ಬೆಂಗಳೂರು: ಈ ಸಾಲಿನ ಕೇಂದ್ರ ಬಜೆಟ್ (Union Budjet 2023) ನಲ್ಲಿ ರಾಜ್ಯದ ಬಯಲು ಸೀಮೆಯ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ 5,300 ಕೋಟಿ ಅನುದಾನ ಪ್ರಕಟಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು (MTB Nagaraju) ಧನ್ಯವಾದ ತಿಳಿಸಿದ್ದಾರೆ.
ಭದ್ರಾ ಜಲಾಶಯದ ನೀರನ್ನು ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಕೃಷಿ ಜಮೀನಿಗೆ ನೀರು ಒದಗಿಸುವ ಹಾಗೂ ಕುಡಿಯುವ ನೀರು ಪೂರೈಸುವ ಭದ್ರ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರದ ಈ ನೆರವಿನಿಂದ ಆದಷ್ಟು ಬೇಗ ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.
-ಯುವ ಶಕ್ತಿ ಬಗ್ಗೆ ನನಗೆ ಅಪಾರ ನಂಬಿಕೆ ಇದೆ -6,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ
ಬೆಂಗಳೂರು: ಸುಸ್ಥಿರ ಬೆಳವಣಿಗೆ ಮತ್ತು ಹೂಡಿಕೆಗಳಿಗೆ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ ಹೊಸ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ಸಹಭಾಗಿತ್ವಕ್ಕೆ ಸದಾ ಆಸಕ್ತಿ ತೋರುತ್ತಾ ಬಂದಿದ್ದು, ಭವಿಷ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಬೆಳವಣಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಬೆಂಗಳೂರು ಅರಮನೆಯಲ್ಲಿ ಹಮ್ಮಿಕೊಂಡಿರುವ “ಉದ್ಯಮಿಯಾಗು ಉದ್ಯೋಗ ನೀಡು’ ಹಾಗೂ “ಕೈಗಾರಿಕಾ ಅದಾಲತ್’ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ಪ್ರತಿ ವಲಯದಲ್ಲೂ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಬೆಳವಣಿಗೆ ಆದ್ಯತೆ ನೀಡಬೇಕಾಗಿದ್ದು, ಈ ನಿಟ್ಟಿನಲ್ಲಿ ಹೂಡಿಕೆ ಮಾಡಲು ಕೈಗಾರಿಕೆಗಳಿಗೆ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೂಡಿಕೆ, ಉದ್ಯೋಗ ಮತ್ತು ಆವಿಷ್ಕಾರಕ್ಕೆ ನಮ್ಮ ಸರ್ಕಾರ ಒತ್ತು ನೀಡಲಿದೆ ಎಂದರು. ಇದನ್ನೂ ಓದಿ: ನೀರಜ್ ಚೋಪ್ರಾಗೆ ಕರ್ನಾಟಕ ಸರ್ಕಾರದಿಂದ ಸನ್ಮಾನ
ಯುವ ಶಕ್ತಿ ಬಗ್ಗೆ ನನಗೆ ಅಪಾರ ನಂಬಿಕೆ ಇದೆ. ಉದ್ಯಮ ಸ್ಥಾಪಿಸಿ ಸಹಸ್ರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಸುವ ತಾಕತ್ತು ಇವರಲ್ಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿರುವ ವಿದ್ಯಾರ್ಥಿಗಳೇ ಮುಂದೆ ಉದ್ಯಮಿಗಳಾಗಿ ಇಂಥ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಕೂರುವರು. ಸಣ್ಣ ಮಟ್ಟದಲ್ಲಿ ಉದ್ಯಮ ಸ್ಥಾಪಿಸಿ ಅದನ್ನೇ ದೊಡ್ಡ ಮಟ್ಟಕ್ಕೆ ಕೊಂಡೊಯ್ದಿರುವ ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಉದ್ಯಮಿಗಳ ಸಚಿವ ಎಂಟಿಬಿ ನಾಗಾರಾಜ ಅವರೇ ನಮ್ಮೆಲ್ಲರಿಗೂ ಉತ್ತಮ ಉದಹಾರಣೆ. ಅವರು ನಡೆದು ಬಂದ ಹಾದಿಯೇ ಯುವ ಜನರಿಗೆ ಪಾಠ. ಸಣ್ಣ ಹೆಜ್ಜೆ ಇಡುವ ಮೂಲಕ ದೊಡ್ಡದನ್ನು ಸಾಧಿಸಬಹುದು. ಈ ನಿಟ್ಟಿನಲ್ಲಿ ಸಣ್ಣ ಹೆಜ್ಜೆ ಇಡಲು ಇದು ಆರಂಭದ ಪ್ರಯತ್ನವಾಗಲಿದೆ. ಎಲ್ಲರೂ ಇದರ ಸದುಪಯೋಗಪಡಿಸಿಕೊಂಡರೆ ಸಾರ್ಥಕ ಎಂದು ಅಭಿಪ್ರಾಯಪಟ್ಟರು.
ಯುವಜನರಿಗೆ ನೆರವಾಗುವ ಉದ್ದೇಶದಿಂದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮ ಮತ್ತು ಕೈಗಾರಿಕೆಗಳ ಸಮಸ್ಯೆ ಇತ್ಯರ್ಥಗೊಳಿಸಲು ಕೈಗಾರಿಕಾ ಅದಾಲತ್ ಹಮ್ಮಿಕೊಂಡಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮಗಳಿಂದಾಗಿಯೇ ರಾಜ್ಯ ಇಂದು ದೇಶದಲ್ಲೇ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯ ಎನಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಕ್ಷದ ವರಿಷ್ಠರು ಒಪ್ಪಿದರೆ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುತ್ತೇನೆ: ಬಿ.ವೈ ರಾಘವೇಂದ್ರ
"ಇಡೀ ದೇಶದಲ್ಲೇ ಅತಿಹೆಚ್ಚು ನವೋದ್ಯಮಗಳಿರುವುದು ಕರ್ನಾಟಕದಲ್ಲಿ! ದೇಶದಲ್ಲೇ ಮೊದಲ ಬಾರಿಗೆ ಆರ್ & ಡಿ ನೀತಿ, ಉದ್ಯೋಗ ನೀತಿಗಳನ್ನು ಕರ್ನಾಟಕ ಸರ್ಕಾರ ರೂಪಿಸುತ್ತಿದೆ. ಯುವಜನತೆಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕರ್ನಾಟಕ ಅತ್ಯುತ್ತಮ ರಾಜ್ಯ" : ಮುಖ್ಯಮಂತ್ರಿ @BSBommai. pic.twitter.com/ljERYBsbqQ
ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಯುವಜನರು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ನಮ್ಮ ಇಲಾಖೆ ಒಂದು ದಿನದ ಕಾರ್ಯಾಗಾರ ಆಯೋಜಿಸಿದೆ. ಬೆಂಗಳೂರಿನ ನಂತರ, ಕಲಬುರಗಿ, ಮೈಸೂರು, ಬೆಳಗಾವಿ, ಕರಾವಳಿ ಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆ ಭಾಗದ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿ ಆರಂಭಿಸಬಹುದಾದ ಉದ್ಯಮಗಳ ಮಾಹಿತಿ ನೀಡಲಾಗುತ್ತದೆ. ಮುಖ್ಯವಾಗಿ ಸ್ಥಳೀಯ ಯಶಸ್ವಿ ಉದ್ಯಮಿಗಳ ಮಾರ್ಗದರ್ಶನ ಒದಗಿಸಲಾಗುವುದು ಎಂದರು.
ನಮ್ಮ ವಿದ್ಯಾರ್ಥಿಗಳಿಗೆ ನಮ್ಮವರೇ ಆದ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿಯವರು ದೊಡ್ಡ ಪ್ರೇರಣೆ ಆಗಬೇಕು. ಎಂಜನಿಯರ್ ಪದವಿ ಪಡೆದು ಟಾಟಾ ಕಂಪನಿಯಲ್ಲಿ ಉದ್ಯೋಗ ಮಾಡಿ, ನಂತರದ ದಿನಗಳಲ್ಲಿ ಸ್ವಂತ ಐಟಿ ಕಂಪನಿ ಸ್ಥಾಪಿಸಿ ಜಗದ್ವಿಖಾತರಾದರು. ಮತ್ತೊಂದು ಉದಾಹರಣೆ ಅಂದರೆ ವಿಜಯ ಸಂಕೇಶ್ವರ್ ಅವರು. ಒಂದು ಲಾರಿಯಿಂದ ಆರಂಭವಾದ ಅವರ ಲಾಜಿಸ್ಟಿಕ್ ಉದ್ಯಮ ಇಂದು ದೇಶದಲ್ಲಿ ಅತಿ ಎತ್ತರಕ್ಕೆ ಬೆಳೆದಿದೆ. ಸಾಧಿಸುವ ಛಲ ಇದ್ದಾಗ ಮಾತ್ರ ಗುರಿ ಸಾಧ್ಯ. ಉದ್ಯಮ ಸ್ಥಾಪಿಸಿ ಮಾಲೀಕರಾಗಬೇಕೇ ಅಥವಾ ಉದ್ಯೋಗಕ್ಕೆ ಮತ್ತೊಬ್ಬರ ಕೈ ಕೆಳಗೆ ದುಡಿಯೇಬೇಕೇ ಎಂಬುದನ್ನು ವಿದ್ಯಾರ್ಥಿಗಳು ನಿರ್ಧರಿಸಬೇಕು. ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಿಂದೆ ನಡೆದಿದ್ದ ಎರಡು ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು ಕಂಡಿದ್ದು, ಮುಂದಿನ ವರ್ಷ ನವೆಂಬರ್‍ನಲ್ಲಿ ನಡೆಯಲಿರುವ ವಿಶ್ವ ಜಾಗತಿಕ ಹೂಡಿಕೆದಾರರ ಸಮಾವೇಶವೂ ನಿಮ್ಮೆಲ್ಲರ ಸಹಕಾರದೊಂದಿಗೆ ಅತ್ಯಂತ ಯಶಸ್ವಿ ಆಗುವ ವಿಶ್ವಾಸ ನನಗಿದೆ ಎಂದು ನುಡಿದರು. ಇದನ್ನೂ ಓದಿ: ನನ್ನ ಅಭಿಮಾನಿಗಳಿಂದಲೇ ನಾನು ಇಲ್ಲಿ ಇರೋದು: ಕಿಚ್ಚ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ಇದೀಗ ಯುವ ಉದ್ಯಮಿಗಳನ್ನು ಸೃಷ್ಟಿಸಲು ಮತ್ತು ಕೈಗಾರಿಕಾ ವಿವಾದಗಳನ್ನು ಬಗೆಹರಿಸಲು ಆದ್ಯತೆ ನೀಡುವ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
ಉನ್ನತ ಶಿಕ್ಷಣ, ಐಟಿ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಾಣ್ ಮಾತನಾಡಿ, ಕೌಶಲ್ಯ ಅಭಿವೃದ್ಧಿ ಮತ್ತು ಪ್ರಗತಿಪರ ನೀತಿಗಳ ಮೂಲಕ ಎಲ್ಲರಿಗೂ ಶಿಕ್ಷಣ ದೊರೆಯುವಂತಾದರೆ ಕೈಗಾರಿಕೀಕರಣ ಮತ್ತು ಉದ್ಯಮಶೀಲತೆಯಲ್ಲಿ ಅತಿ ದೊಡ್ಡ ಬದಲಾವಣೆ ಕಾಣಬಹುದು ಎಂದು ಅಭಿಪ್ರಾಯಪಟ್ಟರು.
ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಸಚಿವ ಎನ್. ನಾಗರಾಜು ಮಾತನಾಡಿ, ಉತ್ಸಾಹಿ ಯುವ ಮಿತ್ರರು ಉದ್ಯಮಿಗಳಾಗಿ ರೂಪುಗೊಳ್ಳಲು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲು ಬದ್ಧ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಡಾ.ಸಿ.ಎ.ಎನ್.ಅಶ್ವಥ್ ನಾರಾಯಣ, ಎಂಟಿಬಿ ನಾಗರಾಜು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಇವಿ ರಣಮಣರೆಡ್ಡಿ, ಎಂಎಸ್‍ಎಂಇ ನಿರ್ದೇಶಕರಾದ ಆರ್. ವಿನೋತ್ ಪ್ರಿಯಾ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ, ಕೆಐಎಡಿಬಿ ಸಿಇಓ ಡಾ.ಎನ್ ಶಿವಶಂಕರ್ ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಉಪಸ್ಥಿತರಿದ್ದರು.
ಬೆಂಗಳೂರು: ತಾಯಿಗೆ ನಾನು ಮೋಸ ಮಾಡಲಿಲ್ಲ. ತಾಯಿಯೇ ನನ್ನ ತಬ್ಬಲಿ ಮಾಡಿದಳು ಎಂದು ಹೊಸಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಹೇಳಿದ್ದಾರೆ.
ಇಂದು ಹೊಸಕೋಟೆಯಲ್ಲಿ ಮಾತನಾಡಿದ ಅವರು, ಕಂದಾಯ ಸಚಿವ ಆರ್ ಅಶೋಕ್ ಶರತ್ ಬಚ್ಚೇಗೌಡ ತಾಯಿಯಂತಹ ಪಕ್ಷಕ್ಕೆ ಮೋಸ ಮಾಡಿದ್ರು ಎನ್ನುವ ಹೇಳಿಕೆಗೆ ತಿರುಗೇಟು ನೀಡಿದರು. ನಾವು ಕಟ್ಟಿದ ಪಕ್ಷದಲ್ಲಿ ನಮಗೆ ಸ್ಥಾನ ಇಲ್ಲದಂತಾಗಿದೆ. ನಾವೆಲ್ಲೂ ಪಕ್ಷಕ್ಕೆ ಮೋಸ ಮಾಡಿಲ್ಲ. ಪಕ್ಷವೇ ನನ್ನ ತಬ್ಬಲಿ ಮಾಡಿದೆ ಎಂದು ತಿಳಿಸಿದ್ದಾರೆ.
ನಾನು 2018ರಲ್ಲಿ ಎಲೆಕ್ಷನ್ ಗೆ ಬಿಜೆಪಿಯಿಂದ ನಿಲ್ಲುವುದರಲ್ಲಿ ಅಶೋಕಣ್ಣನ ಪಾತ್ರ ದೊಡ್ಡದಿದೆ. ಆದರೆ ಇವತ್ತು ನಾನು ಗಲಾಟೆ ಮಾಡಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ನಾನು ವಿದೇಶದಲ್ಲಿ ಓದಿದ್ದೇನೆ ಅಲ್ಲೆ ಕೆಲಸ ಕೂಡ ಮಾಡಿದ್ದೇನೆ. ಈಗ ನಾಡಿನ ಜನತೆಗೆ ಸೇವೆ ಮಾಡಲು ಇಲ್ಲಿ ಬಂದಿದ್ದೇನೆ. ನಾನೆಲ್ಲೂ ಗಲಾಟೆ ದೊಂಬಿ ಮಾಡಿಲ್ಲ. ಜನ ಇಲ್ಲಿ ಪ್ರೀತಿ ಅಭಿಮಾನದಿಂದ ಸೇರುತ್ತಿದ್ದಾರೆ ಎಂದು ಆರ್ ಅಶೋಕ್‍ಗೆ ತಿರುಗೇಟು ನೀಡಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರು ಹೊಸಕೋಟೆಯನ್ನು ಮಿನಿ ಬಿಹಾರ ಎಂದ ವಿಚಾರವಾಗಿ ಪ್ರತಿಕ್ರಿಯಿಸಿ, ಹೊಸಕೋಟೆ ಜನ ಮತ್ತು ಈ ಕ್ಷೇತ್ರ ನಮ್ಮ ತಾಯಿ ಇದ್ದಂತೆ. ಇದರ ಬಗ್ಗೆ ನಾವ್ಯಾರು ಕೆಟ್ಟದಾಗಿ ಮಾತಾಡಬಾರದು. ಆದರೆ ಅವರು ಇಂತಹ ಹೇಳಿಕೆ ನೀಡಿರುವುದು ಕ್ಷೇತ್ರದ ಬಗೆಗಿನ ಅವರ ಒಲವು ಎಂತಹದ್ದು ಎಂಬುದನ್ನು ತೋರಿಸುತ್ತದೆ ಎಂದು ಎಂಟಿಬಿ ವಿರುದ್ಧ ಕಿಡಿಕಾರಿದರು.
ಸೋಮವಾರ ಹೊಸಕೋಟೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಎಂಟಿಬಿ ನಾಗರಾಜು, ಯಾರು ಗತಿ ಇಲ್ಲದಕ್ಕೆ ಕಾಂಗ್ರೆಸ್ ಪಕ್ಷ ನನ್ನ ತಂದು ಈ ಮಿನಿ ಬಿಹಾರ್ ನಲ್ಲಿ ಚುನಾವಣೆಗೆ ನಿಲ್ಲಿಸಿದರು ಎಂದು ತಮ್ಮ ಸ್ವಕ್ಷೇತ್ರವನ್ನು ಬಿಹಾರಕ್ಕೆ ಹೋಲಿಕೆ ಮಾಡಿ ಎಡವಟ್ಟು ಮಾಡಿಕೊಂಡಿದ್ದರು.
ಬೆಂಗಳೂರು: ಹೈವೋಲ್ಟೆಜ್ ಕ್ಷೇತ್ರ ಎಂದೇ ಬಿಂಬಿತವಾಗಿರೋ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ಹಾಗೂ ಸಂಸದ ಬಚ್ಚೇಗೌಡರ ನಡುವೆ ವಾರ್ ಶುರುವಾಗಿದೆ. ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಇದೇ 15 ರಂದು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧಾರ ಮಾಡಿದ್ದಾರೆ.
ಶರತ್ ಕಣಕ್ಕಿಳಿಯೋದು ಖಚಿತವಾಗುತ್ತಿದ್ದಂತೆ ಎಂಟಿಬಿ ನಾಗರಾಜ್ ಸಂಸದ ಬಚ್ಚೇಗೌಡರ ವಿರುದ್ದ ಕಿಡಿಕಾರಿದ್ದಾರೆ. ಎಂಟಿಬಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಸಂಸದ ಬಿ.ಎನ್ ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜೀನಾಮೆ ನೀಡಿದ್ದಾಗಿ ಎಂಟಿಬಿ ಒಪ್ಪಂದವನ್ನು ಬಹಿರಂಗ ಪಡಿಸಿದ್ದಾರೆ. ಹೊಸಕೋಟೆ ಕ್ಷೇತ್ರದ ಮುಖಂಡರ ಮನೆಯೊಂದರಲ್ಲಿ ಬಹಿರಂಗವಾಗಿ ಸತ್ಯವನ್ನು ಹೊರಹಾಕಿದ್ದಾರೆ.
ಬಿಜೆಪಿಗೆ ಬರಲು ಒಪ್ಪಿಕೊಂಡ ಬಚ್ಚೇಗೌಡ ಇದೀಗ ಉಲ್ಟಾ ಹೊಡೆಯುತ್ತಿದ್ದು, ಶರತ್‍ಗೆ ಎಂಎಲ್‍ಸಿ ದೊಡ್ಡಬಳ್ಳಾಪುರ ಬಿಜೆಪಿ ಟಿಕೆಟ್ ಅಥವಾ ಮುಂದಿನ ಎಂಪಿ ಚುನಾವಣೆಗೆ ಟಿಕೆಟ್ ನಿಡೋದಾಗಿ ಬಿಎಸ್‍ವೈ ಭರವಸೆ ನೀಡಿದ್ದರು ಎಂದು ಎಂಟಿಬಿ ಹೇಳಿದ್ದಾರೆ. ಜೊತೆಗೆ ಬಿಜೆಪಿ ಟಿಕೆಟ್ ಬದಲಾಗಿ ಗೃಹಮಂಡಳಿ ಅಧ್ಯಕ್ಷ ಸ್ಥಾನ ನೀಡಿದರೂ ತಿರಸ್ಕರಿಸಿದ ಶರತ್ ಬಚ್ಚೇಗೌಡ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆಂದು ಆಕ್ರೋಶವನ್ನು ಹೊರಹಾಕಿದ್ದಾರೆ.
ಒಂದು ಶರತ್ ಗೆಲ್ಲಬೇಕು, ಇಲ್ಲವೆ ಕಾಂಗ್ರೆಸ್ ಗೆಲ್ಲಬೇಕು, ಯಾವುದೇ ಕಾರಣಕ್ಕೂ ಎಂಟಿಬಿ ನಾಗರಾಜ್ ಗೆಲ್ಲಲು ಬಿಡಬಾರದೆಂದು ಒಳತಂತ್ರವನ್ನು ರೂಪಿಸಿದ್ದಾರೆಂದು ಎಂಟಿಬಿ ಆರೋಪಿಸಿದ್ದಾರೆ. ಈ ಮೊದಲೇ ಮಾಡಿಕೊಂಡ ಒಪ್ಪಂದಂತೆ ನಾನು ಬಚ್ಚೇಗೌಡ, ಅವರ ಪುತ್ರ ಶರತ್ ಮೂವರು ಸೇರಿ ಹೊಸಕೋಟೆ ತಾಲೂಕನ್ನು ಅಭಿವೃದ್ಧಿ ಪಡಿಸುವುದನ್ನು ಬಿಟ್ಟು ಅಪ್ಪ ಮಗ ಹೈಡ್ರಾಮಾ ಮಾಡುತ್ತಿದ್ದಾರೆ ಎಂದು ಎಂಟಿಬಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಘಟಾನುಘಟಿ ನಾಯಕರ ಮನವೊಲಿಕೆಗೂ ಬಗ್ಗದ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಇದೀಗ ಏಕಾಏಕಿ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಈ ವಿಚಾರ ತಿಳಿದು ಸಿಎಂ ಅವರಿಗೆ ಶಾಕ್ ಆಗಿದೆ. ಪರಿಣಾಮ ವಿಶ್ವಾಸ ಮತಯಾಚನೆಯ ನಿರೀಕ್ಷೆಯಲ್ಲಿದ್ದ ಸಿಎಂ ಈಗ ಫುಲ್ ಟೆನ್ಶನ್ ಆಗಿದ್ದಾರೆ.
ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಟಿಬಿ, ಇಂದು ನನಗೆ ಸ್ವಲ್ಪ ಪರ್ಸನಲ್ ಕೆಲಸ ಇದೆ. ದೇವಸ್ಥಾನಕ್ಕೆ ಹೋಗಬೇಕು ಎಂದಿದ್ದರು. ಇದೇ ವೇಳೆ ನಾನು ಯಾವುದೇ ಕಾರಣಕ್ಕೂ ಮುಂಬೈಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ ಇದೀಗ ದಿಢೀರ್ ಆಗಿ ಎಂಟಿಬಿ ವಿಶೇಷ ವಿಮಾನದ ಮೂಲಕ ಮುಂಬೈಗೆ ತೆರಳಿದ್ದಾರೆ.
ಶನಿವಾರದ ಮನವೊಲಿಕೆಯಲ್ಲಿ ಎಂಟಿಬಿ ತಮ್ಮ ರಾಜೀನಾಮೆ ವಾಪಸ್ ಪಡೆಯುತ್ತೇನೆ. ಆದರೆ ಸ್ವಲ್ಪ ಸಮಯ ಬೇಕು ಎಂದು ಹೇಳಿದ್ದರು. ಸಿಎಂ ಅವರು ಕೂಡ ನಿನ್ನೆ ರಾತ್ರಿ ಕರೆ ಮಾಡಿ ಮಾತುಕತೆ ನಡೆಸಿದ್ದರು. ಹೀಗಾಗಿ ಎಂಟಿಬಿ ಅವರು ವಾಪಸ್ ಬರುತ್ತಾರೆ ಎಂದು ನಂಬಿದ್ದ ಸಿಎಂ ಅವರಿಗೆ ಈ ವಿಚಾರ ತಿಳಿದು ಆತಂಕ ಉಂಟಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ನಿನ್ನೆ ರಾತ್ರಿವರೆಗೂ ಎಂಟಿಬಿ ಅವರನ್ನು ಸಮಾಧಾನ ಮಾಡಿ ಬಂದಿದ್ದ ಸಿಎಂ, ಇಂದು ಎಂಟಿಬಿ ಮುಂಬೈ ಫ್ಲೈಟ್ ಹತ್ತಿದ್ದ ವಿಚಾರ ತಿಳಿದು ಶಾಕ್ ಆಗಿದ್ದಾರೆ. ನಿನ್ನೆಯಷ್ಟೇ ವಾಪಸ್ ಬರುವುದಾಗಿ ಹೇಳಿದ್ದ ಎಂಟಿಬಿ, ಇಂದು ಅತೃಪ್ತರ ಬಣ ಸೇರ್ಪಡೆ ಹಿನ್ನೆಲೆಯಲ್ಲಿ ಸುಮಾರು 15 ಗಂಟೆಗಳ ಕಾಲ ಡಿಕೆ ಶಿವಕುಮಾರ್ ಹಾಗು ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿದ ಪ್ರಯತ್ನ ಈ ಮೂಲಕ ವ್ಯರ್ಥವಾಗಿದೆ.
ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿ ಇದ್ದಂತೆಯೇ ಇಂದು ಮಾರ್ಗ ಮಧ್ಯದಲ್ಲಿ ವಾಹನ ಬದಲಿಸಿದ ಎಂಟಿಬಿ ನಾಗರಾಜ್, ಸತೀಶ್ ರೆಡ್ಡಿ ಅವರ ಕಾರಿನಲ್ಲಿ ಹೆಚ್‍ಎಎಲ್‍ಗೆ ಹೋಗಿ ಆರ್.ಆಶೋಕ್ ನೇತೃತ್ವದಲ್ಲಿ ವಿಶೇಷ ವಿಮಾನದಲ್ಲಿ ಮುಂಬೈಗೆ ಹಾರಿದ್ದಾರೆ.