತೆಗಿನ ಆರೋಪಿ ಫೋಟೋ ವೈರಲ್

    ರಾಯಚೂರು: ಇಡೀ ದೇಶಾದ್ಯಂತ ಚರ್ಚೆಗೆ ಒಳಗಾಗಿರುವ ರಾಯಚೂರು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆಯುತ್ತಿದೆ. ಈಗ ಮೃತ ವಿದ್ಯಾರ್ಥಿನಿ ಹಾಗೂ ಆರೋಪಿ ಸುದರ್ಶನ್ ಜೊತೆಗಿನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

    ಪಿಯುಸಿಯಲ್ಲಿ ಸಹಪಾಠಿಗಳಾಗಿದ್ದ ವಿದ್ಯಾರ್ಥಿನಿ ಹಾಗೂ ಸುದರ್ಶನ್ ಯಾದವ್ ಒಟ್ಟಾಗಿ ತೆಗೆಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈಗಾಗಲೇ ಸಿಐಡಿ ಅಧಿಕಾರಿಗಳ ಮುಂದೆ ಸುದರ್ಶನ್ ಯಾದವ್ ತಮ್ಮಿಬ್ಬರ ಸ್ನೇಹ ಸಂಬಂಧ ಹಾಗೂ ಲವ್ ಬ್ರೇಕ್ ಅಪ್ ಬಗ್ಗೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ಅಲ್ಲದೇ ನಾಲ್ಕು ತಿಂಗಳ ಹಿಂದೆ ಇಬ್ಬರ ನಡುವೆ ಅಂತರ ಹೆಚ್ಚಾಗಿ ಸ್ವತಃ ವಿದ್ಯಾರ್ಥಿನಿ ತಂದೆಯ ಮುಂದೆಯೇ ರಸ್ತೆಯಲ್ಲೇ ವಿದ್ಯಾರ್ಥಿನಿ ಮೇಲೆ ಕೈಮಾಡಿದ್ದ ಘಟನೆ ಬಗ್ಗೆಯೂ ಆರೋಪಿ ಬಾಯಿಬಿಟ್ಟಿದ್ದಾನೆ.

    ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ವಿದ್ಯಾರ್ಥಿನಿ ಸಾವಿನ ಬಗ್ಗೆ ಮರಣೋತ್ತರ ಪರೀಕ್ಷೆಯಿಂದ ಉತ್ತರ ಸಿಗಲಿದ್ದು, ರಾಯಚೂರಿನಲ್ಲೇ ಬೀಡು ಬಿಟ್ಟಿರುವ ಸಿಐಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

  • ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ: ಪಿಎಸ್‍ಐ, ಪೇದೆ ಅಮಾನತು

    ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ: ಪಿಎಸ್‍ಐ, ಪೇದೆ ಅಮಾನತು

    ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣದ ಸಂಬಂಧ ಠಾಣೆಯ ಪಿಎಸ್‍ಐ ಹಾಗೂ ಪೇದೆಯನ್ನು ಅಮಾನತುಗೊಳಿಸಲಾಗಿದೆ.

    ನಗರದ ಮಹಿಳಾ ಪೊಲೀಸ್ ಠಾಣೆಯ ಪಿಎಸ್‍ಐ ಬಿ.ಬಿ.ಮರಿಯಮ್ ಹಾಗೂ ಸದರ್ ಬಜಾರ್ ಠಾಣೆಯ ಪೇದೆ ಆಂಜನೇಯ ಅಮಾನತುಗೊಂಡಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಆದೇಶ ಹೊರಡಿಸಿದ್ದಾರೆ.

    ವಿದ್ಯಾರ್ಥಿನಿಯ ಪೋಷಕರು ಮಗಳು ನಾಪತ್ತೆಯಾದ ಕುರಿತು ದೂರು ದಾಖಲಿಸಲು ಏಪ್ರಿಲ್ 13ರಂದು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು. ಆದರೆ ಪಿಎಸ್‍ಐ ಬಿ.ಬಿ.ಮರಿಯಮ್ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರು. ಹೀಗಾಗಿ ಅವರನ್ನು ಅಮಾನತುಗೊಳಿಸಲಾಗಿದೆ.

    ಬಂಧಿತ ಆರೋಪಿ ಸುದರ್ಶನ್ ಯಾದವ್‍ನ ಮಾವ, ಸದರ್ ಬಜಾರ್ ಠಾಣೆಯ ಪೇದೆ ಆಂಜನೇಯ ಮೃತಳ ಮೊಬೈಲ್ ಹಾಗೂ ವಾಹನದ ಕೀಯನ್ನು ಪೋಷಕರಿಗೆ ಮುಂಚಿತವಾಗಿಯೇ ಹಿಂತಿರುಗಿಸಿದ್ದ. ಅಷ್ಟೇ ಅಲ್ಲದೇ ಪೇದೆ ಆಂಜನೇಯ ಅವರಿಂದ ಆರೋಪಿಯ ರಕ್ಷಣೆಯಾಗುವ ಸಾಧ್ಯತೆ ಇದೆ ಎಂದು ಮೃತ ವಿದ್ಯಾರ್ಥಿನಿಯ ಪೋಷಕರು ದೂರಿದ್ದರು. ಹೀಗಾಗಿ ಅಮಾನತುಗೊಳಿಸಲಾಗಿದೆ.

    ವಿದ್ಯಾರ್ಥಿನಿಯ ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಏಪ್ರಿಲ್ 16 ರಂದು ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ನೇತಾಜಿ ನಗರ ಪೊಲೀಸ್ ಠಾಣೆ ಅಧಿಕಾರಿಗೆ ಡೆತ್‍ನೋಟ್ ಸಿಕ್ಕಿತ್ತು. ಹೀಗಾಗಿ ಇದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿದ್ದರು. ಬಳಿಕ ಮೃತ ಮಧು ತಾಯಿ ಇದು ಆತ್ಮಹತ್ಯೆಯಲ್ಲ. ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದರು.

    ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿ ಸುದರ್ಶನ್ ಯಾದವ್ ನನ್ನು ಸಿಐಡಿ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಕಾರಾಗೃಹದಿಂದ ನಾಲ್ಕು ದಿನಗಳ ಮಟ್ಟಿಗೆ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಸಿಐಡಿ ಎಸ್.ಪಿ.ಶರಣಪ್ಪ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮಂಗಳವಾರ ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಆರೋಪಿಯ ಸ್ನೇಹಿತರ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ಇಂದು ಆರೋಪಿಯನ್ನ ರಿಮ್ಸ್ ಆಸ್ಪತ್ರೆಯಲ್ಲಿ ಪುನಃ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವಿಚಾರಣೆ ಮುಂದುವರಿಸಿದ್ದಾರೆ.

    ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆ ನ್ಯಾಯಕ್ಕಾಗಿ ರಾಯಚೂರಿನಲ್ಲಿ ಹೋರಾಟಗಳು ನಿರಂತರವಾಗಿ ನಡೆದಿವೆ. ನಗರದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.

    ಯಾವುದೇ ಲೋಪದೋಷಕ್ಕೆ ಅವಕಾಶವಿಲ್ಲ. ತಪ್ಪಿತಸ್ಥರನ್ನ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಅವಶ್ಯಕತೆಯಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬಹುದು, ಹೋರಾಟಕ್ಕೆ ಸರ್ಕಾರ ಸ್ಪಂದಿಸುತ್ತದೆ ಎಂದು ಸಚಿವ ನಾಡಗೌಡ ಪ್ರತಿಕ್ರಿಯಿಸಿದರು.