Tag: ಎಂಪಿ ಕುಮಾರಸ್ವಾಮಿ

  • ನನ್ನನ್ನ ಬಿಜೆಪಿಯಿಂದ ಸಿ.ಟಿ.ರವಿ ಕಳಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು: ಎಂ.ಪಿ. ಕುಮಾರಸ್ವಾಮಿ

    ನನ್ನನ್ನ ಬಿಜೆಪಿಯಿಂದ ಸಿ.ಟಿ.ರವಿ ಕಳಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು: ಎಂ.ಪಿ. ಕುಮಾರಸ್ವಾಮಿ

    ಚಿಕ್ಕಮಗಳೂರು: ನನ್ನನ್ನು ಬಿಜೆಪಿಯಿಂದ (BJP) ಸಿ.ಟಿ.ರವಿ (CT Ravi) ಕಳಿಸಿದ್ರು, ಈಗ ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು ಎಂದು ಎಂ.ಪಿ. ಕುಮಾರಸ್ವಾಮಿ (MP Kumaraswamy) ವ್ಯಂಗ್ಯವಾಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರಲ್ಲಿ ಒಕ್ಕಲಿಗರು ಇರೋದು ಆರೇ ಸಾವಿರ ಮತದಾರರು ಅಷ್ಟೇ. ಆದರೆ ಚಿಕ್ಕಮಗಳೂರು (Chikkamagaluru) ಇನ್ಮುಂದೆ ವೀರಶೈವ ಲಿಂಗಾಯತರ ಕ್ಷೇತ್ರ. ಸಿ.ಟಿ.ರವಿ ದತ್ತಮಾಲೆ, ಅಹಿತಕರ ಘಟನೆ ಇಟ್ಕಂಡ್ ಹೋದ್ರು ಇನ್ಮುಂದೆ ಆಗಲ್ಲ. ಯಡಿಯೂರಪ್ಪ (BS Yediyurappa) ಸ್ವಿಚ್ ಆಫ್ ಮಾಡಲಿಲ್ಲ, ಮಾಡಿದ್ರೆ ಬಿಜೆಪಿ 50 ಸೀಟ್ ಅಷ್ಟೆ ಬರುತ್ತಿತ್ತು ಎಂದು ಟೀಕಿಸಿದರು. ಇದನ್ನೂ ಓದಿ: ಪ್ರತಿಕ್ರಿಯೆ ನೀಡದೇ ಫುಲ್‌ ಗರಂ ಆಗಿ ತೆರಳಿದ ಸಿದ್ದರಾಮಯ್ಯ

    ಮೂಡಿಗೆರೆ ಬಿಜೆಪಿಗೆ ಜೀವ ತುಂಬಿದವನೇ ನಾನಾಗಿದ್ದೆ. ಆದರೆ ನನ್ನನ್ನ ಬಿಟ್ಟಿದ್ದಕ್ಕೆ 5 ಕ್ಷೇತ್ರ ಹೋಗುತ್ತೆ ಅಂತ ಸಾಮಾನ್ಯ ಜನ ಹೇಳ್ತಾರೆ. ಜೆಡಿಎಸ್‍ನಲ್ಲಿ ಬೂತ್ ಕಮಿಟಿ, ಪಕ್ಷ ಸಂಘಟನೆ ಇರಲಿಲ್ಲ, ಹಾಗಾಗಿ ಸೋತೆ. ಎಲ್ಲಾ ಸರಿ ಮಾಡಿಕೊಂಡು ಚುನಾವಣೆ ಮಾಡೋದು ಆಗುತ್ತಿರಲಿಲ್ಲ, ಕಷ್ಟವಾಗಿತ್ತು. ಮುಂದೆ ಎಲ್ಲಾ ಸರಿ ಮಾಡಿಕೊಂಡು ಜಿಪಂ, ತಾಪಂ ಎಲೆಕ್ಷನ್ ಮಾಡುತ್ತೇವೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿರುವ ಪಕ್ಷೇತರ ಅಭ್ಯರ್ಥಿ

  • ಎಂಪಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ

    ಎಂಪಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ

    – ಹುಚ್ಚುನಾಯಿಯಂತೆ ನನ್ನನ್ನು ಪಕ್ಷದಿಂದ ಓಡಿಸಿದ್ದಾರೆಂದು ಕುಮಾರಸ್ವಾಮಿ ಕಿಡಿ

    ಕಾರವಾರ: ಮೂಡಿಗೆರೆ (Mudigere) ಬಿಜೆಪಿ (BJP) ಶಾಸಕ ಎಂಪಿ ಕುಮಾರಸ್ವಾಮಿ (MP Kumaraswamy) ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

    ಎಂಪಿ ಕುಮಾರಸ್ವಾಮಿ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

    ಬುಧವಾರ ರಾತ್ರಿ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಪಟ್ಟಿಯಲ್ಲಿ ಮೂಡಿಗೆರೆಯ ಹಾಲಿ ಶಾಸಕರ ಹೆಸರು ಇರಲಿಲ್ಲ. ಕುಮಾರಸ್ವಾಮಿ ಬದಲಿಗೆ ಬಿಜೆಪಿ ದೀಪಕ್ ದೊಡ್ಡಯ್ಯ ಅವರಿಗೆ ಈ ಬಾರಿ ಅವಕಾಶ ನೀಡಿದೆ. ಇದರಿಂದ ಪಕ್ಷ ಹಾಗೂ ನಾಯಕರ ವಿರುದ್ಧ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಕುಮಾರಸ್ವಾಮಿ, ಬಿಜೆಪಿ ಪಕ್ಷದಲ್ಲಿ ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದ್ದಾರೆ. ಇದಕ್ಕೆಲ್ಲಾ ಸಿಟಿ ರವಿ ಹಾಗೂ ಪ್ರಾಣೇಶ್ ಕಾರಣ. ಪಕ್ಷದಲ್ಲಿ ಹೀನಾಯವಾಗಿ ನನ್ನನ್ನು ನಡೆಸಿಕೊಂಡಿದ್ದಾರೆ. ಅವರೇ ಜನ ಕಳುಹಿಸಿ, ಅವರೇ ಜಗಳ ಮಾಡಿಸಿ ನನ್ನ ಮೇಲೆ ಕೆಟ್ಟ ಅಭಿಪ್ರಾಯ ಬರುವ ರೀತಿ ಮಾಡಿದರು ಎಂದು ನೋವು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಯಾಣದ ನಡುವೆಯೇ ಪಕ್ಷದ ಕೆಲಸ, ಆಹಾರ ಸೇವನೆ, ವಿಶ್ರಾಂತಿ – ಇದು ಹೆಚ್‌ಡಿಕೆ ದಿನಚರಿ

    ಅವರು ಪಕ್ಷ ಉಳಿಸಲ್ಲ. ಸಿಟಿ ರವಿ ಬಿಜೆಪಿಗೆ ಮಾರಕ. ಮುಂದಿನ ಬಾರಿ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ನನಗೆ ಇನ್ನೂ ವಯಸ್ಸಾಗಿಲ್ಲ, ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ. ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ. ಶನಿವಾರ ಸಂಜೆ ವೇಳೆಗೆ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಮಾಜದ ಮುಖಂಡರ ಕಡೆಗಣನೆ – ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಶ್ರೀ ಕಿಡಿ

  • ಸಿ.ಟಿ ರವಿ ಬಿಜೆಪಿ ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ : ಎಂ.ಪಿ ಕುಮಾರಸ್ವಾಮಿ ಕಿಡಿ

    ಸಿ.ಟಿ ರವಿ ಬಿಜೆಪಿ ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ : ಎಂ.ಪಿ ಕುಮಾರಸ್ವಾಮಿ ಕಿಡಿ

    ಬೆಂಗಳೂರು: ಸಿ.ಟಿ ರವಿ (CT Ravi) ಬಿಜೆಪಿಯನ್ನು (BJP) ಮುಳುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮೂಡಿಗೆರೆ (Mudigere) ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ (MP Kumaraswamy) ಕಿಡಿಕಾರಿದರು.

    ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ಕೈತಪ್ಪುವಂತೆ ಮಾಡಿರುವುದರ ಹಿಂದೆ ಸಿ.ಟಿ. ರವಿ ಕೈವಾಡ ಇದೆ. ಬಿಜೆಪಿ ಸಿ.ಟಿ ರವಿಯನ್ನು ನಂಬಿಕೊಂಡು ಹೋದರೆ ಮುಂದಿನ ದಿನಗಳಲ್ಲಿ ಅನುಭವಿಸುತ್ತದೆ. ಸಿಟಿ ರವಿ ಓದ್ಕೊಂಡು ಬಂದಿಲ್ಲ. ಸಂಘ ಪರಿವಾರದ ಜೊತೆ ಇದ್ದು ಮಾತನಾಡುವುದನ್ನು ಕಲಿತುಕೊಂಡಿದ್ದಾನೆ ಎಂದು ವಾಗ್ದಾಳಿ ನಡೆಸಿದರು.

    ಹೈಕಮಾಂಡ್‍ಗೆ ನನ್ನ ಬಗ್ಗೆ ತಪ್ಪು ವರದಿ ಕೊಟ್ಟಿದ್ದಾರೆ. ವೈಯಕ್ತಿಕ ಕಾರಣಕ್ಕೆ ರಾಜಕಾರಣ ಮಾಡುತ್ತಿದ್ದಾರೆ. ಕೆಲ ರಾಜ್ಯ ನಾಯಕರೇ ಇದಕ್ಕೆ ಕಾರಣ. ಸಿಟಿ ರವಿ ಕೈವಾಡ ಇದೆ ಅನ್ನೋದು ಸ್ಪಷ್ಟವಾಗಿ ತಿಳಿದಿದೆ. ಹೈಕಮಾಂಡ್ ಮುಂದೆ ನನ್ನ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಮುಗಿಸುವವರೆಗೂ ಸಿ.ಟಿ ರವಿ ವಿಶ್ರಾಂತಿ ಪಡೆಯುವುದಿಲ್ಲ. ಪಕ್ಷಕ್ಕೆ ಇದು ಮುಂದೇ ಗೊತ್ತಾಗುತ್ತದೆ ಎಂದು ಗುಡುಗಿದರು. ಇದನ್ನೂ ಓದಿ: ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಗುಡ್‌ ಬೈ

    ಯಡಿಯೂರಪ್ಪ ಸ್ವಿಚ್ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಬರುವುದಿಲ್ಲ. ಟಿಕೆಟ್ ಕೈ ತಪ್ಪಿದ ಬಳಿಕ ಯಾವ ಒಬ್ಬ ನಾಯಕರು ಕರೆ ಮಾಡಿ ಮಾತನಾಡಿಲ್ಲ. ನಾನೇ ಸಿಎಂ ಭೇಟಿ ಮಾಡಿದ್ದೆ, ಸಿಎಂ ಅವರು ಮಾತನಾಡಿದ ದಾಟಿಯಿಂದಾಗಿ ನನಗೆ ಟಿಕೆಟ್ ಇಲ್ಲ ಎನ್ನುವುದು ಖಚಿತವಾಗಿತ್ತು ಎಂದು ಕಿಡಿಕಾರಿದ ಅವರು, ಶಾಸಕ ಭವನದಿಂದ ಹೊರಟರು. ಈ ವೇಳೆ ಶಾಸಕನಾಗಿಯೇ ಮರಳಿ ಬರೋದಾಗಿ ಶಪಥ ಮಾಡಿದರು. ಇದನ್ನೂ ಓದಿ: ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್‌

  • ಮೂಡಿಗೆರೆ ಬಿಜೆಪಿ ಶಾಸಕ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ

    ಮೂಡಿಗೆರೆ ಬಿಜೆಪಿ ಶಾಸಕ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ

    ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ (Check Bounce Case) ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ (Mudigere BJP MLA) ಎಂ ಪಿ ಕುಮಾರಸ್ವಾಮಿಗೆ (MP Kumaraswamy) 4 ವರ್ಷ ಜೈಲು ಶಿಕ್ಷೆಯಾಗಿದೆ.

    ಹೂವಪ್ಪಗೌಡ ಅವರಿಂದ ಎಂ.ಪಿ.ಕುಮಾರಸ್ವಾಮಿ 1.35 ಕೋಟಿ ರೂ. ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಕುಮಾರಸ್ವಾಮಿ 8 ಚೆಕ್‌ ನೀಡಿದ್ದರು. ಆದರೆ ಈ ಎಲ್ಲಾ ಚೆಕ್‌ ಬೌನ್ಸ್‌ ಆಗಿತ್ತು. ಇದನ್ನೂ ಓದಿ: ಪ್ರಧಾನಿ ಮೋದಿ ಔತಣಕೂಟಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಗೈರು

    court order law

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂವಪ್ಪಗೌಡ ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾ.ನ್ಯಾ.ಜೆ.ಪ್ರೀತ್ ಅವರಿಂದು ಶಿಕ್ಷೆಯ ತೀರ್ಪು ಪ್ರಕಟಿಸಿದರು. 8 ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಾಸಕನ ಮೇಲೆ ಹಲ್ಲೆ- ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ

    ಶಾಸಕನ ಮೇಲೆ ಹಲ್ಲೆ- ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ (MP Kumaraswamy) ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮೂಡಿಗೆರೆ ತಾಲೂಕಿನ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ ಸ್ಪಷ್ಟಪಡಿಸಿದರು.

    ಇಂದು ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಓಂಕಾರೇಶ್ವರ ದೇವಾಲಯದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ-ಕುಂದೂರು ಗ್ರಾಮದಲ್ಲಿ ನಡೆದ ಶಾಸಕ ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ಸತ್ಯಾಸತ್ಯತೆಯನ್ನೂ ನೀವೇ ಪರಿಶೀಲನೆ ಮಾಡಿ, ತಪ್ಪಿತಸ್ಥರಿಗೆ ನ್ಯಾಯ, ನೀತಿ, ಧರ್ಮದ ಆಧಾರದಲ್ಲಿ ಶಿಕ್ಷೆ ಕೊಡು ಎಂದು ಓಂಕಾರೇಶ್ವರನಲ್ಲಿ ಬೇಡಿಕೊಂಡಿದ್ದಾರೆ. ನಾನು ಒಳ್ಳೆಯ ಸಂಸ್ಕೃತಿಯಿಂದ ಬಂದವನು. ನಾನು ಅಷ್ಟು ಕೀಳುಮಟ್ಟದ ರಾಜಕಾರಣವನ್ನು ಮಾಡುವ ಸಣ್ಣ ಮನಸ್ಸಿನ ವ್ಯಕ್ತಿಯಲ್ಲ ಎಂದರು.

    ಮೂರು ದಿನಗಳ ಹಿಂದೆ ಮೂಡಿಗೆರೆ ತಾಲೂಕಿನ ಹುಲ್ಲೇಮನೆ-ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ್ದಳು. ಶಾಸಕ ಕುಮಾರಸ್ವಾಮಿ ಸ್ಥಳ ಪರಿಶೀಲನೆಗೆಂದು ಹೋದಾಗ ಕುಂದೂರು ಗ್ರಾಮದಲ್ಲಿ ಮಾತಿಗೆ-ಮಾತು ಬೆಳೆದು ಗಲಾಟೆಯಾಗಿತ್ತು. ಈ ವೇಳೆ ಸ್ಥಳೀಯರು ಶಾಸಕರ ಮೇಲೂ ಹಲ್ಲೆ ಮಾಡಿದ್ದರು. ಆ ಬಳಿಕ ಶಾಸಕ ಕುಮಾರಸ್ವಾಮಿ ನನ್ನ ಮೇಲಿನ ಹಲ್ಲೆಗೆ ದೀಪಕ್ ದೊಡ್ಡಯ್ಯನೇ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಎಲ್ಲರ ಕೈನಲ್ಲೂ ದೊಣ್ಣೆ ಇತ್ತು – ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನು ಅಟ್ಟಾಡಿಸಿ ಹೊಡೆದರು: ಎಂ.ಪಿ ಕುಮಾರಸ್ವಾಮಿ

    ಹಾಗಾಗಿ, ಇಂದು ದೀಪಕ್ ದೊಡ್ಡಯ್ಯ ಓಂಕಾರೇಶ್ವರ ದೇವಾಲಯದಲ್ಲಿ ನನಗೂ ಈ ಹಲ್ಲೆಗೂ ಯಾವುದೇ ಸಂಬಂಧವಿಲ್ಲ. ತಪ್ಪಿತಸ್ಥರ ವಿರುದ್ಧ ನೀನೇ ಸೂಕ್ತ ಶಿಕ್ಷೆ ನೀಡು ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ. ನಾನು ಸಾವಿರಾರು ಮಕ್ಕಳಿಗೆ ಪಾಠ ಮಾಡಿದ್ದೇನೆ. ಜವಾಬ್ದಾರಿಯುತ ಸ್ಥಾನಗಳನ್ನು ನಿರ್ವಹಿಸಿದ್ದೇನೆ. ಅಂತಹ ಕೀಳು ಮನಸ್ಸಿನ ವ್ಯಕ್ತಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಕುಮಾರಸ್ವಾಮಿ ಇದು ರಾಜಕೀಯ ದಾಳಿ ಎಂದು ಆರೋಪ ಮಾಡುತ್ತಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಹಾಲು, ಮೊಸರಿನ ದರ 2 ರೂ. ಏರಿಕೆ

    Live Tv
    [brid partner=56869869 player=32851 video=960834 autoplay=true]

  • 75ನೇ ಸ್ವಾತಂತ್ರ್ಯೋತ್ಸವದ ವೇಳೆ ಬಸ್ ಕಂಡ ಕಾಫಿನಾಡ ಕುಗ್ರಾಮ

    75ನೇ ಸ್ವಾತಂತ್ರ್ಯೋತ್ಸವದ ವೇಳೆ ಬಸ್ ಕಂಡ ಕಾಫಿನಾಡ ಕುಗ್ರಾಮ

    ಚಿಕ್ಕಮಗಳೂರು: ಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನು ಕಾಣದ ಕುಗ್ರಾಮವು 75ನೇ ಸ್ವಾಂತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಬಸ್ಸನ್ನು ಕಂಡಿದ್ದು, ಶಾಸಕ ಎಂ.ಪಿ. ಕುಮಾರಸ್ವಾಮಿ ಚಾಲನೆ ನೀಡಿದರು.

    ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಗ್ಗುಡ್ಲು, ಮತ್ತಿಕಟ್ಟೆ, ದೊಡ್ಡನಂದಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಬಸ್ ಸೌಲಭ್ಯವೇ ಇರಲಿಲ್ಲ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಆಧುನಿಕತೆ ಇಷ್ಟೆಲ್ಲಾ ಮುಂದುವರಿದರೂ, ಸರ್ಕಾರ ಲಕ್ಷ, ಕೋಟಿಗಟ್ಟಲೇ ಬಜೆಟ್ ಮಂಡಿಸಿದರೂ ಈ ಹಳ್ಳಿಗಳು ಬಸ್‍ನ್ನೇ ನೋಡಿರಲಿಲ್ಲ.

    ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕುಟುಂಗಳು ವಾಸಿಸುತ್ತಿದ್ದಾರೆ. ಬಹುತೇಕ ಬಡಕುಟುಂಬಗಳಾಗಿವೆ. ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು ಬದುಕು ದೂಡುತ್ತಿರುವ ಕುಟುಂಬಗಳೇ ಹೆಚ್ಚು. ಇಲ್ಲಿನ ಜನ ಬಣಕಲ್ ಹೋಬಳಿಗೆ ಬರಲು ಸುಮಾರು 5-7 ಕಿ.ಮೀ. ನಡೆದೇ ಬರಬೇಕಿತ್ತು. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಕೂಡ 5-7 ಕಿ.ಮೀ. ನಡೆದೇ ಬರಬೇಕಿತ್ತು. ಇದೀಗ ಸ್ಥಳೀಯರ ದಶಕಗಳ ಮನವಿ ಮೇರೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಈ ಗ್ರಾಮಗಳಿಗೆ ಬಸ್ಸನ ಅನುಕೂಲ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ 4 ದಿನ ಆರೆಂಜ್ ಅಲರ್ಟ್ – ಹೊಸಕೋಟೆ, ಸಂಪಾಜೆಯಲ್ಲಿ ಭಾರೀ ಮಳೆ

    ದಿನಕ್ಕೆ ಎರಡು ಬಾರಿ ಓಡಾಡುವ ಬಸ್ಸು ಬೆಳಗ್ಗೆ-ಸಂಜೆ ಈ ಹಳ್ಳಿಗಳಿಗೆ ಹೋಗಿ ಬರಲಿದೆ. ಈ ಬಸ್ ಸ್ಥಳೀಯರೊಂದೇ ಅಲ್ಲದೇ ಹೆಚ್ಚಾಗಿ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ. ಈ ಹಳ್ಳಿಗಳಿಗೆ ರಸ್ತೆ ಕೂಡ ಸರಿ ಇರಲಿಲ್ಲ. ಇದೀಗ ಎರಡು ಕೋಟಿ ವೆಚ್ಚದಲ್ಲಿ ರಸ್ತೆ ಕೂಡ ನಿರ್ಮಾಣವಾಗಿ, ಹಳ್ಳಿಗಳಿಗೆ ಬಸ್ ಸೌಲಭ್ಯ ಸಿಕ್ಕಿರುವುದರಿಂದ ಹಳ್ಳಿಗರು ಖುಷಿಪಟ್ಟಿದ್ದಾರೆ. ಇದನ್ನೂ ಓದಿ: ಆ.4ರವರೆಗೆ ಇಡಿ ವಶಕ್ಕೆ ಸಂಜಯ್ ರಾವತ್

    ಇಂದು ಬಸ್ಸನ್ನು ಉದ್ಘಾಟಿಸಿದ ಶಾಸಕ ಕುಮಾರಸ್ವಾಮಿ ಅದೇ ಬಸ್ಸಿನಲ್ಲಿ ಮತ್ತಿಕಟ್ಟೆ ಗ್ರಾಮದಿಂದ ಬಣಕಲ್‍ವರೆಗೂ ಸ್ಥಳೀಯರ ಜೊತೆಯೇ ಸಂಚರಿಸಿದ್ದಾರೆ. ಇಷ್ಟು ವರ್ಷಗಳ ಹೋರಾಟ-ಮನವಿಗೆ ಈಗಲಾದರೂ ಬಸ್ಸಿನ ಸೌಲಭ್ಯ ಕಲ್ಪಿಸಿದೆ ಎಂದು ಸರ್ಕಾರ ಹಾಗೂ ಶಾಸಕರಿಗೆ ಇಲ್ಲಿನ ಜನ ಅಭಿನಂದನೆ ಸಲ್ಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗದ್ದೆಯಲ್ಲಿ ನಾಟಿ ಮಾಡಿದ ಶಾಸಕ ಕುಮಾರಸ್ವಾಮಿ

    ಗದ್ದೆಯಲ್ಲಿ ನಾಟಿ ಮಾಡಿದ ಶಾಸಕ ಕುಮಾರಸ್ವಾಮಿ

    ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಭತ್ತದ ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಗಮನ ಸೆಳೆದರು.

    ರಾಜೇಂದ್ರ ಹೆಗ್ಡೆ ಎಂಬವರ ಹೊಲದಲ್ಲಿ ಮೊದಲು ಮಣ್ಣನ್ನು ಹದ ಮಾಡಿದರು. ನಂತರ ಗುದ್ದಲಿ ಹಿಡಿದು ಬದು ಕೊಚ್ಚಿದರು. ಇದಾದ ಬಳಿಕ ಭತ್ತದ ಗದ್ದೆಯಲ್ಲಿ ನಾಟಿ ಮಾಡಿದರು. ಈ ಸಂಪ್ರದಾಯ 21 ತಲೆಮಾರುಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಇದನ್ನೂ ಓದಿ: ಅಸುರಕ್ಷತೆಯ ವಾತಾವರಣವಿದೆ, ಗನ್ ಮ್ಯಾನ್ ನೀಡಿ: ಜೆಡಿಎಸ್ ಸದಸ್ಯನ ಮನವಿ

    ಹೆಗ್ಡೆ ಅವರ ಗದ್ದೆಯ ನಾಟಿ ಬಳಿಕವೇ ಉಳಿದವರು ನಾಟಿ ಮಾಡುವುದು ಇಲ್ಲಿನ ಸಂಪ್ರದಾಯವಾಗಿದೆ. ಹೆಗ್ಡೆ ಅವರ ಗದ್ದೆಯಲ್ಲಿ ನಾಟಿ ಮಾಡುವ ದಿನ ಮನೆಗೊಬ್ಬರು ಬಂದು ಕೆಲಸವನ್ನು ಮಾಡುತ್ತಾರೆ. ರಾಮಚಂದ್ರ ಹೆಗ್ಡೆ ಮನೆತನವು ಪಾಳೇಗಾರರು, ಪಟೇಲರು ಎಂದೇ ಖ್ಯಾತಿಯನ್ನು ಪಡೆದಿದೆ. ಈ ಸಂಪ್ರದಾಯವು ಸುಮಾರು 5 ಶತಮಾನಗಳಿಂದ ನಡೆದುಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಂದು ನಾಟಿಯನ್ನು ಮಾಡಿದರು. ಇದನ್ನೂ ಓದಿ: ಮನ್ ಕಿ ಬಾತ್‌ನಲ್ಲಿ ಶಿರಸಿಯ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಸಾಧನೆ ಶ್ಲಾಘಿಸಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • ಇರೋದೆ ಎಂಟು ತಿಂಗ್ಳು, ಮಂತ್ರಿಗಿರಿ ಸಿಕ್ರೆ ಕುರ್ಚಿ ಬಿಸಿಯೂ ಆಗಲ್ಲ, ಸಚಿವ ಸ್ಥಾನ ಬೇಡ: ಎಂ.ಪಿ ಕುಮಾರಸ್ವಾಮಿ

    ಇರೋದೆ ಎಂಟು ತಿಂಗ್ಳು, ಮಂತ್ರಿಗಿರಿ ಸಿಕ್ರೆ ಕುರ್ಚಿ ಬಿಸಿಯೂ ಆಗಲ್ಲ, ಸಚಿವ ಸ್ಥಾನ ಬೇಡ: ಎಂ.ಪಿ ಕುಮಾರಸ್ವಾಮಿ

    ಚಿಕ್ಕಮಗಳೂರು: ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದಾಗಿನಿಂದಲೂ ಮಂತ್ರಿಗಿರಿಗಾಗಿ ಹೋರಾಡ್ತಿದ್ದ ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಸಚಿವ ಸ್ಥಾನದ ಆಸೆಯನ್ನು ಕೈಬಿಟ್ಟಿದ್ದಾರೆ.

    ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ಅವರು, ಈಗ ಸಚಿವ ಸ್ಥಾನ ಸಿಕ್ಕರೆ ಏನು ಮಾಡೋದು. ಕುರ್ಚಿ ಬಿಸಿ ಮಾಡಬಹುದು ಅಷ್ಟೇ. ಕುರ್ಚಿಯೂ ಬಿಸಿ ಆಗಲ್ಲ ಎಂದು ಸಚಿವನಾಗುವ ಆಸೆಯನ್ನು ಕೈಬಿಟ್ಟಿದ್ದಾರೆ. ಈಗ ಸಚಿವ ಸ್ಥಾನ ಸಿಕ್ಕರೂ ಸಿಗೋದು ಕೇವಲ ಎಂಟು ತಿಂಗಳು ಅಷ್ಟೇ. ಈ ಎಂಟು ತಿಂಗಳಲ್ಲಿ ಯಾವ ಕ್ರಾಂತಿಕಾರಿ ಅಭಿವೃದ್ಧಿಯನ್ನೂ ಮಾಡಲು ಆಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ವೇಸ್ಟ್. ಇದರಿಂದ ಆಸೆ ಇರುವವರಿಗಷ್ಟೇ ಅನುಕೂಲವಾಗುತ್ತೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ಕುರ್ಚಿಗೆ ಟವಲ್ ಹಾಕಲು ಬಂದಿದ್ದಾರೆ: ನಲಪಾಡ್ ಕಿಡಿ

    ಈ ಹಿಂದೆ ಮೂರು ಬಾರಿ ಶಾಸಕರಾಗಿರುವ ಕುಮಾರಸ್ವಾಮಿ ಮಂತ್ರಿಗಿರಿಗಾಗಿ ಭಾರೀ ಹೋರಾಡಿದ್ದರು. ಲಾಬಿ ನಡೆಸಿದ್ದರು. ಬಲಗೈ ಸಮುದಾಯಕ್ಕೆ ಸೇರಿದ ನಮಗೂ ಮಂತ್ರಿಗಿರಿ ಕೊಡಬೇಕೆಂದು ಮನವಿ ಮಾಡಿದ್ದರು. ಬಿಜೆಪಿ ಸರ್ಕಾರ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆಯಾದ ಮೂರು ಬಾರಿ ಮಿನಿಸ್ಟರ್ ಪೋಸ್ಟ್‌ಗಾಗಿ ಲಾಬಿ ನಡೆಸಿದ್ದರು. ಆದರೆ, ಈಗ ಯಾಕೋ ಮಿನಿಸ್ಟರ್ ಆಗುವ ಆಸೆಯನ್ನು ಕೈಬಿಟ್ಟಿದ್ದಾರೆ. ಸಚಿವ ಸ್ಥಾನ ನೀಡಿ ಎಂದು ಕೇಳಲ್ಲ. ಆಸೆ ಇರುವವರಿಗೆ ಕೊಡಲಿ. ಯಾವುದೇ ಒತ್ತಡವನ್ನೂ ಹಾಕಲ್ಲ. ಕ್ಷೇತ್ರದಲ್ಲಿ ತುಂಬಾ ಕೆಲಸ ಇದೆ. ಸಚಿವ ಸ್ಥಾನ ನೀಡೋದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಹತಾಶ ನುಡಿಯನ್ನು ಹೊರಹಾಕಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ಬಲವಂತದ ಮತಾಂತರ ಅಪರಾಧ: ಕಾಯ್ದೆಯಲ್ಲಿ ಏನಿದೆ?

    ಪ್ರತಿಬಾರಿಯೂ ಸಚಿವ ಸ್ಥಾನದ ಕಸರತ್ತು ನಡೆಯುವಾಗ ನಾನೂ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದ ಎಂ.ಪಿ. ಕುಮಾರಸ್ವಾಮಿ ಈ ಬಾರಿ ಹೋರಾಟಕ್ಕೂ ಮುನ್ನವೇ ಶಸ್ತ್ರ ತ್ಯಾಗ ಮಾಡಿದ್ದಾರೆ. ನಾನು ಮಂತ್ರಿಗಿರಿಗೆ ಲಾಬಿ ಮಾಡಲು ದೆಹಲಿಗೆ ಹೋಗಿಲ್ಲ. ಬೇರೆ ಕೆಲಸದ ನಿಮಿತ್ತ ಗಡ್ಕರಿ ಅವರನ್ನು ಭೇಟಿ ಮಾಡಬೇಕಿತ್ತು ಅದಕ್ಕೆ ಹೋಗಿದ್ದೆ ಎಂದಿದ್ದಾರೆ. ಈ ಹಿಂದೆ ಎರಡು ಬಾರಿ ಸಚಿವ ಸಂಪುಟದ ವಿಸ್ತರಣೆಯ ಬಳಿಕ ಪ್ರಮಾಣ ವಚನದ ಸಂದರ್ಭದಲ್ಲೂ ಎಂ.ಪಿ ಕುಮಾರಸ್ವಾಮಿ ವಿವಿಧ ಕಾರಣ ನೀಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು.

  • ಪಿಎಸ್‍ಐಗೆ ಆವಾಜ್- ಶಾಸಕರು ತಾಳ್ಮೆ ಕಳೆದುಕೊಂಡಿದ್ದಾರೆ: ಆರಗ ಜ್ಞಾನೇಂದ್ರ

    ಪಿಎಸ್‍ಐಗೆ ಆವಾಜ್- ಶಾಸಕರು ತಾಳ್ಮೆ ಕಳೆದುಕೊಂಡಿದ್ದಾರೆ: ಆರಗ ಜ್ಞಾನೇಂದ್ರ

    ಕಲಬುರಗಿ: ಪಿಎಸ್‍ಐಗೆ ಅವಾಚ್ಯ ಪದಗಳಿಂದ ನಿಂದಿಸಿ ಆವಾಜ್ ಹಾಕಿದ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು  ತಾಳ್ಮೆ ಕಳೆದುಕೊಂಡಿದ್ದಾರೆ. ಕರೆಸಿ ಮಾತನಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

    ಕಲಬುರಗಿಯಲ್ಲಿ ಈ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಶಾಸಕರು ತಾಳ್ಮೆ ಕಳೆದುಕೊಂಡಿದ್ದಾರೆ ಅಂತ ಅನ್ಸುತ್ತೆ. ಎಂ.ಪಿ. ಕುಮಾರಸ್ವಾಮಿ ಅವರು ತಾಳ್ಮೆ ಕಳೆದುಕೊಂಡಿದ್ದಾರೆ. ಎಂ.ಪಿ. ಕುಮಾರಸ್ವಾಮಿ ಅವರು ಪಿಎಸ್‍ಐಗೆ ಅವಾಚ್ಯವಾಗಿ ನಿಂದನೆ ಮಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ನಾನು ರಿಪೋರ್ಟ್ ತರಿಸುತ್ತೇನೆ. ಘಟನೆ ಕುರಿತು ಶಾಸಕರನ್ನು ಕರೆಸಿ ಮಾತಾಡುವುದಾಗಿ ತಿಳಿದಿರು.

    MLA AND PSI

    ಪಿಡಬ್ಲೂ ಇಲಾಖೆ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶಿಟ್ ಆಗಿದೆ. ಸದ್ಯ ಪಿಎಸ್‍ಐ ಪ್ರಕರಣದಲ್ಲಿ ಬೇರು ಮಟ್ಟಕ್ಕೆ ಹೋಗಿದ್ದೇವೆ. ಅಕ್ರಮ ಮಾಡಿದವರನ್ನು ಬಿಡೋದಿಲ್ಲ, ನಾವ್ಯಾರು ಈ ಸೂತಕದಲ್ಲಿ ಇಲ್ಲ ನಮಗೆ ನೈತಿಕತೆ ಇದೆ. ತನಿಖೆ ಮಾಡಿಸುತ್ತೆವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿಜಯಪುರ ಹೆಚ್ಚು ಕಡಿಮೆ ಪಾಕಿಸ್ತಾನ ಇದ್ದಂಗೆ ಇದೆ: ಯತ್ನಾಳ್‌

    araga jnanendra

    ಮೈಸೂರಿನಲ್ಲಿ ಮಿನಿ ಪಾಕಿಸ್ತಾನ ಘೋಷಣೆ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಬಂದಿದೆ. ಹೀಗಾಗಿ ಹಿರಿಯ ಅಧಿಕಾರಿಗಳ ಹತ್ತಿರ ಮಾತಾಡಿದ್ದೇನೆ. ಜೊತೆಗೆ ವರದಿ ಕೊಡಲು ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: ಮರ್ಯಾದೆಯಿಂದ ವಾಪಸ್ ಹೋಗೋ ಲೇ – ಇನ್ಸ್‌ಪೆಕ್ಟರ್‌ಗೆ ಎಂ.ಪಿ.ಕುಮಾರಸ್ವಾಮಿ ಆವಾಜ್

  • ಜಾರಕಿಹೊಳಿ ಜೊತೆ ಯಾವುದೇ ರಾಜಕೀಯ ಸಭೆ ನಡೆದಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ

    ಜಾರಕಿಹೊಳಿ ಜೊತೆ ಯಾವುದೇ ರಾಜಕೀಯ ಸಭೆ ನಡೆದಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ

    ಚಿಕ್ಕಮಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ಯಾವುದೇ ರಾಜಕೀಯ ವಿಚಾರವಾಗಿ ಸಭೆ ನಡೆದಿಲ್ಲ ಎಂದು ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಸಿಗದೇ ಇದ್ದದ್ದು ಸದ್ಯ ಅಪ್ರಸ್ತುತ. ಅಭಿವೃದ್ಧಿ ದೃಷ್ಟಿಯಿಂದ ಭೇಟಿ ಮಾಡಿ ಮಾತನಾಡಿದ್ದೇನೆಯೇ ಹೊರತು ರಾಜಕೀಯವಾಗಿ ಯಾವುದೇ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.

    ಖಾತೆ ಕಗ್ಗಂಟು ಮುಗಿಯುತ್ತಿದ್ದಂತೆ ಇದೀಗ ಬಿಜೆಪಿಯ ಮತ್ತೊಂದು ಸ್ಫೋಟಕ ಸುದ್ದಿ ಹೊರ ಬಿದ್ದಿದೆ. ಈ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆ ನೋವು ಶುರುವಾಗಿದೆ. ಖಾತೆ ಅಸಮಾಧಾನದ ಮಧ್ಯೆ ಇದೀಗ ರೆಸಾರ್ಟ್ ರಾಜಕೀಯ ಆರಂಭವಾಗಿದೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದೆ.

    ಕಾಫಿನಾಡು ಚಿಕ್ಕಮಗಳೂರು ಹೊರವಲಯದ ಸರಾಯ್ ರೆಸಾರ್ಟ್ ನಲ್ಲಿ ಅತೃಪ್ತರ ಸಭೆ ನಡೆದಿದೆ. ಸಭೆಗೆ ಹಾಜರಾಗಲು ನಿನ್ನೆ ರಾತ್ರಿಯೇ ನಾಲ್ವರು ಸಚಿವರು ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದರು. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಗೌಪ್ಯ ಸಭೆಯಲ್ಲಿ ಸಿ.ಪಿ ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು.