Tag: ಎಂಬಿಬಿಎಸ್ ವಿದ್ಯಾರ್ಥಿ

  • ಡೆಂಗ್ಯೂ ಜ್ವರದಿಂದ MBBS ವಿದ್ಯಾರ್ಥಿ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

    ಡೆಂಗ್ಯೂ ಜ್ವರದಿಂದ MBBS ವಿದ್ಯಾರ್ಥಿ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

    – ಮಗ ಮೃತಪಟ್ಟ ಆಸ್ಪತ್ರೆಯಲ್ಲೇ ಡೆಂಗ್ಯೂ ಚಿಕಿತ್ಸೆ ಪಡೆಯುತ್ತಿರೋ ತಾಯಿ

    ಹಾಸನ: ಡೆಂಗ್ಯೂ ಜ್ವರದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿ (MBBS Student) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ (Hassan Private Hospital) ನಡೆದಿದೆ.

    ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಹೋಬಳಿಯ ಗೋಹಳ್ಳಿ ಗ್ರಾಮದ ಕುಶಾಲ್ (22) ಮೃತ ವಿದ್ಯಾರ್ಥಿ. ಕುಶಾಲ್ ಡೆಂಗ್ಯೂ ಮಹಾಮಾರಿಯಿಂದಲೇ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಪ್ರಯೋಗಾಲಯದ ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ತಿಳಿದುಬಂದಿದೆ. ಇದನ್ನೂ ಓದಿ:  PublicTV Explainer: ಬಜೆಟ್‌ ಎಂದರೇನು? ಆಯವ್ಯಯದ ಬಗ್ಗೆ ನಿಮಗೆಷ್ಟು ಗೊತ್ತು?

    ಕಳೆದ ಒಂದು ವಾರದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಸಾವನ್ನಪ್ಪಿದ್ದಾನೆ. ಪ್ರತಿಭಾನ್ವಿತ, ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್, ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಭವಿಷ್ಯದಲ್ಲಿ ವೈದ್ಯನಾಗಿ ಜನಸೇವೆ ಮಾಡಬೇಕು ಎಂಬ ಹಂಬಲ ಇಟ್ಟುಕೊಂಡಿದ್ದ ಕುಶಾಲ್, ಕಿರಿಯ ವಯಸ್ಸಿನಲ್ಲಿಯೇ ಕಣ್ಮರೆಯಾಗಿರುವುದು ಪೋಷಕರಲ್ಲಿ ಅತೀವ ದುಃಖವನ್ನುಂಟುಮಾಡಿದೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲು ಆರಂಭ – ಸಂಸದ ಬ್ರಿಜೇಶ್‌ ಚೌಟ ಮನವಿಗೆ ತಕ್ಷಣವೇ ಸ್ಪಂದಿಸಿದ ರೈಲ್ವೆ ಇಲಾಖೆ

    ವಿಪರ‍್ಯಾಸವೆಂದರೇ ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲ್ಲೇ ತಾಯಿ ರೇಖಾ ಸಹ ಡೆಂಗ್ಯೂ ಜ್ವರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ರೇಖಾ ಟೈಲರ್ ವೃತ್ತಿ ಮಾಡುತ್ತಿದ್ದು, ತಂದೆ ಮಂಜುನಾಥ್‌ ಶಿಕ್ಷಕನಾಗಿದ್ದಾರೆ. ತಮ್ಮ ಇತಿಮಿತಿಯ ನಡುವೆಯೂ ಮಗ ಚೆನ್ನಾಗಿ ಓದಿ ವೈದ್ಯನಾಗಲಿ, ಆ ಮೂಲಕ ನೊಂದ ಜನರಿಗೆ ಸೇವೆ‌ ಮಾಡಲಿ ಎಂಬುದು ತಂದೆ ಮಂಜುನಾಥ್‌ ಬಯಕೆಯಾಗಿತ್ತು. ಇದಕ್ಕಾಗಿ ಎಲ್ಲಾ ರೀತಿಯ ಶ್ರಮ ತೆಗೆದುಕೊಂಡಿದ್ದರು. ಆದರೆ ತನ್ನ ಹಾಗೂ ಹೆತ್ತವರ ಆಸೆ ಈಡೇರುವ ಮುನ್ನವೇ ಕುಶಾಲ್ ಮಾರಣಾಂತಿಕ ಕಾಯಿಲೆ ಬಲಿಯಾಗಿದ್ದಾನೆ. ಇದನ್ನೂ ಓದಿ: ರಾಜ್ಯದ ಜಲಾಶಯಗಳಲ್ಲಿ 536 ಟಿಎಂಸಿ ನೀರು ಸಂಗ್ರಹ – ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

  • ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

    ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

    ಬೀದರ್: ಬ್ರೀಮ್ಸ್ ಮೇಡಿಕಲ್ ಕಾಲೇಜು ವಿದ್ಯಾರ್ಥಿ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬ್ರೀಮ್ಸ್ ಮೇಡಿಕಲ್ ಕಾಲೇಜಿನ ಪಿಜಿ ಹಾಸ್ಟೆಲ್ ನಲ್ಲಿ ನಡೆದಿದೆ.

    ವಿನೂತ್ ಕಾಂಬಳೆ(24) ಆತ್ಮಹತ್ಯೆಗೆ ಶರಣಾದ ಮೇಡಿಕಲ್ ವಿದ್ಯಾರ್ಥಿಯಾಗಿದ್ದು, ಆತ್ಮಹತ್ಯೆ ಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಇಂದು ಬೆಳಗಿನ ಜಾವ ನೇಣಿಗೆ ಶರಣಾಗಿದ್ದಾನೆ.

    ಮೂಲತಃ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ವಿದ್ಯಾರ್ಥಿಯಾಗಿದ್ದು, ಸ್ಥಳಕ್ಕೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಕುಡಿದ ಮತ್ತಿನಲ್ಲಿ ತಲೆಕೂದಲು ಕತ್ತರಿಸಿ, ಬಟ್ಟೆ ಬಿಚ್ಚಿಸಿ MBBS ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್

    ಕುಡಿದ ಮತ್ತಿನಲ್ಲಿ ತಲೆಕೂದಲು ಕತ್ತರಿಸಿ, ಬಟ್ಟೆ ಬಿಚ್ಚಿಸಿ MBBS ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್

    ಬೆಂಗಳೂರು: ಕುಡಿದ ಮತ್ತಿನಲ್ಲಿ ತಲೆಕೂದಲು ಕತ್ತರಿಸಿ ಬಟ್ಟೆ ಬಿಚ್ಚಿಸಿ ಹಿರಿಯ ವಿದ್ಯಾರ್ಥಿಗಳು ಎಂಬಿಬಿಎಸ್ ವಿದ್ಯಾರ್ಥಿಯ ಮೇಲೆ ರ‍್ಯಾಗಿಂಗ್ ಮಾಡಿದ ಪ್ರಕರಣವೊಂದು ಬೆಂಗಳೂರಿನಲ್ಲಿ ಡಿಸೆಂಬರ್ 24ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಕಿರಣ್ ಶರ್ಮ, ಇಂದ್ರಜಿತ್, ರಾಹುಲ್ ಜಾ, ಶುಭವ್ ಹಾಗು ಗೌತಮ್ ಈ ಕೃತ್ಯವನ್ನು ಎಸಗಿದ್ದಾರೆ. ನಾಲ್ವರು ಉತ್ತರ ಭಾರತ ಮೂಲದವರಾಗಿದ್ದು, ಬೆಂಗಳೂರು ರಾಜಾಜಿನಗರದ ಇಎಸ್‍ಐ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗೆ ಥಳಿಸಿ ಟೆರೆಸ್ ಮೇಲೆ ಕರದುಕೊಂಡು ಹೋಗಿ ತಲೆಕೂದಲು ಕತ್ತರಿಸಿ ಬಳಿಕ ಎಲ್ಲರ ಮುಂದೆ ಬಟ್ಟೆ ಬಿಚ್ಚಿಸಿ ರ‍್ಯಾಗಿಂಗ್ ಮಾಡಿದ್ದಾರೆ.

    ದೂರಿನಲ್ಲಿ ಏನಿದೆ?
    ರಾಜಾಜಿನಗರದಲ್ಲಿರುವ ಇಎಸ್‍ಐ ಆಸ್ಪತ್ರೆಯ ಆವರಣದಲ್ಲಿರುವ ಇಎಸ್‍ಐಸಿಎಂಸಿ ಹಾಗೂ ಪಿಜಿಐಎಂಎಸ್‍ಆರ್ ಮೆಡಿಕಲ್ ಕಾಲೇಜಿನಲ್ಲಿ ಮೊದಲನೇ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದೇನೆ. ಇಎಸ್‍ಐ ಆಸ್ಪತ್ರೆಯ ಆವರಣದಲ್ಲಿರುವ ಇಎಸ್‍ಐಸಿ ಬಾಯ್ಸ್ ಹಾಸ್ಟೆಲ್‍ನಲ್ಲಿ ವಾಸಿಸುತ್ತಿದ್ದೇನೆ. ಅದೇ ಹಾಸ್ಟೆಲ್‍ನಲ್ಲಿರುವ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಾದ ಕಿರಣ್ ಶರ್ಮಾ, ಇಂದ್ರಜಿತ್, ರಾಹುಲ್ ಜಹ, ಶಭವ್, ಗೌತಮ್ ಹಾಗೂ ಇತರೇ ಮೂರು ಜನ ರೂಮ್‍ಮೇಟ್ಸ್ ಸೇರಿಕೊಂಡು ರ‍್ಯಾಗಿಂಗ್ ಮಾಡಿದ್ದಾರೆ.

    ಡಿ. 24ರಂದು ರಾತ್ರಿ ಸುಮಾರು 10 ಗಂಟೆಗೆ ಕುಡಿದ ಮತ್ತಿನಲ್ಲಿ ಬಂದು ನಿದ್ದೆ ಮಾಡುತ್ತಿದ್ದ ನನಗೆ ಕಪಾಳಕ್ಕೆ ಹೊಡೆದು, ಬೆಡ್‍ನಿಂದ ಕೆಳೆಗೆ ಎಸೆದಿದ್ದಾರೆ. ಬಳಿಕ ನನಗೆ ಅವಾಚ್ಯ ಶಬ್ಧದಿಂದ ನಿಂದಿಸಿ ಟೆರೆಸ್ ಮೇಲೆ ಕರೆದುಕೊಂಡು ಹೋಗಿ ರ‍್ಯಾಗಿಂಗ್ ಮಾಡಿದರು. ಈ ವೇಳೆ ಅವರು ನನ್ನ ತಂದೆ, ತಾಯಿ, ತಂಗಿಗೆ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿ ನೀನು ಕೀಳು ಜಾತಿಯವನು, ನೀನು ಎಂಬಿಬಿಎಸ್ ವ್ಯಾಸಂಗ ಮಾಡಲು ಯೋಗ್ಯತೆ ಇಲ್ಲದ ಜಾತಿಯವರನು ಎಂದು ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ.

    ನನ್ನ ತಲೆ ಹಿಂಭಾಗದ ಕೂದಲನ್ನು ಕಟ್ ಮಾಡಿ ಅವಮಾನಿಸಿ ಎಲ್ಲಾ ಬಟ್ಟೆಗಳನ್ನು ತೆಗೆದು ನಮ್ಮ ಮುಂದೆ ನಿಲ್ಲು ಎಂದು ರ‍್ಯಾಗಿಂಗ್ ಮಾಡಿದ್ದಾರೆ. ಅಲ್ಲದೇ ಡಿ. 25ರಂದು ಮಧ್ಯಾಹ್ನ 12 ಗಂಟೆಗೆ ನನ್ನನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳನ್ನು ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ವಿದ್ಯಾರ್ಥಿ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾನೆ.

    ವಿದ್ಯಾರ್ಥಿಯ ದೂರು ದಾಖಲಿಸಿಕೊಂಡ ರಾಜಾಜಿನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಶಿಕ್ಷಣ ಕಾಯ್ದೆ, ಜಾತಿನಿಂಧನೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡ್ಯುಕ್ ಬೈಕ್ ಕ್ರೇಜ್: ವೈದ್ಯಕೀಯ ವಿದ್ಯಾರ್ಥಿ ಬಲಿ

    ಡ್ಯುಕ್ ಬೈಕ್ ಕ್ರೇಜ್: ವೈದ್ಯಕೀಯ ವಿದ್ಯಾರ್ಥಿ ಬಲಿ

    ಬೀದರ್: ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿ ಹೊಡೆದು ಸ್ಥಳದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬೀದರ್ ಹೊರ ವಲಯದ ಬೆನಕನಹಳ್ಳಿ ರಸ್ತೆಯಲ್ಲಿ ನಡೆದಿದೆ.

    ಬೀದರ್ ವೈದ್ಯಕೀಯ ಮಹಾವಿದ್ಯಾಲಯದ (ಬ್ರೀಮ್ಸ್) ವಿನೋದ ದೊಡಮನಿ (22) ಮೃತ ವಿದ್ಯಾರ್ಥಿ. ಮೃತ ವಿನೋದ ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಿವಾಸಿಯಾಗಿದ್ದು ಹಾಸ್ಟೆಲ್ ನಲ್ಲಿದ್ದುಕೊಂಡು ಎಂಬಿಬಿಎಸ್ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ.

    ಡ್ಯುಕ್ ಬೈಕ್ ಮೇಲೆ ಒಂದು ರೌಂಡ್ ಹೋಗಲು ಕ್ರೇಜ್‍ಗಾಗಿ ಬೆಳಗ್ಗೆ 9 ಗಂಟೆ ಸುಮಾರಿಗೆ ಬೆನಕನಹಳ್ಳಿ ರಸ್ತೆ ಮಾರ್ಗವಾಗಿ ಹೊರಟಿದ್ದ. ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿ ಹೊಡೆದು ರಸ್ತೆಯಿಂದ ಹೊರಗೆ ಬಿದ್ದಿದ್ದಾನೆ. ತಲೆ ಹಾಗೂ ಮುಖಕ್ಕೆ ಬಲಬಾದ ಪೆಟ್ಟು ಬಿದ್ದಿದ್ದರಿಂದ ವಿನೋದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

    ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ತಂದೆ ಹಾಗೂ ಕೆಲವು ಸಂಬಂಧಿಕರು ಬಂದಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.