Tag: ಎಂಟಿಬಿ ನಾಗಾರಾಜ್

  • ಬಿಜೆಪಿಯಲ್ಲಿ ಉಸ್ತುವಾರಿ ಸಚಿವರ ಕಿತ್ತಾಟ – ಮಾಧುಸ್ವಾಮಿ, ಸೋಮಣ್ಣ, ಎಂಟಿಬಿಗೆ ಅಸಮಾಧಾನ

    ಬಿಜೆಪಿಯಲ್ಲಿ ಉಸ್ತುವಾರಿ ಸಚಿವರ ಕಿತ್ತಾಟ – ಮಾಧುಸ್ವಾಮಿ, ಸೋಮಣ್ಣ, ಎಂಟಿಬಿಗೆ ಅಸಮಾಧಾನ

    ಬೆಂಗಳೂರು: ಬಿಜೆಪಿ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ ಬೆನ್ನಲ್ಲೇ ಕೆಲ ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ಪ್ರಮುಖವಾಗಿ ಸಚಿವರಾದ ಎಂಟಿಬಿ ನಾಗರಾಜ್, ವಿ.ಸೋಮಣ್ಣ, ಮಾಧುಸ್ವಾಮಿ ಸೇರಿದಂತೆ ಕೆಲ ಸಚಿವರು ಕ್ಯಾತೆ ತೆಗೆದಿದ್ದಾರೆ.

    ಚಿಕ್ಕಬಳ್ಳಾಪುರ ಉಸ್ತುವಾರಿಗೆ ಸಚಿವರಾಗಿರುವ ಎಂಟಿಬಿ ನಾಗರಾಜ್ ನನಗೆ ಬೆಂಗಳೂರು ಗ್ರಾಮಾಂತರದ ಉಸ್ತುವಾರಿ ಬೇಕೆಂದು ಪಟ್ಟು ಹಿಡಿದಿದ್ದಾರೆ. ಅಲ್ಲದೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ಕೂಡ ನಡೆಸಿದ್ದಾರೆ. ಇನ್ನೊಂದೆಡೆ ಜಿಲ್ಲೆಯ ಪೂರ್ವಾಪರ ಗೊತ್ತಿಲ್ಲದೆ ಜವಾಬ್ದಾರಿ ನಿರ್ವಹಿಸಲು ಇಷ್ಟ ಇಲ್ಲ. ಸಿಎಂ ನನ್ನ ಜೊತೆ ಮಾತಾಡಿಯೇ ನಿರ್ಧಾರ ತೆಗೆದುಕೊಂಡಿದ್ದಾರೆ. ಉಸ್ತುವಾರಿ ಕೈತಪ್ಪಿದ್ದಕ್ಕೆ ಯಾವುದೇ ರಾಜಕೀಯ ಇಲ್ಲ. ಏನೂ ಗೊತ್ತಿಲ್ಲದ ಜಿಲ್ಲೆಗೆ ಹೋಗಿ ಏನು ಪ್ರಯೋಜನ..? ಹೀಗಾಗಿ ಬೇರೆ ಜಿಲ್ಲೆಗೆ ಹೋಗಲು ನಿರಾಕರಿಸಿದ್ದೇನೆ. ತುಮಕೂರು ಉಸ್ತುವಾರಿ ಕೊಟ್ಟಿದ್ರೆ ಒಳ್ಳೇ ಕೆಲಸ ಮಾಡಬಹುದಿತ್ತು ಎಂದು ಸಚಿವ ಮಾಧುಸ್ವಾಮಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಂಗಳೂರು ನಗರಕ್ಕೆ ಸಿಎಂ ಸೇರಿ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ – ಯಾರಿಗೆ ಯಾವ ಜಿಲ್ಲೆ?

    ಉಸ್ತುವಾರಿ ಹಂಚಿಕೆ ವಿಚಾರವಾಗಿ ಸಚಿವ ಸೋಮಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಾನೂ ಬೆಂಗಳೂರು ಉಸ್ತುವಾರಿ ಕೇಳಿದ್ದೆ ಅದು ಯಾರಿಗೂ ಕೊಟ್ಟಿಲ್ಲ. ಆದರೆ ಬೇರೆ ಯಾರಿಗೂ ಕೊಟ್ಟಿಲ್ಲ ಅಂದ್ರೆ ಅದು ಸಿಎಂ ಬಳಿ ಇರೋದೇ ಸೂಕ್ತ. ವರಿಷ್ಠರ ಸೂಚನೆ ಮೇರೆಗೆ ಸಿಎಂ ಈ ನಿರ್ಧಾರ ಮಾಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಪ್ರಯೋಗ ಮಾಡಲಾಗಿದೆ. ಅದರಂತೆ ನಮ್ಮಲ್ಲೂ ಮಾಡಿದ್ದಾರೆ. ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ವರಿಷ್ಠರು, ಹೈಕಮಾಂಡ್ ತೀರ್ಮಾನ ಮಾಡಿ ಹಂಚಿಕೆ ಮಾಡಿದ್ದಾರೆ. ಯಾವ ಲೆಕ್ಕಾಚಾರದಲ್ಲಿ ಬೇರೆ ಬೇರೆ ಜಿಲ್ಲೆ ಹಂಚಿಕೆ ಮಾಡಲಾಗಿದೆ ಗೊತ್ತಿಲ್ಲ ಆದರೆ ತವರು ಜಿಲ್ಲೆ ಸಿಕ್ಕಿಲ್ಲ ಅಂದಮೇಲೆ ಬೆಂಗಳೂರು ನಗರ ಉಸ್ತುವಾರಿ ಸಿಎಂ ಬಳಿ ಇರೋದೇ ಸೂಕ್ತ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಸೋಮಣ್ಣ ಮಾತನಾಡಿದ್ದಾರೆ. ಇದನ್ನೂ ಓದಿ: ವರಿಷ್ಠರ ಸೂಚನೆ ಮೇರೆಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಸೋಮಣ್ಣ

  • ಒಂದು ಫೋನ್ ಕಾಲ್ – ದಿಢೀರ್ ಉಡುಪಿಯಿಂದ ಬೆಂಗಳೂರಿಗೆ ಅಶೋಕ್

    ಒಂದು ಫೋನ್ ಕಾಲ್ – ದಿಢೀರ್ ಉಡುಪಿಯಿಂದ ಬೆಂಗಳೂರಿಗೆ ಅಶೋಕ್

    ಉಡುಪಿ: ರಾಜ್ಯ ಸರ್ಕಾರದ ಖಾತೆ ಹಂಚಿಕೆ ಬಿಕ್ಕಟ್ಟು ಬಗೆಹರಿಯೋ ಸೂಚನೆ ಕಾಣದೆ ಇಬ್ಬರು ಸಚಿವರು ರಾಜೀನಾಮೆ ಕೊಡಲು ಮುಂದಾಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಕಂದಾಯ ಸಚಿವ ಆರ್ ಅಶೋಕ್ ಇಂದು ರಾತ್ರಿ ಬೆಂಗಳೂರಿಗೆ ಬರಲಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಆರ್ ಅಶೋಕ್ ಖಾತೆ ಮರು ಹಂಚಿಕೆ ವಿಚಾರದಲ್ಲಿ ಸಣ್ಣ ಗೊಂದಲವಿರುವುದು ನಿಜ. ಬಿಕ್ಕಟ್ಟು ಪರಿಹಾರಕ್ಕೆ ಮುಖ್ಯಮಂತ್ರಿಗಳಿಂದ ಕರೆ ಬಂದಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಸಿಎಂ ತುರ್ತಾಗಿ ಬೆಂಗಳೂರಿಗೆ ಬರಲು ಹೇಳಿದ್ದಾರೆ. ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಈ ಬಗ್ಗೆ ಕರೆ ಮಾಡಿದ್ದೇನೆ. ಇಂದು ರಾತ್ರಿ ಬೆಂಗಳೂರಿಗೆ ತೆರಳಿ ಬಿಕ್ಕಟ್ಟು ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದರು.

    ಆನಂದ್ ಸಿಂಗ್ ಅವರಿಗೆ ಕರೆ ಮಾಡಿದ್ದೆ, ಅವರ ಸಂಪರ್ಕ ಸಾಧ್ಯವಾಗಿಲ್ಲ. ಶಾಸಕ ರಾಜೇಗೌಡ ಮತ್ತು ಎಂಟಿಬಿ ನಾಗರಾಜ್ ಜೊತೆ ಮಾತನಾಡಿದ್ದೇನೆ. ದುಡುಕಿ ಯಾವುದೇ ತಪ್ಪು ನಿರ್ಧಾರ ಕೈಗೊಳ್ಳಬೇಡಿ ಎಂದು ಹೇಳಿದ್ದೇನೆ. ಬೆಂಗಳೂರು ತಲುಪಿದ ನಂತರ ಎಲ್ಲರ ಜೊತೆ ಸೇರಿ ಮಾತನಾಡುತ್ತೇನೆ. ಎಲ್ಲ ಗೊಂದಲಗಳು ಮೊನ್ನೆಯೇ ಬಗೆಹರಿದಿತ್ತು. ಹೊಸದಾಗಿ ಖಾತೆ ಬದಲಾವಣೆಯಾದ ಕಾರಣ ಮತ್ತೆ ಗೊಂದಲ ಉಂಟಾಗಿದೆ. ರಾಜಕೀಯದಲ್ಲಿ ಇದೆಲ್ಲಾ ಸರ್ವೇ ಸಾಮಾನ್ಯ. ಅಸಮಾಧಾನ, ಖಾತೆ ಕ್ಯಾತೆ ಇದೆಲ್ಲ ಇದ್ದಿದ್ದೆ. ಮುಖ್ಯಮಂತ್ರಿಗಳು ಇದೆಲ್ಲವನ್ನು ಎದುರಿಸಲು ಸಮರ್ಥರಿದ್ದಾರೆ, ನಾವೆಲ್ಲ ಅವರ ಜೊತೆಗಿದ್ದೇವೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್ ಮೈತ್ರಿ ಎಂಬ ಡಿಕೆಶಿ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್, ಡಿ.ಕೆ. ಶಿವಕುಮಾರ್ ಇನ್ನೂ ಹಳೆ ಮೈತ್ರಿಯ ಗುಂಗಿನಲ್ಲಿಯೇ ಇದ್ದಾರೆ. ಕುಮಾರಸ್ವಾಮಿಗೆ ಬೆನ್ನಿಗೆ ಚೂರಿ ಹಾಕಿದ ಅನುಭವ ಇನ್ನೂ ಹಾಗೆ ಇದೆ. ಕಾಂಗ್ರೆಸ್‍ನಿಂದ ಹಲವು ಕಾರಣಗಳಿಂದ ಬೇಸರಗೊಂಡು ಕೆಲವರು ನಮ್ಮ ಜೊತೆ ಬಂದಿದ್ದಾರೆ. ಬಂದವರಿಗೆ ಕಾಂಗ್ರೆಸ್‍ನಲ್ಲಿ ಯಾವುದೇ ದೊಡ್ಡ ಪದವಿ ಇರಲಿಲ್ಲ, ಆ ಸರ್ಕಾರದಲ್ಲಿ ಅವರಿಗೆ ಸಿಕ್ಕಿದ ಖಾತೆಗಳ ಬಗ್ಗೆ ತೃಪ್ತಿ ಇರಲಿಲ್ಲ. ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಸರಕಾರ ಪೌರಾಡಳಿತ ಖಾತೆ ಕೊಟ್ಟಿತ್ತು, ಡಿಕೆ ಶಿವಕುಮಾರ್ ನಿಭಾಯಿಸಿದ್ದ ಪವರ್ ಫುಲ್ ಜಲಸಂಪನ್ಮೂಲ ಖಾತೆಯನ್ನು ನಾವು ಇದೀಗ ಜಾರಕಿಹೊಳಿಗೆ ನೀಡಿದ್ದೇವೆ ಎಂದು ಕಾಂಗ್ರೆಸ್ ಪಕ್ಷವನ್ನು ಕುಟುಕಿದರು.

    ಕಾಂಗ್ರೆಸ್‍ನಿಂದ ಬಿಜೆಪಿಗೆ ಬಂದ ಎಲ್ಲರಿಗೂ ನಮ್ಮ ಸರ್ಕಾರದಲ್ಲಿ ಉತ್ತಮ ಖಾತೆಗಳನ್ನು ನೀಡಿದ್ದೇವೆ. ಡಿ.ಕೆ ಶಿವಕುಮಾರ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಅತಿಹೆಚ್ಚು ಲಾಭ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಇನ್ನೂ ಕನಸಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಆರ್ ಅಶೋಕ್ ಭವಿಷ್ಯ ನುಡಿದರು.

  • ಮುಂಜಾನೆ 5 ಗಂಟೆಗೆ ಎಂಟಿಬಿ ನಿವಾಸಕ್ಕೆ ಡಿಕೆಶಿ ದೌಡು

    ಮುಂಜಾನೆ 5 ಗಂಟೆಗೆ ಎಂಟಿಬಿ ನಿವಾಸಕ್ಕೆ ಡಿಕೆಶಿ ದೌಡು

    ಬೆಂಗಳೂರು: ಶುಕ್ರವಾರ ನಡೆದ ಕಲಾಪದಲ್ಲಿ ವಿಶ್ವಾಸಮತ ಯಾಚಿಸುತ್ತೇನೆ ಎಂದು ಹೇಳಿ ಸಿಎಂ ಶಾಕ್ ಕೊಟ್ಟಿದ್ದಾರೆ. ಇದೀಗ ದೋಸ್ತಿ ನಾಯಕರಿಂದ ಅತೃಪ್ತರ ಮನವೊಲಿಕೆ ಮಾಡಲು ಸರ್ಕಸ್ ಮಾಡುತ್ತಿದ್ದಾರೆ.

    ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಟ್ರಬಲ್ ಶೂಟರ್ ಡಿಕೆಶಿ ಅಖಾಡಕ್ಕಿಳಿದಿದ್ದು, ಎಂಟಿಬಿ ನಾಗರಾಜ್ ಅವರ ಮನವೊಲಿಕೆಗಾಗಿ ಅವರ ನಿವಾಸಕ್ಕೆ ಹೋಗಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿರುವ ಎಂಟಿಬಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸುಮಾರು 5 ಗಂಟೆಯಿಂದ ಡಿ.ಕೆ.ಶಿವಕುಮಾರ್ ಎಂಟಿಎಂ ನಾಗರಾಜ್ ಅವರ ಮನೆಯಲ್ಲಿ ಚರ್ಚೆ ಮಾಡುತ್ತಿದ್ದಾರೆ.

    ನಿಮ್ಮ ಬೇಸರವೇನು? ನಾವು ಪರಿಹಾರ ಮಾಡುತ್ತೇವೆ ಎಂದು ಡಿಕೆಶಿ ಸಮಾಧಾನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು ಎರಡು ಗಂಟೆಯಿಂದ ಮನವೊಲಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಇದು ಸಫಲವಾಗುತ್ತಾ ಎಂಬ ಕುತೂಹಲ ಮೂಡಿದೆ. ಡಿಕೆಶಿ ಅವರು ಮಾತಿಗೂ ಎಂಟಿಬಿ ನಾಗರಾಜ್ ರಾಜೀನಾಮೆ ವಾಪಸ್ ತೆಗೆದುಕೊಂಡಿಲ್ಲ ಎಂದರೆ ಖುದ್ದಾಗಿ ಸಿಎಂ ಅವರು ಬಂದು ಮತ್ತೊಮ್ಮೆ ಮನವೊಲಿಕೆ ಕೆಲಸ ಮಾಡುವ ಸಾಧ್ಯತೆ ಇದೆ.

    ಎಂಟಿಬಿ ನಾಗಾರಾಜ್ ಮತ್ತು ಸುಧಾಕರ್ ಇಬ್ಬರು ಬುಧವಾರ ಒಟ್ಟಿಗೆ ಸ್ಪೀಕರ್ ಕಚೇರಿಗೆ ಬಂದು ರಾಜೀನಾಮೆ ಸಲ್ಲಿಸಿದ್ದರು. ಸುಧಾಕರ್ ರಾಜೀನಾಮೆ ನೀಡಿ ಹೊತಬರುತ್ತಿದ್ದಂತೆಯೇ ಭಾರೀ ಹೈಡ್ರಾಮವೇ ನಡೆಯಿತು. ಮುಂಬೈನಲ್ಲಿರುವ ಅತೃಪ್ತ ಶಾಸಕರನ್ನು ಮನವೊಲಿಸಲು ಪ್ರಯತ್ನ ಮಾಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಸದ್ಯಕ್ಕೆ ರಾಜ್ಯದಲ್ಲಿರುವ ಅತೃಪ್ತ ಶಾಸಕರನ್ನು ಮನವೊಲಿಕೆಗೆ ಪ್ರಯತ್ನ ಮಾಡುತ್ತಿದ್ದಾರೆ.